ಇನ್ನೊಂದು ಸಮರಕ್ಕೆ ಸಿದ್ಧರಾಗಿ…
-ಸಂಪತ್ ಕುಮಾರ್
ಅಣ್ಣ ಹಜಾರೆಯವರ ಉಪವಾಸವೇನೋ ಮುಗಿಯಿತು. ರಂಗೋಲೆಯ ಕೆಳಗೆ ನುಸುಳುವ ಬುದ್ಧಿ ಉಳ್ಳ ರಾಜಕಾರಣಿಗಳು ಎಂತಹ ಕಾನೂನು ತಯಾರಿಸುತ್ತರೋ ಕಾದುನೋಡಬೇಕು.
ಈಗಾಗಲೇ ಅಸ್ತಿತ್ವದಲ್ಲಿರುವ ಲೋಕಾಯುಕ್ತದಂತಹ ಸಂಸ್ಥೆಯಿಂದ ಆಗುತ್ತಿರುವ ಭ್ರಷ್ಟಾಚಾರಿಗಳ ಬೇಟೆ ಅವರಿಗೆ ಶಿಕ್ಷೆ ಕೊಡಿಸುವಲ್ಲಿ ವಿಫಲವಾಗಿರುವುದು ಸರ್ವವೇದ್ಯ. ಅಲ್ಲದೆ ಇಂತಹ ವಿಧೇಯಕ ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವುದೂ ಅನುಮಾನ.ಇಂತಹ ಪರಿಸ್ತಿತಿಯಲ್ಲಿ ಇನ್ನೊದು ಹೋರಾಟದ ಅಗತ್ಯ ಇದೆ.
ಭಾರತದ ರಾಜಕಾರಣಿಗಳ ಕೋಟಿ ಕೋಟಿ ಕಪ್ಪು ಹಣ ಸ್ವಿಸ್ ಬ್ಯಾಂಕಿನಲ್ಲಿ ಕೊಳೆಯುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಹಣವನ್ನು ರಾಷ್ಟ್ರೀಯ ಸಂಪತ್ತೆಂದು ಘೋಷಿಸಿದರೆ ಭಾರತ ತನ್ನೆಲ್ಲ ಸಾಲದಿಂದ ಮುಕ್ತವಾಗಿ, ಹಣ ದುಬ್ಬರ, ಬಡತನ, ಮುಂತಾದ ತನ್ನೆಲ್ಲ ಕಷ್ಟ ಕೋಟಲೆಗಳಿಂದ ಹೊರಬರಲು ಸಾಧ್ಯ. ಇದಕ್ಕಾಗಿ ಅಣ್ಣ ಹಜಾರೆ ಅವರನ್ನು ಈ ಉದ್ದೇಶಕ್ಕಾಗಿ ಪುನಃ ಉಪವಾಸ ಕೂರಲು ಹೇಳುವುದು ಸ್ವಾರ್ಥ ಎನಿಸಬಹುದು. ಈ ವಿಚಾರವನ್ನೇ ತನ್ನ ಚುನಾವಣ ಪ್ರಾಣಾಳಿಕೆ ಮಾಡಿಕೊಂಡಿರುವ ಭಾ.ಜ.ಪ. ದಿಂದ ಇದನ್ನು ರಾಜಕೀಯಗೊಳಿಸಬಾರದು.
ಮತ್ತಷ್ಟು ಓದು 
ಈ ಹೋರಾಟ ಗೆಲ್ಲಲೇಬೇಕು…!
– ಬನವಾಸಿ ಬಳಗ
ಕಿಸನ್ ಬಾಬುರಾವ್ ಹಜಾರೆ ಎಂಬ ಹೆಸರಿನ ಆ ಹಿರಿಯರು ಇವತ್ತಿನಿಂದ ಭ್ರಷ್ಟಾಚಾರದ ವಿರುದ್ಧದ ಒಂದು ದೊಡ್ಡ ಹೋರಾಟಕ್ಕೆ ಮುನ್ನುಡಿ ಹಾಡಿದ್ದಾರೆ. ಮಹಾರಾಷ್ಟ್ರದ ಅಹ್ಮದ್ ನಗರ ಜಿಲ್ಲೆಯ ರೆಲೆಗನ್ ಸಿದ್ಧಿ ಎಂಬ ಹಳ್ಳಿಯನ್ನು ಮಾದರಿ ಹಳ್ಳಿಯಾಗಿ ರೂಪಿಸಿ, ತನ್ನಿಡೀ ಬದುಕನ್ನೇ ಸಮಾಜಕ್ಕಾಗಿ ಮೀಸಲಿಟ್ಟ ಈ ಹಿರಿಯರು ದೆಹಲಿಯ ಜಂತರ್ ಮಂತರ್ ಬಳಿ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ.





