ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಾಡಿದ್ದುಣ್ಣೋ ಮಹಾರಾಯ’

6
ಆಗಸ್ಟ್

ಶತಮಾನ ಕಂಡ ಕಾದಂಬರಿ: ಮಾಡಿದ್ದುಣ್ಣೋ ಮಹಾರಾಯ

– ರಾಘವೇಂದ್ರ ಅಡಿಗ ಎಚ್ಚೆನ್

ಮಾಡಿದ್ದುಣ್ಣೋ ಮಹಾರಾಯಸ್ನೇಹಿತರೇ ನಾನಿಲ್ಲಿ ಹೇಳ ಹೊರಟಿರುವ ಕಾದಂಬರಿ ಕನ್ನಡ ಕಾದಂಬರಿಗಳಲ್ಲೆಲ್ಲಾ ಅತ್ಯಂತ ಪ್ರಮುಖವಾದದ್ದು ಹಾಗೂ ಒಂದು ಶತಮಾನವನ್ನು ಕಂಡಂತದೂ ಆಗಿದೆ. ಕನ್ನಡದಲ್ಲಿ ಕಾದಂಬರಿ ಪ್ರಕಾರವನ್ನು ಜನಪ್ರಿಯಗೊಳಿಸಿದವರು ಕಾರಂತರು, ಅ.ನ.ಕೃ. ಮುಂತಾದವರಾದರೆ ಕಾದಂಬರಿ ಪ್ರಕಾರವನ್ನು ಹುಟ್ಟುಹಾಕಿದವರು ಗುಲ್ವಾಡಿ ವೆಂಕಟರಾವ್ (ಇಂದಿರಾಬಾಯಿ-ಕನ್ನಡದ ಮೊದಲ ಸಾಮಾಜಿಕ ಕಾದಂಬರಿ) ಮೈಸೂರು ಸೂರ್ಯನಾರಾಯಣ ಭಟ್ಟ ಪುಟ್ಟಣ್ಣ (ಎಂ.ಎಸ್. ಪುಟ್ಟಣ್ಣ) ನವರುಗಳು. ಇದರಲ್ಲಿ ಎಂ.ಎಸ್. ಪುಟ್ಟಣ್ಣನವರು ಬರೆದ ಪ್ರಥಮ ಕಾದಂಬರಿ-ಮಾಡಿದ್ದುಣ್ಣೋ ಮಹಾರಾಯ (1915) ಗೆ ಇದೀಗ ಶತಮಾನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಕೃತಿಕಾರರಾದ ಪುಟ್ಟಣ್ಣ ಹಾಗೂ ಕೃತಿಯ ಕುರಿತಂತೆ ನಾಲ್ಕು ಮಾತುಗಳನ್ನು ನಿಮ್ಮೊಡನೆ ಹಂಚಿಕೊಳ್ಳುವ ಇರಾದೆ ನನ್ನದು.

ಅನೇಕರಿಗೆ ಇದಾಗಲೇ ಪುಟ್ಟಣ್ಣನವರ ಬಗೆಗೆ ತಿಳಿದಿರಬಹುದು ಆದರೂ ಇಲ್ಲಿ ಅವರ ಜೀವನದ ಕುರಿತಂತೆ ಸ್ವಲ್ಪ ತಿಳಿದುಕೊಂಡು ಬಳಿಕ ಕಾದಂಬರಿಯ ಕುರಿತು ವಿಚಾರ ಮಾಡೋಣ

ಪುಟ್ಟಣ್ಣ (ಲಕ್ಷ್ಮೀನರಸಿಂಹ ಶಾಸ್ತ್ರಿ)ನವರು ಹುಟ್ಟಿದ್ದು ಮೈಸೂರಿನಲ್ಲಿ (21-11-1854). ತಂದೆ ಸೂರ್ಯನಾರಾಯಣ ಭಟ್ಟ, ತಾಯಿ ಲಕ್ಷ್ಮಮ್ಮ. ಹುಟ್ಟಿದ ಹತ್ತು ದಿವಸದಲ್ಲೇ ತಾಯಿಯನ್ನು ಕಳೆದುಕೊಂಡು ಬೆಳದದ್ದು ಸೋದರ ಮಾವನ ಮನೆಯಲ್ಲಿ. ಪ್ರಾರಂಭಿಕ ವಿದ್ಯಾಭ್ಯಾಸ ಖಾಸಗಿ ಮಠಗಳಲ್ಲಿ ಪೂರೈಸಿದ ಪುಟ್ಟಣ್ಣನವರು ಬಳಿಕ ರಾಜಾ ಸ್ಕೂಲಿನಲ್ಲಿ (ಇಂದಿನದ ಮಹಾರಾಜಾ ಕಾಲೇಜು) ಎಫ್. ಎ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಕೋಲಾರದ ಪ್ರೌಢಶಾಲೆಯಲ್ಲಿ ಸಹ ಅಧ್ಯಾಪಕರಾಗಿ ನೇಮಕಗೊಂಡರು.ಮದರಾಸಿನಲ್ಲಿ ಬಿ.ಎ. ಪದವಿ ವ್ಯಾಸಂಗವನ್ನು ಮುಗಿಸಿದ ಇವರು ಅಧ್ಯಾಪಕ ಪದವಿ ಬಿಟ್ಟು ಬೆಂಗಳೂರಿನ ಚೀಫ್ ಕೋರ್ಟಿನಲ್ಲಿ (ಈಗಿನ ಹೈಕೋರ್ಟಿನಲ್ಲಿ) ಭಾಷಾಂತರಕಾರರಾಗಿ ದುಡಿದರು. 1867 ರಲ್ಲಿ ಅವರನ್ನು ಚಿತ್ರದುರ್ಗದ ಅಮಲ್ದಾರನ್ನಾಗಿ ನೇಮಿಸಲಾಯಿತು. ಮುಂದೆ ನೆಲಮಂಗಲ, ಚಾಮರಾಜನಗರ, ಬಾಗೇಪಲ್ಲಿ, ಮುಳಬಾಗಿಲು, ಹೊಸದುರ್ಗಗಳಲ್ಲಿ  ಅಮಲ್ದಾರರಾಗಿ  ಕಾರ್ಯ ನಿರ್ವಹಿಸಿದರು. ಬೆಂಗಳೂರಿನ ತೆರಿಗೆದಾರರ ಸಂಘಟಕರಾಗಿದ್ದ ಅವರು ಆ ದಿನಗಳಲ್ಲಿಯೇ ದಾಖಲೆಗಳನ್ನು ಕನ್ನಡದಲ್ಲಿ ಮೂಡಿಸಲು ಕಾರಣರಾದರು. Read more »