ವಿಷಯದ ವಿವರಗಳಿಗೆ ದಾಟಿರಿ

Posts tagged ‘ಯೋಧ’

29
ಏಪ್ರಿಲ್

ಯೋಧನ ಮಾತುಗಳಲ್ಲಿ…

ಸುರೇಶ್ ಮುಗ್ಬಾಳ್

ತಿಪಟೂರು

downloadಛತ್ತೀಸಘಡದಲ್ಲಿನ ನಕ್ಸಲರ ಕ್ರೌರ್ಯಕ್ಕೂ, ಹತ್ಯೆಯಾದ 25 ಯೋಧರಿಗೂ ಅದೇನು ದ್ವೇಷಗಳಿತ್ತೋ ಏನೋ ಯಾರಿಗೂ ಗೊತ್ತಿಲ್ಲ. ಆದರೆ 300 ಜನ ನಕ್ಸಲರ ಗುಂಪು ಏಕಾ-ಏಕಿ CRPF ಯೋಧರಿದ್ದಲ್ಲಿಗೆ ನುಗ್ಗಿ ಒಂದೇ ಸಮನೆ ಗುಂಡು ಹಾರಿಸಿಬಿಟ್ಟಿದ್ದರು. ಕಾರಣ; ಗುಂಡುಹಾರಿಸಿಕೊಂಡು ಸತ್ತವರೆಲ್ಲಾ ಯೋಧರಾಗಿದ್ದರು, ಸೇನಾ ಸಮವಸ್ತ್ರದಲ್ಲಿದ್ದರು ಮತ್ತು ಸರ್ಕಾರದ ಪರ ಕೆಲಸ ಮಾಡುವವರಾಗಿದ್ದರು ಅಷ್ಟೇ. ವೈಯಕ್ತಿಕ ದ್ವೇಷ ಖಂಡಿತ ಯಾರಿಗೂ ಇದ್ದಿರಲಿಕ್ಕಿಲ್ಲ. ಮತ್ತಷ್ಟು ಓದು »

8
ಆಗಸ್ಟ್

ಸುಮ್ಮ ಸುಮ್ಮನೆ ಬರಲಿಲ್ಲ ಕನ್ನಡಕ್ಕೆ ಮಹಾವೀರ ಚಕ್ರ ; ಇವರು ಮಹಾವೀರತೆಯ ಜೀವಂತ ಸ್ಮಾರಕ

– ಸಂತೋಷ್ ತಮ್ಮಯ್ಯ

9ದೇಶದ ಎರಡನೆಯ ಅತಿದೊಡ್ಡ ಶೌರ್ಯ ಪದಕ ಮಹಾವೀರ ಚಕ್ರ ಪದಕದ ಗೌರವಕ್ಕೆ ಪಾತ್ರರಾದ ಇಬ್ಬರು ಮಹಾಯೋಧರಲ್ಲಿ ಲೆ.ಕರ್ನಲ್ ಪಿ.ಎಸ್. ಗಣಪತಿ ಎರಡನೆಯವರು. ಅವರ ಬಗ್ಗೆ ಪತ್ರಿಕೆಗಳಲ್ಲಿ ಬಂದಿಲ್ಲ, ಟಿ ವಿ ಅವರ ಸಂದರ್ಶನ ನಡೆಸಿಲ್ಲ. ಅವರು ಸಭೆ ಸಮಾರಂಭಗಳಿಗೆ ಹೋಗಿಲ್ಲ. ಅವರ ಬಗ್ಗೆ ನಾಡಿನ ಜನಕ್ಕೆ ಏನೆಂದರೆ ಏನೂ ತಿಳಿದಿಲ್ಲ. ಅವರ ಸಂಪರ್ಕ ಸಂಖ್ಯೆ: 9980009687

ನೋಡಲು ಅದೊಂದು ಲೋಹದ ಬಿಲ್ಲೆ. ಅದರಲ್ಲಿ ನಕ್ಷತ್ರದ ಚಿಹ್ನೆ. ಅದರ ಅಂಚಿನಲ್ಲಿ ಕಂಡೂ ಕಾಣದಂತೆ ಕೆತ್ತಿದ ಪಡೆದವರ ಹೆಸರು, ಪಡೆದ ದಿನಾಂಕ. ಕದನಕ್ಕೆ ತೆರಳಿದ ಪ್ರತೀ ಯೋಧನಿಗೂ ಅದನ್ನು ಪಡೆಯುವ ಅದಮ್ಯ ಹಂಬಲ. ಏಕೆಂದರೆ ಅದು ವೀರತೆಯ ಪ್ರತೀಕ. ಹೆಸರು ಮಹಾವೀರ ಚಕ್ರ. ಯುದ್ಧಕಾಲದಲ್ಲಿ ಮಹಾಪರಾಕ್ರಮಕ್ಕೆ ನೀಡುವ ಎರಡನೆಯ ಅತೀ ದೊಡ್ಡ ಶೌರ್ಯ ಪ್ರಶಸ್ತಿ. ಬ್ರಿಟಿಷ್ ಸೈನ್ಯದಲ್ಲಿ ‘ಡಿಶ್ಟಿಂಗ್ವಿಸ್ಡ್ ಸರ್ವೀಸ್ ಕ್ರಾಸ್’ ಹೇಗೋ ಹಾಗೆ ಭಾರತಕ್ಕೆ ಈ ಮಹಾವೀರ ಚಕ್ರ. ಮಹಾ ಸಮರಪಡೆಯನ್ನು ಹೊಂದಿರುವ ಭಾರತದಲ್ಲಿ ೧೯೪೭ರಿಂದ ಇದುವರೆಗೆ ಮಹಾವೀರ ಚಕ್ರದ ಗೌರವಕ್ಕೆ ಪಾತ್ರರಾದವರು ಕೇವಲ ೨೧೮ ಮಂದಿ ವೀರರು. ಅವರಲ್ಲಿ ೬ ಜನ ಯೋಧರು ಮಹಾವೀರ ಚಕ್ರವನ್ನು ಎರಡೆರಡು ಬಾರಿ ಪಡೆದ ವೀರರಲ್ಲಿ ವೀರರು (MahaVira chakra bar). ಹೀಗಿರುವಾಗ ಭಾರತೀಯ ಸೈನ್ಯಕ್ಕೆ ಮಹಾಮಹಾ ಯೋಧರನ್ನು ನೀಡಿದ ನಮ್ಮ ಕರ್ನಾಟಕದಲ್ಲಿ ಇದನ್ನು ಪಡೆದವರಾರು ಎಂದು ನೋಡಿದರೆ ಕಾಣುವವರು ಕನ್ನಡದ ಇಬ್ಬರು ಮಹಾರ ಚಕ್ರಧರರು. ಅವರಲ್ಲೊಬ್ಬರು ‘ಟೈಗರ್ ಆಫ್ ಸರ್ಗೋದಾ’ ಎಂದು ಖ್ಯಾತರಾದ ಸ್ಕ್ವಾ.ಲೀ.ಅಜ್ಜಾಮಾಡ ಬಿ.ದೇವಯ್ಯ. ಮತ್ತೊಬ್ಬರು ಮೇ.(ನಂತರ ಲೆ.ಕರ್ನಲ್)ಪಿ.ಎಸ್ ಗಣಪತಿ. ಒಬ್ಬರು ಅಮರಯೋಧ. ಮತ್ತೊಬ್ಬರು ಮಹಾವೀರತೆಯ ಜೀವಂತ ಸ್ಮಾರಕ. ಮತ್ತಷ್ಟು ಓದು »

11
ಏಪ್ರಿಲ್

‘ದೇಶ ಮೊದಲು’ ಎಂದ ಕದನ ಕಲಿಗಳ ಆತ್ಮ ಸಮ್ಮಾನವನ್ನು ದೇನಿಸುತ್ತಾ….

– ರಾಘವೇಂದ್ರ ಅಡಿಗ ಎಚ್ಚೆನ್

ಕಾರ್ಗಿಲ್ ಯುದ್ಧಯಾರೇ ಒಬ್ಬ ವ್ಯಕ್ತಿ ಸೈನ್ಯಕ್ಕೆ ಸೇರುತ್ತಾನೆಂದರೆ ಆ ವ್ಯಕ್ತಿಯ ಜಾತಿ, ಧರ್ಮಗಳೇನು ಎನ್ನುವುದನ್ನು ಯಾರೊಬ್ಬರೂ ಕೇಳುವುದಿಲ್ಲ. ಬದಲಾಗಿ ಅವನಿಗಿರುವ ದೇಶಾಭಿಮಾನಕ್ಕೆ ದೇಶವಾಸಿಗಳೆಲ್ಲಾ ತಲೆದೂಗುತ್ತಾರೆ. ಸೈನ್ಯಕ್ಕೆ ಸೇರ್ಬಹುದಾದ ವ್ಯಕ್ತಿ ಯಾರೇ ಆದರೂ ಅವನ ಬಗ್ಗೆ ಇಡಿ ದೇಶವೇ ಹೆಮ್ಮೆ ಪಡುತ್ತದೆ ಏಕೆಂದರೆ ಭಾರತೀಯ ಸೇನೆ ನಿರ್ವಹಿಸುವ ಕಾರ್ಯ ಅಂತಹುದು. ಮಳೆ, ಚಳಿ, ಶೀತ ಮಾರುತ, ಬಿರು ಬಿಸಿಲು ಎನ್ನುವುದನ್ನೂ ಲೆಕ್ಕಿಸದೆ ಹಗಲಿರುಳೂ ದೇಶದ ಗಡಿ ಕಾಯುವ ಯೋಧರ ದೇಶ ನಿಷ್ಠೆಯಿಂದಾಗಿಯೇ ಇಂದು ನಾವೆಲ್ಲಾ ನೆಮ್ಮದಿಯಿಂದ ಬದುಕುತ್ತಿದ್ದೇವೆ.

ಅದು 1999 ಮೇ ತಿಂಗಳು, ಪಾಕಿಗಳು ಕಾರ್ಗಿಲ್‌ನ, ಪೂರ್ವ ಬಟಾಲಿಕ್‌ನ ಮತ್ತು ದ್ರಾಸ್‌ನ ಉತ್ತರ ದಿಕ್ಕಿನ ಬೆಟ್ಟಗಳನ್ನು ಏರತೊಡಗಿದರು. ಗಟ್ಟಿ ಮುಟ್ಟಾಗಿದ್ದ ಬಂಕರುಗಳನ್ನು ತಮ್ಮೊಂದಿಗಿಟ್ಟುಕೊಂಡಿದ್ದ ಅವರು ಭಾರತೀಯದ ಸರ್ವ ರೀತಿಯ ಧಾಳಿಗೂ ಸನ್ನದ್ದರಾಗಿದ್ದರು. ಹಳ್ಳಿಗಾಡಿನ ದನಗಾಹಿಗಳಿಂದ ಪಾಕಿಸ್ತಾನದ ಈ ಕುಟಿಲೋಪಾಯವನ್ನರಿತ ನಮ್ಮ ಸೇನೆ ವರದಿ ತರಲೆಂದು ಸೌರಭ್ ಕಾಲಿಯಾ ನೇತೃತ್ವದಲ್ಲಿ ಐವರನ್ನು ಗುಡ್ಡ ಹತ್ತಿಸಿತು. ಶತ್ರುಪಡೆಗಳ ಸಾಮರ್ಥ್ಯದ ಅಂದಾಜಿಲ್ಲದ ನಮ್ಮವರು ಬೆಟ್ಟ ಹತ್ತಿ ಪಾಕ್ ನ ಮತಾಂಧ ಸೈನಿಕರ ಕೈಯಲ್ಲಿ ಸಿಕ್ಕಿಹಾಕಿಕೊಂಡು ಕ್ರೂರವಾದ ಹಿಂಸೆಗೆ ತುತ್ತಾದರು. ಅಷ್ಟೆ ಅಲ್ಲ ಅವರುಗಳ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಭಾರತೀಯ ಸೇನಾ ಶಿಬಿರಕ್ಕೆ ಹಿಂತಿರುಗಿಸಲಾಯಿತು.

ಅಂದಿನ ವಾಜಪೇಯಿ ನೇತೃತ್ವದ ಎನ್.ಡಿ.ಎ. ಸರ್ಕಾರವು ತಕ್ಷಣವೇ ‘ಆಪರೇಷನ್ ವಿಜಯ್’ ಹೆಸರಿನಲ್ಲಿ ಸೈನಿಕ ಕಾರ್ಯಾಚರಣೆ ನಡೆಸಲು ಆದೇಶ ನೀಡಿತು. ಆದರೆ ಅಂತಹಾ ಸೂಕ್ಷ್ಮ ಸ್ಥಿತಿಯಲ್ಲಿ ದೇಶದ ಗಡಿ ಕಾಯುತ್ತಿದ್ದ ಸೈನಿಕರ ಬಳಿ ಸರಿಯಾದ ಆಧುನಿಕ ಶಸ್ತ್ರಾಸ್ತ್ರಗಳೂ ಇರಲಿಲ್ಲ! ದೇಹ ರಕ್ಷಣೆಗೆ ಅವಷ್ಯವಾದ ಬಟ್ಟೆಗಳೂ ಇರಲಿಲ್ಲ! ಮತ್ತಷ್ಟು ಓದು »

25
ಏಪ್ರಿಲ್

ಈ ಯುದ್ಧ ಭೂಮಿಯಲ್ಲಿ ಸೈನಿಕರ ಬಡಿದಾಟ ಪ್ರಕೃತಿಯೊಂದಿಗೆ!

– ಡಾ ಅಶೋಕ್. ಕೆ. ಆರ್

          ಇದು ಪ್ರಪಂಚದ ಅತಿ ಎತ್ತರದ ಯುದ್ಧಭೂಮಿ. ಸಮುದ್ರಮಟ್ಟದಿಂದ ಅಜಮಾಸು 5,753 ಮೀ ಎತ್ತರದಲ್ಲಿರುವ ಹಿಮಚ್ಛಾದಿತ ರಣರಂಗ. ಭಾರತ ಮತ್ತು ಪಾಕಿಸ್ತಾನಕ್ಕೆ ಪ್ರತಿಷ್ಠೆಯ ಸಂಕೇತ. 1984ರಿಂದ ಇಲ್ಲಿಯವರೆಗೆ ಪಾಕಿಸ್ತಾನದ ಮೂರು ಸಾವಿರ ಮತ್ತು ಭಾರತದ ಐದು ಸಾವಿರಕ್ಕೂ ಹೆಚ್ಚು ಸೈನಿಕರು ಇಲ್ಲಿ ಹತರಾಗಿದ್ದಾರೆ [ಅನಧಿಕೃತ ವರದಿ; ಅಧಿಕೃತ ವರದಿಯನ್ನು ಎರಡೂ ದೇಶದ ಸರಕಾರಗಳು ಬಹಿರಂಗಗೊಳಿಸುವುದಿಲ್ಲ]. ಬಹಳಷ್ಟು ಮಂದಿಯ ದೇಹವನ್ನು ಇನ್ನೂ ಪತ್ತೆ ಹಚ್ಚಲಾಗಿಲ್ಲ. 80%ಗಿಂತ ಹೆಚ್ಚು ಸಂಖ್ಯೆಯ ಸೈನಿಕರ ಮರಣಕ್ಕೆ ಕಾರಣವಾಗಿದ್ದು ಎದುರಾಳಿಗಳ ಬಂದೂಕಾಗಲೀ, ಆಧುನಿಕ ಕ್ಷಿಪಣಿಗಳಾಗಲೀ ಅಲ್ಲ. ದೇಶಗಡಿಗಳ ಲೆಕ್ಕಿಸದೆ ಈ ಸೈನಿಕರನ್ನು ಬಲಿ ತೆಗೆದುಕೊಂಡಿರುವುದು ಪ್ರಕೃತಿ! ಪ್ರಕೃತಿಯ ಪ್ರಮುಖಾಯುಧ ಹಿಮ!! ಇದು ಸಿಯಾಚಿನ್ ಯುದ್ಧಭೂಮಿ.

ಆಪರೇಷನ್ ಮೇಘದೂತ: –

ಬಾಂಗ್ಲಾದೇಶದ ವಿಮೋಚನಾ ಯುದ್ಧದ ನಂತರ 1972ರಲ್ಲಿ ಸಿಮ್ಲಾ ಒಪ್ಪಂದಕ್ಕೆ ಯು.ಎನ್ ನೇತೃತ್ವದಲ್ಲಿ ಭಾರತ ಮತ್ತು ಪಾಕಿಸ್ತಾನ ಸಹಿ ಹಾಕುತ್ತವೆ. ಗಡಿರೇಖೆಯನ್ನು ವಿವರಿಸುವ ಆ ಒಪ್ಪಂದದಲ್ಲಿ ಸಿಯಾಚಿನ್ ಸೇರಿರಲಿಲ್ಲ. ಹಿಮಚ್ಛಾದಿತ ಮರುಭೂಮಿಯ ಮೇಲೆ ಹಕ್ಕು ಸಾಧಿಸಲು ಇವೆರಡೂ ದೇಶಗಳು ಬಡಿದಾಡಲಾರವು ಎಂದುಕೊಂಡಿತ್ತು ಯು.ಎನ್. ಆದರೆ ನಡೆದಿದ್ದೇ ಬೇರೆ! 1967ರಿಂದಲೇ ಅಮೆರಿಕಾದ ರಕ್ಷಣಾ ಸಂಸ್ಥೆಗಳು ತಯಾರಿಸಿದ ನಕ್ಷೆಗಳಲ್ಲಿ ಸಿಯಾಚಿನ್ ಪ್ರದೇಶವನ್ನು ಯಾವುದೇ ಐತಿಹಾಸಿಕ ಆಧಾರಗಳಿಲ್ಲದಾಗ್ಯೂ ಪಾಕಿಸ್ತಾನದ ಭಾಗವಾಗಿ ತೋರಿಸಲಾರಂಭಿಸಿತು. ಪಾಕಿಸ್ತಾನ ಕೂಡ ಅಮೆರಿಕದ ಕುಮ್ಮಕ್ಕಿನಿಂದಾಗಿ ಕ್ರಮೇಣವಾಗಿ ಸಿಯಾಚಿನ್ ಪ್ರದೇಶದ ಮೇಲೆ ಹಕ್ಕು ಚಲಾಯಿಸಲಾರಂಭಿಸಿತು. ಪಾಕಿನ ಈ ವರ್ತನೆಯನ್ನು ಗಮನಿಸಿದ ಭಾರತ ಸರಕಾರ ಕೂಡ ತನ್ನ ಸೈನ್ಯವನ್ನು ‘ಎತ್ತರದ ಪ್ರದೇಶಗಳಲ್ಲಿ ಯುದ್ಧ ತರಬೇತಿಯ’ ನೆಪದಲ್ಲಿ ಸಿಯಾಚಿನ್ ಪ್ರದೇಶಕ್ಕೆ ನಿಯೋಜಿಸಲಾರಂಭಿಸಿತು.

ಕುದಿಯಲಾರಂಭಿಸಿದ ದ್ವೇಷ 1984ರಲ್ಲಿ ಯುದ್ಧ ರೂಪವನ್ನು ಪಡೆಯಿತು. ಸಿಯಾಚಿನ್ ಪ್ರದೇಶವನ್ನು ಹಿಂಪಡೆದುಕೊಳ್ಳಲು ಆಪರೇಷನ್ ಮೇಘದೂತದ ಹೆಸರಿನಲ್ಲಿ ಭಾರತದ ಸೈನಿಕರು ಸಿಯಾಚಿನ್ ಏರಲಾರಂಭಿಸಿದರು. ಸರಿಸುಮಾರು ಸಾವಿರ ಚದುರ ಮೈಲು ಪ್ರದೇಶವನ್ನು ವಶಪಡಿಸಿಕೊಳ್ಳುವುದರಲ್ಲಿ ಭಾರತ ಸಫಲವಾಗಿ ಯುದ್ಧದಲ್ಲಿ ಗೆಲುವು ಪಡೆಯಿತು.

ಮತ್ತಷ್ಟು ಓದು »