ಸಾವರ್ಕರ್ ಬಗ್ಗೆ ಮಾತಾಡುವುದಕ್ಕೂ ಯೋಗ್ಯತೆ ಬೇಕು
-ಡ್ಯಾನಿ ಪಿರೇರಾ
ಹಳ್ಳಿಮೈಸೂರು-573210
23-03-2016 ರಂದು ಭಗತ್ ಸಿಂಗ್, ರಾಜಗುರು ಸುಖದೇವರ ಬಲಿದಾನದ ದಿನ ಸಾಮಾಜಿಕ ಜಾಲತಾಣದಲ್ಲಿ ಇದ್ದಕ್ಕಿದ್ದಂತೆ ಒಂದು ಸುದ್ಧಿ ಕಾಣಿಸಿತು. ಅದು ಕಾಂಗ್ರೆಸ್ಸಿನ ಅಧಿಕೃತ ಐಎನ್ಸಿ ಟ್ವಿಟರ್ ನಲ್ಲಿ ಪ್ರಕಟವಾದ ಸಂದೇಶ ವಾಗಿತ್ತು. ಅದರಲ್ಲಿ ಹೇಳುತ್ತಿರುವುದೇನು?! ಭಗತ್ ಸಿಂಗ್, ಸ್ವಾತಂತ್ರ್ಯವೀರ ಸಾವರ್ಕರ್ರ ಭಾವಚಿತ್ರದಡಿಯಲ್ಲಿ ಒಬ್ಬರನ್ನು ದೇಶಭಕ್ತ ಮತ್ತೊಬ್ಬರನ್ನು ದೇಶದ್ರೋಹಿ ಎಂದು ಟ್ವಿಟ್ ಮಾಡಲಾಗಿರುವ ಸಂದೇಶವದು! ಈ ದೇಶದ ಸ್ವಾತಂತ್ರ್ಯ ಯೋಧರ ಬಗೆಗಿನ ಕಾಂಗ್ರೆಸ್ಸಿನ ಮಾನಸೀಕತೆಯನ್ನು ಬಲ್ಲವರಿಗೆ ಈ ಹೇಳಿಕೆಯನ್ನು ನೋಡಿದಾಗ ಆಶ್ಚರ್ಯವಾಗುವುದಿಲ್ಲವಾದರೂ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲಾತಾಣಗಳಲ್ಲಿ ಒಂದಷ್ಟು ಹುಡುಕಾಟ ನಡೆಸುವ ಯುವ ಮನಸ್ಸುಗಳಿಗೆ ಸ್ವಾತಂತ್ರ್ಯ ಹೋರಾಟಗಾರನೊಬ್ಬನ ಮಾತ್ರವಲ್ಲದೇ ಇಡೀ ಜೀವನವನ್ನೇ ದೇಶ ಮಾತೆಯ ಸೇವೆಗಿಟ್ಟ ಮಹಾನ್ ವ್ಯಕ್ತಿಯ ವ್ಯಕ್ತಿತ್ವ ಪ್ರೇರಣೆ ಕೊಡಬೇಕಾಗುವ ವಿಷಯವಾಗಬೇಕಾದ ಹಿನ್ನೆಲೆಯಲ್ಲಿ ಅವರ ಬಗೆಗಿನ ಕಾಂಗ್ರೆಸ್ ಪಕ್ಷದ ಮಾತು ನಿಜಕ್ಕೂ ತಪ್ಪು ಸಂದೇಶ ಕೊಡುವಂತದ್ದು! ಇವರೇಕೆ ಹೀಗೆ? ಒಬ್ಬ ವ್ಯಕ್ತಿ ಅಥವಾ ಸಂಸ್ಥೆಯ ನಡುವೆ ಭಿನ್ನಾಭಿಯವಿದ್ದೊಡನೇ ಆ ವ್ಯಕ್ತಿ ವಿದ್ರೋಹಿ ಆಗಬಲ್ಲನೇ?! Read more
‘ಆತ್ಮಾಹುತಿ’ ಯಿಂದ ಆತ್ಮವಿಮರ್ಶೆ
– ಮನುಶ್ರೀ ಜೋಯಿಸ್
ಮಹಾಭಾರತ, ರಾಮಾಯಣದಂತ ಯಾವುದೇ ಗ್ರಂಥವಾಗಲಿ ಮೊದಲ ಬಾರಿಗೆ ಓದುವಾಗ ಮನಸ್ಸಲ್ಲಿ ಒಂದು ವಿಶೇಷ ತನ್ಮಯ ಭಾವವಿರುತ್ತದೆ. ‘ವಿಶೇಷ’ ಏಕೆಂದರೆ ಇದು ಬೇರೆ ಪುಸ್ತಕಗಳಂತಲ್ಲದೆ ಸುತ್ತ-ಮುತ್ತ ಕೇಳಿದ, ಜೀವನದಲ್ಲಿ ಬೆರೆತ, ಅಜ್ಜಿ ಶುರು ಮಾಡಿದ ಒಂದು ಕುತೂಹಲದ ಕಥೆ. ಓದುವಾಗ ಬೇರೆ ಯುಗವನ್ನೇ ನೋಡಿ ಬಂದಂತಹ ಪುಳಕ, ಪಾತ್ರಗಳ ಜೀವನದಲ್ಲಿ ಭಾಗಿಯಾದಂತಹ ರೋಮಾಂಚನ. ಪೂರ್ವಜರ ಚರಿತ್ರೆಯೆಂದೆನೋ.. ಪುಸ್ತಕ ಮುಗಿದಾಗ ಮನಸು ತುಂಬಿ ಬರುತ್ತದೆ. ಇನ್ನು ಕೊನೆ ಅಧ್ಯಾಯದ ಪುಟಗಳಲ್ಲಿ ಕಣ್ಣಾಡಿಸುವಾಗ ಬಿಟ್ಟು ಹೋದ ಎಷ್ಟೋ ಹೆಜ್ಜೆ ಗುರುತುಗಳನ್ನು ಹಚ್ಚಿಕೊಂಡು ಬಿಟ್ಟಿರುತ್ತೇವೆ.
ಹೀಗೆ ಪುರಾಣಗಳಂತೆ ಮನಸಿಗೆ ಹತ್ತಿರವಾಗುವ, ಎತ್ತರದಲ್ಲಿ ನಿಲ್ಲುವ ಒಂದು ಅದ್ಭುತ ಕೃತಿ ಶಿವರಾಮುರವರ ‘ಆತ್ಮಾಹುತಿ’. ಇದು 1970 ರಲ್ಲಿ ಮೊದಲ ಬಾರಿಗೆ ಪ್ರಕಟಗೊಂಡಿತು. ಪ್ರತಿಯೊಬ್ಬ ಭಾರತೀಯನು ತಿಳಿದಿರಬೇಕಾದ ಇತಿಹಾಸ ಇದು. ಓದಲೇ ಬೇಕಾದ the best book.
ಸ್ವಾತಂತ್ರ್ಯ ವೀರ ಸಾವರಕರ ರವರ ಜೀವನ ಚರಿತ್ರೆ. ಇದನ್ನು ಆತ್ಮಕಥೆಯಂತೆ ನಿರೂಪಿಸಲಾಗಿದೆ. ಸಾಮಾನ್ಯ ವ್ಯಕ್ತಿಯೊಬ್ಬನ ಉನ್ನತ ಧೇಯ್ಯೋದ್ದೇಶಗಳು ಹೇಗೆ ಮಹಾನ್ ವ್ಯಕ್ತಿತ್ವಕ್ಕೆ ಮೆಟ್ಟಿಲುಗಳಾಗುತ್ತವೆ ಎಂಬುದಕ್ಕೆ ನಿದರ್ಶನವಿದು. ಬಾಲಕನಿದ್ದಾಗ ಚಿಗುರುವ ದೇಶ ಭಕ್ತಿ ಇಡೀ ವಿಶ್ವಕ್ಕೆ ವ್ಯಾಪಿಸುವ ಕಥಾನಕವಿದು. ಹಿಂದುತ್ವದ ಅಮೋಘ ಪರಿಕಲ್ಪನೆಯನ್ನು ಅನಾವರಣಗೊಳಿಸುವ ಇವರ ಜ್ಞಾನ ಅಗಾಧ. ಇದೆಲ್ಲವನ್ನೂ ಕೇಳುವುದಕ್ಕಿಂತ ಅನುಭವಿಸ ಬೇಕೆಂದಿದ್ದರೆ ಆತ್ಮಾಹುತಿಯನ್ನು ಓದಲೇಬೇಕು ಬೇಕು.
Read more