ವಿಷಯದ ವಿವರಗಳಿಗೆ ದಾಟಿರಿ

Posts tagged ‘ಬಂಡವಾಳಶಾಹಿ’

20
ಸೆಪ್ಟೆಂ

ಸಿದ್ಧಾಂತಗಳ ಚರಿತ್ರೆ – 3 ಕಮ್ಯುನಿಸಂ: ( ಅಪ್ರಸ್ತುತ ಸಿದ್ಧಾಂತ, ಅವಾಸ್ತವಿಕ ಪರಿಹಾರ )

– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )
karl-marx-wikimedia-commonsಕಮ್ಯುನಿಸ್ಟ್ ಚಿಂತನೆಯನ್ನು ಕಾರ್ಲ್ ಮಾರ್ಕ್ಸ್ ಪ್ರಾರಂಭಿಸಿದವನಲ್ಲ; ಆದರೆ ಅದಕ್ಕೊಂದು ಸ್ಪಷ್ಟ ರೂಪ ಕೊಟ್ಟವನು ಆತ. ಮಾರ್ಕ್ಸ್ ತೀರಿಕೊಂಡ ಮೂವತ್ತು ವರ್ಷಗಳ ನಂತರ ರಷ್ಯದಲ್ಲಿ ಕ್ರಾಂತಿಯಾಗಿ ಲೆನಿನ್ ಅಧಿಪತ್ಯ ಬಂತು. ಮಾರ್ಕ್ಸ್ ನ ಅದುವರೆಗಿನ ಅಪ್ರಕಟಿತ ಕೃತಿಗಳೆಲ್ಲ ಒಂದರ ಮೇಲೊಂದರಂತೆ ಸಾಲಾಗಿ ಪ್ರಕಟವಾಗಿ ಜಗತ್ತಿನ ಹಲವು ದೇಶಗಳಲ್ಲಿ, ಹಲವು ಯುವಕರ ಕೈಗೆ ಬಂದು, ಅವರೆಲ್ಲ ತಮ್ಮ ಸುತ್ತಲಿನ ಹಳೆಯ ವ್ಯವಸ್ಥೆಯನ್ನು ಕಿತ್ತೊಗೆಯುವ ಸಂಕಲ್ಪ ತೊಡುವಂತಾಯಿತು. 1920ರಿಂದ 1960ರವರೆಗಿನ ಅವಧಿ ಕಮ್ಯುನಿಸಂ ಮತ್ತು ಮಾಕ್ರ್ಸಿಸಂಗಳ ಉಚ್ಛ್ರಾಯಕಾಲ. ರಷ್ಯ, ಚೀನಾ, ಕೊರಿಯ, ಕಾಂಬೋಡಿಯಾ, ಜರ್ಮನಿ, ಗ್ರೇಟ್ ಬ್ರಿಟನ್, ಫ್ರಾನ್ಸ್, ಕ್ಯೂಬಾದಂಥ ಹಲವು ದೇಶಗಳು ಮಾಕ್ರ್ಸ್ ಚಿಂತನೆಯ ಪ್ರಯೋಗ ಶಾಲೆಗಳಾದವು. ಸ್ವಾತಂತ್ರ್ಯಾ ನಂತರದ ಮೊದಲ ಮೂರು ದಶಕಗಳಲ್ಲಿ ಭಾರತ ಕೈಗೊಂಡ ಹತ್ತುಹಲವು ಯೋಜನೆಗಳಲ್ಲಿ ಸೋವಿಯೆಟ್ ರಷ್ಯಾ ಪ್ರಣೀತ ಕಮ್ಯುನಿಸಂನ ದಟ್ಟ ಛಾಯೆಯಿದ್ದದ್ದು ಸುಸ್ಪಷ್ಟ. ಆದರೆ 1970ರ ನಂತರ ರಷ್ಯಾ ಹಲವು ಹೋಳುಗಳಾಗಿ ಒಡೆದುಹೋಗಿ ಶೀತಲಸಮರ ಅಘೋಷಿತ ಅಂತ್ಯ ಕಂಡಿದ್ದರಿಂದ ಕಮ್ಯುನಿಸಂ ಹಿನ್ನಡೆಯನುಭವಿಸಿತು. ಅಲ್ಲದೆ ಕಮ್ಯುನಿಸಂನ್ನು ಅಪ್ಪಿಕೊಂಡ ದೇಶಗಳೆಲ್ಲ ಸರ್ವಾಧಿಕಾರಿಗಳ ನಿಯಂತ್ರಣಕ್ಕೊಳಪಟ್ಟು ಬೃಹತ್ ಪ್ರಮಾಣದ ಹತ್ಯಾಕಾಂಡಗಳಿಗೆ ಸಾಕ್ಷಿಯಾದ್ದರಿಂದ, ಮಾರ್ಕ್ಸ್ ನ ಚಿಂತನೆಗಳ ಮೇಲಿದ್ದ ಭರವಸೆಗಳೆಲ್ಲ ಕಮರಿಹೋದವು. ಕಮ್ಯುನಿಸಂನ ಮೆಕ್ಕಾ ಎಂದೇ ಕರೆಸಿಕೊಳ್ಳುತ್ತಿದ್ದ ರಷ್ಯಾದೊಳಗಿನ ಬಡತನ, ಶೋಷಣೆ, ಸ್ವಾತಂತ್ರ್ಯಹರಣ, ಹಿಂಸಾಚಾರಗಳ ಕಟು ಕತೆಗಳು ಹೊರಜಗತ್ತಿಗೆ ತಿಳಿಯತೊಡಗಿದ್ದು 70ರ ದಶಕದ ನಂತರ; ಅದೂ ತುಣುಕು ತುಣುಕಾಗಿ. Read more »

17
ಸೆಪ್ಟೆಂ

ಸಿದ್ಧಾಂತಗಳ ಚರಿತ್ರೆ – 2 ( ಆತನ ಚಿಂತನೆ ಅರ್ಧ ಭೂಗೋಲವನ್ನು ನಿಯಂತ್ರಿಸಿತು! )

– ರೋಹಿತ್ ಚಕ್ರತೀರ್ಥ
ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)
karl-marx-wikimedia-commonsಕಾರ್ಲ್ ಮಾರ್ಕ್ಸ್ ನ ಒಟ್ಟು ಚಿಂತನೆಯನ್ನು ಹೀಗೆ ಸಂಗ್ರಹಿಸಬಹುದು: ಕೈಗಾರಿಕೆಗಳು ಬೆಳೆದು, ಯಂತ್ರ ಸಂಸ್ಕೃತಿಯ ಮೂಲಕ ಆಧುನಿಕತೆಯು ಸಮಾಜವನ್ನು ಪ್ರವೇಶಿಸಿರುವುದರಿಂದ ಮನುಷ್ಯ ಜಾಗೃತನಾಗಬೇಕು. ಯಂತ್ರಗಳು ಮನುಷ್ಯನ ಉದ್ಯೋಗವನ್ನು ಕಸಿಯುವುದು ಮಾತ್ರವಲ್ಲ; ಸಮಾಜದಲ್ಲಿ ಬಹು ದೊಡ್ಡ ಆರ್ಥಿಕ ಅಸಮತೋಲನವನ್ನು ಸೃಷ್ಟಿಸುತ್ತವೆ. ಯಂತ್ರಗಳಿಂದ ಮನುಷ್ಯ ತನ್ನ ಅಸ್ಮಿತೆಯನ್ನು ಕಳೆದುಕೊಳ್ಳುತ್ತಾನೆ. ಯಾವ ಕೆಲಸವನ್ನು ಯಾರೂ ಮಾಡಬಹುದೆಂಬ ಸನ್ನಿವೇಶ ಸೃಷ್ಟಿಯಾಗುತ್ತದೆ. ಇದರಿಂದಾಗಿ ಪ್ರತಿಯೊಬ್ಬರಿಗೂ ಕೆಲಸದಲ್ಲಿದ್ದ ಶ್ರದ್ಧೆ, ಪ್ರೀತಿ, ಆತ್ಮೀಯತೆಗಳು ಕಾಣೆಯಾಗುತ್ತವೆ. ತಾವು ಬಯಸಿದಂತೆ ಕೆಲಸಗಾರರನ್ನು ಬಳಸಿಕೊಳ್ಳುವ ಸ್ವಾತಂತ್ರ್ಯವನ್ನು ಬಂಡವಾಳಶಾಹಿಗಳು ಪಡೆಯುತ್ತಾರೆ. ಇದರಿಂದಾಗಿ ಕಾರ್ಮಿಕರನ್ನು ಅತಿ ಕಡಿಮೆ ಸಂಬಳಕ್ಕೆ ದುಡಿಸಿಕೊಂಡು ಹೊಸ ಬಗೆಯ ಗುಲಾಮಗಿರಿ ನಡೆಸಲು ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಬಂಡವಾಳಶಾಹಿಗಳು ಲಾಭ ಎಂದು ಏನನ್ನು ಕರೆಯುತ್ತಾರೋ ಅದು ಶೋಷಣೆಯ ಮೂರ್ತ ಮೊತ್ತ. Read more »

11
ಸೆಪ್ಟೆಂ

ಸಿದ್ಧಾಂತಗಳ ಚರಿತ್ರೆ – 1 (ಕಾರ್ಲ್ ಮಾರ್ಕ್ಸ್ ಕಟ್ಟಿಕೊಟ್ಟ ಕಲ್ಪನೆಯ ಸ್ವರ್ಗ)

– ರೋಹಿತ್ ಚಕ್ರತೀರ್ಥ

karl-marx-wikimedia-commonsಹತ್ತೊಂಬತ್ತು ಮತ್ತು ಇಪ್ಪತ್ತನೇ ಶತಮಾನದ ಪ್ರಪಂಚವನ್ನು ಹೆಚ್ಚು ಪ್ರಭಾವಿಸಿದ, ಬದಲಾಯಿಸಿದ ಸಿದ್ಧಾಂತಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವುದು ಕಮ್ಯುನಿಸಂ. ಇಪ್ಪತ್ತನೇ ಶತಮಾನದಲ್ಲಿ ನಡೆದ ಹಲವು ಮಹತ್ವದ ರಾಜಕೀಯ ಚಳುವಳಿಗೆ ಕಮ್ಯುನಿಸಂ ಮೂಲದ್ರವ್ಯವಾಗಿ ಒದಗಿಬಂತು. ಕಮ್ಯುನಿಸಂ ಎಂದರೇನು, ಅದು ಜಗತ್ತನ್ನು ಪ್ರಭಾವಿಸಿದ ಬಗೆ ಹೇಗೆ, 1970ರ ನಂತರ ಅದು ಅವನತಿಯತ್ತ ಸಾಗಲು ಕಾರಣವಾದ ಸನ್ನಿವೇಶಗಳೇನು, ಇಂದಿನ ಯುಗಕ್ಕೆ ಕಮ್ಯುನಿಸಂ ಪ್ರಸ್ತುತವೇ ಎಂಬ ವಿಚಾರಗಳನ್ನು ತಿಳಿದುಕೊಳ್ಳಲು, ಮೊದಲಿಗೆ ನಾವು ಅದರ ಹುಟ್ಟಿನ ದಿನಗಳ ಅವಲೋಕನ ಮಾಡಬೇಕಾಗುತ್ತದೆ. Read more »

2
ಏಪ್ರಿಲ್

ಬೆಳೆ ಬೆಳೆಸಿದರಷ್ಟೆ ನೆಲದ ಒಡೆತನ

–  ಟಿ.ಎಂ.ಕೃಷ್ಣ

ಆಹಾರ ಧಾನ್ಯಗಳ ಬೆಲೆ ಒಂದೇ ಸಮನೆ ಗಗನಕ್ಕೇರುತ್ತಲೇ ಇದೆ. ಜನಸಾಮಾನ್ಯರೇನು- ಅಷ್ಟೋ ಇಷ್ಟೋ ಸ್ಥಿತಿವಂತರೇ ಜೀವನ ನಿರ್ವಹಿಸಲು ಸಾಧ್ಯವಾಗದಂತಾಗಿದೆ. ಕೆಳ, ಮದ್ಯಮ ವರ್ಗದವರು ತರಗೆಲೆಗಳಂತೆ ತತ್ತರಿಸತೊಡಗಿದ್ದಾರೆ. ಮುಂದುವರಿದ(?) ಮನುಷ್ಯನ ಅಗತ್ಯಗಳು ಅಗಣಿತವಾಗಿರಬಹುದಾದರೂ, ಮೂಲಭೂತ ಅಗತ್ಯವಾದ ಅನ್ನಾಹಾರಗಳ ಲಭ್ಯತೆ ಕಠಿಣವಾದರೆ ಏನಿದ್ದರೂ, ಯಾವುದೇ ತಂತ್ರಜ್ಞಾನವಿದ್ದರೂ ಅವೆಲ್ಲಾ ಅಪ್ರಸ್ತುತವಾಗಿಬಿಡುತ್ತವೆ. (ಚಿನ್ನದ ಕತ್ತಿ ಇದೆಯೆಂದು ಕುತ್ತಿಗೆ ಕೊಯ್ದುಕೊಳ್ಳಲಾದೀತೆ?)

ಅಗತ್ಯವಸ್ತುಗಳು ಕೈಗೆಟುಕದಂತಾಗಿರುವ ಈ ಸಂದರ್ಭದಲ್ಲಿ ಸರ್ಕಾರದ ಕಡೆ ಕೈ ತೋರಿಸುವುದು ಅನಿವಾರ್ಯವಾದರೂ, ಆಯಕಟ್ಟಿನ ಜಾಗಕ್ಕೆ ಕೈತೋರಿಸದಿರುವುದು ನಮ್ಮಲ್ಲಿನ ಪ್ರಜ್ಞಾವಂತರ ಪ್ರಜ್ಞೆಯ ಅವನತಿಯನ್ನು ಸೂಚಿಸುತ್ತದೆ. ಕುರಿಗಳು ಹಳ್ಳಕ್ಕೆ ಬಿದ್ದಂತೆ ಪ್ರತಿಯೊಬ್ಬರೂ ಪ್ರಸ್ತಾಪಿಸುತ್ತಿರುವುದು ಮಳೆ ಅಭಾವ, ಬೆಳೆನಷ್ಟ, ವ್ಯಾಪಾರಿಗಳು ಸೃಷ್ಟಿಸುತ್ತಿರುವ ಕೃತಕ ಅಭಾವ, ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ, ಜನಸಂಖ್ಯೆಯ ಹೆಚ್ಚಳ ಇತ್ಯಾದಿ…ಈ ಎಲ್ಲ ಕಾರಣಗಳಿಗೆ ನಿದರ್ಶನಗಳಿದ್ದರೂ, ಅವೆಲ್ಲಾ ತಾತ್ಕಾಲಿಕ ಅವ್ಯವಸ್ಥೆಗಳೇ ಹೊರತು ಮೂಲಭೂತ ಸತ್ಯಗಳಲ್ಲವೇ ಅಲ್ಲ.

Read more »

10
ಆಗಸ್ಟ್

ನೇತ್ರಾವತಿಯ ಶ್ರೀಮುಡಿಗೆ ಕೈಯಿಕ್ಕಿರುವ ಎಂ ಎಸ್ ಇ ಜಡ್:ರಕ್ಷಿಸುವ ಪ್ರವೀಣರೆಲ್ಲಿದ್ದಾರೆ?

-ಸುಂದರ ರಾವ್

ಇತ್ತೀಚಿಗೆ ಕೆಲವು ಪತ್ರಿಕೆಗಳಲ್ಲಿ “ಸರಪಾಡಿ ಸಮೀಪದ ಬೊಳ್ಳಾಜೆಯಲ್ಲಿ ಎಮ್ ಎಸ್ ಇ ಜಡ್ ಪೈಪ್ ಲೈನ್ ಕಾಮಗಾರಿ ಪ್ರಾರಂಭ” ಎಂಬ ಸುದ್ದಿಗಳು ಪ್ರಕಟವಾದವು. “ವಂಶ” ಪತ್ರಿಕೆಯ ಮಿತ್ರರನ್ನು “ನಮ ಒರ ಪೋದು ತೂದು ಬರ್ಕನ?” (ನಾವು ಹೋಗಿ ನೋಡಿ ಬರೋಣವೆ?) ಎಂದು ಕೇಳಿದೆ.
ಮಳೆಗಾಲವಾದರೂ ನಾವು ಹೋದಾಗ ಬಿಸಿಲಿತ್ತು. ಸರಪಾಡಿಯಲ್ಲಿ ಎಂ ಆರ್ ಪಿ ಎಲ್ ನ ಪಂಪ್ ಹೌಸೋ ಏನೋ ಒಂದಿದೆ. ಅದಕ್ಕಿಂತ ಮೊದಲೇ ಬಲಕ್ಕೆ ಹೊಸರಸ್ತೆ ಕಡಿದಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು.ಹಸಿ ಹಸಿ ಮಣ್ಣಿನ ರಸ್ತೆ. ಜೆಸಿಬಿ ಉಪಯೋಗಿಸಿ ರಸ್ತೆ ಮಾಡಿದ್ದರೆಂಬುದು ಯಾರಿಗೂ ಗೊತ್ತಾಗುವಂತಿತ್ತು. ಅದರಲ್ಲಿ ಸ್ವಲ್ಪ ದೂರ ನಡೆದ ಮೇಲೆ ತೆರೆದುಕೊಂಡಿದ್ದು ವಿಶಾಲವಾದ ಪ್ರದೇಶದಲ್ಲಿ ಶೇಖರಗೊಂಡಿದ್ದ ನೀರಿನ ದೃಶ್ಯ.
ಮುಂದೆ ಎ ಎಂ ಆರ್ ಕಂಪೆನಿಯ ಅಣೆಕಟ್ಟು ಕಾಣುತ್ತಿತ್ತು. ನಮ್ಮೆದುರಿಗೆ ಕಾಣುತ್ತಿದ್ದುದು ಅದೇ ಅಣೆಕಟ್ಟಿನಲ್ಲಿ ಸಂಗ್ರಹಿಸಿದ್ದ ನೀರಿನ ರಾಶಿ. ನಾವು ಮುಟ್ಟಿದ್ದು ಒಂದು ಜೆಸಿಬಿ ನಿಂತಿದ್ದ ಸ್ಥಳವನ್ನು. ಸುತ್ತ ಅನೇಕ ಮರಗಳು ಬೇರು ಮೇಲಾಗಿ ಸೊಪ್ಪು ಒಣಗಿ ಉದುರಿ ಕಳಚಿಕೊಂಡು ಬೆತ್ತಲೆ ಅಸ್ತಿಪಂಜರಗಳಂತೆ ವಿಕಾರವಾಗಿ ಆಚೀಚೆ ಉರುಳಿಕೊಂಡಿದ್ದವು. ಕಪ್ಪು ಕಲ್ಲುಗಳನ್ನು ಒಡೆದು ತೆಗೆದಿರುವುದು (ಬಹುಶಃ ಡೈನಮೈಟ್ ಬಳಸಿ) ಸ್ಪಷ್ಟವಾಗಿಯೇ ಕಾಣುತ್ತಿತ್ತು. ಸ್ವಲ್ಪ ದೂರಕ್ಕೆ ಆಳವಾದ ಹೊಂಡದಲ್ಲಿ ಭೂಮಿಯ ಹೊಟ್ಟೆ ಬಗೆದು ಏನೋ ಕಾಮಗಾರಿ ನಡೆಸಿರುವುದೂ ಕಾಣುತ್ತಿತ್ತು. ಒಟ್ಟಿನಲ್ಲಿ ನಡೆಯುತ್ತಿದ್ದ ಚಟುವಟಿಕೆಗಳು ಯಾವುದೋ ದೊಡ್ಡ ಕಾಮಗಾರಿಯ ಮುನ್ಸೂಚನೆಯಾಗಿ ಕಂಡವು. ಸಾಧ್ಯವಿದ್ದಷ್ಟು ಫೋಟೋಗಳನ್ನು ತೆಗೆದುಕೊಂಡು ನಾವು ಹಿಂದೆ ಬಂದೆವು.

Read more »

8
ಆಗಸ್ಟ್

ಪೌರ ಕಾರ್ಮಿಕರ ಬದುಕು ಹಸನಾಗುವುದು ಯಾವಾಗ?

– ಪವನ್ ಯಂ.ಟಿ

ನಾಳೆ ಬೆಳಗ್ಗೆ ೫ ಗಂಟೆಗೆ ಅಲಾರಾಮ್ ಇಡು ಮಗಳೆ ೫:೩೦ ರ ಬಸ್ಸು ಮಿಸ್ ಆಗೋದ್ರೆ ಕಸವೆಲ್ಲ ಅಲ್ಲೇ ಉಳಿದು ಬಿಡುತ್ತೆ, ನಿನ್ನೆ ದಿನ ಸಂತೆ ಬೇರೆ ಇತ್ತು. ಕಸದ ರಾಶಿಯೇ ಬಿದ್ದಿರ ಬಹುದು. ಬೇಗ ಹೋಗಿ ಕ್ಲೀನ್ ಮಾಡಬೇಕು…! ಎಂದು ಪೌರಕಾರ್ಮಿಕೆ ಮಲ್ಲಮ್ಮ ತನ್ನ ಮಗಳಿಗೆ ಹೇಳಿ ಮಲಗಿಕೊಂಡಳು. ಮಲ್ಲಮ್ಮನಿಗಿರುವ ಒಂದೇ ಆಲೋಚನೆ ತನಗೆ ವಹಿಸಿದ ವಾರ್ಡನಂಬರ್ ೭ರಲ್ಲಿ ಬಿದ್ದಿರುವ ಕಸವನ್ನು ತೆಗೆದು ಶುಚಿಗೊಳಿಸುವುದು. ಎಲ್ಲಿ ಬೆಳಗ್ಗೆ ಬಸ್ಸು ಮಿಸ್ಸಾದರೆ ಕಸದ ರಾಶಿ ಅಲ್ಲಿಯೇ ಉಳಿದು ಮೇಲಾಧಿಕಾರಿಗಳು, ಗುತ್ತಿಗೆದಾರರು ನನ್ನನ್ನು ತರಾಟೆಗೆ ತೆಗೆದುಕೊಳ್ಳುತ್ತಾರೆಯೋ ಅನ್ನುವ ಭಯ ಮಲ್ಲಮ್ಮನಿಗೆ. ಇದು ಕೇವಲ ಒಬ್ಬ ಪೌರಕಾರ್ಮಿಳ/ನ  ಚಡಪಡಿಕೆಯಲ್ಲ. ನಮ್ಮ ದೇಶದಲ್ಲಿ ಅಥವಾ ರಾಜ್ಯದಲ್ಲಿ ದುಡಿಯುತ್ತಿರುವ ಎಲ್ಲಾ ಪೌರ ಕಾರ್ಮಿಕರ ಚಡಪಡಿಕೆಯಾಗಿದೆ. ಪೌರ ಕಾರ್ಮಿಕರಿಗೆ ದಿನಬೆಳಗಾದರೆ ಸ್ವಚ್ಚತೆಯದ್ದೇ ಚಿಂತೆ. ಅವರು ಈ ಕೆಲಸವನ್ನು ತಮ್ಮ ಒಟ್ಟೆ ಪಾಡಿಗಾಗಿ ಮಾಡಿದರೂ ಸಹ  ಅದರ ಹಿಂದೆ ಪ್ರತಿಯೊಬ್ಬ ನಾಗರೀಕನ ಆರೋಗ್ಯದ ಕುರಿತ ಕಾಳಜಿ ಅವರಲ್ಲಿ ಮನೆ ಮಾಡಿರುತ್ತದೆ.

ನಾವು ಬೆಳಗ್ಗೆ ಎದ್ದು ಸುಮಾರು ೭ ಗಂಟೆಯ ಸಮಯಕ್ಕೆ ಪಟ್ಟಣಕ್ಕೆ ಒಂದು ಸುತ್ತು ಬಂದರೆ ಸಾಕು ಪೌರ ಕಾರ್ಮಿಕರು ಪಡುವ ಕಷ್ಟ, ಅವರು ಮಾಡುವ ಕೆಲಸ, ನಮ್ಮ ಕಣ್ಣಿಗೆ ಕಾಣುತ್ತದೆ. ನಮಗೆ ಅಸಯ್ಯ ಎನ್ನಿಸುವ ಕೆಲಸವನ್ನು ಅವರು ಮಾಡಿದಂತೆ ಕಂಡರೂ ಅವರೆಲ್ಲ ನಮ್ಮ ಪಾಲಿನ ದೇವರಿದ್ದಂತೆ, ಇಂದು ನಾವೆಲ್ಲ ಒಳ್ಳೆಯ, ಕೈತುಂಬಾ, ಹಣ ಬರುವ ಕೆಲಸವನ್ನು ಮಾತ್ರ ಹುಡುಕುತ್ತೇವೆ. ಒಂದು ವೇಳೆ ಪೌರ ಕಾರ್ಮಿಕರೇ ಇಲ್ಲವೆಂದಿದ್ದರೇ ಇಂದು ನಮ್ಮ ಆರೋಗ್ಯದ ಪರಿಸ್ಥಿತಿ ಏನಾಗುತ್ತಿತ್ತು ಎನ್ನುವುದನ್ನು ನೀವೇ ಯೋಚಿಸಿ.

Read more »

11
ಜೂನ್

ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ ಏನೋ..!!

– ಕೆ.ಎಸ್ ರಾಘವೇಂದ್ರ ನಾವಡ

ನೀವು ಏನಾದ್ರೂ ಹೇಳಿ… ದೇಶಕ್ಕೋಸ್ಕರ ಹೋರಾಡುವವರ ಗತಿ ಇಷ್ಟೇ.. ಅ೦ಥ ಮತ್ತೊಮ್ರ್ ಪ್ರೂವ್ ಆಗಿ ಹೋಗಿದೆ. ನಮ್ಮ ದೇಶದಲ್ಲಿ ಕೆಲವರ ಹಣೆಬರಹವನ್ನು ಸುಲಭವಾಗಿ ನಿರ್ಧರಿಸಬಹುದು.. ಹಿ೦ದೆ ಹಾವೇರಿಯಲ್ಲಿ ರೈತರ ಮುಷ್ಕರಕ್ಕೆ ಯಡಿಯೂರಪ್ಪ ಗೋಲಿಬಾರ್ ಗೆ ಆದೇಶ ನೀಡುವುದರ ಮೂಲಕ ಅದಕ್ಕೊ೦ದು ಗತಿ ಕಾಣಿಸಿದರು! ಇ೦ದು ರಾಮ್ ದೇವ್ ಹಣೆಬರಹವನ್ನು ಕೇ೦ದ್ರ ಸರ್ಕಾರ ಈ ರೀತಿ ಬರೆಯಿತು!! ಒಟ್ಟಾರೆ ನಾವು ಬ್ರಿಟೀಶ್ ಸತ್ತೆಯ ಕಾಲಕ್ಕೆ ಹೋಗುತ್ತಿದ್ದೇವೇನೋ ಎ೦ಬುದು ನನ್ನ ಸ೦ಶಯ!!

ಭರತ ಭೂಮಿಯಲ್ಲಿ  ಬ್ರಿಟೀಶ್ ಆಡಳಿತದಿ೦ದ ಮುಕ್ತರಾಗ ಬಯಸಿ ಸ್ವಾತ೦ತ್ರ್ಯದ ಕನಸು ಕ೦ಡು ಅದಕ್ಕಾಗಿ ಹೋರಾಡಿದವರು- ಶೋಷಿತ ವರ್ಗ – ತಮ್ಮ ಬೇಡಿಕೆಯನ್ನು ನ್ಯಾಯಬಧ್ಧವಾಗಿ ಕೇಳುವವರು- ಜನ ಕಲ್ಯಾಣಕ್ಕಾಗಿ ಹಾತೊರೆದು ಮುನ್ನುಗ್ಗುವವರು – ರಾಜಕೀಯ ವ್ಯವಸ್ಥೆಯನ್ನು ಸುಧಾರಿಸ ಬಯಸುವವರು ಮು೦ತಾದವರ ಹೋರಾಟದ ಅ೦ತ್ಯ ಹೀಗೇ!! ಸರಿ ಸುಮಾರು ಬ್ರಿಟೀಷರಿ೦ದ ಆರ೦ಭವಾದ ಈ ಪ್ರಜೆಗಳ ಧ್ವನಿಯನ್ನು  ಅವರುಗಳ ಗ೦ಟಲನ್ನೇ ಹಿಸುಕುವ ಮೂಲಕ ,ಅವರ ಹೋರಾಟಕ್ಕೊ೦ದು ಅನೈತಿಕ ಅ೦ತ್ಯ ನೀಡುವ ಈ ಕ್ರಮ ದುರದೃಷ್ಟವಶಾತ್ ಇಲ್ಲಿಯವರೆವಿಗೂ ಮು೦ದುವರೆದಿದೆ!! ಹಾಗ೦ತ ಎಲ್ಲ ಹೋರಾಟಗಳೂ ಇದೇ ಅ೦ತ್ಯವನ್ನು ಕ೦ಡವೇ ಎ೦ದರೆ ಖಚಿತವಾದ ಉತ್ತರ ನೀಡಲಿಕ್ಕಾಗುವುದಿಲ್ಲ.. “ಕೆಲವು ಸಮಸ್ಯೆಗಳು ತಾವಾಗೇ ಸೃಷ್ಟಿಯಾದರೆ ಕೆಲವನ್ನು ನಾವೇ ಸೃಷ್ಟಿಸಿಕೊಳ್ಳುತ್ತೇವೆ“ ಎ೦ಬ ನಾವಡ ಉವಾಚವೊ೦ದಿದೆ.. ಅದರ ಪ್ರಕಾರ ಪ್ರಸಕ್ತ ಭರತಭೂಮಿಯಲ್ಲಿಯೂ ಏಕೆ ಸಮಸ್ತ ಜಗತ್ತಿನಲ್ಲಿಯೂ  ಸರ್ಕಾರ ಗಳು ಹಾಗೂ ಜನತೆಗಳ ವಿಚಾರದಲ್ಲಿ ನಡೆಯುತ್ತಿರುವುದು ಇದೇ!!

Read more »

30
ಮೇ

ಬಸವನ ಗುಡಿಯಲ್ಲಿ ‘ಕರಪ್ಷನ್ ಸಾಕು’ ಆ೦ದೋಲನ. ನಾ ಕ೦ಡ೦ತೆ

– ಹರೀಶ್ ಆತ್ರೇಯ

ಕಿರಣ್ ಬೇಡಿ ಸ್ವಾಮಿ ಅಗ್ನಿವೇಶ್ ರ ಪ್ರಚೋದಕನಕಾರಿ ಭಾಷಣ, ಶ್ರೀ ಬಾಲಸುಬ್ರಹ್ಮಣ್ಯ೦ ರ ನಿರೂಪಣೆ ಮತ್ತು ಗಣ್ಯರ ಭಾಷಣದ ಅನುವಾದ, ಅರವಿ೦ದ್ ಖೇಜ್ರಿವಾಲರ ಜನಲೋಕಪಾಲ್ ಕಾನೂನು ಪಾಠ, ಕೆಲ ಕಾರ್ಯತಕರ್ತರ ಉತ್ಸಾಹ, ನೈಜ ಕಾಳಜಿ. ಇನ್ನೂ ಕೆಲವರ ಶೋ, ವಾಲ೦ಟೀರ್ ಟೀ ಶರ್ಟ್ ಮೇಲೆ ಎಲ್ಲರ ಕಣ್ಣು, ಮಾಸ್ಟರ್ ಹಿರಣ್ಣಯ್ಯರನವರ ಅನುಭವದ ಮಾತು, ಅಣ್ಣಾ ಹಜಾರೆಯವರ ಮುಗ್ಧ ನುಡಿಗಳು, ರಾಜಕಾರಣಿಗಳ/ ಸರ್ಕಾರಿ ಅಧಿಕಾರಿಗಳ ಮೋಸದಿ೦ದ ಬೇಸತ್ತ ಜನರ ಹತಾಶ ನುಡಿಗಳು, ಜೈಕಾರ, ಗಲೀ ಗಲೀಮೆ ಶೋರ್ ಹೈ ಸಾರೆ ನೇತ ಚೋರ್ ಹೈ ಎನ್ನುವ ಘೋಷಣೆಗಳು, ಇನ್ನೂ ಕೆಲವರಿಗೆ ಇಲ್ಲೇನ್ ನಡೀತಿದೆ ಅ೦ತ್ಲೇ ಗೊತ್ತಿಲ್ದೆ ಇರೋ ಅಮಾಯಕತೆ (?) ಇದೆಲ್ಲರ ನಡುವೆ ನಮ್ ಯಡ್ಯೂರಪ್ಪನವರ ಪರ ಅದ್ಯಾರೋ ನರಸಿ೦ಹ (ಮು. ಮುಖ್ಯಮ೦ತ್ರಿ) ಎ೦ಬುವವನ ಪ್ರಚಾರ, ಸ್ವರಾತ್ಮ ತ೦ಡದ ಪಾಪ್ ರೀತಿಯ ಸ೦ಗೀತ ಅದಕ್ಕೆ ಜನರು ತಲೆದೂಗಿದ್ದು, ಇವು ನಿನ್ನೆಯ ಆ೦ದೋಲನದ ಹೈಲೈಟ್.

ಹನ್ನೊ೦ದು ಗ೦ಟೆಯಿ೦ದ ೨:೫೦ರ ತನಕ ಕಾರ್ಯಕರ್ತರ ಜನಗಳ ಮತ್ತು ಅಲ್ಲಿ ಆಡುತ್ತಿದ್ದ ಯುವಕರ ಮುಖಗಳನ್ನು ಗಮನಿಸುತ್ತಾ ಬ೦ದೆ. ಅಣ್ಣಾ ಹಜಾರೆಯವ್ರು ಬ೦ದದ್ದು ೨:೫೦ ಕ್ಕೆ. ಅಲ್ಲಿಯವರೆಗೂ ಒ೦ದೆರಡು ಬಾರಿ ಸ್ಟೇಜಿನ ಹತ್ರ ಸುತ್ತ ಮುತ್ತ ಓಡಾಡ್ತಾ ಎಲ್ಲರ ಅಭಿಪ್ರಾಯಗಳನ್ನ ಸ೦ಗ್ರಹಿಸುತ್ತಾ ನಿ೦ತೆ. ಕಾರ್ಯಕರ್ತನೊಬ್ಬ “ನೀವು ವಾಲ೦ಟೀರಾ”? ಅ೦ತ ಕೇಳಿದ “ಅಲ್ಲಪ್ಪ” ಅ೦ದೆ “ಹೀಗೆಲ್ಲಾ ಓಡಾಡ್ಬೇಡಿ ಸರ್ ಬಾ೦ಬ್ ಥ್ರೆಟ್ ಇದೆ “ಅ೦ದ ಆಯ್ತಣ್ಣ ಅ೦ತ ಒ೦ಕಡೆ ಕೂತು ಅವರ ಕೆಲ್ಸಾನ ಗಮನಿಸುತ್ತಾ ಬ೦ದೆ. ಮನೇಲಿ ಇರಕ್ಕೆ ಬೋರ್ ಆಗಿ ನಾವೂ ಟಿ ವೀಲಿ ಕಾಣ್ತೀವಲ್ಲ ಅ೦ತ ಯೋಚಿಸ್ಕೊ೦ಡ್ ಬ೦ದು ಟೈಟ್ಸ್, ಅರೆ ತೋಳಿನ ಟಾಪ್ (ಇನ್ನೂ ಕೆಲವರು ಬನೀನ್ ಥರದ್ದು, ಬೇಡ ಬಿಡಿ) ಹಾಕ್ಕೊ೦ಡ್ “ಹೇ ಇಟ್ಸ್ ವೆರಿ ಫನ್ನಿ ಯೋ ನೋ, ಐ ಅಯಾಮ್ ಆಲ್ಸೋ ಎ ವಾಲ೦ಟೀರ್ ಹಿಯರ್, ಇಲ್ಲಿ ಸಕ್ಕತ್ತಾಗಿದೆ, ಐ ವಾನ ವೇರ್ ದಿಸ್ ಟಿ ಶರ್ಟ್, ಹ್ಮ್ ಲೆಟ್ಸ್ ಗೋ ಇನ್ ಸೈಡ್ ದಿ ವಾನ್ ” ಅ೦ತ ಹೋದವರು ಅರ್ಧ ಗ೦ಟೆಯನ೦ತರ ಸರ್ವಾ೦ಗ ಸು೦ದರಿಯರಾಗಿ ಬ೦ದರು.

Read more »

17
ಮೇ

ಅ”ರಾಜಕೀಯ”

– ವಿಜಯ ಹೆರಗು

     ರ್ನಾಟಕದ ಮಹಾಜನತೆಯ ದೌರ್ಭಾಗ್ಯಕ್ಕೆ ಅಂತ್ಯವೇ ಇಲ್ಲವೇನೋ ಎನ್ನಿಸುತ್ತಿದೆ. ಕರ್ನಾಟಕದ ರಾಜಕೀಯ ವಿದ್ಯಮಾನ ದಿನಕ್ಕೊಂದು, ಕ್ಷಣಕ್ಕೊಂದು ಬಣ್ಣ ಬದಲಾಯಿಸುತ್ತಿದೆ. ರಾಜಕೀಯ ರಂಗದ ಅನಿಶ್ಚಿತತೆ, ಅರಾಜಕತೆ ಮತ್ತೊಮ್ಮೆ ತನ್ನ ವಿರಾಟ್ ರೂಪದ ಪ್ರದರ್ಶನ ನೀಡಿದೆ. ಹದಿನಾರು ಶಾಸಕರ ಅನರ್ಹತೆಯ ಆದೇಶವನ್ನು ಸುಪ್ರೀಂ ಕೋರ್ಟ್ ಅನೂರ್ಜಿತಗೊಳಿಸಿದ ಬೆನ್ನಲ್ಲೇ ಆಡಳಿತ ಪಕ್ಷ, ವಿರೋಧ ಪಕ್ಷಗಳು ತಮ್ಮ ಬಲಾಬಲ ಪ್ರದರ್ಶನಕ್ಕೆ ಸಜ್ಜಾಗಿವೆ.

 ಅತ್ತ ಬಿಜೆಪಿ ಹೈಕಮಾಂಡಿನ ಹಿರಿತಲೆಗಳು ಹನ್ನೊಂದು ಮಂದಿ ಬಂಡಾಯ ಶಾಸಕರಲ್ಲಿ ಹತ್ತು ಮಂದಿಯನ್ನು ಕರೆದು ಓಲೈಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾವ ಯಡಿಯೂರಪ್ಪನವರ ನಾಯಕತ್ವವನ್ನು ಪ್ರಶ್ನಿಸಿ ಬಂಡೆದಿದ್ದರೋ ಅದೇ ಯಡಿಯೂರಪ್ಪನ ಮುಂದೆ ಮಂಡಿಯೂರಿ ಶರಣಾಗಿ ನೀವೇ ನಮ್ಮ ನಾಯಕ ಎನ್ನುತ್ತಾ ತಲೆಬಾಗಿ ನಿಂತ ಇವರ ಭಂಗಿ ಅಸಹ್ಯವನ್ನುಂಟು ಮಾಡುತ್ತದೆ. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುವಲ್ಲ-ಶಾಶ್ವತ ಮಿತ್ರರಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ.
                            ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಖುರ್ಚಿ ಉಳಿಸಿಕೊಳ್ಳುವ ಸಲುವಾಗಿ ಹೊರಾದುವುದನ್ನೇ ಆಡಳಿತ ಎಂದು ತಿಳಿದಂತಿದೆ. ಅಧಿಕಾರಕ್ಕೆ ಬಂದ ದಿನದಿಂದ ಇಂದಿನವರೆಗೂ ತಮ್ಮದೇ ಪಕ್ಷದ ನಾಯಕರಿಂದ, ಹೊರಗಿನವರಿಂದ ಪ್ರಬಲ ಪ್ರತಿರೋಧ ಎದುರಿಸುತ್ತಿದ್ದರೂ ಮುಖ್ಯಮಂತ್ರಿ ಪಟ್ಟ ಉಳಿಸಿಕೊಳ್ಳುವ ಸಲುವಾಗಿ ದಿನಕ್ಕೊಂದು ಪಟ್ಟು ಹಾಕುತ್ತಿದ್ದಾರೆ. 
18
ಏಪ್ರಿಲ್

ವೋಟ್ ಬ್ಯಾಂಕ್ ಭಾಷೆಯಾಗಲಿ ಕನ್ನಡ

– ರಾಕೇಶ್ ಶೆಟ್ಟಿ

ಪತ್ರಿಕೆಗಳಲ್ಲಿ ಆಗೀಗ ‘ಅನ್ನ ಕೊಡುವ ಭಾಷೆಯಾಗಲಿ ಕನ್ನಡ’ ಅನ್ನೋ ಕಳಕಳಿಯ ಲೇಖನಗಳು ಬರುತ್ತಲೇ ಇರುತ್ತವೆ.ಒಂದೆಡೆ ‘ಸರ್ವಂ ಇಂಗ್ಲೀಶ್ ಮಯಂ’ ಮತ್ತೊಂದೆಡೆ ‘ಏಕಮ್ ಭಾರತಂ ಹಿಂದಿಮಯಂ’ (ಈ ಮಂತ್ರ ಸರಿ ಇಲ್ಲ ಅಂತೆಲ್ಲ ಹೇಳ್ಬೆಡಿ 😉 )  ಅನ್ನೋ ಕೇಂದ್ರದ ನೀತಿಯ ನಡುವೆ ಕನ್ನಡ ‘ಅನ್ನ’ ಕೊಡುವ ಭಾಷೆಯಾಗುವುದು ಹೇಗೆ?  ನನಗನ್ನಿಸುವ ಹಾಗೆ, ಈಗಿನ ಪರಿಸ್ಥಿತಿಯಲ್ಲಿ  ಅನ್ನ ಕೊಡುವ ಭಾಷೆಯಾಗುವ ಶಕ್ತಿ ಬರಬೇಕೆಂದರೆ ಮೊದಲು ‘ವೋಟ್ ಕೊಡುವ ಭಾಷೆಯಾಗಬೇಕು ಕನ್ನಡ’.ಎಲ್ಲ ಪಕ್ಷಗಳು ಕುಣಿಯುವುದು ವೋಟಿಗಾಗಿ,ಪುಡಿ ವೋಟಿಗಾಗಿ ಅನ್ನೋ ಕಾಲವಿದು.ವೋಟಿಗಿರುವಷ್ಟು ಶಕ್ತಿ ಸದ್ಯಕ್ಕೆ ಯಾವುದಕ್ಕಿದೆ ನೀವೇ ಹೇಳಿ?

ಕೆಲವರು ನನ್ನ ಮಾತನ್ನು ಒಪ್ಪಬಹುದು ಇನ್ನ ಕೆಲವರು ಇದನ್ನ ನಿರಾಕರಿಸಬಹುದು. ನಿರಾಕರಿಸುವವರು ಭಾರತದ ರಾಜಕೀಯ ಇತಿಹಾಸವನ್ನೊಮ್ಮೆ ನೋಡುತ್ತಾ ಬನ್ನಿ.ಗಾಂಧೀಜಿ ಕಾಲದಿಂದ ಇಂದಿನವರೆಗೂ ನಮ್ಮಲ್ಲಿ ನಡೆಯುತ್ತಿರುವುದೇ ಓಲೈಕೆಯ ವೋಟ್ ಬ್ಯಾಂಕ್ ರಾಜಕಾರಣ ಅಲ್ವಾ?

Read more »