ಶನಿಯ ಬೆನ್ನೇರಿದ ಕಾಕ, ಇದೆಲ್ಲ ನಾಟಕ ಯಾಕ?
– ರೋಹಿತ್ ಚಕ್ರತೀರ್ಥ
ನಮ್ಮ ದೇಶದಲ್ಲಿ ಖರ್ಚಿಲ್ಲದೆ ಪ್ರಸಿದ್ಧಿ ಒದಗಿಸುವ ಎರಡು ಸಂಗತಿಗಳಿವೆ. ಒಂದು ಬುದ್ಧಿಜೀವಿಯಾಗುವುದು, ಇನ್ನೊಂದು ಮಹಿಳಾವಾದಿಯಾಗುವುದು. ಬುದ್ಧಿಜೀವಿಯಾಗಬೇಕಾದರೆ ನೀವು ಸೆಕ್ಯುಲರ್ ಎಂದು (ಏನೆಂದು ಗೊತ್ತಿರದಿದ್ದರೂ) ತೋರಿಸಿಕೊಳ್ಳಬೇಕು. ಹಿಂದೂಗಳನ್ನು, ಅವರ ಆಚರಣೆ, ಪದ್ಧತಿ, ಹಬ್ಬಹರಿದಿನಗಳನ್ನು ಬಯ್ಯಬೇಕು. ಹಿಂದೂ ದೇವರನ್ನು, ದೇವಾಲಯಗಳನ್ನು ಪ್ರಶ್ನಿಸಬೇಕು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ರಿಲಿಜನ್ನುಗಳನ್ನು ಓಲೈಸಬೇಕು. ಮೋದಿಯನ್ನು ತೆಗಳಬೇಕು. ಭಯೋತ್ಪಾದಕರನ್ನು, ನಕ್ಸಲರನ್ನು ಬೆಂಬಲಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಿಮಗೆ ಬೆನ್ನುಮೂಳೆ ಇರಬಾರದು. ಜೊತೆಗೆ, ಅರ್ಥವತ್ತಾದ ಮಾತು, ತರ್ಕಬದ್ಧವಾದ ಚಿಂತನೆ – ಇವೆರಡರ ಬಗ್ಗೆ ನೀವು ಎಂದೆಂದೂ ತಲೆ ಕೆಡಿಸಿಕೊಂಡಿರಬಾರದು. ಹಾಗೆಯೇ, ಮಹಿಳಾವಾದಿಯಾಗುವುದು ಕೂಡ ಸುಲಭ. ಮೊದಲಿಗೆ ಮಹಿಳಾವಾದ = ಪುರುಷದ್ವೇಷ ಎಂಬ ಸಮೀಕರಣ ಬರೆಯಿರಿ. ಮಹಿಳೆಗೆ ಸ್ವಾತಂತ್ರ್ಯ ಬೇಕು ಅನ್ನಿ. ಉದ್ಯೋಗದಲ್ಲಿ, ಸಂಸತ್ತಿನಲ್ಲಿ, ಬಸ್ಸಿನಲ್ಲಿ, ಚಿತ್ರಮಂದಿರದಲ್ಲಿ, ನಡೆದಾಡುವ ರಸ್ತೆಯಲ್ಲಿ – ಹೀಗೆ ಎಲ್ಲೆಲ್ಲೂ ಹೆಣ್ಣಿಗೆ ಸಮಾನತೆ ಬೇಕೆಂದು ಬೊಬ್ಬೆ ಹೊಡೆಯಿರಿ. ಉದ್ಧೇಶವೇ ಇಲ್ಲದೆ ಪ್ರತಿಭಟನೆ ಮಾಡಿದರೂ ಓಕೆ. ವಿರೋಧಿಸದವರಿಗೂ ಧಿಕ್ಕಾರ ಕೂಗಿದರೂ ಓಕೆ. ಒಟ್ಟಲ್ಲಿ ನಿಮ್ಮ ಮಾತು, ಕೂಗಾಟ, ಹಾರಾಟ, ಹೋರಾಟವೆಲ್ಲ ನಾಲ್ಕು ಜನಕ್ಕೆ ಗೊತ್ತಾಗಬೇಕು, ಪತ್ರಿಕೆ ಟಿವಿಗಳಲ್ಲಿ ಬರಬೇಕು. ಮತ್ತು ಇವೆಲ್ಲದರ ಜೊತೆ, ನೀವು, ಮೇಲೆ ಹೇಳಿದ ಬುದ್ಧಿಜೀವಿಯೂ ಆಗಿರಬೇಕಾದ್ದು ಅನಿವಾರ್ಯ. ಎರಡು ವರ್ಷಗಳ ಹಿಂದೆ ಒಂದು ಬುದ್ಧಿಜೀವಿ ಮಹಿಳಾಪರ ಲೇಖಕಿ, “ಮೋದಿಯ ಮುಖ ನೋಡಿದರೇನೇ ಆತ ಸ್ತ್ರೀದ್ವೇಷಿ ಅನ್ನೋದು ಗೊತ್ತಾಗುತ್ತದೆ” ಎಂದಿದ್ದರು. ಇಂಥ ಹೇಳಿಕೆ ಕೊಡುವವರಿಗೆ ಮಹಿಳಾಪರ ಸಂಘಟನೆಗಳಲ್ಲಿ ಒಳ್ಳೆಯ ಬೇಡಿಕೆ ಇದೆ. Read more
ಏಕರೂಪ ನಾಗರಿಕ ಸಂಹಿತೆ – ಸುಪ್ರೀಂ ಕೋರ್ಟ್ V/S ಜಮಾತೆ ವಿಚಾರಧಾರೆ
– ಅನಿರುದ್ಧ ವಸಿಷ್ಟ,ಭದ್ರಾವತಿ
ಅರಾಜಕತೆ ತಂದೊಡ್ಡದಿರಲಿ ಧರ್ಮಾಧಾರಿತ ಕಾನೂನು
ಪ್ರಜಾಪ್ರಭುತ್ವ ದೇಶದಲ್ಲಿರುವ ಭಾರತೀಯರಿಗೆ ದೇಶದ ಸಂವಿಧಾನವೇ ಮೇಲ್ಪಂಕ್ತಿಯಾಗಿದ್ದು, ಸಂವಿಧಾನವೇ ಅಂತಿಮವಾದುದು. ಧರ್ಮ ಗ್ರಂಥಗಳಾದ ರಾಮಾಯಣ, ಮಹಾಭಾರತ, ಕುರಾನ್, ಬೈಬಲ್ಗಳು ಆಯಾ ಧರ್ಮದ ಅನುಯಾಯಿಗಳ ವೈಯಕ್ತಿಕವಾಗಿರಬೇಕು.ಆದರೆ,ವೋಟ್ ಬ್ಯಾಂಕ್ ರಾಜಕಾರಣದ ಫಲವಾಗಿ ಸರ್ಕಾರಗಳು ಕೈಗೊಂಡ ನಿರ್ಧಾರಗಳು ಸಂವಿಧಾನ ವಿರುದ್ಧ ನಡೆಯಲು ಪ್ರೇರಣೆಯಾಗುತ್ತವೆ ಎಂದರೆ ಅದು ಪ್ರಜಾಪ್ರಭುತ್ವದ ದುರಂತವೇ ಹೌದು.೩೦೦ ವರ್ಷಗಳ ಕಾಲ ಬ್ರಿಟೀಷರಿಂದ ಆಳಿಸಿಕೊಂಡ ನಮ್ಮ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದರೂ, ಒಂದು ರೀತಿಯಲ್ಲಿ ಸರ್ವಾಧಿಕಾರಿ ಮನಸ್ಥಿತಿಯನ್ನೆ ಇಂದಿಗೂ ಹೊಂದಿದೆ ಎಂದರೆ ತಪ್ಪಲ್ಲ. ಇದು ಕೇವಲ ಆಳುವ ಪಕ್ಷಗಳ ಮನಸ್ಥಿತಿ ಮಾತ್ರವಲ್ಲ, ದೇಶದ ಪ್ರತಿ ಧರ್ಮ ಹಾಗೂ ಜಾತಿಗಳಲ್ಲಿ ಇದು ಹಾಸು ಹೊಕ್ಕಾಗಿದೆ.
೧೯೪೭ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ರೂಪಿಸಲಾದ ಸಂವಿಧಾನ ಮಹೋನ್ನತ ಆಶಯಗಳನ್ನು ಹೊಂದಿದೆ.ಸಂವಿಧಾನವೇ ಭಾರತೀಯರಿಗೆ ಒಂದು ರೀತಿಯಲ್ಲಿ ಸವೋತ್ತಮ ಎಂದರೂ ತಪ್ಪಲ್ಲ. ಆದರೆ, ಸಂವಿಧಾನ ಆಶಯಕ್ಕೆ ಧಕ್ಕೆ ಬರುವ ರೀತಿಯಲ್ಲಿ ಯಾವುದೇ ಸರ್ಕಾರ ಅಥವಾ ಧರ್ಮಗಳು ನಡೆದುಕೊಂಡಾಗ ಅದನ್ನು ನ್ಯಾಯಾಂಗದಲ್ಲಿ ಪ್ರಶ್ನೆ ಮಾಡುವ ಅಧಿಕಾರವನ್ನು ಇದೇ ಸಂವಿಧಾನ ಕಲ್ಪಿಸಿದೆ. ಆದರೆ, ಯಾವುದೇ ಒಂದು ಒಳ ವ್ಯವಸ್ಥೆ ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನೇ ಪ್ರಶ್ನಿಸುತ್ತದೆ ಎಂದರೆ ಹೇಗೆ?
ದೇವಾಲಯ ಪ್ರವೇಶದ ಕುರಿತು ತಪ್ಪು ತಿಳಿವಳಿಕೆಗಳು
– ಡಾ. ರಾಜಾರಾಮ ಹೆಗಡೆ
ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ,ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ.
ಇಂದು ಎರಡು ವಿಭಿನ್ನ ಸ್ಥಳಗಳಲ್ಲಿ ದೇವಾಲಯಗಳಿಗೆ ಸ್ತ್ರೀಯರ ಪ್ರವೇಶದ ಕುರಿತು ಹೋರಾಟಗಳು ನಡೆಯುತ್ತಿವೆ. ಈ ಹೋರಾಟವನ್ನು ನಡೆಸುತ್ತಿರುವವರು ಪ್ರಗತಿಪರರು ಹಾಗೂ ಸ್ತ್ರೀವಾದಿಗಳು. ಈ ಸಂದರ್ಭದಲ್ಲಿ ಅವರು ಎತ್ತುತ್ತಿರುವ ಚರ್ಚೆಯನ್ನು ಗಮನಿಸಿದಾಗ ಭಾರತೀಯ ಸಂಸ್ಕೃತಿಯ ಕುರಿತು ಈ ಮುಂದಿನ ತಪ್ಪು ಕಲ್ಪನೆಗಳು ಅವರಿಗೆ ಇರುವುದು ಸ್ಪಷ್ಟ. ಅದೆಂದರೆ: 1. ಹಿಂದೂ ಎನ್ನುವುದು ಇಸ್ಲಾಂ, ಕ್ರಿಶ್ಚಿಯಾನಿಟಿಗಳಂತೆ ಒಂದು ರಿಲಿಜನ್ನು. 2. ಹಿಂದೂಗಳ ದೇವಾಲಯಗಳು ಚರ್ಚು ಮಸೀದಿಗಳಂತೆ ಹಿಂದೂಗಳ ಸಾರ್ವಜನಿಕ ಪೂಜಾ ಸ್ಥಳಗಳು. ಹಾಗಾಗಿ ಹಿಂದೂ ಮಹಿಳೆಯರಿಗೆ ಇಂಥ ದೇವಾಲಯಗಳಲ್ಲಿ ಬಿಟ್ಟುಕೊಳ್ಳದಿರುವುದು ಲೈಂಗಿಕ ತಾರತಮ್ಯವನ್ನು ಮಾಡಿದಂತೇ ಎಂಬುದು ಅವರ ತರ್ಕ.
ಹಿಂದೂ ಎನ್ನುವುದು ಇಸ್ಲಾಂ ಕ್ರಿಶ್ಚಿಯಾನಿಟಿಗಳಂತೆ ರಿಲಿಜನ್ನಲ್ಲ. ಇದೊಂದು ಬಹು ಸಂಪ್ರದಾಯಗಳ ಸಮಾಜ. ಈ ಸಂಪ್ರದಾಯಗಳಿಗೆ ಆಧಾರವಾಗಿ ಕ್ರೈಸ್ತ ಮುಸ್ಲಿಮರಿಗೆ ಇರುವಂತೆ ಯಾವುದೇ ದೇವವಾಣಿ, ಪವಿತ್ರ ಗ್ರಂಥ ಅಥವಾ ಏಕರೂಪೀ ಡಾಕ್ಟ್ರಿನ್ನುಗಳ ಆಧಾರವಿಲ್ಲ. ಹಾಗಾಗಿ ಇಂಥ ಸಂಪ್ರದಾಯಗಳು ವೈವಿಧ್ಯಪೂರ್ಣವಾಗಿ ಬೆಳೆದುಕೊಂಡಿವೆ. ಹಿಂದೂ ದೇವಾಲಯಗಳು ಚರ್ಚುಗಳಂತೆ ಒಂದು ಕೇಂದ್ರೀಕೃತ ಆಡಳಿತ ವ್ಯವಸ್ಥೆಯ ಘಟಕಗಳಲ್ಲ. ಅವು ಹುಟ್ಟಿಕೊಳ್ಳುವುದು,ಅವುಗಳ ಅಭಿವೃದ್ಧಿ,ಜನಪ್ರಿಯತೆ,ನಿರ್ವಹಣೆ,ಅವನತಿ ಇವೆಲ್ಲ ಆಯಾ ಕ್ಷೇತ್ರಗಳ ಕ್ರಿಯಾಶೀಲತೆಗೆ ಸಂಬಂಧಪಟ್ಟ ಖಾಸಗಿ ವಿಚಾರಗಳಾಗಿವೆ. ಅವುಗಳಿಗೆ ಭಕ್ತರು ನಾನಾ ಕಡೆಗಳಿಂದ ಬರುತ್ತಾರೆ ಎಂಬ ಕಾರಣಕ್ಕೆ ಅವು ಸಾರ್ವಜನಿಕವಲ್ಲ. ಏಕೆಂದರೆ ಆ ಭಕ್ತರಿಗೆ ಅಲ್ಲಿ ಬರಲೇಬೇಕೆಂಬ ನಿರ್ಬಂಧವಿಲ್ಲ.ಭಕ್ತರು ಆಯಾ ಕ್ಷೇತ್ರದ ರೀತಿ ರಿವಾಜುಗಳಿಗೆ ಗೌರವಕೊಟ್ಟೇ ಅಲ್ಲಿಗೆ ತಮ್ಮ ಇಷ್ಟಾರ್ಥಗಳನ್ನು ಪಡೆಯಲು ಅಲ್ಲಿಗೆ ಬಂದಿರುತ್ತಾರೆ.ಯಾರಿಗಾದರೂ ಹೊಸ ದೇವಾಲಯವನ್ನು ಕಟ್ಟಿ ಬೆಳೆಸುವ ಆಯ್ಕೆ ಮುಕ್ತವಾಗಿದೆ. ಹಾಗಾಗಿ ನಮ್ಮಲ್ಲಿ ಜಾತಿಗಳಿಗೆ,ಮತಗಳಿಗೆ,ಕುಲಗಳಿಗೆ,ಪ್ರದೇಶಗಳಿಗೆ,ಊರುಗಳಿಗೆ,ಗಲ್ಲಿಗಳಿಗೆ ಪ್ರತ್ಯೇಕದೇವಾಲಯಗಳು ಇರುವುದು.
ಶಾ ಬಾನು,ಫೆಮಿನಿಸಂ,ಸೆಕ್ಯುಲರಿಸಂ ಮತ್ತು ಸಮಾನ ನಾಗರೀಕ ಸಂಹಿತೆ
– ರಾಕೇಶ್ ಶೆಟ್ಟಿ
ದೇಶದಲ್ಲಿರುವ ಷರಿಯತ್ ಕೋರ್ಟುಗಳಿಗೆ ಕಾನೂನು ಮಾನ್ಯತೆಯಿಲ್ಲ.ಫತ್ವಾ ಹೊರಡಿಸುವುದು ಕಾನೂನು ಬಾಹಿರ ಎಂದು ಸುಪ್ರೀಂ ಕೋರ್ಟು ಇತ್ತೀಚೆಗೆ ನೀಡಿದ ತೀರ್ಪು ಮತ್ತೊಮ್ಮೆ “ಸಮಾನ ನಾಗರೀಕ ಸಂಹಿತೆ”ಯ ಜಾರಿಯ ಬಗ್ಗೆ ಚರ್ಚೆ ಶುರುವಾಗುವಂತೆ ಮಾಡಿದೆ. ಸಮಾನ ನಾಗರೀಕ ಸಂಹಿತೆಯ ಜೊತೆ ಜೊತೆಗೆ ಈ ತೀರ್ಪಿನ ಜೊತೆಗೆ ನೆನಪಾಗುವುದು ೮೦ರ ದಶಕದ ’ಶಾ ಬಾನು ಪ್ರಕರಣ’
ಏನಿದು ಶಾ ಬಾನು ಪ್ರಕರಣ : ಇಂದೋರಿನ ವಕೀಲ ಮೊಹಮ್ಮದ್ ಅಹ್ಮದ್ ಖಾನ್ ನ ಪತ್ನಿ ಶಾ ಬಾನು.ಮದುವೆಯಾಗಿ ೧೪ ವರ್ಷಗಳ ನಂತರ ಎರಡನೇ ಮದುವೆಯಾದ ಅಹ್ಮದ್ ಖಾನ್.ಇಬ್ಬರು ಹೆಂಡಿರ ಜೊತೆ ಸಂಸಾರ ನಡೆಸಿ ಕಡೆಗೆ ಕೆಲ ವರ್ಷಗಳ ನಂತರ ಐದು ಮಕ್ಕಳ ತಾಯಿಯಾಗಿದ್ದ ಶಾ ಬಾನುವನ್ನು ಆಕೆಯ ೬೨ನೇ ವಯಸ್ಸಿನಲ್ಲಿ ಆಕೆಯ ಐದು ಮಕ್ಕಳ ಜೊತೆಗೆ ಹೊರಹಾಕಿದ.ಒಪ್ಪಂದದಂತೆ ಮಾಸಿಕ ೨೦೦ ರೂ ಜೀವನಾಂಶವನ್ನು ಆಕೆಗೆ ನೀಡದಿದ್ದರ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ ಏಪ್ರಿಲ್ ೧೯೭೮ರಲ್ಲಿ ದಾವೆ ಹೂಡುತ್ತಾರೆ ಶಾ ಬಾನು.ಮಾಸಿಕ ೫೦೦ರೂ ಜೀವನಾಂಶ ಬೇಕೆಂದು ಕೇಳಿಕೊಳ್ಳುತ್ತಾರೆ.
ನವೆಂಬರ್ ೧೯೭೮ರಲ್ಲಿ ಖಾನ್ ಶಾ ಬಾನು ಅವರಿಗೆ ತಲಾಖ್ ನೀಡಿ,ಈಗ ಆಕೆ ನನ್ನ ಪತ್ನಿಯಲ್ಲ ಮತ್ತು ಆಕೆಗೆ ಇಸ್ಲಾಮಿಕ್ ಲಾ ಮೂಲಕ ಕೊಡಬೇಕಾದ ೫,೪೦೦ ರೂ ಬಿಟ್ಟರೆ ನಾನು ಇನ್ನಾವುದೇ ಹಣವನ್ನು ಕೊಡಬೇಕಾಗಿಲ್ಲ ಎಂದು ವಾದಿಸುತ್ತಾನೆ ಖಾನ್.ಆಗಸ್ಟ್ ೧೯೭೯ರಲ್ಲಿ ಸ್ಥಳೀಯ ನ್ಯಾಯಾಲಯ ಮಾಸಿಕ ೨೫ರೂ ನೀಡುವಂತೆ ತೀರ್ಪು ಕೊಟ್ಟಿತ್ತು.ಶಾ ಬಾನು ಕೇಸನ್ನು ಹೈಕೋರ್ಟಿಗೆ ಕೊಂಡೊಯ್ದರು.ಅಲ್ಲಿ ಶಾ ಬಾನು ಪರವಾಗಿ ೧೯೮೦ರ ಜುಲೈನಲ್ಲಿ ಬಂದ ತೀರ್ಪು ಮಾಸಿಕ ೧೭೯ ರೂ ನೀಡುವಂತೆ ತೀರ್ಪು ನೀಡುತ್ತದೆ.ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಖಾನ್ ಹೋಗುತ್ತಾನೆ.ಶಾ ಬಾನು ಈಗ ನನ್ನ ಪತ್ನಿಯಲ್ಲ ಇಸ್ಲಾಮಿಕ್ ಕಾನೂನಿಂತೆ ಆಕೆಗೆ ನಾನು ತಲಾಖ್ ನೀಡಿ ಎರಡನೇ ಮದುವೆಯಾಗಿದ್ದೇನೆ ಎನ್ನುತ್ತಾನೆ.