ದೀಪಾವಳಿಯ ಬೆಳಕಿಗೆ ಶಾಶ್ವತ ಕತ್ತಲೆ ತುಂಬಿದ ಸೈತಾನ
– ಸಂತೋಷ್ ತಮ್ಮಯ್ಯ
ಮಂಡ್ಯದಲ್ಲಿ ಅಕಸ್ಮಾತ್ತಾಗಿ ಪರಿಚಯವಾದ ಒಬ್ಬರು ತನ್ನನ್ನು ಸೂರಜ್ ರಂಗಯ್ಯನ್ ಎಂದು ಹೇಳಿಕೊಂಡರು. ಕನ್ನಡದ್ದಲ್ಲದ ಕನ್ನಡದ ಹೆಸರು. ಕನ್ನಡದಂತೆಯೇ ಕೇಳಿಸುವ ಆ ಹೆಸರಿನ ಮೂಲವನ್ನು ಹೇಳುತ್ತಾ ಹೋದಂತೆ ಅದೊಂದು ಕಥೆಯೇ ಆದೀತು. ಆ ಕಥೆ ಮತ್ತೆಲ್ಲಿಗೋ ತಿರುವನ್ನು ಪಡೆದುಕೊಳ್ಳತೊಡಗಿತು. ಆ ಕಥೆ ಇತಿಹಾಸವಾಯಿತು. ಇತಿಹಾಸ ಭೀಕರತೆಯನ್ನು ಹೇಳಿತು. ಭೀಕರತೆ ಸೂತಕವನ್ನು ಹೇಳಿತು. ಆ ಇತಿಹಾಸ ವಿಚಿತ್ರವಾಗಿತ್ತು. ಅಪರೂಪವಾಗಿತ್ತು. ನೋವಿನಿಂದ ಕೂಡಿತ್ತು. ಆ ಇತಿಹಾಸ, ಭೀಕರತೆ, ನೋವಿನ ಉಳಿಕೆಯಂತೆ ಸೂರಜ್ ರಂಗಯ್ಯನ್ ಕಂಡರು. ಸೂಕ್ಷ್ಮವಾಗಿ ನೋಡಿದರೆ ಇನ್ನೂರು ವರ್ಷಗಳ ಹಿಂದಿನ ನೋವು ಇಂದೂ ಅವರ ಮುಖದಲ್ಲಿ ಇಣುಕುತ್ತಿತ್ತು. ಇತಿಹಾಸವನ್ನು ಹೇಳುತ್ತಾ ಹೇಳುತ್ತಾ ಸೂರಜ್ “ಹಾಗಾಗಿ ನಾವು ಇಂದಿಗೂ ದೀಪಾವಳಿ ಆಚರಿಸುತ್ತಿಲ್ಲ” ಎಂದು ಮುಗಿಸಿದರು. ಸೌಜನ್ಯಕ್ಕೂ ಹಬ್ಬಕ್ಕೆ ಕರೆಯಲಾರದ ಸ್ಥಿತಿ ಅವರದ್ದು. ಅವರು ಮಂಡ್ಯದ ಸದ್ಗಹಸ್ಥರು. ಅತಿ ವಿರಳ ಸಂಖ್ಯೆಯಲ್ಲಿರುವ ಮಂಡಯಂ ಅಯ್ಯಂಗಾರರರು ಎಂಬ ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು. ಮತ್ತಷ್ಟು ಓದು
ಬುದ್ಧಿಜೀವಿಗಳೆಂಬ ಆಸ್ಥಾನ ವಿದೂಷಕರನ್ನು ಕಡೆಗಣಿಸಬೇಡಿ!
– ರೋಹಿತ್ ಚಕ್ರತೀರ್ಥ
ಜನವರಿ 28ನೇ ತಾರೀಕು ಮೈಸೂರು ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟ ಒಂದು ನುಡಿನಮನ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇತ್ತೀಚೆಗೆ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೋಹಿತ್ ವೇಮುಲನಿಗೆ ಶ್ರದ್ಧಾಂಜಲಿ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮ ಅದು. ವಡ್ಡೇರ ಎಂಬ ಹಿಂದುಳಿದ ಜಾತಿಯ ತಂದೆಗೆ ಹುಟ್ಟಿದ ರೋಹಿತ್, ಹತ್ತು ವರ್ಷಗಳ ಹಿಂದೆಯೇ ಕ್ರಿಶ್ಚಿಯನ್ ಆಗಿ ಮತಾಂತರನಾಗಿದ್ದ ಎಂದು ದಾಖಲೆಗಳು ಹೇಳುತ್ತಿರುವಾಗ ಆತನನ್ನು ಬಲಾತ್ಕಾರವಾಗಿ ದಲಿತ ಎಂದು ಬಿಂಬಿಸಿ ಕಾರ್ಯಕ್ರಮ ಮಾಡಿದ್ದರ ಔಚಿತ್ಯ ಏನೋ ಗೊತ್ತಿಲ್ಲ. ಆತನ ಸಾವಿಗೆ ಕುಟುಂಬದೊಳಗಿನ ಜಗಳಗಳೇ ಕಾರಣವಾಗಿದ್ದವು ಎಂದು, ಆತನ ಮನೆಯವರನ್ನು ಸಂದರ್ಶಿಸಿ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವಿಸ್ತೃತವಾದ ವರದಿಯನ್ನು ಪ್ರಕಟಿಸಿದೆ. ಆದಾಗ್ಯೂ ಆತ ತನ್ನ ಕೊನೆಯ ಪತ್ರದಲ್ಲಿ ಬರೆಯದೇ ಇರುವ ವಿಷಯಗಳನ್ನು ತಾವಾಗಿ ಕಲ್ಪಿಸಿಕೊಂಡು ಸಾವನ್ನು ಯಾವ್ಯಾವುದೋ ಸಮಸ್ಯೆಗಳಿಗೆಲ್ಲ ತಗುಲಿ ಹಾಕುವುದಕ್ಕೆ ಬುದ್ಧಿಜೀವಿಗಳು ಮತ್ತು ಮಾಧ್ಯಮದ ಮಂದಿ ಪ್ರಯತ್ನಿಸುತ್ತಿದ್ದಾರೆ. ಕೇಂದ್ರದಲ್ಲಿರುವ ಬಿಜೆಪಿ ಸರಕಾರಕ್ಕೆ ಮುಜುಗರ ತರುವುದೇ ಇವರೆಲ್ಲರ ಏಕೈಕ ಅಜೆಂಡಾ ಎಂಬುದು ಮತ್ತೆಮತ್ತೆ ಸಾಬೀತಾಗಿರುವ ಸತ್ಯ. ತಮ್ಮ ಕಾರ್ಯಸಾಧನೆಗಾಗಿ ಇವರು ಅಂತಾರಾಷ್ಟ್ರೀಯ ವೇದಿಕೆಗಳನ್ನು ಕೂಡ ನಿರ್ಲಜ್ಜೆಯಿಂದ ಬಳಸಿಕೊಳ್ಳಬಲ್ಲರು. ಬಿಬಿಸಿ ಮತ್ತು ವಾಷಿಂಗ್ಟನ್ ಪೋಸ್ಟ್ ಪತ್ರಿಕೆಗಳು ರೋಹಿತ್ ಆತ್ಮಹತ್ಯೆಯನ್ನು ಮುಂದಿಟ್ಟುಕೊಂಡು ಭಾರತದ ಮಾನ ಹರಾಜು ಹಾಕಿದ್ದೇ ಇದಕ್ಕೊಂದು ಜ್ವಲಂತ ನಿದರ್ಶನ.
ಇರಲಿ, ಆತನ ಸಾವಿಗೆ ಮಾನವೀಯ ನೆಲೆಯಲ್ಲಿ ದಲಿತ ಒಕ್ಕೂಟ ಕಾರ್ಯಕ್ರಮ ಯೋಜಿಸಿತ್ತು ಎಂದೇ ಹೇಳೋಣ. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇಬ್ಬರು ಘನ ಅತಿಥಿಗಳು ಆಡಿದ ಮಾತುಗಳಿಗೂ ಕಾರ್ಯಕ್ರಮದ ಆಶಯಕ್ಕೂ ತಾಳಮೇಳವೇ ಇರಲಿಲ್ಲ! ಒಬ್ಬ ಅತಿಥಿ ಕೆ.ಎಸ್. ಭಗವಾನ್, “ತ್ರೇತಾಯುಗದ ರಾಮನಿಗೆ ತನ್ನ ಪುರುಷತ್ವದ ಬಗ್ಗೆಯೇ ಸಂಶಯ ಇತ್ತು. ಹಾಗಾಗಿ ಎರಡು ಸಲ ಸೀತೆಯನ್ನು ಪರೀಕ್ಷೆಗೆ ಗುರಿಪಡಿಸಿದ. ಆ ಕಾಲದಲ್ಲಿ ಮಹಿಳೆಯರಿಗೂ ಆಸ್ತಿಯ ಹಕ್ಕು ಇದ್ದರೆ ಸೀತೆ ರಾಮನ ಜೊತೆ ವನವಾಸಕ್ಕೆ ಹೋಗುತ್ತಿರಲಿಲ್ಲ” ಎಂದರು. ಮುಂದುವರಿದು, “ರಾಮ ತನ್ನ ಪಟ್ಟಾಭಿಷೇಕದ ಕಾಲದಲ್ಲಿ 38 ಕೋಟಿ ರುಪಾಯಿಯ ಚಿನ್ನದ ನಾಣ್ಯಗಳನ್ನು ಪುರೋಹಿತರಿಗೆ ಕೊಟ್ಟ. ಹಾಗಾಗಿ ಪುರೋಹಿತಶಾಹಿಗಳು ರಾಮರಾಜ್ಯ ಬರಲಿ ಎನ್ನುತ್ತಿದ್ದಾರೆ” ಎಂಬ ಆಣಿಮುತ್ತುಗಳನ್ನು ಉದುರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎರಡನೇ ಅತಿಥಿ ಅದೇ ವಿವಿಯ ಪತ್ರಿಕೋದ್ಯಮ ವಿಭಾಗದ ಪ್ರೊಫೆಸರ್ ಮಹೇಶ್ ಚಂದ್ರಗುರುಗಳು ಮೋದಿ, ಸ್ಮೃತಿ ಇರಾನಿ, ನೆಹರೂ ಮತ್ತು ವಿವಿಯ ಉಪಕುಲಪತಿ – ಎಲ್ಲರಿಗೂ ಹೋಲ್‍ಸೇಲ್ ಆಗಿ ಅವಾಚ್ಯಶಬ್ದಗಳಿಂದ ಬಯ್ದು ತನ್ನ ತೀಟೆ ತೀರಿಸಿಕೊಂಡರು. ಸಾಲದ್ದಕ್ಕೆ ಹುಚ್ಚ ವೆಂಕಟ್ ಸ್ಟೈಲ್‍ನಲ್ಲಿ ನನ್ ಎಕ್ಕಡಾ ನನ್ ಮಗಂದ್ ಎಂಬೆಲ್ಲ ಮುತ್ತಿನ ಹಾರದಂಥ ಪದಪುಂಜಗಳಿಂದ ತನ್ನ ಮಾತುಗಳನ್ನು ಕಳೆಗಟ್ಟಿಸಿ ಚಪ್ಪಾಳೆ ಗಿಟ್ಟಿಸಿದರು! ಈ ಇಬ್ಬರು ಪುಣ್ಯಾತ್ಮರು ಹೋದಲ್ಲೆಲ್ಲ ಏನು ಮಾತಾಡುತ್ತಾರೆನ್ನುವುದು ಇಡೀ ಜಗತ್ತಿಗೆ ಗೊತ್ತಿರುವಾಗ ಹುಡುಕಿ ಇಂಥವರನ್ನೇ ಕಾರ್ಯಕ್ರಮಕ್ಕೆ ಕರೆಸಿರುವುದನ್ನು ನೋಡಿದರೆ ದಲಿತ ಒಕ್ಕೂಟದ ಮುಖ್ಯ ಉದ್ಧೇಶ ರೋಹಿತ್‍ನಿಗೆ ಶ್ರದ್ಧಾಂಜಲಿ ಅರ್ಪಿಸುವುದಾಗಿರಲಿಲ್ಲ; ವಿವಾದದ ಬೆಂಕಿ ಹಾಕಿ ಅದರಲ್ಲಿ ಚಳಿ ಕಾಯಿಸಿಕೊಳ್ಳುವುದು ಮಾತ್ರವಾಗಿತ್ತು ಎನ್ನುವುದು ಸ್ಪಷ್ಟವಾಗುತ್ತದೆ.
ಮತ್ತಷ್ಟು ಓದು
ವೈಚಾರಿಕತೆ, ನಾಸ್ತಿಕತೆ ಮತ್ತು ಬುದ್ಧಿಜೀವಿಗಳ ದುರಂತ ಕತೆ
– ರೋಹಿತ್ ಚಕ್ರತೀರ್ಥ
“ನಾವು ವಿಚಾರವಾದಿಗಳಾಗಿ ನಾಸ್ತಿಕರಾಗೋಣ” ಎಂಬ ಮಾತನ್ನು ಒಬ್ಬ ಲೇಖಕ ಇತ್ತೀಚೆಗೆ ಬುದ್ಧಿಜೀವಿಗಳೆ ತುಂಬಿದ್ದ ಸಾಹಿತ್ಯ ಸಮ್ಮೇಳನವೊಂದರಲ್ಲಿ ಹೇಳಿದರಂತೆ. ಬಹುಶಃ ಅವರು ಪ್ರತಿಯೊಬ್ಬ ವಿಚಾರವಾದಿಯೂ ನಾಸ್ತಿಕನಾಗಿರಲೇಬೇಕು ಎಂಬ ಅರ್ಥದಲ್ಲಿ ಆ ಮಾತನ್ನು ಹೇಳಿರಬಹುದು. ಈ ಮಾತಿನ ಒಳಗಿಳಿಯಲು, ಮೊದಲು, ನಾವು “ವಿಚಾರವಾದ” ಅಂದರೆ ಏನು ಎನ್ನುವುದನ್ನು ನೋಡಬೇಕಾಗಿದೆ.
ವಿಚಾರವಾದಕ್ಕೆ ಕನ್ನಡದಲ್ಲಿರುವ ಅರ್ಥ: ವಿಚಾರ ಮಾಡುವ ಶಕ್ತಿ; ಚಿಂತನೆಯ ಶಕ್ತಿ ಎಂದು. ಇನ್ನೂ ಮುಂದುವರಿದು ತಾತ್ವಿಕ ದೃಷ್ಟಿ ಎಂದೂ ಹೇಳಬಹುದು. ಇಂಗ್ಲೀಷಿನಲ್ಲಿ Intellectual attitude, Ideological stance ಎಂದೆಲ್ಲ ಹೇಳುತ್ತಾರೆ. ಅಂದರೆ ಯಾವುದೇ ವಿಷಯವನ್ನು ಸರಿಯಾಗಿ ಗ್ರಹಿಸಿ, ಅದರ ಅಂತರಾರ್ಥವನ್ನು ಅರಿತು ಅದರಂತೆ ನಡೆಯುವವರು ವೈಚಾರಿಕತೆ ಬೆಳೆಸಿಕೊಂಡಿದ್ದಾರೆ ಎಂದು ಹೇಳಬಹುದು. ವಿಚಾರವಾದ ಅಥವಾ ವೈಚಾರಿಕತೆ ಎಂಬುದಕ್ಕೆ ಸಂವಾದಿಯಾಗಿ ಇಂಗ್ಲೀಷಿನಲ್ಲಿ ಬಳಕೆಯಾಗುವ “Intellectualism” ಎಂಬುದಕ್ಕೆ ಇರುವ ಅರ್ಥ: The exercise of the intellect at the expense of the emotions. ಅಂದರೆ, ಒಂದು ವಿಷಯವನ್ನು ಸರಿಯಾಗಿ ಗ್ರಹಿಸಲು ಹೋಗುವಾಗ ಅದಕ್ಕೆ ಸುತ್ತಿಕೊಂಡಿರುವ ಭಾವನಾತ್ಮಕ ಅಂಶಗಳನ್ನೆಲ್ಲ ಬದಿಗಿಟ್ಟು ಸತ್ಯವನ್ನಷ್ಟೇ ಎತ್ತಿ ಹಿಡಿಯುವುದು ಎಂದು ಅರ್ಥ. ಮಗ ಕಳ್ಳತನ ಮಾಡಿದ್ದಾನೆ. ಅದು ತಾಯಿಗೂ ಗೊತ್ತಿದೆ. ಆತನನ್ನು ಸೆರೆಮನೆಗೆ ಹಾಕಿದರೆ ತಾಯಿ ಅನಾಥೆಯಾಗುತ್ತಾಳೆ; ಆದರೆ ಆತನನ್ನು ಶಿಕ್ಷಿಸದೆ ಬಿಟ್ಟರೆ ದೇಶದ ಕಾನೂನಿಗೆ ಅಪಚಾರ. ಅಲ್ಲದೆ ಇದೇ ಉದಾಹರಣೆಯನ್ನು ನೋಡಿ ನೂರಾರು ಜನ ಕಳ್ಳತನಕ್ಕೆ ಇಳಿಯಬಹುದು. ಹಾಗಾಗಿ, ತಾಯಿಯ ಕಣ್ಣೀರನ್ನು ಕಷ್ಟಪಟ್ಟು ಅಲಕ್ಷಿಸಿ ಮಗನಿಗೆ ಶಿಕ್ಷೆಯಾಗುವಂತೆ ನೋಡಿಕೊಂಡು ಕಾನೂನನ್ನು ಎತ್ತಿಹಿಡಿಯುವುದು ಇಂಟಲೆಕ್ಚುಲಿಸಮ್ ಅಥವಾ ವೈಚಾರಿಕತೆಯ ಒಂದು ಮುಖ.
ವೈಚಾರಿಕತೆ – ಈಗೇನೋ ಬಹಳ ಪರಿಚಿತವಾದ ಭಾರತೀಯ ಶಬ್ದ ಅನ್ನಿಸಿದರೂ ಅದರ ಉಗಮವಾದದ್ದು ಭಾರತದಲ್ಲಲ್ಲ. ಇದು ಮಧ್ಯ ಯುರೋಪಿನಲ್ಲಿ ಸುಮಾರು ಹದಿನಾರನೇ ಶತಮಾನದಲ್ಲಿ ಹುಟ್ಟಿದ ಪದ ಮತ್ತು ಪರಿಕಲ್ಪನೆ. ಇದರ ಹುಟ್ಟಿನ ಹಿನ್ನೆಲೆ ತಿಳಿಯಲು ನಾವು ಸ್ವಲ್ಪ ಹಿಂದೆ ಹೋಗಬೇಕಾಗುತ್ತದೆ. ಕ್ರಿಸ್ತ ಹುಟ್ಟಿ ಒಂದೂವರೆ ಸಾವಿರ ವರ್ಷಗಳಾದರೂ ಯುರೋಪಿಯನ್ನರು ಬೈಬಲ್ಲಿನ ಭಾಗಗಳನ್ನು ಪ್ರಶ್ನೆ ಮಾಡಲು ಹೋಗಿರಲಿಲ್ಲ. ಚರ್ಚು ಅತ್ಯಂತ ಪ್ರಬಲವಾಗಿದ್ದ ವ್ಯವಸ್ಥೆ. ಅದನ್ನು ಎದುರುಹಾಕಿಕೊಳ್ಳುವವರಿಗೆ ಸಿಗುತ್ತಿದ್ದ ಪ್ರತಿಫಲ ಮರಣ. ಬೈಬಲ್ಲಿನ ವಿರುದ್ಧ ಮಾತಾಡಿದವರನ್ನು ಒಂದೋ ಜೀವಮಾನವೆಲ್ಲ ಸೆರೆಯಲ್ಲಿ ಹಾಕಿ ಭೀಕರ ಶಿಕ್ಷೆಗಳನ್ನು ಕೊಡಲಾಗುತ್ತಿತ್ತು ಇಲ್ಲವೇ ಹಲವು ಹತ್ಯಾರಗಳ ಮೂಲಕ ದೇಹವನ್ನು ಹಾಯಿಸಿ ಕೊಲ್ಲಲಾಗುತ್ತಿತ್ತು. ಪ್ರಭುತ್ವ ಯಾವತ್ತೂ ತನ್ನ ವಿರುದ್ಧ ಮಾತಾಡುವವನನ್ನು ಬದುಕಗೊಡುವುದಿಲ್ಲ ಅಥವಾ ಆತನನ್ನು ಸಂಪೂರ್ಣವಾಗಿ ಅಲಕ್ಷಿಸಿ ಕೊನೆಗೆ ತಾನಾಗಿ ಆತ ಬಾಯಿಮುಚ್ಚಿಕೊಂಡು ಸುಮ್ಮನಾಗುವಂತೆ ಮಾಡುತ್ತದೆ. ಗ್ರೀಸ್, ರೋಮ್ ನಾಗರಿಕತೆಗಳಲ್ಲಿ ಆ ಕಾಲದಲ್ಲಿ ರಾಜರಾಗಿದ್ದವರು, ಜೊತೆಗೆ ಅವರ ಆಸ್ಥಾನ ಪಂಡಿತರಾಗಿದ್ದವರು ಜನ ನಂಬಬೇಕಾದ ಮಾತುಗಳನ್ನು ಹೇಳುತ್ತಿದ್ದರು, ಬರೆದಿಡುತ್ತಿದ್ದರು. ಅವುಗಳು ಸರಿಯಿಲ್ಲ; ಸುಳ್ಳಿನ ಕಂತೆ ಎಂದವರನ್ನು ಅಲಕ್ಷಿಸಿ ದೂರಕ್ಕೆಸೆಯುತ್ತಿದ್ದರು. ಹಾಗಾಗಿ ಸೂರ್ಯ ಭೂಮಿಗೆ ಸುತ್ತು ಬರುತ್ತಾನೆ ಎಂದು ಹೇಳಿದ ಟಾಲೆಮಿ, ಅರಿಸ್ಟಾಟಲ್ ಮೊದಲಾದವರ ತಪ್ಪು ಚಿಂತನೆಗಳು ನೂರಾರು ವರ್ಷಗಳ ಕಾಲ ನಿಂತವು. ಟಾಲೆಮಿ ರಾಜನಾಗಿದ್ದ, ಅರಿಸ್ಟಾಟಲ್ ಅಸ್ಥಾನ ಪಂಡಿತನಾಗಿದ್ದ ಎನ್ನುವುದೇ ಇದಕ್ಕೆ ಕಾರಣ. ಸೂರ್ಯನ ಸುತ್ತ ಭೂಮಿ ತಿರುಗುತ್ತಿದೆ ಎಂದು ಅವರ ಕಾಲದಲ್ಲಿ ಹೇಳಿದ ಅರಿಸ್ಟಾರ್ಕಸ್‍ನ ದನಿ ಪ್ರಭುತ್ವದ ಧ್ವನಿವರ್ಧಕದ ಕೆಳಗೆ ಉಡುಗಿಯೇ ಹೋಯಿತು.
ಮತ್ತಷ್ಟು ಓದು
ಪಾಕಿಸ್ತಾನ್, ಹುರಿಯತ್ ಮತ್ತು ನಮ್ಮ ಬುದ್ಧಿಜೀವಿಗಳು!!
– ಪ್ರದೀಪ್ ತ್ಯಾಗರಾಜ
ಬಹುಶಃ ಭಾರತದ ಜನ ಸಾಮಾನ್ಯರೆಲ್ಲರೂ ಒಕ್ಕೊರಲಿನಿಂದ ಹೇಳುವ ಮಾತೊಂದೇ, ಅದೇ ಪಾಕಿಸ್ತಾನ್ ಎನ್ನುವುದು ಒಂದು ದೊಡ್ಡ ದುರಂತ. ಈ ಪಾಕಿಸ್ತಾನ ಎಂಬುದು ಒಂದು ಭಿಕ್ಷುಕರ ದೇಶ ಅಂದರೂ ತಪ್ಪಲ್ಲ. ಯಾವುದೇ ದೇಶ ಕೂಡ ಪಾಕಿಸ್ತಾನದೊಂದಿಗೆ ಸಂಬಂಧ ಹೊಂದಿ ಉದ್ಧಾರ ಆದ ಉದಾಹರಣೆಗಳಿಲ್ಲ. ಇಷ್ಟಕ್ಕೂ ಭಯೋತ್ಪಾದನೆಯೊಂದನ್ನು ಬಿಟ್ಟರೆ, ಆ ದೇಶಕ್ಕೆ ತಮ್ಮನ್ನು ಮಾರ್ಕೆಟ್ ಮಾಡಿಕೊಳ್ಳುವಂಥ ಇನ್ನೊಂದು ವಸ್ತುವಿಲ್ಲ. ಈ ದೇಶದ ಪರಿಸ್ಥಿತಿ ಹೇಗಿದೆಯಂದರೆ, ಪ್ರಜಾಪ್ರಭುತ್ವವನ್ನು ಹೇರಿಕೆಯೆಂಬ ರೀತಿ ಒಪ್ಪಿಕೊಳ್ಳುವ ವಿಷಮ ಸ್ಥಿತಿ ತಲುಪಿದ್ದಾರೆ. ಮಾತು ಮಾತಿಗೂ, ಪಶ್ಚಿಮ ರಾಷ್ಟ್ರಗಳ ಬಳಿಹೋಗಿ, ತಮ್ಮ ದೇಶಕ್ಕೆ ಸಹಾಯ ಹಸ್ತ ಚಾಚಿ ಎಂದು ಅಂಗಲಾಚುವುದರಲ್ಲೇ ಇವರು ಬರೋಬ್ಬರಿ ೬೫ ವರ್ಷಗಳನ್ನು ನಮ್ಮ ಭಾರತ ದೇಶದೊಂದಿಗೆ ಸವೆಸಿದ್ದಾರೆ. ನಮ್ಮ ದೇಶದಲ್ಲಿ ರಾಹುಲ್ ಗಾಂಧಿ ಎಂಬೋ ಮಹಾನ್ ಬುದ್ಧಿವಂತನಿಗೆ ಎಷ್ಟು ಮರ್ಯಾದೆ ಇದೆಯೋ, ಅಷ್ಟೇ ಮರ್ಯಾದೆ ಆ ನವಾಜ್ ಷರೀಫ್ ಎಂಬ ವ್ಯಕ್ತಿಗೆ ಪಾಕಿಸ್ತಾನದಲ್ಲಿ ಇದೆ. ಆ ದೇಶದ ನಿಜವಾದ ಆಡಳಿತವಿರುವುದೇ ಅವರ ಸೈನ್ಯಕ್ಕೆ. ೧೯೪೭ ರಿಂದಲೂ ಇದೆ ರೀತಿ ನಡೆದು ಬರುತ್ತಿದೆ. ಈ ಸಂಧರ್ಭದಲ್ಲಿ, ಈ ಹುರಿಯತ್ ಎನ್ನುವ ಸಂಘಟನೆ ಕೂಡ, ತನ್ನ ಬೇಳೆ ಬೇಯಿಸಿಕೊಳ್ಳಲು ಶುರು ಮಾಡಿದೆ. ಇದರ ಪರಿಣಾಮ ಭಾರತ ದೇಶದ ಹಲವಾರು ಬುದ್ಧಿಜೀವಿಗಳು ತಮ್ಮ ಅತಿ-ಬುದ್ಧಿವಂತಿಕೆಯನ್ನು ಪ್ರದರ್ಶಿಸಲು ಮುಂದಾಗಿರುವುದೇ ನಮ್ಮ ದೇಶದ ದುರಂತ.
ಇಷ್ಟೆಲ್ಲಾ ಹುಳುಕು ತುಂಬಿರುವ ಪಾಕಿಸ್ತಾನ ಎಂಬ ದೇಶದ ಬಗ್ಗೆ, ನಮ್ಮ ಬುಜೀಗಳ ಕಲ್ಪನೆ ನಿಜಕ್ಕೂ ಅದ್ಭುತ. ನಿಜಕ್ಕೂ ಆ ದೇಶದೊಂದಿಗೆ ಮಾತುಕತೆ ನಡೆಸಬೇಕಂಬ ಇವರ ಆಲೋಚನೆ ನಿಜಕ್ಕೂ ಆಘಾತಕಾರಿ. ಇಷ್ಟಕ್ಕೂ ಏನೂ ಸರಿಯಿಲ್ಲದ ಆ ದೇಶದ ಜೊತೆ ಮಾತನಾಡಲು ಏನಿದೆ? ಒಂದು ಪ್ರಜಾಪ್ರಭುತ್ವ ಸರ್ಕಾರದ ಮಾತನ್ನು ಕೇಳುವ ತಾಳ್ಮೆಯಾಗಲಿ, ಅಥವಾ ಸಂಯಮವಾಗಲಿ ಇಲ್ಲ. ಒಂದು ಸರ್ಕಾರ ಕೊಟ್ಟ ನಿರ್ಧಿಷ್ಟ ಅಂಶಗಳ ಬಗ್ಗೆ ಮಾತುಕತೆ ನಡೆಸುವಲ್ಲಿ ತಯಾರಿಲ್ಲ.
ನಾಡು-ನುಡಿ : ಮರುಚಿಂತನೆ – ಮೂಲಭೂತವಾದದ ಒಂದು ಸೆಕ್ಯುಲರ್ ಅವತಾರ
– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ
ಪ್ರಗತಿಪರರು ಕ್ರೈಸ್ತ ಹಾಗೂ ಮುಸ್ಲಿಂ ಸಮಾಜಗಳನ್ನು ಟೀಕಿಸುವ ಕ್ರಮಕ್ಕೂ ಹಿಂದೂ ಸಮಾಜವನ್ನು ಟೀಕಿಸುವ ಕ್ರಮಕ್ಕೂ ಒಂದು ಮೂಲಭೂತ ವ್ಯತ್ಯಾಸವಿದೆ. ಆ ಸಮಾಜಗಳಲ್ಲಿ ಯಾವುದಾದರೂ ತಪ್ಪು ಆಚರಣೆಯ ಕುರಿತು ಚರ್ಚೆ ಎದ್ದರೆ ಅವನ್ನು ಅವರ ಪವಿತ್ರಗ್ರಂಥಗಳು ಸಮರ್ಥಿಸಲು ಸಾಧ್ಯವೇ ಇಲ್ಲ ಎಂಬುದು ಇವರ ಧೃಡ ನಂಬಿಕೆ. ಅವು ಏನಿದ್ದರೂ ಇಂದಿನ ಅನುಯಾಯಿಗಳ ಅಜ್ಞಾನಕ್ಕೆ ಸಂಬಂಧಿಸಿದ್ದು ಅಷ್ಟೆ. ಉದಾಹರಣೆಗೆ, ಇಂದು ಭಯೋತ್ಪಾದನೆಯ ಕುರಿತು ನಡೆಯುವ ಚರ್ಚೆಗಳನ್ನು ಗಮನಿಸಿ. ಪ್ರತಿಯೊಬ್ಬರೂ ಕೂಡ ಅವು ಇಸ್ಲಾಂನ ಪವಿತ್ರಗ್ರಂಥಗಳಿಗೆ ವಿರುದ್ಧವಾಗಿವೆ ಎಂಬ ತರ್ಕವನ್ನಿಟ್ಟೇ ಅವುಗಳನ್ನು ಖಂಡಿಸುತ್ತಾರೆ. ಅಂದರೆ ಅವರ ಕೃತ್ಯಗಳನ್ನು ಇಸ್ಲಾಂನ ನಿರ್ದೇಶನಗಳಲ್ಲ ಎಂಬುದಾಗಿ ನೋಡುವುದು ಅತ್ಯಂತ ನಿರ್ಣಾಯಕವಾಗಿದೆ. ಜಿಹಾದಿಗೆ ಸಂಬಂಧಿಸಿದಂತೆ, ಬುರ್ಖಾಕ್ಕೆ ಸಂಬಂಧಿಸಿದಂತೆ, ತಲಾಖ್‍ಗೆ ಸಂಬಂಧಿಸಿದಂತೆ, ಹೀಗೆ ಇದುವರೆಗೆ ಎಷ್ಟು ಚರ್ಚೆಗಳು ಎದ್ದಿವೆಯೋ ಅವುಗಳಲ್ಲೆಲ್ಲ ಎಲ್ಲೂ ಕೂಡ ಪವಿತ್ರ ಗ್ರಂಥದ ನಿಂದನೆ ಆಗದಂತೇ ಎಚ್ಚರವಹಿಸಿ ವಾದಗಳನ್ನು ಬೆಳೆಸಲಾಗುತ್ತದೆ. ಅಂದರೆ ಇಸ್ಲಾಂ ರಿಲಿಜನ್ನು ಮೂಲತಃ ಒಳ್ಳೆಯದು, ಇಂದಿನ ದುಷ್ಪರಿಣಾಮಕ್ಕೆ ಅದು ಹೊಣೆಯಲ್ಲ ಎಂಬುದು ಇವರ ವಾದ.
ಇದರಲ್ಲೇನು ಸ್ವಾರಸ್ಯ? ಎಂದು ನೀವು ಹುಬ್ಬೇರಿಸಬಹುದು. ಪ್ರತಿಯೊಂದು ಮತಾನುಯಾಯಿಗಳಿಗೂ ತಮ್ಮ ಮತದ ಕುರಿತು ನಂಬಿಕೆ ಇರುವುದು ಸ್ವಾಭಾವಿಕ. ಆದರೆ ನಾನು ಹೇಳುತ್ತಿರುವುದು ಶ್ರದ್ಧಾವಂತ ಮುಸ್ಲಿಮರ ಕಥೆಯಲ್ಲ, ಬದಲಾಗಿ ತಾವು ಪ್ರಗತಿಪರರೆಂದು, ಸೆಕ್ಯುಲರ್‍ವಾದಿಗಳು ಅಥವಾ ಬುದ್ಧಿಜೀವಿಗಳೆಂದು ಕರೆದುಕೊಂಡ ಮುಸ್ಲಿಮರ ಕಥೆ. ಇದು ಮುಸ್ಲಿಂ ಬುದ್ಧಿಜೀವಿಗಳದೊಂದೇ ಕಥೆಯಲ್ಲ, ಸೆಕ್ಯುಲರ್ ಎಂದು ಕರೆದುಕೊಂಡ ಹಿಂದೂ ಬುದ್ಧಿಜೀವಿಗಳ ಕಥೆ ಕೂಡಾ ಹೌದು. ಅಂದರೆ ಯಾವ ರಿಲಿಜನ್ನುಗಳಿಗೂ ಸೇರದೇ ತಟಸ್ಥವಾಗಿ ಚಿಂತನೆ ನಡೆಸಬೇಕೆಂದು ಪ್ರತಿಪಾದಿಸುವವರು. ಇದುವರೆಗೆ ಮುಸ್ಲಿಮರ ಪವಿತ್ರಗ್ರಂಥವೇ ಸರಿಯಿಲ್ಲ ಎಂದು ಯಾವ ಮುಸ್ಲಿಂ ಅಥವಾ ಹಿಂದೂ ಸೆಕ್ಯುಲರ್ ಬುದ್ಧಿಜೀವಿ ಕೂಡ ಹೇಳಿದ್ದು ನಾನು ಕೇಳಿಲ್ಲ. ಹಾಗಂತ ಅವರು ಹಾಗೆ ಹೇಳಬೇಕಿತ್ತು ಅಂತಾಗಲೀ, ಯಾರದಾದರೂ ಪವಿತ್ರಗ್ರಂಥವನ್ನು ನಿಂದಿಸುವುದು ಸರಿಯೆಂದಾಗಲೀ ನಾನಿಲ್ಲಿ ಸೂಚಿಸುತ್ತಿಲ್ಲ ಎಂಬುದನ್ನು ಸ್ಪಷ್ಟೀಕರಿಸುತ್ತೇನೆ. ನಾನು ನಿಮ್ಮ ಗಮನ ಸೆಳೆಯಲೆತ್ನಿಸುವುದು ನಮ್ಮ ಬುದ್ಧಿಜೀವಿಗಳ ಈ ಧೋರಣೆಯ ಕುರಿತು. ಅವರು ಅಪ್ರಾಮಾಣಿಕರು ಅಂತ ನನ್ನ ಹೇಳಿಕೆಯಲ್ಲ. ಅವರಿಗೆ ನಿಜವಾಗಿಯೂ ಹಾಗೇ ಅನಿಸುತ್ತದೆ ಅಂತಲೇ ಇಟ್ಟುಕೊಳ್ಳೋಣ.
ಮತ್ತಷ್ಟು ಓದು
ಆಳ್ವಾಸ್ ’ನುಡಿಸಿರಿ’ ಮತ್ತು ಪ್ರಗತಿಪರರ ’ಕಿರಿಕಿರಿ’
– ಹರಿಶ್ಚಂದ್ರ ಶೆಟ್ಟಿ
ಮೋಹನ ಆಳ್ವರ ನಾಡು ನುಡಿಯ ಕಂಪಿನ ಕನ್ನಡ ನುಡಿಸಿರಿ ಅದ್ದೂರಿಯ ಮುಕ್ತಾಯ ಕಂಡಿದೆ.ಒಬ್ಬ ವ್ಯಕ್ತಿ ತನ್ನ ಇಚ್ಛಾಶಕ್ತಿಯಿಂದ ಇಂತಹದೊಂದು ಕಾರ್ಯ ನಡೆಸುವುದು ಸಾಧ್ಯವೇ ಎನ್ನುವ ಸಾರ್ವಜನಿಕರ ಆಶ್ಚರ್ಯದ ನಡುವೆ ಕೆಲವು ಹುಳುಕಿನ ಮನಸ್ಸುಗಳು ತಮ್ಮ ವಿತಂಡ ವಾದವನ್ನು ಆಳ್ವರತ್ತ ಹರಿಸಿ ಬಿಟ್ಟಿವೆ.ಕಳೆದ ವರ್ಷ ಮೋಹನ ಆಳ್ವರಿಂದ ಸನ್ಮಾನ ಮಾಡಿಸಿಕೊಂಡು,ಶಾಲು ಹೊದಿಸಿಕೊಂಡು,ಒಟ್ಟಿಗೆ ನೋಟಿನ ದಪ್ಪ ಕಟ್ಟನ್ನು ಕಿಸೆಗೇರಿಸಿಕೊಂಡು ಹೋದ ಸಾರಸ್ವತ ಲೋಕದ ಮಹಾಶಯರೊಬ್ಬರು ನಂತರ ತಮ್ಮ ಅಸಲಿ ಬುದ್ಧಿಯ ” ಜಾತಿ” ವಾದವನ್ನು ಸಾಬೀತು ಪಡಿಸಿದ್ದರು…ಅಂತಹ ಸಾಹಿತಿಗೆ,” ಓತಿಕ್ಯಾತನಿಗೆ ಬೇಲಿ ಸಾಕ್ಷಿ ” ಎನ್ನುವಂತೆ,ಕಳೆದ ಹಲವಾರು ವರ್ಷಗಳಿಂದ ನುಡಿಸಿರಿಯ ಹೆಸರಿನಲ್ಲಿ ಕುತ್ತಿಗೆ ಮಟ್ಟ ತಿಂದು ತೇಗಿದ ಬುದ್ಧಿಜೀವಿಗಳು ಸಹಕಾರ ವಾಣಿಯನ್ನು ಒದಗಿಸಿದ್ದವು.ಈ ಸಲವೂ ಇವರುಗಳಿಗೆ ಏನೋ ಒಡಕು ಕಂಡಿದೆಯಂತೆ.ಆಳ್ವರ ಕನ್ನಡ ಮನಸ್ಸು ಪ್ರಿಯವಾಗುವ ಬದಲು ,ಅವುಗಳಿಗೆ ಎಲ್ಲೋ ಬಿದ್ದಿದ್ದ ಕೊಳಚೆ ಆಪ್ಯಾಯಮಾನವಾಗಿ ಕಂಡಿದೆ.ಜನಪದ ನೃತ್ಯಗಳೂ ಜಾತಿ ಪದ್ಧತಿಯ ಓಣಿಯಲ್ಲಿಯೇ ಸಾಗಬೇಕೆಂಬ ಇವುಗಳು ಮಾತ್ರ ಜಾತಿ ಪದ್ದತಿ ನಿವಾರಣೆಗೆ ತಾವೇನು ಘನ ಕಾರ್ಯ ಮಾಡಿದ್ದೇವೆ ಎಂದು ಹೇಳುವುದಿಲ್ಲ.ಇವರುಗಳ ಕೆಲಸ ಏನಿದ್ದರೂ ಬರವಣಿಗೆ ಮೂಲಕ ಘರ್ಷಣೆಯ ಕಿಡಿ ಹೊತ್ತಿಸುವುದು ಮತ್ತು ಆ ಮೂಲಕ ಉದರ ಪೋಷಣೆ ಮಾಡಿಕೊಳ್ಳುವುದು….
ವಿಜ್ಞಾನಿಗಳೇಕೆ ಪೂಜೆ ಮಾಡಬಾರದು?
– ಡಾ. ಪ್ರವೀಣ್ ಟಿ. ಎಲ್
ಉಪನ್ಯಾಸಕರು, ಕುವೆಂಪು ವಿಶ್ವವಿದ್ಯಾನಿಲಯ
ಮಂಗಳಯಾನದ ಯಶಸ್ವೀ ಕಾರ್ಯಾಚರಣೆ ಬಗ್ಗೆ ಇಡೀ ದೇಶವೇ ಸಂತಸಪಟ್ಟಿದೆ. ಇಡೀ ವಿಶ್ವವೇ ಭಾರತದ ಕಡೆಗೆ ನೋಡುವಂತರ ಸಾಧನೆಯನ್ನು ಭಾರತೀಯ ವಿಜ್ಞಾನಿಗಳು ಮಾಡಿರುವುದು ಮಹಾನ್ ಸಾಧನೆಯೇ ಸರಿ. ಆದರೆ ಕೆಲವು ‘ಚಿಂತಕರು’ ಈ ಇಡೀ ಕಾರ್ಯಾಚರಣೆಯ ಮುಖ್ಯಸ್ಥರಾಗಿದ್ದ ವಿಜ್ಞಾನಿ ರಾಧಾಕೃಷ್ಣನ್‍ರವರ ನಡೆಯ ಕುರಿತು ತಮ್ಮ ಕುಹಕ, ತಕರಾರುಗಳನ್ನು ಅಂತರ್ಜಾಲ, ಮತ್ತಿತರ ಕಡೆಗಳಲ್ಲಿ ಹರಿಯಬಿಡುತ್ತಿದ್ದಾರೆ. ರಾಧಾಕೃಷ್ಣನ್‍ರವರು ‘MOM’ ನ ಸಣ್ಣ ಮಾದರಿಯೊಂದನ್ನು ತಿರುಪತಿಗೆ ತಂದು, ತಮ್ಮ ಧರ್ಮಪತ್ನಿಯೊಡನೆ ಪೂಜಾ ಕಾರ್ಯಗಳನ್ನು ನೇರವೇರಿಸಿದ್ದು ಅವರ ಟೀಕೆಗೆ ಕಾರಣ.
ಉಡಾವಣೆಗೊಂಡ ‘MOM’ ಮಂಗಳನ ತಲುಪುವ ಮುಂಚೆಯೇ ಇದೊಂದು ವಿಫಲಯತ್ನವೇನೋ ಎಂಬಂತೆ ಕೆಲವರು ತಮ್ಮ ಪ್ರತಿಕ್ರಿಯೆಗಳನ್ನು ನೀಡಿದ್ದರು. ಇನ್ನೂ ಕೆಲವರು ವಿಫಲವಾಗಿದೆ ಎಂಬ ತೀರ್ಮಾನಕ್ಕೂ ಬಂದಿದ್ದರು. ಅಷ್ಟೇ ಅಲ್ಲದೇ ಈ ವಿಫಲತೆಗೆ ವಿಜ್ಞಾನಿಗಳು ತಿರುಪತಿಗೆ ತೆರಳಿ ‘ತಲೆಬೋಳಿಸಿ’ಕೊಳ್ಳದೇ ವಾಪಾಸಾದುದೇ ಪ್ರಮುಖ ಕಾರಣ ಎಂಬಂತೇ ಕುಹಕವಾಡಲು ಶುರುಮಾಡಿದರು. ಕುಹಕಗಳಿಗೆಲ್ಲಾ ಉತ್ತರವನ್ನು ವಿಜ್ಞಾನಿಗಳು ಈಗಾಗಲೇ ನೀಡಿದ್ದಾರೆ.
ಈ ‘ವೈಜ್ಞಾನಿಕ’ ಚಿಂತಕರ ಪ್ರಮುಖ ತಕರಾರೆಂದರೆ, ವಿಜ್ಞಾನಿಗಳು ದೇವಸ್ಥಾನಗಳಿಗೆ ತೆರಳಿ ತಾವು ತಯಾರಿಸಿದ ಆಯುಧದ ಪೂಜೆ ನೆರವೇರಿಸಿರುವುದು ಎಷ್ಟು ಸರಿ. ವಿಜ್ಞಾನಿಗಳಿಗೆ ವಿಶ್ವದ ಸೃಷ್ಟಿಯ ಕುರಿತು ವೈಜ್ಞಾನಿಕ ಕಾರಣಗಳು ತಿಳಿದಿದ್ದರೂ ಸಹಾ ದೇವರ ಅಸ್ತಿತ್ವವನ್ನು ನಂಬುತ್ತಾರೆ ಮತ್ತು ತಮ್ಮ ವೈಜ್ಞಾನಿಕ ಪ್ರಯೋಗಗಳಲ್ಲಿ ದೇವರ ಕೈವಾಡ ಇದೆ ಎಂದುಕೊಳ್ಳುವುದು ಅಜ್ಞಾನ/ ಮೂಢತೆ ಎಂಬುದವರ ವಾದ. ISRO ಒಂದು ಸರ್ಕಾರಿ ಸಂಸ್ಥೆಯಾಗಿದ್ದು, ಭಾರತ ಒಂದು ಜಾತ್ಯಾತೀತ ರಾಷ್ಟ್ರ ಎಂಬುದನ್ನು ರಾಧಾಕೃಷ್ಣನ್‍ರವರು ನೆನಪಿಡಬೇಕು ಎಂದು ಅಪ್ಪಣೆ ಹೊರಡಿಸುತ್ತಾರೆ.
ಮೇಲಿನ ತಕರಾರುಗಳು ಭಾರತದ ಕುರಿತ ಈ ಚಿಂತಕರ ಅಜ್ಞಾನವನ್ನೂ, ಅವೈಜ್ಞಾನಿಕತೆಯನ್ನೂ, ಮೌಢ್ಯತೆಯನ್ನೂ ಪ್ರದರ್ಶಿಸುತ್ತಿವೆ. ಈ ಚಿಂತಕರುಗಳು ತಪ್ಪಾದ ‘ಯೂರೋಪಿನ ಗ್ರಹಿಕೆ’ಗಳಿಂದ ಕೂಡಿದ ತಮ್ಮ ವಿವರಣೆಗಳನ್ನೇ ವೈಜ್ಞಾನಿಕ ಎಂದು, ತಾವೇ ವಿಜ್ಞಾನದ ಪಿತಾಮಹರೆಂಬ ತೀರ್ಮಾನಕ್ಕೆ ಬಂದಿದ್ದಾರೆ. ಜೊತೆಗೆ ಯೂರೋಪಿನ ಸೆಕ್ಯುಲರ್ ಚಿಂತನೆಯ ನಕಲನ್ನು ಭಾರತದಲ್ಲಿ ವೈಜ್ಞಾನಿಕತೆಯ ಹೆಸರಲ್ಲಿ ವ್ಯಾಪಾರ ಮಾಡುತ್ತಿರುವುದು ಕಂಡುಬರುತ್ತದೆ. ವಿಜ್ಞಾನಿಗಳ ಈ ನಡೆಯನ್ನು ಅವೈಜ್ಞಾನಿಕ, ಮೌಢ್ಯ ಎನ್ನಲು ಕಾರಣ ಅವರ ಆಚರಣೆ ಮತ್ತು ನಂಬಿಕೆಗಳ ನಡುವಿನ ಸಂಬಂಧ. ಅಂದರೆ ಬಾಹ್ಯಾಕಾಶ ನೌಕೆಯ ಉಡಾವಣೆಗೂ ದೇವರ ಮೇಲಿನ ನಂಬಿಕೆಗೂ ಸಂಬಂಧ ಇದೆ ಎಂಬುದು. ದೇವರೇ ಬಂದು ಕ್ಷಿಪಣಿಯನ್ನು ಉಡಾವಣೆ ಮಾಡುತ್ತಾನೆ ಎಂದೇನೂ ವಿಜ್ಞಾನಿಗಳು ನಂಬಿಲ್ಲವಲ್ಲ. ಹಾಗಿದ್ದರೆ ಅವರು ವರ್ಷಗಟ್ಟಲೇ ಶ್ರಮಪಟ್ಟು ತಯಾರಿಸುವ ಅವಶ್ಯಕತೆಯಾದರೂ ಏನಿತ್ತು. ಅಲ್ಲದೇ ಅದಕ್ಕೆ ನಿರ್ದಿಷ್ಟ ಕಾಲಕ್ಕೆ ಬೇಕಾಗುವಷ್ಟು ಇಂಧನವನ್ನು, ಆಧುನಿಕ ತಂತ್ರಜ್ಞಾನವನ್ನು ಬಳಸುವ ಅಗತ್ಯವಾದರೂ ಏಕೆ?
ನಮ್ಮ ನಮ್ಮ ಭಾಷೆಯ ಸಮಸ್ಯೆ
– ಡಾ. ಶ್ರೀಪಾದ ಭಟ್
ಸಹಾಯಕ ಪ್ರಾಧ್ಯಾಪಕ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು.
ವಾರಗಳ ಹಿಂದೆ ಭಾರತದ ಖಗೋಳ ವಿಜ್ಞಾನಿಗಳ ತಂಡ ಮಂಗಳನ ಕಕ್ಷೆಗೆ ಉಪಗ್ರಹವನ್ನು ಯಶಸ್ವಿಯಾಗಿ ಸೇರಿಸಿತು. ಈ ಸಂದರ್ಭದಲ್ಲಿ ಬಹುತೇಕ ಕನ್ನಡ ವಾಹಿನಿಗಳು ಚರ್ಚೆಯನ್ನು ಏರ್ಪಡಿಸಿದ್ದವು. ಖಗೋಳ ಅನ್ನುತ್ತಿದ್ದಂತೆ ಈ ಕುರಿತ ಭಾರತದ ಪ್ರಾಚೀನ ಜ್ಞಾನವೇತ್ತರನ್ನು ಹಾಗೂ ಇಂದಿನ ವಿಜ್ಞಾನಿಗಳನ್ನು ಅಥವಾ ಅವರ ಪ್ರತಿನಿಧಿಗಳು ಅಂದುಕೊಂಡವರನ್ನು ಚರ್ಚೆಗೆ ಆಹ್ವಾನಿಸಬೇಕಲ್ಲ? ವಾಹಿನಿಗಳೂ ಹಾಗೆಯೇ ಮಾಡಿದವು. ಎರಡೂ ಕ್ಷೇತ್ರದವರನ್ನು ಜೊತೆಗೆ ನಡುವೆ ವಿಚಾರವಾದಿಗಳನ್ನು ಕರೆತಂದು ಕೂರಿಸಲಾಗಿದ್ದ ಚರ್ಚೆಯೊಂದನ್ನು ನೋಡುತ್ತಿದ್ದೆ. ಜ್ಯೋತಿಷಶಾಸ್ತ್ರದಲ್ಲಿ ಮಂಗಳನ ಬಗ್ಗೆ ಹೀಗೆ ಹೇಳಿದೆ, ಹಾಗೆ ಹೇಳಿದೆ. ಅದೇ ಸತ್ಯ; ಭಾರತೀಯ ಋಷಿ ಮುನಿಗಳು ಅಣುವಿನ ಬಗ್ಗೂ ಪ್ರಸ್ತಾಪಿಸಿದ್ದಾರೆ, ಅವರಿಗೆಲ್ಲ ತಿಳಿದಿತ್ತು ಎಂಬಂತೆ ಆ ಶಾಸ್ತ್ರದವರು ಅನ್ನುತ್ತಿದ್ದರೆ ಮತ್ತೊಂದೆಡೆ ಹಾಗಾದ್ರೆ ಅವರಿಗೆ ಅಣುಬಾಂಬ್ ತಿಳಿದಿತ್ತಾ? ಇದೆಲ್ಲ ನಾನ್ಸೆನ್ಸ್ ಎಂದು ಆಧುನಿಕ ಜ್ಞಾನ ಪ್ರತಿಪಾದಕರು ಬಿಸಿಬಿಸಿ ಚರ್ಚೆ ಮಾಡುತ್ತಿದ್ದರು.ತಮ್ಮ ತಮ್ಮ ಪ್ರತಿಪಾದನೆಗೆ ಎರಡೂ ಗುಂಪಿನವರೂ ಬಲವಾಗಿ ಅಂಟಿಕೊಂಡೇ ಇದ್ದರು. ಸಮಯವಾಯ್ತು, ಚರ್ಚೆ ನಿಂತಿತು. ಇಂಥ ಚರ್ಚೆಗೆ ಆದಿಯೂ ಇಲ್ಲ, ಅಂತ್ಯವೂ ಇಲ್ಲ.
ಕಾರಣ ಇಷ್ಟೇ. ಭಾರತದ ಪ್ರಾಚೀನ ಜ್ಞಾನ ಅಂದರೆ ಇಲ್ಲಿ ಚಂದ್ರ, ಸೂರ್ಯ, ಮಂಗಳ ಮೊದಲಾದವುಗಳ ಬಗ್ಗೆ ಜ್ಯೋತಿಷಶಾಸ್ತ್ರದಲ್ಲಿ ಹೇಳಿರುವ ಮಾತುಗಳು ಅಥವಾ ಪಾರಂಪರಿಕ ಜ್ಞಾನ. ಇವುಗಳ ವಿವರ ಭಾಸ್ಕರಾಚಾರ್ಯ, ವರಾಹಮಿಹಿರ ಮೊದಲಾದವರ ಕೃತಿಗಳಲ್ಲಿ ತಕ್ಕಮಟ್ಟಿಗೆ ದೊರೆಯುತ್ತದೆ. ಇದನ್ನು ಇಂದಿನ ಜ್ಯೋತಿಷ್ಕರು ತುಸು ತಿಳಿದಿರುತ್ತಾರೆ. ಇನ್ನು ಆಧುನಿಕ ವಿಜ್ಞಾನ ಕುರಿತು ಮಾತನಾಡುವವರು ವಿಜ್ಞಾನಿಗಳ ಸಾಧನೆಯನ್ನು ಪತ್ರಿಕೆಗಳಲ್ಲಿ ಓದಿದವರೋ ವಿಜ್ಞಾನದ ವಿವಿಧ ಕ್ಷೇತ್ರಗಳಲ್ಲಿ ಪಾಠ ಮಾಡುವವರೋ ಆಗಿದ್ದವರು. ಇವರಲ್ಲಿ ಎರಡೂ ವರ್ಗದವರೂ ಈ ಎರಡೂ ಕ್ಷೇತ್ರದ ಜ್ಞಾನ ಸೃಷ್ಟಿಗೆ ಕಾರಣರಾದವರಲ್ಲ, ಬದಲಿಗೆ ಯಾರೋ ಮಾಡಿದ ಪ್ರಯೋಗ-ಅದರ ಫಲಿತಗಳ ಅಂತಿಮ ಫಲಾನುಭವಿಗಳು.
ಮನುಸ್ಮೃತಿ : ಪ್ರಗತಿಪರ ಮತ್ತು ಬುದ್ಧಿಜೀವಿಗಳ ಅನ್ನದಾತ
– ರಾಕೇಶ್ ಶೆಟ್ಟಿ
ಒಂದು ವೇಳೆ “ಬೆಳಗಾನ ಎದ್ದು ನಾ ಯಾರ್ಯಾರ ನೆನೆಯಲಿ” ಎನ್ನುವ ಪ್ರಶ್ನೆ ನಮ್ಮ ಪ್ರಗತಿಪರ ಮಿತ್ರರರನ್ನು ಒಮ್ಮೆ ಕಾಡಿದರೆ ಅವರು ಯಾರನ್ನು ನೆನಯಬಹುದು…?
“ಮನುಸ್ಮೃತಿ!”
ಹೌದು! ಅವರು ನೆನೆಯಬೇಕಿರುವುದು ಮನುಸ್ಮೃತಿಯನ್ನು.ಯಾಕೆಂದರೆ ಬಹಳಷ್ಟು ಪ್ರಗತಿಪರರು ತಮ್ಮ ದಿನನಿತ್ಯದ ಭಾಷಣಗಳಲ್ಲಿ,ಬರಹಗಳಲ್ಲಿ ಕಡ್ಡಾಯವೇನೋ ಎಂಬಂತೆ ಬಳಸಿಯೇ ಬಳಸುವ ಪದಗಳಲ್ಲಿ “ಮನು, ಮನುವಾದಿ, ಮನುಸ್ಮೃತಿ, ಮನುವಾದಿ ಸಂವಿಧಾನ” ಇತ್ಯಾದಿಗಳು ಬಂದೇ ಬರುತ್ತವೆ (ಸಿನೆಮಾಕ್ಕೊಬ್ಬ “ಹೀರೋ/ವಿಲನ್”ಅನಿವಾರ್ಯವೆಂಬಂತೆ) ಆ ಪದಗಳನ್ನು ಬಳಸಿ ಬಳಸಿಯೇ ಹೆಸರು,ಹಣ,ಪ್ರಶಸ್ತಿ ಪಡೆದುಕೊಂಡವರ ಪಾಲಿಗೆ “ಮನುಸ್ಮೃತಿ” ಅನ್ನದಾತನೇ ಸರಿ.ಮನುಸ್ಮೃತಿಯ ಅತಿ ದೊಡ್ಡ ಫಲಾನುಭವಿಗಳು ಇವರೇ.
ಮನುವಾದಿ ಸಂವಿಧಾನ,ಮನುಸ್ಮೃತಿಯೇ ಹಿಂದೂಗಳ ಕಾನೂನು ಗ್ರಂಥ ಅಂತೆಲ್ಲ ಈ ಪ್ರಗತಿಪರರು ಮಾತನಾಡುವಾಗ ನನ್ನಂತ ಜನ ಸಾಮಾನ್ಯರಿಗೆ ಯಾರೀತ “ಮನು”?,”ಮನುಸ್ಮೃತಿ” ಎಂದರೇನು? ಎನ್ನುವ ಪ್ರಶ್ನೆಗಳೇಳುತ್ತವೆ.ಈ ಪ್ರಶ್ನೆಗಳು ನಮ್ಮಲ್ಲಿ ಯಾಕೆ ಮೂಡುತ್ತವೆಯೆಂದರೆ,ನನ್ನ ದಿನನಿತ್ಯದ ಜೀವನದಲ್ಲಿ,ನನ್ನ ಅನುಭವ,ಆಚರಣೆಗಳಲ್ಲಿ ನಾನೆಂದಿಗೂ ಈ ಮನುವನ್ನೋ, ಮನುಸ್ಮೃತಿಯನ್ನೋ ಮುಖಾಮುಖಿಯಾಗಿಲ್ಲ.ಹಳ್ಳಿಗಳಲ್ಲಿ ನಡೆಯುತಿದ್ದ/ನಡೆಯುತ್ತಿರುವ ನ್ಯಾಯ ಪಂಚಾಯಿತಿಗಳನ್ನು ನಾನು ನೋಡಿದ್ದೇನೆ ಅಲ್ಲಿ ಎಲ್ಲೂ ಮನುಸ್ಮೃತಿಯ ಆಧಾರದ ಮೇಲೆ ತೀರ್ಮಾನಗಳನ್ನು ನೀಡಿದ್ದನ್ನು ಕಂಡಿಲ್ಲ. ನಿಜವಾಗಿಯೂ “ಮನುಸ್ಮೃತಿ” ಅನ್ನುವುದೊಂದಿದೆ ಎನ್ನುವುದು ನನಗೆ ತಿಳಿದಿದ್ದೇ ಬುದ್ಧಿಜೀವಿಗಳ ಮಾತುಗಳನ್ನು ಕೇಳಲು (ಅದು ನನ್ನ ೨೦ನೇ ವಯಸ್ಸಿನ ನಂತರ) ಆರಂಭಿಸಿದ ಮೇಲೆಯೇ ಹೊರತು,ಅದಕ್ಕೂ ಮೊದಲು ನನ್ನ “ಹಿಂದೂ ಸಂಪ್ರದಾಯ”ಕ್ಕೊಂದು “ಕಾನೂನು ಗ್ರಂಥ”ವಿದೆ ಎನ್ನುವುದೇ ನನಗೆ ಗೊತ್ತಿರಲಿಲ್ಲ.ನಮಗೇ ಪರಕೀಯವಾಗಿರುವ ಈ “ಮನು ಮತ್ತು ಮನುಸ್ಮೃತಿ” ಅದೇಗೆ “ಹಿಂದೂ ಕಾನೂನು ಗ್ರಂಥ”ವಾಗುತ್ತದೆ? ಈ ವಾದಗಳು ಹುಟ್ಟಿಕೊಂಡಿದ್ದು ಹೇಗೆ ಅಂತ ನೋಡಲಿಕ್ಕೆ ಹೊರಟರೆ ನಾವು ಹೋಗಿ ನಿಲ್ಲುವುದು ಬ್ರಿಟಿಷರ ಬಳಿ.
ವ್ಯಾಪಾರಕ್ಕೆಂದು ಇಲ್ಲಿಗೆ ಬಂದು ನಮ್ಮ ನೆಲವನ್ನೇ ಕಬಳಿಸಿ ಇಲ್ಲಿ ಕುಳಿತ ಬ್ರಿಟಿಷರಿಗೆ ಇಲ್ಲಿನ ಅಗಾಧ ಸಾಮಾಜಿಕ,ಸಾಂಸ್ಕೃತಿಕ ವೈವಿಧ್ಯಮಯ ಸಮಾಜದ ತಲೆಬುಡ ಅರ್ಥವಾಗಲಿಲ್ಲ.ಇಲ್ಲಿ ಅವರ ಆಳ್ವಿಕೆ ಜಾರಿಗೆ ತರಲಿಕ್ಕಾಗಿ ಅವರಿಗೆ ಅವರ ದೇಶದಲ್ಲಿರುವಂತದ್ದೇ ಒಂದು ವ್ಯವಸ್ಥೆ ಬೇಕು ಎಂದುಕೊಂಡು ಯುರೋಪಿಯನ್ ಸಾಮಾಜಿಕ ವ್ಯವಸ್ಥೆಯನ್ನೇ ನಮ್ಮ ಸಮಾಜಕ್ಕೂ ಸಮೀಕರಿಸಿದರು.ಅವರಿಗೆ ಇಲ್ಲಿ ಮುಖ್ಯವಾಗಿ ತಲೆನೋವು ತರುತಿದ್ದ ವಿಷಯಗಳಲ್ಲಿ “ವ್ಯಾಜ್ಯದ ತೀರ್ಮಾನಗಳು” ಪ್ರಮುಖವಾಗಿದ್ದವು.
ಬುದ್ಧಿಜೀವಿಗಳೇ, ಕಾದು ನೋಡುವುದಲ್ಲದೆ ನಿಮಗೆ ಅನ್ಯ ಮಾರ್ಗವಿಲ್ಲ!
– ಸಹನಾ ವಿಜಯ್ ಕುಮಾರ್
Action and reaction are equal and opposite. ಕ್ರಿಯೆ ಮತ್ತು ಪ್ರತಿಕ್ರಿಯೆಗಳು ವಿರುದ್ಧ ದಿಕ್ಕಿನಲ್ಲಿದ್ದರೂ ಸಮಬಲದಿಂದಿರುತ್ತವೆ. ಇದು ನ್ಯೂಟನ್ನ ಮೂರನೆಯ ನಿಯಮ. ಸುಮಾರು ಮೂರು ಶತಕಗಳಿಗೂ ಹಿಂದೆ, ಅಂದರೆ ಕ್ರಿ.ಶ. 1687ರಲ್ಲಿ ನ್ಯೂಟನ್ ಜಗತ್ತಿಗೆ ಸಾಬೀತುಪಡಿಸಿದ್ದು. ಈಗ 2014ರಲ್ಲಿ ನಾವು ಭಾರತೀಯರು ಈ ನಿಯಮದ ಸತ್ಯಾಸತ್ಯತೆಯನ್ನು ಮತ್ತೆ ಸಾಬೀತುಪಡಿಸಿದ್ದೇವೆ! ಇಲ್ಲಿ ಕ್ರಿಯೆ – ಚುನಾವಣಾ ಪೂರ್ವದಲ್ಲಿ ಇಡೀ ದೇಶದಲ್ಲಿ ಒಂದು ವ್ಯವಸ್ಥಿತ ಜಾಲವು ಮೋದಿಯವರ ಕುರಿತ ಭಯವನ್ನು ಹುಟ್ಟುಹಾಕಿದ್ದು. ಪ್ರತಿಕ್ರಿಯೆ – ಜನಸಾಮಾನ್ಯರು ಆ ಭಯದ ಹುಟ್ಟಡಗಿಸಿ ಮೋದಿಯವರಿಗೆ ಐತಿಹಾಸಿಕ ವಿಜಯ ದೊರಕಿಸಿಕೊಟ್ಟಿದ್ದು. ಒಂದು ವಿಶೇಷವೆಂದರೆ ಪ್ರತಿಕ್ರಿಯೆಯು ಕ್ರಿಯೆಗಿಂತ ಬಹಳ ಪಟ್ಟು ಹೆಚ್ಚಿದೆ, ತೀಕ್ಷ್ಣವಾಗಿದೆ ಹಾಗೂ ಮುಟ್ಟಿ ನೋಡಿಕೊಳ್ಳುವ ಹಾಗಿದೆ! ಈಗ ನ್ಯೂಟನ್ ಬದುಕಿದ್ದರೆ ಬಹಳ ಖುಷಿಪಡುತ್ತಿದ್ದ!
ಹೀಗೆ ಮಾಡುವ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಿತ್ತು. ಏಕೆಂದರೆ ಈ ಕ್ರಿಯೆಯನ್ನು ಹುಟ್ಟುಹಾಕಿದವರು ಅಂತಿಂಥವರಲ್ಲ, ಮೂರು ವರ್ಗಗಳಾಗಿ ವಿಂಗಡಿಸಬಹುದಾದ ಘಟಾನುಘಟಿಗಳು. ಒಂದು ವರ್ಗ ರಾಜಕಾರಣಿಗಳದ್ದಾದರೆ ಮತ್ತೊಂದು ಸುದ್ದಿ ಮಾಧ್ಯಮಗಳದ್ದು. ಮೂರನೆಯ ಹಾಗೂ ಅತ್ಯಂತ ಕುಲೀನ(?) ವರ್ಗ ಪ್ರಗತಿಪರರು ಹಾಗೂ ಬುದ್ಧಿಜೀವಿಗಳದ್ದು. ರಾಜಕಾರಣಿಗಳು ಸಿದ್ಧಾಂತ ಭೇದ ಮರೆತು ಒಂದಾದರು. ಮೋದಿಯವರನ್ನು ರಾಕ್ಷಸನೆಂದು ಬಿಂಬಿಸಿ ತಮ್ಮ ಕ್ರಿಯೆಗೆ ಮೊದಲಿಟ್ಟುಕೊಂಡರು. ಇನ್ನು ಸುದ್ದಿ ಮಾಧ್ಯಮದವರು ಹಿಂದೆ ಬೀಳುತ್ತಾರೆಯೇ? ಅಪಸ್ಮಾರ ಇರುವವರಿಗಿಂತ ಹೆಚ್ಚಾಗಿ ದೇಹ ಮನಸಿನ ಸ್ಥಿಮಿತ ಕಳೆದುಕೊಂಡು ಆ ಕ್ರಿಯೆಗೆ ಶಕ್ತಿ ಹಾಗೂ ವೇಗ ತುಂಬಿದರು. ಯಾವ ರಾಷ್ಟ್ರೀಯ ಚಾನೆಲ್ ನೋಡಿದರೂ ಮೋದಿ ಎಂಬ ನರಹಂತಕನ ಗೋಧ್ರಾ ಕಥೆಯೇ. ಇನ್ನುಳಿದವರು ಪ್ರಗತಿಪರರು ಹಾಗೂ ಬುದ್ಧಿಜೀವಿಗಳು. ಇದೊಂಥರಾ ವಿಚಿತ್ರ ತಳಿ. ತಮಗೆ ತಲೆಯಿಂದ ಕಾಲಿನವರೆಗೂ ರಕ್ತ ಮಾಂಸಗಳ ಬದಲು ಬುದ್ಧಿಯೇ ತುಂಬಿಕೊಂಡಿದೆಯೆಂಬ ಭ್ರಾಂತಿಯ ಜನ. ಉಳಿದವರು ಕೇವಲವೆಂಬ ಉದ್ಧಟತನ. ಜೊತೆಗೆ ಇವರ ಆವುಟವನ್ನು ಎಲ್ಲರೂ ಸಹಿಸ ಲೇಬೇಕೆಂಬ ತಿಕ್ಕಲುತನ. ಇವರೂ ಗುಂಪುಕಟ್ಟಿಕೊಂಡು ತಮ್ಮ ಕೈಲಾದಷ್ಟು ‘ಭಯೋತ್ಪಾದನೆ'(ಭಯ+ಉತ್ಪಾದನೆ) ಮಾಡಿದರು.
ಈಗ ಇವರೆಲ್ಲರಿಗೂ ತಕ್ಕ ಪ್ರತಿಕ್ರಿಯೆ ನೀಡಿದ್ದೇವೆ ನೋಡಿ, ಬಾಲ ಮುದುರಿಕೊಂಡು ಸುಮ್ಮನಾಗಿದ್ದಾರೆ. ರಾಜಕಾರಣಿಗಳು ಪರಸ್ಪರ ದೋಷಾರೋಪಣೆಯ ಕೆಸರೆರಚಾಟದಲ್ಲಿ ನಿರತರಾಗಿದ್ದಾರೆ. ರಾಜ್‍ದೀಪ್ ಸರ್‍ದೇಸಾಯಿ, ಬರ್ಖಾ ದತ್ ಹಾಗೂ ಅರ್ಣಬ್ ಗೋಸ್ವಾಮಿಯರು ಇಂಗು ತಿಂದ ಮಂಗನ ಮುಖ ಮಾಡಿಕೊಂಡು ವಿಧಿಯಿಲ್ಲದೆ ಮೋದಿ ಸರ್ಕಾರದ ಮೊದಲ ದಿಟ್ಟ ಹೆಜ್ಜೆಗಳ ಸಮಾಚಾರ ಬಿತ್ತರಿಸುತ್ತಿದ್ದಾರೆ. ಕಡೇಪಕ್ಷ ಇವರು ಜನರಿಂದ ಓಡಿಹೋಗುತ್ತಿಲ್ಲ. ತಮ್ಮ ಲೆಕ್ಕಾಚಾರ ತಪ್ಪಾದುದನ್ನು ಮುಕ್ತವಾಗಿ ಒಪ್ಪಿಕೊಳ್ಳುತ್ತಿದ್ದಾರೆ. ಆದರೆ ಈ ಬುದ್ಧಿಜೀವಿಗಳು ಹಾಗೂ ಪ್ರಗತಿಪರರ ದಂಡಿದೆಯಲ್ಲ, ಇವರ ಪಾಡು ಯಾರಿಗೂ ಬೇಡ. ಅತ್ತ ತಪ್ಪನ್ನು ಒಪ್ಪಿಕೊಳ್ಳಲಾಗದೆ, ಇತ್ತ ಸತ್ಯವನ್ನು ಅಲ್ಲಗಳೆಯಲೂ ಆಗದೆ ಕಾದ ಹೆಂಚಿನ ಮೇಲೆ ಕುಳಿತಂತೆ ಚಡಪಡಿಸುತ್ತಿದ್ದಾರೆ.