ವಿಷಯದ ವಿವರಗಳಿಗೆ ದಾಟಿರಿ

Posts tagged ‘ಶ್ರೀ ರಾಮನವಮಿ’

28
ಮಾರ್ಚ್

ಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು ಪುರುಷೋತ್ತಮನ ಆ ಅಂಥ ರೂಪ-ರೇಖೆ? – ಭಾಗ 2

– ರೋಹಿತ್ ಚಕ್ರತೀರ್ಥ

ಶ್ರೀ ರಾಮನವಮಿಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು ಪುರುಷೋತ್ತಮನ ಆ ಅಂಥ ರೂಪ-ರೇಖೆ? – ಭಾಗ 1

ಶ್ರೀ ರಾಮನವಮಿಯ ದಿವಸ ರಾಮನಾಮಾಮೃತವೆ
ಪಾನಕ, ಪನಿವಾರ, ಕೋಸಂಬರಿ;
ಕರಬೂಜ ಸಿದ್ದೋಟುಗಳ ಹೋಳು, ಸೀಕರಣೆ;
ವ್ಯಕ್ತಮಧ್ಯಕ್ಕೆ ಬಂದುರಿವ ಶಬರಿ

ಎಂದು ಶುರುವಾಗುತ್ತದೆ ಅಡಿಗರ ಕವಿತೆ. ರಾಮನ ಹುಟ್ಟುಹಬ್ಬ ಬೇಸಗೆಯಲ್ಲಿ ಬರುತ್ತದೆ ಎನ್ನುವುದನ್ನು ಹೇಳಲಿಕ್ಕೇ ಕವಿ ಎರಡು ಸಾಲುಗಳಲ್ಲಿ ಪಾನಕ, ಪನಿವಾರ, ಕೋಸಂಬರಿ, ಕರಬೂಜ ಸಿದ್ದೋಟುಗಳ ಹೋಳು, ಸೀಕರಣೆಗಳನ್ನು ಹರಡಿ ಕೂತಿದ್ದಾರೆ! ಇಲ್ಲಿ ಪಾನಕ ಎಂದರೆ ಪಾನಕ, ಪನಿವಾರ ಎಂದರೆ ಪನಿವಾರ. ಅದಕ್ಕೆ ಎರಡನೆ ಅರ್ಥ ಇರುವ ಹಾಗೇನೂ ಕಾಣುತ್ತಿಲ್ಲ. ನಾನು ಈಗಾಗಲೇ ಹೇಳಿದ ಹಾಗೆ, ಅಡಿಗರು ಚಿತ್ರಕ ಶಕ್ತಿಯ ಕವಿ. ಒಂದು ಸಂಗತಿಯನ್ನು ವಿವರಿಸಲು ಎಷ್ಟು ಮೂರ್ತ ಉದಾಹರಣೆಗಳು ಸಾಧ್ಯವೋ ಅಷ್ಟನ್ನು ಎತ್ತಿಕೊಂಡು ಬರಬಲ್ಲ ಪ್ರತಿಭಾವಂತ. “ಬೇಸಗೆ” ಅಂದಿದ್ದರೆ ಸಾಕಿತ್ತು. ರಾಮನ ಬರ್ತ್‍ಡೇ ಸಮಯದಲ್ಲಿ ಸೆಕೆ ವಿಪರೀತ ಇರುತ್ತೆ ಎಂದಿದ್ದರೂ ನಡೆಯುತ್ತಿತ್ತು. ಆದರೆ, ಅಂತಹ ಯಾವ ಮಾತನ್ನೂ ಹೇಳದೆ ಪಾನಕ-ಕೋಸಂಬರಿಗಳ ಬಗ್ಗೆ ಹೇಳುತ್ತ ಅಡಿಗರು ಒಂದು ವಿಭಿನ್ನ ವಾತಾವರಣವನ್ನು ಸೃಷ್ಟಿಸುತ್ತಾರೆ. ಅದನ್ನು ಓದುವಾಗ ನಮಗೆ ಹಬ್ಬದ ವಾತಾವರಣ ಕಂಡಂತೆ ಆಗಬೇಕು. ಆ ಸಿಹಿಭಕ್ಷ್ಯಗಳನ್ನು ತಿಂದಹಾಗನಿಸಬೇಕು. ಕಾವ್ಯದ ಉದ್ಧೇಶ ರಸೋತ್ಪತ್ತಿಯಲ್ಲವೆ?

ಅದೆಲ್ಲ ಸರಿ, ಆದರೆ ವ್ಯಕ್ತಮಧ್ಯಕ್ಕೆ ಬಂದುರಿವ ಶಬರಿ – ಎಂಬ ಸಾಲಿಗೆ ಏನರ್ಥ? ಇಷ್ಟೆಲ್ಲ ಹಬ್ಬದ ವಾತಾವರಣ ಕಟ್ಟಿಕೊಡುವಾಗ ಮಧ್ಯದಲ್ಲಿ ಶಬರಿ ಯಾಕೆ ಬರಬೇಕು? ಅವಳು ಯಾಕೆ ಉರಿಯಬೇಕು? ವ್ಯಕ್ತಮಧ್ಯ ಎಂಬ ಪದವನ್ನು ಅಡಿಗರು ಎತ್ತಿಕೊಂಡಿರುವುದು (ಇತ್ತೀಚೆಗೆ ಕೆಲವು ಬುದ್ಧಿವಂತರು ಸುಡಬೇಕು ಎಂದು ಆದೇಶಿಸಿದ) ಭಗವದ್ಗೀತೆಯಿಂದ! ಅಲ್ಲಿ ಸಾಂಖ್ಯಯೋಗದಲ್ಲಿ ಮತ್ತಷ್ಟು ಓದು »