ವಿಷಯದ ವಿವರಗಳಿಗೆ ದಾಟಿರಿ

Posts tagged ‘ಭಯೋತ್ಪಾದನೆ’

22
ಫೆಬ್ರ

ಪುಲ್ವಾಮ ದಾಳಿ: ಭಾರತ ಕಲಿತ ಪಾಠ

– ವರುಣ್ ಕುಮಾರ್

Pulwama-attack-5ಫೆಬ್ರವರಿ ೧೪ನೇ ತಾರೀಖು ಭಾರತದ ಸೈನಿಕರ ಪಾಲಿಗೆ ಅತ್ಯಂತ ಕರಾಳ ದಿನ. ಕಳೆದ ದಶಕದಲ್ಲಿಯೇ ನಡೆದ ಅತ್ಯಂತ ಘೋರ ಉಗ್ರರ ದಾಳಿ ಅಮಾಯಕ ಸೈನಿಕರ ಸಾವಿಗೆ ಕಾರಣವಾಗಿ ಇಡೀ ದೇಶವೇ ಮಮ್ಮಲ ಮರುಗಿತು. ಪ್ರಪಂಚದೆಲ್ಲೆಡೆಯಿಂದ ಈ ಘಟನೆಯ ಬಗ್ಗೆ ಖಂಡನೆ ವ್ಯಕ್ತವಾಗಿ ಭಾರತದ ಜೊತೆ ನಾವಿದ್ದೇವೆ ಎಂಬ ಸಂದೇಶವನ್ನು ರವಾನಿಸಿ ಬೆಂಬಲವನ್ನು ವ್ಯಕ್ತಪಡಿಸಿದರು. ಈ ದಾಳಿಯ ಬಳಿಕ ಭಾರತದಲ್ಲಿ ನಡೆದ ಬೆಳವಣಿಗೆಗಳ ಹಾಗೂ ಈ ದಾಳಿಯಿಂದ ಭಾರತ ಕಲಿಯಬೇಕಾದ ಪಾಠಗಳೇನು ಎಂಬುದಾಗಿ ವಿಶ್ಲೇಷಿಸೋಣ.

ಭಾರತದೊಳಗಿನ ಉಗ್ರರು:

ಹೌದಲ್ಲವೇ, ನಮಗೆ ಈ ಉಗ್ರರದಾಳಿಯ ಬಳಿಕ ಹಲವಾರು ಉಗ್ರರು ನಮ್ಮ‌ ದೇಶದೊಳಗೆ ಅಣಬೆಗಳಂತೆ ಹುಟ್ಟಿಕೊಳ್ಳತೊಡಗಿದರು. ಪಾಕಿಸ್ತಾನ್ ಜಿಂದಾಬಾದ್, ಇದು ನಿಜವಾದ ಸರ್ಜಿಕಲ್ ಸ್ಟ್ರೈಕ್ ಇತ್ಯಾದಿ ಬರಹಗಳನ್ನು ಒಳಗೊಂಡ ಅನೇಕ ದೇಶದ್ರೋಹಿ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ‌ ಹಾಕಲಾರಂಭಿಸಿದರು. ಪಂಜಾಬ್ ಎಂದಿಗೂ ದೇಶಪ್ರೇಮಿಗಳನ್ನು ಕೊಟ್ಟಂತಹ ರಾಜ್ಯ ಆದರೆ ಅದೇ ರಾಜ್ಯದ ಸಚಿವನಾದ ಸಿಧುರವರು ಪಾಕಿಸ್ತಾನದ ಜೊತೆ ಮಾತುಕತೆ ಭಾರತ ಮುಂದಾಗಬೇಕು ಎಂದು ಸಲಹೆ ನೀಡಿದರು. ಇದರ ಬೆನ್ನಿಗೆ ಸಮಯಕ್ಕೆ ತಕ್ಕಂತೆ ಬಣ್ಣ ಬದಲಾಯಿಸುವ ಪ್ರಕಾಶ್ ರೈ ಒಂದು ಹಂತದಲ್ಲಿ ಭಾರತದ ಜೊತೆ ನಾವಿದ್ದೇವೆ ಎಂದು ಬೆಂಬಲ‌ ನೀಡಿದರು. ಆದರೆ ಮರುದಿನ ಬಿಜೆಪಿಯ ಬಗ್ಗೆ ಮೋದಿಯವರ ಬಗ್ಗೆ ಟೀಕಿಸಿ ಘಟನೆಯನ್ನು ರಾಜಕೀಯಗೊಳಿಸಿದರು. ಕಮಲ್ ಹಾಸನ್ ಅಂತಹ ಸ್ವಯಂಘೋಷಿತ ನಾಯಕರು ಸೈನಿಕರು ಸಾಯಲೆಂದೇ‌ ಸೇನೆಗೆ ಸೇರುತ್ತಾರೆ ಎಂದು ಹೇಳಿಕೆಗಳನ್ನು ಕೊಟ್ಟಾಗ ಇದು ಹುತಾತ್ಮರಾದ ಸೈನಿಕರ ಕುಟುಂಬಗಳಿಗೆ ಯಾವ ರೀತಿ ನೋವಾಗಬಹುದು ಎಂಬ ಕಾಳಜಿಯಿಲ್ಲದೆ ಮಾತನಾಡಿದರು. ಮತ್ತಷ್ಟು ಓದು »

25
ಏಪ್ರಿಲ್

ಪ್ರಧಾನಿಗಳಿಗೇಕೆ ಭದ್ರತೆ..?

– ಸುರೇಶ್ ಮುಗ್ಬಾಳ್
ತಿಪಟೂರು

ನಾಯಕರ ಭದ್ರತೆಯ ವಿಚಾರದಲ್ಲಿ ಕಳೆದ ಕೆಲವು ದಿನಗಳ ಹಿಂದೆ ನಡೆದ ಎರಡು ಘಟನೆಗಳು

ಒಂದು “ಪ್ರಧಾನಿಗಳಿಗೇಕೆ ಭದ್ರತೆ..? ಜೀವ ಬೆದರಿಕೆ ಇದ್ದರೆ ಸತ್ತರೆ ಸಾಯಲಿ ಬಿಡಿ” ಎಂದು ಹೇಳಿದ ಬಸವರಾಜ ರಾಯರೆಡ್ಡಿಯವರ ಘಟನೆ. ಮತ್ತೊಂದು ಮಂಡ್ಯ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಎದುರಾಗಿ ಕಪ್ಪು ಬಟ್ಟೆ ಪ್ರದರ್ಶಿಸಿದ ಪ್ರತಿಭಟನಾಕಾರರನ್ನು ಮಂಡ್ಯ ಎಸ್.ಪಿ. ‘ಸುಧೀರ್ ಕುಮಾರ್ ರೆಡ್ಡಿ’ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಕಾರ್ಯಕ್ರಮದ ವೇದಿಕೆಯ ಮೇಲೆ ರೆಡ್ಡಿಯವರನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡ ಘಟನೆ. ಮತ್ತಷ್ಟು ಓದು »

19
ನವೆಂ

ಪ್ರಧಾನಿಗಳ ನಡೆಯ ಹಿಂದೆ ಎಷ್ಟೆಲ್ಲ ಚಿಂತನೆ ಇದೆಯೆಂದರೆ…

– ರೋಹಿತ್ ಚಕ್ರತೀರ್ಥ

maxresdefaultಪ್ರಧಾನಿ ನರೇಂದ್ರ ಮೋದಿ ನವೆಂಬರ್ 8ರಂದು ಸಂಜೆ ಮಾಡಿದ ಭಾಷಣದಲ್ಲಿ ಐನೂರು ಮತ್ತು ಸಾವಿರ ರುಪಾಯಿ ಮುಖಬೆಲೆಯ ನೋಟುಗಳನ್ನು ಸರಕಾರ ವಾಪಸು ಪಡೆಯಲಿದೆ ಎಂಬ ಘೋಷಣೆ ಮಾಡಿದರು. ಈ ಕಾರ್ಯಾಚರಣೆ 4 ವಿಷಯಗಳನ್ನು ಗುರಿಯಾಗಿಟ್ಟುಕೊಂಡಿದೆ: ಭ್ರಷ್ಟಾಚಾರ, ಕಪ್ಪುಹಣ, ಭಯೋತ್ಪಾದನೆ ಮತ್ತು ಖೋಟಾನೋಟು. ಈ ನಾಲ್ಕೂ ವಿಷಯಗಳು ಒಂದಕ್ಕೊಂದು ತಳುಕು ಹಾಕಿಕೊಂಡಿರುವುದರಿಂದ ಅವನ್ನು ಒಟ್ಟಾಗಿ ಪರಿಹರಿಸುವ ಇಲ್ಲವೇ ನಿಶ್ಶಕ್ತಗೊಳಿಸುವ ಅತ್ಯಂತ ಪ್ರಬಲ, ಪರಿಣಾಮಕಾರಿ ಪರಿಹಾರದ ಅಗತ್ಯ ಹಲವು ವರ್ಷಗಳಿಂದ ಇತ್ತು. ಹತ್ತು ವರ್ಷ ದೇಶವನ್ನು ಆಳಿದ ನಾಮಕಾವಾಸ್ತೆ ಆರ್ಥಿಕತಜ್ಞರಿಗಾಗದ ಗಟ್ಟಿ-ದಿಟ್ಟ ನಡೆಯನ್ನು ಮೋದಿ ತೋರಿಸಿ ನಾಯಕತ್ವದಲ್ಲಿ ಜ್ಞಾನದ ಜೊತೆ ಧೈರ್ಯವೂ ಬೇಕೆಂಬ ಸಂದೇಶ ರವಾನಿಸಿದ್ದಾರೆ. ಮತ್ತಷ್ಟು ಓದು »

9
ನವೆಂ

ಯಾರಿಗೂ ಬೇಡವಾದ ಪಾತಕಿ.. ದಾವೂದ್..!

– ಸಂತೋಷಕುಮಾರ ಮೆಹೆಂದಳೆ.

314922-dawood700( ಮೈಗಿಷ್ಟು ಪುಕ್ಕಟ್ಟೆ ಅನ್ನ, ತಂತಮ್ಮ ಮೋಜು ಮಸ್ತಿಯ ಚಟಕ್ಕಿಷ್ಟು ಯಾರದ್ದೋ ತಲೆ ಒಡೆದ ದುಡ್ಡು.. ಅದಕ್ಕೆ ಸರಿಯಾಗಿ ಮೆರೆಯೋದಕ್ಕೆ ಪಾಪಿಲೋಕದ ಕಡುಗತ್ತಲೆಯ ಸಾಮ್ರಾಜ್ಯ. ಕೊನೆಗೆ ಇದೆಲ್ಲದರಿಂದ ತಲೆ ತಪ್ಪಿಸಿಕೊಂಡು ಬದುಕಿಕೊಳ್ಳಲು ತೀರ ಪರಮ ನಿರ್ಲಜ್ಯ ಪಾಕಿಸ್ತಾನ. ಇಷ್ಟನ್ನಿಟ್ಟುಕೊಂಡು ಕತ್ತಲ ಲೋಕವನ್ನು ಆಳುತ್ತೇನೆಂದು ಹೊರಟು ಬಿಡುವವರು ತಮ್ಮ ಕೊನೆಯ ಕಾಲಾವಧಿಯುದ್ದಕ್ಕೂ ಇದೆಲ್ಲಾ ಶಾಶ್ವತ ಎಂದೇ ತಿಳಿದಿರುತ್ತಾರೆ. ದುರಾದೃಷ್ಟ ಮತ್ತು ನೂರಾರು ಹೆಣ್ಣುಮಕ್ಕಳ ಶಾಪ ಅವರನ್ನು ಜೀವಂತ ನರಕಕ್ಕೆ ನೂಕುತ್ತದೆ ಎನ್ನುವುದಕ್ಕೆ ಅಷ್ಟೆ ಉದಾಃ ಗಳು ನಮ್ಮ ಮುಂದಿವೆ. ಆದರೂ ಪಾತಕ ಲೋಕದ ಪಾತಕಿಗಳು ಬುದ್ಧಿ ಕಲಿತದ್ದೇ ಇಲ್ಲ. ಅದರಲ್ಲೂ ಪಾಕಿಸ್ತಾನದ ಕೊಚ್ಚೆಯಲ್ಲಿ ಹೊರಳುವ ಕ್ರಿಮಿಗಳಿಗೆ ಬುದ್ಧಿ ಮತ್ತು ವಿವೇಚನಾ ಶಕ್ತಿ ಬಿಟ್ಟು ಬೇರೆಲ್ಲ ಬೆಳೆಯುತ್ತದೆ. ಅದೇ ವಿನಾಶಕ್ಕೂ ಕಾರಣವಾಗುತ್ತದೆ. ಇಂಥ ಕೊಚ್ಚೆಯಂತಿರುವ ಕಥಾನಕದ ಕೊನೆಯ ತುಂಡು, ಅರೆಜೀವವಾಗಿರುವ ಪಾತಕಿ ತನಗೇ ತಾನೇ ಡಾನ್ ಎಂದು ಕರೆದುಕೊಂಡ ದಾವೂದ್ ಇಬ್ರಾಹಿಂ ಯಾವ ನೆಲಕ್ಕೆ ದ್ರೋಹ ಬಗೆದಿದ್ದನೋ ಅಲ್ಲಿವತ್ತು ಕಾಲೂರುವ ಬಗ್ಗೆ ಚಡಪಡಿಸುತ್ತಿದ್ದಾನೆ. ಆದರೆ ಊರಲು ಒಂದು ಕಾಲೇ ಉಳಿದಿಲ್ಲ. ಬದುಕಿನ ವಿಪರ್ಯಾಸ ಅಂದರೆ ಇದೇ ಅಲ್ಲವೇ..?) ಮತ್ತಷ್ಟು ಓದು »

23
ಆಗಸ್ಟ್

“ಭಾರತ್ ಕಿ ಬರ್ಬಾದಿ” ಕೂಗಿನ ಹಿಂದಿರುವ ಕೈಗಳು ಯಾರದ್ದು?

– ರಾಕೇಶ್ ಶೆಟ್ಟಿ

downloadಉಗ್ರ ಬರ್ಹನ್ ವಾನಿಯ ಹತ್ಯೆಯಾಗಿ ಒಂದು ತಿಂಗಳು ಕಳೆದು ಕಾಶ್ಮೀರ ಕಣಿವೆಯ ಒಂದೆರಡು ಜಿಲ್ಲೆಗಳನ್ನು ಬಿಟ್ಟು ಉಳಿದೆಲ್ಲವೂ ತಣ್ಣಗಾಗಿದ್ದರೂ ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗೆ ಬೆಂಬಲ ನೀಡುತ್ತಿರುವ ದೇಶದ್ರೋಹಿಗಳ ಕೂಗು ಇನ್ನು ತಣ್ಣಗಾಗಿಲ್ಲ. ಇಷ್ಟು ದಿನ ಶ್ರೀನಗರದಲ್ಲೋ, ದೆಹಲಿಯ JNUವಿನಲ್ಲೋ, ಉತ್ತರ ಭಾರತದಲ್ಲೆಲ್ಲೋ ಕಾಣಿಸಿಕೊಳ್ಳುತ್ತಿದ್ದ ಈ Urban Naxalರು ಈಗ ನಮ್ಮ ಬೆಂಗಳೂರಿಗೂ ಕಾಲಿಟ್ಟಿದ್ದಾರೆ. ಕಾಶ್ಮೀರದಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಗಲಭೆ ಶುರುವಾಗಿ ಒಂದು ವಾರ ಕಳೆಯುವಷ್ಟರಲ್ಲೇ (ಜುಲೈ15,16) We Stand with Kashmir ಎನ್ನುವ ಹೆಸರಿನೊಂದಿಗೆ ಬೆಂಗಳೂರಿನ ಟೌನ್ ಹಾಲ್ ಮುಂದೆ ನಿಂತು “ಕಾಶ್ಮೀರದ ಆಜಾದಿ” ಕೇಳಲು ಹೊರಟಿದ್ದ ಈ ಅರ್ಬನ್ ನಕ್ಸಲರ ಆಸೆಗೆ ನಾವೊಂದಿಷ್ಟು ಜನರು ಸೇರಿ ತಣ್ಣಿರೇರಚಿದ್ದೆವು. ಅದಾದ ನಂತರ, ‘ತಾತ್ಕಾಲಿಕವಾಗಿ’ ನಾವು ಅವರನ್ನು ತಡೆದಿದ್ದೇವೆ ಅಂತಲೇ ನಾನು ಬರೆದಿದ್ದೆ. ಆ ಆತಂಕ ನಿಜವೆಂಬಂತೆ ಮೊನ್ನೆ ಆಗಸ್ಟ್ 13ರಂದು ಅಮ್ನೆಸ್ಟಿ ಇಂಡಿಯಾ ಎಂಬ NGO ಹೆಸರಿನಡಿಯಲ್ಲಿ, ಕಳ್ಳರೆಲ್ಲಾ ಸಂತೆಯಲ್ಲಿ ಒಂದಾಗುವಂತೆ ಬಂದು ಸೇರಿಕೊಂಡಿದ್ದಾರೆ. ಮತ್ತಷ್ಟು ಓದು »

17
ಆಗಸ್ಟ್

ಎನ್‍ಜಿಓ: ಪರದೆ ಹಿಂದಿನ ಕತೆ

– ರೋಹಿತ್ ಚಕ್ರತೀರ್ಥ

harvesting_souls_of_indiaನರೇಂದ್ರ ಮೋದಿಯ ಬಿಜೆಪಿ ಸರಕಾರ 2014ರಲ್ಲಿ ಅಧಿಕಾರಕ್ಕೆ ಬಂದ ಮೇಲೆ ಮಾಡಿದ ಮೊದಲ ಕೆಲಸವೇನೆಂದರೆ ಅದುವರೆಗೆ ಭಾರತದಲ್ಲಿ ಬೇರುಬಿಟ್ಟು ಹೆಮ್ಮರಗಳೂ ಹೆಮ್ಮಾರಿಗಳೂ ಆಗಿ ವಿಜೃಂಭಿಸುತ್ತಿದ್ದ ಎನ್‍ಜಿಓಗಳಿಂದ ಅವುಗಳ ಹಣಕಾಸು ವ್ಯವಹಾರಗಳ ಲೆಕ್ಕ ಕೇಳಿದ್ದು ಮತ್ತು ಹಾಗೆ ಲೆಕ್ಕ ಕೊಡದೆ ಅಂಗಡಿ ತೆರೆದಿರುವ ಎಲ್ಲ ಎನ್‍ಜಿಓಗಳಿಗೂ ಬಾಗಿಲು ಹಾಕಿಸಿ ಬೀಗ ಜಡಿಯುತ್ತೇನೆಂದು ಖಡಕ್ ಸೂಚನೆ ಇತ್ತಿದ್ದು. ಯಾವ್ಯಾವುದೋ ಬೇನಾಮಿ ಹೆಸರು ಮತ್ತು ಖಾತೆಗಳಿಂದ ಧನಸಹಾಯ ಪಡೆಯುತ್ತ ಆರಾಮಾಗಿದ್ದ ಎನ್‍ಜಿಓಗಳಿಗೆ ಕೇಂದ್ರ ಸರಕಾರ ಹೀಗೆ ಚಾಟಿ ಬೀಸತೊಡಗಿದ್ದೇ ಕಣ್ಣುಕತ್ತಲೆ ಬಂದಂತಾಯಿತು. ಕೇಂದ್ರದ ಗೃಹಖಾತೆ 2015ರ ಎಪ್ರೀಲ್‍ನಲ್ಲಿ ಗ್ರೀನ್‍ಪೀಸ್ ಎಂಬ ಅಂತಾರಾಷ್ಟ್ರೀಯ ಎನ್‍ಜಿಓದ ಮಾನ್ಯತೆ ರದ್ದುಮಾಡಿದ್ದೇ ತಡ, ಇನ್ನು ಕೆಲವೇ ದಿನಗಳಲ್ಲಿ ತಮ್ಮ ಬುಡಕ್ಕೂ ಕೊಡಲಿಯೇಟು ಬೀಳುವುದು ಖಚಿತವೆಂದು ತಿಳಿದ ಉಳಿದ ಎನ್‍ಜಿಓಗಳು ಚಿರೋಬರೋ ಅಳತೊಡಗಿದವು. ಬಿಲಕ್ಕೆ ಹೊಗೆ ಹಾಕಿದಾಗ ದಂಶಕಗಳು ದಿಕ್ಕಾಪಾಲಾಗಿ ಹೊರಗೋಡಿಬರುವುದು ಸಾಮಾನ್ಯವೇ ತಾನೇ? ಗ್ರೀನ್‍ಪೀಸ್ ಸಂಸ್ಥೆಗೆ ಬರೆ ಎಳೆದೊಡನೆ ಫೋರ್ಡ್ ಫೌಂಡೇಶನ್, ಆಮ್ನೆಸ್ಟಿ ಇಂಟರ್‍ನ್ಯಾಷನಲ್, ವಿಶ್ವಸಂಸ್ಥೆ ಎಲ್ಲವೂ ಕೋರಸ್‍ನಲ್ಲಿ ಕೂಗು ಹಾಕಿದವು. ಗ್ರೀನ್‍ಪೀಸ್ ಮತ್ತು ಉಳಿದ ದೇಶದ್ರೋಹಿಗಳ ನೆಟ್‍ವರ್ಕ್ ಹೇಗಿದೆ ಎಂಬುದನ್ನು ಯಾವ ತನಿಖೆಯೂ ಇಲ್ಲದೆ ಸರಕಾರಕ್ಕೆ ನೋಡಲು ಅವಕಾಶವಾಯಿತು. ನಂಬಿದರೆ ನಂಬಿ, ಆ ಕಾಲಕ್ಕೆ ಭಾರತದಲ್ಲಿ ಯಾರ ನಿಯಂತ್ರಣ ಇಲ್ಲದೆ ಸಿಕ್ಕಸಿಕ್ಕ ಮೂಲಗಳಿಂದ ಧನಸಹಾಯ ಪಡೆದುಕೊಂಡು ಆಯಾ ವ್ಯಕ್ತಿ/ಸಂಸ್ಥೆಗಳಿಗೆ ಬೇಕಾದಂತೆ ಕೆಲಸ ಮಾಡಿಕೊಡುತ್ತಿದ್ದ ಎನ್‍ಜಿಓಗಳ ಸಂಖ್ಯೆ ಒಟ್ಟು 42,273! ಮತ್ತಷ್ಟು ಓದು »

17
ಮೇ

ಕಾಂಗ್ರೆಸ್‌ನ ವ್ಯಾಘ್ರ ದಾಳಿಗೆ ನಲುಗಿದ ಸಾಧ್ವಿ

– ಎಸ್.ಆರ್. ಅನಿರುದ್ಧ ವಸಿಷ್ಠ, ಭದ್ರಾವತಿ

sadhvi-pragya-singh.before_afterಮಾಲೇಗಾಂವ್ ಸ್ಪೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್‌ಗೆ ಕ್ಲೀನ್‌ಚಿಟ್ ನೀಡಿ ಆರೋಪಮುಕ್ತಗೊಳಿಸಲಾಗಿದೆ. ಹಾಗಾದರೆ, ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ನಿಜಕ್ಕೂ ಭಾಗಿಯಾದವರು ಯಾರು? ಸ್ಫೋಟದ ಹಿಂದಿರುವ ವ್ಯಕ್ತಿ ಹಾಗೂ ಸಂಘಟನೆಗಳು ಯಾರು ಎನ್ನುವುದರ ಕುರಿತು ಉನ್ನತ ಮಟ್ಟದ ತನಿಖೆ ನಡೆಯಬೇಕಿದ್ದು, ಈ ಕುರಿತಂತೆ ಸತ್ಯ ಹೊರಬರಬೇಕಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ.

ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣಕ್ಕೀಗ ತಾರ್ಕಿಕ ಅಂತ್ಯ ದೊರೆತಿದ್ದು, ಸಾಧ್ವಿ ಪ್ರಜ್ಞಾ ಸಿಂಗ್ ಸೇರಿದಂತೆ ಆರು ಜನರ ಮೇಲೆ ಹೇರಲಾಗಿದ್ದ ಮೋಕಾ ಪ್ರಕರಣದಲ್ಲಿ ಇವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ಚಾರ್ಜ್‌ಶೀಟ್ ಸಲ್ಲಿಸಿರುವ ತನಿಖಾ ಸಂಸ್ಥೆ ಎನ್‌ಐಎ ಆರೋಪಗಳಿಂದ ಕ್ಲೀನ್ ಚಿಟ್ ನೀಡಿದೆ.

ನಿಜಕ್ಕೂ ಇದು ಸತ್ಯಕ್ಕೆ ಸಂದ ಜಯ ಎಂದು ಸಂತಸ ಪಡುವ ವೇಳೆಯೇ ಈ ಸಂತಸವನ್ನು ಸಂಭ್ರಮಿಸುವ ಮನಸ್ಥಿತಿ ಹಾಗೂ ದೇಹಸ್ಥಿತಿಯಲ್ಲಿ ಸ್ವತಃ ಸಾಧ್ವಿ ಪ್ರಜ್ಞಾ ಸಿಂಗ್ ಇಲ್ಲ ಎನ್ನುವುದು ಇಡೀ ಪ್ರಜಾಪ್ರಭುತ್ವ ವ್ಯವಸ್ಥೆ ತಲೆ ತಗ್ಗಿಸಬೇಕಾದ ವಿಚಾರ. ಮತ್ತಷ್ಟು ಓದು »

25
ಮಾರ್ಚ್

ಕಾಂಗ್ರೆಸ್-ಕಮ್ಯುನಿಷ್ಟರ ಮೈತ್ರಿ, ಬಂಗಾಳಕ್ಕೆ ಸಿಕ್ಕಿದ್ದು ಕರಾಳ ರಾತ್ರಿ

-ಶ್ರೀನಿವಾಸ ರಾವ್

bengalಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಕೊಲೆ, ದಾಳಿ – ಭಯೋತ್ಪಾದನೆಗೆ ಧರ್ಮವಿಲ್ಲ- ಕಮ್ಯುನಿಷ್ಟರು
26/11ರ ಮುಂಬೈ ದಾಳಿ, ದಾಳಿ ಮಾಡಿದ್ದು ಇಸ್ಲಾಮ್ ನ ಭಯೋತ್ಪಾದಕರು -ಭಯೋತ್ಪಾದನೆಗೆ ಧರ್ಮವಿಲ್ಲ- ಬುದ್ಧಿಜೀವಿಗಳು, ಕಮ್ಯುನಿಷ್ಟರು. ಉಗ್ರ ಯಾಕೂಬ್ ಮೆಮನ್ ಗೆ ಗಲ್ಲು ಶಿಕ್ಷೆ – ಭಯೋತ್ಪಾದನೆಗೆ ಧರ್ಮವಿಲ್ಲ!

ಭಾರತದಲ್ಲಾಗಲೀ ಅಥವಾ ವಿದೇಶಗಳಲ್ಲಿ ಇಸ್ಲಾಂ ನ ಮೂಲಭೂತವಾದಿಗಳು, ಮತಾಂಧ ಉಗ್ರರು ದಾಳಿ ನಡೆಸಿದಾಗಲೆಲ್ಲಾ ’ಭಯೋತ್ಪಾದನೆಗೆ ಧರ್ಮವಿಲ್ಲ’ವೆಂಬ ಹೇಳಿಕೆ (ready made statement) ಸಿದ್ಧವಾಗಿರುತ್ತದೆ. ಇಂಥದ್ದೊಂದು ಹೇಳಿಕೆಯನ್ನು coin(ಪರಿಚಯಿಸಿದ್ದೇ)ಮಾಡಿದ್ದೇ ಈ ಕಮ್ಯುನಿಷ್ಟರು ಹಾಗೂ ಕಮ್ಯುನಿಷ್ಟರ ಕೃಪಾಪೋಷಿತ ಬುದ್ಧಿಜೀವಿಗಳು. ಭಯೋತ್ಪಾದಕರ ದಾಳಿ ನಡೆದಾಗಲೆಲ್ಲಾ ಇವರಿಂದ ಇಂಥಹ ಹೇಳಿಕೆ ಬರುವುದಾದರೂ ಯಾಕೆ ಅಂದುಕೊಂಡಿದ್ದೀರಿ? ಇಸ್ಲಾಮ್ ಗೆ ಪರ್ಯಾಯವಾದ, ಅಂಥಹದ್ದೇ ಒಂದು ಭಯೋತ್ಪಾದನೆಯನ್ನು ಇವರೂ ಪರಿಚಯಿಸಿದ್ದಾರೆ ಆದ್ದರಿಂದ…
ಮತ್ತಷ್ಟು ಓದು »

9
ಆಕ್ಟೋ

ಪಾಕಿಸ್ತಾನ್, ಹುರಿಯತ್ ಮತ್ತು ನಮ್ಮ ಬುದ್ಧಿಜೀವಿಗಳು!!

– ಪ್ರದೀಪ್ ತ್ಯಾಗರಾಜ

ಎನ್.ಎಸ್.ಎಬಹುಶಃ ಭಾರತದ ಜನ ಸಾಮಾನ್ಯರೆಲ್ಲರೂ ಒಕ್ಕೊರಲಿನಿಂದ ಹೇಳುವ ಮಾತೊಂದೇ, ಅದೇ ಪಾಕಿಸ್ತಾನ್ ಎನ್ನುವುದು ಒಂದು ದೊಡ್ಡ ದುರಂತ. ಈ ಪಾಕಿಸ್ತಾನ ಎಂಬುದು ಒಂದು ಭಿಕ್ಷುಕರ ದೇಶ ಅಂದರೂ ತಪ್ಪಲ್ಲ. ಯಾವುದೇ ದೇಶ ಕೂಡ ಪಾಕಿಸ್ತಾನದೊಂದಿಗೆ ಸಂಬಂಧ ಹೊಂದಿ ಉದ್ಧಾರ ಆದ ಉದಾಹರಣೆಗಳಿಲ್ಲ. ಇಷ್ಟಕ್ಕೂ ಭಯೋತ್ಪಾದನೆಯೊಂದನ್ನು ಬಿಟ್ಟರೆ, ಆ ದೇಶಕ್ಕೆ ತಮ್ಮನ್ನು ಮಾರ್ಕೆಟ್ ಮಾಡಿಕೊಳ್ಳುವಂಥ ಇನ್ನೊಂದು ವಸ್ತುವಿಲ್ಲ. ಈ ದೇಶದ ಪರಿಸ್ಥಿತಿ ಹೇಗಿದೆಯಂದರೆ, ಪ್ರಜಾಪ್ರಭುತ್ವವನ್ನು ಹೇರಿಕೆಯೆಂಬ ರೀತಿ ಒಪ್ಪಿಕೊಳ್ಳುವ ವಿಷಮ ಸ್ಥಿತಿ ತಲುಪಿದ್ದಾರೆ. ಮಾತು ಮಾತಿಗೂ, ಪಶ್ಚಿಮ ರಾಷ್ಟ್ರಗಳ ಬಳಿಹೋಗಿ, ತಮ್ಮ ದೇಶಕ್ಕೆ ಸಹಾಯ ಹಸ್ತ ಚಾಚಿ ಎಂದು ಅಂಗಲಾಚುವುದರಲ್ಲೇ ಇವರು ಬರೋಬ್ಬರಿ ೬೫ ವರ್ಷಗಳನ್ನು ನಮ್ಮ ಭಾರತ ದೇಶದೊಂದಿಗೆ ಸವೆಸಿದ್ದಾರೆ. ನಮ್ಮ ದೇಶದಲ್ಲಿ ರಾಹುಲ್ ಗಾಂಧಿ ಎಂಬೋ ಮಹಾನ್ ಬುದ್ಧಿವಂತನಿಗೆ ಎಷ್ಟು ಮರ್ಯಾದೆ ಇದೆಯೋ, ಅಷ್ಟೇ ಮರ್ಯಾದೆ ಆ ನವಾಜ್ ಷರೀಫ್ ಎಂಬ ವ್ಯಕ್ತಿಗೆ ಪಾಕಿಸ್ತಾನದಲ್ಲಿ ಇದೆ. ಆ ದೇಶದ ನಿಜವಾದ ಆಡಳಿತವಿರುವುದೇ ಅವರ ಸೈನ್ಯಕ್ಕೆ. ೧೯೪೭ ರಿಂದಲೂ ಇದೆ ರೀತಿ ನಡೆದು ಬರುತ್ತಿದೆ. ಈ ಸಂಧರ್ಭದಲ್ಲಿ, ಈ ಹುರಿಯತ್ ಎನ್ನುವ ಸಂಘಟನೆ ಕೂಡ, ತನ್ನ ಬೇಳೆ ಬೇಯಿಸಿಕೊಳ್ಳಲು ಶುರು ಮಾಡಿದೆ. ಇದರ ಪರಿಣಾಮ ಭಾರತ ದೇಶದ ಹಲವಾರು ಬುದ್ಧಿಜೀವಿಗಳು ತಮ್ಮ ಅತಿ-ಬುದ್ಧಿವಂತಿಕೆಯನ್ನು ಪ್ರದರ್ಶಿಸಲು ಮುಂದಾಗಿರುವುದೇ ನಮ್ಮ ದೇಶದ ದುರಂತ.

ಇಷ್ಟೆಲ್ಲಾ ಹುಳುಕು ತುಂಬಿರುವ ಪಾಕಿಸ್ತಾನ ಎಂಬ ದೇಶದ ಬಗ್ಗೆ, ನಮ್ಮ ಬುಜೀಗಳ ಕಲ್ಪನೆ ನಿಜಕ್ಕೂ ಅದ್ಭುತ. ನಿಜಕ್ಕೂ ಆ ದೇಶದೊಂದಿಗೆ ಮಾತುಕತೆ ನಡೆಸಬೇಕಂಬ ಇವರ ಆಲೋಚನೆ ನಿಜಕ್ಕೂ ಆಘಾತಕಾರಿ. ಇಷ್ಟಕ್ಕೂ ಏನೂ ಸರಿಯಿಲ್ಲದ ಆ ದೇಶದ ಜೊತೆ ಮಾತನಾಡಲು ಏನಿದೆ? ಒಂದು ಪ್ರಜಾಪ್ರಭುತ್ವ ಸರ್ಕಾರದ ಮಾತನ್ನು ಕೇಳುವ ತಾಳ್ಮೆಯಾಗಲಿ, ಅಥವಾ ಸಂಯಮವಾಗಲಿ ಇಲ್ಲ. ಒಂದು ಸರ್ಕಾರ ಕೊಟ್ಟ ನಿರ್ಧಿಷ್ಟ ಅಂಶಗಳ ಬಗ್ಗೆ ಮಾತುಕತೆ ನಡೆಸುವಲ್ಲಿ ತಯಾರಿಲ್ಲ.

ಮತ್ತಷ್ಟು ಓದು »

8
ಜನ

ರಾಷ್ಟ್ರದ ಹಿತ ದೃಷ್ಟಿಯಿಂದಾದರು ಈ ಭಯೋತ್ಪಾದನೆಯ ರಾಜಕೀಯಕ್ಕೆ ಅಂತ್ಯ ಹಾಡಬೇಕಲ್ಲವೇ?

– ಅನಿಲ ಚಳಗೇರಿ

Terror Boatಡಿಸೆಂಬರ್ ೩೧ ರ ರಾತ್ರಿ ಶಂಕಿತ ಉಗ್ರರ ಹಡಗನ್ನು ನೌಕ ಪಡೆ ಪತ್ತೆ ಹಚ್ಚಿ ಅದನ್ನು ಹಿಂಬಾಲಿಸಿ ಹೋದಾಗ ಅದರಲ್ಲಿರುವವರು ಹಡಗನ್ನು ಸ್ಪೋಟಿಸಿದರು ಎನ್ನುವ ವಿಷಯ ತಿಳಿದೊಡನೆ ನಮ್ಮಲ್ಲಿ ಅನೇಕರಿಗೆ ನೌಕಾಪಡೆಗೆ ಒಂದು ಶಬ್ಭಾಶ್ ಹೇಳಬೇಕೆನ್ನಿಸಿರಬಹುದು, ಅದಾಗಲೇ ರಾಜಕೀಯ ಪಕ್ಷಗಳು ಇಂತಹ ಒಂದು ಹಡಗು ಇತ್ತಾ? ಅದರಲ್ಲಿ ನಿಜವಾಗಲು ಉಗ್ರರಿದ್ದರಾ ? ಅದು ಪಾಕಿಸ್ತಾನಕ್ಕೆ ಸೇರಿದ ಹಡಗಾಗಿತ್ತಾ ? ಹಾಗಿದ್ದರೆ ಅವುಗಳ ದಾಖಲೆ ವೀಡಿಯೊ ದೃಶ್ಯಗಳನ್ನು ಬಿಡುಗಡೆ ಮಾಡಿ, ನಮಗೆ ಇದರ ಮೇಲೆ ಶಂಕೆಯಿದೆಯೆಂದು ಪ್ರಶ್ನಿಸಲು ಪ್ರಾರಂಭಿಸಿದನ್ನು ನೋಡಿ ನೋಡಿ ನಮ್ಮಲ್ಲಿ ಅನೇಕರಿಗೆ ಬೇಜಾರಾಗಿರಬೇಕು.  ಪ್ರತಿ ಬಾರಿ ಉಗ್ರಗಾಮಿಯೊಬ್ಬ ಸಿಕ್ಕಾಗ, ಬಾಂಬ್ ದಾಳಿಯಾದಾಗ ಅಥವಾ ಯಾವುದೇ ಉಗ್ರ ಚಟುವಟಿಕೆ ನಡೆದಾಗ, ತನಿಖೆಯ ಪ್ರಾರಂಭದಿಂದಲೇ  ಒಂದಲ್ಲ ಒಂದು ರಾಜಕೀಯ ಪಕ್ಷಗಳು ಅಥವಾ ಬುದ್ಧಿ ಜೀವಿಗಳು ಈ ಶಕಿಂತ ಆರೋಪಿಗಳ ನಿಂತೇಬಿಡುತ್ತಾರೆ. ತನಿಖೆ ನಡೆಯುತ್ತಿರುವಾಗಲೇ ಕ್ಲೀನ್ ಚಿಟ್ ಕೊಡುವದು, ರಾಜಕೀಯ ಬಣ್ಣ ಕಟ್ಟಲು ಪ್ರಯತ್ನಿಸುವದು ಅಥವಾ ಇಂತಹ ಗಂಭೀರ ವಿಷಯದಲ್ಲಿ ಜಾತಿ ಅಥವಾ ಧರ್ಮದ ಮಾತುಗಳನ್ನು ಆಡುವದು ನೋಡುತ್ತಲೇ ಇರುತ್ತೇವೆ, ಕೆಲವಿರಿಗೆ ಇದು ಇದು ಓಲೈಕೆಯ ಒಂದು ಭಾಗವಾದರೆ ಇನ್ನು ಕೆಲವರಿಗೆ ಇದು ಕೇವಲ ಪ್ರಚಾರ ಗಿಟ್ಟಿಸಿಕೊಳ್ಳಲು ಒಂದು ಗಿಮಿಕ್.  ಇಂತಹ ಹೇಳಿಕೆಗಳನ್ನು  IC – 814 ಹೈ ಜಾಕ್ ನಿಂದ ಹಿಡಿದು ಅಫ್ಜಲ್ ಗುರು, ಬಾಟ್ಲ ಹೌಸ್ ಎನ್ಕೌಂಟರ್, ಇಶ್ರಾತ್ ಜಹಾ ಎನ್ಕೌಂಟರ್, ಹೈದರಾಬಾದ್ ಬ್ಲಾಸ್ಟ್, ಜರ್ಮನ್ ಬೇಕರಿ ಬ್ಲಾಸ್ಟ್ ಹಾಗು ಮುಂಬೈ ತಾಜ್ ಅಟ್ಯಾಕ್ ಆದಗಲು  ಕೇಳುತ್ತಲೇ ಬಂದಿದ್ದೇವೆ. ಪ್ರತ್ಯೇಕತೆಯ ಹೆಸರಿನಲ್ಲಿ ಉಗ್ರವಾದ, ನಕ್ಸಲ್ ಹೆಸರಿನಲ್ಲಿ ಉಗ್ರವಾದ ಹಾಗು ಮಾವೋವಾದಿಗಳ ಉಗ್ರ ಚಟುವಟಿಕೆಯನ್ನು ವಹಿಸಿಕೊಂಡು ಮಾತನಾಡುವಂತಹ ಬುದ್ಧಿ ಜೀವಿಗಳು ಇಡೀ ದೇಶದಲ್ಲಿ ತುಂಬಿದ್ದಾರೆ. ಕೆಲವೊಮ್ಮ ರಾಜಕೀಯ ಪಕ್ಷಗಳ ಜೊತೆ, ಕೆಲವೊಮ್ಮೆ ಮಾಧ್ಯಮಗಳ ಜೊತೆ ಇನ್ನು ಕೆಲವೊಮ್ಮೆ ಮಾನವ ಹಕ್ಕು ಹೋರಾಟದ ನೆಪದಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ದಶಕಗಳ ಹಿಂದೆಯೇ ಧರ್ಮ ಮತ್ತು  ರಾಜಕೀಯದ ಹೆಸರಿನಲ್ಲಿ ಇಂಥಹ ಸಂಘಟನೆಗಳನ್ನು ಸಮರ್ಥಿಸಿಕೊಂಡ ಪಾಕಿಸ್ತಾನ, ಆಫ್ತಾನಿಸ್ತಾನ, ಇರಾಕ್ ಹಾಗು ಇಂತಹ ಅನೇಕ ರಾಷ್ಟ್ರಗಳು ತಾವೇ ಬೆಳಸಿದ ಈ ಉಗ್ರರಿಂದ ತಮ್ಮ ದೇಶವನ್ನು ಕಾಪಾಡಿಕೊಳ್ಳಲು ಇಂದು ಕಷ್ಟಪಡುತ್ತಿರುವದನ್ನು ನಾವೆಲ್ಲ ನೋಡುತ್ತಿದ್ದೇವೆ.
ಮತ್ತಷ್ಟು ಓದು »