ವಿಷಯದ ವಿವರಗಳಿಗೆ ದಾಟಿರಿ

Posts tagged ‘ಪ್ರತ್ಯೇಕತಾವಾದ’

19
ಜೂನ್

ಮತಾಂಧರ ಮುಂದೆ ಸಧ್ಭಾವನೆಯ ಕನಸೇ?

-ರಾಕೇಶ್ ಶೆಟ್ಟಿ

images (1)ದಿನಾ ಸಾಯೋರಿಗೆ ಅಳೋರು ಯಾರು ಅನ್ನೋ ಗಾದೆ ಜಮ್ಮುಕಾಶ್ಮೀರ ರಾಜ್ಯದ ದಿನನಿತ್ಯದ ಹಿಂಸಾಚಾರಕ್ಕೆ ಹೇಳಿ ಮಾಡಿಸಿದಂತಿದೆ. ಆದರೆ ಈ ಗಾದೆಗೆ ಅಪವಾದವೆಂಬಂತೆ ಉಗ್ರರು, ಉಗ್ರರ ಸಿಂಪಥೈಸರ್ ಗಳು ಸತ್ತಾಗ ಅಳಲಿಕ್ಕೆ ದೇಶದಾದ್ಯಂತ ಗಂಜಿಗಿರಾಕಿಗಳು, ಸೆಕ್ಯುಲರ್ ಮಾಧ್ಯಮಗಳು ತಯಾರಾಗುತ್ತವೆ. ಆದರೆ ಕಣಿವೆಯಲ್ಲಿ ಪಾಕಿಗಳು ಗಡಿಯಾಚೆಯಿಂದ ನಡೆಸುವ ಅಪ್ರಚೋದಿತ ಗುಂಡಿನ ದಾಳಿಗೆ, ಉಗ್ರರ ದಾಳಿಗೆ ಬಲಿಯಾಗುವ ಭಾರತೀಯ ಯೋಧರಿಗೆ ಮಾತ್ರ ಈ ಭಾಗ್ಯವಿಲ್ಲ. ಇವರ ಸಾವಿನ ಸುದ್ದಿಗಳು ದಿನಪತ್ರಿಕೆಗಳಲ್ಲಿ ಕಾರ್ನರ್ ಸುದ್ದಿಯಾಗಿರುತ್ತದೆ. ಓದುವ ಜನರಿಗೂ ಇದೆಲ್ಲಾ ಅಲ್ಲಿ ಮಾಮೂಲು ಎನಿಸಿಬಿಡುತ್ತದೆ. ಆದರೆ, ಭುಜದೆತ್ತರಕ್ಕೆ ಬೆಳೆದು ನಿಂತ ಮಗನನ್ನು ಕಳೆದುಕೊಂಡ ಹೆತ್ತವರಿಗಷ್ಟೇ ಆ ನೋವಿನ ತೀವ್ರತೆ ತಟ್ಟುವುದು. ಅದೇ ನೋವಿನಲ್ಲಿ ಮಾತನಾಡಿದವರು ಹುತಾತ್ಮ ಯೋಧ ಔರಂಗಜೇಬ್ ತಂದೆ. ದೇಶಕ್ಕಾಗಿ ಪ್ರಾಣ ಕೊಡುತ್ತೇನೆಂದಿದ್ದ ನನ್ನ ಮಗ ತನ್ನ ಮಾತನ್ನು ಉಳಿಸಿಕೊಂಡಿದ್ದಾನೆ, ಅವನ ಸಾವಿಗೆ ತಕ್ಕ ಉತ್ತರವನ್ನು 72 ಗಂಟೆಗಳೊಳಗೇ ನೀಡಿ ಎಂದು ಪ್ರಧಾನಿ ಮೋದಿಯವರನ್ನು ಅವರು ಆಗ್ರಹಿಸಿದ್ದಾರೆ. ಮೊನ್ನೆ ರಂಜಾನ್ ಹಬ್ಬಕ್ಕೆಂದು ರಜೆಯಲ್ಲಿ ಮನೆಗೆ ತೆರಳುತ್ತಿದ್ದ ಯೋಧ ಔರಂಗಜೇಬ್ ರನ್ನು ಅಪಹರಿಸಿದ ಉಗ್ರಗ್ರಾಮಿಗಳು ತಲೆ, ಕತ್ತಿನ ಭಾಗಕ್ಕೆ ಗುಂಡಿಟ್ಟು ಕೊಂದಿದ್ದಾರೆ. ಅದೇ ದಿನ ರೈಸಿಂಗ್ ಕಾಶ್ಮೀರ್ ಎಂಬ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಮತ್ತವರ ಖಾಸಗಿ ಅಂಗರಕ್ಷಕರನ್ನು ಉಗ್ರರು ಕೊಂದಿದ್ದಾರೆ. ಇವೆಲ್ಲಾ ಕೇಂದ್ರ ಸರ್ಕಾರದ ತಲೆಕೆಟ್ಟ ನಿರ್ಧಾರವಾಗಿದ್ದ ಪವಿತ್ರ ತಿಂಗಳಲ್ಲಿ ಭದ್ರತಾಪಡೆಗಳ ಮೇಲೆ ಏಕಪಕ್ಷೀಯ ಕದನವಿರಾಮ ಹೇರಿಕೆಯ ಫಲ. ಮತ್ತಷ್ಟು ಓದು »

2
ಡಿಸೆ

ಮೋದಿ ಭಾರತದಲ್ಲಿ ತೀವ್ರಗೊಂಡ ನಿರುದ್ಯೋಗ ಸಮಸ್ಯೆ : ಚಿಂತಾಜನಕ ಮಾಹಿತಿ (ಸುಳ್ಸುದ್ದಿ)

ಪ್ರವೀಣ್ ಕುಮಾರ್, ಮಾವಿನಕಾಡು

sulsuddi-2ನವದೆಹಲಿ, ಡಿಸೆಂಬರ್ 2 : ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹಿಂದೆಂದಿಗಿಂತಲೂ ತೀವ್ರವಾಗಿದೆ. ಕಳೆದ ಹನ್ನೆರಡು ವರ್ಷಗಳಲ್ಲೇ ಅತ್ಯಧಿಕ ಪ್ರಮಾಣದ ನಿರುದ್ಯೋಗ ದೇಶದಲ್ಲಿ ತಾಂಡವವಾಡುತ್ತಿರುವುದು ಸಮೀಕ್ಷೆಯೊಂದರಿಂದ ಬಹಿರಂಗವಾಗಿದೆ.

ಕಳೆದ ನವೆಂಬರ್.8 ನೇ ತಾರೀಕಿನಿಂದ ದೇಶದಲ್ಲಿ ಇಲ್ಲಿಯವರೆಗೆ 15 ರಿಂದ 65 ರ ವಯಸ್ಸಿನ ಸುಮಾರು 8% ಜನರು ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಸೆಂಟ್ರಲ್‌ ಗಂಜಿ ಬ್ಯೂರೋ ನಡೆಸಿದ ಉದ್ಯೋಗ-ನಿರುದ್ಯೋಗ ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ. ಮತ್ತಷ್ಟು ಓದು »

23
ಸೆಪ್ಟೆಂ

ಜಮ್ಮು-ಕಾಶ್ಮೀರ (ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು)

ನಿಲುಮೆ ತಂಡವು, ಮಂಗಳೂರಿನಲ್ಲಿ ( 18.09.2016 ) ರಂದು ನಡೆಸಿದ ‘ಕಾಶ್ಮೀರದ ಕುರಿತು ವಿಚಾರ ಸಂಕಿರಣ’  ಕಾರ್ಯಕ್ರಮದಲ್ಲಿ  ಚಕ್ರವರ್ತಿ ಸೂಲಿಬೆಲೆಯವರ ಮಾತುಗಳನ್ನು ರೂಪಲಕ್ಷ್ಮೀಯರವರು ಅಕ್ಷರ ರೂಪಕ್ಕಿಳಿಸಿದ್ದಾರೆ. ಅಂದಿನ ಕಾರ್ಯಕ್ರಮದ ವಿಚಾರಗಳು ಈಗ ನಿಲುಮೆಯ ಓದುಗರ ಮುಂದೆ..

ಚಕ್ರವರ್ತಿ ಸೂಲಿಬೆಲೆಯವರ ಭಾಷಣದ ಮುಖ್ಯಾಂಶಗಳು.

14088692_10154596775090649_5386569408904041755_nವರ್ಷಕೊಮ್ಮೆ ನಾನು ಜಮ್ಮು, ಕಾಶ್ಮೀರಕ್ಕೆ ಹೋಗೋದ್ರಿಂದ, ಅಲ್ಲಿ ನಾನು ನೋಡಿರುವ ಆಧಾರದ ಮೇಲೆ, ನನ್ನ ವಿಚಾರಗಳನ್ನು ಹೇಳ್ತೀನಿ. ಪ್ರೊಫೆಸರ್ ಪ್ರೇಮ್ ಶೇಖರ್ ಅವರು ಆಗಲೇ ಹೇಳಿದ ಪ್ರಕಾರ, ಕಾಶ್ಮೀರದಲ್ಲಿ ಮೂರು ತರಹದ ಜನಾಂಗಗಳಿವೆ. ೧. ಹಿಂದು, ೨. ಮುಸ್ಲಿಮ್ ಮತ್ತು ೩. ಬುದ್ದಿಸ್ಟ್ – ಲಡಾಕ್ ನಲ್ಲಿರುವಂತಹವರು. ಆದರೆ ಮುಸ್ಲಿಮರು ಹೇಳೋದು – ಕಾಶ್ಮೀರದಲ್ಲಿ ನಾಲ್ಕು ತರಹದ ಜನರಿದ್ದಾರೆ. ೧. ಹಿಂದೂ, ೨. ಮುಸ್ಲಿಮ್ – ಸುನ್ನಿ ಮತ್ತು ಶಿಯಾ ೩. ಲಡಾಕ್. ಪ್ರೇಮ್ ಶೇಖರ್ ಸರ್ ಹೇಳಿದ ಹಾಗೆಯೇ ಇನ್ನು ಮುಂದೆ ಕಾರ್ಗಿಲ್ ನ ಸುದ್ಧಿಗೆ ಪಾಕಿಸ್ತಾನ್ ಬರೋಲ್ಲ. ಯಾಕೆಂದರೆ ಕಾರ್ಗಿಲ್ ನಲ್ಲಿ ಹೆಚ್ಚಾಗಿರುವ ಮುಸ್ಲಿಮರು – ಶಿಯಾ ಪಂಗಡದವರು. ಪಾಕಿಸ್ತಾನದಲ್ಲಿರುವ ಮುಸ್ಲಿಮರು – ಸುನ್ನಿ ಪಂಗಡದವರು. ಕಾಶ್ಮೀರದ ಕಣಿವೆಯಲ್ಲಿರೋ ಮುಸ್ಲಿಮರು, ಪಾಕಿಸ್ತಾನದ ಮುಸ್ಲಿಮರನ್ನು ತಮ್ಮ ಮುಸಲ್ಮಾನರು ಅಂತಂದುಕೊಳ್ತಾರೆ. ಆದರೆ ಕಾರ್ಗಿಲ್ ನ ಶಿಯಾದವರಿಗೆ ಚೆನ್ನಾಗಿ ಗೊತ್ತು. ತಾವೇನಾದರೂ ಪಾಕಿಸ್ತಾನಕ್ಕೆ ಹೋದರೆ, ಇದುವರೆವಿಗೂ ಕಣಿವೆಯಲ್ಲಾದ ಅತ್ಯಾಚಾರಗಳು, ದೌರ್ಜನ್ಯಗಳನ್ನು, ಈ ಪಾಕಿಸ್ತಾನದ ಸುನ್ನಿಗಳು ತಮ್ಮ ಮೇಲೆಯೇ ನಡೆಸುತ್ತಾರೆ. ಆ ಭಯದಿಂದ ಕಾರ್ಗಿಲ್ ನ ಮುಸ್ಲಿಮರು, ಏನೇ ಆದರೂ ನಾವು ಭಾರತದಲ್ಲೇ ಇರ್ತೀವಿ. ಪಾಕಿಸ್ತಾನಕ್ಕೆ ಸೇರೋಲ್ಲ ಅಂತಾ ಹೇಳ್ತಾರೆ. ಮತ್ತಷ್ಟು ಓದು »

10
ಸೆಪ್ಟೆಂ

ಜಮ್ಮು-ಕಾಶ್ಮೀರ (ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು)

ನಿಲುಮೆ ತಂಡ ನಡೆಸಿದ ಕಾಶ್ಮೀರದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪ್ರೊ.ಪ್ರೇಮಶೇಖರವರ ಮಾತುಗಳನ್ನು ಶೋಭ ರಾವ್ ರವರು ಅಕ್ಷರ ರೂಪಕ್ಕಿಳಿಸಿದ್ದಾರೆ. ಅಂದಿನ ಕಾರ್ಯಕ್ರಮದ ವಿಚಾರಗಳು ಈಗ ನಿಲುಮೆಯ ಓದುಗರ ಮುಂದೆ..

14088692_10154596775090649_5386569408904041755_nಕಾಶ್ಮೀರದ ಬಗ್ಗೆ ಇಂದು ಹಲವಾರು ಜನ ತಮ್ಮ ಅಲ್ಪಜ್ಞಾನದಿಂದ ಹಲವಾರು ತರಹ ಮಾತಾಡುತ್ತಾರೆ. ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ದುರಂತವೆಂದರೆ ಅದನ್ನು ಕೇಳಲು ಕೂಡ ಬಹಳಷ್ಟು ಜನರಿದ್ದಾರೆ. ನಾವು ಅವರ ಬಳಿ ಹೋಗಿ ಬೀದಿ ಜಗಳ ಮಾಡಬೇಕಿಲ್ಲ. ವಸ್ತುನಿಷ್ಠ ಚರ್ಚೆಯನ್ನು ಏರ್ಪಡಿಸಿ ನಿಜಸಂಗತಿಗಳನ್ನ ತಿಳಿಸಿದರೆ ಸಾಕು. ಕಾಶ್ಮೀರ ನಮ್ಮದೂ ಎಂದು ಭಾರತವೂ ಹೇಳುತ್ತೆ, ಪಾಕಿಸ್ತಾನವೂ ಹೇಳುತ್ತೆ. ನಾವು ಇವೆರೆಡಕ್ಕೂ ಸೇರಿಲ್ಲ ಎಂದು ಮತ್ತೊಂದು ಗುಂಪು ಕೂಡ ಹೇಳುತ್ತೆ. ಇದೇ ಕಾಶ್ಮೀರದ ನಿಜವಾದ ಸಮಸ್ಯೆ. ಮತ್ತಷ್ಟು ಓದು »

9
ಸೆಪ್ಟೆಂ

ಕಾಶ್ಮೀರ ಸಮಸ್ಯೆಯ ವರ್ತಮಾನ

– ಪ್ರೊ. ರಾಜಾರಾಮ ಹೆಗಡೆ

12-kashmir-protest-2ಕಾಶ್ಮೀರವು ಇಂದು ಕೇವಲ ಭಾರತ ಪಾಕಿಸ್ತಾನ ಎಂಬ ಎರಡು ರಾಷ್ಟ್ರಗಳ ನಡುವಿನ ಹಗೆಯ ಕಾರಣವಷ್ಟೇ ಅಲ್ಲ, ಭಾರತದಲ್ಲೇ ಆಂತರಿಕ ಹಗೆಯ ಹೊಗೆಯೆಬ್ಬಿಸುತ್ತಿರುವ ಒಂದು ವರ್ತಮಾನದ ಸಮಸ್ಯೆಯಾಗಿದೆ. ಹಾಗಾಗಿ ಕಾಶ್ಮೀರ ವಿವಾದವು ಹೇಗೆ ಪ್ರಾರಂಭವಾಯಿತು, ನಮ್ಮ ಮುತ್ಸದ್ದಿಗಳು ಎಲ್ಲಿ ಎಡವಿದರು ಎಂಬ ಹಿಸ್ಟರಿಗಿಂತ ಅದರ ತೆಕ್ಕೆಯೊಳಗೆ ಬರಲು ಸೋಲುವ ಅಥವಾ ನಿರಾಕರಿಸುವ ವರ್ತಮಾನದ ಆಯಾಮಗಳು ನನಗೆ ಸೋಜಿಗ ಹುಟ್ಟಿಸುತ್ತಿವೆ. ಇಂದು ಕಾಶ್ಮೀರವು ಭಾರತ ಪಾಕಿಸ್ತಾನಗಳ ಗಡಿ ಸಮಸ್ಯೆಯಾಗಿ ಉಳಿದಿಲ್ಲ, ಬದಲಾಗಿ ಅದು ದೇಶದ ಸಮಸ್ತ ಪ್ರಗತಿಪರ ಹೋರಾಟಗಾರರಿಗೂ, ಆಜಾದಿಯ ಕರೆಯಾಗಿ ಕಾಣಿಸುತ್ತಿದೆ ಎಂಬುದನ್ನು ಗಮನಿಸುವುದು ಅಗತ್ಯ. ಕೇವಲ ಮುಸ್ಲಿಂ ಸಂಘಟನೆಗಳೊಂದೇ ಅಲ್ಲ ಭಾರತದ ಪ್ರಗತಿಪರ ಸಂಘಟನೆಗಳೂ, ಕಾಶ್ಮೀರಿ ಮುಸ್ಲಿಂ ಹೋರಾಟಗಾರರ ಜೊತೆಗೆ ಆಜಾದಿಯ ಘೋಷಣೆ ಕೂಗುತ್ತಿವೆ. ದೇಶದ ಬರ್ಬಾದಿಯ ಕುರಿತು ಮಾತನಾಡುವುದು ಈ ಸಂಘಟನೆಗಳಿಗೆ ರಾಷ್ಟ್ರೀಯತೆಯ ಸಮಸ್ಯೆಯಾಗಿ ಕಾಣಿಸುತ್ತಿಲ್ಲ. ಬದಲಾಗಿ ಬಿಡುಗಡೆಯ ಕರೆಯಾಗಿ ಕಾಣಿಸುತ್ತಿದೆ. ಇಂಥ ಚಳವಳಿಗಳನ್ನು ಬೆಂಬಲಿಸುವ ಬುದ್ಧಿಜೀವಿಗಳಿಗೆ ಇಂಥ ಘೋಷಣೆಗಳು ನ್ಯಾಯಯುತವೆನಿಸತೊಡಗಿವೆ. ಈ ಪರಿಸ್ಥಿತಿಯು ನಮಗೆ ಎರಡು ಸವಾಲುಗಳನ್ನು ಸೃಷ್ಟಿಸಿದೆ: ಮತ್ತಷ್ಟು ಓದು »

31
ಆಗಸ್ಟ್

ಕಾಶ್ಮೀರದ ಐತಿಹಾಸಿಕ ಸತ್ಯಗಳು : ನಿಲುಮೆ ವಿಚಾರ ಸಂಕಿರಣ

– ಹರೀಶ್ ಆತ್ರೇಯ

14088692_10154596775090649_5386569408904041755_nಕಾಶ್ಮೀರ ವಿವಾದಿತ ಪ್ರದೇಶವೇಕಾಗುತ್ತಿದೆ ಮತ್ತು ಅಲ್ಲಿನ ನಿಜ ಸ್ವರೂಪವೇನು ಎಂಬುದನ್ನು ತಿಳಿಯಲು ನಿಲುಮೆ ತಂಡ ಆಯೋಜಿಸಿದ ಕಾಶ್ಮೀರದ ಐತಿಹಾಸಿಕ ಸತ್ಯಗಳು ಮತ್ತು ವರ್ತಮಾನದ ತಲ್ಲಣಗಳು ಎಂಬ ಸಂವಾದ ಕಾರ್ಯಕ್ರಮದಲ್ಲಿನ ಪ್ರೊ. ಪ್ರೇಮಶೇಖರ್ ರವರ ಕೆಲವು ವಿಚಾರಗಳನ್ನು ಹಂಚಿಕೊಳ್ಳುತಿದ್ದೇನೆ..

ಭಾರತದ ವಿಭಜನೆಯಾದಾಗ ಬ್ರಿಟಿಷರು ತಮ್ಮ ನೇರ ಆಡಳಿತಕ್ಕೆ ಒಳಪಟ್ಟ ರಾಜ್ಯಗಳನ್ನು ಭಾರತವೆಂದು ಮತ್ತು ಉಳಿದ ದೇಶೀಯ ಸ್ವತಂತ್ರ್ಯ ಪ್ರಾಂತ್ಯಗಳನ್ನು ಅವುಗಳ ಇಚ್ಚೆಯಂತೆ ಭಾರತದಲ್ಲಾಗಲೀ ಅಥವಾ ಪಾಕೀಸ್ತಾನದಲ್ಲಿಯಾಗಲೀ ಸೇರುವಂತೆ ಹೇಳಲಾಯ್ತು. ಇಂಡಿಯನ್ ಇಂಡಿಪೆಂಡೆನ್ಸ್ ಆಕ್ಟ್ ಪ್ರಕಾರ “British paramount should relapse on the midnight of 14 Aug 1947. ಎಂದರೆ ಸುಮಾರು ಆರುನೂರು ಸ್ಥಳೀಯ ಸಂಸ್ಥಾನಗಳು ಬ್ರಿಟಿಷ್ ಕಾಲನಿಗಳಾಗುವದಕ್ಕೂ ಮುಂಚೆ ಇದ್ದ ರೀತಿಯಲ್ಲಿ ಸ್ವತಂತ್ರ್ಯವಾಗಿರಬಹುದು. ಅಲ್ಲಿನ ಸ್ಥಳೀಯ ನಾಯಕನ (ಆತ ನವಾಬನಾಗಿರಬಹುದು ಅಥವ ಅರಸನಾಗಿರಬಹುದು) ಆತನ ಆಜ್ಞೆ ಅಥವಾ ನಡೆಯಂತೆ ಆ ಸಂಸ್ಥಾನಗಳು ಪಾಕೀಸ್ತಾನದೊಳಗೆ ಅಥವಾ ಭಾರತದೊಳಗೆ ವಿಲೀನವಾಗಬಹುದು. ಅದರ ಜೊತೆಗೆ ಮತ್ತೂ ಒಂದು ಸಲಹೆಯನ್ನು ಬ್ರಿಟಿಷರು ಕೊಡುತ್ತಾರೆ ಅದೇನೆ೦ದರೆ ವಿಲೀನಗೊಳಿಸಿಕೊಳ್ಳುವಾಗ ಆ ಪ್ರಾಂತ್ಯದ ಭೌಗೋಳಿಕ ನೆಲೆ ಮತ್ತು ಪ್ರಜೆಗಳ ಧರ್ಮವನ್ನು ಪರಿಗಣಿಸಿ ಎಂಬುದಾಗಿತ್ತು. ಇದನ್ನು ಕೇಳಿದ ಕಾಶ್ಮೀರ ಮತ್ತು ತಿರುವನಂತಪುರಂ ಸಂಸ್ಥಾನಗಳು ಸ್ವತಂತ್ರ್ಯವಾಗುವ ಯೋಚನೆಯನ್ನು ಮಾಡಿದವು. ಅಂದರೆ ಯಾರ ಆಡಳಿತಕ್ಕೂ ಒಳಪಡದೆ (ಅತ್ತ ಪಾಕೀಸ್ತಾನವೂ ಅಲ್ಲ ಇತ್ತ ಭಾರತವೂ ಅಲ್ಲ) ಸ್ವತಂತ್ರ್ಯವಾಗಿ ರಾಜ್ಯಭಾರ ಮಾಡುವುದು. ಇದು ಪಾಕೀಸ್ತಾನಕ್ಕೆ ಸಮ್ಮತವಾಗಲಿಲ್ಲ. ಏಕೆಂದರೆ PAKISTAN ನಲ್ಲಿನ K ಕಾಶ್ಮೀರವನ್ನ ಸೂಚಿಸುತ್ತೆ. PAKISTAN ಎನ್ನುವುದು ಒಂದು ಪೂರ್ಣ ಹೆಸರಲ್ಲ, ಹಲವು ಸ್ಥಳಗಳ ಅಕ್ಷರಗಳನ್ನು ಸೇರಿಸಿದ ಸಂಕ್ಷಿಪ್ತ ರೂಪ. ಇದನ್ನು ಕೊಡಮಾಡಿದವನು ಲಂಡನ್ನಿನ ವಿದ್ಯಾರ್ಥಿಯಾಗಿದ್ದ  ಚೌದರಿ ರೆಹಮತ್ ಆಲಿ ಮತ್ತು ಪ್ರಕಟಿಸಿದ್ದು ೨೮ ಜನವರಿ ೧೯೩೩ರಂದು ನೌ ಆರ್ ನೆವರ್ ಎಂಬ ಪತ್ರಿಕೆಯಲ್ಲಿ, ಆತನ ಪ್ರಕಾರ ವಾಯುವ್ಯ ಭಾರತವು ಸಾಮಾಜಿಕವಾಗಿ ಮತ್ತು ಧಾರ್ಮಿಕವಾಗಿ ಭಿನ್ನವಾಗಿದೆ ಮತ್ತು ಧಾರ್ಮಿಕವಾಗಿ ಮಧ್ಯ ಏಷಿಯಾಕ್ಕೆ ಮತ್ತು ಪಶ್ಚಿಮ ಏಷಿಯ ಹತ್ತಿರವಾಗಿದೆ, ಆದ ಕಾರಣ ಈ ಭಾಗವನ್ನು ಭಾರತದಿಂದ ಪ್ರತ್ಯೇಕಿಸಿ ಮಧ್ಯ ಏಷಿಯಾದೊಂದಿಗೆ ಸೇರಿಸಿ ಹೊಸತೊಂದು ರಾಷ್ಟ್ರವನ್ನು ಮಾಡಬೇಕು ಎಂಬುದು. ಆತ ಸೇರಿಸಿದ ಪ್ರಾಂತ್ಯಗಳು ಈ ಕೆಳಗಿನಂತಿವೆ. ಮತ್ತಷ್ಟು ಓದು »

24
ಆಗಸ್ಟ್

ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!

– ತೇಜಸ್ವಿನಿ ಹೆಗಡೆ.

india-pakistan-border5ಅದೊಂದು ಸುವಿಶಾಲ ಮನೆ. ಎಷ್ಟಂಕಣದ್ದು ಎಂದು ಹೇಳಲೂ ಆಗದಷ್ಟು ದೊಡ್ಡ ಮನೆ! ಆ ಮನೆಯೊಳಗೆ ಅಸಂಖ್ಯಾತ ಕೋಣೆಗಳು. ಗಾತ್ರದಲ್ಲಿ, ಆಕಾರಗಳಲ್ಲಿ, ಅಂದ ಚೆಂದಗಳಲ್ಲಿ ವಿವಿಧತೆಯನ್ನು, ವೈವಿಧ್ಯಗಳನ್ನು ಹೊಂದಿದ ಕೋಣೆಗಳು. ಅದೊಂದು ಬಹು ದೊಡ್ಡ ಒಟ್ಟು ಕುಟುಂಬ. ಕೆಲವು ಸದಸ್ಯರಿಗಂತೂ ಕೋಣೆಗಳೇ ಇಲ್ಲ. ಇದಕ್ಕಾಗಿ ಹೋರಾಟ ಮಾಡುತ್ತಿರುತ್ತಾರೆ. ಅವರ ಇದೇ ಅನಿವಾರ್ಯತೆಯನ್ನೇ ಬಂಡವಾಳ ಮಾಡಿಕೊಂಡು, ಅವರ ನೈಜ ಹೋರಾಟವನ್ನೇ ದಿಕ್ಕೆಡಿಸಿ, ತಮ್ಮ ಕುಟಿಲ ಸ್ವಾರ್ಥಕ್ಕಾಗಿಯೇ ಮನೆಯೊಡೆಯಲು ಕೆಲವೊಂದು ಸದಸ್ಯರು ಸಂಚು ಮಾಡುತ್ತಿರುತ್ತಾರೆ. ಕೆಲವು ನೆರಹೊರೆಯ ಕುಟುಂಬಗಳ ಕುಮ್ಮಕ್ಕೂ ಇದಕ್ಕೆ ಲಭಿಸುತ್ತಿರುತ್ತದೆ. ಹೀಗಾಗಿ ಕಚ್ಚಾಟ, ಜಗಳ, ಹೊಡೆದಾಟ ಪ್ರತಿದಿವಸವೂ ಅಲ್ಲಿ ನಡೆಯುತ್ತಿರುತ್ತದೆ ಮತ್ತು ಅದನ್ನು ಆ ಇಡೀ ಮನೆಯ ಜವಾಬ್ದಾರಿಯನ್ನು ಹೊತ್ತ ಯಜಮಾನ ಹಾಗೂ ಇನ್ನಿತರ ಹಿರಿಯ ಸದಸ್ಯರು ಬಗೆಹರಿಸಲು ಪ್ರಯತ್ನಿಸುತ್ತಲೇ ಇರುತ್ತಾರೆ. ಕಾಲ ಸರಿದಂತೇ, ಸ್ವಾರ್ಥಿಗಳ ಸತತ ತಲೆತುಂಬುವಿಕೆಯ ಪರಿಣಾಮದಿಂದ ಮನೆಯ ಕೆಲವೊಂದಿಷ್ಟು ಜನಕ್ಕೆ ಆಗಾಗ ಅನ್ನಿಸತೊಡಗುತ್ತದೆ.. ಈ ಮನೆಯೊಳಗೆ ಮಾತ್ರ ಸರಿಯಾದ ವ್ಯವಸ್ಥೆಯಿಲ್ಲ.. ಯಾವುದೂ ಸರಿಯಿಲ್ಲ.. ಭದ್ರತೆಯಿಲ್ಲ.. ಎಂಬಿತ್ಯಾದಿ ಕೊರಗು, ಕೂಗು ಎದ್ದೇಳುತ್ತಿರುತ್ತದೆ. ಮನೆಯನ್ನು ಒಂದಿಷ್ಟು ಪಾಲು ಮಾಡಿ ಹಂಚಿದರೇ ಪರಿಹಾರ ಎಂದು ಹೊರಟವರೂ ಹಲವರಿರುತ್ತಾರೆ. ಆದರೆ ಆ ಮನೆಯ ಹೊರಗೆ ಬಿದ್ದರೆ, ಅದರ ಅಕ್ಕ ಪಕ್ಕದ ಅಷ್ಟೇ ಮನೆಗಳೊಳಗಿನ ಸ್ಥಿತಿ-ಗತಿಯೂ ಬಹುಪಾಲು ಅದೇ ರೀತಿ ಇರುವುದು ಆ ಜನರಿಗೆ ಅರಿವಾಗಿರುವುದೇ ಇಲ್ಲ ಅಥವಾ ಕೆಲವರಿಗೆ ತಿಳಿದಿದ್ದರೂ ತಿಳಿಯದಂತೇ ನಟಿಸುತ್ತಿರುತ್ತಾರೆ. ಕ್ರಮೇಣ ಮನೆಯೊಳಗಿನ ಪ್ರತಿಯೊಂದು ಸಂಭ್ರಮದಲ್ಲೂ ಒಂದಲ್ಲಾ ಒಂದು ಕೊರಗು, ಕೆಡುಕು ತೆಗೆದು ಕಟಕಿಯಾಡುವ, ಮನೆಯನ್ನು, ಮನೆ ಮಂದಿಯನ್ನು ಹಳಿಯುತ್ತಲೇ, ಜರೆಯುತ್ತಲೇ ಸವೆಯುವ ಪ್ರಕ್ರಿಯೆ ಶುರುವಾಗುತ್ತದೆ. ಮತ್ತಷ್ಟು ಓದು »

23
ಆಗಸ್ಟ್

“ಭಾರತ್ ಕಿ ಬರ್ಬಾದಿ” ಕೂಗಿನ ಹಿಂದಿರುವ ಕೈಗಳು ಯಾರದ್ದು?

– ರಾಕೇಶ್ ಶೆಟ್ಟಿ

downloadಉಗ್ರ ಬರ್ಹನ್ ವಾನಿಯ ಹತ್ಯೆಯಾಗಿ ಒಂದು ತಿಂಗಳು ಕಳೆದು ಕಾಶ್ಮೀರ ಕಣಿವೆಯ ಒಂದೆರಡು ಜಿಲ್ಲೆಗಳನ್ನು ಬಿಟ್ಟು ಉಳಿದೆಲ್ಲವೂ ತಣ್ಣಗಾಗಿದ್ದರೂ ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಬೆಂಬಲ ನೀಡುತ್ತಿರುವ ದೇಶದ್ರೋಹಿಗಳ ಕೂಗು ಇನ್ನು ತಣ್ಣಗಾಗಿಲ್ಲ. ಇಷ್ಟು ದಿನ ಶ್ರೀನಗರದಲ್ಲೋ, ದೆಹಲಿಯ JNUವಿನಲ್ಲೋ, ಉತ್ತರ ಭಾರತದಲ್ಲೆಲ್ಲೋ ಕಾಣಿಸಿಕೊಳ್ಳುತ್ತಿದ್ದ ಈ Urban Naxalರು ಈಗ ನಮ್ಮ ಬೆಂಗಳೂರಿಗೂ ಕಾಲಿಟ್ಟಿದ್ದಾರೆ. ಕಾಶ್ಮೀರದಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಗಲಭೆ ಶುರುವಾಗಿ ಒಂದು ವಾರ ಕಳೆಯುವಷ್ಟರಲ್ಲೇ (ಜುಲೈ15,16) We Stand with Kashmir ಎನ್ನುವ ಹೆಸರಿನೊಂದಿಗೆ ಬೆಂಗಳೂರಿನ ಟೌನ್ ಹಾಲ್ ಮುಂದೆ ನಿಂತು “ಕಾಶ್ಮೀರದ ಆಜಾದಿ” ಕೇಳಲು ಹೊರಟಿದ್ದ ಈ ಅರ್ಬನ್ ನಕ್ಸಲರ ಆಸೆಗೆ ನಾವೊಂದಿಷ್ಟು ಜನರು ಸೇರಿ ತಣ್ಣಿರೇರಚಿದ್ದೆವು. ಅದಾದ ನಂತರ, ‘ತಾತ್ಕಾಲಿಕವಾಗಿ’ ನಾವು ಅವರನ್ನು ತಡೆದಿದ್ದೇವೆ ಅಂತಲೇ ನಾನು ಬರೆದಿದ್ದೆ. ಆ ಆತಂಕ ನಿಜವೆಂಬಂತೆ ಮೊನ್ನೆ ಆಗಸ್ಟ್ 13ರಂದು ಅಮ್ನೆಸ್ಟಿ ಇಂಡಿಯಾ ಎಂಬ NGO ಹೆಸರಿನಡಿಯಲ್ಲಿ, ಕಳ್ಳರೆಲ್ಲಾ ಸಂತೆಯಲ್ಲಿ ಒಂದಾಗುವಂತೆ ಬಂದು ಸೇರಿಕೊಂಡಿದ್ದಾರೆ. ಮತ್ತಷ್ಟು ಓದು »

17
ಆಗಸ್ಟ್

ಅಂದು ಜೆ ಎನ್ ಯು, ಇಂದು ಬೆಂಗಳೂರು

– ತನ್ಮಯೀ ಪ್ರೇಮ್ ಕುಮಾರ್

downloadಜೆಎನ್‌ಯುನಲ್ಲಿ ನಡೆದ ದೇಶದ್ರೋಹದ ಕೆಲಸಗಳು, ಘೋಷಣೆಗಳು, ಬೌದ್ಧಿಕ ದಾರಿದ್ರ್ಯತನವನ್ನು, ವೈಚಾರಿಕ ಗುಲಾಮಿತನದ ಪರಿಸ್ಥಿತಿ ಕಂಡು ಮರುಗಿದ್ದೆ. ಎಷ್ಟೋ ಅಸಹನೆಯ ರಾತ್ರಿಗಳನ್ನು ನಿದ್ದೆಯಿಲ್ಲದೆ ಕಳೆದಿದ್ದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಭಟನೆ, ವಿಚಾರ ಸಂಕಿರಣ, ಆಂದೋಲನದ ಭಾಗವಾಗಿದ್ದೆ ಕೂಡ. ಆದರೆ ಶಾಂತಿಪ್ರಿಯ ಬೆಂಗಳೂರಿನಲ್ಲಿ ಇಂಥದೇ ಘಟನೆ ನಡೆಯಬಹುದೆಂಬ ಕಲ್ಪನೆ ಕನಸಿನಲ್ಲೂ ಬಂದಿರಲಿಲ್ಲ. ಮೊನ್ನೆ ಜೆಎನ್‌ಯು ವಿವಿಯ ಸ್ನೇಹಿತೆಯೊಬ್ಬಳು ಸಿಕ್ಕಾಗಲೂ ಕರ್ನಾಟಕ ಇಂಥ ಘಟನೆಗಳಿಂದ ಮುಕ್ತವಾಗಿದೆ ಎಂಬ ಗರ್ವದಿಂದ ಮಾತನಾಡಿದ್ದೆ. ಮೊನ್ನೆಯವರೆಗೆ ಎಲ್ಲರ ನಂಬಿಕೆಯೂ ಅದೇ ಆಗಿತ್ತು. ಆದರೆ ಆಗಸ್ಟ್ 13ರ ಸಂಜೆ ಭಾರತ 70ನೇ ಸ್ವಾತಂತ್ರ್ಯ ಸಂಭ್ರಮದ ಹೊಸ್ತಿಲಲ್ಲಿ ನಿಂತ ಸಂದರ್ಭದಲ್ಲಿ ನಮ್ಮ ವಿಶ್ವಾಸಕ್ಕೆ, ನೆಮ್ಮದಿಯ ಬಾಳಿಗೆ ಕೊಡಲಿ ಪೆಟ್ಟು ಬೀಳುವಂತ ಘಟನೆ ನಡೆದಿದೆ. ಮತ್ತಷ್ಟು ಓದು »

27
ಜುಲೈ

ಕಶ್ಮೀರಿಯತ್ – ಅಸ್ಮಿತೆಯೋ ವಿಸ್ಮೃತಿಯೋ

–  ಶೈಲೇಶ್ ಕುಲ್ಕರ್ಣಿ
12-kashmir-protest-2೮೦ರ ದಶಕದ ಸಮಯ, ಕಾಶ್ಮೀರದಲ್ಲಿ ಇಸ್ಲಾಮೀ ಉಗ್ರವಾದ ನಿಧಾನವಾಗಿ ತನ್ನ ಹೆಡೆ ಬಿಚ್ಚುತ್ತಿತ್ತು . ಆಗಷ್ಟೇ ಆಫ್ಘಾನಿಸ್ತಾನವನ್ನ ರಷ್ಯಾದ ಬಾಹುಗಳಿಂದ ಬೇರ್ಪಡಿಸುವಲ್ಲಿ  ನಂಬಿಕಸ್ಥ ಸಹಾಯಕನಾಗಿ ಒದಗಿಬಂದ ಪಾಕಿಸ್ತಾನ  ಸಹಜವಾಗಿ ಅಮೇರಿಕಾದ ಕಣ್ಮಣಿಯಾಗಿತ್ತು . ಕಾಶ್ಮೀರದಲ್ಲಿ ಭಾರತದ ದಬ್ಬಾಳಿಕೆ ವಿರೋಧಿಸಿ ತಮ್ಮ ನ್ಯಾಯೋಚಿತ ಸ್ವಾತಂತ್ರವನ್ನು ಕೇಳುತ್ತಿರುವ ಜನರಿಗೆ ತನ್ನದು ನೈತಿಕ ಸಮರ್ಥನೆ ಅಷ್ಟೇ ಎಂಬ ಪಾಕಿಸ್ತಾನದ ವಾದಕ್ಕೆ ಅಮೇರಿಕಾ ಮತ್ತು ಯೂರೋಪಿನ ರಾಷ್ಟ್ರಗಳ ಮೃದು ಪ್ರೋತ್ಸಾಹವೂ ಇತ್ತು . ಇಷ್ಟು ಸಾಕಿತ್ತು ಪಾಕಿಸ್ತಾನಕ್ಕೆ.  ಅಫ್ಘಾನಿಸ್ತಾನದಲ್ಲಿ ಐಎಸ್ಐ ಸಹಾಯದಿಂದ ಹುಟ್ಟಿಕೊಂಡಿದ್ದ ಬಾಡಿಗೆ ಯೋಧರೆಲ್ಲ ಭಾರತದೊಳಕ್ಕೆ ನುಸುಳಿಸಲು ಅದರ ಯೋಜನೆ ಸಿದ್ಧವಾಗಿತ್ತು. ದಿನಭತ್ಯೆಯ ಮೇಲೆ ದುಡಿಯುತ್ತಿದ್ದ ಈ ಕೂಲಿ ಉಗ್ರರಿಗೆ ತನ್ನ ದೇಶದ ಗಡಿಯಿಂದಲೇ ಭಾರತದೊಳಕ್ಕೆ ಕಳ್ಳಸಾಗಣಿಕೆಗೆ ಶುರುವಿಟ್ಟಿತ್ತು.

ಮತ್ತಷ್ಟು ಓದು »