ವಿಷಯದ ವಿವರಗಳಿಗೆ ದಾಟಿರಿ

Posts tagged ‘ವಿಶ್ವ ಕನ್ನಡ ಸಮ್ಮೇಳನ’

6
ಆಗಸ್ಟ್

ಕಾಸರಗೋಡಿನ ಕನ್ನಡಿಗರ ತ್ಯಾಗ ಮತ್ತು ಬಲಿದಾನಗಳನ್ನು ಕರ್ನಾಟಕ ಮರೆತಿದೆಯೇ..!?

– ಕುಮಾರ ರೈತ

 “ಕಾಸರಗೋಡು, ಕರ್ನಾಟಕದ ಕನ್ಯಾಕುಮಾರಿ. ಉತ್ತರದಲ್ಲಿ ಬೆಳಗಾವಿ, ಬಳ್ಳಾರಿಗಳಂತೆ ದಕ್ಷಿಣ ಕನ್ನಡದಲ್ಲಿ ನಮ್ಮದು ಕರ್ನಾಟಕದ ಕನ್ಯಾಕುಮಾರಿ. ಕನ್ನಡನಾಡಿನ ಈ ತೆಂಕಣ ಬಾಗಿಲನ್ನು ತೆರೆದಿಟ್ಟು ಕನ್ನಡಿಗರು ಎಚ್ಚರತಪ್ಪಿ ನಿದ್ರೆ ಹೋದುದ್ದೇ ಆದರೆ ನಮ್ಮ ಜನರಿಗೂ, ನಮ್ಮ ನಾಡಿಗೂ ಅಮೂಲ್ಯವಾದ ಕನ್ನಡ ಸಂಸ್ಕೃತಿಗೂ ಪ್ರಮಾದ ಒದಗುವುದರಲ್ಲಿ ಸಂಶಯವಿಲ್ಲ. ವಿಶಾಲ ಕೇರಳ ಚಳವಳಿಯು ಆರಂಭವಾಗಿ ಹತ್ತು ವರ್ಷಗಳು ಸಂದುಹೋದವು. ದಕ್ಷಿಣ ಕನ್ನಡ, ಕೊಡಗು, ನೀಲಗಿರಿ ಜಿಲ್ಲೆಗಳು ಮಲಬಾರಿನೊಂದಿಗೆ ಜತೆಗೊಂಡು ಕೇರಳ ಸಂಸ್ಥಾನ ಅಥವಾ ಪಶ್ಚಿಮ ಪ್ರಾಂತ ಸಂಸ್ಥಾನವೊಂದು ನಿರ್ಮಾಣವಾಗಬೇಕೆಂದು ಈ ಚಳವಳಿಯು ಪ್ರಬಲವಾಗುತ್ತಾ ನಡೆದಿದೆ. ಈ ಚಳವಳಿಯ ಮರ್ಮವನ್ನು ತಿಳಿದುಕೊಂಡು ಕನ್ನಡಿಗರು ಅದನ್ನು ಸಕಾಲದಲ್ಲಿಯೇ ಪ್ರತಿಭಟಿಸದೇ ಹೋದರೆ ಸ್ವಲ್ಪಕಾಲದೊಳಗಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಾಸರಗೋಡಾದರೂ ಮಲಬಾರಿನವರ ಮಡಿಲಿಗೆ ಬೀಳಬೇಕಾಗಬಹುದು”

ಭಾಷಾವಾರು ಪ್ರಾಂತ್ಯ ರಚನೆಯಾಗುವುದಕ್ಕೂ ಒಂಭತ್ತು ವರ್ಷಗಳಿಗೂ ಮೊದಲೇ ಶ್ರೀಧರ ಕಕ್ಕಿಲಾಯರು ಹೇಳಿದ್ದ ಖಚಿತ ಅಭಿಪ್ರಾಯವಿದು. ಇವರು ಕಾಸರಗೋಡಿನ ಸುಪ್ರಸಿದ್ಧ ವಕೀಲರಾಗಿದ್ದರು. ಕಾಸರಗೋಡನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಲು ಸತತ ೨೫ ವರ್ಷ ಹೋರಾಟ ಮಾಡಿದರು. ಅವರ ಜೀವಿತಾವಧಿಯವರೆಗೂ ಈ ಹೋರಾಟದಲ್ಲಿ ಸಕ್ರಿಯರಾಗಿದ್ದರು. ೧೯೪೭ರ ಡಿಸೆಂಬರ್ನಲ್ಲಿ ಕಾಸರಗೋಡಿನ ಬೋರ್ಡ್ ಹೈಸ್ಲೂಲ್ ಆವರಣದಲ್ಲಿ ೩೧ನೇ  ಕನ್ನಡ ಸಾಹಿತ್ಯ ಸಮ್ಮೇಳನ ನಡೆತು. ಈ ಸಂದರ್ಭದಲ್ಲಿ ಹೊರಬಂದ ಸ್ಮರಣ ಸಂಚಿಕೆ ‘ತೆಂಕುನಾಡು’ ಸ್ಮರಣ ಸಂಚಿಕೆಯಲ್ಲಿ ಶ್ರೀಧರ ಕಕ್ಕಿಲಾಯರ ಈ ಲೇಖನ ಪ್ರಕಟವಾಯಿತು. ಅದರ ಶೀರ್ಷಿಕೆ ‘ಕನ್ನಡ-ಮಲೆಯಾಳ ಸಮಸ್ಯೆ’

ಇದನ್ನೆಲ್ಲ ಪ್ರಸ್ತಾಪಿಸಲು ಕಾರಣವಿದೆ. ಕಾಸರಗೋಡಿಗೆ ಹೋದಾಗಲೆಲ್ಲ ನಾನು ಭೇಟಿ ಕೊಡುವ ಖಾಯಂ ಸ್ಥಳಗಳ ಸಾಲಿನಲಿಬೇಕಲ್ ಕೋಟೆ ಸೇರಿದೆ. ಇಲ್ಲಿ ಪ್ರಾಣದೇವರ ಗುಡಿಯಿದೆ. ಹೊರಭಾಗದಲ್ಲಿ ಗುಡಿ ಹೆಸರನ್ನು ಕನ್ನಡದಲ್ಲಿ ಬರೆಯಲಾಗಿದೆ. ಬೇಕಲ್ ಕೋಟೆ ನಿರ್ಮಾಣ ಮಾಡಿದ್ದು  ಕನ್ನಡಿಗ ರಾಮನಾಯಕ.  (ಟಿಪ್ಪು ಸುಲ್ತಾನ್ ಸೈನ್ಯದ  ದಂಡನಾಯಕ ( ಮೂಲತಃ ಬೇಕಲ್ ಕೋಟೆ ಕನ್ನಡ ಪ್ರದೇಶ. ಇದಕ್ಕೆ ಅನೇಕ ಕುರುಹುಗಳಿವೆ. ಕೋಟೆ ಇರುವ ಊರಿನ ಹೆಸರು ‘ಅಗಸರ ಹೊಳೆ. ಈ ಎರಡೂ ಪದಗಳು ಅಚ್ಚಗನ್ನಡ.

Read more »

16
ಏಪ್ರಿಲ್

ಗುಲ್ಬರ್ಗ ಜಿಲ್ಲೆ ಯಾವುದೇ ಕಲೆ/ಕಲಾವಿದರೂ ಇಲ್ಲದಂತಹಾ ಮರುಭೂಮಿಯೇ?

– ಅರುಣ್ ಜಾವಗಲ್

ಕಳೆದ ಕೆಲವು ದಿನಗಳಿಂದ ಕರ್ನಾಟಕ ಸರಕಾರ ಹಲವಾರು ಜಿಲ್ಲೆಗಳಲ್ಲಿ ಉತ್ಸವಗಳನ್ನ ನಡೆಸುತ್ತಿದೆ.ಈ ಕಾರ್ಯಕ್ರಮಗಳು ಕರ್ನಾಟಕದ ಜನರ ತೆರಿಗೆ ಹಣದಲ್ಲಿ ನಡೆಯುತ್ತವೆ. ಈ ಕಾರ್ಯಕ್ರಮಗಳಲ್ಲಿ ಮುಖ್ಯವಾಗಿ ಆಯಾ ಜಿಲ್ಲೆಯ ಮತ್ತು ನಮ್ಮ ನಾಡಿನ ಕಲಾವಿದರ ಕಾರ್ಯಕ್ರಮಗಳಿಗೆ ಅವಕಾಶವಿರಬೇಕು.ಆದರೆ ಆ ಪ್ರದೇಶದ ಮತ್ತು ನಮ್ಮ ನಾಡಿನ ಇತರೇ ಕಲಾವಿದರನ್ನ ಮರೆತಿರುವ ಸರಕಾರ ಹೊರ ರಾಜ್ಯದಿಂದ ಕಲಾವಿದರನ್ನ ಕರೆಸಿ ಉತ್ಸವಗಳನ್ನ ನಡೆಸುತ್ತಿದೆ.

ಕೆಲವು ದಿನಗಳ ಹಿಂದೆ ನಡೆದ ಬೀದರ್ ಉತ್ಸವದಲ್ಲಿ ಶೇಕಡಾ 90% ರಷ್ಟು ಕಾರ್ಯಕ್ರಮ ನಡೆಸಿಕೊಟ್ಟವರು ಬೀದರ್ ಜಿಲ್ಲೆಗಾಗಲೀ ಅಥವಾ ನಮ್ಮ ನಾಡಿಗೆ ಯಾವುದೇ  ಸಂಭಂದವಿಲ್ಲದವರು.ಇದೀಗ ಇದೇ ತಿಂಗಳ 15 ರಿಂದ 17 ರ ವರೆಗೆ ಕರ್ನಾಟಕ ಸರಕಾರ ಗುಲ್ಬರ್ಗ ಉತ್ಸವವನ್ನ ಆಯೋಜಿಸಿದೆ.ಯಾವುದೇ ಅನುಮಾನವಿಲ್ಲದಂತೆ ಈ ಕಾರ್ಯಕ್ರಮಕ್ಕೂ ಸಹ ಪರಭಾಷಿಕರಿಗೆ ಬಹುಪರಾಕ್ ಹೇಳಲಾಗಿದೆ.

Read more »

16
ಏಪ್ರಿಲ್

ಕನ್ನಡಕ್ಕೆ ಚಪ್ಪಲಿ ತೋರಿಸಿದವರು ಮಣ್ಣು ಮುಕ್ಕಲಿ…!

– ಜಯತೀರ್ಥ ನಾಡಗೌಡ, ವಿಜಾಪುರ

ಕನ್ನಡಕ್ಕೆ ಚಪ್ಪಲಿ ತೋರಿಸಿ ಕರ್ನಾಟಕದಲ್ಲೇ ಮೇಯರ್ ಆಗಲು ಸಾಧ್ಯವೇ! ಹೌದು ಇಂಥ ಘನಘೋರ ಕೃತ್ಯಗಳು ನಮ್ಮ ರಾಜ್ಯದಲ್ಲಿ ಮಾತ್ರ ಕಾಣ ಸಿಗುತ್ತವೆ. ಇತ್ತೀಚಿಗೆ ಬೆಳಗಾವಿಯಲ್ಲಿ ನಡೆದ ವಿಶ್ವಕನ್ನಡ ಸಮ್ಮೇಳನ, ನಡೆಸಕೂಡದು ಎಂದು ಅಡ್ಡಿಪಡಿಸಿ ಚಪ್ಪಲಿ ತೋರಿಸಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನ ನಿರ್ಲಜ್ಜ ಮಹಿಳೆ ಮಂದಾ ಬಾಳೆಕುಂದ್ರಿ ಬೆಳಗಾವಿಯ ಮೇಯರ್ ಆಗಿರುವುದು, ಎಲ್ಲ ಕನ್ನಡಿಗರು ತಮ್ಮ ಎಕ್ಕಡದಿಂದ ತಾವೇ ಹೊಡೆದುಕೊಂಡಂತೆ.

ಎಲ್ಲ ವರದಿ, ತೀರ್ಪುಗಳು ಬಂದು ಬೆಳಗಾವಿ ಕನ್ನಡದ ಅವಿಭಾಜ್ಯ ಅಂಗ ಅಂತ ಸಾಬೀತಾದರೂ, ಹಾಳು .ಈ.ಎಸ್ ನ ಕಾರ್ಯಕರ್ತರು ಪುಂಡಾಟಿಕೆ ಮಾಡುತ್ತಿರುವುದು ನಮ್ಮ ಆಳಿದ/ಆಳುವ ಘನಂದಾರಿ ಪಕ್ಷಗಳ ಕಾಣಿಕೆಯೇ ಸರಿ. ಕ.ರ.ವೇ ಸತತ ಪರಿಶ್ರಮದಿಂದ ಜಾಗ ಖಾಲಿ ಮಾಡಿದ್ದ ಶಿವಸೇನೆ, ಎಂಇಎಸ್ ನವರನ್ನು ಮತ್ತೆ ಬೆಳೆಯಲು ಬಿಟ್ಟು ಇಂಥ ರಾಜದ್ರೋಹಿಗಳೊಂದಿಗೆ ಚುನಾವಣ ಹೊಂದಾಣಿಕೆ ಮಾಡಲು ಕೂಡ ನಮ್ಮ ಕೆಲ ಧುರೀಣರು ಮನಸ್ಸು ಮಾಡಿದ್ದು ಎಲ್ಲರಿಗೂ ಗೊತ್ತಿದ್ದ ಸತ್ಯ.

Read more »

11
ಮಾರ್ಚ್

ವಿಶ್ವ ಕನ್ನಡ ಸಮ್ಮೇಳನ – ಏನಿದೆ, ಏನಿರಬೇಕಾಗಿತ್ತು?

ವಸಂತ ಶೆಟ್ಟಿ, ಬೆಂಗಳೂರು

ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನಕ್ಕೆ ಇನ್ನೇನು ಹೊತ್ತು ಎಣಿಕೆ ಶುರುವಾಗಿದೆ. ನಾಟಕ, ಕವನ ವಾಚನ, ಗಮಕ ವಾಚನ, ಕುಣಿತ, ಹಾಡುಗಾರಿಕೆ ಸೇರಿದಂತೆ ನಾಡಿನ ಕಲೆ, ಸಂಸ್ಕೃತಿ ಪ್ರದರ್ಶನಕ್ಕೆ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಅನ್ನುತ್ತೆ ಸಮ್ಮೇಳನದ ವೆಬ್ ಸೈಟ್ ಅಲ್ಲಿರೋ ಕರೆಯೋಲೆ. ಇದಲ್ಲದೇ, ಕೆಲವು ಒಳ್ಳೆಯ ವಿಷಯಗಳ ಬಗ್ಗೆ ಚರ್ಚಾ ಗೋಷ್ಟಿಯನ್ನು ಏರ್ಪಡಿಸಲಾಗಿದೆ ಅಂತಲೂ ಕಂಡೆ. ಕನ್ನಡ, ಕನ್ನಡಿಗ, ಕರ್ನಾಟಕ ಇತಿಹಾಸದಲ್ಲೆಂದೂ ಕಂಡಿರದಂತಹ ಸವಾಲುಗಳನ್ನು ಎದುರಿಸುತ್ತಿರುವ ಜಾಗತೀಕರಣದ ನಂತರದ ಈ ದಿನಗಳಲ್ಲಿ ಇಂತಹ ಸಮ್ಮೇಳನಗಳು ಹೆಚ್ಚಿನ ಮಹತ್ವ ಪಡೆದಿವೆ ಕೂಡಾ. ಈ ಸಮ್ಮೇಳನ ಕರ್ನಾಟಕದ, ಕನ್ನಡಿಗರ ನಾಳೆಗಳನ್ನು ಕಟ್ಟಲು ಆಗಬೇಕಾದ ಕೆಲಸಗಳ ಬಗ್ಗೆ, ಇವತ್ತು ನಾವೆಲ್ಲಿದೀವಿ, ಈ ದಿನ ನಮ್ಮೆದುರು ಇರುವ ಸವಾಲುಗಳೇನು, ನಾವು ಸಾಗಬೇಕಾದ ದಾರಿ ಯಾವುದು, ಎಂತದ್ದು ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚಿಸುವ, ಹೊಸ ದಿಕ್ಕು,ದೆಸೆ ನೀಡುವ ವೇದಿಕೆಯಾಗುತ್ತೆ ಅನ್ನುವುದು ನನ್ನ ನಿರೀಕ್ಷೆಯಾಗಿತ್ತು, ಆದರೆ ಕಾರ್ಯಕ್ರಮದ ಪಟ್ಟಿ ನೋಡಿದಾಗ ಕೆಲ ಮಟ್ಟಿಗೆ ನಿರಾಸೆಯಾಗಿದೆ ಅಂತಲೇ ಹೇಳಬೇಕು. ಜ್ಞಾನಾಧಾರಿತ ಹೊಸ ಜಗತ್ತಿನ ಸವಾಲುಗಳನ್ನು ಎದುರಿಸಿ ಗೆಲ್ಲಲು ಕನ್ನಡಿಗರ ಕಲಿಕೆ, ದುಡಿಮೆಯ ವ್ಯವಸ್ಥೆಗಳನ್ನು ಆದ್ಯತೆಯ ಮೇರೆಗೆ ಚೆನ್ನಾಗಿ ಕಟ್ಟಿಕೊಳ್ಳಬೇಕಾದ ತುರ್ತು ಅಗತ್ಯ ನಮ್ಮ ಮುಂದಿದೆ. ಆದರೆ ಕಾರ್ಯಕ್ರಮದ ಪಟ್ಟಿ ನೋಡಿದ್ರೆ, ಈ ಸಮ್ಮೇಳನ ಹೊಟ್ಟೆಗೆ ಹಿಟ್ಟಿನ ವಿಷಯಗಳಿಗಿಂತ ಹೆಚ್ಚು ಜುಟ್ಟಿನ ಮಲ್ಲಿಗೆಯ ವಿಷಯಗಳತ್ತಲೇ ಗಮನ ಹರಿಸಿದೆಯೆನೋ ಅನ್ನುವಂತಿದೆ !

ಏನಿದೆ?

ಹಾಗಂತ, ಸಮ್ಮೇಳನದಲ್ಲಿ ಪ್ರಯೋಜನವಾಗುವಂತಹ ವಿಷಯಗಳೇ ಇಲ್ಲ ಅಂತಿಲ್ಲ. ಜಾಗತೀಕರಣ, ಮಾರುಕಟ್ಟೆ ಮತ್ತು ಯುವಕರ ಮೇಲೆ ಬೀರಿರುವ ಪ್ರಭಾವದ ಬಗ್ಗೆ ಜಾಗತೀಕರಣ ಕರ್ನಾಟಕ ಅನ್ನುವ ಗೋಷ್ಟಿ, ಗಡಿನಾಡಲ್ಲಿರುವ ಕನ್ನಡಿಗರ ಶಿಕ್ಷಣ ಸವಾಲುಗಳು, ಸಾಮಾಜಿಕ, ಸಾಂಸ್ಕೃತಿಕ ಸ್ಥಿತಿಗತಿಗಳ ಬಗ್ಗೆ ಬೆಳಕು ಚೆಲ್ಲುವ ಗಡಿನಾಡ ಕನ್ನಡಿಗರು ಅನ್ನುವ ಗೋಷ್ಟಿ, ಕನ್ನಡ ತಂತ್ರಾಂಶ, ವಿಜ್ಞಾನ ಶಿಕ್ಷಣದಂತಹ ವಿಷಯಗಳ ಬಗೆಗಿನ ಜ್ಞಾನ-ವಿಜ್ಞಾನ-ತಂತ್ರಜ್ಞಾನ-ಕರ್ನಾಟಕಅನ್ನುವ ಗೋಷ್ಟಿ, ಆಡಳಿತದಲ್ಲಿ ಕನ್ನಡ ಬಳಕೆ ಬಗೆಗಿನ ಕನ್ನಡ ಭಾಷಾ ಬಳಕೆ ಅನ್ನುವ ಗೋಷ್ಟಿ, ಕೃಷಿ ರಂಗ ಎದುರಿಸುತ್ತಿರುವ ಸವಾಲುಗಳ ಬಗೆಗಿನ ಕೃಷಿ-ಸಾಧನೆ ಸವಾಲು ಗೋಷ್ಟಿಗಳು ಈ ಕಾಲಮಾನಕ್ಕೆ ಪ್ರಸ್ತುತವೆನ್ನಿಸುವಂತಹ ಗೋಷ್ಟಿಗಳಾಗಿವೆ. ಇಲ್ಲಿ ಪಾಲ್ಗೊಳ್ಳುತ್ತಿರುವವರು ಅಷ್ಟೇ ಯೋಗ್ಯರು ಅನ್ನುವುದು ಕೂಡಾ ಗಮನಿಸಬೇಕಾದದ್ದು.  Read more »