ಕೋಟಿ ಜನರ ಕಷ್ಟದಲ್ಲಿ ಕೋಟಿ-ಕೋಟಿಯನ್ನೆಣಿಸುವ ಮುನ್ನ..!!
– ಸುಜಿತ್ ಕುಮಾರ್
ಕೆಳಗಿನ ಕೆಲ ಪ್ರಶ್ನೆಗಳಿಗೆ ಸಾದ್ಯವಾದರೆ ನಿಮ್ಮ ಎದೆಯ ಮೇಲೆ ಕೈಯಿರಿಸಿ ಉತ್ತರಿಸಿ. ಕಳೆದ ತಿಂಗಳು ರಾಜ್ಯದಾದ್ಯಂತ ನಡೆದ ವೈದ್ಯರ ಮುಷ್ಕರವನ್ನು ನಿಜವಾಗಿಯೂ ನೀವು ಬೆಂಬಲಿಸುತ್ತೀರಾ? ಇಂದು ಕೆಲಸ ಮಾಡಿದರಷ್ಟೇ ನಾಳಿನ ಕೂಳನ್ನು ಕಾಣುವ ಕೋಟ್ಯಂತರ ಹೊಟ್ಟೆಗಳ ಮೇಲೆ ಲಕ್ಷ ಲಕ್ಷ ಹೊರೆಯನ್ನೊರಿಸುವ ಖಾಸಗಿ ಆಸ್ಪತ್ರೆಗಳ ದಬ್ಬಾಳಿಕೆಗೆ ಕಾನೂನಿನ ಚೌಕಟ್ಟಿನಲ್ಲಿ ಕಡಿವಾಣ ಹಾಕುವ ಒಂತಿನಿತು ಕಾನೂನು ನಿಮಗೆ ಬೇಡವೆನಿಸುವುದೇ? ವೈದ್ಯ ಹೇಳಿದ್ದೆ ರೋಗ, ನೀಡಿದ್ದೆ ಮದ್ದು ಎಂಬಂತಾಗಿರುವ ಸಂದರ್ಭದಲ್ಲಿ, ರೋಗಿಗಳ/ಜನತೆಯ ಹಿತದೃಷ್ಟಿಯಿಂದ ತರಲೆತ್ನಿಸುತ್ತಿರುವ ಕಾಯಿದೆಯ ನಿಜವಾದ ಉದ್ದೇಶ ನಿಮಗೆ ತಿಳಿದಿದೆಯೇ? ನಿಮ್ಮ ಹತ್ತಿರದವರೇ ಒಬ್ಬರು ತಕ್ಷಣಕ್ಕೆ ಯಾವುದಾದರೊಂದು ಪ್ರೈವೇಟ್ ಆಸ್ಪ್ರತ್ರೆಗೆ ಸೇರಿ ನಂತರ ಹಣ ಸಾಲುತ್ತಿಲ್ಲವೆನ್ನುತ್ತ ಜಿಲ್ಲೆಯ ಅಥವಾ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಬಂದು ಪಡುವ ವಿಪರ್ಯಾಸವನ್ನು ಕಣ್ಣು ಮುಚ್ಚಿಕೊಂಡು ನೀವು ಸಹಿಸುತ್ತೀರಾ? ಅದೇ ಪ್ರೈವೇಟ್ ಆಸ್ಪತ್ರೆಯಲ್ಲಿ ಸತ್ತ ಒಂದು ಬಡ ಹೆಣವನ್ನು ಹಿಂದಿರುಗಿಸಲೂ ಹಣದ ಬಿಲ್ಲನ್ನೇ ಮುಂದಿಟ್ಟು ಸತಾಯಿಸುವ ಕಟು ಹೃದಯಿಗಳನ್ನು ನೀವು ಹೊತ್ತು ಮೆರವಣಿಗೆ ಮಾಡುತ್ತೀರಾ? ಯಾರೋ ಪುಡಾರಿ ರಾಜಕಾರಣಿ ತನ್ನ ಬೇಳೆಯನ್ನು ಬೇಯಿಸಿಕೊಳ್ಳಲು ಅಂತಹ ಸಂಸ್ಥೆಗಳನ್ನು ವಿರೋಧಿಸಲಾರ ಎಂಬುದಾದರೆ ನೀವುಗಳು ಸಹ ‘ಕುರಿಗಳು ಸಾರ್ ಕುರಿಗಳು’ ಎಂಬಂತೆ ಆತನನ್ನೇ ಹಿಂಬಾಲಿಸುತ್ತೀರಾ? ಹೇಳಿ. ಇಂದು ಒಂದು ಸಾಧಾರಣ ಜ್ವರಕ್ಕೆ ಪ್ಯಾರಾ-ಅಸಿಟಮೋಲ್ ಮಾತ್ರೆಯನ್ನು ಕೊಡಲೇ ಸಾವಿರ ಸಾವಿರ ರೂಪಾಯಿಗಳನ್ನು ಪೀಕುವ ಆಸ್ಪತ್ರೆಗಳು ದಿನಕ್ಕೆ ಇನ್ನೂರು ರೂಪಾಯಿ ಹಣವನ್ನು ಸಂಪಾದಿಸುವ ವ್ಯಕ್ತಿಯನ್ನು ಅಂತಹ ಆಸ್ಪತ್ರೆಗಳ ಹತ್ತಿರವೂ ಸುಳಿಯದಂತೆ ಮಾಡುತ್ತಿರುವುದು ಎಷ್ಟು ಮಟ್ಟಿನ ನ್ಯಾಯ? ಇವರಿಗೆ ಜಾಗ, ಓದು, ಕಟ್ಟಡ ಎಲ್ಲವೂ ಬಡ ಜನರ ದುಡ್ಡಿನಲ್ಲಿ ನಡೆಯುವ ರಾಜ್ಯಸರ್ಕಾರದ್ದೇ ಬೇಕು ವಿನಃ ಅಂತಹ ಬಡ ಜನರ ಶೂಶ್ರುಷೆಯಲ್ಲ. ದಿನಪೂರ್ತಿ ಇಂಗ್ಲಿಷಿನ ಪೋಷಾಕುಗಳನ್ನೇ ತೋರುತ್ತ 1 ನಿಮಿಷ ತೋರ್ಪಡಿಕೆಗೆ ಏನೋ ಎಂಬಂತೆ ಕನ್ನಡ ಕನ್ನಡ ಎಂದು ಬೊಬ್ಬೆಯೊಡೆಯುವ ಹಲವರು ಇದೇ ಕನ್ನಡ ನಾಡಿನಲ್ಲಿ ಅವೇ ಇಂಗ್ಲಿಷ್ ಔಷಧಗಳು ತಮ್ಮ ರಣಬೆಲೆಯ ಬಲದಲ್ಲಿ ನಮ್ಮವರನ್ನು ಕಬ್ಬಿನ ಜಲ್ಲೆಯಂತೆ ಅರೆಯುತ್ತಿರುವುದು ನಿಮಗೆ ತಪ್ಪು ಎನಿಸುವುದಿಲ್ಲವೇ? ಮತ್ತಷ್ಟು ಓದು
ವೈದ್ಯಕೀಯ ವಿದ್ಯಾಲಯಗಳಲ್ಲಿ ಕಲಿಸದ ವಿಷಯವೇನೆಂದರೆ……!!
– ಗುರುರಾಜ್ ಕೊಡ್ಕಣಿ, ಯಲ್ಲಾಪುರ
ಅಸಲಿಗೆ ನಾನೇಕೆ ವೈದ್ಯನಾಗಬೇಕೆಂದುಕೊಂಡಿದ್ದೆ ಎನ್ನುವುದು ನನಗೆ ನೆನಪೇ ಇಲ್ಲ. ಆದರೆ ವೈದ್ಯನಾದ ಮೇಲೆ ನನ್ನ ವರ್ತನೆ ಉಳಿದೆಲ್ಲ ವೈದ್ಯರಿಗಿಂತ ತೀರ ಭಿನ್ನವೇನಾಗಿರಲಿಲ್ಲ. ನನ್ನಲ್ಲೊಂದು ಹೆಮ್ಮೆಯಿತ್ತು. ನಾನೊಬ್ಬ ವೈದ್ಯನೆನ್ನುವ ಗರ್ವ ಮೀರಿದ ಅಹಂಕಾರವಿತ್ತು. ನನ್ನಲ್ಲಿದ್ದ ಅಹಮಿಕೆಗೆ ಮೊದಲ ಪೆಟ್ಟು ಬಿದ್ದಿದ್ದು ಸರಿಸುಮಾರು ಮೂವತ್ತು ವರ್ಷಗಳ ಹಿಂದೆ. ಅದೊಂದು ನಸುಕಿನ ಜಾವಕ್ಕೆ ಮಹಿಳೆಯೊಬ್ಬಳು ಮೂವತ್ತರ ಹರೆಯದ ತನ್ನ ಪತಿಯ ಶವವನ್ನು ನಮ್ಮ ಆಸ್ಪತ್ರೆಗೆ ತಂದಿದ್ದಳು. ತನ್ನ ಗಂಡ ತೀರಿಕೊಂಡಿದ್ದಾನೆಂಬ ಸತ್ಯವನ್ನು ಅರಗಿಸಿಕೊಳ್ಳಲಾಗದ ಆಕೆ, ನನ್ನ ಮೊಣಕಾಲನ್ನು ಗಟ್ಟಿಯಾಗಿ ಹಿಡಿದುಕೊಂಡು ಬಿಕ್ಕುತ್ತ, “ಡಾಕ್ಟರ್, ನನ್ನ ಗಂಡ ಏಕೆ ಸತ್ತ.’? ಎಂದು ಪ್ರಶ್ನಿಸಿದಳು. ಅದೊಂದು ಪ್ರಶ್ನೆ ನಾನೊಬ್ಬ ದೊಡ್ಡ ವೈದ್ಯನೆನ್ನುವ ಗರ್ವವನ್ನು ಒಂದೇ ಪೆಟ್ಟಿಗೆ ಮುರಿದುಹಾಕಿತ್ತು. ಆಕೆ ತನ್ನ ಪತಿ’ಹೇಗೆ’ಸತ್ತ ಎಂದು ಪ್ರಶ್ನಿಸಿದ್ದರೆ ನಾನು ಆಕೆಗೆ ಹತ್ತಾರು ಕಾರಣಗಳನ್ನು ಕೊಡಬಹುದಿತ್ತು. ಅವನಿಗೆ ಹೃದಯಾಘಾತವಾಗಿದೆಯೆಂದೋ ಅಥವಾ ಅವನ ರಕ್ತದೊತ್ತಡ ಕುಸಿದಿದ್ದರಿಂದ ಸತ್ತನೆಂದೋ ಸುಳ್ಳುಹೇಳಿಬಿಡಬಹುದಾಗಿತ್ತು. ಆದರೆ ಆಕೆ ಕೇಳಿದ್ದು ತನ್ನ ಗಂಡ ‘ಏಕೆ’ ಸತ್ತ ಎನ್ನುವ ಪ್ರಶ್ನೆ. ನಿಜಕ್ಕೂ ಬಲು ಕ್ಲಿಷ್ಟ ಪ್ರಶ್ನೆಯದು. ಆತನಿಗೆ ಕೇವಲ ಮೂವತ್ತು ಚಿಲ್ಲರೆ ವರ್ಷಗಳಷ್ಟು ವಯಸ್ಸು. ಆತನ ರಕ್ತದೊತ್ತಡ, ಸಕ್ಕರೆಯ ಮಟ್ಟ ತೀರ ಸಾಮಾನ್ಯವಾಗಿದ್ದವು. ಹೃದಯವೂ ಗಟ್ಟಿಮುಟ್ಟಾಗಿಯೇ ಇತ್ತು. ಆದರೂ ಆತ ಏಕೆ ಸತ್ತ ಎನ್ನುವ ಪ್ರಶ್ನೆಗೆ ನನ್ನ ಬಳಿ ಉತ್ತರವಿರಲಿಲ್ಲ. ನಿಜ ಹೇಳಬೇಕೆಂದರೆ ಅಂಥದ್ದೊಂದು ಪ್ರಶ್ನೆಗೆ ಉತ್ತರ ವೈದ್ಯಕೀಯ ಲೋಕಕ್ಕೂ ಇದುವರೆಗೆ ಸಿಕ್ಕಿಲ್ಲ. ಅದೊಂದು ಪ್ರಶ್ನೆ ನನ್ನನ್ನು ತುಂಬ ಕಾಲ ಬೆನ್ನುಬಿಡದೇ ಕಾಡಿತ್ತು. ‘ಏಕೆ’ ಎನ್ನುವ ಸಂಕೀರ್ಣ ಪ್ರಶ್ನೆಯೇ ನನ್ನನ್ನು ತತ್ವಶಾಸ್ತ್ರ, ಧರ್ಮ, ವೇದಾಂತಗಳತ್ತ ಆಕರ್ಷಿಸಿತ್ತು. ಅಂತಹ ಸವಾಲಿನ ಜವಾಬು ಹುಡುಕುತ್ತ ಹೊರಟ ನನಗೆ ಆಧುನಿಕ ವೈದ್ಯ ಲೋಕದ ದೌರ್ಬಲ್ಯಗಳ ಪರಿಚಯವೂ ಆಯಿತು” ಮತ್ತಷ್ಟು ಓದು
ಪಂಜಾಂಬಿನಲ್ಲಿ ಖಲಿಸ್ತಾನಿ ಕರಾಳ ದಿನಗಳು ಮರುಕಳಿಸಲಿವೆಯೇ?
– ರಾಕೇಶ್ ಶೆಟ್ಟಿ
ಆ ದಂಪತಿಗಳು ಮರುದಿನ ಸಂಜೆ ರಜೆಯ ಮೇಲೆ ಮಣಿಲಕ್ಕೆ ಹೊರಡುವವರಿದ್ದರು.ಪ್ರಯಾಣದ ಟಿಕೆಟ್ಟು ಎಲ್ಲವೂ ನಿಗದಿಯಾಗಿತ್ತು.ಅಷ್ಟರಲ್ಲಿ ಟೆಲಿಫೋನ್ ರಿಂಗಣಿಸಿತ್ತು.ಕರೆ ಸ್ವೀಕರಿಸಿದವರಿಗೆ ಮರುದಿನ ತುರ್ತು ಮಾತುಕತೆಗಾಗಿ ದೆಹಲಿಗೆ ಬರುವ ಆದೇಶ ಸಿಕ್ಕಿತು.
ಹೆಂಡತಿಯ ಜೊತೆ ಮೀರತ್ ಬಿಟ್ಟು ದೆಹಲಿಯ ಕಡೆ ಹೊರಟವರು, ಸಂಜೆಯೊಳಗೆ ಬರುವೆ ಮಣಿಲಕ್ಕೆ ಹೊರಟು ಬಿಡೋಣ ಅಂತೇಳಿ, ಚಾಂದಿಮಂದಿರದ II ಕಾರ್ಪ್ಸ್ ಅರ್ಮಿ ಹೆಡ್ ಕ್ವಾರ್ಟರ್ ತಲುಪಿಕೊಂಡರು.ತಲುಪಿಕೊಂಡವರೇ ಆಪರೇಷನ್ ರೂಮಿನೊಳ ಹೊಕ್ಕರು.ಅಲ್ಲಿ ಅಮೃತಸರದ ಗೋಲ್ಡನ್ ಟೆಂಪಲ್ ನಕ್ಷೆಗಳನ್ನು ಹರವಿ ಕುಳಿತಿದ್ದರು ಸೈನ್ಯಾಧಿಕಾರಿಗಳು.ಒಳ ಬಂದವರಿಗೆ ಏನೊಂದು ಅರ್ಥವಾಗುವ ಮೊದಲೇ “ನಿನಗೆ ಅಮೃತಸರದ ಪರಿಸ್ಥಿತಿ ಕೈ ತಪ್ಪುತ್ತಿರುವುದು ಗೊತ್ತಿದೆಯಲ್ಲ?,ಆದಷ್ಟು ಬೇಗ ನೀನು ಅಮೃತಸರ ತಲುಪಿಕೊಂಡು ಸ್ವರ್ಣಮಂದಿರದೊಳಗೆ ಸೇರಿಕೊಂಡಿರುವ ಖಲಿಸ್ತಾನಿ ಉಗ್ರಗಾಮಿಗಳನ್ನ ಹೊರಹಾಕಬೇಕು” ಅಂತ ಆದೇಶಿಸಲಾಯಿತು.ಹಾಗೆ,ಇದ್ದಕ್ಕಿದ್ದಂತೆ ಸಿಕ್ಕ ಅಪ್ಪಣೆಯನ್ನು ಯಶಸ್ವಿಯಾಗಿ ನಿರ್ವಹಿಸಿ,ಪಂಜಾಬ್ ರಾಜ್ಯ ಭಾರತದಿಂದ ಸಿಡಿದು “ಖಲಿಸ್ತಾನ” ಆಗುವುದನ್ನು ತಪ್ಪಿಸಿದ್ದು “ಆಪರೇಷನ್ ಬ್ಲೂ-ಸ್ಟಾರ್” ಅನ್ನುವ ಮಿಲಿಟರಿ ಕಾರ್ಯಾಚರಣೆ ಮತ್ತದರ ನೇತೃತ್ವ ವಹಿಸಿದ್ದ ಆ ಯೋಧನ ಹೆಸರು ಜನರಲ್.ಕೆ.ಎಸ್ ಬ್ರಾರ್.
ಆವತ್ತು ಅಮೃತಸರಕ್ಕೆ ಬಂದಿಳಿದ ಬ್ರಾರ್ ಅವರಿಗೆ ಸರಿಯಾಗಿ ಸ್ವರ್ಣಮಂದಿರದ ನಕ್ಷೆಯೂ ಗೊತ್ತಿರಲಿಲ್ಲ.ತಕ್ಷಣ ಅವರು ಅಲ್ಲಿನ ಸರ್ಕಾರಿ ಅಧಿಕಾರಿಗಳು ಮತ್ತು ಪೋಲಿಸರನ್ನು ಭೇಟಿಯಾಗಿ ಹೆಚ್ಚಿನ ಮಾಹಿತಿ ಕೇಳಿದರು.ಊಹೂಂ! ಅವರಲ್ಲಿ ಯಾವ ಮಾಹಿತಿಯೂ ಇರಲಿಲ್ಲ.ತಿಂಗಳುಗಟ್ಟಲೆ ಕೆಲಸವಿಲ್ಲದೆ ಕುಳಿತಿದ್ದ ಅವರಿಂದ ಏನು ನಿರೀಕ್ಷಿಸುವಂತೆಯೂ ಇರಲಿಲ್ಲ.ಭಿಂದ್ರನ್ ವಾಲೆಯ ಕಪಿಮುಷ್ಟಿಗೆ ಅದಾಗಲೇ ಸ್ವರ್ಣಮಂದಿರ ಸಿಕ್ಕಿಯಾಗಿತ್ತು.ಒಳಗೇನು ನಡೆಯುತ್ತಿದೆ ಯಾರಿಗೂ ಗೊತ್ತಿರಲಿಲ್ಲ.ಭಿಂದ್ರನ್ ವಾಲೆಯ ಖ್ಯಾತಿ ಆಗ ಪಂಜಾಬಿನಲ್ಲಿ ಉತ್ತುಂಗಕ್ಕೇರಿದ ಸಮಯ.ಜನ ಅವನನ್ನು ದೈವತ್ವಕ್ಕೇರಿಸುವ ಮಟ್ಟಕ್ಕೇ ಅವನ ಅಮಲೇರಿತ್ತು.