ವಿಷಯದ ವಿವರಗಳಿಗೆ ದಾಟಿರಿ

Posts tagged ‘ವಿದ್ಯಾರ್ಥಿ’

1
ಆಕ್ಟೋ

ಆಗಬೇಕಿದೆ ಸರಸ್ವತಿ ಮಂದಿರಗಳ ಜೀರ್ಣೋದ್ಧಾರ

– ಮುರಳಿ ಕೃಷ್ಣ ಕಡವ

ಒಂದೂರಿನ ಒಂದಷ್ಟು ಜನ ತಮ್ಮ ಮಕ್ಕಳ ವಿದ್ಯಾಭ್ಯಾಸ ಸರಿಯಾಗಿ ನಡೆಯುತ್ತಿಲ್ಲಾ ಅಂತ ಒಬ್ಬ ಜ್ಯೋತಿಷಿಯ ಬಳಿ ಸಲಹೆಗಾಗಿ ಹೋದರು. ಜ್ಯೋತಿಷಿಯು ತನ್ನೆಲ್ಲಾ ಲೆಕ್ಕಚಾರಗಳನ್ನು ಮಾಡಿ, “ನಿಮ್ಮೂರಿನ ಮಧ್ಯದಲ್ಲಿ ದೇವರ ಸಾನ್ನಿಧ್ಯವಿದೆ, ಅಲ್ಲಿ ಒಂದು ದೇವಸ್ಥಾನದ ನಿರ್ಮಾಣವಾಗಬೇಕು” ಎಂಬ ಪರಿಹಾರವನ್ನು ನೀಡಿದರು. ದೇವರ ಮೇಲಿನ ಭಕ್ತಿಗಿಂತ ಭಯವೇ ಜಾಸ್ತಿ ನೋಡಿ ಜನರಿಗೆ. ಸರಿ ಎಂದು ಒಂದೇ ವರ್ಷದಲ್ಲಿ ಲಕ್ಷಗಟ್ಟಲೇ ದುಡ್ಡು ಸಂಗ್ರಹಿಸಿ, ಒಂದು ಗುಡಿಯನ್ನ ಎದ್ದು ನಿಲ್ಲಿಸಿ, ದೇವರ ಮೂರ್ತಿಯನ್ನ ಪ್ರತಿಷ್ಟಾಪಿಸಿಯೇ ಬಿಟ್ಟರು. ಅದಕ್ಕೊಬ್ಬ ಪೂಜಾರಿಯನ್ನೂ ನೇಮಿಸಿ ಪೂಜೆ, ಹೋಮ ಹವನಗಳನ್ನೂ ನಡೆಸಲಾಯಿತು. ಆದರೆ ಅವರು ಎದುರಿಸುತ್ತಿದ್ದ ಸಮಸ್ಯೆಗೆ ಪರಿಹಾರ ಸಿಗಲೇ ಇಲ್ಲ. ಕೇಳಿದರೆ ಆ ಜನರ ಉತ್ತರ ಏನು ಗೊತ್ತಾ “ನಮ್ಮ ಕೆಲಸ ನಾವು ಮಾಡಿದ್ದೇವೆ ಫಲಾಫಲಗಳೆಲ್ಲಾ ದೇವರಿಗೆ ಬಿಟ್ಟದ್ದು” ಅಂತ. Read more »

22
ಡಿಸೆ

ಅದೆಷ್ಟು ಸುಂದರ ಹಾಸ್ಟೆಲ್ ಜೀವನ

– ತುಳಜಪ್ಪ ಬುಧೇರ

ಹಾಸ್ಟೆಲ್ ಜೀವನಹಾಸ್ಟೆಲ್ ಹುಡಗ್ರೆಲ್ಲಾ ಕೆಟ್ಟವರು, ಟಪೋರಿಗಳು ಯಾವಾಗಲೂ ಹುಡುಗಿಯರ ಹಿಂದೆಯೇ ಸುತ್ತುತ್ತಿರುತ್ತಾರೆ. ಅವರಲ್ಲಿ ಜೀವನ ಸುಧಾರಿಸಿಕೊಳ್ಳಬೇಕೆಂಬುದರ ಬಗ್ಗೆ ಸಿರಿಯಸ್‍ನೆಸ್ಸೇ ಇರಲ್ಲಾ, ಅನ್ನೋ ಮಾತುಗಳು ಆಗಾಗ ಕೇಳುತ್ತಿರುತ್ತೇವೆ. ತಂದೆ ತಾಯಂದಿರಂತೂ ತಮ್ಮ ಮಕ್ಕಳಿಗೆ ಹಾಸ್ಟೆಲ್ ಹುಡುಗರ ಸಹವಾಸ ಮಾಡಬೇಡ ಎಂಬ ಸ್ಟ್ರಿಕ್ಟ್ ಆದೇಶ ಮಾಡಿರುವುದನ್ನು ನೋಡಿರುತ್ತೇವೆ. ಇದೇ ಪಾಠವನ್ನು ಚಿಕ್ಕವನಿದ್ದಾಗ ನನ್ನ ಗೆಳೆಯ ಮಾಡಿದ್ದ. ಅವನಿಗೆ ಯಾರು ಹೇಳಿದ್ದರೋ ಅವನೇ ಬಲ್ಲ.

ಪಕ್ಕದೂರಾದ ಮನ್ನಳ್ಳಿಯಲ್ಲಿ ಹೈಸ್ಕೂಲ್ ಇದ್ದಿದ್ದರಿಂದ ಪ್ರೌಢ ಶಿಕ್ಷಣ ಯಾವುದೇ ಚಿಂತೆಯಿಲ್ಲದೇ ಆರಾಮಾಗಿ ಮುಗಿಯಿತು. ಮುಂದೆ ಕಾಲೇಜ್‍ಗೆ ಸೇರಲೇಬೇಕಲ್ಲವೆ, ಬೀದರಿನ ಪ್ರತಿಷ್ಠಿತ ಸಂಸ್ಥೆಯಲ್ಲಿ ಪ್ರವೇಶ ಪಡೆದಾಯಿತು. ದಿನಾಲು ಹೋಗಿ ಬರಬೇಕೆಂದರೆ ನಮ್ಮೂರಿಗೆ ಸರಿಯಾಗಿ ಬಸ್ಸುಗಳೇ ಇಲ್ಲ. ಇದ್ದರೂ ಅಮಾಸೆಗೋ ಹುಣ್ಣಿಮೆಗೋ ಎಂಬಂತೆ ಅಪರೂಪ. ಸಮಯದ ಪಾಲನೆಯಂತು ಅವರಪ್ಪನಾಣೆಗೂ ಇಲ್ಲವೇ ಇಲ್ಲ. ಹೀಗಾಗಿ ಕಾಲೇಗೆ ಹೋಗಿ ಬರೋದೆ ಒಂದ್ ದೊಡ್ಡ ಸಮಸ್ಯೆಯಾಯಿತು. ಆಗ ಅಪ್ಪನ ತಲೆಯಲ್ಲಿ ಬಂದ ಐಡಿಯಾನೆ ಹಾಸ್ಟೆಲ್. ಈ ಶಬ್ದ ಕಿವಿಗೆ ಬಿದ್ದೊಡನೆ ಕಾಲಿನಿಂದ ತಲೆಯವರೆಗೂ ಜುಮ್ ಎಂದು ರಕ್ತ ಸಂಚಾರವೇ ನಿಂತಂತಾಗಿ ನಿಸ್ತೇಜನಾಗಿ ನಿಂತಲ್ಲೇ ಕುಸಿದು ಬಿಟ್ಟೆ. ಆದರೆ ಅನ್ಯ ಮಾರ್ಗವೇ ಇರಲಿಲ್ಲ. ಅಲ್ಲಿಗೆ ಹೋಗಲೇಬೇಕಾಯಿತು.

Read more »

27
ಡಿಸೆ

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಉತ್ತಮ ಭವಿಷ್ಯ ಇಲ್ಲವೇ?

-ರಾವ್ ಎವಿಜಿ 

ಇಲ್ಲ ಎಂದು ಬಹುಮಂದಿ ನಂಬಿರುವುದರಿಂದ ತಮ್ಮ ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡಲು ಹಿಂಜರಿಯುವ ಜನ್ಮದಾತೃಗಳ ಸಂಖ್ಯೆ ಹೆಚ್ಚುತ್ತಿದೆ. ತತ್ಪರಿಣಾಮವಾಗಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವ ಶಾಲೆಗಳು, ವಿಶೇಷತಃ ಸರ್ಕಾರೀ ಶಾಲೆಗಳು ದುಸ್ಥಿತಿಯಲ್ಲಿವೆ. ಈ ಪರಿಸ್ಥಿತಿಗೆ ಕಾರಣ?

ನಾನು ಎಸ್ ಎಸ್ ಎಲ್ ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಸರ್ಕಾರೀ ಶಾಲೆಯಲ್ಲಿ ಓದಿದವನು. ಪಿ ಯು ಸಿ ಮತ್ತು ಆನಂತರದ ಶಿಕ್ಷಣ ಪಡೆದದ್ದು ಇಂಗ್ಲಿಷ್ ಮಾಧ್ಯಮದಲ್ಲಿ. ಆಗ ಕೊಡಗಿನಲ್ಲಿ ಎಲ್ಲರೂ ಶಿಕ್ಷಣ ಪಡೆಯುತ್ತಿದ್ದದ್ದೇ ಹೀಗೆ. ತಮ್ಮ ಮಕ್ಕಳಿಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕೆಂಬ ಹಂಬಲವೇ ಆಗಲಿ, ಖಾಸಗಿ ಶಾಲೆಗಳು ಸರ್ಕಾರೀ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತವೆ ಎಂಬ ನಂಬಿಕೆಯೇ ಆಗಲಿ ಅಂದಿನ ಜನ್ಮದಾತೃಗಳಿಗೆ ಇರಲಿಲ್ಲ. ವಾಸ್ತವವಾಗಿ, ಎಸ್ ಎಸ್ ಎಲ್ ಸಿ ವರೆಗೆ ಇಂಗ್ಲಿಷ್ ಮಾಧ್ಯಮ, ಪಿ ಯು ಸಿ ಮತ್ತು ಆನಂತರದ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಆಗ ಅಲ್ಲಿ ಇರಲೇ ಇಲ್ಲ. (ಎಸ್ ಎಸ್ ಎಲ್ ಸಿ ವರೆಗೆ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಮೈಸೂರು, ಮಂಗಳೂರು, ಬೆಂಗಳೂರುಗಳಂಥ ದೊಡ್ಡ ನಗರಗಳಲ್ಲಿ ಲಭ್ಯವಿತ್ತಂತೆ) ನನಗೆ ತಿಳಿದ ಮಟ್ಟಿಗೆ ಕೊಡಗಿನಲ್ಲಿ ಆಗ ಇದ್ದದ್ದು ಎರಡೋ ಮೂರೋ ಕ್ರಿಶ್ಚಿಯನ್ ಆಡಳಿತದ ಖಾಸಗಿ ಪ್ರೌಢಶಲೆಗಳು. ಖಾಸಗಿ ಕಾಲೇಜುಗಳು ಇರಲೇ ಇಲ್ಲ.  ಈ ಪದ್ಧತಿಯಲ್ಲಿ ಶಿಕ್ಷಣ ಪಡೆದ ನಾನು ಏನಾಗ ಬಯಸಿದ್ದೆನೋ ಅದೇ ಆದೆ. ಈ ಪದ್ಧತಿಯಲ್ಲಿ ಶಿಕ್ಷಣ ಪಡೆದವರು ಎಂಜಿನಿಯರುಗಳೂ ಡಾಕ್ಟರುಗಳೂ ಆಗುತ್ತಿದ್ದರು. ಎಂದೇ, ೧ ನೇ ತರಗತಿಯಿಂದಲೇ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಆವಶ್ಯಕತೆ ಇದೆ ಎಂದು ಯಾರೂ ತಿಳಿದಿರಲಿಲ್ಲ. ಎಸ್ ಎಸ್ ಎಲ್ ಸಿ ವರೆಗೆ ಕನ್ನಡ ಮಾಧ್ಯಮದಲ್ಲಿ ಸರ್ಕಾರೀ ಶಾಲೆಗಳಲ್ಲಿ ವ್ಯಾಸಂಗ ಮಾಡಿದ್ದರಿಂದ ಯಾರ ಭವಿಷ್ಯವೂ ಅಂದು ಹಾಳಾದದ್ದು ನನಗೆ ತಿಳಿದಿಲ್ಲ. ಆಗ ಏಕೆ ಹಾಗಿತ್ತು?

Read more »