ಕೆಲವು ವ್ಯಕ್ತಿತ್ವಗಳು ಅರ್ಥವಾಗಬಾರದು, ಅಮಿತ್ ಶಾರಂತೆ!
– ಸಂತೋಷ್ ತಮ್ಮಯ್ಯ
೨೦೧೫ರ ಅಕ್ಟೋಬರಿನಲ್ಲಿ ದೆಹಲಿಯ ಶ್ಯಾಮ್‌ಪ್ರಸಾದ್ ಮುಖರ್ಜಿ ಅಧ್ಯಯನ ಕೇಂದ್ರ ಯುವ ಬರಹಗಾರರನ್ನು ಕರೆಸಿ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಆಯೋಜಿಸಿತ್ತು. ದೇಶದ ಮೂಲೆಮೂಲೆಗಳಿಂದ ಆಗಮಿಸಿದ್ದ ಬರಹಗಾರರು ದೆಹಲಿಯ ಪಾಲಿಕಾ ಭವನದಲ್ಲಿ ಕಿಕ್ಕಿರಿದು ತುಂಬಿದ್ದರು. ಎರಡು ದಿನ ಪೂರ್ತಿ ರಾಷ್ಟ್ರೀಯತೆ, ರಾಜಕೀಯ ಸಿದ್ಧಾಂತಗಳು, ರಾಷ್ಟ್ರೀಯತೆಯ ಸವಾಲುಗಳು ಮತ್ತು ಅಪಾಯಗಳ ಬಗೆಗಿನ ಗೋಷ್ಠಿಗಳು ನಡೆದವು. ಅನಿರ್ಬನ್ ಗಂಗೂಲಿ, ವಿವೇಕ್ ಅಗ್ನಿಹೋತ್ರಿ, ಆರೆಸ್ಸೆಸ್ಸಿನ ನಂದಕುಮಾರ್ ಮುಂತಾದ ಖ್ಯಾತ ಚಿಂತಕರ ಗೋಷ್ಠಿಗಳು ಜರುಗಿದವು. ಸಮಾರೋಪ ಸಮಾರಂಭಕ್ಕೆ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾರವರು ಆಗಮಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಲಾಯಿತು. ಅಲ್ಲಿಯವರೆಗೂ ವೈಚಾರಿಕತೆಯ ಗುಂಗಲ್ಲಿದ್ದ ಕೆಲ ಯುವ ಬರಹಗಾರರು ಸಣ್ಣಗೆ ಗೊಣಗಲಾರಂಭಿಸಿದರು. ಇಷ್ಟು ಹೊತ್ತು ಚಿಂತಕರಿಂದ ಉಪನ್ಯಾಸ ಮಾಡಿಸಿದ ಕೇಂದ್ರದವರು ಈಗ ರಾಜಕಾರಣಿಯನ್ನೇಕೆ ಕರೆಸಿದ್ದಾರೆ? ಅದೂ ರಾಜಕಾರಣ ಮತ್ತು ರಾಜಕೀಯ ಸಿದ್ಧಾಂತಗಳ ಬಗ್ಗೆ ಅಮಿತ್ ಶಾರೇನು ಮಾತಾಡಬಲ್ಲರು? ಹೆಚ್ಚೆಂದರೆ ಜನಸಂಘದ ಒಂದೆರಡು ಕಥೆಗಳನ್ನು ಹೇಳಿ ಮುಗಿಸಬಲ್ಲರಷ್ಟೆ ಎಂದುಕೊಂಡರು. ಸಂಜೆಯಾಯಿತು. ಎಂದಿನಂತೆ ಮುಖ ಗಂಟಿಕ್ಕಿಕೊಂಡ ಅಮಿತ್ ಶಾ ವೇದಿಕೆಗೆ ಹತ್ತಿದರು. ಪೋಡಿಯಂ ಮುಂದೆ ನಿಂತರು.ಇದ್ದಕ್ಕಿದ್ದಂತೆ ಪಿಸುಗುಡುತ್ತಿದ್ದ ಪಾಲಿಕಾ ಭವನದ ಸಭಾಂಗಣ ಸೂಜಿ ಬಿದ್ದರೂ ಸದ್ದಾಗುವಷ್ಟು ಮೌನವಾಯಿತು, ಗಡಸು ಧ್ವನಿಗೆ ಸಭೆ ಸಮ್ಮೋಹನಕ್ಕೊಳಗಾಯಿತು. ಮುಂದಿನ ಒಂದೂವರೆ ಗಂಟೆ ಅಮಿತ್ ಶಾ ಅದೆಂಥಾ ವಾಗ್ಝರಿ ಹರಿಸಿದರೆಂದರೆ ತಿಲಕರು, ಸಾವರ್ಕರರು ಬಂದುಹೋದರು. ಗಾಂಧಿ ಚಳವಳಿ ಮತ್ತು ಸ್ವಾತಂತ್ರ್ಯಪೂರ್ವದ ಕಾಂಗ್ರೆಸಿನ ವಿಶ್ಲೇಷಣೆಯಾಯಿತು. ಲೋಹಿಯಾ ವಾಕ್ಯಗಳ ಉಲ್ಲೇಖವಾಯಿತು. ಜೆಪಿ ನುಸುಳಿದರು, ಹಳೆಯ ಯುಎಸ್‌ಎಸ್‌ಆರ್‌ನ ಪ್ರಾರಬ್ಧಗಳ ಮಂಡನೆಯಾಯಿತು. ನೆಹರೂ ಯುಗದ ಅದ್ವಾನಗಳು ಎಳೆಎಳೆಯಾಗಿ ಬಿಚ್ಚಲ್ಪಟ್ಟವು. ಮುಖರ್ಜಿ, ಉಪಾಧ್ಯಾಯರ ಆದರ್ಶಮಯ ಸಿದ್ಧಾಂತಗಳು ತೇಲಿಬಂದವು. ಅಟಲ್-ಅಧ್ವಾನಿಯವರ ರಾಜಕೀಯ ಬದ್ಧತೆಯವರೆಗೂ ಮಾತು ಸಾಗಿತು. ಕೆಲ ಚಿಂತಕರು ಘನಗಂಭೀರವಾಗಿ ತಲೆತೂಗುತಿದ್ದರೆ, ಇನ್ನು ಕೆಲವರು ಟಿಪ್ಪಣಿ ಮಾಡಿಕೊಳ್ಳತೊಡಗಿದರು! ಅಂದರೆ ಅಮಿತ್ ಶಾ ಸಂಶೋಧಕರಂತೆ, ಇವೆಲ್ಲಕ್ಕೂ ಪುರಾವೆ ಅಂಗೈಯಲ್ಲಿದೆ ಎನ್ನುವಂತೆ ಅಧಿಕಾರಯುತವಾಗಿ ಮಾತಾಡುತ್ತಿದ್ದರು. ಅವರು ಕಮ್ಯುನಿಸ್ಟ್ ಸಿದ್ಧಾಂತವನ್ನು, ಸಮಾಜವಾದವನ್ನು, ರಾಷ್ಟ್ರೀಯತೆಯ ಮಜಲುಗಳೆಲ್ಲವನ್ನೂ ಅರೆದು ಕುಡಿದಿದ್ದರು. ಅವರ ಅಂದಿನ ಮಾತುಗಳು ಸಭಿಕರಲ್ಲಿ ಎಂಥಾ ಗುಂಗು ಹಿಡಿಸಿತ್ತೆಂದರೆ ಭಾಷಣದ ನಂತರ ಆಯೋಜಕರು ಪ್ರಶ್ನೆಗಳಿಗೆ ಅವಕಾಶವಿದೆ ಎಂದು ಘೋಷಿಸಿದರು. ಆದರೆ ಯಾರಲ್ಲೂ ಪ್ರಶ್ನೆಗಳು ಉಳಿದಿರಲಿಲ್ಲ.
ಹಾಗೆ ನೊಡಿದರೆ ಅಮಿತ್ ಶಾ ಅಂದು ಹಾಗೆ ಕಂಡಿದ್ದು ನಮಗೆ ಮಾತ್ರವೇನೂ ಅಲ್ಲ, ಅವರು ಹಾಗೆ ಕಾಣುವುದು ಮೊದಲೂ ಆಗಿರಲಿಲ್ಲ!
ನಿಂದಕರಿಂದಲೇ ಸಂತೋಷ, ನಿಂದಕರಿದ್ದರೆ ಸಂತೋಷ
– ಬಿದರೆಪ್ರಕಾಶ್
“ನಿಂದಕರಿರಿಬೇಕು, ನಿಂದಕರಿರಬೇಕು
ದುಷ್ಟ ಜನರು ಸೃಷ್ಟಿಯೊಳಿದ್ದರೆ
ಶಿಷ್ಟ ಜನರಿಗೆಲ್ಲಾ ಕೀರ್ತಿಗಳು”
ಎಂದು ಅಂದು ಹಾಡಿದ ಪುರಂದರ ದಾಸರ ನುಡಿಗಳು ಎಂದಿಗೂ ಎಂದೆಂದಿಗೂ ಪ್ರಸ್ತುತವೆಂದು ಇತ್ತೀಚೆಗಿನ ಕೆಲವು ಹಿದ್ಯಮಾನಗಳಿಂದ ವೇದ್ಯವಾಗುತ್ತದೆ.. ಹೌದು, ಪುರಂದರದಾಸರ ವಾಣಿಯಂತೆ ದುಷ್ಟ ಜನರಿಂದಲೇ ಶಿಷ್ಟ ಜನರಿಗೆ ಕೀರ್ತಿಗಳು ಲಭ್ಯವಾಗಿವೆ. ಹಾಗೆಂದು ಈ ಶಿಷ್ಟ ಜನರು ಕೀರ್ತಿಗಾಗಿ ಆಸೆ ಪಟ್ಟವರಲ್ಲ, ಪರರ ತಂಟೆಗೆ ಹೋದವರಲ್ಲ, ಕರ್ತವ್ಯಮುಖಿಯಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಈ ಇಬ್ಬರು ವ್ಯಕ್ತಿಗಳು ಇಂದು ಖ್ಯಾತಿಗೆ, ಕೀರ್ತಿಗೆ ಭಾಜನರಾಗುತ್ತಿದ್ದಾರೆಂದರೆ ಅದಕ್ಕೆ ಕಾರಣ ಈ ನಿಂದಕರೇ. ಬಹುಷಃ ಈ ನಿಂದಕರಿರದಿದ್ದರೆ ಈ ಇಬ್ಬರು ವ್ಯಕ್ತಿಗಳು ಇಂದಿಗೂ ತೆರೆಮರೆಯಲ್ಲಿಯೇ ಇರುತ್ತಿದ್ದರೇನೋ. ಹಿನ್ನೆಲೆಯಲ್ಲೇ ತಮ್ಮ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದ ಈ ಇಬ್ಬರನ್ನು ಮುನ್ನಲೆಗೆ ತಂದು ನಿಲ್ಲಿಸಿರುವುದು ಈ ನಿಂದಕರೇ. ಅದಕ್ಕಾಗಿಯೇ ಈ ನಿಂದಕರಿಗೆ ಧನ್ಯವಾದ ಹೇಳಲೇಬೇಕು.
ಸಮಾಜಕ್ಕೋಸ್ಕರ ತಮ್ಮ ಜೀವನವನ್ನು ಕೊಟ್ಟು ಪ್ರಚಾರಕರಾಗಿ,ರಾಜ್ಯ ಬಿಜೆಪಿಯಲ್ಲಿ ಕೇಂದ್ರ ಬಿಂದುವಿನಂತೆ ಕಳೆದ ಹತ್ತು ವರ್ಷಗಳಿಂದ ತಮಗೆ ಕೊಟ್ಟ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಬಿ.ಎಲ್.ಸಂತೋಷ್(ಸಂತೋಷ್‌ಜೀ)ರವರು ಒಬ್ಬರಾದರೆ,ಪತ್ರಕರ್ತರಾಗಿ ಅಂಕಣಕಾರರಾಗಿ ರಾಷ್ಟ್ರೀಯ ವಿಚಾರಗಳನ್ನು ಪ್ರತಿಪಾದಿಸುತ್ತಾ, ಜೀವನಕ್ಕಿಂತ ಅಧ್ಯಯನಕ್ಕೇ ಆದ್ಯತೆ ಕೊಟ್ಟು, ಕಾರ್ಯನಿರ್ವಹಿಸುತ್ತಿರುವ ಸಂತೋಷ್ ತಮ್ಮಯ್ಯ ಮತ್ತೋರ್ವರು. ಸಂತೋಷ್‌ಜೀರವರು ರಾಜಕೀಯ ಕ್ಷೇತ್ರದಲ್ಲಿದ್ದರೂ ಎಂದಿಗೂ ಪ್ರಚಾರ ಪ್ರಿಯರಾಗಲಿಲ್ಲ. ತಮ್ಮಲ್ಲಿರುವ ಅಗಾಧ ಸಂಘಟನಾ ಸಾಮರ್ಥ್ಯವನ್ನು ಕಳೆದ ಹತ್ತು ವರ್ಷಗಳಿಂದ ಬಿಜೆಪಿಯನ್ನು ಕಟ್ಟುವುದಕ್ಕಾಗಿಯೇ ಧಾರೆ ಎರೆಯುತ್ತಿರುವ ಇವರು ಮತ್ತು ಇವರ ಸಾಮರ್ಥ್ಯ ಬಿಜೆಪಿಯ ಒಳಗಿರುವವರಿಗೆ ಮತ್ತು ಪರಿವಾರದ ಕಾರ್ಯಕರ್ತರುಗಳಿಗೆ ಮಾತ್ರ ಪರಿಚಯವಿತ್ತು.ಅದೇ ರೀತಿ ಅಸೀಮ ಪತ್ರಿಕೆಯ ಸಂಪಾದಕರಾಗಿ,ಹೊಸದಿಗಂತ ಪತ್ರಿಕೆಯ ಅಂಕಣಕಾರರಾಗಿ ಓದು ಮತ್ತು ಬರಹಗಳನ್ನು ಮಾತ್ರ ಅಂಟಿಸಿಕೊಂಡು, ಅಧ್ಯಯನದ ಮೂಲಕ ಅಗಾಧ ಬರವಣಿಗೆಯ ಸಾಮರ್ಥ್ಯವನ್ನು ಹೊಂದಿದ್ದ, ಸಂಕೋಚ ಸ್ವಭಾವದ ಸಂತೋಷ್ ತಮ್ಮಯ್ಯ ಸಹ ಎಂದೂ ಮುನ್ನಲೆಗೆ ಬಂದವರಲ್ಲ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ತಮಗಿರುವ ಶಕ್ತಿಯನ್ನು ವಿನಿಯೋಗಿಸಿ ತೆರೆಮರೆಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದ ಈ ಇಬ್ಬರನ್ನೂ ನಿಂದಕರುಗಳು ಜನರ ಮುಂದೆ ತಂದು ನಿಲ್ಲಿಸಿಬಿಟ್ಟಿದ್ದಾರೆ. ಈ ಕಾರಣದಿಂದಾಗಿಯೇ ಸಂತೋಷ್‌ಜೀ ಮತ್ತು ಸಂತೋಷ್ ತಮ್ಮಯ್ಯ ಇಬ್ಬರ ಹೆಸರು ಜನಜನಿತಾಗುತ್ತಿದೆ. ಇವರಿಬ್ಬರ ಸಾಮರ್ಥ್ಯದ ಅರಿವು ಜನರಿಗೆ ಆಗತೊಡಗಿದೆ. ಅದಕ್ಕೇ ಅಂದು ಪುರಂದರ ದಾಸರು ಹೇಳಿದ ’ಶಿಷ್ಟ ಜನರ ಕೀರ್ತಿಗಳಿಗೆ ನಿಂದಕರಿರಬೇಕು, ನಿಂದಕರಿರಿಬೇಕು’ ಎಂಬ ನುಡಿ ಇಂದೂ ಪ್ರಸ್ತುತವೆಂಬುದು ರುಜುವಾತಾಗಿಬಿಟ್ಟಿದೆ.
ಬಿ.ಎಲ್.ಸೋತೋಷ್, ಬಹಳಷ್ಟು ಜನರು ಸಂತೋಷ್‌ಜೀ ಎಂದು ಆತ್ಮೀಯವಾಗಿ, ಗೌರವಪೂರ್ವಕವಾಗಿ ಕರೆಸಿಕೊಳ್ಳುವ ಇವರು ಬಿಜೆಪಿಯಲ್ಲಿ ’ಸಂಘಟನಾ ಕಾರ್ಯದರ್ಶಿ’ ಎಂದರೆ ಹೇಗಿರಬೇಕು ಎಂಬುದಕ್ಕೆ ಮಾದರಿಯಾಗಿ ಬಿಜೆಪಿಯ ಸಂಘಟನೆಗಾಗಿ ತಮ್ಮ ಜೀವನವನ್ನು ಸಮರ್ಪಿಸಿ ಕಾರ್ಯನಿರ್ವಹಿಸುತ್ತಿರುವವರು.ಬಿಜೆಪಿಯನ್ನು ಸಂಘಟನಾತ್ಮಕವಾಗಿ ಶಕ್ತವಾಗಿಸುವಲ್ಲಿ ಸಂತೋಷ್‌ಜೀಯವರ ಪಾತ್ರ ಅಸದಳವಾದುದು ಎಂಬುದನ್ನು ಬಿಜೆಪಿಯಲ್ಲಿ ಅವರನ್ನು ಸಹಿಸಿಕೊಳ್ಳದವರೂ ಒಪ್ಪಿಕೊಳ್ಳುತ್ತಾರೆ.
ದಲಿತರನ್ನು ರಾಜಕೀಯವಾಗಿ ಬಳಸಿಕೊಳ್ಳುವ ಹುನ್ನಾರ ಇನ್ನೆಷ್ಟು ದಿನ ಮುಂದುವರೆಯುವುದು?
– ಶಿವಾನಂದ ಸೈದಾಪೂರ
ಪಿ.ಜಿ ಡಿಪ್ಲೊಮಾ ಇನ್ ಅಂಬೇಡ್ಕರ್ ಸ್ಟಡಿಸ್
ಬೆಳಗಾವಿ.
ಈಗಲೇ ಎರಡು ದಿನಗಳಲ್ಲಿ ನಡೆದ ಘಟನೆಗಳು; ನೂರಕ್ಕೆ ನೂರರಷ್ಟು ಮತದಾನದ ಜಾಗೃತಿಗಾಗಿ ಊರೂರುಗಳಿಗೆ ಸಂಪರ್ಕ ಮಾಡುತ್ತಿರುವ ಹೊತ್ತಲ್ಲಿ ಆದ ಸ್ವಂತ ಅನುಭವ. ದಲಿತರ ಓಣಿಗಳನ್ನು ಪ್ರವೇಸಿಸುವಾಗ ನಡೆದಂತದ್ದವುಗಳು. ಘಟನೆ ಓಣಿಯ ಪ್ರವೇಶಕ್ಕೂ ಮೊದಲು ಗಮನಿಸಿದಾಗ ಕಣ್ಣಿಗೆ ರಾಚುವಂಥದ್ದು; ಈ ಕೇರಿಯಲ್ಲಿ ಕಾಂಗ್ರೆಸ್ ಒಂದನ್ನು ಬಿಟ್ಟು ಬಿಜೆಪಿಯವರಿಗೆ ಪ್ರವೇಶವಿಲ್ಲ! ಈ ರೀತಿ ಫಲಕ ನೇತಾಡುತಿತ್ತು. ಇಂತಹ ವಾತಾವರಣ ಇನ್ನೂ ಯಾಕೆ ಹೀಗಿದೆ? ಚುನಾವಣೆ ಸಂದರ್ಭದಲ್ಲಿಯೇ ಯಾಕೆ ಹೀಗೆ? ಇದನ್ನು ಏನು ಅಂತ ತರ್ಕಿಸಬಹುದು? ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳು ಕಳೆದರೂ ಯಾಕೆ ಈ ವಾತಾವರಣ? ಅಸ್ಪೃಶ್ಯತೆ ನಿವಾರಣೆಗಾಗಿ ಒಂದು ಕಡೆ ಹೋರಾಟಗಳು ನಡೆಯುತ್ತಿದ್ದರೆ, ಮತ್ತೊಂದು ಕಡೆ ಅವರನ್ನು ಸ್ವೃಶ್ಯ ಸಮಾಜ ವಾಸಿಯಾಗಲು ಬಿಡದೆ ನಡೆಸುತ್ತಿರುವ ರಾಜಕೀಯ ಷಡ್ಯಂತ್ರವೇ ಬಹಳಷ್ಟಿವೆ.
ಘಟನೆ ಎರಡು; ರಾಯಬಾಗ ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದೇ ಹೆಸರಾದ ಹಿಡಕಲ್ ನಲ್ಲಿ ನಡೆದದ್ದು. ಇದೇ ಒಂದು ವಾರದಲ್ಲಿ ನಡೀದಿದೆ. ದಲಿತರ ಓಣಿಯಲ್ಲಿ ಮಹಿಳೆಯೊಬ್ಬಳು ಬೈಗುಳಗಳುಳ್ಳ ವಿಡಿಯೋವೊಂದು ವೈರಲ್ ಆಗಿದೆ. ಆ ವಿಡಿಯೋದಲ್ಲಿರುವುದೇನು ಸಾಮಾನ್ಯ ಸಂಗತಿಯೇನಲ್ಲ. ಹಾಲಿ ಶಾಸಕ ಮತ್ತು ಈ ಸಲದ ಕುಡಚಿ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ರಾಜು ಅವರನ್ನು ಅತ್ಯಂತ ಕೀಳು ಮಟ್ಟಕ್ಕಿಳಿದು ಬಾಯಿಗೆ ಬಂದಂತೆ ನಿಂದಿಸುತ್ತಿರುವುದು. ಸ್ವತಃ ತಾನು ಒಬ್ಬ ಹೆಣ್ಣು ಅನ್ನೋದನ್ನು ಮರೆತು ಪಿ.ರಾಜು ಅವರ ತಾಯಿಯನ್ನು ಬೈಯುತ್ತಿರುವುದು. ಹೇಳುವುದಕ್ಕೆ ಸಾಧ್ಯವೇ ಇಲ್ಲದ ಕನಿಷ್ಠ ಮಟ್ಟದ ಶಬ್ದಗಳನ್ನು ಬಳಸಿ ಬೈಯುತ್ತಿರುವುದನ್ನು ನೋಡಿದರೆ ಎಂಥವರಿಗಾದರೂ ಮೈ ಬೆವರುತ್ತದೆ. ಆ ಕೀಳುಮಟ್ಟದ ಶಬ್ದಗಳನ್ನು ಕೇಳಿದರೆ ಯಾವ ಸ್ತ್ರೀ ಪುರುಷರು ಅಸಹ್ಯ ಪಡುವದರಲ್ಲಿ ಎರಡು ಮಾತಿಲ್ಲ. ಇಷ್ಟಕ್ಕೂ ಆ ವಿಡಿಯೋದಲ್ಲಿ ಮಹಿಳೆ ಮಾಡುತ್ತಿರುವುದಾದರೇನು ಗೊತ್ತೇ? ಈ ಸಲದ ಕುಡಚಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಅಮಿತ್ ಘಾಟಗೆ ಪರ ಪ್ರಚಾರ ಮಾಡುತ್ತಿದ್ದಾಳೆ. ಸ್ವತಃ ಅವಳೇ ಹೇಳುತ್ತಾಳೆ ದಲಿತಕೇರಿಗಳಲ್ಲಿ ಅಮಿತ್ ಘಾಟಗೆ ಮತ್ತು ಸಿದ್ದರಾಮಯ್ಯನವರನ್ನು ಬಿಟ್ಟರೆ ಬೇರೆ ಯಾರೂ ಬರಬಾರದಂತೆ! ಉಳಿದವರ್ಯಾರು ದಲಿತ ಕೇರಿಯ ಸಮೀಪ ಕೂಡ ಸುಳಿಬಾರದಂತೆ! ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳಲ್ಲಿ ಐವತ್ತಕ್ಕೂ ಅಧಿಕ ವರ್ಷಗಳ ಕಾಲ ಈ ದೇಶವನ್ನು ಆಳಿದ್ದು ಕಾಂಗ್ರೆಸ್ ಸರ್ಕಾರವೇ. ಆದರೆ ಅಭಿವೃದ್ಧಿಗಿಂತ ಜನಸಾಮಾನ್ಯರಲ್ಲಿ ಯಾವ ರೀತಿ ಜಾತಿಯತೆಯನ್ನು ಬಿತ್ತಿ ಬೆಳೆಸಿದೆ ಎಂಬುವುದು ಇದರಿಂದಲೇ ಸ್ಪಷ್ಟವಾಗುತ್ತದೆ.
ಅವರ ಸಹಕಾರವಿಲ್ಲದೆ ಈ ಮರಳು ದಂಧೆ ನಡೆಯುತ್ತಾ ?
– ನರೇಂದ್ರ ಎಸ್ ಗಂಗೊಳ್ಳಿ, ವಾಣಿಜ್ಯಶಾಸ್ತ್ರ ಉಪನ್ಯಾಸಕರು.
ಕಳೆದ ಭಾನುವಾರ ರಾತ್ರಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಂಡ್ಲೂರು ಎಂಬಲ್ಲಿ ತಡರಾತ್ರಿ ಅಕ್ರಮ ಮರಳುಗಾರಿಕೆ ದಂಧೆಯ ಕುರಿತಂತೆ ತನಿಖೆ ಮಾಡಲು ತೆರಳಿದ್ದ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ತಹಶೀಲ್ದಾರ್ ಶಿಲ್ಪಾ ನಾಗ್ , ಅಂಪಾರು ಗ್ರಾಮಕರಣ ಕಾಂತರಾಜು ಸೇರಿದಂತೆ ಆರು ಜನರ ತಂಡದ ಮೇಲೆ ಈ ಅಕ್ರಮ ದಂಧೆ ನಿರತ ತಂಡ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದು ಖಂಡನೀಯ. ಮೊದಲು ಬಿಹಾರ ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಇಂತಹ ಘಟನೆಗಳು ಕೇಳಿಬರುತ್ತಿದ್ದವು, ಆದರೆ ಇದೀಗ ಬುದ್ಧಿವಂತರ ಜಿಲ್ಲೆ ಎಂದೆನ್ನಿಸಿಕೊಂಡ ಉಡುಪಿಯಲ್ಲೇ ಇಂತಹ ಘಟನೆ ನಡೆದಿರುವುದು ಇಡೀ ಜಿಲ್ಲೆಯ ಜನರೇ ತಲೆ ತಗ್ಗಿಸುವಂತಾಗಿದೆ.
ಪ್ರತಿಭಟನೆಯನ್ನೂ ಅಪರಾಧವನ್ನೂ ಏಕೆ ಸಮೀಕರಿಸುತ್ತೀರಿ ಮಾಧ್ಯಮಗಳೇ?
– ವಿನಾಯಕ ಹಂಪಿಹೊಳಿ

ವಿದ್ಯಾರ್ಥಿ ರಾಜಕೀಯ ಕ್ರಿಯಾಶೀಲತೆ ಮುಂದಿರುವ ಸವಾಲುಗಳು
ಬಿ.ಜಿ. ಕುಲಕರ್ಣಿ
ಸಹಾಯಕ ಪ್ರಾಧ್ಯಾಪಕರು
ರಾಜ್ಯಶಾಸ್ತ್ರ ವಿಭಾಗ
ಬಸವಪ್ರಭು ಕೋರೆ ಮಹಾವಿದ್ಯಾಲಯ
ಚಿಕ್ಕೋಡಿ. ಜಿಲ್ಲಾ: ಬೆಳಗಾವಿ
ವಿದ್ಯಾರ್ಥಿ ರಾಜಕೀಯ ಕ್ರೀಯಾಶಿಲತೆ ಕುರಿತು ಚರ್ಚಿಸುವಾಗ ಉದ್ಭವವಾಗುವ ಮೊದಲ ಪ್ರಶ್ನೆಯೆಂದರೆ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕೆ ಅಥವಾ ಬೇಡವೇ ? ಈ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಪಂಥಗಳಿವೆ. ಮೊದಲನೆಯ ಪಂಥದ ಅಭಿಪ್ರಾಯವೆನೆಂದರೆ ವಿದ್ಯಾರ್ಥಿಗಳ ಮೊದಲ ಆದ್ಯತೆ ಅಧ್ಯಯನ. ಆದ್ದರಿಂದ ವಿದ್ಯಾರ್ಥಿಗಳು ಅಧ್ಯಯನದಲ್ಲಿ ನಿರತರಾಗಬೇಕು. ಆ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ವಾದಿಸುತ್ತಾರೆ. ಎರಡನೆ ಪಂಥವು ವಿದ್ಯಾರ್ಥಿಗಳೂ ಜನ ಸಮೂಹದ ಭಾಗವಾಗಿರುವುದರಿಂದ, ರಾಜಕೀಯ ಸಮಾಜ ಬಿಟ್ಟು ಇಲ್ಲವಾದ್ದರಿಂದ, ರಾಜಕೀಯ ನಿರ್ಧಾರಗಳು ವಿದ್ಯಾರ್ಥಿಗಳ ಮೇಲೂ ಪ್ರಭಾವ ಬೀರುವುದರಿಂದ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕು ಎಂಬ ವಾದ ಮಂಡಿಸುತ್ತಾರೆ. ವಿದ್ಯಾರ್ಥಿಗಳು ರಾಜಕೀಯದಲ್ಲಿ ಏಕೆ ಭಾಗವಹಿಸಬೇಕು ಎಂಬ ವಾದಕ್ಕೆ ಪ್ರಬಲ ಕಾರಣಗಳನ್ನು ಇಲ್ಲಿ ಚರ್ಚಿಸಲಾಗಿದೆ. Read more
ಜೀವಮಾನದ ಸಿದ್ಧಿ ಮತ್ತು ಹದಿನೈದು ನಿಮಿಷಗಳ ಪ್ರಸಿದ್ಧಿ
– ರೋಹಿತ್ ಚಕ್ರತೀರ್ಥ
1966ರಲ್ಲಿ ನಡೆದ ಸಣ್ಣ ಘಟನೆ ಅದು. ಆಂಡಿ ವಾರ್ಹಲ್ ಎಂಬ ಪ್ರಸಿದ್ಧ ಅಮೆರಿಕನ್ ಕಲಾವಿದನನ್ನು ನ್ಯಾಟ್ ಫಿಂಕಲ್‍ಸ್ಟೀನ್ ಎಂಬ ಫೋಟೋಗ್ರಾಫರ್ ಸೆರೆ ಹಿಡಿಯುತ್ತಿದ್ದಾಗ, ಆಂಡಿಯ ನೂರಾರು ಅಭಿಮಾನಿಗಳು ತಾವೂ ಕ್ಯಾಮೆರಾ ಫ್ರೇಮಿನಲ್ಲಿ ಬರಬೇಕೆಂದು ಆತನ ಹಿಂಬದಿಯಲ್ಲಿ ಮುಖ ತೂರಿಸುವುದೋ ಸುಮ್ಮಸುಮ್ಮನೆ ಅಡ್ಡ ಹಾಯುವುದೋ ಮಾಡುತ್ತಿದ್ದರಂತೆ. ಆಗ ಆಂಡಿ ನ್ಯಾಟ್‍ಗೆ “ನೋಡಯ್ಯ, ಪ್ರತಿಯೊಬ್ಬರೂ ಪ್ರಸಿದ್ಧರಾಗಲು ಬಯಸುತ್ತಿದ್ದಾರೆ” ಎಂದ. ನ್ಯಾಟ್, “ಹೌದು ಆಂಡಿ! ಹದಿನೈದು ನಿಮಿಷಗಳ ಪ್ರಸಿದ್ಧಿಗಾಗಿ!” ಎಂದುತ್ತರಿಸಿದ. ಹಾಗೆ ಅಕಸ್ಮಾತ್ತಾಗಿ ಹುಟ್ಟಿದ ಈ “ಹದಿನೈದು ನಿಮಿಷಗಳ ಪ್ರಸಿದ್ಧಿ” ಎಂಬ ಪಡೆನುಡಿ ಅಮೆರಿಕನ್ ಸಂಸ್ಕೃತಿಯಲ್ಲಿ ಹದಿನೈದು ನಿಮಿಷಗಳಲ್ಲ, ಹಲವು ವರ್ಷಗಳ ಕಾಲ ಪ್ರಸಿದ್ಧವಾಗಿ ಚಾಲ್ತಿಯಲ್ಲಿತ್ತು. ಜಗತ್ತಿನಲ್ಲಿ ಮೊದಲೆಲ್ಲ ದೇಶದ ರಾಜರಾಣಿಯರು ಮತ್ತು ಬೆರಳೆಣಿಕೆಯಷ್ಟು ಸಚಿವರನ್ನು ಬಿಟ್ಟರೆ ಬೇರಾರೂ ಪ್ರಸಿದ್ಧಿಯ ಉತ್ತುಂಗಕ್ಕೆ ಏರುತ್ತಿರಲಿಲ್ಲ. ರಾಜಕೀಯದ ಸೋಂಕಿಲ್ಲದೆ ಪ್ರಸಿದ್ಧಿಗೆ ಬರಬೇಕೆಂದರೆ ಒಂದೋ ಸಾಹಿತಿ/ಕಲಾವಿದನಾಗಬೇಕಿತ್ತು ಇಲ್ಲವೇ ವಿಜ್ಞಾನಿಯಾಗಬೇಕಿತ್ತು. ಎರಡೂ ಹತ್ತುಹಲವು ವರ್ಷಗಳ ಕಠಿಣ ಪರಿಶ್ರಮ, ತಪಸ್ಸುಗಳನ್ನು ಬೇಡುವ ಕೆಲಸಗಳು. ದಿನಬೆಳಗಾಗುವುದರಲ್ಲಿ ಪ್ರಸಿದ್ಧರಾದರು ಎಂದು ಹೇಳುವ ವ್ಯಕ್ತಿಗಳು ಕೂಡ ಅಂಥದೊಂದು ಪ್ರಸಿದ್ಧಿಗಾಗಿ ಹಲವು ವರ್ಷಗಳ ದಿನ-ರಾತ್ರಿಗಳನ್ನು ವ್ಯಯ ಮಾಡುತ್ತಿದ್ದರು. ಕಾಲ ಮುಂದುವರಿದಂತೆ, ಪತ್ರಿಕೆ ರೇಡಿಯೋ ಟಿವಿ ಸಿನೆಮ ಇತ್ಯಾದಿ ಹಲವು ಮಾಧ್ಯಮಗಳು ಬಂದವು. ಇಂಥ ಹಲವು ಆಯ್ಕೆಗಳು ಸುಲಭಸಾಧ್ಯವಾದ ಮೇಲೆ ಯೇನಕೇನ ಪ್ರಕಾರೇಣ ಪ್ರಸಿದ್ಧ ಪುರುಷೋ ಭವ ಎಂಬ ಧ್ಯೇಯಮಾರ್ಗದಲ್ಲಿ ನಡೆಯುವವರೂ ಹೆಚ್ಚಾದರು. ಶಾಶ್ವತ ಸಿದ್ಧಿ ಬಯಸುವವರಿಗಿಂತ ಇಂದೋ ಈ ವಾರವೋ ತಪ್ಪಿದರೆ ಈ ಒಂದು ತಿಂಗಳು ಚಲಾವಣೆಯಲ್ಲಿದ್ದರೆ ಸಾಕು ಎಂಬ ಮನೋಭಾವದವರು ಹೆಚ್ಚಾದರು. ಇವೆಲ್ಲವನ್ನು ಮುಂಚಿತವಾಗಿ ಊಹಿಸಿಯೇ “ಮುಂದೊಂದು ದಿನ ಜನ ಕೇವಲ ಹದಿನೈದು ನಿಮಿಷಗಳ ಪ್ರಸಿದ್ಧಿಯನ್ನಷ್ಟೇ ಪಡೆಯುವ ಸಂದರ್ಭ ಬರಬಹುದು” ಎಂಬರ್ಥದಲ್ಲಿ ನ್ಯಾಟ್ ಆ ಮಾತುಗಳನ್ನು ಹೇಳಿದ್ದ. Read more
ಸುದ್ಧಿಮಾಧ್ಯಮ: ದೇಶ ಬೆನ್ನಿಗೆ ಕಟ್ಟಿಕೊಂಡ ಕೆಂಡ
– ಪ್ರೇಮಶೇಖರ
26/11ರ ಮುಂಬೈ ಧಾಳಿಗಳ ರೂವಾರಿಯೊಬ್ಬ ಕರಾಚಿಯಿಂದ ಹೊರಡುತ್ತಿದ್ದ ಅಜ್ಮಲ್ ಕಸಾಬ್ ಸೇರಿದಂತೆ ಹತ್ತು ಭಯೋತ್ಪಾದಕರಿಗೆ ನೀಡಿದನೆನ್ನಲಾದ ‘ಉಪದೇಶ’ ಹೀಗಿತ್ತು: “ತಾಜ್ ಹೋಟೆಲ್ ಆಕ್ರಮಿಸಿಕೊಂಡ ನಂತರ ಯಾವುದಾದರೊಂದು ಕೋಣೆ ಸೇರಿ ಅಲ್ಲಿರುವ ಟೀವಿ ಚಾಲೂ ಮಾಡಿ ಭಾರತೀಯ ನ್ಯೂಸ್ ಚಾನಲ್ ಒಂದನ್ನು ನೋಡಿ. ಭಾರತೀಯ ಭದ್ರತಾ ಪಡೆಗಳು ನಿಮ್ಮ ವಿರುದ್ಧ ಕೈಗೊಳ್ಳುತ್ತಿರುವ ತಂತ್ರಗಳ ಇಡೀ ವಿವರ ಅದರಲ್ಲಿ ನಿಮಗೆ ದೊರೆಯತೊಡಗುತ್ತದೆ. ಅದಕ್ಕನುಗುಣವಾಗಿ ನಿಮ್ಮ ಪ್ರತಿತಂತ್ರಗಳನ್ನು ನೀವು ರೂಪಿಸಿಕೊಳ್ಳಬಹುದು.” ನಮ್ಮ ಮಾಧ್ಯಮಗಳು ಅತ್ಯುತ್ಸಾಹದಿಂದ ಪ್ರಸಾರ ಮಾಡುತ್ತಿದ್ದ ವಿವರಗಳೇ ತಾಜ್ ಹೋಟೆಲ್ ಮೇಲೆ ಪಾಕ್ ಉಗ್ರರ ಹಿಡಿತ ದೀರ್ಘವಾಗಲು ಕಾರಣವಾಯಿತು ಎಂಬ ಕಟುವಾಸ್ತವದ ಹಿನ್ನೆಲೆಯಲ್ಲಿ ಆ ಪಾಕ್ ಭಯೋತ್ಪಾದಕ ನಮ್ಮ ಮಾಧ್ಯಮಗಳ ನಾಡಿಮಿಡಿತವನ್ನು ಅದೆಷ್ಟು ಚೆನ್ನಾಗಿ ಅರಿತಿದ್ದ ಎಂಬ ಕಹಿಸತ್ಯ ಎದೆಗೆ ನಾಟುತ್ತದೆ. ಈ ಪೀಠಿಕೆಯೊಂದಿಗೆ ಭಯೋತ್ಪಾದನೆಯ ವಿಷಯದಲ್ಲಿ ನಮ್ಮ ಮಾಧ್ಯಮಗಳು ಅನುಸರಿಸುವ ಕುನೀತಿಯ ಪರಿಚಯ ಮಾಧ್ಯಮಗಳ ಬಗೆಗಿನ ಲೇಖನದ ಮೂರನೆಯ ಹಾಗೂ ಅಂತಿಮ ಕಂತಿನ ವಸ್ತುವಿಷಯ. ನನ್ನ ಅವಲೋಕನವನ್ನು ಕಾಲು ಶತಮಾನದಷ್ಟು ದೀರ್ಘವಾದ ಕಾಶ್ಮೀರದಲ್ಲಿನ ಭಯೋತ್ಪಾದನೆಯೊಂದಿಗೆ ಪ್ರಾರಂಭಿಸುತ್ತೇನೆ.
ಹಿಂದೂ-ವಿರೋಧಿ ಮಾಧ್ಯಮ: ಸೃಷ್ಟಿ ಮತ್ತು ಸ್ಥಿತಿ
– ಪ್ರೇಮಶೇಖರ
ಪ್ರಕರಣ ೧: ಪ್ರಮುಖ ಕನ್ನಡ ದೈನಿಕವೊಂದರಲ್ಲಿ ಸೌದಿ ಅರೇಬಿಯಾದ ಬಗ್ಗೆ ಪರಿಚಯಾತ್ಮಕ ಲೇಖನವೊಂದು ಪ್ರಕಟವಾಗುತ್ತದೆ. ಅಚ್ಚರಿಯೆಂದರೆ ಮರುದಿನವೂ ಅದೇ ಲೇಖನ ಮತ್ತೆ ಕಾಣಿಸಿಕೊಳ್ಳುತ್ತದೆ! ಅದರ ಕೆಳಗೆ ಹೀಗೊಂದು ವಿವರಣೆ: “ನಿನ್ನೆಯ ದಿನ ಸೌದಿ ಅರೇಬಿಯಾವನ್ನು ಕುರಿತು ನೀಡಿದ ವಿವರಣೆಯಲ್ಲಿ ಮಹಮದ್ ಪೈಗಂಬರ್ ಮೆಕ್ಕಾದಿಂದ ಮದೀನಾಕ್ಕೆ ಕ್ರಿ.ಶ. ೬೨೨ರಲ್ಲಿ ಓಡಿಹೋದರು. ಅಂದಿನಿಂದ ಹಿಜ್ರಾ ಶಕೆ ಪ್ರಾರಂಭವಾಗುತ್ತದೆ ಎಂದು ಪ್ರಕಟವಾಗಿತ್ತು.ಇದರಿಂದ ಅನೇಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ತಿಳಿದುಬಂದಿದೆ. ಅದಕ್ಕಾಗಿ ಪತ್ರಿಕೆ ಕ್ಷಮೆ ಯಾಚಿಸುತ್ತದೆ ಹಾಗೂ ಇಂದು ಅದೇ ಲೇಖನವನ್ನು ತಿದ್ದಿ ಪ್ರಕಟಿಸಲಾಗಿದೆ.” ಮರುಪ್ರಕಟವಾಗಿದ್ದ ಲೇಖನದಲ್ಲಿ ಪೈಗಂಬರರು ಮದೀನಾಗೆ ಓಡಿಹೋದ ಬಗೆಗಿನ ಒಂದು ಸಾಲು ಮಾಯವಾಗಿರುತ್ತದೆ.
ಪ್ರಕರಣ ೨: ಕೆಲದಿನಗಳ ನಂತರ ಅದೇ ಪತ್ರಿಕೆಯಲ್ಲಿ ಸ್ವಾಮಿ ವಿವೇಕಾನಂದರ ಬಗ್ಗೆ ಲೇಖನವೊಂದು ಪ್ರಕಟವಾಗುತ್ತದೆ.ವಿವೇಕಾನಂದರ ದೈಹಿಕ ಸಮಸ್ಯೆಗಳು,ಬಲಹೀನತೆಗಳ ಬಗ್ಗೆ ಅದರಲ್ಲಿನ ವಿಷಯಗಳಾವುವೂ ಹೊಸದಾಗಿರುವುದಿಲ್ಲ. ಅವೆಲ್ಲವೂ ಕೊಲ್ಕತಾದ ರಾಮಕೃಷ್ಣ ಮಿಶನ್ ಮತ್ತು ಅಲ್ಮೋರಾದ ಅದ್ವೈತಾಶ್ರಮಗಳ ಪ್ರಕಟಣೆಗಳಲ್ಲೇ ಇವೆ.ಆದರೆ ಲೇಖನದ ಭಾಷೆ, ಕೆಲ ಪದಗಳು ಅಕ್ಷೇಪಾರ್ಹವಷ್ಟೇ ಅಲ್ಲ, ಪತ್ರಿಕೆಯ ಘನತೆಗೂ ಶೋಭೆ ತರುವಂತಿರುವುದಿಲ್ಲ.ಇದರಿಂದಾಗಿ ಹಲವರ ಭಾವನೆಗಳಿಗೆ ಧಕ್ಕೆಯಾಗುತ್ತದೆ.ಅದು ರಾಜ್ಯದ ವಿವಿಧೆಡೆ ಸಾರ್ವಜನಿಕವಾಗಿಯೂ ವ್ಯಕ್ತವಾಗುತ್ತದೆ.ಅದಕ್ಕೆ ಪತ್ರಿಕೆಯ ಪ್ರತಿಕ್ರಿಯೆ? ಒಂದಕ್ಷರದ ಕ್ಷಮಾಯಾಚನೆಯೂ ಇಲ್ಲ!
ಕಂಡವರ ಮಕ್ಕಳನ್ನು ಕಾಡಿಗಟ್ಟುತ್ತಿರುವವರು ಯಾರು?
– ವಿಘ್ನೇಶ್, ಯಲ್ಲಾಪುರ
ಮೊನ್ನೆ ಮೊನ್ನೆ ನಡೆದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆಯನ್ನು ನೋಡಿ ಕೆಲವು ಪ್ರಗತಿಪರರು “ಯೋಧ”ರನ್ನು ಕುರಿತು,ಬಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಾರೆ ಎಂದು ಬೊಬ್ಬೆ ಹಾಕುತಿದ್ದರು.ಇದು 24 – 11- 2008ರಂದು ಕನ್ನಡ ಪ್ರಭದಲ್ಲಿ ಪ್ರಕಟವಾಗಿದ್ದ ಲೇಖನ.ಈ ಲೇಖನವನ್ನೊಮ್ಮೆ ಓದಿ.ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿದವರು ಯಾರು ಎಂಬುದು ಅರ್ಥವಾಗಬಹುದು
ಅವಳು ಪಾರ್ವತಿ!
ಕೊಪ್ಪ ತಾಲೂಕಿನ ಸೂರ್ಯದೇವಸ್ಥಾನದ ಹುಡುಗಿ. ಕಾಲೇಜು ವಿದ್ಯಾಭ್ಯಾಸಕ್ಕೆಂದು ಹೋಗಿ ಸೇರಿದ್ದು ಶಿವಮೊಗ್ಗೆಯನ್ನು. ತನ್ನ ಕುಟುಂಬದಲ್ಲಿದ್ದ ಬಡತನ ಅವಳಲ್ಲಿ ಸಾಮಾಜಿಕ ಕಳಕಳಿಯನ್ನು ಹುಟ್ಟುಹಾಕಿತ್ತು; ಶಿವಮೊಗ್ಗದಲ್ಲಿದ್ದಷ್ಟು ವರ್ಷವೂ ಒಂದಲ್ಲ ಒಂದು ಸಾಮಾಜಿಕ ವಿಷಯದ ಕುರಿತು ಹೋರಾಟ ಮಾಡಲು ಪ್ರೇರೇಪಿಸಿತ್ತು. ಅದಕ್ಕಾಗಿ ವಿವಿಧ ಸಂಘಟನೆಗಳನ್ನು ಸೇರಿದಳು. ‘ಮಹಿಳಾ ಜಾಗೃತಿ’ಯ ಕಾರ್ಯಕರ್ತೆಯಾಗಿ ಹಗಲಿರುಳು ದುಡಿದಳು, ನಾಯಕಿಯಾಗಿ ಬೆಳೆದಳು. ಶಿವಮೊಗ್ಗದ ಕೆಲ ಉಪನ್ಯಾಸಕರು ದೂರದ ಆಂಧ್ರದಿಂದ ಗದ್ದರ್ನನ್ನು ಕರೆಸಿ ನಡೆಸಿದ ಸಭೆಗಳಲ್ಲಿ ನಡುರಾತ್ರಿಯವರೆಗೂ ಭಾಗವಹಿಸಿದಳು. ರೈತ ಹೋರಾಟದಿಂದ ಹಿಡಿದು ನದೀಮೂಲ ರಕ್ಷಣೆಯಂತಹ ವಿಷಯದವರೆಗೆ, ಕಾಲೇಜು ವಿದ್ಯಾರ್ಥಿನಿಯರ ಸಮಸ್ಯೆಯಿಂದ ಹಿಡಿದು ಕೊಳಚೆ ನಿವಾಸಿಗಳ ದನಿಯಾಗುವವರೆಗೆ ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಂಡಳು. ಹೀಗೆ ಅತ್ಯಂತ ಕ್ರಿಯಾಶೀಲಳಾಗಿದ್ದ ಹುಡುಗಿ, ಇದ್ದಕ್ಕಿದ್ದಂತೆ ಒಂದು ದಿನ ಕಣ್ಮರೆಯಾದಳು. ನಾಲ್ಕೈದು ವರ್ಷ ಪಾರ್ವತಿ ಎಲ್ಲಿದ್ದಾಳೆ ಎಂಬುದೇ ನಾಗರಿಕ ಸಮಾಜಕ್ಕೆ ತಿಳಿದಿರಲಿಲ್ಲ. ಸಮಾಜದ ಕುರಿತು ಅಪಾರ ಕಳಕಳಿಯನ್ನಿಟ್ಟುಕೊಂಡು ಹಗಲಿರುಳೂ ಸೈಕಲ್ ತುಳಿಯುತ್ತಿದ್ದ ಹುಡುಗಿ ಹೀಗೆ ಇದ್ದಕ್ಕಿದಂತೆ ಕಣ್ಮರೆಯಾಗಿದ್ದು ಏಕೆ? ಎಲ್ಲಿ ಹೋದಳು?
ಈ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, 2003ರ ನವೆಂಬರ್ 17ನೇ ತಾರೀಖು. ಕಾರ್ಕಳ ತಾಲೂಕಿನ ಈದು ಬಳಿಯ ಬೊಲ್ಲೊಟ್ಟುವಿನ ಮನೆಯೊಂದರಲ್ಲಿ ರಾತ್ರಿ ಸಿಡಿದ ಪೋಲೀಸರ ಗುಂಡಿನ ಬೆಳಕಲ್ಲಿ ಪಾರ್ವತಿ ಗೋಚರಿಸಿದಳು. ಹರೆಯದ ಕನಸುಗಳೆಲ್ಲ ಅರಳಿ,ಬದುಕಿನ ಗಾಂಭೀರ್ಯದತ್ತ ಹೊರಳಬೇಕಾದ ವಯಸ್ಸಿನಲ್ಲಿ ಪಾರ್ವತಿ ಹೆಣವಾಗಿ ಬಿದ್ದಿದ್ದಳು! ಅವಳ ಜೊತೆಗೇ ಮಸಣ ಸೇರಿದ ಹಾಜಿಮಾಳ ಕಥೆಯೂ ಇದಕ್ಕಿಂತ ಭಿನ್ನವೇನಲ್ಲ! Read more