ವಿಷಯದ ವಿವರಗಳಿಗೆ ದಾಟಿರಿ

Posts tagged ‘ವಿಕಾಸವಾದ’

28
ಜನ

ಸುಪ್ರೀಂ ಕೋರ್ಟಿನ ನ್ಯಾಯಾಧೀಶರನ್ನೇ ಪ್ರಶ್ನಿಸಬಹುದಾದರೆ ಡಾರ್ವಿನ್ ನ ವಿಕಾಸವಾದವನ್ನೇಕಲ್ಲ?

– ಸುಜಿತ್ ಕುಮಾರ್

ವರ್ಷ ಕ್ರಿಸ್ತ ಶಕ 1917. ಸಾಪೇಕ್ಷತಾ ಸಿದ್ಧಾಂತವೆಂಬ (Theory of Relativity) ಮಹಾನ್ ವೈಜ್ಞಾನಿಕ ಸಿದ್ಧಾಂತವನ್ನು ಮಂಡಿಸಿದ್ದ ಐನ್ಸ್ಟೀನ್ ಎಂದರೆ ಇಡೀ ವಿಶ್ವವೇ ತಲೆಬಾಗುತಿದ್ದ ಕಾಲ. ಆನೆ ನಡೆದಿದ್ದೆ ದಾರಿ ಎಂಬಂತೆ ಅಂದು ಐನ್ಸ್ಟೀನ್ ಮಂಡಿಸುತಿದ್ದ ಸಿದ್ಧಾಂತಗಳೆಲ್ಲವೂ ಸಂಶೋಧನಾ ವಲಯದಲ್ಲಿ ಅಲ್ಲಿಯವರೆಗೂ ನಂಬಿಕೊಂಡು ಬಂದಿದ್ದ ವೈಜ್ಞಾನಿಕ ಸೂತ್ರಗಳನೆಲ್ಲವನ್ನೂ ತಲೆಕೆಳಗಾಗಿಸುತ್ತಿದ್ದವು. ವಿಜ್ಞಾನವೆಂದರೆ ಹಾಗೆಯೆ ಅಲ್ಲವೇ ಮತ್ತೆ? ಹೀಗೆ ಅಣು, ಪರಮಾಣು, ಭೂಮಿ, ಸೌರಮಂಡಲ, ಜಗತ್ತು ಎಂಬ ಸೂಕ್ಷ್ಮದಿಂದಿಡಿದು ಸಮಗ್ರದವರೆಗೂ ಆತನ ಸಂಶೋಧನೆಗಳು ಜರುಗುತ್ತಿದ್ದವು. ಅಂತಹದೇ ಸಂಶೋಧನೆಗಳಲ್ಲಿ ವಿಶ್ವದ ರಚನೆಯ ಸಂಶೋದನೆಯೂ ಕೂಡ ಒಂದು. ಐನ್ಸ್ಟೀನ್ನ ಪ್ರಕಾರ ಸಕಲ ವಿಶ್ವದ (ಬ್ರಹ್ಮಾಂಡ) ಆಕಾರವು ಜಡ ವಸ್ತುವಿನಂತೆ ಸ್ಥಿರವಾಗಿದ್ದೂ ಗೋಳಾಕಾರದ ರಚನೆಯನ್ನು ಹೊಂದಿದೆ ಎಂಬುದಾಗಿತ್ತು (Static Universe). ಆದರೆ ಅಷ್ಟೊತ್ತಿಗಾಗಲೇ ಕೆಲ ವಿಜ್ಞಾನಿಗಳು ವಿಶ್ವವು ಸ್ಥಿರವಾಗಿರದೆ ದಿನದಿಂದ ದಿನಕ್ಕೆ ಹಿಗ್ಗುತ್ತಿದೆ ಎಂಬ ವಾದವನ್ನು ಮಂಡಿಸಿರುತ್ತಾರೆ. ಅದನ್ನು ಸಾಧಿಸಿ ತೋರಿಸುವ ಸನಿಹದಲ್ಲೂ ಇರುತ್ತಾರೆ. ಆದರೆ ಐನ್ ಸ್ಟೀನಿನ್ನ ಸ್ಥಿರವಾದದ ನಂತರ ಅವರೆಲ್ಲರ ವಾದಗಳು ಕೊಂಚ ಮಂಕಾಗತೊಡಗುತ್ತವೆ. ಅಂದಿನ ವಿಜ್ಞಾನ ವಲಯ ಕ್ರಮೇಣವಾಗಿ ಐನ್ಸ್ಟೀನ್ ನ್ನಿನ Static Universe ವಾದವನ್ನು ಒಪ್ಪಿಕೊಳ್ಳತೊಡಗಿತು. ಅದು ವರ್ಷ 1929. ಅಮೇರಿಕಾದ ಖಗೋಳಶಾಸ್ತ್ರಜ್ಞ ಎಡ್ವಿನ್ ಹಬಲ್ ವಿಶ್ವದ ರಚನೆಯ ಬಗ್ಗೆ ಐನ್ಸ್ಟೀನ್ ನ್ನಿನ ವಾದಕ್ಕೆ ವಿರುದ್ಧವಾಗಿರುವ ಸಿದ್ಧಾಂತವೊಂದನ್ನು ಮಂಡಿಸುತ್ತಾನೆ ಅಲ್ಲದೆ ಅದನ್ನೂ ಸಾಧಿಸಿಯೂ ತೋರುತ್ತಾನೆ. ಆತನ ಪ್ರಕಾರ ಗ್ಯಾಲಕ್ಸಿಗಳ (ತಾರಾಗಣ) ದೂರ ಅವುಗಳ ಸ್ಥಾನಪಲ್ಲಟದೊಟ್ಟಿಗೆ ನೇರ ಸಂಬಂಧವನ್ನು ಹೊಂದಿರುತ್ತವೆ ಎಂಬುದಾಗಿರುತ್ತದೆ. ಅರ್ಥಾತ್ ಪ್ರಸ್ತುತ ಕಾಣಸಿಗುವ ಗ್ಯಾಲಕ್ಸಿಗಳು ದೂರಸರಿಯುತ್ತಿರುವುದು ವಿಶ್ವವು ಹಿಗ್ಗುತ್ತಿದೆ ಎಂಬುದಾಗಿರುತ್ತದೆ. ಹಬಲ್ನ ಸಿದ್ದಾಂತ ನಿಜವಾದ ಸುದ್ದಿಯನ್ನು ಕೇಳಿದ ಕೂಡಲೇ ಐನ್ಸ್ಟೀನ್ ತನ್ನ Static Universe ಸಿದ್ದಾಂತವನ್ನು ಕೈಬಿಡುತ್ತಾನೆ ಅಲ್ಲದೇ ಮುಂದೊಂದು ದಿನ ಆತ ತನ್ನ ಜೀವನದಲ್ಲಿ ಜರುಗಿದ ಅತಿ ದೊಡ್ಡ ಪ್ರಮಾದಗಳಲ್ಲಿ Static Universe ಸಿದ್ಧಾಂತವೂ ಒಂದು ಎಂಬುದನ್ನು ಒಪ್ಪಿಕೊಳ್ಳುತ್ತಾನೆ. ಮತ್ತೊಮ್ಮೆ ವಿಜ್ಞಾನವೆಂಬುದು ನಿಂತ ನೀರಲ್ಲ ಎಂಬುದು ಸಾಬೀತಾಗುತ್ತದೆ. ಮತ್ತಷ್ಟು ಓದು »