ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಹದಾಯಿ’

5
ಫೆಬ್ರ

ಕನ್ನಡ ಪರ ಹೋರಾಟವೆಂದರೆ ಕಾಂಗ್ರೆಸ್ ಪರ ಹೋರಾಟವೇ?

– ರಾಕೇಶ್ ಶೆಟ್ಟಿ

ಚಿತ್ರಕೃಪೆ  :- https://kannada.oneindia.com (ಕಲೆ : ಬಿ.ಜಿ. ಗುಜ್ಜಾರಪ್ಪ)

ಭಾವನಾತ್ಮಕವಾಗಿ ಜನರನ್ನು ಎತ್ತಿಕಟ್ಟುವುದು ರಾಜಕೀಯ ಪಕ್ಷಗಳಿಗೆ ಯಾವತ್ತಿಗೂ ಲಾಭದ ಬಾಬತ್ತು. ಈಗ ಮಹದಾಯಿ ವಿಷಯದಲ್ಲೂ ಆಗುತ್ತಿರುವುದೂ ಅದೇ. ಪ್ರಧಾನಿ ಮೋದಿಯವರ ಬಳಿ, ಗೋವಾ-ಮಹಾರಾಷ್ಟ್ರದ ಜೊತೆಗೆ ಸಂಧಾನದ ಮಧ್ಯಸ್ಥಿಕೆ ವಹಿಸುವಂತೆ ರಾಜ್ಯದ ಸರ್ವಪಕ್ಷ ನಿಯೋಗ ಹೋಗಿ ಕೇಳಿಕೊಂಡಾಗ, ಈ ವಿವಾದದ ಇತಿಹಾಸದ ಅರಿವಿದ್ದ ಅವರು, ಮಧ್ಯಸ್ಥಿಕೆ ನಿರಾಕರಿಸಿ ಮೊದಲು ಆಯಾ ರಾಜ್ಯಗಳಲ್ಲಿರುವ ಪಕ್ಷಗಳನ್ನು ಒಪ್ಪಿಸಿ ಎಂದಿದ್ದರು. ನಂತರ ಕಳೆದ ವರ್ಷದ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ, ಗೋವಾದ ಬಿಜೆಪಿ ಸರ್ಕಾರವನ್ನು ಕರ್ನಾಟಕದ ಬಿಜೆಪಿಯವರು ಹಾಗೂ ಗೋವಾದ ವಿರೋಧ ಪಕ್ಷ ಕಾಂಗ್ರೆಸ್ಸನ್ನು ಕರ್ನಾಟಕದ ಆಡಳಿತ ಪಕ್ಷ ಕಾಂಗ್ರೆಸ್ಸಿನವರು ಒಪ್ಪಿಸುವ ನಿರ್ಧಾರವಾಗಿತ್ತು. ಮತ್ತಷ್ಟು ಓದು »

4
ಸೆಪ್ಟೆಂ

ಮಹದಾಯಿ : ಜನರ ದಾರಿ ತಪ್ಪಿಸುವುದು ಕಾಂಗ್ರೆಸ್‌ಗೆ ಶೋಭೆಯೇ?

– ವೃಷಾಂಕ್ ಭಟ್,ದೆಹಲಿ

ಮಹದಾಯಿಕಳಸಾ-ಬಂಡೂರ ಕಾಲುವೆಗೆ ಮಹದಾಯಿ ನೀರು ಹರಿಸಲು ಪ್ರಧಾನಿಯೊಬ್ಬರೇ ಶಕ್ತರು ಎಂಬ ರಾಜಕೀಯ ಸುಳ್ಳನ್ನು ಕಾಂಗ್ರೆಸ್ ಪ್ರಚಾರ ಮಾಡುತ್ತಿದೆ. ತಿಳಿದೋ ತಿಳಿಯದೆಯೋ ಮಾಧ್ಯಮಗಳು ಕೂಡ ಹೆಚ್ಚು ಕಡಿಮೆ ಇದೇ ಸುಳ್ಳನ್ನು ಪ್ರಸಾರ ಮಾಡುತ್ತಿದೆ. ಮಹದಾಯಿ ಸಮಸ್ಯೆ ದೇಶದ ಸಮಸ್ಯೆಯಾಗಿ ಉಳಿದಿಲ್ಲ. ಕಾಂಗ್ರೆಸ್ ಪಾಲಿಗಿದು ರಾಜಕೀಯ ಅವಕಾಶ. ಮಹದಾಯಿ ಸಮಸ್ಯೆ ಜೀವಂತವಾಗಿದ್ದಷ್ಟು ದಿನವೂ ರಾಜ್ಯದ ಜನರ ಮನಸ್ಸಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚುತ್ತದೆ ಎಂಬುವುದು ಸಿದ್ಧರಾಮಯ್ಯ ಮತ್ತವರ ಹೈಕಮಾಂಡ್‌ಗೆ ತಿಳಿಯದ ವಿಷಯವಲ್ಲ. ಹಾಗಾಗಿ ಮಹದಾಯಿ ಸಮಸ್ಯೆ ಬಹೆಗರಿಯುವುದು ರಾಜ್ಯ ಸರ್ಕಾರಕ್ಕೇ ಬೇಕಿಲ್ಲ. ಸಮಸ್ಯೆ ಬಗೆಹರಿಸಲು ನಿಜಕ್ಕೂ ಸಾಧ್ಯವಿದೆಯೆಂದಾದರೆ ಅದು ಕಾಂಗ್ರೆಸ್‌ಗೆ ಮಾತ್ರ. ಮಹದಾಯಿ ಪ್ರಕರಣ ಸಂಬಂಧ ನ್ಯಾಯಾಧಿಕರಣ ರಚನೆಯಾದ ಬಗೆ ಮತ್ತು ಅದರಲ್ಲಿ ಕಾಂಗ್ರೆಸ್ ಪಾತ್ರ ಎಷ್ಟಿದೆ ಎಂಬುದನ್ನು ನೋಡೋಣ.

1) ಜುಲೈ 2002 : ಅಂತಾರಾಜ್ಯ ನದಿ ನೀರು ವ್ಯಾಜ್ಯ-1956 ಅಡಿಯಲ್ಲಿ ಮಹದಾಯಿ ನ್ಯಾಯಾಧಿಕರಣ ರಚಿಸುವಂತೆ ಗೋವಾ ಸರ್ಕಾರ ಕೇಂದ್ರಕ್ಕೆ ಮನವಿ ನೀಡಿತ್ತು. ಆದರೆ ಕೇಂದ್ರವು ಆ ಕೂಡಲೇ ನ್ಯಾಯಾಧಿಕರಣ ರಚಿಸಲಿಲ್ಲ.ಆಗಿದ್ದದ್ದು ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರ.
2) ಏ.4-2006: ಕೇಂದ್ರ ಜಲಸಂಪನ್ಮೂಲ ಸಚಿವಾಲಯವು ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳ ಸಭೆ ಕರೆದು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ತಿಳಿಸುತ್ತಾರೆ. ಆದರೆ ಅಂದು ಗೋವಾ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್‌ನ ಪ್ರತಾಪ್ ಸಿಂಗ್ ರಾಣೆ ನ್ಯಾಯಾಧಿಕರಣ ರಚನೆಯಾಗಲೇ ಬೇಕು ಎಂದು ಹಠ ಹಿಡಿಯುತ್ತಾರೆ. ಆ ಮೂಲಕ ಮಾತು ಕತೆಯ ಉದ್ದೇಶ ವಿಫಲ.
ಮತ್ತಷ್ಟು ಓದು »