ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸರಕಾರಿ ಉದ್ಯೋಗ’

30
ಜೂನ್

ಪ್ರತಿಭಾ ಪಲಾಯನ

-ಮಯೂರ ಲಕ್ಷ್ಮೀ

artಅದೊಂದು ಕಾಲದಲ್ಲಿ ನಳಂದಾ, ತಕ್ಷಶಿಲಾ ಮುಂತಾದ ವಿಶ್ವವಿಖ್ಯಾತ ವಿದ್ಯಾಲಯಗಳಿಂದ ಪ್ರಸಿದ್ಧಿಹೊಂದಿ ಎಲ್ಲೆಡೆಯಿಂದ ಎಲ್ಲರನ್ನೂ ಆಕರ್ಷಿಸಿ ಜ್ಞಾನದೇಗುಲವೆನಿಸಿದ್ದ ಭಾರತ ದೇಶವು ತನ್ನ ಹಿಂದಿನ ವೈಭವಗಳನ್ನು ಮರೆತುಹೋಗುವ ಸ್ಥಿತಿ ತಲುಪಿದ್ದಾದರೂ ಏಕೆ? ಯಾವುದೇ ಒಂದು ದೇಶವು ಆರ್ಥಿಕವಾಗಿ ಸಧೃಢವೆನಿಸಿಕೊಳ್ಳುವುದು ದೇಶದ ಬೆನ್ನೆಲುಬಾದ ಯುವಶಕ್ತಿಯಿಂದಾ ಮಾತ್ರ! ಜಗತ್ತಿಗೆ ಅರಿವು ನೀಡುವ ಜ್ಞಾನದೇಗುಲವೆನಿಸಿದ್ದ ಭಾರತ ಮೆಕಾಲೆಯ ಆಗಮನದಿಂದ ತನ್ನ ಮೌಲ್ಯಾಧರಿತ ಶಿಕ್ಷಣ ವ್ಯವಸ್ಥೆಯನ್ನೇ ಕಳೆದುಕೊಂಡಿತು. ಭಾರತವು ವಿಶ್ವಮಾನ್ಯವೆನಿಸಿದ್ದು ತನ್ನ ಜ್ಞಾನ-ವಿಜ್ಞಾನ, ತಂತ್ರಜ್ಞಾನಗಳಿಂದ ಪ್ರಪಂಚಕ್ಕೆ ನೀಡಿದ ಕೊಡುಗೆಯಿಂದ. ಮತ್ತಷ್ಟು ಓದು »

4
ಜೂನ್

“ಚಪ್ಪಟೆ ಪಾದದ ಕನ್ನಡಿಗರು”

-ದೀಕ್ಷಿತ್ ಪೊಯ್ಯೆಕಂಡ
indian-airport“100 ಮೀಟರ್ ಓಟವನ್ನು 15 ಸೆಕೆಂಡುಗಳಲ್ಲಿ ಮುಗಿಸಬಹುದು ಬಿಡು ಮತ್ತೆ ಹಗ್ಗ ಹತ್ತೋದು ಕಂಬ ಹತ್ತೋದು ಕಷ್ಟ ಬಿಡು” ಎಂದು ಮಂಜು ವೈದ್ಯಕೀಯ ಪರೀಕ್ಷೆಯ ಬಳಿಕ ಕೊಚ್ಚಿಕೊಳ್ಳತೊಡಗಿದ. ನನ್ನದೇನೂ ಹೊರತಾಗಿರಲಿಲ್ಲ, “ಅಯ್ಯೋ ಮೆಡಿಕಲ್ ಹೆಂಗೂ ಆಯ್ತು ಇನ್ನು ಫಿಸಿಕಲ್ ಟೆಸ್ಟ್ ಹೇಗೆ ಪಾಸ್ ಮಾಡೊದಪ್ಪಾ” ಅನ್ನುತ್ತಾ ಜೊತೆಗಿದ್ದವರೊಂದಿಗೆ ಮಾತಿಗಿಳಿದೆ. ಮತ್ತೊಬ್ಬನದೂ ಅದೇ ರಾಗ. ನಮಗಿದ್ದ ಸಂತೋಷದ ವಿಷಯವೆಂದರೆ ಆ ದಿನ 8 ಮಂದಿ ಕನ್ನಡಿಗರು ಅಲ್ಲಿದ್ದೆವು. ಸರಿಸುಮಾರು ಮೂರು ಗಂಟೆ ಕಾದ ಬಳಿಕ ಮೆಡಿಕಲ್ ರಿಸಲ್ಟ್ ಬಂತು. ಅದನ್ನು ಹಿಡಿದುಕೊಂಡು ಬಂದ ಏರ್ಪೋರ್ಟ್ ಮುಖ್ಯಸ್ಥ “ನಾನು ರಿಜೆಕ್ಟ್ ಆದ ಅಭ್ಯರ್ಥಿಗಳ ಹೆಸರು ಮಾತ್ರ ಕರೆಯುತ್ತಿದ್ದೇನೆ’ ಎಂದು ಮಲಯಾಳಿ ಮಿಶ್ರಿತ ಆಂಗ್ಲ ಭಾಷೆಯಲ್ಲಿ ಓದತೊಡಗಿದ. ರಮೇಶ್.. ಸುರೇಶ್.. ಹೀಗೆ ಹೆಸರು ಕೇಳಿದಾಗ, ನನಗೇನೋ ಫೈವ್ ಸ್ಟಾರ್ ಜಾಹೀರಾತು ಕೇಳಿದಂತಾಗುತಿತ್ತು. ಉಫ್ ಅದೇನೋ ಎದೆಯಲಿ ಡವ ಡವ! ವರುಷಗಳ ಕನಸು. ಲಿಖಿತ ಪರೀಕ್ಷೆಯ ಬಳಿಕದ ತಯಾರಿ, ಬಯಲಲ್ಲಿ ಪಟ್ಟ ಕಷ್ಟ ಎಲ್ಲವೂ ನೆನಪಾಗುತಿದ್ದವು. ಒಂದೊಂದೇ ಹೆಸರನ್ನು ಕೇಳಿಸಿಕೊಳ್ಳುತ್ತಾ ಹೋದಂತೆ ಸಿಡಿಲು ಬಡಿದಂತೆ ದೀಕ್ಷಿತ್ ಕುಮಾರ್ ಅಂತ ಹೆಸರನ್ನೂ ಕೇಳಿಬಿಟ್ಟೆ. ಆಯ್ತು ನನ್ನ ಕನ್ನಂಬಾಡಿ ಕಟ್ಟೆ ಒಡೆದೋಯ್ತು. ಕಣ್ಣು ಮಂಜಾಗತೊಡಗಿತು. ನನ್ನ ಹೆಸರನ್ನೂ ಹೇಳಿಯೇಬಿಟ್ಟರು. ಈ ಕೆಲಸಕ್ಕಾಗಿ ಇನ್ನಿಲ್ಲದಂತೆ ಪಟ್ಟ ಶ್ರಮವೆಲ್ಲಾ ವ್ಯರ್ಥವಾಗಿ ಹೋಯಿತು. ಮತ್ತೆ ಮಂಜು, ತ್ರಿಭುವನ್ ಹೀಗೇ ಮುಂದುವರಿದಿತ್ತು. ಅಷ್ಟೂ ಕನ್ನಡಿಗರ ಯಾತ್ರೆ ಮುಗಿದಿತ್ತು. ಕಾರಣ ಕೇಳಿದ್ರೆ, ನಮ್ಮದು ಚಪ್ಪಟೆ ಪಾದ ಅಂತೆ ! ಮತ್ತಷ್ಟು ಓದು »

27
ಏಪ್ರಿಲ್

ಮನುಷ್ಯನಾಗುವುದೆಂದರೇನು?

-ರಾಜಕುಮಾರ.ವ್ಹಿ.ಕುಲಕರ್ಣಿ, ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ

36374889-corruption

ಮೊನ್ನೆ ನನ್ನೂರಿನ ಆ ಹಳ್ಳಿಗೆ ಹೋಗಿದ್ದೆ. ಊರ ಹೆಬ್ಬಾಗಿಲಲ್ಲಿ ಪರಿಚಿತರೋರ್ವರು ಭೇಟಿಯಾದರು. ಅದು ಇದು ಮಾತನಾಡುತ್ತ ತಮ್ಮ ಅಣ್ಣನ ಮಗನಿಗೆ ಸರ್ಕಾರಿ ಕೆಲಸ ಸಿಕ್ಕ ವಿಷಯ ತಿಳಿಸಿದರು. ವಿಷಯ ಕೇಳಿ ತುಂಬ ಸಂತೋಷವಾಯಿತು. ಬಾಲ್ಯದಿಂದಲೂ ಬಡತನದಲ್ಲೇ ಬೆಳೆದ ಹುಡುಗ ಪರಿಶ್ರಮ ಪಟ್ಟು ಓದಿ ಡಿಪ್ಲೋಮ ಡಿಗ್ರಿ ಸಂಪಾದಿಸಿದ್ದ. ಆತನ ಅರ್ಹತೆಗೆ ತಕ್ಕುದಾದ ಹುದ್ದೆ ಲೋಕೋಪಯೋಗಿ ಇಲಾಖೆಯಲ್ಲಿ ಲಭಿಸಿತ್ತು. ನನ್ನ ಪರಿಚಿತರು ತಮ್ಮ ಅಣ್ಣನ ಮಗನ ಕುರಿತು ಅಭಿಮಾನದಿಂದ ಮಾತನಾಡಿದರು. `ನೋಡ್ರಿ ಅವ್ನಿಗಿ ಭಾಳ ಛಲೋ ಡಿಪಾರ್ಟ್‍ಮೆಂಟ್ ಸಿಕ್ಕಾದ. ಇನ್ನ ಮುಂದ ಅವ್ನಿಗಿ ಯಾರೂ ಹಿಡಿಯೋ ಹಂಗಿಲ್ಲ. ಯಾಕಂದ್ರ ಮುಂದ ಸುರಿಯೋದೆಲ್ಲ ರೊಕ್ಕದ ಮಳಿನಾ. ಬ್ಯಾಡ ಅಂದ್ರೂ ಮಂದಿ ಮನಿಗಿ ಬಂದು ರೊಕ್ಕ ಕೊಡ್ತಾರ. ರೊಕ್ಕ ಎಣಿಸಾಕ ಅಂವ ಒಂದು ಆಳ ಇಟ್ಕೊಬೇಕಾಗ್ತದ. ಎರ್ಡ ವರ್ಷದಾಗ ಅಂವ ಹ್ಯಾಂಗ ಮನಷ್ಯಾ ಆಗ್ತಾನ ನೋಡ್ರಿ’ ಒಂದು ಕ್ಷಣ ಕಾಲ ಸ್ತಬ್ಧವಾದಂತಾಯಿತು. ಹಾಗಾದರೆ ಅವರ ದೃಷ್ಟಿಯಲ್ಲಿ ಮನುಷ್ಯನಾಗುವುದೆಂದರೇನು. ಸರ್ಕಾರಿ ನೌಕರಿಗೆ ಸೇರಿ ಲಂಚ ಹೊಡೆಯುತ್ತ, ಬಂಗ್ಲೆ ಮೇಲೆ ಬಂಗ್ಲೆ ಕಟ್ಟಿಸಿ, ಹವಾನಿಯಂತ್ರಿತ ಕಾರುಗಳಲ್ಲಿ ಓಡಾಡುತ್ತ ಐಷಾರಾಮಿ ಬದುಕು ನಡೆಸುವಾತನೇ ನಿಜವಾದ ಮನುಷ್ಯ ಎನ್ನುವ ಅವರ ಯೋಚನಾ ಲಹರಿ ಅರೇ ಕ್ಷಣ ನನ್ನನ್ನು ನಾನು ಯಾರು? ಎನ್ನುವ ಯೋಚನೆಗೆ ಹಚ್ಚಿತು. ಒಂದಿಷ್ಟು ಶೃದ್ಧೆ, ನಿಷ್ಟೆ, ಪ್ರಾಮಾಣಿಕತೆಯ ನೆರಳಲ್ಲಿ ಬದುಕು ನೂಕುತ್ತಿರುವ ಜನ ಮನುಷ್ಯರೇ ಅಲ್ಲ ಎನ್ನುವ ಅಭಿಪ್ರಾಯ ಅವರ ಮಾತಿನುದ್ದಕ್ಕೂ ಇಣುಕುತ್ತಿತ್ತು. ಮತ್ತಷ್ಟು ಓದು »