ಗುಂಡಿಗೆ ಎದೆ ಕೊಟ್ಟವ ೧೩ರ ಪೋರ..!
– ರಾಕೇಶ್ ಶೆಟ್ಟಿ
ಸರಿಯಾಗಿ ಇಂದಿಗೆ ೬೯ ವರ್ಶದ ಹಿಂದಿನ,ಅಂದು ಆಗಸ್ಟ್ ೧೫ ,೧೯೪೨ನೆ ಇಸವಿ. ಆಗಿನ್ನೂ ಹುಬ್ಬಳಿಯ ಆಗಸದಲ್ಲಿ ಸ್ವಾತಂತ್ರ್ಯದ ಸೂರ್ಯ ಉದಯಿಸಿದ್ದ.ಹಕ್ಕಿಗಳ ಕಲರವದ ನಡುವೆ , ದುರ್ಗದ ಬಯಲಿನಲ್ಲಿ ‘ವಂದೇ ಮಾತರಂ’ ‘ಭಾರತ ಮಾತಾಕಿ ಜೈ’ ಘೋಷಣೆಗಳು ಮೊಳಗುತಿದ್ದವು. ಅಕ್ಕ ಪಕ್ಕದ ಮನೆಯ ಮಕ್ಕಳೆಲ್ಲ ಆಟವಾಡುತಿದ್ದರೆ ಅವನು ಮಾತ್ರ ಬೆಳಿಗ್ಗೆ ಬೇಗ ಎದ್ದು, ಶ್ವೇತವರ್ಣದ ಜುಬ್ಬಾ-ಪೈಜಾಮ ಧರಿಸಿ, ತನಗಿಂತಲೂ ಎತ್ತರವಿದ್ದ ಒಂದು ಬೊಂಬಿಗೆ ‘ತ್ರಿವರ್ಣ ಧ್ವಜ’ ಕಟ್ಟಿಕೊಂಡವನೇ ಮಲಗಿದ್ದ ತಾಯಿಯ ಬಳಿ ಹೋಗಿ ಅವಳನ್ನು ಎಬ್ಬಿಸಿ ಆಶೀರ್ವದಿಸುವಂತೆ ಕೇಳಿದ. ಶ್ವೇತ ವಸ್ತ್ರಧಾರಿಯಾಗಿ ‘ತ್ರಿವರ್ಣ ಧ್ವಜ’ವನ್ನಿಡಿದ ಮಗನನ್ನು ನೋಡಿ,
ಆ ತಾಯಿ ಕೇಳಿದಳು “ಎಲ್ಲಿ ಹೊರಟೆ ಮಗು?”
“ಅಮ್ಮ , ನಾನು ದುರ್ಗದ ಬಯಲಿನಲ್ಲಿ ನಡೆಯುತ್ತಿರುವ ‘ಕ್ವಿಟ್ ಇಂಡಿಯಾ ಚಳುವಳಿ’ಯಲ್ಲಿ ಪಾಲ್ಗೊಳ್ಳಲು ಹೊರಟಿದ್ದೇನೆ”
“ಆದರೆ ಮಗು, ಅಲ್ಲಿ ಹಿರಿಯರೇ ಇರುತ್ತಾರೆ ಕಣೋ!”
ಮತ್ತಷ್ಟು ಓದು
ಮಿಡ್ನಾಪುರದಲ್ಲಿ ಕ್ರಾಂತಿಯ ಕಲರವ…
– ಭೀಮಸೇನ್ ಪುರೋಹಿತ್
ಬಂಗಾಳದ ತೋಟದಿಂದ, ತಾಯಿ ಭಾರತಿಗೆ ಪೂಜಿತಗೊಂಡ ಕ್ರಾಂತಿಯ ಹೂವುಗಳು ಅಸಂಖ್ಯ,ಅಂಥಾ ಒಬ್ಬ ಯುವಕನ ಸ್ಮರಣೆ ಇದು.
ಮಿಡ್ನಾಪುರ ಅನ್ನೋದು ಬಂಗಾಳದ ಒಂದು ಜಿಲ್ಲೆ. “ಅನುಶೀಲನ ಸಮಿತಿ”ಯ ಪ್ರಭಾವದಿಂದ ಅನೇಕ ಯುವಕ ಕ್ರಾಂತಿಕಾರಿಗಳು ಅಲ್ಲಿ ಬೆಳೆದಿದ್ರು..ಮಿಡ್ನಾಪುರದಲ್ಲಿ ಇದ್ದ ಆಂಗ್ಲ ಅಧಿಕಾರಿಗಳು ಅತಿಕ್ರೂರತನದಿಂದ ಆಳ್ವಿಕೆ ನಡೆಸ್ತಿದ್ರು.
ಅಲ್ಲಿನ ಮ್ಯಾಜಿಸ್ಟ್ರೇಟ್ ಗಳಂತೂ, ಕ್ರಾಂತಿಕಾರಿಗಳ ಮೇಲೆ ಕೇಸುಗಳನ್ನ ಹಾಕಿ, ವಿವಿಧ ಶಿಕ್ಷೆಗಳನ್ನ ವಿಧಿಸ್ತಿದ್ರು.ಹೀಗಾಗಿಯೇ, ಮಿಡ್ನಾಪುರದ ಯುವಕರು ಆಲ್ಲಿನ ಬ್ರಿಟಿಷರಿಗೆ ಒಂದು ಬಿಸಿ ಮುಟ್ಟಿಸಿದರು. ತಮ್ಮ ಜಿಲ್ಲೆಗೆ ಒಬ್ಬ ಭಾರತೀಯನನ್ನು ಮ್ಯಾಜಿಸ್ಟ್ರೇಟ್ ಮಾಡೋ ವರೆಗೂ, ಉಳಿದ ಆಂಗ್ಲ ಮ್ಯಾಜಿಸ್ಟ್ರೇಟ್ ಗಳನ್ನ ಕೊಲ್ತಿವಿ ಅಂತ..ಬ್ರಿಟಿಷರು ಇದನ್ನು ಅಷ್ಟೊಂದು ಪರಿಗಣಿಸಲಿಲ್ಲ.
ಆಗ ಅಲ್ಲಿಗೆ ‘ಜೇಮ್ಸ್ ಪ್ಯಾಡಿ’ ಅನ್ನೋನು ಮ್ಯಾಜಿಸ್ಟ್ರೇಟ್ ಆಗಿ ಬಂದ. ಪ್ರತಿಜ್ಞೆ ಮಾಡಿದ್ದ ಕ್ರಾಂತಿಕಾರಿಗಳು, ಅದೊಂದು ಸಮಾರಂಭದಲ್ಲಿ, ಅತಿಥಿಯಾಗಿ ಬಂದಿದ್ದ ಅವನನ್ನು ಗುಂಡು ಹಾರಿಸಿ ಕೊಂದೇ ಬಿಟ್ಟರು. ಬ್ರಿಟಿಷರು ಕಲ್ಕತ್ತೆಯಿಂದ ವೈದ್ಯರನ್ನು ಕರೆಸಿದರು. ವೈದ್ಯರು ಪ್ಯಾಡಿ ಯಾ ದೇಹದಿಂದ ಗುಂಡುಗಳನ್ನು ಹೊರತೆಗೆದರೂ, ಅವನನ್ನು ಬದುಕಿಸಲಾಗಲಿಲ್ಲ.. ಯುವಕರ ನಿಲುವು ಸ್ಪಷ್ಟವಾಗಿತ್ತು. ಆಂಗ್ಲರು ಈಗ ಸ್ವಲ್ಪ ಚಿನ್ತಿಸಲಾರಮ್ಭಿಸಿದರು..
ಆನಂತರ ‘ಡಾಗ್ಲಾಸ್’ ಎಂಬ ಆಂಗ್ಲನನ್ನು ಮತ್ತೆ ಮ್ಯಾಜಿಸ್ಟ್ರೇಟ್ ಆಗಿ ನಿಯೋಜಿಸಿದರು.. ಆತ ಮೊದಲಿಂದಲೂ ಹೆದರಿದ್ದ.ಅದೊಮ್ಮೆ “ಡಿಸ್ಟ್ರಿಕ್ಟ್ ಬೋರ್ಡ್” ನ ಸಭೆ ಇತ್ತು. ಸಂಜೆಯವರೆಗೂ ಶಾಂತಿಯುತವಾಗಿಯೇ ಇತ್ತು. ಆದರೆ ಗಂಟೆ ೫ ಆಗುತ್ತಿದ್ದಂತೆ ಇಬ್ರು ಯುವಕರು, ‘ಡಾಗ್ಲಾಸ್’ ನ ಹತ್ರ ಬಂದ್ರು. ನೋಡುನೋಡುತ್ತಲೇ ಆ ಆಂಗ್ಲನ ಮೇಲೆ ಗುಂಡು ಹಾರಿಸಲಾಯಿತು..ಆ ಅಧಿಕಾರಿ ಧರೆಗುರುಳಿದ.
‘ಚಿತ್ತಗಾಂಗ್’ನಲ್ಲಿ ಸ್ವಾತಂತ್ರ್ಯ’ಸೂರ್ಯ’ನ ಉದಯ…!
– ಭೀಮಸೇನ್ ಪುರೋಹಿತ್
‘ಚಿತ್ತಗಾಂಗ್’ ಅನ್ನೋ ಹೆಸರು ಕೇಳಿದರೆ ಸಾಕು, ಸ್ವಾತಂತ್ರ್ಯ ಇತಿಹಾಸವನ್ನು ಓದಿದ ಪ್ರತಿಯೊಬ್ಬರಿಗೂ ಮೈನವಿರೇಳುತ್ತದೆ. ಅಂಥಾ ಚಮತ್ಕಾರ ನಡೆದ ಸ್ಥಳ ಅದು. ಕ್ರಾಂತಿಕಾರಿಗಳ, ದೇಶಪ್ರೇಮಿಗಳ ಪುಣ್ಯಕ್ಷೇತ್ರವದು.ಆದರೆ, ದೇಶ ವಿಭಜನೆಯಾದ ಮೇಲೆ, ಈಗ ಈ ಜಾಗ ‘ಬಾಂಗ್ಲಾದೇಶ’ದಲ್ಲಿದೆ..
ಅವನ ಹೆಸರು ‘ಸೂರ್ಯಸೇನ್’. ವೃತ್ತಿಯಿಂದ ಶಿಕ್ಷಕ.. ಎಲ್ಲ ವಿದ್ಯಾರ್ಥಿಗಳ ಪ್ರೀತಿಯ ‘ಮಾಸ್ಟರ್ ದಾ’.ಹುಟ್ಟಿದ್ದು ನೌಪರ ಎಂಬ ಗ್ರಾಮದಲ್ಲಿ, 1894 ರಲ್ಲಿ…ಅದಾಗಲೇ, ಬಂಗಾಳದ ಪ್ರಸಿದ್ಧ ಸಂಘಟನೆಗಳಾದ ‘ಅನುಶೀಲನ ಸಮಿತಿ’ ಮತ್ತು ‘ಜುಗಾಂತರ’ ದಿಂದ ಪ್ರಭಾವಿತನಾಗಿದ್ದ..
ಭಾರತದ ಸ್ವಾತಂತ್ರ್ಯ, ಚಿತ್ತಗಾಂಗ್ ಗ್ರಾಮದಿಂದಲೇ ಪ್ರಾರಂಭವಾಗಬೇಕೆಂಬ ಮಹತ್ವಾಕಾಂಕ್ಷೆ ಹೊದಿದ್ದ.. ಅದಕ್ಕಾಗಿ ಮಾಸ್ಟರ್ ದಾ, ಸಂಘಟನೆಯನ್ನೂ ಶುರು ಮಾಡಿದ್ರು.. ಶಿಕ್ಷಕರಾಗಿದ್ದರಿಂದ ಸಂಘಟನೆ ಮಾಡೋದು ಅಷ್ಟೇನೂ ಕಷ್ಟ ಆಗ್ಲಿಲ್ಲ. ಶಾಲೆಯಲ್ಲಿನ, ಕೇವಲ 14-15 ವರ್ಷದೊಳಗಿನ ಪುಟ್ಟ ವಿದ್ಯಾರ್ಥಿಗಳೂ ಸೂರ್ಯಸೇನನ ಜೊತೆ ಸಹಕರಿಸಲು ಮುಂದೆ ಬಂದ್ರು..
ಅಶ್ಫಾಕುಲ್ಲಾ ಖಾನ್” — ದೇಶಭಕ್ತಿಯ ಮೂರ್ತರೂಪ..
– ಭೀಮಸೇನ್ ಪುರೋಹಿತ್
ಆಗಸ್ಟ್ 9 – 1925.. ಅವತ್ತಿನ ರಾತ್ರಿ ಭಾರತದ ಕ್ರಾಂತಿಯ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲು ದಾಖಲಾದ ದಿನ.. ಇನ್ನೂ ಮೀಸೆ ಚಿಗುರದ ನವತರುಣರು ಆಂಗ್ಲಶಾಹಿಯೆದುರಿಗೆ ತೊಡೆತಟ್ಟಿ ನಿಂತ ದಿನ ಅದು.. ಅದೇ “ಕಾಕೋರಿ” ಪ್ರಕರಣ..
ಆ ಹೊತ್ತಿಗಾಗಲೇ, ಅಮೇರಿಕಾದ “ಗದರ್” ಪಾರ್ಟಿಯ ಪ್ರಖರತೆ ಕಮ್ಮಿಯಾಗಿತ್ತು. ಭಾರತದಲ್ಲಿ, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಗದರ್ ಪಾರ್ಟಿಯ ಹಳೆಯ ಕೆಲವು ನಾಯಕರು ಸೇರಿ “ಹಿಂದುಸ್ತಾನ್ ರಿಪಬ್ಲಿಕನ್ ಅಸೋಸಿಯೇಶನ್” ಎಂಬ ಕ್ರಾಂತಿಸಮಿತಿಯನ್ನು ಶುರು ಮಾಡಿದ್ರು. ಗದರ್ ಪಾರ್ಟಿಯ ಪತನದ ನಂತರ ಕ್ರಾಂತಿ ತಣ್ಣಗಾಗಿದೆ ಅಂತ, ಆಂಗ್ಲರು ಈ HRA ಅನ್ನು ಉಪೇಕ್ಷಿಸಿದ್ದರು.. ಅವರ ಆ ಅಲಕ್ಸ್ಯವೇ ಕ್ರಾಂತಿಕಾರಿಗಳಿಗೆ ವಾರವಾಯಿತು..
ರಾಮಪ್ರಸಾದ್ ಮತ್ತು ಅಶ್ಫಾಕ್ ಇಬ್ರೂ ಜೀವಕ್ಕೆ ಜೀವ ಕೊಡೊ ಗೆಳೆಯರು.. ಅವರ ಸ್ನೇಹದ ನಡುವೆ ಧರ್ಮ ಯಾವತ್ತೂ ಅಡ್ಡಿ ಬರ್ಲಿಲ್ಲ.. ಹಾಗೆ ನೋಡಿದರೆ, ರಾಮ್, ಪಕ್ಕಾ ಅರ್ಯಸಮಾಜದ ಹಿಂದೂವಾದಿ. ಆದ್ರೆ ಅವನು ಅಶ್ಫಾಕ್ ನನ್ನು ಅಪಾರವಾಗಿ ಗೌರವಿಸುತ್ತಿದ್ದ. ಹಾಗೆಯೇ ಅಶ್ಫಾಕ್ ಕೂಡ ಯಾವಾಗಲೂ “ನನ್ನ ರಾಮ” ಅಂತಾನೆ ಜಪಿಸುತ್ತಿದ್ದ.. ಅಶ್ಫಾಕ್ ಉತ್ತರಪ್ರದೇಶದ ಷಹಜಹಾನ್ ಪುರದವನು. ಅಶ್ಫಾಕ್ ಒಬ್ಬ ಮಹಾನ್ ಉರ್ದು ಕವಿ ಕೂಡ ಆಗಿದ್ದ.. ಅತ್ಯಂತ ಉದ್ಬೋಧಕ ದೇಶಭಕ್ತಿ ಗೀತೆಗಳನ್ನು ಬರೆದ ಸಾಹಿತಿ ಅವನು.. ಅದೇ ಅಶ್ಫಾಕ್ ಬಿಸ್ಮಿಲ್ಲನ ಸಹವಾಸಕ್ಕೆ ಬಂದೊಡನೆ, ಅವನ ಪಟ್ಟಶಿಷ್ಯನಾಗಿ ದೇಶಕ್ಕೆ ಅರ್ಪಿಸಿಕೊಂಡಿದ್ದ..