ವಿಷಯದ ವಿವರಗಳಿಗೆ ದಾಟಿರಿ

Posts tagged ‘ಬಸವ’

3
ಜೂನ್

ಗಾಂಧಿ ಮತ್ತು ದೇವನೂರ

– ರಾಜಕುಮಾರ.ವ್ಹಿ.ಕುಲಕರ್ಣಿ, ಬಾಗಲಕೋಟ

ಗಾಂಧಿ ಮತ್ತು ಅಂಬೇಡ್ಕರ್ಮೊನ್ನೆ ಗಾಂಧಿ ನೆನಪಾದರು. ನೆನಪಾದರು ಎನ್ನುವುದು ಅವರು ಮರೆತುಹೋಗಿರಬಹುದು ಎಂದೂ ಧ್ವನಿಸಬಹುದು. ನೆನಪು ಮತ್ತು ಮರೆತುಹೋಗುವಿಕೆ ಈ ಎರಡೂ ಸ್ಥಿತಿಗಳಲ್ಲಿ ಗಾಂಧಿ ಜೀವಂತವಾಗಿದ್ದು ನಮ್ಮನ್ನು ಕಾಡುತ್ತಲೇ ಇರುವರು. ಇದು ಗಾಂಧಿಯಂಥ ಗಾಂಧಿಯಿಂದ ಮಾತ್ರ ಸಾಧ್ಯವಾಗುವಂತಹದ್ದು. ಏಕೆಂದರೆ ಗಾಂಧಿ ಸೂಟು ಬೂಟು ಧರಿಸಿ, ಪಂಚೆ ಉಟ್ಟುಕೊಂಡು ಮತ್ತು ಲಂಗೋಟಿ ಸಿಕ್ಕಿಸಿಕೊಂಡು ಭಾರತೀಯ ಜೀವನಕ್ರಮದ ಎಲ್ಲ ವರ್ಗಗಳನ್ನು ತಮ್ಮೊಳಗೆ ಅಂತರ್ಗತಗೊಳಿಸಿಕೊಂಡವರು. ಒಬ್ಬನೇ ವ್ಯಕ್ತಿ ತನ್ನ ಜೀವಿತಾವಧಿಯಲ್ಲಿ ಭಾರತೀಯ ಜೀವನ ಕ್ರಮದ ಎಲ್ಲ ವರ್ಗಗಳನ್ನು ಪ್ರತಿನಿಧಿಸುವುದು ಅದು ಗಾಂಧೀಜಿಯಂಥ ವ್ಯಕ್ತಿಯಿಂದ ಮಾತ್ರ ಸಾಧ್ಯವಾಗುವ ಬಹುದೊಡ್ಡ ಸಾಮಾಜಿಕ ಪಲ್ಲಟ.

ಇನ್ನು ಗಾಂಧಿ ಏಕೆ ನೆನಪಾದರು ಎನ್ನುವ ವಿಷಯಕ್ಕೆ ಬರುತ್ತೇನೆ. ಆವತ್ತು ದಲಿತ ಸಂಘರ್ಷ ಸಮಿತಿಯವರ ಮೆರವಣಿಗೆ ರಸ್ತೆಯ ಮೇಲೆ ನಡೆದು ಹೋಗುತ್ತಿತ್ತು. ಬುದ್ಧ, ಬಸವ, ಅಂಬೇಡ್ಕರ್ ಎನ್ನುವ ಜಯಘೋಷ ಅಲ್ಲಿ ಮೊಳಗುತ್ತಿತ್ತು. ಜೊತೆಗೆ ಬುದ್ಧ-ಬಸವ-ಅಂಬೇಡ್ಕರರ ಆಳೆತ್ತರದ ಭಾವಚಿತ್ರಗಳು ರಾರಾಜಿಸುತ್ತಿದ್ದವು. ಭಾರತೀಯ ಸಾಮಾಜಿಕ ವ್ಯವಸ್ಥೆಯಲ್ಲಿ ಶತಮಾನಗಳಿಂದ ಮನೆಮಾಡಿಕೊಂಡಿದ್ದ ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಲು ಮತ್ತು ಹಿಂದುಳಿದ ವರ್ಗದವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಈ ಮೂವರು ಮಾಡಿದ ಪ್ರಯತ್ನ ಮತ್ತು ಹೋರಾಟ ಅದು ಚರಿತ್ರೆಯ ಪುಟಗಳಲ್ಲಿ ಸದಾಕಾಲ ಅಳಿಸಲಾಗದ ಐತಿಹಾಸಿಕ ಪ್ರಯತ್ನವಾಗಿ ದಾಖಲಾಗಿ ಉಳಿದಿದೆ. ಆದರೆ ಆ ಸಂದರ್ಭ ಅಲ್ಲಿನ ಭಾವಚಿತ್ರಗಳಲ್ಲಿ ಮತ್ತು ಅವರು ಮೊಳಗಿಸುತ್ತಿದ್ದ ಜಯಘೋಷಗಳಲ್ಲಿ ಗಾಂಧಿ ಅನುಪಸ್ಥಿತಿ ನನಗೆ ಬಹುಮುಖ್ಯ ಕೊರತೆಯಾಗಿ ಕಾಣಿಸಿತು.

ಮತ್ತಷ್ಟು ಓದು »