ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು? ( ಭಾಗ – ೪ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಸಾಮಾನ್ಯವಾಗಿ ಪಶ್ಚಿಮದಲ್ಲಿ ನಮ್ಮ ಸಂಸ್ಕೃತಿಗೆ ಸಂಬಂಧಿಸಿದಂತೆ ಪದೇಪದೇ ಕೇಳಿಬರುವ ಈ ಪ್ರಶ್ನೆಗಳನ್ನು ಗಮನಿಸಿ. ನೀವು ಹಣೆಗೆ ತಿಲಕ ಇಡುವುದೇಕೆ? ಗೋಮಾಂಸವನ್ನು ನೀವೇಕೆ ತಿನ್ನುವುದಿಲ್ಲ? ನೀವು ಶಿಶ್ನವನ್ನು ಪೂಜೆ ಮಾಡುತ್ತೀರಂತೆ ಹೌದೆ? ಜಾತಿ ಪದ್ಧತಿಯ ಬಗ್ಗೆ ನಿಮ್ಮ ಅನಿಸಿಕೆಯೇನು? ಈಗಲೂ ಭಾರತದಲ್ಲಿ ವಿಧವೆಯರನ್ನು ಸುಡುತ್ತಾರೆಯೇ? ನಿಮ್ಮ ದೇವರುಗಳಿಗೇಕೆ ಆರೆಂಟು ಕೈಗಳು ಇರುತ್ತವೆ? ನಿಮ್ಮ ರಿಲಿಜನ್ನಿನ ಚಿಹ್ನೆ ಯಾವುದು? ನೀವು ದೇವಸ್ಥಾನದಲ್ಲಿ ಮೂರ್ತಿಪೂಜೆ/idolatry ಮಾಡುತ್ತೀರಾ? ನೀವು ದೇವರನ್ನು ನಂಬುತ್ತೀರಾ? Are you religious? ಇತ್ಯಾದಿ. ಈ ರೀತಿಯ ಪ್ರಶ್ನೆಗಳು ಎದುರಾದಾಗ ಯಾರಾದರೂ ಹೇಗೆ ಪ್ರತಿಕ್ರಿಯಿಸಬಹುದು? ಸ್ಥೂಲವಾಗಿ ಹೇಳುವುದಾದರೆ, ಇದಕ್ಕೆ ಎರಡು ವಿಧದಲ್ಲಿ ಪ್ರತಿಕ್ರಿಯಿಸಬಹುದು. ಮೊದಲನೆಯದು, ಈ ಪ್ರಶ್ನೆಗಳು ಗ್ರಹಿಸಲು ಸಾಧ್ಯವಾಗುವಂಥ ಮತ್ತು ನಮಗೆ ಅರ್ಥವಾಗುವ ಪ್ರಶ್ನೆಗಳು ಎಂಬ ಊಹೆಯೊಂದಿಗೆ ಈ ಪ್ರಶ್ನೆಗಳಿಗೆ ಉತ್ತರ ನೀಡುವುದು. ಸುಧಾರಣಾವಾದಿಗಳ ಕಾಲದಿಂದ ಇಂದಿನವರೆಗೆ ನಾವು ಅನುಸರಿಸಿದ ಮಾರ್ಗ ಇದೇ. ಆದರೆ ಅಮೆರಿಕೆಯಲ್ಲಿ ನೆಲೆಸುವ ಭಾರತೀಯರ [ಅಷ್ಟೇ ಏಕೆ, ಸಂಕುಚಿತಗೊಳ್ಳುತ್ತಿರುವ ಆ ಜಗತ್ತಿನಲ್ಲಿ, ಭಾರತದಲ್ಲಿನ ಭಾರತೀಯರ] ಪರಿಸ್ಥಿತಿ ಇಂದು ಬದಲಾಗಿದೆ: ಹಿಂದಿನ ಕಾಲದ ಸುಧಾರಕರು ಭಾರತೀಯ ಸಂದರ್ಭದಲ್ಲಿ ಮಾತನಾಡುತ್ತಿದ್ದರು, ಆದರೆ ನಾವಿಂದು ಪಾಶ್ಚಾತ್ಯ ಸಂಸ್ಕೃತಿಯ ಸಂದರ್ಭದಲ್ಲಿ ನಿಂತು ಮಾತನಾಡುತ್ತಿದ್ದೇವೆ. ಬದಲಾದ ಈ ಸಾಂಸ್ಕೃತಿಕ ಪರಿಸ್ಥಿತಿಯಲ್ಲಿ ನಾವೂ ನಮ್ಮ ಸುಧಾರಣಾವಾದಿಗಳು ನಡೆದ ಮಾರ್ಗವನ್ನು ಅನುಸರಿಸಿದರೆ ಉಂಟಾಗುವ ಪರಿಣಾಮವನ್ನು ಗ್ರಹಿಸುವುದು ಬಹಳ ಮುಖ್ಯವಾಗಿದೆ. ಮತ್ತಷ್ಟು ಓದು
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೩ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಒಂದು ಹೋಲಿಕೆ
ವಸಾಹತುಶಾಹಿ ಕಾಲದ ಭಾರತೀಯ ಬುದ್ಧಿಜೀವಿಗಳು ಈ ಕಥೆಯನ್ನು ಸಾರಾಸಗಟಾಗಿ ನಂಬಿದ್ದರು. (ಏಕೆ ಎಂಬುದು ಒಂದು ಮುಖ್ಯ ಪ್ರಶ್ನೆಯಾದರೂ, ಈ ಲೇಖನದಲ್ಲಿ ನಾನದನ್ನು ಚರ್ಚೆಗೆತ್ತಿಕೊಳ್ಳುವುದಿಲ್ಲ). ಇದು ಎರಡು ಪರಸ್ಪರ ವಿರುದ್ಧವಾದ ಪ್ರತಿಕ್ರಿಯೆಗಳಿಗೆ ದಾರಿಮಾಡಿತು: ಒಂದೆಡೆ ಕೆಲವು ಜನರು ಹಿಂದುಗಳ ರಿಲಿಜನ್ನಿನ ಪುನರುತ್ಥಾನಕ್ಕಾಗಿ ಪರಿಶ್ರಮಿಸಿದರು. ವೇದ ಉಪನಿಷತ್ತುಗಳಲ್ಲಿರುವ ಶುದ್ಧವಾದ ರಿಲಿಜನ್ನಿಗೆ ಹಿಂದಿರುಗಬೇಕು ಎಂದು ಅವರು ವಾದಿಸಿದರು. ಇನ್ನೊಂದೆಡೆಯಲ್ಲಿ ಹಿಂದೂಯಿಸಂ ಈಗ ಹೇಗಿದೆಯೋ ಅದೇ ಸರಿ ಎಂದು ಗಂಟಾಘೋಷವಾಗಿ ಸಮರ್ಥಿಸುವವರೂ ಇದ್ದರು. ಈ ಎರಡು ತುದಿಗಳ ನಡುವೆ ಹಲವು ವಿವಿಧ ನಿಲುವುಗಳೂ ನಿಧಾನವಾಗಿ ಹರಳುಗಟ್ಟಿದ್ದವು. ಮತ್ತಷ್ಟು ಓದು
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೨ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ಹಿನ್ನೆಲೆ:
ಭಾರತದ ಹಲವು ಪ್ರದೇಶಗಳ ಮೇಲೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯು ತನ್ನ ಹಿಡಿತವನ್ನು ಬಿಗಿಗೊಳಿಸಿ, ಅದರ ಆಡಳಿತಾಧಿಕಾರಿಗಳು ಆಳುವವರ ಸ್ಥಾನಕ್ಕೆ ಬಂದಾಗ, ಭಾರತೀಯ ಸಂಪ್ರದಾಯಗಳ ಕುರಿತಂತೆ ಒಂದು ವಿಶೇಷ ಹಗೆತನವು ವಸಾಹುತು ಆಡಳಿತ ನೀತಿಯ ಹೆಗ್ಗುರುತಾಯಿತು. ಈ ಹಗೆತನಕ್ಕೆ ಬಹಳ ಪುರಾತನ ಇತಿಹಾಸವಿರುವುದು ನಿಜ. ಹಿಂದೂಗಳ ‘ರಿಲಿಜನ್’ ಆದ ‘ಹಿಂದೂಯಿಸಂ’ನ ಪ್ರತಿ ಅಂಶವೂ ಅವರಿಗೆ ಆಕ್ಷೇಪಾರ್ಹ ಮತ್ತು ಅಸಂಗತವಾಗಿ ಕಂಡಿದ್ದು ಹಳೆಯ ವಿಚಾರ. ಬಾಲ್ಯವಿವಾಹ, ಸತಿ ಪದ್ಧತಿ ಮುಂತಾದ ಅಸಹನೀಯ ಮತ್ತು ಅನೈತಿಕ ಆಚರಣೆಗಳನ್ನು ಅವರು ಭಾರತದಲ್ಲಿ ‘ಕಂಡುಕೊಂಡಿದ್ದರಿಂದ’ ಮಾತ್ರವೇ ಈ ಹಗೆತನವು ಬೆಳೆದದ್ದಲ್ಲ. ಅವರ ಹಗೆತನಕ್ಕೆ ಸಾಕಷ್ಟು ಆಳವಾದ ಬೇರುಗಳಿವೆ: ತಮ್ಮ ರಿಲಿಜನ್ನಿನ ಕನ್ನಡಕದಿಂದ ನೋಡಿದಾಗ, ಇಂತಹ ವಿಕೃತ ಆಚರಣೆಗಳು ಸುಳ್ಳು ರಿಲಿಜನ್ಗಳ ಅವಿಭಾಜ್ಯ ಅಂಗಗಳು ಎಂದು ಅವರಿಗೆ ಅನಿಸಿತ್ತು. ‘ಹಿಂದೂಯಿಸಂ’ ಎನ್ನುವುದು ಸುಳ್ಳು ಮತ್ತು ಅವನತಿ ಹೊಂದಿದ ರಿಲಿಜನ್ನಾದ್ದರಿಂದ, ಇಂತಹ ಅರ್ಥಹೀನ ವಿಕೃತ ಆಚರಣೆಗಳು ಕೇವಲ ಆಕಸ್ಮಿಕಗಳಲ್ಲ, ಬದಲಿಗೆ ಅದರ ಅಗತ್ಯ ಲಕ್ಷಣಗಳು ಎಂದು ಅವರು ನಂಬಿದ್ದರು. ಮತ್ತಷ್ಟು ಓದು
ನಾವೇಕೆ ಪಾಶ್ಚಾತ್ಯ ಸಂಸ್ಕೃತಿಯನ್ನು ಅರ್ಥ ಮಾಡಿಕೊಳ್ಳಬೇಕು..? ( ಭಾಗ – ೧ )
ಎಸ್.ಎನ್. ಬಾಲಗಂಗಾಧರ
(ತಿದ್ದುಪಡಿ ಮಾಡಿದ ಅನುವಾದ.
ಮೂಲ ಅನು: ಸಿ.ಎಸ್.ಎಲ್.ಸಿ ಸಂಶೋಧಕರು, ‘ಪೂರ್ವಾವಲೋಖನ’ ಕೃತಿಯಲ್ಲಿ ಪ್ರಕಟವಾಗಿದೆ.)
ನನ್ನ ಅನುಭವವೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಮೂಲಕ ಈ ಲೇಖನವನ್ನು ಪ್ರಾರಂಭಿಸುತ್ತೇನೆ. ಅಮೇರಿಕಾದಲ್ಲಿರುವ ಅನಿವಾಸಿ ಭಾರತೀಯರ ಬಾಯಲ್ಲಿ ನಾನು ಈ ಕೆಳಗಿನ ಮಾತುಗಳನ್ನು ಪದೇ ಪದೇ ಕೇಳಿದ್ದೇನೆ: “ನಾನು ಹಲವು ದಶಕಗಳ ಹಿಂದೆ ಅಮೇರಿಕಕ್ಕೆ ಬಂದಾಗ ನನಗೆ ಹಿಂದೂಯಿಸಂನ ಕುರಿತು ಅಷ್ಟಾಗಿ ತಿಳಿದಿರಲಿಲ್ಲ. ನನ್ನ ಈ ಅಜ್ಞಾನದ ಕುರಿತು ನನಗೆ ಅರಿವು ಮೂಡಿದ್ದೇ ನನ್ನ ಮಕ್ಕಳು ಹಿಂದೂಯಿಸಂ ಎಂದರೆ ಏನು ಎಂದು ಪ್ರಶ್ನಿಸಲು ಆರಂಭಿಸಿದಾಗ. ನಾನು ಅವರಿಗೆ ಹಿಂದೂಯಿಸಂ ಎಂದರೇನು ಎಂದು ಕಲಿಸಬೇಕಿತ್ತು, ಆದ್ದರಿಂದ ನಾನೂ ಹಿಂದೂಯಿಸಂ ಕುರಿತು ಭಾರತದಲ್ಲಿದ್ದಾಗ ತಿಳಿದುಕೊಂಡದ್ದಕ್ಕಿಂತ ಹೆಚ್ಚು ಅಮೆರಿಕೆಯಲ್ಲಿ ಕುಳಿತು ತಿಳಿದುಕೊಂಡೆ. (ಈ ವಿಚಾರದಲ್ಲಿ ಆ ಸ್ವಾಮಿ ಅಥವಾ ಈ ಸಂಘಟನೆ ನನಗೆ ಸಹಾಯ ಮಾಡಿತು. ಅವರಿಗೆ ನನ್ನ ಕೃತಜ್ಞತೆಗಳು).” ಮತ್ತಷ್ಟು ಓದು
ವಸಾಹತು ಪ್ರಜ್ಞೆಯ ವಿಶ್ವರೂಪ ೨ : ಏನೀ ಮೂಢನಂಬಿಕೆ?
ಕನ್ನಡ ನಿರೂಪಣೆ: ರಾಜಾರಾಮ ಹೆಗಡೆ
ವಿದ್ಯಾವಂತರಿಗೆ ಈ ಶಬ್ದ ಸುಪರಿಚಿತ. ‘ಭಾರತೀಯ ಸಮಾಜದಲ್ಲಿ ಮೂಢನಂಬಿಕೆ ಆಳವಾಗಿ ಬೇರುಬಿಟ್ಟಿದೆ’, ಅಥವಾ ‘ಭಾರತೀಯರು ಯಾವ್ಯಾವುದೋ ಮೂಢನಂಬಿಕೆಗಳನ್ನು ಇಟ್ಟುಕೊಂಡಿದ್ದಾರೆ’,‘ಈ ಮೂಢನಂಬಿಕೆಗಳನ್ನು ತೊಡೆದು ಹಾಕದ ಹೊರತೂ ನಮ್ಮ ಸಮಾಜ ಉದ್ಧಾರವಾಗುವುದಿಲ್ಲ, ಇತ್ಯಾದಿ ಹೇಳಿಕೆಗಳನ್ನು ಪ್ರತಿಯೊಬ್ಬನೂ ಭಾಷಣ-ಲೇಖನಗಳಲ್ಲಿ, ತರಗತಿಯ ಪಾಠಗಳಲ್ಲಿ ಸಾಕಷ್ಟು ಕೇಳಿರುತ್ತಾನೆ. ಈ ಶಬ್ದದ ಜೊತೆಗೆ ಸಮಾನಾರ್ಥಕವಾಗಿ ‘ಕುರುಡು ನಂಬಿಕೆ’, ‘ಅಂಧ ಶ್ರದ್ಧೆ’, ‘ಗೊಡ್ಡು ಸಂಪ್ರದಾಯಗಳು’ ಇತ್ಯಾದಿ ಶಬ್ದಗಳೂ ಬಳಕೆಯಲ್ಲಿವೆ. ಈ ಶಬ್ದಗಳೆಲ್ಲ ನಮಗೆ ಅರ್ಥವಾಗುತ್ತಿವೆ ಎಂಬುದಾಗಿ ಭಾವಿಸಿಕೊಂಡೇ ನಾವು ಅವನ್ನು ಉಪಯೋಗಿಸುತ್ತಿರುತ್ತೇವೆ. ಇವುಗಳ ಅರ್ಥವನ್ನು ಕೇಳಿದರೆ ‘ಅವು ಅವೈಜ್ಞಾನಿಕ, ಅಜ್ಞಾನದಿಂದ ಮಾಡುವಂಥವು, ಹಾಗಾಗಿ ಅವು ಮೌಢ್ಯ’ ಎಂಬ ಉತ್ತರ ಬರುತ್ತದೆ.
ಹೀಗೊಂದು ಪ್ರಶ್ನೆ ಕೇಳಿಕೊಳ್ಳುವಾ.ಒಂದು ಸಮಾಜದಲ್ಲಿ ಜನರು ಮಾಡುವ ಕೆಲಸಕ್ಕೆಲ್ಲವೂ ವೈಜ್ಞಾನಿಕ ಕಾರಣಗಳಿರಲು ಸಾಧ್ಯವೆ? ಅಂಥವೆಲ್ಲವೂ ಮೂಢನಂಬಿಕೆಯಾಗುತ್ತದೆಯೆ? ಗುರು ಹಿರಿಯರಿಗೆ ಕಾಲುಮುಟ್ಟಿ ನಮಸ್ಕರಿಸುತ್ತೇವೆ, ಮನಸ್ಸಿಗೆ, ಸಂಬಂಧಕ್ಕೆ ಎಲ್ಲ ಹಿತವೇ, ಆದರೆ ವೈಜ್ಞಾನಿಕ ಕಾರಣ ಗೊತ್ತಿಲ್ಲ. ನಮ್ಮ ವಿದ್ಯಾವಂತರ ಆಧುನಿಕ ಸಮಾಜವನ್ನೇ ತೆಗೆದುಕೊಳ್ಳಿ: ಬೇಸಿಗೆಯಲ್ಲಿ ಸೆಕೆಯಾಗಿ ಬೆವರು ಕಿತ್ತುಕೊಂಡು ಹಿಂಸೆಯಾಗುತ್ತಿರುತ್ತದೆ. ಆದರೂ ಕೋಟು, ಟೈಗಳನ್ನು ಕಟ್ಟಿಕೊಂಡು ಆಫೀಸಿಗೆ ಬರುವುದು ಶಿಷ್ಟಾಚಾರ ಅಥವಾ ಡ್ರೆಸ್ ಕೋಡು. ಕೆಲವರಿಗೆ ಕಡ್ಡಾಯ. ಇದರಲ್ಲಿ ಏನು ವೈಜ್ಞಾನಿಕತೆಯಿದೆ? ಹೀಗೆ ಯಾವುದೇ ಸಮಾಜವನ್ನು ನೋಡಿದರೂ ಕೂಡ ವೈಜ್ಞಾನಿಕ ಕಾರಣಗಳ ಯಾವುದೇ ಹಂಗಿಲ್ಲದೇ ಇಂಥ ಪದ್ಧತಿಗಳು ಅಥವಾ ರೂಢಿಗಳು ಸಮುದಾಯಗಳನ್ನು ಒಟ್ಟಿಗೇ ಹಿಡಿದಿರುತ್ತವೆ, ಸಂಬಂಧಗಳನ್ನು ಬೆಸೆಯುತ್ತಿರುತ್ತವೆ.‘ಅವೈಜ್ಞಾನಿಕ’ ಎಂಬ ಕಾರಣವನ್ನು ಇಟ್ಟುಕೊಂಡು ಇಂಥ ಆಚರಣೆಗಳನ್ನೆಲ್ಲ ತೊಡೆದುಹಾಕಿದರೆ ಯಾವುದಾದರೂ ಮನುಷ್ಯ ಸಮಾಜ ಅಸ್ತಿತ್ವದಲ್ಲಿರಲು ಸಾಧ್ಯವೆ? ಹಾಗಿದ್ದ ಪಕ್ಷದಲ್ಲಿ ಇಂಥ ರೂಢಿಗಳು ಭಾರತೀಯ ಸಮಾಜದಲ್ಲಿ ಮಾತ್ರವೇ ಉಚ್ಛಾಟಿಸಬೇಕಾದ ಪೆಡಂಭೂತವಾಗಿದ್ದು ಹೇಗೆ ಮತ್ತು ಯಾವಾಗ? ಮೂಢ ನಂಬಿಕೆ ಏಕೆ ತೊಡೆಯಬೇಕಾದ ಅನಿಷ್ಠವೆಂಬುದಾಗಿ ನಾವೆಲ್ಲ ನಂಬಿದ್ದೇವೆ?
ಈ ಮೂಢನಂಬಿಕೆ, ಅಂಧಶ್ರದ್ಧೆ ಇತ್ಯಾದಿ ಪದಗಳೆಲ್ಲ ಕನ್ನಡದಲ್ಲಿ ಅರ್ಥವಿಲ್ಲದ ಶಬ್ದಗಳು.ಅವು ಇಂಗ್ಲೀಷಿನ Superstition ಎಂಬ ಶಬ್ದದ ಕನ್ನಡಾನುವಾದಗಳು. ಭಾರತೀಯ ಭಾಷೆಗಳಲ್ಲಿ ಮೌಢ್ಯ ಎಂದರೆ ಅಜ್ಞಾನ ಎಂಬ ಅರ್ಥವಿದೆ. ಮೂಢ ಎಂದರೆ ಅಜ್ಞಾನಿ. ಆದರೆ ಮೂಢ ನಂಬಿಕೆ ಎನ್ನುವ ಪದಗುಚ್ಛವಿಲ್ಲ. ಅದೇ ಥರ ಅಂಧ ಶ್ರದ್ಧೆ. ಶ್ರದ್ಧೆ ಕುರುಡಾಗಿರುವುದು ಅಂದರೇನು? ಕಣ್ಣಿರುವ ಶ್ರದ್ಧೆ ಅಂತ ಒಂದಿದೆಯೆ? ಭಾರತೀಯ ಭಾಷೆಯಲ್ಲಿ ಈ ಪದವನ್ನು ಅರ್ಥೈಸಲು ಹೋದರೆ ನಗೆಪಾಟಲಾಗುತ್ತದೆ. ಸೂಪರ್‍ಸ್ಟಿಶನ್ ಎಂಬುದು ಕ್ರಿಶ್ಚಿಯನ್ ಥಿಯಾಲಜಿಯಲ್ಲಿ ಹಾಗೂ ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಒಂದು ಪರಿಕಲ್ಪನೆಯನ್ನು ಸೂಚಿಸುವ ಪರಿಭಾಷೆ. ಆ ಹಿನ್ನೆಲೆಯಲ್ಲಿ ಮಾತ್ರವೇ ಅರ್ಥವಾಗುವ ಶಬ್ದ.ಈ ಶಬ್ದವು ಮೂಲತಃ ರೋಮನ್ನರಲ್ಲಿ ಬಳಕೆಯಲ್ಲಿದ್ದು, ಅದರರ್ಥ ‘ದೇವರುಗಳ ಕುರಿತು ಅತಿಯಾದ ಹೆದರಿಕೆ’ ಎಂಬುದಾಗಿದೆ. ಇದನ್ನೊಂದು ಒಳ್ಳಯೆ ಲಕ್ಷಣ ಎಂಬುದಾಗಿ ರೋಮನ್ನರೇನೂ ಭಾವಿಸಿರಲಿಲ್ಲ. ಆದರೆ ರೋಮನ್ ಸಂಸ್ಕೃತಿಯನ್ನು ನಾಶಮಾಡಿ ಅದರ ಮೇಲೆ ಪ್ರತಿಷ್ಠಾಪಿತವಾದ ಕ್ರಿಶ್ಚಿಯಾನಿಟಿಯು ರೋಮನ್ನರ ದೇವತೆಗಳನ್ನು ಸುಳ್ಳು ದೇವತೆಗಳೆಂದು ನಿರೂಪಿಸಿತು. ಈ ಸುಳ್ಳು ದೇವತೆಗಳು ಕ್ರೈಸ್ತರ ಗಾಡ್‍ನ ವಿರೋಧಿಯಾದ ಡೆವಿಲ್ಲನ ಮೋಸಗಳು. ಈ ದೇವತೆಗಳ ಮೂಲಕ ಡೆವಿಲ್ಲನು ಜನರನ್ನು ದಾರಿತಪ್ಪಿಸುತ್ತಿದ್ದಾನೆ ಏಕೆಂದರೆ ಅವು ಗಾಡ್‍ನ ವೈರಿಗಳು ಎಂಬುದಾಗಿ ಶಾಸ್ತ್ರವನ್ನು ಬರೆದುಕೊಂಡರು. ಆಗ ಸೂಪರ್‍ಸ್ಟಿಶನ್ ಶಬ್ದಕ್ಕೆ ತನ್ನದೇ ಆದ ಹೊಸ ಅರ್ಥವೊಂದು ಪ್ರಾಪ್ತವಯಿತು. ಅದೆಂದರೆ ‘ ಸುಳ್ಳು ದೇವರುಗಳನ್ನು ಕುರಿತ ಭಯ ಅಥವಾ ಅವನ್ನು ಪೂಜಿಸುವುದು’ ಅಂತ.
ಮತ್ತಷ್ಟು ಓದು
ವಸಾಹತು ಪ್ರಜ್ಞೆಯ ವಿಶ್ವರೂಪ ೧ : ನಮ್ಮೊಳಗಿನ ಎರಡು ಜಗತ್ತುಗಳು
ಭಾರತೀಯ ವಿದ್ಯಾವಂತರಲ್ಲಿ ಇರಬಹುದಾದ ಎರಡು ಜಗತ್ತುಗಳ ಕುರಿತು ಗಮನ ಹರಿಸೋಣ: ಒಂದು ಜಗತ್ತು ಸಾಂಪ್ರದಾಯಿಕವಾಗಿ ನಾವು ಬೆಳೆದು ಬಂದ ಜಗತ್ತಾಗಿದೆ. ಅಲ್ಲಿ ನಮ್ಮ ಅಪ್ಪ ಅಮ್ಮ, ಬಂಧು-ಬಳಗ, ನೆರೆ-ಹೊರೆಯವರು ನಮಗೆ ಈ ಪ್ರಪಂಚದಲ್ಲಿ ಹೇಗೆ ವ್ಯವಹರಿಸಬೇಕೆಂಬುದನ್ನು ಕಲಿಸಿರುತ್ತಾರೆ. ಅನೇಕ ಆಚರಣೆಗಳನ್ನು, ಆಲೋಚನಾ ಕ್ರಮವನ್ನು ಒಳಗೊಂಡ ಜೀವನ ಶೈಲಿಯನ್ನು ಕಲಿಸಿರುತ್ತಾರೆ.
ನಂತರ ನಾವು ವಿದ್ಯಾವಂತರಾದಂತೆಲ್ಲ ಮತ್ತೊಂದು ಜಗತ್ತಿಗೆ ತೆರೆದುಕೊಳ್ಳುತ್ತೇವೆ. ಇದು ವಿಚಾರಗಳ ಜಗತ್ತು. ಅದು ನಮ್ಮ ಆಧುನಿಕ ಶಿಕ್ಷಣವು ನಮಗೆ ಪರಿಚಯಿಸುವ ಜಗತ್ತು. ನಮ್ಮ ಕುಟುಂಬ, ಜಾತಿ ಮುಂತಾದ ಸಾಂಪ್ರದಾಯಿಕ ಸಮಾಜದಾಚೆಗೆ ಇರಬಹುದಾದ ಸಾರ್ವಜನಿಕ ಜಗತ್ತು ಇಂಥ ವಿಚಾರಗಳ ತಳಹದಿಯ ಮೇಲೆ ನಿರ್ಮಾಣವಾಗಿದೆ. ಹಾಗಾಗಿ ಅದು ನಮಗೆಲ್ಲ ಒಂದು ಆದರ್ಶ ಮಾದರಿ ಎಂದುಕೊಂಡಿರುತ್ತೇವೆ.