ವಿಷಯದ ವಿವರಗಳಿಗೆ ದಾಟಿರಿ

Posts tagged ‘ಲಾಲಾ ಹರದಯಾಳ್’

6
ಸೆಪ್ಟೆಂ

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 21:
ಲಾಲಾ ಹರದಯಾಳ್
– ರಾಮಚಂದ್ರ ಹೆಗಡೆ

IMG26‘ಬೇಕಾಗಿದ್ದಾರೆ – ಭಾರತದಲ್ಲಿ ಬಂಡಾಯವೆಬ್ಬಿಸಲು ಸೈನಿಕರು.
ವೇತನ – ಸಾವು
ಬಹುಮಾನ – ಹುತಾತ್ಮತೆ
ಪೆನ್ಷನ್ – ಸ್ವಾತಂತ್ರ್ಯ
ಯುದ್ಧ ಕ್ಷೇತ್ರ – ಭಾರತ’

ಹೀಗೆ ದಪ್ಪ ದಪ್ಪ ಅಕ್ಷರಗಳಲ್ಲಿ ಈ ಜಾಹೀರಾತು, 1914ರ ಸೆಪ್ಟೆಂಬರ್ ತಿಂಗಳಲ್ಲಿ ಹೊರಬಿದ್ದ “ಗದರ್” ಪತ್ರಿಕೆಯ ಮುಖಪುಟದಲ್ಲಿ ಅಚ್ಚಾಗಿತ್ತು. ಗದರ್ (ಬಂಡಾಯ) ಪಕ್ಷ, ಗದರ್ ಪತ್ರಿಕೆ – ಮೊದಲನೆಯ ಮಹಾಯುದ್ಧ ಆರಂಭವಾಗುವುದಕ್ಕೆ ಸ್ವಲ್ಪ ಮುಂಚೆ ಸ್ಥಾಪಿತವಾಗಿ, ಸಶಸ್ತ್ರ ಬಂಡಾಯವೆಬ್ಬಿಸಿ ಭಾರತವನ್ನು ಸ್ವತಂತ್ರಗೊಳಿಸಲು ಮಹಾನ್ ಪ್ರಯತ್ನ ನಡೆಸಿದವು. ಈ ಕ್ರಾಂತಿಯ ಉರಿಯೆಬ್ಬಿಸಿದ ಸಾಹಸಿ ಲಾಲಾ ಹರದಯಾಳ್. ವಿದೇಶದಲ್ಲಿರುವ ಭಾರತೀಯರನ್ನು ಸಂಘಟಿಸಿ ಅವರಲ್ಲಿ ತಾಯ್ನಾಡಿನ ಸ್ವಾತಂತ್ರ್ಯ ಭಾವನೆ ಅರಳಿಸಿ ಅವರೆಲ್ಲರೂ ಸ್ವದೇಶಕ್ಕೆ ತೆರಳಿ ದಂಗೆಯೇಳುವಂತೆ ಮಾಡಬೇಕು ಎಂಬುದು ಲಾಲನ ಅಪೇಕ್ಷೆಯಾಗಿತ್ತು. 1884 ರಲ್ಲಿ ಜನಿಸಿದ ಹರದಯಾಳ್ ಚಿಕ್ಕಂದಿನಲ್ಲೇ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ತಮ್ಮ ತಂದೆ ತಾಯಿಯಿಂದ ಕೇಳಿ ತಿಳಿದಿದ್ದರು. ಬ್ರಿಟಿಷ್ ಸರ್ಕಾರದಿಂದಲೇ ವಿದ್ಯಾರ್ಥಿ ವೇತನ ಪಡೆದು ಉನ್ನತ ವ್ಯಾಸಂಗಕ್ಕಾಗಿ ಆಕ್ಸ್ಫರ್ಡ್ ಗೆ ತೆರಳಿದ ಲಾಲಾ ಅಲ್ಲಿ ಸಾವರ್ಕರ್, ಶ್ಯಾಮಜಿ ಕೃಷ್ಣವರ್ಮ, ಭಾಯಿ ಪರಮಾನಂದರ ಸಂಪರ್ಕಕ್ಕೆ ಬಂದು ಭಾರತ ಭಕ್ತರಾಗಿ ಬದಲಾದರು. Read more »