ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೪
– ಮು. ಅ. ಶ್ರೀರಂಗ ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
ದಾಟು ಮತ್ತು ಭಾರತೀಪುರ
—————————–
ಯು ಆರ್ ಅನಂತಮೂರ್ತಿ ಅವರ “ಭಾರತೀಪುರ” ಕಾದಂಬರಿಯ ನಾಯಕ ಜಗನ್ನಾಥನ ‘fickle minded personality’ ನಮ್ಮ ನವ್ಯ ಸಾಹಿತ್ಯದ ಆಧುನಿಕ ಪ್ರಜ್ಞೆಗೆ ತುಂಬ ಹತ್ತಿರವಾಗಿದೆ. ಇದು ಮೊದಲು ಪ್ರಕಟವಾಗಿದ್ದು ೧೯೭೩ರಲ್ಲಿ. ಸುಮ್ಮನೆ “ಇದೂ ಒಂದು ಮಾಮೂಲಿ ಕಾದಂಬರಿ” ಎಂದು ಓದಿಕೊಂಡು ಹೋಗುವ ಹಾಗಿದ್ದರೆ ಯಾವ ಜಿಜ್ಞಾಸೆಯೂ ಬೇಕಾಗುವುದಿಲ್ಲ. ಆದರೆ ಜಗನ್ನಾಥ ತನ್ನ ಊರಾದ ಭಾರತೀಪುರದಲ್ಲಿ ತಾನು ತರಬೇಕೆಂದುಕೊಳ್ಳುವ ಬದಲಾವಣೆಗೆ ತಕ್ಕ ತಯಾರಿ ನಡೆಸಿದ್ದನೆ? ನಡೆಸಿದ್ದರೆ ಅದು ಯಾವ ಮಾದರಿಯದ್ದು ಎಂದು ಯೋಚಿಸಲು ಹೊರಟಾಗ ನಿರಾಸೆಯಾಗುತ್ತದೆ. ಜತೆಗೆ ಈ ಕಾದಂಬರಿಯಲ್ಲಿ ಈತನಿಗಿಂತ ಶಕ್ತಿಶಾಲಿಯಾದ, ಗಟ್ಟಿ ಮನಸ್ಸಿನ ಸಾಕಷ್ಟು ವ್ಯಕ್ತಿಗಳಿದ್ದಾರೆ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೩
– ಮು.ಅ ಶ್ರೀರಂಗ, ಬೆಂಗಳೂರು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
ಭೈರಪ್ಪನವರ ದಾಟು ಕಾದಂಬರಿಯ ಬಗ್ಗೆ :
ಮುಖಾಮುಖಿ-೨ರಲ್ಲಿ ವಂಶವೃಕ್ಷ ಮತ್ತು ಸಂಸ್ಕಾರ ಕಾದಂಬರಿಗಳ ಬಗ್ಗೆ ನಾನು ಬರೆದ ಲೇಖನಕ್ಕೆ (ನಿಲುಮೆ–೧೫-೧೧-೧೩) ಓದುಗರು ಪ್ರತಿಕ್ರಿಯಿಸುವಾಗ”ದಾಟು” ಕಾದಂಬರಿಯ ಕೆಲವು ಅಂಶಗಳನ್ನು ತಿಳಿಸಿದ್ದರು. ಅವುಗಳ ಬಗ್ಗೆ ಸಂಕ್ಷಿಪ್ತವಾಗಿ ಪ್ರಸ್ತಾಪಿಸಿ ಮುಂದುವರಿಯುವುದು ಉತ್ತಮ ಎಂದು ಭಾವಿಸಿದ್ದೇನೆ. ಭೈರಪ್ಪ ಮತ್ತು ಅನಂತಮೂರ್ತಿಯವರ ವಂಶವೃಕ್ಷ -ಸಂಸ್ಕಾರ ಹಾಗು ದಾಟು-ಭಾರತೀಪುರ ಕಾದಂಬರಿಗಳ ವಸ್ತುವಿನಲ್ಲಿ ಕೆಲವು ಸಾಮ್ಯತೆಗಳಿವೆ. ಇವುಗಳ ತೌಲನಿಕ ಓದಿನಿಂದ ಕನ್ನಡದ ಈ ಇಬ್ಬರು ಮಹತ್ವದ ಸಾಹಿತಿಗಳಲ್ಲಿ ಸಾಮಾನ್ಯವಾದ (common ಎಂಬ ಅರ್ಥದಲ್ಲಿ ) ಒಳನೋಟಗಳು ಏನಾದರೂ ಇವೆಯೇ ಎಂಬುದನ್ನು ತಿಳಿಯಬಹುದು . ಇದನ್ನು ನಿಲುಮೆಯ ಓದುಗರು ಸ್ಪಷ್ಟವಾಗಿ ಹೇಳಿದ್ದಾರೆ. ಇದರ ಜತೆಗೆ ಧರ್ಮ,ರಿಲಿಜನ್,ಒರಿಯಂಟಲಿಸಂನ ಪುನರುತ್ಪಾದನೆ,ಬ್ರಾಹ್ಮಣ ಪುರೋಹಿತಶಾಹಿ,ಸೆಕ್ಯುಲರಿಸಂ ……. ಈ ಮಾತುಗಳೂ ಬಂದಿವೆ. ಕಾದಂಬರಿಯೊಂದನ್ನು ಈ ರೀತಿಯ ಸಮಾಜಶಾಸ್ತ್ರೀಯ ಪರಿಭಾಷೆಯಲ್ಲಿ ವಿಮರ್ಶಿಸುವುದು ಅನಿವಾರ್ಯವೇ?ಅವಶ್ಯವೇ?ಎಂಬುದು ಮುಖ್ಯವಾದ ಪ್ರಶ್ನೆ. ಕಾದಂಬರಿಯೊಂದನ್ನು ಸಾಹಿತ್ಯ ವಿಮರ್ಶೆಯ ಪರಿಧಿಯೊಳಗೆ ಚರ್ಚಿಸುವುವುದು ಉತ್ತಮ ಎಂದು ನನ್ನ ಅಭಿಪ್ರಾಯ. ಜತೆಗೆ ಉತ್ತಮ ಸಾಹಿತ್ಯ ಕೃತಿಯ ವಿಮರ್ಶೆಯ ಪರಿಕರಗಳು ಆ ಕೃತಿಯ ಒಳಗೇ ಅಡಕವಾಗಿರುತ್ತದೆ ಎಂಬ ಒಂದು ಮಾತಿದೆ. ಹೀಗಾಗಿ ಸಾಹಿತ್ಯೇತರ ಪರಿಕರಗಳಿಂದ ಒಂದು ಕಾದಂಬರಿಯ ಗುಣ-ದೋಷಗಳನ್ನು ಪಟ್ಟಿಮಾಡುವ ಮುನ್ನ ಇನ್ನೊಮ್ಮೆ ಯೋಚಿಸಬೇಕಾಗಿದೆ. ಈ ಎಲ್ಲಾ ಅಂಶಗಳನ್ನು ವಿವರವಾಗಿ ಬರೆಯಲು ಸದ್ಯದ ಮುಖಾಮುಖಿಗೆ ನಾನು ಹಾಕಿಕೊಂಡಿರುವ ಮಿತಿ ಅಡ್ಡ ಬಂದಿದೆ. ಸಾಧ್ಯವಾದರೆ ಮುಖಾಮುಖಿ ಲೇಖನಮಾಲೆಯ ಕೊನೆಯಲ್ಲಿ ಬರೆಯಲು ಪ್ರಯತ್ನಿಸುತ್ತೇನೆ.
ಮತ್ತಷ್ಟು ಓದು
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೨
– ಮು.ಅ ಶ್ರೀರಂಗ,ಬೆಂಗಳೂರು
(“ನಿಲುಮೆ”ಯಲ್ಲಿ ೧೦-೧೦-೨೦೧೩ರಂದು ಪ್ರಕಟವಾದ ‘ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧‘ ಲೇಖನದ ಎರಡನೇ ಭಾಗ)
ವಂಶವೃಕ್ಷ ಮತ್ತು ಸಂಸ್ಕಾರ
—————————-
ಭೈರಪ್ಪನವರ ಮುಖ್ಯ ಕಾದಂಬರಿಗಳಲ್ಲಿ ಒಂದಾದ “ವಂಶವೃಕ್ಷ”ದ ವಸ್ತು,ಪಾತ್ರಗಳು,ಕಾದಂಬರಿಯ ವಿನ್ಯಾಸ ಇತ್ಯಾದಿಗಳ ಬಗ್ಗೆ ನಮ್ಮ ವಿಮರ್ಶಕರು ಈಗಾಗಲೇ ಸಾಕಷ್ಟು ವಿವರವಾಗಿ ಚರ್ಚಿಸಿದ್ದಾರೆ; ವಿವೇಚನೆ ನಡೆಸಿದ್ದಾರೆ. ಹೀಗಾಗಿ ಮತ್ತೊಮ್ಮೆ ಆ ಕಾದಂಬರಿಯ ಪೂರ್ಣ ವಿಮರ್ಶೆ ನನ್ನ ಉದ್ದೇಶವಲ್ಲ.
“ವಂಶವೃಕ್ಷ”ದ ವಿಮರ್ಶೆಗಳಲ್ಲಿ ಸಹಜವಾಗಿ ಶ್ರೀನಿವಾಸ ಶ್ರೋತ್ರಿ ಮತ್ತು ಅವರ ಸೊಸೆ ಕಾತ್ಯಾಯನಿಯ ಜೀವನದಲ್ಲಿ ಅವರುಗಳು ಎದುರಿಸಬೇಕಾಗಿ ಬಂದಂತಹ ಸನ್ನಿವೇಶಗಳು ಮತ್ತು ಸಂಘರ್ಷಗಳು ವಿಶೇಷವಾಗಿ ಚರ್ಚೆಗೆ ಒಳಪಟ್ಟಿರುವ ಅಂಶಗಳು. ಶ್ರೋತ್ರಿಯವರು ತಮ್ಮ ಜೀವನಕ್ಕೆ ಸನಾತನ ಧರ್ಮವನ್ನು ಅಧಾರವನ್ನಾಗಿಟ್ಟುಕೊಂಡವರು. ಅದರಲ್ಲಿ ನಂಬಿಕೆಯಿಟ್ಟವರು. ಆದರೆ ಕರ್ಮಠರಲ್ಲ. ಧರ್ಮದ ಪದಶಃ,ವಾಕ್ಯಶಃ ಅರ್ಥಗಳಿಗೆಗಷ್ಟೇ ಅಂಟಿಕೊಂಡವರಲ್ಲ.ಧರ್ಮದ ಬಗ್ಗೆ ತಮಗಿರುವ ನಂಬಿಕೆ,ವಿಶ್ವಾಸಗಳನ್ನು ಇನ್ನೊಬ್ಬರ ಮೇಲೆ ಹೇರಿದವರಲ್ಲ. ಅವರ ಮಗ ಅಕಾಲ ಮರಣಕ್ಕೆ ತುತ್ತಾದಾಗ ವಿಧವೆಯಾದ ಸೊಸೆ ಕಾತ್ಯಾಯನಿ ಆ ಕಾಲದ(೧೯೨೪ರ ಆಸುಪಾಸಿನದು)ಪದ್ಧತಿಯಂತೆ ಮಡಿ ಹೆಂಗಸು” (ತಲೆಗೂದಲು ತೆಗೆಸುವುದು, ಕೆಂಪು ಸೀರೆ ಉಡುವುದು ಇತ್ಯಾದಿ)ಆಗಲಿಲ್ಲ.
ಭೈರಪ್ಪನವರ ಕಾದಂಬರಿಗಳ ವಿಮರ್ಶೆಗಳೊಂದಿಗೆ ಮುಖಾಮುಖಿ – ೧
– ಮು.ಅ ಶ್ರೀರಂಗ, ಬೆಂಗಳೂರು
ಎಸ್. ಎಲ್. ಭೈರಪ್ಪನವರ” ಧರ್ಮಶ್ರೀ”ಯಿಂದ “ಅನ್ವೇಷಣ”ದವರೆಗಿನ ಹನ್ನೆರೆಡು ಕಾದಂಬರಿಗಳನ್ನು ಕುರಿತಂತೆ ಒಟ್ಟು ಅರವತ್ತಾರು ವಿಮರ್ಶೆಗಳಿರುವ “ಸಹಸ್ಪಂದನ” ಎಂಬ ವಿಮರ್ಶಾ ಗ್ರಂಥ ೧೯೭೮ರಲ್ಲಿ ಪ್ರಕಟವಾಯ್ತು. (ಪ್ರಕಾಶಕರು :ಸಾಹಿತ್ಯ ಭಂಡಾರ ಬೆಂಗಳೂರು —೫೩) ಅದರ ಪ್ರಕಾಶಕರು ಹೇಳಿರುವ ಮಾತುಗಳಿಂದ ಈ ನನ್ನ ಮುನ್ನುಡಿಯನ್ನು ಪ್ರಾರಂಭಿಸುವುದು ಉತ್ತಮ.”ಇದು (ಸಹಸ್ಪಂದನ) ಭೈರಪ್ಪನವರ ಮೇಲಿನ ಕೇವಲ ಅಭಿಮಾನದಿಂದ ತಂದಿರುವ ಗ್ರಂಥವಲ್ಲ. ಮೆಚ್ಚಿಗೆ,ಹೊಗಳಿಕೆಗಳ ಬರವಣಿಗೆಯಿಂದ ಯಾವ ಲೇಖಕನ ಕೃತಿಗಳೂ ಬದುಕಲಾರವು. ಇಲ್ಲಿ ಬಂದಿರುವ ಲೇಖನಗಳು ಒಂದೇ ಬಗೆಯ ದೃಷ್ಟಿಕೋನದವೂ ಅಲ್ಲ. ಮೆಚ್ಚುಗೆ, ವಿರೋಧ,ಟೀಕೆ,ಘಾಟು, ಹೀಗೆ ……….. ”
ಈ ಮುಖಾಮುಖಿಯನ್ನು ಆ ಒಂದು ಎಚ್ಚರ,ಜವಾಬ್ದಾರಿಗಳ ಹಿನ್ನೆಲೆಯಲ್ಲಿ ನಡೆಸುವುದು ನನ್ನ ಕರ್ತವ್ಯವೆಂದು ಭಾವಿಸಿದ್ದೇನೆ.
ನಮ್ಮ ಅಕಾಡೆಮಿಕ್ ವಲಯದ ವಿಮರ್ಶಕರುಗಳು ಜತೆಗೆ ನಾನ್ ಅಕಾಡೆಮಿಕ್ ವಿಮರ್ಶಕರುಗಳ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಹೊಸ ಕನ್ನಡ ಸಾಹಿತ್ಯದಲ್ಲಿ ವಿಮರ್ಶೆಗೊಂದು ಮಹತ್ವವಿದೆ. ಕಾಲಾನುಕಾಲಕ್ಕೆ ಅದು ಓದುಗರ ವಿವೇಕವನ್ನು ಎಚ್ಚರಿಸುತ್ತಾ, ಸಾಹಿತಿಗಳನ್ನು ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಪ್ರಭಾವಿಸುತ್ತಲಿದೆ. ಇಷ್ಟಲ್ಲದೆ ಸಾಹಿತಿಗಳು ಹೊಸಹೊಸ ತಂತ್ರಗಳತ್ತ, ವಿಷಯಗಳತ್ತ ಯೋಚಿಸುವಂತೆ ಹೊರಳುವಂತೆ ಮಾಡಿವೆ. ಭಾಷೆಯನ್ನು ಪರಿಣಾಮಕಾರಿಯಾಗಿ ಯಾವ ರೀತಿ ಉಪಯೋಗಿಸಬೇಕೆನ್ನುವ ಮಾರ್ಗದರ್ಶನ ಕೂಡ ವಿಮರ್ಶೆಯಿಂದ ನಡೆಯುತ್ತಿರುತ್ತದೆ.
ಮತ್ತಷ್ಟು ಓದು