ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸಂಜಯ್ ದತ್’

10
ಜುಲೈ

ನಾಯಕರುಗಳಿಗೇ ಇಲ್ಲದ ‘ಮುಲಾಜು’ ಇಂಥ ಬಯೋಪಿಕ್ ಗಳನ್ನು ಮಾಡಹೋಗುವ ನಿಮಗ್ಯಾಕೆ ಹಿರಾನಿ?

– ಸುಜಿತ್ ಕುಮಾರ್

ಈ ವರ್ಷದ ದಿ ಮೋಸ್ಟ್ ಎಕ್ಸ್ಪೆಕ್ಟೆಡ್ ಚಿತ್ರಗಳಲ್ಲಿ ಒಂದಾದ ‘ಸಂಜು’ ಕೊನೆಗೂ ತೆರೆಯ ಮೇಲೆ ಬಂದಿದೆ. ಚಿತ್ರ ಜನಮಾನಸದಲ್ಲಿ ಕುತೂಹಲವನ್ನು ಮೂಡಿಸಲು ಹಲವಾರು ಕಾರಣಗಳಿದ್ದಿರಬಹುದು. ಮೊತ್ತ ಮೊದಲನೆಯದಾಗಿ ನಿರ್ದೇಶಕ ರಾಜ್ಕುಮಾರ್ ಹಿರಾನಿ. ಹಿರಾನಿ ಸದ್ಯಕ್ಕಂತೂ ಬಾಲಿವುಡ್ ನಲ್ಲಿ ಪಕ್ಕ ‘ಹೀರಾ’ ರೆಂದೇ ಹೇಳಬಹುದು. ತಾನು ನಿರ್ದೇಶನ ಮಾಡಿರುವ ಅಷ್ಟೂ ಚಿತ್ರಗಳು ಸೂಪರ್ ಡೂಪರ್ ಹಿಟ್ ಗಳಾಗಿ ಪ್ರತಿ ಬಾರಿಯೂ ಸೆಂಚೂರಿಯನ್ನು ಬಾರಿಸುತ್ತಿದರೆ ಆತ ಅದ್ಯಾವ ಹೀರೊ ಅಥವಾ ಹೀರೋಯಿನ್ ಗಳಿಗೂ ಕಮ್ಮಿ ಇರುವುದಿಲ್ಲ. ಮೇಲಾಗಿ ಹಿರಾನಿ ಕೇವಲ ನಿರ್ದೇಶನವಲ್ಲದೆ ಕಥೆ, ಚಿತ್ರಕತೆ, ಎಡಿಟಿಂಗ್ ಹಾಗು ಪ್ರೊಡಕ್ಷನ್ ಗಳಲ್ಲೂ ತಮ್ಮ ಕೈಯಾಡಿಸಿದವರು. ಇಂತಹ ಒಬ್ಬ ಕಲಾಸಾಮ್ರಾಟ್ ಬರೆದು, ನಿರ್ದೇಶಿಸಿ ನಿರ್ಮಿಸಿರುವ ಚಿತ್ರವೊಂದು ಬರುತ್ತಿದೆ ಎಂದರೆ ಸಿನಿಪ್ರಿಯರ ಹಪಾಹಪಿ ಹೆಚ್ಚಾಗದೇ ಇರದು. ಇದು ಅತಿ ಸಹಜವಾದ ವಿಷಯ. ಆದರೆ ಈ ಬಾರಿ ಸಂಜು ಚಿತ್ರ ಇನ್ನೂ ಹೆಚ್ಚಿನ ಗುಲ್ಲೆಬ್ಬಿಸಲು ಇರುವ ಕಾರಣ ಬೇರೆಯೇ ಇದೆ. ಅದು ಸರಿಸುಮಾರು ಇಪ್ಪತ್ತೈದು ವರ್ಷಗಳ ಕಾಲ ಪ್ರತಿ ದಿನ ಒಂದಿಲ್ಲೊಂದು ಬಗೆಯಲ್ಲಿ ಸುದ್ದಿಯಾಗುತ್ತಿದ್ದ ಸುದ್ದಿಯೊಂದರಿಂದ ಹಾಗು ಆ ಸುದ್ದಿಯ ಕೇಂದ್ರಬಿಂದುವಾದ ವ್ಯಕ್ತಿಯೊಬ್ಬನಿಂದ. ಸಂಜಯ್ ದತ್ತ್. ದೇಶದಲ್ಲಿ ಇಂದು ಸಿನಿಮಾಗಳನ್ನು ನೋಡದಿರದ ಮಂದಿ ಕೇವಲ ಬೆರಳಣಿಕೆಯಷ್ಟಿರಬಹುದು. ಅಂತಹ ಬೆರಳೆಣಿಕೆಯ ಮಂದಿಗೂ ಈ ಒಂದು ಹೆಸರು ಚಿರಪರಿಚಿತ! ನಟನಾಗಿ, ನಾಯಕನಾಗಿ ಅನ್ನುವುದಕ್ಕಿಂತ ಹೆಚ್ಚಾಗಿ 1993 ರ ಮುಂಬೈ ಸರಣಿ ಬಾಂಬಿನ ವಿಚಾರಣೆಯ ಸಲುವಾಗಿ. 50% ನಷ್ಟು ಚಿತ್ರ ಆತನ ಆತ್ಮಕತೆಯಾದರೆ ಉಳಿದರ್ದ ಭಾಗ ಚಿತ್ರದ ಕಲ್ಪಿತ ಚಿತ್ರಕತೆಯೆಂದೇ ಹೇಳಬಹುದು! ಚಿತ್ರವನ್ನು ಚಿತ್ರಗಳಾಗಿಯೇ ನೋಡಬಯಸುವವರಿಗೆ ಸಿಗುವ ಮತ್ತೊಂದು ರೋಮಾಂಚನಕಾರಿ ವ್ಯಕ್ತಿ ರಣಬೀರ್ ಕಪೂರ್. ನಟನೆಯಲ್ಲೇನಾದರೂ ಭಾರತಕ್ಕೆ ಆಸ್ಕರ್ ತಂದುಕೊಡಬಲ್ಲ ನಟರಿದ್ದಾರೆಂದರೆ ಆದರಲ್ಲಿ ರಣಬೀರ್ ಕಪೂರ್ನ ಹೆಸರು ಇರದಿರಲು ಸಾಧ್ಯವೇ ಇಲ್ಲ.. ಸಂಜಯ್ ದತ್ತ್ ನ ಪಾತ್ರವನ್ನು ಕಣ್ಣಿಗೆ ಕಟ್ಟುವಂತೆ ನಿಭಾಯಿಸಿ ಈ ಮಾತಿಗೆ ಮತ್ತಷ್ಟು ಪುಷ್ಟಿಕೊಟ್ಟಿದ್ದಾನೆ ಚಿತ್ರದಲ್ಲಿ. ಈ ಎಲ್ಲ ಕಾರಣಗಳಿಂದ ಚಿತ್ರ ತೆರೆಯ ಮೇಲೆ ದೂಳೆಬ್ಬಿಸುತ್ತಿದೆ. ನೋಡುಗರನ್ನು ಎರಡೂವರೆ ಘಂಟೆಗಳ ಕಾಲ ರಂಜಿಸುತ್ತಿದೆ. ಆದರೆ ಚಿತ್ರಕತೆಯ ಸತ್ಯಾಸತ್ಯತೆಯನ್ನು ಅರಿಯಬಯಸುವವರಿಗೆ, ಹಿಂದಿನ ಇತಿಹಾಸವನ್ನು ಅರೆಬರೆ ಮರೆತಿರುವವರಿಗೆ ಎರಡೂವರೆ ದಶಕಗಳ ವಿದ್ಯಮಾನಗಳನ್ನು ಕೇವಲ ಎರಡೂವರೆ ಘಂಟೆಯಷ್ಟೇ ನೋಡಿ ಇದು ಸರಿ ಅದು ತಪ್ಪೆಂದು ಖಡಾಖಂಡಿತವಾಗಿ ನಿರ್ಧರಿಸುವುದು ದುಡುಕುತನವಾದೀತು. ಚಿತ್ರ ಮಾಡಿದ್ದು ನಿಜವನ್ನು ಬಿಚ್ಚಿಡಲೋ ಅಥವಾ ಮುಖ್ಯವಾದ ಸಂಗತಿಯನ್ನು ಮುಚ್ಚಿಡಲೋ ಎಂಬೊಂದು ಪ್ರಶ್ನೆ ಮಾತ್ರ ಚಿತ್ರಮಂದಿರದಿಂದ ಹೊರಬರುವ ಒಂದಿಷ್ಟು ಮಂದಿಗಂತೂ ಕಾಡದಿರದು! ಮತ್ತಷ್ಟು ಓದು »

29
ಆಕ್ಟೋ

ಸ೦ಜಯ್ ದತ್ ಎ೦ಬ ನಟ ಮತ್ತು ಜೈಲು ಶಿಕ್ಷೆಯ ಪ್ರಹಸನ

– ಗುರುರಾಜ್ ಕೊಡ್ಕಣಿ

Sanjay Dutಹಿ೦ದಿ ಖ್ಯಾತ ಚಿತ್ರ ನಟ ಸ೦ಜಯ ದತ್ ಮತ್ತೆ ಸುದ್ದಿಯಲ್ಲಿದ್ದಾರೆ.ಟಾಡಾ ಕಾಯ್ದೆಯಡಿ ಶಿಕ್ಷೆಗೊಳಗಾಗಿದ್ದ ಸ೦ಜಯ್ ದತ್ ಶಿಕ್ಷೆಯ ಪ್ರಮಾಣವನ್ನು ಇಳಿಸುವುದರ ಬಗ್ಗೆ ಕೇ೦ದ್ರ ಸರಕಾರ ಚಿ೦ತನೆ ನಡೆಸಿದೆ.ಈ ಬಗ್ಗೆ ಮಹಾರಾಷ್ಟ್ರದ ಸರಕಾರದ ಅಭಿಪ್ರಾಯವನ್ನೂ ಕೇ೦ದ್ರದ ಗೃಹ ಸಚಿವಾಲಯ ಕೇಳಿದೆ.’ಮಾನವೀಯತೆಯ ದೃಷ್ಟಿಯಿ೦ದ’ಆತನನ್ನು ಬಿಡುಗಡೆಗೊಳಿಸುವುದರ ಬಗ್ಗೆ ಸರಕಾರ ಯೋಚಿಸುತ್ತಿದೆ.

ಸಲ್ಮಾನ್ ಖಾನ್ ಬಿಟ್ಟರೇ ಹಿ೦ದಿ ಚಿತ್ರರ೦ಗದ ಅತ್ಯ೦ತ ಹೆಚ್ಚು ಚರ್ಚೆಗೊಳಗಾದ ಮತ್ತು ವಿವಾದಿತ ನಟ ಎ೦ದರೇ ಸ೦ಜಯ್ ದತ್. ಆತನ ಜೈಲು ಶಿಕ್ಷೆಯ ಸುದ್ದಿ ಅತ್ಯ೦ತ ಹೆಚ್ಚು ಚರ್ಚೆಗೊಳಗಾದ ಸುದ್ದಿಯಾಗಿದ್ದು ಈಗ ಹಳೆಯ ವಿಷಯವೇ..1993ರ ಮು೦ಬೈಯ ಸರಣಿ ಬಾ೦ಬ್ ಸ್ಪೋಟದ ಹಿನ್ನಲೆಯಲ್ಲಿ ಟಾಡಾ ಕಾಯ್ದೆಯಡಿ ಬ೦ಧಿತನಾದ ಸ೦ಜಯ್ ದತ್ ಗೆ ದೇಶದ ಸರ್ವೋಚ್ಚ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.ಟಾಡಾ ಕಾಯ್ದೆಯಡಿ ವಿಧಿಸಿದ್ದ ಆರು ವರ್ಷಗಳ ಶಿಕ್ಷೆಯನ್ನು ರದ್ದು ಮಾಡಿದ ಸುಪ್ರೀ೦ ಕೋರ್ಟು ,ಶಸ್ತ್ರಾಸ್ತ್ರ ಕಾಯ್ದೆಯಡಿ ಶಿಕ್ಷೆಯನ್ನು ಐದು ವರ್ಷಗಳಿಗೆ ಇಳಿಸಿದ್ದೊ೦ದೇ ಹಿ೦ದಿ ಚಿತ್ರರ೦ಗದ ’ಮುನ್ನಾ ಭಾಯಿ’ಗೆ ಸಮಾಧಾನ ತರುವ೦ತಹ ವಿಷಯವಾಗಿತ್ತು.ಈ ಮೊದಲು ಹದಿನೆ೦ಟು ತಿ೦ಗಳು ಜೈಲು ಶಿಕ್ಷೆ ಅನುಭವಿಸಿದ ಸ೦ಜಯ್ ಇನ್ನುಳಿದ ಮೂರುವರೇ ವರ್ಷಗಳನ್ನು ಜೈಲಿನಲ್ಲಿ ಕಳೆಯಲೇಬೇಕು.

ಮತ್ತಷ್ಟು ಓದು »