ಹೊಲವನು ಉಳುತಾ ಅಳುವಾ ಯೋಗಿಯ ನೋಡಿಲ್ಲಿ!
– ತುರುವೇಕೆರೆ ಪ್ರಸಾದ್
ಪಂಚವಟಿ
ನಂ.6, 13ನೇ ವಾರ್ಡ್
ಗಾಂಧಿನಗರ
ತುರುವೇಕೆರೆ-572227
ಇಂದು ಮಾಜಿ ಪ್ರಧಾನಿ ಚೌದುರಿ ಚರಣ್ಸಿಂಗ್ ಹೆಸರಲ್ಲಿ ನಾವು ಮತ್ತೊಂದು ರಾಷ್ಟ್ರೀಯ ರೈತ ದಿನವನ್ನು ಆಚರಿಸುತ್ತಿದ್ದೇವೆ. ಆದರೆ ಡಿ.23 ರಾಷ್ಟ್ರೀಯ ರೈತ ದಿನ ಎಂದು ಬಹುತೇಕರಿಗೆ ಗೊತ್ತಿರಲಿಕ್ಕಿಲ್ಲ. ನೆಹರು, ಇಂದಿರಾ, ರಾಜೀವ್ ಜಯಂತಿಯಂತೆ ರೈತ ದಿನಾಚರಣೆ ಬಗ್ಗೆ ಯಾವ ಪಠ್ಯಪುಸ್ತಕದಲ್ಲೂ ಉಲ್ಲೇಖವೂ ಇರಲಿಕ್ಕಿಲ್ಲ. ತಮ್ಮ ಹೆಸರಿನಲ್ಲಿ ಈ ರೀತಿ ಸರ್ಕಾರಗಳು, ಜನಪ್ರತಿನಿಧಿಗಳು ದೊಡ್ಡ ಮನುಷ್ಯರು ರೈತದಿನಾಚರಣೆ ಎಂಬ ನಾಮಕಾವಸ್ಥೆ ಆಚರಣೆ ನಡೆಸುತ್ತಾರೆಂಬುದು ಬಹುಶಃ ಲಕ್ಷಾಂತರ ರೈತರಿಗೇ ಗೊತ್ತಿರಲಿಕ್ಕಿಲ್ಲ. ಟಿಪ್ಪು ಜಯಂತಿಗೆ ಮಾಡಿಕೊಂಡಂತೆ ಸರ್ಕಾರವೇನೂ ವಾರಗಟ್ಟಲೆ ಮುಂಚೆ ರೈತ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡ ವರದಿ, ಸುದ್ದಿ ಯಾವ ಪತ್ರಿಕೆಯಲ್ಲೂ ಬರುವುದಿಲ್ಲ. ಇಂತಹ ಒಂದು ದಿನವನ್ನು ಅರ್ಥಪೂರ್ಣವಾಗಿ ಮಾಡಬೇಕು, ಸಂಭ್ರಮದಿಂದ ಆಚರಿಸಬೇಕು, ಅದೊಂದು ರೈತರ ಹಬ್ಬವಾಗಬೇಕು ಎಂದು ಯಾವ ಬುದ್ದಿಜೀವಿಗಳ ದಂಡೂ ಸರ್ಕಾರವನ್ನು ಒತ್ತಾಯಿಸುವುದಿಲ್ಲ. ಅದರ ರೂಪರೇಷೆಗೆ ಸಂವಾದ, ಗೋಷ್ಠಿ, ಚಿಂತನೆಗಳು ನಡೆಯುವುದೂ ಇಲ್ಲ. ಇದೆಲ್ಲಾ ನಮ್ಮ ಅನ್ನದಾತನನ್ನು ನಾವು ಯಾವ ದುಸ್ಥಿತಿಯಲ್ಲಿ ಇಟ್ಟಿದ್ದೇವೆ ಮತ್ತು ಅವನಿಗೆ ನಾವು ಯಾವ ಗೌರವ ಸಲ್ಲಿಸುತ್ತಿದ್ದೇವೆ ಎಂಬುದರ ದ್ಯೋತಕ. Read more
ಬೆಳೆ ಬೆಳೆಸಿದರಷ್ಟೆ ನೆಲದ ಒಡೆತನ
– ಟಿ.ಎಂ.ಕೃಷ್ಣ
ಆಹಾರ ಧಾನ್ಯಗಳ ಬೆಲೆ ಒಂದೇ ಸಮನೆ ಗಗನಕ್ಕೇರುತ್ತಲೇ ಇದೆ. ಜನಸಾಮಾನ್ಯರೇನು- ಅಷ್ಟೋ ಇಷ್ಟೋ ಸ್ಥಿತಿವಂತರೇ ಜೀವನ ನಿರ್ವಹಿಸಲು ಸಾಧ್ಯವಾಗದಂತಾಗಿದೆ. ಕೆಳ, ಮದ್ಯಮ ವರ್ಗದವರು ತರಗೆಲೆಗಳಂತೆ ತತ್ತರಿಸತೊಡಗಿದ್ದಾರೆ. ಮುಂದುವರಿದ(?) ಮನುಷ್ಯನ ಅಗತ್ಯಗಳು ಅಗಣಿತವಾಗಿರಬಹುದಾದರೂ, ಮೂಲಭೂತ ಅಗತ್ಯವಾದ ಅನ್ನಾಹಾರಗಳ ಲಭ್ಯತೆ ಕಠಿಣವಾದರೆ ಏನಿದ್ದರೂ, ಯಾವುದೇ ತಂತ್ರಜ್ಞಾನವಿದ್ದರೂ ಅವೆಲ್ಲಾ ಅಪ್ರಸ್ತುತವಾಗಿಬಿಡುತ್ತವೆ. (ಚಿನ್ನದ ಕತ್ತಿ ಇದೆಯೆಂದು ಕುತ್ತಿಗೆ ಕೊಯ್ದುಕೊಳ್ಳಲಾದೀತೆ?)
ಅಗತ್ಯವಸ್ತುಗಳು ಕೈಗೆಟುಕದಂತಾಗಿರುವ ಈ ಸಂದರ್ಭದಲ್ಲಿ ಸರ್ಕಾರದ ಕಡೆ ಕೈ ತೋರಿಸುವುದು ಅನಿವಾರ್ಯವಾದರೂ, ಆಯಕಟ್ಟಿನ ಜಾಗಕ್ಕೆ ಕೈತೋರಿಸದಿರುವುದು ನಮ್ಮಲ್ಲಿನ ಪ್ರಜ್ಞಾವಂತರ ಪ್ರಜ್ಞೆಯ ಅವನತಿಯನ್ನು ಸೂಚಿಸುತ್ತದೆ. ಕುರಿಗಳು ಹಳ್ಳಕ್ಕೆ ಬಿದ್ದಂತೆ ಪ್ರತಿಯೊಬ್ಬರೂ ಪ್ರಸ್ತಾಪಿಸುತ್ತಿರುವುದು ಮಳೆ ಅಭಾವ, ಬೆಳೆನಷ್ಟ, ವ್ಯಾಪಾರಿಗಳು ಸೃಷ್ಟಿಸುತ್ತಿರುವ ಕೃತಕ ಅಭಾವ, ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ, ಜನಸಂಖ್ಯೆಯ ಹೆಚ್ಚಳ ಇತ್ಯಾದಿ…ಈ ಎಲ್ಲ ಕಾರಣಗಳಿಗೆ ನಿದರ್ಶನಗಳಿದ್ದರೂ, ಅವೆಲ್ಲಾ ತಾತ್ಕಾಲಿಕ ಅವ್ಯವಸ್ಥೆಗಳೇ ಹೊರತು ಮೂಲಭೂತ ಸತ್ಯಗಳಲ್ಲವೇ ಅಲ್ಲ.