ವಿಷಯದ ವಿವರಗಳಿಗೆ ದಾಟಿರಿ

Posts tagged ‘ಬಂಧನ’

30
ನವೆಂ

2015 ರ ಆಳ್ವಾಸ್ ಪ್ರಶಸ್ತಿ ಪುರಸ್ಕೃತ ರಾಜೇಂದ್ರ ಸಿಂಗ್ ಬಾಬು ಅವರೊಂದಿಗೆ ಸಂದರ್ಶನ

ಸಂದರ್ಶನ : ಪ್ರಕಾಶ್.ಡಿ.ರಾಂಪೂರು,ರಮೇಶ್ ಕೆ.ಆರ್,ವೀರೇಶ್
ಚಿತ್ರ : ಶ್ರೀಧರ್ ಬಳ್ಳಾರಿ

Rajendra Singಕನ್ನಡ ಚಿತ್ರ ರಂಗದಲ್ಲಿ  ಸುಮಾರು 39 ವರ್ಷಗಳ ಕಾಲ ಸಿನೆಮಾ ರಂಗದಲ್ಲಿ ನಿರ್ದೇಶಕರಾಗಿ, ನಿರ್ಮಾಪಕರಾಗಿ ತನ್ನದೇ ಆದ ಛಾಪನ್ನು ಮೂಡಿಸಿ ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿಯೂ ತಮ್ಮ ಹೆಸರನ್ನು ಗುರುತಿಸಿಕೊಂಡಿರುವ ಪ್ರಸ್ತುತ ಕನ್ನಡ ಚಲನಚಿತ್ರೋದ್ಯಮದಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ  ರಾಜೇಂದ್ರ ಸಿಂಗ್ ಬಾಬು 2015 ರ ಆಳ್ವಾಸ್ ನುಡಿಸಿರಿಯ “ಆಳ್ವಾಸ್ ಪ್ರಶಸ್ತಿ” ಸ್ವೀಕರಿಸುವ ಮುನ್ನ ಪತ್ರಿಕೋದ್ಯಮ ವಿದ್ಯಾರ್ಥಿಗಳು ನಡೆಸಿದ ಸಂದರ್ಶನ..

ಪ್ರ: ಕನ್ನಡ ಚಿತ್ರ ರಂಗಕ್ಕೆ ಬಂದು ಮೊದಲ ಬಾರಿಗೆ ನಾಗರಹೊಳೆ ಅನ್ನೋ ಚಿತ್ರವನ್ನು ಮಾಡಿದಿರಿ. ನಿಮ್ಮ ಈ ಮೊದಲ ಚಿತ್ರ ಹಿಟ್ ಆಯಿತು ಇದರ ಬಗ್ಗೆ ನಿಮ್ಮ ಮಾತು?
ನಮ್ಮ  ತಂದೆಯವರ  ಕಾಲದಿಂದಲೂ  ನಾನು ಸಿನೆಮಾ  ಕ್ಷೇತ್ರದಲ್ಲಿದ್ದು, ಅವರನ್ನು ನೋಡಿ ಕಲಿತ ವಿಷಯಗಳನ್ನು ಸೇರಿಸಿ ಜನರಿಗೆ ಹೊಸ ರೀತಿಯ ಸಿನೆಮಾಗಳನ್ನು  ಕೊಡಬೇಕು  ಅಂತಾ  ಅಂದುಕೊಂಡಿದ್ದೆ. ಆ  ಸಂಧರ್ಭದಲ್ಲಿ ನನ್ನ ತಲೆಗೆ ಬಂದಿದ್ದು ನಾಗರಹೊಳೆ ಅನ್ನೋ ಚಿತ್ರ. ಅಲ್ಲಿಯವರೆಗೆ ಮಕ್ಕಳ ಪ್ರಧಾನ ಚಿತ್ರಗಳೇ ಇರಲಿಲ್ಲ. ಅದನ್ನು ನಾನು ಉಪಯೋಗ ಮಾಡಿಕೊಂಡೆ. ಸಿನೆಮಾ ಕೂಡ ಅದ್ಬುತ ಯಶಸ್ಸು ಖಂಡಿತು.
ಮತ್ತಷ್ಟು ಓದು »

18
ಸೆಪ್ಟೆಂ

ವಿಷ್ಣುವರ್ಧನ್: ಅವಕಾಶವಾದಿಗಳ ನಡುವೆ ನಲುಗಿದ ನಟ

– ರಾಜಕುಮಾರ.ವ್ಹಿ.ಕುಲಕರ್ಣಿ,
ಮುಖ್ಯಗ್ರಂಥಪಾಲಕ, ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ

ವಿಷ್ಣುವರ್ಧನ್ವಿಷ್ಣುವರ್ಧನ್ ನಿಧನರಾದಾಗ ಸಿನಿಮಾವನ್ನು ಬಹುವಾಗಿ ಪ್ರೀತಿಸುವ ಪ್ರೇಕ್ಷಕರು ‘ಇನ್ನು ಮುಂದೆ ಭಾವನಾತ್ಮಕ ಪಾತ್ರಗಳಲ್ಲಿ ನಾವುಗಳು ಯಾರನ್ನು ನೋಡುವುದು’ ಎಂದು ಉದ್ಘರಿಸಿದರು. ಏಕೆಂದರೆ ಆ ಹೊತ್ತಿಗಾಗಲೆ ವಿಷ್ಣುವರ್ಧನ್ ಭಾವನಾತ್ಮಕ ಪಾತ್ರಗಳಲ್ಲಿ ಅಭಿನಯಿಸಿ ಕನ್ನಡಿಗರ ಮನಸ್ಸುಗಳಲ್ಲಿ ನೆಲೆಯೂರಿದ್ದರು. ಆಶ್ಚರ್ಯದ ಸಂಗತಿ ಎಂದರೆ ಈ ನಟನಿಗೆ ‘ಸಾಹಸ ಸಿಂಹ’ ಎನ್ನುವ ಬಿರುದಿನಿಂದ ಕನ್ನಡ ಚಿತ್ರರಂಗದಲ್ಲಿ ಐಡೆಂಟಿಟಿ ಸಿಕ್ಕರೂ ಅವರು ತಮ್ಮ ಭಾವನಾತ್ಮಕ ಪಾತ್ರಗಳಿಂದಲೇ ಕನ್ನಡ ಪ್ರೇಕ್ಷಕರಿಗೆ ಹತ್ತಿರವಾದರು. ಹೊಂಬಿಸಲು, ಬಂಧನ, ಸುಪ್ರಭಾತ, ಲಾಲಿಯಂಥ ಭಾವಪ್ರಧಾನ ಸಿನಿಮಾಗಳು ವಿಷ್ಣುವರ್ಧನ್ ಅವರಲ್ಲಿನ ಮನೋಜ್ಞ ಅಭಿನಯದ ಕಲಾವಿದನನ್ನು ಅತ್ಯಂತ ಪರಿಣಾಮಕಾರಿಯಾಗಿ ಚಿತ್ರಜಗತ್ತಿಗೆ ಪರಿಚಯಿಸುವಲ್ಲಿ ಯಶಸ್ವಿಯಾದವು. ವಿಷ್ಣುವರ್ಧನ್ ನಟನಾ ವೃತ್ತಿಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದರಿಂದಲೇ ಅವರು ತಮ್ಮ ಸಿನಿಮಾ ಬದುಕಿನ ಯಶಸ್ಸಿನ ಉತ್ತುಂಗದಲ್ಲಿದಾಗಲೇ ಹೊಸದೊಂದು ಬದಲಾವಣೆಗೆ ತಮ್ಮನ್ನು ತಾವು ತೆರೆದುಕೊಂಡರು. ಹೀಗೆ ಪ್ರಯತ್ನಿಸದೆ ಹೋಗಿದ್ದರೆ ಅವರೊಳಗಿನ ಕಲಾವಿದ ಒಂದೇ ಪ್ರಕಾರದ ಪಾತ್ರಗಳಿಗೆ ಬ್ರ್ಯಾಂಡ್ ಆಗುವ ಅಪಾಯವಿತ್ತು. ಅನೇಕ ನಟ ನಟಿಯರು ತಮ್ಮ ವೃತ್ತಿಬದುಕಿನುದ್ದಕ್ಕೂ ಒಂದೇ ಪ್ರಕಾರದ ಪಾತ್ರಗಳಿಗೆ ಜೋತುಬಿದ್ದು ಆ ಒಂದು ಏಕತಾನತೆಯ ನಡುವೆ ಅವರೊಳಗಿನ ಕಲಾವಿದ ಕಳೆದು ಹೋಗಿರುವುದಕ್ಕೆ ಬಹಳಷ್ಟು ಉದಾಹರಣೆಗಳಿವೆ. ಅಂಥದ್ದೊಂದು ಸಮಸ್ಯೆಯಿಂದ ಕಳಚಿಕೊಳ್ಳುವಲ್ಲಿ ವಿಷ್ಣುವರ್ಧನ್ ಯಶಸ್ವಿಯಾದರೂ ಅವರೊಳಗಿನ ಪರಿಪೂರ್ಣ ಕಲಾವಿದನನ್ನು ಪರಿಚಯಿಸುವಲ್ಲಿ ಕನ್ನಡ ಚಿತ್ರರಂಗ ಸೋತಿದೆ ಎನ್ನುವುದು ಪ್ರಜ್ಞಾವಂತ ಪ್ರೇಕ್ಷಕರ ಅಭಿಮತ. ಇನ್ನು ಕೆಲವು ವರ್ಷಗಳ ಕಾಲ ವಿಷ್ಣುವರ್ಧನ್ ನಮ್ಮೊಡನಿದ್ದರೆ ಅವರನ್ನು ನಾವು ಒಬ್ಬ ಪರಿಪೂರ್ಣ ಮತ್ತು ಮಾಗಿದ ಕಲಾವಿದನಾಗಿ ನೋಡಲು ಸಾಧ್ಯವಿತ್ತೇನೋ. ಆದರೆ ಸಾವಿನ ರೂಪದಲ್ಲಿ  ಬಂದ ವಿಧಿ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿತು. ಬದುಕಿದ್ದರೆ ಈ ದಿನ (ಸೆಪ್ಟೆಂಬರ್, 18) ವಿಷ್ಣುವರ್ಧನ್ ತಮ್ಮ 65 ನೆ ಜನ್ಮದಿನ ಆಚರಿಸಿಕೊಳ್ಳುತ್ತಿದ್ದರು.

ಮತ್ತಷ್ಟು ಓದು »