ವಿಷಯದ ವಿವರಗಳಿಗೆ ದಾಟಿರಿ

Posts tagged ‘ವಿದ್ಯಾರ್ಥಿ ಸಂಘಟನೆ’

15
ಜನ

ವೇಮುಲ ಸಾವಿನ ಬಗ್ಗೆ ಮಾತಾಡಿದವರು ಈಗೆಲ್ಲಿಹರು..?

– ಶಾರದ ಡೈಮಂಡ್

15966189_1689221931091685_622901462958428392_nನೂರಾರು ಕನಸುಗಳನ್ನು ಕಟ್ಟಿಕೊಂಡಿದ್ದ ಮುಗ್ದ ಜೀವಿಯೊಂದು ಕಾಣದ ಕೈಗಳ ಕೈವಾಡಕ್ಕೆ ಬಲಿಯಾಗಿದೆ. ಕಾಂಗ್ರೆಸ್ ಸರಕಾರದ ದುರಾಡಳಿತಕ್ಕೆ ಮತ್ತೊಂದು ಜೀವ ಮಣ್ಣಾಗಿಹೋಯಿತು. ಓದುವುದರಲ್ಲಿ ಬುದ್ಧಿವಂತನಾಗಿದ್ದ, ಸೌಮ್ಯ ಸ್ವಭಾವದವನಾದ ಅಭಿಷೇಕ್ ಮೂರು ಕುಟುಂಬಗಳಿಗೆ ಸ್ವಂತ ಮಗನಂತೆಯೇ ಇದ್ದ. ಸರ್ಕಾರಿ ಕೆಲಸವೊಂದಕ್ಕೆ ಸೇರಿ ತನ್ನನ್ನು ಕಷ್ಟಪಟ್ಟು ಸಾಕುತ್ತಿರುವ ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂಬುದೇ ಅವನ ಕನಸಾಗಿತ್ತು. ಶೃಂಗೇರಿಯ ಜೆಸಿಬಿಎಮ್ ಕಾಲೇಜಿನ ಬಿ.ಕಾಂ ಕೊನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಅಭಿಷೇಕ್ ಎಂ.ಕೆ ಎಂಬ ಹುಡುಗ ಪ್ರಸಕ್ತ ವರ್ಷದ ಕಾಲೇಜಿನ ವಾಣಿಜ್ಯ ಸಂಘದ ಅಧ್ಯಕ್ಷ! ಚೆನ್ನಾಗಿ ಓದುತ್ತಿರುವ ಆಲ್ ರೌಂಡರ್ ವಿದ್ಯಾರ್ಥಿಗಳನ್ನು ಕಾಲೇಜಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸಂಘಗಳಿಗೆ ಅಧ್ಯಕ್ಷ – ಉಪಾಧ್ಯಕ್ಷರನ್ನಾಗಿ ಕಾಲೇಜಿನವರೇ ನೇಮಿಸುತ್ತಾರೆ. ನೇಮಿಸುವಾಗ ಅವನು ಯಾವ ಸಂಘಟನೆಯವನೆಂದು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಇಂತಹ ಉತ್ತಮ ವಿದ್ಯಾರ್ಥಿಯಾದ ಅಭಿಷೇಕ್ ವಾಣಿಜ್ಯ ಸಂಘವನ್ನು ಹೊರತುಪಡಿಸಿ ತನ್ನನ್ನು ತಾನು ಎಬಿವಿಪಿ ಯಲ್ಲಿ ಗುರುತಿಸಿಕೊಂಡಿದ್ದೇ ಜೀವಕ್ಕೆ ಮುಳ್ಳಾಗುವ ಹಾಗಾಯಿತು. ಜನವರಿ ಏಳರಂದು ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಜಂಟಿಯಾಗಿ ಸೈನಿಕರಿಗೆ ಗೌರವ ಸಲ್ಲಿಸುವ “ಯೋಧನಮನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮತ್ತಷ್ಟು ಓದು »

15
ಮೇ

ಸಿದ್ಧಾಂತಗಳ ಸಂಗ ಸಾಕಾಗಿದೆ; ದೇಶಭಕ್ತಿಯ ಸಂಘ ಬೇಕಾಗಿದೆ

– ರೋಹಿತ್ ಚಕ್ರತೀರ್ಥ

indian-flag-rallyಕನ್ನಡದಲ್ಲಿ “ತಾಯಿನಾಡು” ಪತ್ರಿಕೆಯನ್ನು ನಾಲ್ಕು ದಶಕಗಳ ಕಾಲ ನಡೆಸಿದ ಮತ್ತು ಬೆಂಗಳೂರಿನ ಬಸವನಗುಡಿ ಕ್ಷೇತ್ರದ ಮೊದಲ ಚುನಾಯಿತ ಶಾಸಕನಾಗಿದ್ದ ಪಿ.ಆರ್.ರಾಮಯ್ಯ ಬನಾರಸ್ ಹಿಂದೂ ವಿಶ್ವ ವಿದ್ಯಾಲಯದಲ್ಲಿ ಕಲಿಯುತ್ತಿದ್ದ ದಿನಗಳು. ಪದವಿಯ ಅಂತಿಮ ವರ್ಷದಲ್ಲಿದ್ದರು. ದೇಶದಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ದಿನದಿನಕ್ಕೆ ಏರುತ್ತಿದ್ದ ಹೊತ್ತು. ಗಾಂಧಿಯ ಮಾತುಗಳನ್ನು ಕೇಳಲು ಎಲ್ಲಿಂದ ಎಲ್ಲಿಯವರೆಗೂ ಕಾಲ್ನಡಿಗೆಯಲ್ಲೋ ರೈಲಿನಲ್ಲೋ ಹೋಗಿಬರಲು ತಯಾರಾಗಿದ್ದ ರಾಮಯ್ಯನವರಿಗೆ ಒಂದು ದಿನ ವಾರಾಣಸಿಯ ಪಕ್ಕದಲ್ಲೇ ಗಾಂಧಿ ಭಾಷಣ ಏರ್ಪಾಟಾಗಿದ್ದನ್ನು ಕಂಡು ಸಕ್ಕರೆ ಹಾಲು ಕುಡಿದಷ್ಟು ಸಂತೋಷವಾಯಿತು. ಅಂದಿನ ಭಾಷಣದಲ್ಲಿ ಗಾಂಧಿ, ಹೋರಾಟಕ್ಕೆ ಭೀಮಬಲ ಬರಬೇಕಾದರೆ ವಿದ್ಯಾರ್ಥಿಗಳೆಲ್ಲರೂ ತಮ್ಮ ಶಾಲಾ-ಕಾಲೇಜುಗಳಿಂದ ಹೊರಬಂದು ಹೋರಾಟದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಮಾತು ರಾಮಯ್ಯನವರ ಮೇಲೆ ಎಷ್ಟು ಪ್ರಭಾವ ಬೀರಿತೆಂದರೆ ಅವರು ತಕ್ಷಣ ತನ್ನ ಪದವಿ ವ್ಯಾಸಂಗವನ್ನು ಮೊಟಕುಗೊಳಿಸಿ ಚಳವಳಿಯಲ್ಲಿ ಭಾಗವಹಿಸಲು ನಿರ್ಧರಿಸಿಬಿಟ್ಟರು. ಇನ್ನೊಂದೆರಡು ವಾರಗಳು ಕಳೆದರೆ ಮುಖ್ಯಪರೀಕ್ಷೆಗಳು ಪ್ರಾರಂಭವಾಗುವುದರಲ್ಲಿದ್ದವು. ಈಗ ಏಕಾಏಕಿ ವಿಶ್ವವಿದ್ಯಾಲಯ ತೊರೆದರೆ ಗತಿಯೇನು ಎಂಬ ಸಣ್ಣದೊಂದು ಅಂಜಿಕೆಯೂ ಅವರ ಮನದ ಮೂಲೆಯಲ್ಲಿತ್ತು. ನೇರವಾಗಿ ವಿವಿಯ ಕುಲಪತಿಗಳಾಗಿದ್ದ ಮದನ ಮೋಹನ ಮಾಲವೀಯರಲ್ಲಿಗೆ ಹೋಗಿ ತನ್ನ ಇಬ್ಬಂದಿತನವನ್ನು ವಿವರಿಸಿ ಏನು ಮಾಡಲಿ ಎಂದು ಮಾರ್ಗದರ್ಶನ ಕೇಳಿದರು. ಮತ್ತಷ್ಟು ಓದು »