ಅರಬ್ ರಾಷ್ಟ್ರವಾದ ಎಂಬ ಟ್ಯಾಂಕು; ಷರಿಯಾ ಎಂಬ ಪೈಪು!
– ಸಂತೋಷ್ ತಮ್ಮಯ್ಯ
ಬಹುತೇಕರಿಗೆ ರಾಮಾಯಣದ ಈ ಚಿರಪರಿಚಿತವಾದ ಪ್ರಸಂಗ ವಿಚಿತ್ರವಾಗಿ ಕಾಣಿಸಬಹುದು.
ಸುಬಾಹು ಮತ್ತು ಮಾರೀಚರು ಪದೇ ಪದೇ ಅಡ್ಡಿ ಪಡಿಸುತ್ತಿದ್ದರೂ ವಿಶ್ವಾಮಿತ್ರನೇಕೆ ಪದೇ ಪದೇ ಅಲ್ಲೇ ಯಾಗ ಮಾಡುತ್ತಿದ್ದ ಎನಿಸಬಹುದು. ಜನ್ಮತಃ ಕ್ಷತ್ರಿಯನಾಗಿದ್ದ ವಿಶ್ವಾಮಿತ್ರನೇ ಏಕೆ ಸುಬಾಹು ಮಾರೀಚರನ್ನು ಕೊಲ್ಲಲಿಲ್ಲ ಎಂಬ ಪ್ರಶ್ನೆಯೂ ಮೂಡಬಹುದು. ಹಾಗಾದರೆ ಸುಬಾವು-ಮಾರೀಚರು ವಿಶ್ವಾಮಿತ್ರನಿಗಿಂತಲೂ ಪರಾಕ್ರಮಿಗಳಾಗಿದ್ದರೇ ಎಂದು ಸಂಶಯವನ್ನೂ ಹುಟ್ಟಿಸಬಹುದು. ಅಂಥ ಪ್ರಶ್ನೆ, ಸಂಶಯ, ಗೊಂದಲಗಳು ಹುಟ್ಟುವುದಕ್ಕೆ ಕಾರಣಗಳೂ ಇವೆ. ಏಕೆಂದರೆ ಪ್ರತೀ ಭಾರಿ ಉಪಟಳ ಕೊಟ್ಟಾಗಲೂ ವಿಶ್ವಾಮಿತ್ರ ಅಷ್ಟೇ ಶ್ರದ್ಧೆಯಿಂದ ಯಾಗಕ್ಕೆ ಅಣಿಯಾಗುತ್ತಿದ್ದ. ಪ್ರತೀ ಬಾರಿಯೂ ರಾಕ್ಷಸರು ಹೊಸ ಹೊಸ ವಿಧಾನಗಳ ಮೂಲಕ ಯಾಗಕ್ಕೆ ಅಡ್ಡಿಪಡಿಸುತ್ತಲೇ ಇದ್ದರು. ರಾಕ್ಷಸರು ವಿಶ್ವಾಮಿತ್ರನಿಗಿಂತ ಒಂದು ಹೆಜ್ಜೆ ಮುಂದಿದ್ದರು. ಪ್ರತೀ ಬಾರಿಯೂ ದಾಳಿಯಾಗುವುದೆಂದು ತಿಳಿದಿದ್ದ ಮಿಶ್ವಾಮಿತ್ರ ತಕ್ಕ ಕ್ರಮವನ್ನೂ ಕೈಗೊಳ್ಳುತ್ತಿದ್ದ, ಪ್ರತಿ ಬಾರಿಯೂ ಸೋಲುತ್ತಿದ್ದ. ಕೊನೆಗೆ ವಿಶ್ವಾಮಿತ್ರ ರಾಮ ಲಕ್ಷ್ಮಣರನ್ನು ಕರೆತರುವ ಹೊತ್ತಿಗೆ ಹಣ್ಣುಗಾಯಿ ನೀರುಗಾಯಿ ಅಗಿಹೋಗಿದ್ದ.
ಏಕೆಂದರೆ ವಿಶ್ವಾಮಿತ್ರನಿಗೆ ರಾಕ್ಷಸರ ಆಚರಣೆಗಳು ತಿಳಿದಿತ್ತೇ ಹೊರತು, ಅವರ ಸಿದ್ಧಾಂತ ಮತ್ತು ಪ್ರವೃತ್ತಿಗಳು ತಿಳಿದಿರಲಿಲ್ಲ ಅಥವಾ ಅವನ್ನು ತಿಳಿಯಲು ಅತ ಬಹುಕಾಲ ತೆಗೆದುಕೊಂಡಿದ್ದ!
ಭಾರತದಲ್ಲಿ ಷರಿಯಾ ಅಥವಾ ಷರಿಯತ್ ಎಂದರೂ ಹಾಗೆಯೇ. ಇಂದಿಗೂ ಮುಸಲ್ಮಾನೇತರರಿಗೆ ಷರಿಯತ್ ಸರಿಯಾ, ತಪ್ಪಾಎಂಬ ಚರ್ಚೆಯೇ ದೊಡ್ಡದಾಗುತ್ತದೆಯೇ ಹೊರತು ಅದರಾಚೆಗೆ ಇಣುಕಿದವರು ಕಡಿಮೆ. ಆದರೆ ಮುಸಲ್ಮಾನರಲ್ಲಿ ಹಾಗಿಲ್ಲ. ಅವರಲ್ಲಿ ಷರಿಯಾ ಏಕಾಗಿ ಇದೆ? ಯಾಕಾಗಿರಬೇಕು? ಅದರ ಮೂಲ ಉದ್ದೇಶವೇನಿದೆ ಎಂಬುದರ ಬಗ್ಗೆ ಸ್ಪಷ್ಟತೆಯಿದೆ. ಆಲ್ ಇಂಡಿಯಾ ಪರ್ಸನಲ್ ಲಾ ಬೋರ್ಡ್ ಪ್ರತೀ ಜಿಲ್ಲೆಯಲ್ಲೂ ಷರಿಯಾ ನ್ಯಾಯಾಲಗಳಿರಬೇಕೆಂದು ಹೇಳುತ್ತಿರುವುದಕ್ಕೂ ಗಹನವಾದ ಕಾರಣವಿದೆ.
ಸಂವಿಧಾನ ತಿದ್ದಿದ್ದ ಇಂದಿರಾ ಅಂಬೇಡ್ಕರರಿಗಿಂತ ಶ್ರೇಷ್ಠರಾಗಿದ್ದರೇ?
ಏಕರೂಪ ನಾಗರಿಕ ಸಂಹಿತೆ – ಸುಪ್ರೀಂ ಕೋರ್ಟ್ V/S ಜಮಾತೆ ವಿಚಾರಧಾರೆ
– ಅನಿರುದ್ಧ ವಸಿಷ್ಟ,ಭದ್ರಾವತಿ
ಅರಾಜಕತೆ ತಂದೊಡ್ಡದಿರಲಿ ಧರ್ಮಾಧಾರಿತ ಕಾನೂನು
ಪ್ರಜಾಪ್ರಭುತ್ವ ದೇಶದಲ್ಲಿರುವ ಭಾರತೀಯರಿಗೆ ದೇಶದ ಸಂವಿಧಾನವೇ ಮೇಲ್ಪಂಕ್ತಿಯಾಗಿದ್ದು, ಸಂವಿಧಾನವೇ ಅಂತಿಮವಾದುದು. ಧರ್ಮ ಗ್ರಂಥಗಳಾದ ರಾಮಾಯಣ, ಮಹಾಭಾರತ, ಕುರಾನ್, ಬೈಬಲ್ಗಳು ಆಯಾ ಧರ್ಮದ ಅನುಯಾಯಿಗಳ ವೈಯಕ್ತಿಕವಾಗಿರಬೇಕು.ಆದರೆ,ವೋಟ್ ಬ್ಯಾಂಕ್ ರಾಜಕಾರಣದ ಫಲವಾಗಿ ಸರ್ಕಾರಗಳು ಕೈಗೊಂಡ ನಿರ್ಧಾರಗಳು ಸಂವಿಧಾನ ವಿರುದ್ಧ ನಡೆಯಲು ಪ್ರೇರಣೆಯಾಗುತ್ತವೆ ಎಂದರೆ ಅದು ಪ್ರಜಾಪ್ರಭುತ್ವದ ದುರಂತವೇ ಹೌದು.೩೦೦ ವರ್ಷಗಳ ಕಾಲ ಬ್ರಿಟೀಷರಿಂದ ಆಳಿಸಿಕೊಂಡ ನಮ್ಮ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದರೂ, ಒಂದು ರೀತಿಯಲ್ಲಿ ಸರ್ವಾಧಿಕಾರಿ ಮನಸ್ಥಿತಿಯನ್ನೆ ಇಂದಿಗೂ ಹೊಂದಿದೆ ಎಂದರೆ ತಪ್ಪಲ್ಲ. ಇದು ಕೇವಲ ಆಳುವ ಪಕ್ಷಗಳ ಮನಸ್ಥಿತಿ ಮಾತ್ರವಲ್ಲ, ದೇಶದ ಪ್ರತಿ ಧರ್ಮ ಹಾಗೂ ಜಾತಿಗಳಲ್ಲಿ ಇದು ಹಾಸು ಹೊಕ್ಕಾಗಿದೆ.
೧೯೪೭ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ರೂಪಿಸಲಾದ ಸಂವಿಧಾನ ಮಹೋನ್ನತ ಆಶಯಗಳನ್ನು ಹೊಂದಿದೆ.ಸಂವಿಧಾನವೇ ಭಾರತೀಯರಿಗೆ ಒಂದು ರೀತಿಯಲ್ಲಿ ಸವೋತ್ತಮ ಎಂದರೂ ತಪ್ಪಲ್ಲ. ಆದರೆ, ಸಂವಿಧಾನ ಆಶಯಕ್ಕೆ ಧಕ್ಕೆ ಬರುವ ರೀತಿಯಲ್ಲಿ ಯಾವುದೇ ಸರ್ಕಾರ ಅಥವಾ ಧರ್ಮಗಳು ನಡೆದುಕೊಂಡಾಗ ಅದನ್ನು ನ್ಯಾಯಾಂಗದಲ್ಲಿ ಪ್ರಶ್ನೆ ಮಾಡುವ ಅಧಿಕಾರವನ್ನು ಇದೇ ಸಂವಿಧಾನ ಕಲ್ಪಿಸಿದೆ. ಆದರೆ, ಯಾವುದೇ ಒಂದು ಒಳ ವ್ಯವಸ್ಥೆ ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನೇ ಪ್ರಶ್ನಿಸುತ್ತದೆ ಎಂದರೆ ಹೇಗೆ?
ಬಹುಸಂಖ್ಯಾತರಿಗೆ ರಿಲಿಜನ್ ಇಲ್ಲವಾದರೆ ಅಲ್ಪಸಂಖ್ಯಾತರು ಯಾರು?
– ರಾಕೇಶ್ ಶೆಟ್ಟಿ
ಅದು ರಾಮಕೃಷ್ಣ ಮಿಷನ್ ವರ್ಸಸ್ ಪಶ್ಚಿಮ ಬಂಗಾಳ ಸರ್ಕಾರದ ನಡುವೆ ನಡೆದ ಕುತೂಹಲಕಾರಿ ಕಾನೂನು ಕದನ.ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಲ್ಲಿ ರಾಮಕೃಷ್ಣ ಮಿಷನ್ ಸಂಸ್ಥೆಗೆ ಸೇರಿದ ಶಿಕ್ಷಣ ಸಂಸ್ಥೆಯೊಂದರಲ್ಲಿ ಶುರುವಾಗಿದ್ದ ಕಾಲೇಜಿನ ನಿರ್ವಹಣೆಗೆ ಸಂಬಂಧಿಸಿದಂತೆ,ಸರ್ಕಾರದ ಹಸ್ತಕ್ಷೇಪವನ್ನು ಪ್ರಶ್ನಿಸಿ ರಾಮಕೃಷ್ಣ ಮಿಷನ್ ನ್ಯಾಯಾಲಯದ ಮೆಟ್ಟಿಲೇರಿತ್ತು.ತಮ್ಮ ಸಂಘಟನೆಯೂ ರಾಮಕೃಷ್ಣರ ಬೋಧನೆಗಳ ಮೇಲೆ ಆಧಾರಿತವಾಗಿರುವುದರಿಂದ ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಸಂವಿಧಾನದ Article 30(1) ಮತ್ತು Article 26(a) ಕಾಯ್ದೆಯಡಿಯಲ್ಲಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಇರಬೇಕಾದ ರಕ್ಷಣೆಯಿದೆ ಎಂದು ವಾದಿಸಿತ್ತು.ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟು, ರಾಮಕೃಷ್ಣಯಿಸಂ ಎಂಬ ಪ್ರತ್ಯೇಕವಾದ ರಿಲಿಜನ್ ಇಲ್ಲ ಮತ್ತದು ಹಿಂದೂ ಸಂಪ್ರದಾಯಗಳ ವ್ಯಾಪ್ತಿಯಲ್ಲೇ ಇದೆ ಎಂದಿತ್ತು ಹಾಗೂ ಹಿಂದೂ ಎಂಬುದು ರಿಲಿಜನ್ ಅಲ್ಲ ಅದೊಂದು ಜೀವನ ಪದ್ಧತಿ ಎಂದು ತೀರ್ಪು ನೀಡಿತ್ತು.ಈ ದೇಶದ ಸರ್ವೋಚ್ಚ ನ್ಯಾಯಾಲಯವೇ ಹಿಂದೂ ಎಂಬುದು ರಿಲಿಜನ್ ಅಲ್ಲ ಎಂದ ಮೇಲೆ ನಮ್ಮ ಸರ್ಕಾರಗಳು ಅದನ್ನು ಪರಿಗಣಿಸಬೇಕಿತ್ತಲ್ಲವೇ?
ಒಂದು ವೇಳೆ ಪರಿಗಣಿಸಿದ್ದರೆ ಈಗಲೂ ಸರ್ಕಾರಿ,ಖಾಸಗಿ ಕಚೇರಿ,ಶಿಕ್ಷಣ ಸಂಸ್ಥೆ ಇತ್ಯಾದಿಗಳ ಅರ್ಜಿಗಳಲ್ಲಿ “ಹಿಂದೂ” ಎಂಬುದನ್ನು “ರಿಲಿಜನ್” ಕಾಲಂನಲ್ಲಿ ಭರ್ತಿ ಮಾಡಿಕೊಳ್ಳುತ್ತಿರಲಿಲ್ಲ. ಉದಾಹರಣೆಗೆ ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ಸರ್ಕಾರ ಮಾಡಿದ ಜಾತಿಗಣತಿಯ ವೇಳೆ ನನಗಾದ ಅನುಭವದ ಬಗ್ಗೆ ಹೇಳಬೇಕು.
ತುಳುವಿಗೆ ೮ನೇ ಪರಿಚ್ಛೇದದ ಮಾನ್ಯತೆ ತುಳುವರ “ಹಕ್ಕು” ಯಾರ ಭಿಕ್ಷೆಯಲ್ಲ…!
– ರಾಕೇಶ್ ಶೆಟ್ಟಿ
ಬೆಂಗಳೂರಿನ ಸಮಸ್ತ ತುಳು ಸಂಘಟನೆಗಳೂ ಒಗ್ಗೂಡಿ,ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವಂತೆ ಮತ್ತು ಇತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ವರ್ಷದ ಸೆಪ್ಟಂಬರ್ ೨೮ ರ ಶನಿವಾರ ಕಳೆದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಒಂದು ದಿನದ ’ಹಕ್ಕೊತ್ತಾಯ – ಪ್ರತಿಭಟನೆ’ಯನ್ನು ಮಾಡಿದ್ದವು.ಅಂದಿನ ಪ್ರತಿಭಟನೆಯ ನೇತೃತ್ವ ವಹಿಸಿದವರು ಹಿರಿಯ ಸಾಹಿತಿ ಡಾ|| ಡಿ.ಕೆ ಚೌಟ ಅವರು. ಚೌಟ ಅವರ ಭಾಷಣದಲ್ಲಿ ಇಷ್ಟು ವರ್ಷಗಳ ಕಾಯುವಿಕೆಯನ್ನು ಕಡೆಗಣಿಸಿದ ರಾಜಕಾರಣಿಗಳು,ವ್ಯವಸ್ಥೆಗಳ ಮೇಲೆ ಸಾತ್ವಿಕ ಕೋಪ ಎದ್ದು ಕಾಣುತಿತ್ತು.ಹಾಗೆಯೇ ತುಳುವಿಗೆ ಇರುವ ಅಪಾಯ, ನಮ್ಮ ಭೂಮಿ ಮಲಯಾಳಿಗಳ ಪಾಲಾಗುತ್ತಿರುವ ಬಗೆಗಿನ ಆತಂಕವಿತ್ತು.ಆ ದಿನ ಬಹಳಷ್ಟು ಜನ ಮಾತನಾಡಿದರು.ಆದರೆ ನಿಜವಾಗಿಯೂ ತುಳುವರ ಅಸ್ಮಿತೆಯನ್ನು ಬಡಿದ್ದೆಬ್ಬಿಸುವಂತ ಮಾತನಾಡಿದ್ದು ಚೌಟ ಅವರೊಬ್ಬರೇ.ಅವರ ಮಾತು ಮತ್ತದಕ್ಕೆ ವ್ಯಕ್ತವಾದ ಸ್ಪಂದನೆ ಕಂಡಾಗ ಏನಾದರೂ ಒಳ್ಳೆಯ ಬೆಳವಣಿಗೆಗಳು ಆಗಬಹುದು ಅಂದುಕೊಳ್ಳುತಿದ್ದೆ.ಅಷ್ಟರಲ್ಲೇ, ರಾಜಕಾರಣಿಗಳ ಆಗಮನವಾಯಿತು…!
ಒಬ್ಬರು ಚಿಕ್ಕಮಗಳೂರಿನ ಸಂಸದ ಜಯಪ್ರಕಾಶ್ ಹೆಗ್ಡೆ,ಮತ್ತೊಬ್ಬರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಅನಂತ ಕುಮಾರ್.ಇಂತ ಪ್ರತಿಭಟನಾ ಸಭೆಗಳಿಗೆ ರಾಜಕಾರಣಿಗಳನ್ನೇಕೆ ಕರೆಯುತ್ತಾರೆ ಅನ್ನುವುದು ನನಗೆ ಅರ್ಥವಾಗಲಿಲ್ಲ!
ಅದಕ್ಕೇ ಸರಿಯಾಗಿಯೇ ಈ ಇಬ್ಬರ ಮಾತುಗಳು ಸಾಗಿತ್ತು.ಪ್ರತಿಭಟನೆಗೆಂದು ಬಂದವರನ್ನು ತಮ್ಮ ಆಶ್ವಾಸನೆಗಳ ಮೂಲಕ,ಹಾಸ್ಯ ಚಟಾಕಿಗಳ ಮೂಲಕ ಸಮಾಧಾನಪಡಿಸುವ ಎಂದಿನ ರಾಜಕಾರಣಿಗಳ ಓಲೈಕೆಯ ಶೈಲಿಯ ಭಾಷಣ.೮ನೇ ಪರಿಚ್ಚೇದ ಬಿಟ್ಟು ಕೋರಿರೊಟ್ಟಿ,ನೀರ್ ದೋಸೆ ಇತ್ಯಾದಿ ಇತ್ಯಾದಿ.ಅನಂತ ಕುಮಾರ್ ಅವರು ನವೆಂಬರ್ ತಿಂಗಳಲ್ಲಿ ನೀವು ಒಂದು ತುಳು ನಿಯೋಗವನ್ನು ಕರೆದುಕೊಂಡು ದೆಹಲಿಗೆ ಬನ್ನಿ ಆ ಸಮಯಕ್ಕೆ ಶುರುವಾಗುವ ಸಂಸತ್ತಿನ ಅಧಿವೇಶನದಲ್ಲಿ ತುಳುವನ್ನು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಮಾತನಾಡುವ ಅಂತ ಹೇಳಿ ಎಲ್ಲರ ಚಪ್ಪಾಳೆಯನ್ನು ಗಿಟ್ಟಿಸಿದ್ದರು.ಅನಂತ ಕುಮಾರ್ ಅವರ ಮಾತನ್ನು ಹೆಗ್ಡೆಯವರು ಅನುಮೋದಿಸಿದ್ದರು.ವೇದಿಕೆಯಲ್ಲಿದ್ದವರೂ ಅದಕ್ಕೇ ಸಮ್ಮತಿಸುವುದರೊಂದಿಗೆ ಪ್ರತಿಭಟನಾ ಸಭೆ ’ಶಾಂತ’ವಾಯಿತು.
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೩
ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨
ಭಾಗ ೧ ಮತ್ತು ೨ ರಲ್ಲಿ ‘370ನೇ ವಿಧಿಯ ಸಾಂವಿಧಾನಿಕ ಸಿಂಧುತ್ವ’ ಮತ್ತು ‘370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ’ಯ ಬಗ್ಗೆ ಮಾತನಾಡಿದೆವು. ಭಾಗ ೩ ರಲ್ಲಿ ಮುಂದಿನ ಹಾದಿಯ ಬಗ್ಗೆ ಚಿಂತಿಸೋಣ
ಮುಂದಿನ ಹಾದಿ
ಮೇಲೆ ನೀಡಿದ ಎಲ್ಲ ಉದಾಹರಣೆಗಳು ಸಾಬೀತುಪಡಿಸುವುದಿಷ್ಟೇ, ಸಂವಿಧಾನದ 370ನೇ ವಿಧಿ ಪ್ರಜಾಪ್ರಭುತ್ವದ ಆದರ್ಶಗಳು ಮತ್ತು ನಾಗರಿಕತೆ, ಮಾನವ ಹಕ್ಕುಗಳ ಕುರಿತ ಅಂತರಾಷ್ಟ್ರೀಯ ಕಾನೂನುಗಳ ಕಲ್ಪನೆಗಳ ಮೇಲೆ ನಡೆಯತ್ತಿರುವ ಅತಿಯಾದ ಅಣಕ. ಇದು ಭಾರತದ ಜನಸಂಖ್ಯೆ ಗಣನೀಯ ಪ್ರಮಾಣದ ಭಾಗವೊಂದನ್ನು ದ್ವತೀಯ ದರ್ಜೆಯ ಮತ್ತು ನಾಗರಿಕರೇ ಅಲ್ಲದ ಸ್ಥಿತಿಗೆ ಇಳಿಸುತ್ತದೆ. ವಿಪುಲ್ ಕೌಲನ ಪ್ರಕರಣವನ್ನು ಮತ್ತೆ ನೋಡುವುದಾದರೆ, ಅಂದಿನ ಮುಖ್ಯಮಂತ್ರಿ ಗುಲಾಮ್ ನಬೀ ಆಜಾದ್ರ ಕಾರ್ಯದರ್ಶಿ ನೀಡಿದ “ರಾಜ್ಯಕ್ಕೆ ವಿಶೇಷಾಧಿಕಾರ ನೀಡುವ 370ನೇ ವಿಧಿಯ ಅಡಿಯಲ್ಲಿ ಭಾರತ ಸರ್ಕಾರದ ಗೃಹ ಇಲಾಖೆ ನೀಡುವ ಯಾವುದೇ ಸೂಚನೆಯನ್ನು ಪಾಲಿಸಲು ಜಮ್ಮು ಕಾಶ್ಮೀರ ರಾಜ್ಯ ಸರ್ಕಾರ ಬಾಧ್ಯವಲ್ಲ. ಆದ್ದರಿಂದ ನಿಮ್ಮ ಮಗುವಿನ ವೈದ್ಯಕೀಯ ವೆಚ್ಚವನ್ನು ಪಾವತಿಸಲು ಸಾಧ್ಯವಿಲ್ಲ” ಎನ್ನುವ ನಿರ್ದಯ ಉತ್ತರ ಕೌಲ್ ಕುಟುಂಬದಲ್ಲಿ ಅಣುಮಾತ್ರವಷ್ಟಾದರೂ ಜೀವಂತವಾಗಿದ್ದ ಭರವಸೆಯನ್ನು ತುಂಡರಿಸಿ ಅಡಗಿಸಿತು. ಜಮ್ಮು ಕಾಶ್ಮೀರ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ ಹದಿಮೂರು ವರ್ಷದ ಅದೃಷ್ಟಹೀನ ಬಾಲಕನ ಬವಿಷ್ಯವನ್ನು ಅಂಧಕಾರಕ್ಕೆ ನೂಕಿತು.
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೨
ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್
Artilce 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧
370ನೇ ವಿಧಿಯ ನಿಂದನೆ ಮತ್ತು ದುರ್ಬಳಕೆ
370ನೇ ವಿಧಿಯ ನಿಂದನೆ ಮತ್ತು ಪ್ರಜ್ಞಾಪೂರ್ವಕ ದುರುಪಯೋಗಗಳ ಮೇಲೆ ಗಮನಹರಿಸಿದರೆ ಜಮ್ಮು ಕಾಶ್ಮೀರ ರಾಜ್ಯಕ್ಕೆ ಸಂಭಂಧಿಸಿದಂತೆ ಸಂಘಾತ್ಮಕ ವಿಷಯಗಳ ಯಾದಿಯಲ್ಲಿ 99ರಲ್ಲಿ 6 ಮತ್ತು ಸಹವರ್ತಿ ಪಟ್ಟಿಯ 52ರಲ್ಲಿ 21 ವಿಷಯಗಳು ಇನ್ನೂ ಹೊರಪಟ್ಟಿರುವುದು ಗೋಚರವಾಗುತ್ತದೆ. ಜಮ್ಮು ಕಾಶ್ಮೀರದ ಪ್ರಮಾಣ ವಚನದ ಪಠ್ಯ ಉಳಿದವುಗಿಳಿಗಿಂತ ಭಿನ್ನವಾಗಿದೆ. ರಾಜ್ಯದ ಶಾಸನಸಭೆಯ ಕಾಲಾವಧಿ ಅರು ವರ್ಷ. ಜಮ್ಮು ಕಾಶ್ಮೀರ ರಾಜ್ಯದ ಸಂವಿಧಾನದ ಪ್ರಸ್ತಾವನೆಯಲ್ಲಿ ಜಾತ್ಯತೀತ ಮತ್ತು ಸಮಾಜವಾದಿ ಶಬ್ದಗಳಿಗೆ ಜಾಗವಿಲ್ಲ. ಬ್ರಷ್ಟಾಚಾರ ನಿಯಂತ್ರಣ ಕಾಯಿದೆ (Prevention of Corruption) 1988, ಭಾರತೀಯ ದಂಡಸಂಹಿತೆ (Indian Penal Code), ಗೃಹೀಯ ಹಿಂಸಾ ಕಾಯಿದೆ(Domestic Violence Act), ಧಾರ್ಮಿಕ ಸಂಸ್ಥೆ (ದುರುಪಯೋಗ ನಿಯಂತ್ರಣ) ಕಾಯಿದೆ 1988, ಅರಣ್ಯ ಹಕ್ಕು ಕಾಯಿದೆ,ವನ್ಯಜೀವಿ ಸಂರಕ್ಷಣಾ ಕಾನೂನು, ನಗರ ಭೂ ಮಿತಿ ಕಾನೂನು ಇತ್ಯಾದಿಗಳು ಜಮ್ಮು ಕಾಶ್ಮೀರ ರಾಜ್ಯಕ್ಕೆ ಅನ್ವಯವಾಗುವುದಿಲ್ಲ. ಜಮ್ಮು ಕಾಶ್ಮೀರದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐನ ಅಧಿಕಾರ ಸೀಮಿತವಾಗಿದೆ, ಅಂದರೆ ಜಮ್ಮು ಕಾಶ್ಮೀರ ರಾಜ್ಯದಲ್ಲಿ ದಾಖಲಾದ ದೂರಿನ ಮೇಲೆ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ. ರಾಜ್ಯಕ್ಕೆ ಸಂಭಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಕಾನೂನು ವ್ಯಾಪ್ತಿ ಅಪೀಲಿಗೆ ಮಾತ್ರ ಸೀಮಿತವಾಗಿದೆ ಮತ್ತು ಫೆಡರಲ್ ಕೋರ್ಟ ಆಗಿ ಕಾರ್ಯನಿರ್ವಹಿಸುವ ಅಧಿಕಾರ ಮೊಟಕುಗೊಂಡಿದೆ.
ಕಡೆಯಪಕ್ಷ ರಾಜ್ಯದ ಜನತೆಗೆ 370ನೇ ವಿಧಿಯು ನಿಜವಾಗಿ ಹಿತಕಾರಿಯಾಗಿದೆಯೇ? ಎನ್ನುವುದನ್ನು ವಿಶ್ಲೇಷಿಸಿದರೆ, ಜನರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ. ಜನ ಪ್ರತಿನಿಧಿ ಕಾಯಿದೆ (People representation act 1950) ರಾಜ್ಯಕ್ಕೆ ಅನ್ವಯವಾಗದೇ ಇರುವುದರಿಂದ ಚುನಾವಣಾ ಕ್ಷೇತ್ರಗಳ ಮರುವಿಂಗಡನೆಯನ್ನು ಜಾರಿಗೆ ತರುವ ಯಾವುದೇ ಅಧಿಕಾರ ಕೇಂದ್ರಕ್ಕೆ ಇರುವುದಿಲ್ಲ. 2002ರಲ್ಲಿ ಜಮ್ಮು ಕಾಶ್ಮೀರವನ್ನು ಹೊರತುಪಡಿಸಿ ಇಡೀ ದೇಶದಲ್ಲಿ ಕ್ಷೇತ್ರ ಪುನರ್ವಿಂಗಡನೆಯನ್ನು ಕೈಗೊಳ್ಳಲಾಯಿತು. ಕೆಲವು ಆಯ್ದ ಪ್ರದೇಶಗಳ ಹಿತಾಸಕ್ತಿಗನುಗುಣವಾಗಿ 370ನೇ ವಿಧಿಯ ದುರುಪಯೋಗ ನಡೆದಿದೆ.
Article 370 – ಒಂದು ವಸ್ತುನಿಷ್ಠ ಮೌಲ್ಯಮಾಪನ : ಭಾಗ ೧
ಮೂಲ : ಪ್ರಶಾಂತ್ ವೈದ್ಯರಾಜ್
ಕನ್ನಡಕ್ಕೆ : ಸತ್ಯನಾರಾಯಣ ಎಸ್
ಹದಿಮೂರು ವರ್ಷದ ವಿಪುಲ್ ಕೌಲ್ ಜಮ್ಮು ಕಾಶ್ಮೀರ ರಾಜ್ಯದ ಲೋಕೋಪಯೋಗಿ ಇಲಾಖೆಯ ನಾಲ್ಕನೇ ವರ್ಗದ ನೌಕರರೊಬ್ಬರ ಮಗ. ಹಲವು ವ್ಯಾಧಿಗಳಿಂದ ಬಳಲುತ್ತಿರುವ ವಿಪುಲ ಅವನ ಕುಟುಂಬ ತನ್ನ ಭವಿಷ್ಯವನ್ನೇ ಬಲಿಕೊಟ್ಟು ಕೊಡಿಸುತ್ತಿರುವ ಚಿಕಿತ್ಸೆಯ ಕಾರಣದಿಂದಾಗಿ ಇಂದು ಬದುಕಿದ್ದಾನೆ. 2001ರಲ್ಲಿ ಆತನ ಕುಟುಂಬದವರು ಸಹಾಯಕ್ಕಾಗಿ ಜಮ್ಮು ಕಾಶ್ಮೀರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು, ಅಂತೆಯೇ ಅವರಿಗೆ 20ಲಕ್ಷ ರೂ ಸಹಾಯ ಧನದ ಭರವಸೆಯನ್ನು ನೀಡಲಾಗಿತ್ತು. ಆದರೆ ಸರ್ಕಾರ ಬದಲಾದ ನಂತರ ಸಹಾಯ ನಿಂತುಹೋಯಿತು. ತತ್ಕಾಲಕ್ಕೆ ಗೃಹ ಮಂತ್ರಾಲಯ ಮಧ್ಯಪ್ರವೇಶಿಸಿ ನೆರವನ್ನು ಮುಂದುವರಿಸುವಂತೆ ಸೂಚಿಸಿತು. ಇಷ್ಟಾದ ಮೇಲೂ ಅವರಿಗೆ ದೊರಕಿದ್ದು ದಿ 24 ಜುಲೈ 2007ರ ಒಂದು ಪತ್ರ, ಪತ್ರದ ಒಕ್ಕಣೆಯಲ್ಲಿ “ಸಂವಿಧಾನದ ವಿಧಿ 370ರ ಅನ್ವಯ ಜಮ್ಮು ಕಾಶ್ಮೀರ ಸರ್ಕಾರ ಗೃಹ ಮಂತ್ರಾಲಯದ ಸೂಚನೆಯನ್ನು ಪಾಲಿಸುವ ಬಾಧ್ಯತೆಯನ್ನು ಹೊಂದಿರುವುದಿಲ್ಲ.” ಎಂದು ಉಲ್ಲೇಖಿಸಲಾಗಿತ್ತು !
ಇದೊಂದು 370ನೇ ವಿಧಿಯ ದುರುಪಯೋಗದ ಪ್ರತ್ಯೇಕ ಪ್ರಕರಣವಲ್ಲ. 1950ರಲ್ಲಿ ಸಂವಿಧಾನ ಜಾರಿಗೆ ಬಂದಾಗಿನಿಂದ ರಾಷ್ಟ್ರೀಯ ಹಿತಾಸಕ್ತಿಗಳಿಗೆ ವ್ಯತಿರಿಕ್ತವಾದ ಸ್ವಾರ್ಥ ಉದ್ಧೇಶಗಳ ಪೂರ್ತಿಗಾಗಿ 370ನೇ ವಿಧಿಯ ನಿಂದನೆ ಮತ್ತು ದುರುಪಯೋಗ ಮತ್ತೆ ಮತ್ತೆ ನಡೆಯಲ್ಪಟ್ಟಿದೆ.
ಆಗಿನ ತುರ್ತು ಸನ್ನಿವೇಶಕ್ಕೆ ಹಂಗಾಮಿ ಏರ್ಪಾಡಾಗಿ 370ನೇ ವಿಧಿಯನ್ನು ಸಂವಿಧಾನದಲ್ಲಿ ಸೇರಿಸಲಾಗಿತ್ತು. ಜಮ್ಮು ಕಾಶ್ಮೀರದ ಮೇಲೆ ಆಕ್ರಮಣವೆಸಗಿದ್ದ ಪಾಕಿಸ್ತಾನ ರಾಜ್ಯದ ಭೂಭಾಗವನ್ನು ನ್ಯಾಯಬಾಹಿರವಾಗಿ ತನ್ನ ವಶಕ್ಕೆ ತೆಗೆದುಕೊಂಡಿತ್ತು. ವಿಷಯವನ್ನು ವಿಶ್ವಸಂಸ್ಥೆಗೆ ಒಯ್ಯಲಾಗಿ ವಿಶ್ವಸಂಸ್ಥೆಯ ಭದ್ರತಾ ಮಂಢಳಿಯು ಕೆಲವು ಪೂರ್ವಾನ್ವಯ ಷರತ್ತುಗಳೊಂದಿಗೆ ಜನಮತಗಣನೆಯನ್ನು ನಡೆಸುವ ಗೊತ್ತುವಳಿಯನ್ನು ಅಂಗೀಕರಿಸಿತು. ಆ ಷರತ್ತುಗಳೆಂದರೆ ಪಾಕಿಸ್ತಾನ ಆಕ್ರಮಿತ ಪ್ರದೇಶದಿಂದ ತನ್ನ ಸೈನ್ಯವನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಮತ್ತು ತಾನು ಸ್ಥಾಪಿಸಿದ ಆಡಳಿತ ವ್ಯವಸ್ಥೆಯನ್ನು ತಗೆದುಹಾಕಬೇಕು. ಹಾಗೆಯೇ ಭಾರತದ ಸಂವಿಧಾನವನ್ನು ಜಾರಿಗೊಳಿಸುವ ಯಾವುದೇ ಪ್ರಯತ್ನವು ಸಂಪೂರ್ಣವಾಗಿ ನಿರಾಕರಿಸಲ್ಪಡುವುದು.