ಪ್ರೇತದ ಆತ್ಮ ಚರಿತೆ! (ಭಾಗ ೪)
– ಶ್ರೀಕಾಂತ್ ಶೆಟ್ಟಿ
ಪ್ರೇತದ ಆತ್ಮ ಚರಿತೆ! (ಭಾಗ ೧)
ಪ್ರೇತದ ಆತ್ಮ ಚರಿತೆ! (ಭಾಗ ೨)
ಪ್ರೇತದ ಆತ್ಮ ಚರಿತೆ! (ಭಾಗ 3)
ಆಗಷ್ಟ್ ೩೦ ೧೭೭೩ ಇಡಿ ಪುಣೆ ಗಣೇಶ ಉತ್ಸವದ ಸಂಭ್ರಮದಲ್ಲಿ ಮುಳುಗೇಳುತ್ತಿದೆ. ಕೇಸರಿ ಗುಲಾಬಿ ರಂಗಿನೋಕುಳಿಗೆ ನಗರ ನವಶೃಂಗಾರಗೊಂಡಿದೆ. ಶನಿವಾರವಾಡೆಯಲ್ಲೂ ಉತ್ಸವ ಕಳೆಗಟ್ಟಿತ್ತು. ಹಾಡು, ಕುಣಿತ, ಕೀರ್ತನೆ,ಆರತಿ, ಸಂತರ್ಪಣೆ ಭರ್ಜರಿಯಾಗಿ ನಡೆದಿತ್ತು. ಪೇಶ್ವಾಗಳ ಆರಾಧ್ಯಮೂರ್ತಿ ಚಿಂತಾಮಣಿ ಗಣಪತಿಯ ಪೂಜೆ ಆಗಷ್ಟೆ ಮುಗಿದು ಎಲ್ಲರೂ ವರ್ಷಕ್ಕಾಗುವಷ್ಟು ಸಂಭ್ರಮವನ್ನು ಮನದಲ್ಲಿ ತುಂಬಿಕೊಂಡು ಮರಳಿದರು. ವಾಡೆಯಲ್ಲಿ ಕಾವಲು ಭಟರು ಮತ್ತು ಪರಿಚಾರಕ ವರ್ಗವನ್ನು ಬಿಟ್ಟು ಉಳಿದವರೆಲ್ಲರೂ ತಮ್ಮ ತಮ್ಮ ಸ್ವಸ್ಥಾನ ಸೇರಿಕೊಂಡಿದ್ದರು. ಮಹಾ ದುರಂತವೊಂದು ನಡೆಯುವ ಮೊದಲು ಆವರಿಸುವ ಅಸಾದ್ಯ ನೀರವತೆ ವಾಡೆಯನ್ನು ಆವರಿಸಿಕೊಂಡಿತ್ತು. ರಂಗ ಮಹಲ್ ಕಡೆಯಿಂದ ಐದಾರು ದೀವಟಿಕೆಗಳು ಒಳಪ್ರವೇಶಿಸಿದವು. ಖಿಡ್ಕಿ ದರವಾಜಾ ಬಳಿ ಎರಡು ಬಟ್ಟೆ ಸುತ್ತಿದ ಮುಖಗಳು ಗೋಚರಿಸಿದವು. ಕ್ಷಣಮಾತ್ರದಲ್ಲೇ ಶನಿವಾರವಾಡೆಯ ಹಜಾರಗಳಲ್ಲಿ ಹತ್ತಾರು ಗುಂಪುಗಳ ಹೆಜ್ಜೆಯ ಸಪ್ಪಳ ಮೊಳಗಿತು. ವಾಡೆಯ ಮುಖ್ಯದ್ವಾರದ ಬಳಿ ಐವತ್ತು ಜನರಿದ್ದ ಸೇನಾ ತುಕುಡಿಯೊಂದು ಬಂದು ನಿಂತಿತು. ಗುಂಪಿನ ನಾಯಕ ಸುಮೇರು ಸಿಂಗ್ ಕಾವಲುಗಾರನ ಬಳಿ ಬಂದು ಕೂಡಲೆ ಪೇಶ್ವಾ ಅವರನ್ನು ಕಾಣಬೇಕು ತುರ್ತು ಕೆಲಸವಿದೆ ಎಂದ. ಈಗ ಪೇಶ್ವಾ ಅವರು ನಿದ್ದೆಯಲ್ಲಿದ್ದಾರೆ. ನಾಳೆ ಬಂದು ಭೇಟಿಯಾಗಿ ಎಂದ ಮುಖ್ಯದ್ವಾರದ ರಕ್ಷಣೆಯಲ್ಲಿದ್ದ ಮಹಾದಜಿ ಗೋರೆ… ಮಾತು ಪೂರ್ಣಗೊಳ್ಳುವ ಮೊದಲೇ ಸುಮೇರು ಸಿಂಗ್ ಓರೆಯಿಂದ ಕತ್ತಿ ಹೊರಬಂದು ಗೋರೆಯ ಹೊಟ್ಟೆ ಸೀಳಿ ಹಾಕಿತು. ತುಕುಡಿಯನ್ನು ಒಳನುಗ್ಗುವಂತೆ ಸುಮೇರ್ ಆದೇಶಿಸಿದ ಕೇವಲ ಹತ್ತು ನಿಮಿಷದಲ್ಲೇ ವಾಡೆ ಸುಮೇರು ಸಿಂಗ್ ಕೈವಶವಾಯಿತು. ಆ ವಾಡೆಯ ಕೆಳ ಅಂತಸ್ತಿನಲ್ಲೇ ರಘುನಾಥ ರಾವ್, ಆನಂದಿ ಬಾಯಿ ವಾಸವಾಗಿದ್ದರು. ಸುಮೇರು ಸಿಂಗ್ ಹಿಂಬಾಲಕರು ವಾಡೆಯ ಕಾವಲಿಗಿದ್ದವರನ್ನು ತರಿದು ಹಾಕಿದರು. ಘನಘೊರ ರಕ್ತಪಾತ ನಡೆಯಿತು. ಕೆಲವೇ ಗಂಟೆಗಳ ಮೊದಲು ಚೌತಿಯ ಸಡಗರದಲ್ಲಿ ಗಿಜಿಗುಟ್ಟುತ್ತಿದ್ದ ಶನಿವಾರವಾಡೆ ಈಗ ಅಕ್ಷರಶಃ ಸ್ಮಶಾನವಾಗಿ ಮಾರ್ಪಟ್ಟಿತ್ತು. ವಾಡೆಯ ಮೊದಲ ಅಂತಸ್ತಿನ ತೇಗದ ಮುಚ್ಚಿಗೆಗಳಿಂದ ರಕ್ತ ಒಸರ ತೊಡಗಿತು. ಸುಮೇರು ಸಿಂಗ್ ನಾರಾಯಣ ಪೇಶ್ವಾ ಮಲಗಿದ್ದ ಕೋಣೆಗೆ ನುಗ್ಗಿದ. ವಾಡೆಯಲ್ಲಿ ಆಹಾಕಾರ ಚೀತ್ಕಾರಗಳು ಎದ್ದಿರುವುದನ್ನು ಕಂಡು ನಾರಾಯಣನಿಗೆ ಪರಿಸ್ಥಿತಿಯ ಅರಿವಾಯಿತು. ಮತ್ತಷ್ಟು ಓದು
ಪ್ರೇತದ ಆತ್ಮ ಚರಿತೆ! (ಭಾಗ ೧)
– ಶ್ರೀಕಾಂತ್ ಶೆಟ್ಟಿ
ಒಂದು ಪ್ರೇತದ ಕತೆ. ಆ ಒಂದು ಪ್ರೇತ ಮಾಡಿದ ಆವಾಂತರಕ್ಕೆ ಇತಿಹಾಸವೇ ಹೊಸ ತಿರುವು ಪಡೆದುಕೊಂಡು ಬಿಟ್ಟಿತು. ಈ ಭೂತ ಪ್ರೇತ ಇದೆಲ್ಲಾ ಇದೆಯೋ ಇಲ್ಲವೋ, ಇದ್ದರೆ ವೈಜ್ಞಾನಿಕ ಕಾರಣ ಕೊಡಿ. ಅದರ ಇರುವನ್ನು ಸಾಬೀತು ಮಾಡಿ ಎನ್ನುವವರಿಗೆ ಈ ಕತೆ ಹೇಳಿ ಮಾಡಿಸಿದ್ದಲ್ಲ. ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ಉಳಿದುಕೊಂಡು ಬಂದಿರುವ ದಂತಕತೆಯನ್ನು ಆಧಾರವಾಗಿಟ್ಟುಕೊಂಡು ಈ ಸರಣಿಯನ್ನು ಬರೆಯುತ್ತಿದ್ದೇನೆ. ಇದರಲ್ಲಿ ಕೇವಲ ಪ್ರೇತ ಮಾತ್ರ ಬಂದು ಹೋಗುವುದಿಲ್ಲ. ಹದಿನೆಂಟನೇ ಶತಮಾನದಲ್ಲಿ ಭೂಮಿ ನಡುಗಿಸುವಷ್ಟು ಸೇನೆ ಕಟ್ಟಿಕೊಂಡು, ಮೊಘಲರನ್ನು ಬೇರು ಸಮೇತ ಕಿತ್ತೊಗೆದ ಮರಾಟಾ ಪೇಶ್ವಾಗಳು ಬರುತ್ತಾರೆ. ಉತ್ತರದ ಹಿಮಾಲಯದಿಂದ ದಕ್ಷಿಣದ ಕೃಷ್ಣಾ ನದಿ ದಂಡೆಯವರೆಗೆ ಪೇಶ್ವಾಗಳ ಕತ್ತಿಯ ಅಬ್ಬರ, ಕುದುರೆಗಳ ಹೇಷಾರವ, ಮದೋನ್ಮತ್ತ ಆನೆಗಳ ಹೂಂಕಾರ.. ನಭವನ್ನೇ ನಡುಗಿಸುವ ಮರಾಠಾ ಮಾವಳಿಗಳ ಹರಹರಾ ಮಹಾದೇವ ರಣಘರ್ಜನೆ.. ಚಿತ್ಪಾವನ ಬ್ರಾಹ್ಮಣ ರಣಕಲಿಗಳ ಅಪ್ರತಿಮ ರಣತಂತ್ರ.. ಒಂದು ಶತಮಾನ ಕಾಲ ವಿಜೃಂಭಿಸಿದ ಮರಾಠ ಶಕ್ತಿಯ ವಿವಿಧ ಮುಖ ಪರಿಚಯ ಇಲ್ಲಿ ನಿಮಗಾಗಲಿದೆ.
ಬೊಳುವಾರರ “ಮುಸ್ಲಿಮನಾಗಿರುವುದೆಂದರೆ…” ಲೇಖನದ ಸುತ್ತ ಒಂದು ಚರ್ಚೆ- ಭಾಗ೨
ಬೊಳುವಾರರ “ಮುಸ್ಲಿಮನಾಗಿರುವುದೆಂದರೆ…” ಲೇಖನದ ಸುತ್ತ ಒಂದು ಚರ್ಚೆ ಭಾಗ೧
– ಪ್ರೇಮಶೇಖರ
ಶ್ರೀಯುತ ದಿನೇಶ್ ಅಮೀನ್,
ನಿಮ್ಮ ಉತ್ತರದ ಮೊದಲೆರಡು ಕಂತುಗಳನ್ನು ಓದಿ, ಅವುಗಳಲ್ಲಿನ ಕೊಂಕು ಮತ್ತಿತರ ನಕಾರಾತ್ಮಕ ಅಂಶಗಳನ್ನು ನಿರ್ಲಕ್ಷಿಸಿ, ಅವುಗಳಲ್ಲಿರುವ ವೈಚಾರಿಕತೆಯನ್ನಷ್ಟೇ ಗಮನಕ್ಕೆ ತೆಗೆದುಕೊಂಡೆ. ನಿಮ್ಮ ಮಾತುಗಳಿಗೆ ರೋಹಿತ್ ಚಕ್ರತೀರ್ಥರು ಸಮರ್ಪಕವಾಗಿಯೇ ಉತ್ತರಿಸಿದ್ದಾರೆ. ಆದಾಗ್ಯೂ, ನಿಮಗೆ ಉತ್ತರಿಸಬೇಕಾದ್ದು ನನ್ನ ಜವಾಬ್ಧಾರಿ ಎಂಬ ಅರಿವಿನಿಂದ ದೀರ್ಘ ವಿವರಣೆಗಳುಳ್ಳ ಪ್ರತಿಕ್ರಿಯೆಯನ್ನು ಸಿದ್ಧಪಡಿಸಿದ್ದೆ. ಇಸ್ಲಾಂ ಏಶಿಯಾ, ಯೂರೋಪ್ ಮತ್ತು ಆಫ್ರಿಕಾಗಳ ಬಹುಪಾಲು ನಾಡುಗಳಿಗೆ ಪ್ರಸರಿಸಿದ್ದು ಆಕ್ರಮಣದ ಮೂಲಕ ಎಂದು ಹೇಳಲು ಬಳಸಿದ ‘ಕತ್ತಿಯ ಮೂಲಕ’ ಎಂಬ ಮಾತನ್ನು ನೀವು ತಿಳಿದೋ ತಿಳಿಯದೆಯೋ ಅಪಾರ್ಥ ಮಾಡಿಕೊಂಡು ಕತ್ತಿಯ ಉಗಮದ ಬಗ್ಗೆ ಮಾತೆತ್ತಿ ಇಡೀ ಚರ್ಚೆಯನ್ನು ದಾರಿ ತಪ್ಪಿಸಲು ಹೋದ ನಿಮ್ಮ ವಾದಸರಣಿ; ಹಿಂದೂ-ಮುಸ್ಲಿಂ ಎಂದು ಧಾರ್ಮಿಕ ಸಂಘರ್ಷದ ಬಗ್ಗೆ ಹೇಳುತ್ತಲೇ ಹಠಾತ್ತಾಗಿ ಕಾಂಗ್ರೆಸ್-ಬಿಜೆಪಿ (ಗುಜರಾತ್ ೨೦೦೨-ದೆಹಲಿ ೧೯೮೪) ಎಂದು ರಾಜಕೀಯ ಆಯಾಮಕ್ಕೆ ಜಿಗಿಯುವ ನಿಮ್ಮ ಗೊಂದಲಮಯ ಚಿಂತನಾಧಾಟಿ; ರಕ್ತಪಾತಕ್ಕೆ ಸಂಬಂಧಿಸಿದಂತೆ ಹಿಂದೂಗಳ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಅದೇ ವಿಷಯಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದ ಬಗ್ಗೆ ಪಕ್ಷಪಾತಿ ನಿಲುವು ತೋರುವ ನಿಮ್ಮ ವಿರೋಧಾಭಾಸಪೂರ್ಣ, ಅತಾರ್ಕಿಕ ನಡೆಗಳು- ಎಲ್ಲವುಗಳತ್ತ ಸೂಕ್ತ ಉದಾಹರಣೆಗಳ ಮೂಲಕ ನಿಮ್ಮ ಗಮನ ಸೆಳೆಯಲು ಪ್ರಯತ್ನಿಸಿದ್ದೆ. ಅದು ನಮ್ಮ ನಾಡಿನ ಇತಿಹಾಸದ ಬಗ್ಗೆ, ವರ್ತಮಾನದ ಬಗ್ಗೆ ಒಂದು ಆರೋಗ್ಯಕರ ಚರ್ಚೆಗೆ ಅವಕಾಶ ಮಾಡಿಕೊಡುತ್ತದೆಂದು ನಂಬಿದ್ದೆ. ಆದರೆ ನಿಮ್ಮ ನಾಲ್ಕನೆಯ ಕಂತನ್ನು ಓದಿದ ನಂತರ ನಿಮ್ಮೊಂದಿಗೆ ನಾಗರಿಕ ವಿಧಾನದಲ್ಲಿ ಸಂವಾದ ನಡೆಸುವುದು ಸಾಧ್ಯವಿಲ್ಲ ಎಂದರಿವಾಯಿತು. ಇಷ್ಟಾಗಿಯೂ, ಸುಮ್ಮನುಳಿದುಬಿಡುವುದೂ ಸರಿಯೆನಿಸಲಿಲ್ಲ. ಹೀಗಾಗಿ ಆ ದೀರ್ಘ, ವಿವರಣಾತ್ಮಕ ಉತ್ತರವನ್ನು ಬದಿಗಿರಿಸಿ ಒಂದೆರಡು ಮೂಲಭೂತ ಪ್ರಶ್ನೆಗಳನ್ನಷ್ಟೇ ಎತ್ತಿಕೊಂಡು ಆ ಬಗ್ಗೆ ಸಂಕ್ಷಿಪ್ತವಾಗಿ ನಿಮಗೆ ಕೆಲವು ಮಾತುಗಳನ್ನು ಹೇಳಲು ಇಲ್ಲಿ ಪ್ರಯತ್ನಿಸಿದ್ದೇನೆ. ಇವುಗಳಲ್ಲಿ ಹೆಚ್ಚಿನವು ನಾನು ಸ್ವಂತ ಅಧ್ಯಯನ, ಅವಲೋಕನ, ಚಿಂತನೆಯ ಮೂಲಕ ಗಳಿಸಿದವುಗಳಾದ್ದರಿಂದ ನಿಮಗೆ ಬೇರೆಲ್ಲೂ ಸಿಗಲಾರವು. “ನಾನು ಲೇಖಕನ ವ್ಯಕ್ತಿತ್ವವನ್ನು ಆತನ ಲೇಖನಗಳ ಮೂಲಕವೇ ಅರ್ಥಮಾಡಿಕೊಳ್ಳುತ್ತಾ ಬಂದವನು” ಎಂದು ವಾರದ ಹಿಂದೆ ಘೋಷಿಸಿದ ನೀವು ನಿಮ್ಮ ಮಾತಿಗೆ ಸತ್ಯವಾಗಿ ನಡೆದುಕೊಂಡಿದ್ದರೆ ಇದನ್ನೆಲ್ಲಾ ಹೇಳಬೇಕಾದ ಅಗತ್ಯ ನನಗೆ ಬರುತ್ತಲೇ ಇರಲಿಲ್ಲ.
ಮೊದಲಿಗೆ ಒಂದು ಸ್ಪಷ್ಟೀಕರಣ- ಮಾನವರೆಲ್ಲರೂ ಸಮಾನರು ಎಂಬ ಧೃಡನಂಬಿಕೆಯ ತಳಹದಿಯ ಮೇಲೆ ಗಟ್ಟಿಯಾಗಿ ನಿಂತು ಎಲ್ಲ ಬಗೆಯ ಹಿಂಸೆ, ಶೋಷಣೆ, ತಾರತಮ್ಯಗಳನ್ನು ತಿರಸ್ಕರಿಸುವುದು ನನ್ನ ಜೀವನಮೌಲ್ಯ. ವಿಮರ್ಶೆಯನ್ನು ಸ್ವಾಗತಿಸುವ ಧರ್ಮದ ವಿರುದ್ಧ ಪುಂಖಾನುಪುಂಖ ಹೇಳಿಕೆ ನೀಡುವ, ವಿಮರ್ಶೆಗೆ ಬದಲಾಗಿ ತಲೆದಂಡ ಕೇಳುವ ಧರ್ಮದ ಬಗ್ಗೆ ಜಾಣಮೌನ ವಹಿಸುವ ಚತುರಮತಿ ಬುದ್ಧಿಜೀವಿ ನಾನಲ್ಲ. ಅಲ್ಲದೇ, ಹಣ, ಪ್ರಶಸ್ತಿ, ಸ್ಥಾನಮಾನಗಳ ಹುಚ್ಚೂ ನನಗಿಲ್ಲ.