ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 30:
ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ:
– ರಾಮಚಂದ್ರ ಹೆಗಡೆ
ರಾಷ್ಟ್ರಧ್ವಜದ ಗೌರವ ರಕ್ಷಣೆಗಾಗಿ ಬ್ರಿಟಿಷರ ಗುಂಡಿಗೆ ಎದೆಯೊಡ್ಡಿ ಬಲಿದಾನಗೈದ ಅಸ್ಸಾಮಿನ ವೀರವನಿತೆಯರು ಕನಕಲತಾ ಬರುವಾ ಮತ್ತು ಭೋಗೇಶ್ವರಿ ಫು೦ಖನಾನಿ. ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರದ ಭೂಪಟ, ವಂದೇಮಾತರಂ ಎಲ್ಲವೂ ದೇಶಾಭಿಮಾನದ ಅಭಿವ್ಯಕ್ತಿಯ ಸಂಕೇತಗಳಾದರೂ ಅವು ನಮ್ಮಲ್ಲಿ ಸೃಷ್ಟಿಸುವ ಭಾವ ವರ್ಣನಾತೀತ. ಸೈನಿಕನೊಬ್ಬ ಯುದ್ಧ ಗೆದ್ದಾಗ, ಕ್ರೀಡಾಳುವೊಬ್ಬ ಆಟದಲ್ಲಿ ಗೆದ್ದಾಗ ತ್ರಿವರ್ಣ ಧ್ವಜ ಹಿಡಿದು ಕುಣಿದು ಕುಪ್ಪಳಿಸುವುದು ಕಾಣುತ್ತೇವೆ. ಯುದ್ಧಕ್ಕೆ ಹೋರಾಟ ಯೋಧನೊಬ್ಬ ಗೆದ್ದರೆ ಧ್ವಜ ಹಿಡಿದು ಬರುವೆ, ಸತ್ತರೆ ತ್ರಿವರ್ಣಧ್ವಜವನ್ನು ಸುತ್ತಿಕೊಂಡು ಬರುವೆ ಎಂದು ಹೇಳಿದ್ದು ಈ ಎಲ್ಲ ಸಂಕೇತಗಳ ಕುರಿತು ನಮಗಿರುವ ಹೆಮ್ಮೆ ಅಭಿಮಾನದ ಪ್ರತೀಕ. ರಾಷ್ಟ್ರಧ್ವಜವೆಂದರೆ ಕೇವಲ ಅದು ಬಟ್ಟೆಯಲ್ಲ. ಅದು ನಮ್ಮ ಹೆಮ್ಮೆ, ದೇಶದ ಕುರಿತ ಪ್ರೀತಿಯ ಸಂಕೇತ, ಅದು ನಮ್ಮ ಆತ್ಮಾಭಿಮಾನದ ಸಂಕೇತ. ರಾಷ್ಟ್ರಧ್ವಜದ ಪೂಜ್ಯತೆ ಹಾಗೂ ಗೌರವದ ರಕ್ಷಣೆಗಾಗಿ ೧೭ ರ ತರುಣಿ ಕನಕಲತಾರಿಂದ ಹಿಡಿದು ೭೩ ರ ವೃದ್ಧೆ ಮಾತಂಗಿನಿ ಹಜ್ರಾರವರೆಗೆ ಸ್ವಾತಂತ್ರ್ಯ ಸಮರದ ಉದ್ದಕ್ಕೂ ಸಾವಿರಾರು ಮಂದಿ ಬಲಿದಾನ ಮಾಡಿದ್ದಾರೆ. ಮತ್ತಷ್ಟು ಓದು
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 29:
ವಾಂಚಿನಾಥನ್ ಅಯ್ಯರ್
– ರಾಮಚಂದ್ರ ಹೆಗಡೆ
ತಮಿಳುನಾಡಿನ ರಾಷ್ಟ್ರಭಕ್ತ ಕ್ರಾಂತಿಕಾರಿ, ಬ್ರಿಟಿಷ್ ಸಾಮ್ರಾಜ್ಯಕ್ಕೆ ಸೆಡ್ಡು ಹೊಡೆದು ಪ್ರಾಣಾರ್ಪಣೆ ಮಾಡಿದ ಹುತಾತ್ಮ ವಾಂಚಿನಾಥನ್ ಅಯ್ಯರ್. ಜನರಿಂದ ‘ವಂಚಿ’ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಈ ೨೫ ರ ದೇಶಭಕ್ತ ತರುಣ ತಿರುನಲ್ವೇಲಿಯ ಕಲೆಕ್ಟರ್ ರಾಬರ್ಟ್ ಆಶ್ ನನ್ನು ಹಾಡಹಗಲೇ ಗುಂಡಿಕ್ಕಿ ತಾನೂ ಆತ್ಮಾರ್ಪಣೆ ಮಾಡಿದ. ತಿರುನಲ್ವೇಲಿ ಜಿಲ್ಲೆಯ ಸೆಂಗೊತ್ತೈ ಎಂಬ ಊರಿನಲ್ಲಿ ಜನಿಸಿದ ವಾಂಚಿನಾಥನ್ ಪ್ರಾಥಮಿಕ ಶಿಕ್ಷಣವನ್ನು ತನ್ನೂರಿನಲ್ಲೇ ಮುಗಿಸಿ, ಎಂ.ಎ ಪದವಿಯನ್ನು ತಿರುವನಂತಪುರದ ಕಾಲೇಜಿನಲ್ಲಿ ಪಡೆದಿದ್ದ. ಕಾಲೇಜಿನಲ್ಲಿ ಓದುವಾಗಲೇ ಮದುವೆಯೂ ಆಗಿತ್ತು. ಸರ್ಕಾರಿ ಹುದ್ದೆಯಲ್ಲಿ ನೌಕರಿ ಮಾಡುತ್ತಿದ್ದ. ಅದೇ ಹೊತ್ತಿಗೆ ತಮಿಳುನಾಡಿನಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ಜೋರಾಗಿತ್ತು. ಸ್ವದೇಶೀ ನೇವಿಗೇಷನ್ ಕಂಪನಿ ಹುಟ್ಟುಹಾಕಿ ಬ್ರಿಟಿಷರಿಗೆ ಸೆಡ್ಡು ಹೊಡೆದ ರಾಷ್ಟ್ರಭಕ್ತ ಚಿದಂಬರಂ ಪಿಳ್ಳೈ ಹಾಗೂ ‘ಭಾರತಮಾತಾ ಅಸೋಸಿಯೇಷನ್’ ಕಟ್ಟಿ ಕ್ರಾಂತಿಕಾರಿಗಳನ್ನು ತಯಾರು ಮಾಡುತ್ತಿದ್ದ ನೀಲಕಂಠ ಬ್ರಹ್ಮಚಾರಿ ಅವರ ಹೋರಾಟಗಳಿಂದ ವಾಂಚಿ ಸ್ವಾತಂತ್ರ್ಯ ಸಮರದೆಡೆಗೆ ಆಕರ್ಷಿತನಾದ. ದಕ್ಷಿಣ ಭಾರತದ ಕೆಲವೇ ಕೆಲವು ಕ್ರಾಂತಿಕಾರಿ ಸಂಘಟನೆಗಳಲ್ಲಿ ಒಂದಾದ, ನೀಲಕಂಠನಿಂದ ಬ್ರಹ್ಮಚಾರಿಯವರ ‘ಭಾರತಮಾತಾ ಅಸೋಸಿಯೇಷನ್’ ಸಶಸ್ತ್ರ ಕ್ರಾಂತಿಗಾಗಿ ಯುವಕರನ್ನು ತರಬೇತಿಗೊಳಿಸುತ್ತಿತ್ತು. ಮತ್ತಷ್ಟು ಓದು
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 28:
ಮೆಣಸಿನಹಾಳ ತಿಮ್ಮನಗೌಡ
– ರಾಮಚಂದ್ರ ಹೆಗಡೆ
ಶ್ರೀಮಂತ ಕುಟುಂಬದಲ್ಲಿ ಜನಿಸಿದರೂ ಬ್ರಿಟಿಷರ ವಿರುದ್ಧ ಕ್ರಾಂತಿ ಕಹಳೆ ಮೊಳಗಿಸಿ ಹುತಾತ್ಮನಾದ ವೀರ ಕನ್ನಡಿಗ ಮೆಣಸಿನಹಾಳ ತಿಮ್ಮನಗೌಡರು. ಇಂದಿನ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಮೆಣಸಿನಹಾಳದಲ್ಲಿ ಶ್ರೀಮಂತ ಪಾಟೀಲ ಕುಟುಂಬದಲ್ಲಿ ಜನಿಸಿದ ತಿಮ್ಮನಗೌಡ ಬ್ಯಾಡಗಿಗೆ ಸುಭಾಷಚಂದ್ರ ಬೋಸರು ಬಂದಾಗ ಸ್ವಾತಂತ್ರ್ಯ ಹೋರಾಟದ ಕುರಿತ ಅವರ ಭಾಷಣ ಕೇಳಿ ರೋಮಾಂಚಿತರಾಗಿ ತ್ಯಾಗ ಮತ್ತು ಬಲಿದಾನದ ದೀಕ್ಷೆ ತೊಟ್ಟು ತನ್ನ 21ರ ವಯಸ್ಸಿನಲ್ಲೇ ಕಾನೂನು ಭಂಗ ಚಳುವಳಿಗೆ ಧುಮುಕಿದರು. ಆ ಹೊತ್ತಿಗೆ ಬ್ರಿಟಿಷರ ದರ್ಪ ದೌರ್ಜನ್ಯಗಳು ಮಿತಿಮೀರಿದ್ದವು. ಸಾಮಾನ್ಯ ಬಡ ರೈತರನ್ನು ದುಪ್ಪಟ್ಟು ಕಂದಾಯ ಹಾಕಿ ಶೋಷಿಸಲಾಗುತ್ತಿತ್ತು. ಅದನ್ನು ಪ್ರತಿಭಟಿಸಿ ಶೋಷಣೆಯ ವಿರುದ್ಧ ದನಿಯೆತ್ತಿದ ತಿಮ್ಮನಗೌಡರನ್ನು ಬ್ರಿಟಿಷರು ಇನ್ನೂ ಅನೇಕ ಹೋರಾಟಗಾರರೊಂದಿಗೆ ಬಂಧಿಸಿ ಎರಡು ವರ್ಷಕಾಲ ಯರವಾಡ ಜೈಲಿನಲ್ಲಿ ಸೆರೆಯಲ್ಲಿಟ್ಟರು. ಅಲ್ಲಿ ತಿಮ್ಮನಗೌಡರು ಚರಖಾದಿಂದ ನೂಲು ತೆಗೆಯುವುದನ್ನು ಕಲಿತರು. ಜೈಲಿನಿಂದ ಬಿಡುಗಡೆಗೊಂಡ ತಿಮ್ಮನಗೌಡರಿಗೆ ಅವರ ಊರಿನಲ್ಲಿ ಭವ್ಯ ಸ್ವಾಗತ ದೊರೆಯಿತು. ಜೈಲಿನಿಂದ ಬಂದ ಮೇಲೆ ಮತ್ತೆ ತಿಮ್ಮನಗೌಡರು ತಮ್ಮ ಕ್ರಾಂತಿ ಚಟುವಟಿಕೆಗಳನ್ನು ಮುಂದುವರೆಸಿದರು. ಬ್ರಿಟಿಷ್ ದೌರ್ಜನ್ಯದ ವಿರುದ್ಧ ತರುಣರ ಗುಂಪು ಕಟ್ಟಿಕೊಂಡು ಊರೂರು ತಿರುಗಿ ಭಾಷಣ ಮಾಡುತ್ತಾ ಜನರಲ್ಲಿ ಜಾಗೃತಿ ಮೂಡಿಸುತ್ತಾ ಜನರನ್ನು ಬಡಿದೆಬ್ಬಿಸತೊಡಗಿದರು. ಮತ್ತಷ್ಟು ಓದು
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 27:
‘ಮಾಸ್ಟರ್ ದಾ’ ಸೂರ್ಯ ಸೇನ್
– ರಾಮಚಂದ್ರ ಹೆಗಡೆ
ಬಂಗಾಳದ ಮತ್ತೊಬ್ಬ ಕ್ರಾಂತಿಕಿಡಿ, ಬ್ರಿಟಿಷರ ಎದೆ ನಡುಗಿಸಿದ ‘ಚಿತ್ತಗಾಂಗ್ ಶಸ್ತ್ರಾಗಾರ ದಾಳಿ’ ಯ ರೂವಾರಿ ಸೂರ್ಯ ಸೇನ್. ಜನರು, ಕ್ರಾಂತಿಕಾರಿ ಸಹವರ್ತಿಗಳು ಪ್ರೀತಿಯಿಂದ ಕರೆಯುತ್ತಿದ್ದ ಹೆಸರು ಮಾಸ್ಟರ್ ದಾ. ಪ್ರಸ್ತುತ ಬಾಂಗ್ಲಾದೇಶದಲ್ಲಿರುವ ಚಿತ್ತಗಾಂಗ್ ನ ಸುತ್ತಮುತ್ತಲಿನ ಪ್ರದೇಶದಲ್ಲಿ ಬ್ರಿಟಿಷರ ವಿರುದ್ಧ ದೊಡ್ಡಮಟ್ಟದ ಹೋರಾಟವನ್ನು ರೂಪಿಸುವಲ್ಲಿ ಸೂರ್ಯ ಸೇನ್ ರ ಪಾತ್ರ ಪ್ರಮುಖವಾದದ್ದು. ಬಿಎ ವಿದ್ಯಾರ್ಥಿಯಾಗಿದ್ದಾಗ ಭಾರತ ಸ್ವಾತಂತ್ರ್ಯ ಸಮರದ ಕುರಿತು ಅರಿತ ಸೇನ್, ಕ್ರಾಂತಿಕಾರಿ ಸಂಘಟನೆ ಅನುಶೀಲನ ಸಮಿತಿಯೆಡೆಗೆ ಆಕರ್ಷಿತರಾದರು. ೧೯೧೮ ರಲ್ಲಿ ಚಿತ್ತಗಾಂಗ್ ನಲ್ಲಿ ಶಿಕ್ಷಕನಾಗಿ ವೃತ್ತಿ ಆರಂಭಿಸಿದ ಸೇನ್ ಆರಂಭದಲ್ಲಿ ಗಾಂಧೀಜಿಯವರ ಅಸಹಕಾರ ಚಳುವಳಿಯ ಭಾಗವಾಗಿದ್ದರು. ಆದರೆ ಅದು ಮಧ್ಯದಲ್ಲೇ ಸ್ಥಗಿತವಾದಾಗ ಬೇಸರಗೊಂಡ ಸೇನ್ ಭಾರತದ ಸ್ವಾತಂತ್ರ್ಯಕ್ಕೆ ಕ್ರಾಂತಿಮಾರ್ಗವೇ ಸರಿ ಎಂದು ನಿಶ್ಚಯಿಸಿದರು. ಕ್ರಾಂತಿಕಾರಿ ಸಂಘಟನೆ ಯುಗಾಂತರದ ಕಾರ್ಯಕರ್ತನಾಗಿ ಕ್ರಾಂತಿಕಾರ್ಯದಲ್ಲಿ ತೊಡಗಿಸಿಕೊಂಡ ಅವರು ಚಿತ್ತಗಾಂಗ್ ಜಿಲ್ಲೆಯಾದ್ಯಂತ ಕ್ರಾಂತಿ ಚಟುವಟಿಕೆ ಪಸರಿಸುವಲ್ಲಿ ಹಾಗೂ ಕ್ರಾಂತಿಕಾರಿಗಳ ಬಹುದೊಡ್ಡ ಯುವಪಡೆಯನ್ನು ಕಟ್ಟುವಲ್ಲಿ ಅವಿರತವಾಗಿ ದುಡಿದರು. ಮತ್ತಷ್ಟು ಓದು
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 26:
ಸರ್ದಾರ್ ಅಜಿತ್ ಸಿಂಗ್
– ರಾಮಚಂದ್ರ ಹೆಗಡೆ
ಪಂಜಾಬ್ ಪ್ರಾಂತ್ಯದಲ್ಲಿ ಬ್ರಿಟಿಷ್ ಸರ್ಕಾರದ ದೌರ್ಜನ್ಯದ ವಿರುದ್ಧ ದನಿಯೆತ್ತಿದ, ಜನರನ್ನು ಸಂಘಟಿಸಿದ ಅಗ್ರಶ್ರೇಣಿಯ ಕ್ರಾಂತಿಕಾರಿ ಸರ್ದಾರ್ ಅಜಿತ್ ಸಿಂಗ್. ಇವರು ಕ್ರಾಂತಿಸಿಂಹ ಸರ್ದಾರ್ ಭಗತ್ ಸಿಂಗ್ ರ ಚಿಕ್ಕಪ್ಪ. 1947 ರ ಆಗಸ್ಟ್ 15 ರಂದು ಭಾರತ ಸ್ವತಂತ್ರವಾದಾಗ ‘ಥ್ಯಾಂಕ್ ಗಾಡ್, ನಮ್ಮ ಕೆಲಸ, ಹೋರಾಟ ಯಶಸ್ವಿಯಾಯಿತು’ ಎಂದು ಖುಷಿಯಿಂದ, ಸಂಭ್ರಮದಿಂದ ಆ ಕ್ಷಣಗಳನ್ನು ಕಂಡು ಅಂದೇ ‘ಧನ್ಯತೆಯ ಸಾವು’ ಕಂಡವರು ಅಜಿತ್ ಸಿಂಗರು. ಸ್ವತಂತ್ರ ಭಾರತದ ಕನಸು ಕಂಡು ಅದಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿ ಆ ಕನಸು ನನಸಾಗುವ ಮುನ್ನವೇ ಮರೆಯಾದವರು ಕೋಟ್ಯಾಂತರ ಮಂದಿ. ಹಾಗೆ ಕನಸು ನನಸಾದ ಕ್ಷಣವನ್ನು ಕಣ್ತುಂಬಿಕೊಳ್ಳುವ ಭಾಗ್ಯ ಅನೇಕರಿಗೆ ಸಿಗಲೇ ಇಲ್ಲ. ಸರ್ದಾರ್ ಅಜಿತ್ ಸಿಂಗರು ಆ ವಿಷಯದಲ್ಲಿ ಅದೃಷ್ಟವಂತರು. ಹಾಗಾಗಿ ಅವರದು ಧನ್ಯತೆಯ ಸಾವು. ಮತ್ತಷ್ಟು ಓದು
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 25:
ಪ್ರೀತಿಲತಾ ವಡ್ಡೆದಾರ್
– ರಾಮಚಂದ್ರ ಹೆಗಡೆ
ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಸಿಡಿದೆದ್ದು ಕ್ರಾಂತಿ ಚಟುವಟಿಕೆ ನಡೆಸಿ ಆತ್ಮಾರ್ಪಣೆಗೈದ ಬಂಗಾಳದ ಮೊದಲ ಮಹಿಳಾ ಬಲಿದಾನಿ ಪ್ರೀತಿಲತಾ ವಡ್ಡೆದಾರ್. ಚಿತ್ತಗಾಂಗ್ ನ ಪಹರ್ತಳಿಯ ಯೂರೋಪಿಯನ್ ಕ್ಲಬ್ ನಲ್ಲಿ ಹಾಕಲಾಗಿದ್ದ ‘ನಾಯಿಗಳಿಗೆ ಮತ್ತು ಭಾರತೀಯರಿಗೆ ಇಲ್ಲಿ ಪ್ರವೇಶವಿಲ್ಲ’ ಎಂಬ ಅವಮಾನಕರ ಬೋರ್ಡ್ ಕಂಡು ಸಿಡಿದುಬಿದ್ದ ಈ ಬೆಂಕಿಚೆಂಡಿನಂತ ಹೆಣ್ಣುಮಗಳು ಕ್ರಾಂತಿಕಾರಿಗಳ ದಂಡಿನೊಂದಿಗೆ ಕ್ಲಬ್ ಗೆ ನುಗ್ಗಿ ಬ್ರಿಟಿಷರ ಎದೆನಡುಗಿಸಿ ಪ್ರತ್ಯುತ್ತರ ನೀಡಿದವಳು. ಪ್ರಸ್ತುತ ಬಾಂಗ್ಲಾದೇಶ ದಲ್ಲಿರುವ ಚಿತ್ತಗಾಂಗ್ ನಲ್ಲಿ ಹುಟ್ಟಿದ ಪ್ರೀತಿಲತಾ ಎಳವೆಯಿಂದಲೇ ದೇಶಭಕ್ತರ ಕುರಿತು ಕೇಳುತ್ತಾ ಬೆಳೆದವಳು. ಝಾನ್ಸಿ ರಾಣಿ ಲಕ್ಷ್ಮಿಬಾಯಿಯ ಕುರಿತು ಓದುತ್ತಾ ಅವಳ ಜೀವನ ಮತ್ತು ಹೋರಾಟದಿಂದ ಪ್ರಭಾವಿತಳಾದ ಪ್ರೀತಿಲತಾ ತಾನೂ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸಿಕೊಂಡು ಬ್ರಿಟಿಷರನ್ನು ಭಾರತದಿಂದ ಓಡಿಸುವ ಕನಸು ಕಂಡಿದ್ದಳು. ಪ್ರೀತಿಲತಾ ತತ್ತ್ವಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿ ಪಡೆದರೂ ಕಲ್ಕತ್ತಾ ವಿಶ್ವವಿದ್ಯಾಲಯದ ಬ್ರಿಟಿಷ್ ಆಡಳಿತ ಅವಳ ಪದವಿಯನ್ನು ತಡೆಹಿಡಿಯಿತು. ಮತ್ತಷ್ಟು ಓದು
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 24:
ವಿದುರಾಶ್ವತ್ಥದ ಬಲಿದಾನಿಗಳು
– ರಾಮಚಂದ್ರ ಹೆಗಡೆ
ಸ್ವಾತಂತ್ರ್ಯ ಸಮರದಲ್ಲಿ ಕರ್ನಾಟಕದಲ್ಲಿ ನಡೆದ ಅತೀ ಭೀಕರ ಹತ್ಯಾಕಾಂಡಗಳಲ್ಲಿ ಒಂದಾದ ‘ವಿದುರಾಶ್ವತ್ಥದ ಬಲಿದಾನ’ ಕರ್ನಾಟಕದ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಎಂದೂ ಹೆಸರಾಗಿದೆ. ಒಬ್ಬ ಗರ್ಭಿಣಿಯೂ ಸೇರಿದಂತೆ 32 ಜನ ದೇಶಭಕ್ತರು ಬ್ರಿಟಿಷರ ಗುಂಡಿಗೆ ಬಲಿಯಾಗಿ ಪ್ರಾಣಾರ್ಪಣೆ ಮಾಡಿದ್ದು, ಈ ನೆಲದ ಜನರ ಅಪ್ರತಿಮ ದೇಶಭಕ್ತಿಗೆ ಹಾಗೂ ಬ್ರಿಟಿಷ್ ಆಡಳಿತದ ಬರ್ಬರತೆಗೆ ಸಾಕ್ಷಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕ್ಷೇತ್ರ ‘ವಿದುರಾಶ್ವತ್ಥ’ ದೇಶದ ಸ್ವಾತಂತ್ರ್ಯ ಹೋರಾಟಗಾರರ ಚಳುವಳಿಯ ಕೇಂದ್ರವಾಗಿತ್ತೆಂಬುದು ಗಮನಾರ್ಹ ಸಂಗತಿ. ಮಹಾಭಾರತ ಕಾಲದಲ್ಲಿ ವಿದುರ ನೆಟ್ಟಿದ್ದನೆಂದು ನಂಬಲಾಗುವ ಅಶ್ವತ್ಥ ವೃಕ್ಷ ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಬ್ರಿಟಿಷರ ಪೈಶಾಚಿಕ ದೌರ್ಜನ್ಯಕ್ಕೂ ಸಾಕ್ಷಿಯಾಗಿದ್ದು ದುರಂತದ ಸಂಗತಿ. ಮತ್ತಷ್ಟು ಓದು
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 23:
ಮದನ್ ಲಾಲ್ ಧಿಂಗ್ರಾ
– ರಾಮಚಂದ್ರ ಹೆಗಡೆ
ಪರದೇಶಿ ಬ್ರಿಟಿಷರು ಭಾರತದ ನೆಲಕ್ಕೆ ಬಂದು ದಬ್ಬಾಳಿಕೆ ನಡೆಸುತ್ತಿದ್ದ ಕಾಲದಲ್ಲಿ ಅವರ ನೆಲಕ್ಕೇ ಹೋಗಿ ಇಂಗ್ಲೆಂಡಿನಲ್ಲೇ ಕ್ರಾಂತಿ ಚಟುವಟಿಕೆ ನಡೆಸಿ ಬ್ರಿಟಿಷರನ್ನೇ ಬೆಚ್ಚಿಬೀಳಿಸಿದ, ವಿದೇಶಿ ನೆಲದಲ್ಲಿ ಭಾರತಕ್ಕಾಗಿ ಮೊದಲ ಬಲಿದಾನ ಮಾಡಿದ ಕೆಚ್ಚೆದೆಯ ವೀರ ಮದನ್ ಲಾಲ್ ಧಿಂಗ್ರಾ. ಪಂಜಾಬಿನ ಅಮೃತಸರದ ಶ್ರೀಮಂತ ಕುಟುಂಬದ ಮದನ್ ಲಾಲ್ ಇಂಜಿನೀಯರಿಂಗ್ ಓದಲಿಕ್ಕೆಂದು ಲಂಡನ್ ಗೆ ಹೋಗಿದ್ದವನು. ಸ್ವಭಾವತಃ ಶೋಕಿಲಾಲ. ಮನೆಯವರೆಲ್ಲ ಬ್ರಿಟಿಷರ ಪರಮ ಭಕ್ತರು. ಇಂಗ್ಲೆಂಡ್ ನ ವಿಲಾಸೀ ಸಂಸ್ಕೃತಿಗೆ ಮಾರುಹೋದ ಮದನ್ ಬೆಲೆಬಾಳುವ ಸೂಟು ಬೂಟುಗಳನ್ನು ಹಾಕಿಕೊಂಡು ಶೋಕಿಲಾಲನಾಗಿ ಇಂಗ್ಲೆಂಡಿನ ರಸ್ತೆಗಳಲ್ಲಿ ಹಾಡುತ್ತಾ, ಕುಣಿಯುತ್ತಾ ಯುವತಿಯರೊಂದಿಗೆ ಚಕ್ಕಂದವಾಡುತ್ತ ಕಾಲಕಳೆಯುತೊಡಗಿದ್ದ. ಮತ್ತಷ್ಟು ಓದು
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 22
ಚಿದಂಬರಂ ಪಿಳ್ಳೈ
– ರಾಮಚಂದ್ರ ಹೆಗಡೆ
ಭಾರತ-ಶ್ರೀಲಂಕಾ ನಡುವಿನ ಸಮುದ್ರದಲ್ಲಿ ನೌಕಾಯಾನದ ಹೆಸರಿನಲ್ಲಿ ಜನರ ಸುಲಿಗೆ ಮಾಡುತ್ತಿದ್ದ ಬ್ರಿಟಿಷರ ಆಟಾಟೋಪಕ್ಕೆ ಉತ್ತರವಾಗಿ ‘ಸ್ವದೇಶಿ ನ್ಯಾವಿಗೇಷನ್ ಕಂಪೆನಿ’ ಹುಟ್ಟುಹಾಕಿದ ಧೀರ ಸಾಹಸಿ ತಮಿಳುನಾಡಿನ ಚಿದಂಬರಂ ಪಿಳ್ಳೈ. ತಮ್ಮದೇ ಆದ ಸಂಪೂರ್ಣ ಸ್ವದೇಶಿ ನೌಕಾಯಾನ ಸಂಸ್ಥೆಯನ್ನು 1906 ರ ಸಮಯದಲ್ಲೇ ಹುಟ್ಟುಹಾಕಿ ಈಸ್ಟ್ ಇಂಡಿಯಾ ಕಂಪನಿಯೇ ಪತರಗುಟ್ಟುವಂತೆ ಮಾಡಿದ, ಭಾರತೀಯರ ಪ್ರತಿರೋಧ ಕೇವಲ ಯುದ್ಧ ಬಲಿದಾನಗಳಲ್ಲಷ್ಟೇ ಅಲ್ಲ ಎಂದು ನಿರೂಪಿಸಿದ ಅಪ್ರತಿಮ ದೇಶಭಕ್ತ ಪಿಳ್ಳೈ. ಆಗಿನ ಕಾಲದಲ್ಲಿ ತಮಿಳುನಾಡಿನಲ್ಲಿ ಸ್ವರಾಜ್ಯ ಎಂಬ ಶಬ್ದವನ್ನು ಉಚ್ಚಾರ ಮಾಡಲೂ ಜನರು ಹೆದರುತ್ತಿದ್ದರು. ‘ಸ್ವಾತಂತ್ಯ್ರ’ ಎಂದು ಅಪ್ಪಿ ತಪ್ಪಿ ಹೇಳಿದರೆ ಅದು ರಾಜದ್ರೋಹವಾಗುತ್ತದೆ ಎಂದು ಜನರಿಗೆ ಅಂಜಿಕೆ. ಅಂಥ ಒಂದು ಕಾಲದಲ್ಲಿ ಚಿದಂಬರಂ ಪಿಳ್ಳೈಯವರು ತಮಿಳುನಾಡಿನಲ್ಲಿ ‘ವಂದೇ ಮಾತರಂ’ ಎಂದು ಘೋಷಣೆ ಕೂಗಿದರು. ಬ್ರಿಟಿಷರ ಚಕ್ರಾಧಿಪತ್ಯದ ವಿರುದ್ಧ ಜನರನ್ನು ಎತ್ತಿಕಟ್ಟಿದರು. ಸಹಸ್ರಾರು ಸ್ವಾತಂತ್ಯ್ರ ವೀರರನ್ನು ಹುರಿಗೊಳಿಸಿದ ಚಿದಂಬರಂ ಪಿಳ್ಳೈಯವರು ರಾಜದ್ರೋಹದ ಆಪಾದನೆ ಹೊತ್ತು ಆರು ವರ್ಷಗಳ ಕಾಲ ಸೆರೆಮನೆಯಲ್ಲಿ ಕಷ್ಟಪಟ್ಟರು. ಮತ್ತಷ್ಟು ಓದು
ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 21:
ಲಾಲಾ ಹರದಯಾಳ್
– ರಾಮಚಂದ್ರ ಹೆಗಡೆ
‘ಬೇಕಾಗಿದ್ದಾರೆ – ಭಾರತದಲ್ಲಿ ಬಂಡಾಯವೆಬ್ಬಿಸಲು ಸೈನಿಕರು.
ವೇತನ – ಸಾವು
ಬಹುಮಾನ – ಹುತಾತ್ಮತೆ
ಪೆನ್ಷನ್ – ಸ್ವಾತಂತ್ರ್ಯ
ಯುದ್ಧ ಕ್ಷೇತ್ರ – ಭಾರತ’
ಹೀಗೆ ದಪ್ಪ ದಪ್ಪ ಅಕ್ಷರಗಳಲ್ಲಿ ಈ ಜಾಹೀರಾತು, 1914ರ ಸೆಪ್ಟೆಂಬರ್ ತಿಂಗಳಲ್ಲಿ ಹೊರಬಿದ್ದ “ಗದರ್” ಪತ್ರಿಕೆಯ ಮುಖಪುಟದಲ್ಲಿ ಅಚ್ಚಾಗಿತ್ತು. ಗದರ್ (ಬಂಡಾಯ) ಪಕ್ಷ, ಗದರ್ ಪತ್ರಿಕೆ – ಮೊದಲನೆಯ ಮಹಾಯುದ್ಧ ಆರಂಭವಾಗುವುದಕ್ಕೆ ಸ್ವಲ್ಪ ಮುಂಚೆ ಸ್ಥಾಪಿತವಾಗಿ, ಸಶಸ್ತ್ರ ಬಂಡಾಯವೆಬ್ಬಿಸಿ ಭಾರತವನ್ನು ಸ್ವತಂತ್ರಗೊಳಿಸಲು ಮಹಾನ್ ಪ್ರಯತ್ನ ನಡೆಸಿದವು. ಈ ಕ್ರಾಂತಿಯ ಉರಿಯೆಬ್ಬಿಸಿದ ಸಾಹಸಿ ಲಾಲಾ ಹರದಯಾಳ್. ವಿದೇಶದಲ್ಲಿರುವ ಭಾರತೀಯರನ್ನು ಸಂಘಟಿಸಿ ಅವರಲ್ಲಿ ತಾಯ್ನಾಡಿನ ಸ್ವಾತಂತ್ರ್ಯ ಭಾವನೆ ಅರಳಿಸಿ ಅವರೆಲ್ಲರೂ ಸ್ವದೇಶಕ್ಕೆ ತೆರಳಿ ದಂಗೆಯೇಳುವಂತೆ ಮಾಡಬೇಕು ಎಂಬುದು ಲಾಲನ ಅಪೇಕ್ಷೆಯಾಗಿತ್ತು. 1884 ರಲ್ಲಿ ಜನಿಸಿದ ಹರದಯಾಳ್ ಚಿಕ್ಕಂದಿನಲ್ಲೇ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಬಗ್ಗೆ ತಮ್ಮ ತಂದೆ ತಾಯಿಯಿಂದ ಕೇಳಿ ತಿಳಿದಿದ್ದರು. ಬ್ರಿಟಿಷ್ ಸರ್ಕಾರದಿಂದಲೇ ವಿದ್ಯಾರ್ಥಿ ವೇತನ ಪಡೆದು ಉನ್ನತ ವ್ಯಾಸಂಗಕ್ಕಾಗಿ ಆಕ್ಸ್ಫರ್ಡ್ ಗೆ ತೆರಳಿದ ಲಾಲಾ ಅಲ್ಲಿ ಸಾವರ್ಕರ್, ಶ್ಯಾಮಜಿ ಕೃಷ್ಣವರ್ಮ, ಭಾಯಿ ಪರಮಾನಂದರ ಸಂಪರ್ಕಕ್ಕೆ ಬಂದು ಭಾರತ ಭಕ್ತರಾಗಿ ಬದಲಾದರು. ಮತ್ತಷ್ಟು ಓದು