ವಿಷಯದ ವಿವರಗಳಿಗೆ ದಾಟಿರಿ

Posts tagged ‘ಬಡವರ ಮಕ್ಕಳು’

1
ಆಗಸ್ಟ್

ಕಂಡವರ ಮಕ್ಕಳನ್ನು ಕಾಡಿಗಟ್ಟುತ್ತಿರುವವರು ಯಾರು?

– ವಿಘ್ನೇಶ್, ಯಲ್ಲಾಪುರ

ಮೊನ್ನೆ ಮೊನ್ನೆ ನಡೆದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆಯನ್ನು ನೋಡಿ ಕೆಲವು ಪ್ರಗತಿಪರರು “ಯೋಧ”ರನ್ನು ಕುರಿತು,ಬಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಾರೆ ಎಂದು ಬೊಬ್ಬೆ ಹಾಕುತಿದ್ದರು.ಇದು 24 – 11- 2008ರಂದು ಕನ್ನಡ ಪ್ರಭದಲ್ಲಿ ಪ್ರಕಟವಾಗಿದ್ದ ಲೇಖನ.ಈ ಲೇಖನವನ್ನೊಮ್ಮೆ ಓದಿ.ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿದವರು ಯಾರು ಎಂಬುದು ಅರ್ಥವಾಗಬಹುದು

ಅವಳು ಪಾರ್ವತಿ!

ನಕ್ಸಲ್ಕೊಪ್ಪ ತಾಲೂಕಿನ ಸೂರ್ಯದೇವಸ್ಥಾನದ ಹುಡುಗಿ. ಕಾಲೇಜು ವಿದ್ಯಾಭ್ಯಾಸಕ್ಕೆಂದು ಹೋಗಿ ಸೇರಿದ್ದು ಶಿವಮೊಗ್ಗೆಯನ್ನು. ತನ್ನ ಕುಟುಂಬದಲ್ಲಿದ್ದ ಬಡತನ ಅವಳಲ್ಲಿ ಸಾಮಾಜಿಕ ಕಳಕಳಿಯನ್ನು ಹುಟ್ಟುಹಾಕಿತ್ತು; ಶಿವಮೊಗ್ಗದಲ್ಲಿದ್ದಷ್ಟು ವರ್ಷವೂ ಒಂದಲ್ಲ ಒಂದು ಸಾಮಾಜಿಕ ವಿಷಯದ ಕುರಿತು ಹೋರಾಟ ಮಾಡಲು ಪ್ರೇರೇಪಿಸಿತ್ತು. ಅದಕ್ಕಾಗಿ ವಿವಿಧ ಸಂಘಟನೆಗಳನ್ನು ಸೇರಿದಳು. ‘ಮಹಿಳಾ ಜಾಗೃತಿ’ಯ ಕಾರ್ಯಕರ್ತೆಯಾಗಿ ಹಗಲಿರುಳು ದುಡಿದಳು, ನಾಯಕಿಯಾಗಿ ಬೆಳೆದಳು. ಶಿವಮೊಗ್ಗದ ಕೆಲ ಉಪನ್ಯಾಸಕರು ದೂರದ ಆಂಧ್ರದಿಂದ ಗದ್ದರ್‍ನನ್ನು ಕರೆಸಿ ನಡೆಸಿದ ಸಭೆಗಳಲ್ಲಿ ನಡುರಾತ್ರಿಯವರೆಗೂ ಭಾಗವಹಿಸಿದಳು. ರೈತ ಹೋರಾಟದಿಂದ ಹಿಡಿದು ನದೀಮೂಲ ರಕ್ಷಣೆಯಂತಹ ವಿಷಯದವರೆಗೆ, ಕಾಲೇಜು ವಿದ್ಯಾರ್ಥಿನಿಯರ ಸಮಸ್ಯೆಯಿಂದ ಹಿಡಿದು ಕೊಳಚೆ ನಿವಾಸಿಗಳ ದನಿಯಾಗುವವರೆಗೆ ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಂಡಳು. ಹೀಗೆ ಅತ್ಯಂತ ಕ್ರಿಯಾಶೀಲಳಾಗಿದ್ದ ಹುಡುಗಿ, ಇದ್ದಕ್ಕಿದ್ದಂತೆ ಒಂದು ದಿನ ಕಣ್ಮರೆಯಾದಳು. ನಾಲ್ಕೈದು ವರ್ಷ ಪಾರ್ವತಿ ಎಲ್ಲಿದ್ದಾಳೆ ಎಂಬುದೇ ನಾಗರಿಕ ಸಮಾಜಕ್ಕೆ ತಿಳಿದಿರಲಿಲ್ಲ. ಸಮಾಜದ ಕುರಿತು ಅಪಾರ ಕಳಕಳಿಯನ್ನಿಟ್ಟುಕೊಂಡು ಹಗಲಿರುಳೂ ಸೈಕಲ್ ತುಳಿಯುತ್ತಿದ್ದ ಹುಡುಗಿ ಹೀಗೆ ಇದ್ದಕ್ಕಿದಂತೆ ಕಣ್ಮರೆಯಾಗಿದ್ದು ಏಕೆ? ಎಲ್ಲಿ ಹೋದಳು?

ಈ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, 2003ರ ನವೆಂಬರ್ 17ನೇ ತಾರೀಖು. ಕಾರ್ಕಳ ತಾಲೂಕಿನ ಈದು ಬಳಿಯ ಬೊಲ್ಲೊಟ್ಟುವಿನ ಮನೆಯೊಂದರಲ್ಲಿ ರಾತ್ರಿ ಸಿಡಿದ ಪೋಲೀಸರ ಗುಂಡಿನ ಬೆಳಕಲ್ಲಿ ಪಾರ್ವತಿ ಗೋಚರಿಸಿದಳು. ಹರೆಯದ ಕನಸುಗಳೆಲ್ಲ ಅರಳಿ,ಬದುಕಿನ ಗಾಂಭೀರ್ಯದತ್ತ ಹೊರಳಬೇಕಾದ ವಯಸ್ಸಿನಲ್ಲಿ ಪಾರ್ವತಿ ಹೆಣವಾಗಿ ಬಿದ್ದಿದ್ದಳು! ಅವಳ ಜೊತೆಗೇ ಮಸಣ ಸೇರಿದ ಹಾಜಿಮಾಳ ಕಥೆಯೂ ಇದಕ್ಕಿಂತ ಭಿನ್ನವೇನಲ್ಲ! Read more »