ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮುಸ್ಲಿಂ ತುಷ್ಟೀಕರಣ’

27
ಆಕ್ಟೋ

ಕ್ರೂರಿಯೇ ನಮ್ಮ ನಾಡಿನ ಆದರ್ಶ ವ್ಯಕ್ತಿಯಾಗಬೇಕೆ ?

– ಡ್ಯಾನಿ ಪಿರೇರಾ

ಭಾರತದ ಇತಿಹಾಸದುದ್ದಕ್ಕೂ ವಿವಾದಾತ್ಮಕ ವ್ಯಕ್ತಿಗಳನ್ನು ಈ ರಾಷ್ಟ್ರದ ಜನಮಾನಸದಲ್ಲಿ ಸರ್ವಮಾನ್ಯ ಮಾಡಬೇಕೆಂಬ ಪ್ರಯತ್ನ ನಿರಂತರವಾಗಿ ನಡೆದಿದೆ. ಬದಲಾದ ವ್ಯವಸ್ಥೆಯಲ್ಲಿ ಆಳುವವರ ಮರ್ಜಿಗೆ ಸಿಲುಕಿದ ಇತಿಹಾಸಕಾರರು ಮಿಥ್ಯೆಯನ್ನು ಸತ್ಯವೆಂದು ತುರುಕುವ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದಾರೆ. ಅವರ ಸಿದ್ಧಾಂತಗಳ ಮೂಸೆಯಲ್ಲಿ ದೇಶಭಕ್ತರು ಖಳನಾಯಕರಾದರೆ, ಖಳನಾಯಕರು ಬೆಳಗಾಗುವದರೊಳಗೆ ದೇಶಭಕ್ತರಾಗಿ ರೂಪಾಂತರಗೊಂಡಿದ್ದಾರೆ! ಈ ಹಿನ್ನೆಲೆಯಲ್ಲಿ ಎಂದಿನಂತೆ ಟಿಪ್ಪು ಜಯಂತಿ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಹಾಗಾಗಿ ಕೆಲವರಿಗೆ ಟಿಪ್ಪು ಜಾತ್ಯತೀತ ಮತ್ತೆ ಕೆಲವರಿಗೆ ಮತಾಂಧನಾಗಿ ಗೋಚರಿಸುತ್ತಿದ್ದಾನೆ. ಈ ದೇಶದ ವಿಚಿತ್ರವೇನೆಂದರೆ ಈ ದೇಶದಲ್ಲಿ ಮುಸಲ್ಮಾನರಲ್ಲೇ ಈ ದೇಶಕ್ಕೆ ಬಹುದೊಡ್ಡ ಕೊಡುಗೆಯನ್ನು ಕೊಟ್ಟ ಮಹನೀಯರಿದ್ದಾರೆ. ಅವರ್ಯಾರನ್ನೂ ಈ ಸಮಾಜ ಧರ್ಮದ ಹೆಸರಲ್ಲಿ ಗುರುತಿಸುವುದಿಲ್ಲ. ಅವರು ಇಸ್ಲಾಂ ಚಿಂತನೆಗಳೊಂದಿಗೆ ಬೆಳೆದರೂ ಬೆಳೆ ಬೆಳೆದಂತೆ ಅವರ ವಾಸ್ತವ ಬದುಕಿನ ತಮ್ಮ ಪ್ರಪಂಚವನ್ನು ವಿಶಾಲಗೊಳಿಸಿದ್ದರಿಂದ ಮುಸ್ಲೀಮೇತರರಲ್ಲೂ ಅವರು ಆದರಣೀಯರಾಗಿದ್ದಾರೆ. ದುರ್ದೈವವೆಂದರೆ ಅವರು ಹುಟ್ಟಿದ ಸಮಾಜದಲ್ಲೇ ಕಡೆಗಣಿಸಲ್ಪಟ್ಟಿರುವುದರಿಂದ ಈ ದೇಶದ ಸೆಕ್ಯುಲರ್ ಪಟ್ಟಿಯಲ್ಲಿ ಅವರಿಗೆ ಮಹತ್ವದ ಸ್ಥಾನವಿಲ್ಲ. ಮತ್ತಷ್ಟು ಓದು »

28
ಆಕ್ಟೋ

ಹಿಂದೂ-ವಿರೋಧಿ ಮಾಧ್ಯಮ: ಸೃಷ್ಟಿ ಮತ್ತು ಸ್ಥಿತಿ

– ಪ್ರೇಮಶೇಖರ

ಪೇಯ್ಡ್ ಮೀಡಿಯಾಪ್ರಕರಣ ೧: ಪ್ರಮುಖ ಕನ್ನಡ ದೈನಿಕವೊಂದರಲ್ಲಿ ಸೌದಿ ಅರೇಬಿಯಾದ ಬಗ್ಗೆ ಪರಿಚಯಾತ್ಮಕ ಲೇಖನವೊಂದು ಪ್ರಕಟವಾಗುತ್ತದೆ. ಅಚ್ಚರಿಯೆಂದರೆ ಮರುದಿನವೂ ಅದೇ ಲೇಖನ ಮತ್ತೆ ಕಾಣಿಸಿಕೊಳ್ಳುತ್ತದೆ!  ಅದರ ಕೆಳಗೆ ಹೀಗೊಂದು ವಿವರಣೆ: “ನಿನ್ನೆಯ ದಿನ ಸೌದಿ ಅರೇಬಿಯಾವನ್ನು ಕುರಿತು ನೀಡಿದ ವಿವರಣೆಯಲ್ಲಿ ಮಹಮದ್ ಪೈಗಂಬರ್ ಮೆಕ್ಕಾದಿಂದ ಮದೀನಾಕ್ಕೆ ಕ್ರಿ.ಶ. ೬೨೨ರಲ್ಲಿ ಓಡಿಹೋದರು. ಅಂದಿನಿಂದ ಹಿಜ್ರಾ ಶಕೆ ಪ್ರಾರಂಭವಾಗುತ್ತದೆ ಎಂದು ಪ್ರಕಟವಾಗಿತ್ತು.ಇದರಿಂದ ಅನೇಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ತಿಳಿದುಬಂದಿದೆ. ಅದಕ್ಕಾಗಿ ಪತ್ರಿಕೆ ಕ್ಷಮೆ ಯಾಚಿಸುತ್ತದೆ ಹಾಗೂ ಇಂದು ಅದೇ ಲೇಖನವನ್ನು ತಿದ್ದಿ ಪ್ರಕಟಿಸಲಾಗಿದೆ.” ಮರುಪ್ರಕಟವಾಗಿದ್ದ ಲೇಖನದಲ್ಲಿ ಪೈಗಂಬರರು ಮದೀನಾಗೆ ಓಡಿಹೋದ ಬಗೆಗಿನ ಒಂದು ಸಾಲು ಮಾಯವಾಗಿರುತ್ತದೆ.

ಪ್ರಕರಣ ೨: ಕೆಲದಿನಗಳ ನಂತರ ಅದೇ ಪತ್ರಿಕೆಯಲ್ಲಿ ಸ್ವಾಮಿ ವಿವೇಕಾನಂದರ ಬಗ್ಗೆ ಲೇಖನವೊಂದು ಪ್ರಕಟವಾಗುತ್ತದೆ.ವಿವೇಕಾನಂದರ ದೈಹಿಕ ಸಮಸ್ಯೆಗಳು,ಬಲಹೀನತೆಗಳ ಬಗ್ಗೆ ಅದರಲ್ಲಿನ ವಿಷಯಗಳಾವುವೂ ಹೊಸದಾಗಿರುವುದಿಲ್ಲ.  ಅವೆಲ್ಲವೂ ಕೊಲ್ಕತಾದ ರಾಮಕೃಷ್ಣ ಮಿಶನ್ ಮತ್ತು ಅಲ್ಮೋರಾದ ಅದ್ವೈತಾಶ್ರಮಗಳ ಪ್ರಕಟಣೆಗಳಲ್ಲೇ ಇವೆ.ಆದರೆ ಲೇಖನದ ಭಾಷೆ, ಕೆಲ ಪದಗಳು ಅಕ್ಷೇಪಾರ್ಹವಷ್ಟೇ ಅಲ್ಲ, ಪತ್ರಿಕೆಯ ಘನತೆಗೂ ಶೋಭೆ ತರುವಂತಿರುವುದಿಲ್ಲ.ಇದರಿಂದಾಗಿ ಹಲವರ ಭಾವನೆಗಳಿಗೆ ಧಕ್ಕೆಯಾಗುತ್ತದೆ.ಅದು ರಾಜ್ಯದ ವಿವಿಧೆಡೆ ಸಾರ್ವಜನಿಕವಾಗಿಯೂ ವ್ಯಕ್ತವಾಗುತ್ತದೆ.ಅದಕ್ಕೆ ಪತ್ರಿಕೆಯ ಪ್ರತಿಕ್ರಿಯೆ? ಒಂದಕ್ಷರದ ಕ್ಷಮಾಯಾಚನೆಯೂ ಇಲ್ಲ!

ಮತ್ತಷ್ಟು ಓದು »

11
ಆಕ್ಟೋ

ದಲಿತ ನಾಯಕರಿಗೆ ದಲಿತರ ಮೇಲೇಕಿಲ್ಲ ಕಾಳಜಿ?

 – ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

shindheರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿಯ ಮುನ್ನಾ ಎರಡು ದಿನಗಳಲ್ಲಿ ದೇಶದ ಗೃಹ ಮಂತ್ರಿಗಳು, ಕರ್ನಾಟಕದ ಮುಖ್ಯಮಂತ್ರಿಗಳು ಸೇರಿ ನಾಲ್ವರು ರಾಜಕಾರಣಿಗಳು ಇದ್ದಕ್ಕಿದ್ದಂತೆ ಅಲ್ಪಸಂಖ್ಯಾತರ ಮೇಲೆ ಪ್ರೀತಿ, ಕಾಳಜಿ ರಕ್ಷಣೆಯ ಮಾತುಗಳನ್ನಾಡಿದ್ದಾರೆ. ಪ್ರಮುಖವಾಗಿ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂದೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಮಾಯಕ ಮುಸ್ಲಿಂ ಯುವಕರನ್ನು ಬಂಧಿಸಬೇಡಿ ಎಂದಿದ್ದಾರೆ.

ಸಮಾಜವಾದಿ ಪಕ್ಷದ ರಾಷ್ಟ್ರಾಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಪೊಲೀಸ್ನ ಹಾಲಿ ನಿರ್ದೇಶಕರಿಗೆ ಪತ್ರ ಬರೆದು ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲಿ 2 ರಿಂದ 3 ಮಂದಿ ಮುಸ್ಲಿಂ ಸಿಬ್ಬಂದಿಗಳನ್ನು ನೇಮಿಸುವಂತೆ ಆದೇಶಿಸಿದ್ದಾರೆ. ಅದೇ ರೀತಿ ಅಲ್ಪಸಂಖ್ಯಾತ ಸಮುದಾಯದ ಖಾತೆ ಪಡೆದಿರುವ ಕೆ. ರೆಹಮಾನ್ ಖಾನ್ ಕೂಡ ಮುಸ್ಲಿಂ ಯುವಕರನ್ನು ಬಂಧಿಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ಇನ್ನು ಅಹಿಂದ ಹೋರಾಟದ ಹಿನ್ನೆಲೆಯಲ್ಲಿ ಬಂದಿರುವ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಮೇಲೆ ‘ಎಲ್ಲೋ’ ದೌರ್ಜನ್ಯ ನಡೆಸಿದರೆ ಪರಿಣಾಮ ನೆಟ್ಟಗೆ ಇರುವುದಿಲ್ಲವೆಂಬ ಕಠೋರ ಸಂದೇಶ ಕೊಟ್ಟಿದ್ದಾರೆ. ಹೀಗೆ ಒಂದು ಸಮುದಾಯದ ಬಗೆಗಿನ ಕಾಳಜಿ ವ್ಯಕ್ತಪಡಿಸುವ ಮೂಲಕ ಭಾರತದಲ್ಲಿ ದಲಿತರು ಕೂಡ ನಿತ್ಯವೂ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂಬುದನ್ನು ಮರೆತಿರುವ ಈ ನಾಯಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸುವುದು ಅನಿವಾರ್ಯವೆನಿಸುತ್ತಿದೆ.

ಮತ್ತಷ್ಟು ಓದು »