ವಿಷಯದ ವಿವರಗಳಿಗೆ ದಾಟಿರಿ

Posts tagged ‘ಭಾಜಪಾ’

26
ಸೆಪ್ಟೆಂ

ರಾಜಕೀಯದಲ್ಲಿ ಚಾಣಾಕ್ಷರೂ ಸಹ ಅಪ್ರಸ್ತುತರಾಗಲು, ಒಂದು ತಲೆಕೆಟ್ಟ ನಿರ್ಧಾರ ಸಾಕು||

– ರಾಘವೇಂದ್ರ ನಾವಡ
ki28lotus_jpg_g_ki_2599608fಏನೇ ಹೇಳಿ… ರಾಜ್ಯ ರಾಜಕೀಯದಲ್ಲಿ ದೇವೇಗೌಡರನ್ನು “ಫೀನಿಕ್ಸ್” ಅಂತ ಯಾಕೆ ಕರೀತಾರೆ? ಅನ್ನೋದಕ್ಕೆ ಮತ್ತೊಮ್ಮೆ ನಿದರ್ಶನ ದೊರಕಿತು! ತನ್ನ ಮುಂಪಡೆ ನಾಯಕರ ಸೋಮಾರಿತನ, ಅಂತಃಕಲಹ, ಅಹಂಕಾರ ಮುಂತಾದವುಗಳಿಂದ ಮಕಾಡೆ ಮಲಗಿದ್ದ ಜಾತ್ಯಾತೀತ ಜನತಾದಳ, ತನ್ನ ಮೇರು ಪ್ರಭೃತಿ ದೇವೇಗೌಡರು ತೆಗೆದುಕೊಂಡ ಒಂದು ಚಾಣಾಕ್ಷತನದ ನಿರ್ಧಾರದಿಂದ ಕುಂಭಕರ್ಣ ನಿದ್ರೆಯಿಂದ ದಢಾಲ್ಲನೆ ಎದ್ದರೆ, ಯಡಿಯೂರಪ್ಪನವರ ನಾಯಕತ್ವದಲ್ಲಿ ಸ್ವಲ್ಪ-ಸ್ವಲ್ಪವೇ ಮೇಲೇಳುತ್ತಿದ್ದ (ಇಲ್ಲಿಯೂ ಅಂತಃ ಕಲಹವಿದೆ. ಆದರೆ ನಾಯಕರು ಸ್ವಲ್ಪ ಚುರುಕಾಗಿದ್ದರು) ರಾಜ್ಯ ಭಾಜಪಾ, ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆದಿದ್ದ ಸರ್ವಪಕ್ಷ ಸಭೆಯನ್ನು ಬಹಿಷ್ಕರಿಸುವುದರ ಮೂಲಕ ಮಕಾಡೆ ಮಲಗಿತು!! ಒಬ್ಬರು ಫೀನಿಕ್ಸ್ ನಂತೆ ಎದ್ದರೆ ಮತ್ತೊಬ್ಬರು ಶವದಂತೆ ಬಿದ್ದರು!! Read more »