ವಿಷಯದ ವಿವರಗಳಿಗೆ ದಾಟಿರಿ

Posts tagged ‘ಅಸಹಿಷ್ಣುತೆ’

19
ಏಪ್ರಿಲ್

ಯುಎಇ ನಿಜಕ್ಕೂ ಅಷ್ಟೊಂದು ಅಸಹಿಷ್ಣು ದೇಶವೇ?

– ರಾಘವೇಂದ್ರ ಎಮ್‌ ಸುಬ್ರಹ್ಮಣ್ಯ

Arab_Gulf_States_englishಕಳೆದೆರಡು ವಾರದಿಂದ ಗಲ್ಫ್ ದೇಶಗಳಲ್ಲಿರುವ ಹಿಂದೂಗಳ ಕೆಲಸಕ್ಕೆ ಕುತ್ತು ತರುವ ವ್ಯವಸ್ಥಿತ ಸಂಚುಗಳು ನಡೆದಿವೆ. ದೆಹಲಿಯ ತಬ್ಲೀಗೀ ಜಮಾತ್’ನವರ ವರ್ತನೆಯನ್ನು ಖಂಡಿಸಿ ಏನನ್ನಾದರೂ ಬರೆದರೆ ಅದೇ ದೊಡ್ಡ ತಪ್ಪು ಎಂಬಂತೆ ಬಿಂಬಿಸಿ, ಪೋಲಿಸರಿಗೆ ದೂರು ನೀಡುವ ಕೆಲಸ ನಡೆದಿದೆ. ಹಾಗಾದರೆ ಯುಎಇಯಲ್ಲಿ ಅಷ್ಟೆಲ್ಲಾ ಸುಲಭಕ್ಕೆ ಯಾರನ್ನಾದರೂ ಅರೆಸ್ಟ್ ಮಾಡಿಸಬಹುದೇ? ಇಸ್ಲಾಂ ಬಗ್ಗೆ ಏನೂ ಕೆಟ್ಟದಾಗಿ ಬರೆಯದೇ, ಭಾರತದ ಕೆಲ ಮುಸ್ಲಿಮರ ತಪ್ಪುಗಳ ಬಗ್ಗೆ ಬರೆದರೆ ಅದು ಶಿಕ್ಷಾರ್ಹ ಅಪರಾಧವೇ?

ಹೆಚ್ಚಿನವರಿಗೆ ಅರಬ್ ರಾಷ್ಟ್ರಗಳೆಂದರೆ ಬಹಳಷ್ಟು ತಪ್ಪು ಅಭಿಪ್ರಾಯಗಳಿವೆ. ತಪ್ಪು ಮಾಡಿದರೆ ಸಾರ್ವಜನಿಕವಾಗಿ ಛಡಿಯೇಟು ಬೀಳುತ್ತದೆ, ಕೈ ಕಾಲು ತಲೆ ಕಡಿಯುತ್ತಾರೆ ಎಂಬೆಲ್ಲಾ ಅನಿಸಿಕೆಗಳಿವೆ. ಆದರೆ ಈ ಎಲ್ಲಾ ಹೆಚ್ಚಿನ ಅಭಿಪ್ರಾಯಗಳು ಬಂದಿರುವುದು ಸೌದಿ ಅರೇಬಿಯಾದಿಂದ. ಯಾಕೆಂದರೆ ಇವೆಲ್ಲಾ ಹೆಚ್ಚಾಗಿ ನಡೆಯುವುದು ಅಲ್ಲಿ ಮಾತ್ರ. ಆದರೆ ಎಲ್ಲಾ ಅರಬ್ ದೇಶಗಳೂ ಹೀಗಿಲ್ಲ. ಇಲ್ಲಿ ಇಸ್ಲಾಂ ನಿಂದನೆಯನ್ನು ಯಾರೂ ಸಹಿಸುವುದಿಲ್ಲವಾದರೂ, ಒಮಾನ್, ಬಹರೈನ್ ಮತ್ತು ಯುಎಇ ದೇಶಗಳು ಸಹಿಷ್ಣುತೆಯಲ್ಲಿ ಹೊಸ ಅಧ್ಯಾಯಗಳನ್ನೇ ಬರೆದಿವೆ. ಮತ್ತಷ್ಟು ಓದು »

30
ಜನ

ಅಬ್ಬಾ..ಈ ದೇಶದಲ್ಲಿ ಅದೆಂತಹ ಅಸಹಿಷ್ಣುತೆ..!

– ವರುಣ್ ಕುಮಾರ್
ಪುತ್ತೂರು

modi-naseer.jpg

  • ಈ ದೇಶದಲ್ಲಿ ಅಸಹಿಷ್ಣುತೆ ತಾಂಡವವಾಡುತ್ತಿದೆಶಾರುಖ್ ಖಾನ್
  • ನನ್ನ ಪತ್ನಿಗೆ ಮತ್ತು ನನಗೆ ಈ ದೇಶದಲ್ಲಿ ಇರಲು ಭಯವಾಗುತ್ತಿದೆ, ಯಾಕೆಂದರೆ ಇಲ್ಲಿ ಅಸಹಿಷ್ಣುತೆ ಇದೆಅಮೀರ್ ಖಾನ್
  • ನನ್ನ ಮೊಮ್ಮಕ್ಕಳಿಗೆ ಈ ದೇಶದಲ್ಲಿರಲು ಭಯವಾಗುತ್ತಿದೆನಾಸೀರುದ್ದಿನ್ ಷಾ

ಹೌದಲ್ಲವೇ, ಇವರು ಹೇಳಿದಂತೆ ಕಳೆದ ನಾಲ್ಕೂವರೆ ವರ್ಷಗಳಿಂದ ಎಷ್ಟೊಂದು ಅಸಹಿಷ್ಣುತೆ ಇದೆಯಲ್ಲವೆ, ಎಲ್ಲ ಕಡೆಗಳಲ್ಲಿ ಗೋವಿನ ಹೆಸರಲ್ಲಿ ಕೊಲೆ,ಸುಲಿಗೆ ಧರ್ಮದ ಹೆಸರಲ್ಲಿ ಗಲಭೆ, ಅಲ್ಪಸಂಖ್ಯಾತರಿಗಂತೂ ಉಸಿರುಗಟ್ಟಿದ ಸ್ಥಿತಿ. ಒಂದೇ ಎರಡೇ, ಇದಕ್ಕೆಲ್ಲ ಯಾರು ಮುಖ್ಯ ಕಾರಣ ಕೇಂದ್ರ ಸರ್ಕಾರ. ಅದರಲ್ಲೂ ಮುಖ್ಯವಾಗಿ ಮೋದಿ. ಈ ಮನುಷ್ಯ ಬಂದ ಮೇಲಂತೂ ಈ ದೇಶದ ಬಗ್ಗೆ ತಾತ್ಸರ ಮೂಡುವಂತೆ ಮಾಡಿದ್ದಾನೆ. ಅಲ್ಲವೇ.. ಅಷ್ಟಕ್ಕೂ‌ ಮೋದಿಯ ಬಗ್ಗೆ ಈ ನಮ್ಮ ದೇಶಭಕ್ತ(?)ರಿಗೆ ಯಾಕೆ ಇಷ್ಟೊಂದು ಕೋಪ ಸ್ವಲ್ಪ‌ ಮೆಲುಕು ಹಾಕೋಣ. ಮತ್ತಷ್ಟು ಓದು »

1
ಏಪ್ರಿಲ್

ಈ ದೇಶದಲ್ಲಿ ಫಾರೂಕ್ ಯಾಕೆ ಹುತಾತ್ಮ ಅನ್ನಿಸಿಕೊಳ್ಳುವುದಿಲ್ಲ..?

– ಅಜಿತ್ ಹನುಮಕ್ಕನವರ್

ಫಸ್ಟ್ ಆಫ್ ಆಲ್, ಈ ಫಾರೂಕ್ ಯಾರು ಅನ್ನೋದನ್ನ ಒಮ್ಮೆ ಹೇಳಿಬಿಡ್ತೀನಿ. ಆತ ಮೂಲತಃ ತಮಿಳುನಾಡಿನ ಕೊಯಮತ್ತೂರು ಕಡೆಯವನು. ವಯಸ್ಸು ಮೂವತ್ತೊಂದು. ಮದುವೆ ಆಗಿ ಎರಡು ಮಕ್ಕಳ ತಂದೆಯೂ ಆಗಿದ್ದ ಕಬ್ಬಿಣದ ವ್ಯಾಪಾರಿ. ಮೊನ್ನೆ ಹದಿನಾರನೇ ತಾರೀಖು ರಾತ್ರಿ, ಏನೋ ಅರ್ಜೆಂಟ್ ಕೆಲಸ ಇದೆ ಆತನನ್ನ ಮನೆಯಿಂದ ಹೊರಗೆ ಕರೆಸಿಕೊಂಡ ನಾಲ್ಕು ಜನ ನಡುರಸ್ತೆಯಲ್ಲಿ ಕತ್ತರಿಸಿ ಕೊಂದುಬಿಟ್ಟರು. ಮತ್ತಷ್ಟು ಓದು »

8
ಮಾರ್ಚ್

ಅಸಹಿಷ್ಣುತೆ, ಅನೈತಿಕತೆ ಮತ್ತು ನಮ್ಮ ಬೌದ್ಧಿಕ ಜಗತ್ತು

– ಎಂ. ಎಸ್. ಚೈತ್ರ
ನಿರ್ದೇಶಕರು, ಆರೋಹಿ ಸಂಶೋಧನಾ ಸಂಸ್ಥೆ.
ಬೆಂಗಳೂರು.

ಧಾರವಾಡದ ಸಾಹಿತ್ಯ ಸಂಭ್ರಮದ ಗೋಷ್ಠಿಯೊಂದರಲ್ಲಿ ಕಲಬುರ್ಗಿಯವರ ಹತ್ಯೆಯನ್ನು ಕುರಿತು ಅಜ್ಜಂಪುರ ಮಂಜುನಾಥ್‍ರವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಗತಿಪರರ ದಾಂಧಲೆಯನ್ನು ಎದುರಿಸಬೇಕಾಯಿತು. ಈ ಕುರಿತು ಪ್ರಜಾವಾಣಿಯಲ್ಲಿ ಪದ್ಮರಾಜ್ ದಂಡಾವತಿಯವರು (ದಿನಾಂಕ 29 ಜನವರಿ 2017), ನಮ್ಮ ಕನ್ನಡದ ಪ್ರಗತಿಪರ ಬುದ್ಧಿಜೀವಿಗಳು, ಕಲ್ಬುರ್ಗಿಯವರ ಹತ್ಯೆ ಬಲಪಂಥೀಯರಿಂದಲೇ ನಡೆದದ್ದು ಎಂಬ ಬಿಂಬವೊಂದನ್ನು ಕಾಯ್ದಿಟ್ಟುಕೊಳ್ಳುವ ಭರದಲ್ಲಿ ಘಟನೆಯೊಂದರ ಸತ್ಯಾಸತ್ಯತೆ ಮತ್ತು ಅದಕ್ಕೆ ಇರಬಹುದಾದ ವಿವಿಧ ಆಯಾಮಗಳನ್ನು ಮಾತನಾಡಲೂ ಅವಕಾಶ ಕೊಡದೆ, ಅಸಹಿಷ್ಣುಗಳಾಗುತ್ತಿದ್ದಾರೆಂದು ಟೀಕಿಸಿದ್ದರು. ಈ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಸಾಮಾಜಿಕ ಜಾಲತಾಣವೊಂದರಲ್ಲಿ (ಮಾಧ್ಯಮನೆಟ್.ಕಾಂ) ರಾಜೇಂದ್ರ ಚೆನ್ನಿಯವರು ದಂಡಾತಿಯವರ ಮೇಲೆ ತೀವ್ರವಾಗಿ ಹರಿಹಾಯ್ದಿದ್ದಾರೆ. ಚೆನ್ನಿಯವರ ಪ್ರತಿಕ್ರಿಯೆಯು ಕನ್ನಡದ ಬೌದ್ಧಿಕ ಜಗತ್ತಿನ ಕುರಿತು ಏನನ್ನು ಹೇಳುತ್ತಿದೆ ಎಂಬುದನ್ನು ಈ ಲೇಖನ ಅರ್ಥೈಸಿಕೊಳ್ಳಲು ಪ್ರಯತ್ನಿಸುತ್ತದೆ. ಮತ್ತಷ್ಟು ಓದು »

15
ಜನ

ವೇಮುಲ ಸಾವಿನ ಬಗ್ಗೆ ಮಾತಾಡಿದವರು ಈಗೆಲ್ಲಿಹರು..?

– ಶಾರದ ಡೈಮಂಡ್

15966189_1689221931091685_622901462958428392_nನೂರಾರು ಕನಸುಗಳನ್ನು ಕಟ್ಟಿಕೊಂಡಿದ್ದ ಮುಗ್ದ ಜೀವಿಯೊಂದು ಕಾಣದ ಕೈಗಳ ಕೈವಾಡಕ್ಕೆ ಬಲಿಯಾಗಿದೆ. ಕಾಂಗ್ರೆಸ್ ಸರಕಾರದ ದುರಾಡಳಿತಕ್ಕೆ ಮತ್ತೊಂದು ಜೀವ ಮಣ್ಣಾಗಿಹೋಯಿತು. ಓದುವುದರಲ್ಲಿ ಬುದ್ಧಿವಂತನಾಗಿದ್ದ, ಸೌಮ್ಯ ಸ್ವಭಾವದವನಾದ ಅಭಿಷೇಕ್ ಮೂರು ಕುಟುಂಬಗಳಿಗೆ ಸ್ವಂತ ಮಗನಂತೆಯೇ ಇದ್ದ. ಸರ್ಕಾರಿ ಕೆಲಸವೊಂದಕ್ಕೆ ಸೇರಿ ತನ್ನನ್ನು ಕಷ್ಟಪಟ್ಟು ಸಾಕುತ್ತಿರುವ ಅಪ್ಪ ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಬೇಕೆಂಬುದೇ ಅವನ ಕನಸಾಗಿತ್ತು. ಶೃಂಗೇರಿಯ ಜೆಸಿಬಿಎಮ್ ಕಾಲೇಜಿನ ಬಿ.ಕಾಂ ಕೊನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಅಭಿಷೇಕ್ ಎಂ.ಕೆ ಎಂಬ ಹುಡುಗ ಪ್ರಸಕ್ತ ವರ್ಷದ ಕಾಲೇಜಿನ ವಾಣಿಜ್ಯ ಸಂಘದ ಅಧ್ಯಕ್ಷ! ಚೆನ್ನಾಗಿ ಓದುತ್ತಿರುವ ಆಲ್ ರೌಂಡರ್ ವಿದ್ಯಾರ್ಥಿಗಳನ್ನು ಕಾಲೇಜಿನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸಂಘಗಳಿಗೆ ಅಧ್ಯಕ್ಷ – ಉಪಾಧ್ಯಕ್ಷರನ್ನಾಗಿ ಕಾಲೇಜಿನವರೇ ನೇಮಿಸುತ್ತಾರೆ. ನೇಮಿಸುವಾಗ ಅವನು ಯಾವ ಸಂಘಟನೆಯವನೆಂದು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಇಂತಹ ಉತ್ತಮ ವಿದ್ಯಾರ್ಥಿಯಾದ ಅಭಿಷೇಕ್ ವಾಣಿಜ್ಯ ಸಂಘವನ್ನು ಹೊರತುಪಡಿಸಿ ತನ್ನನ್ನು ತಾನು ಎಬಿವಿಪಿ ಯಲ್ಲಿ ಗುರುತಿಸಿಕೊಂಡಿದ್ದೇ ಜೀವಕ್ಕೆ ಮುಳ್ಳಾಗುವ ಹಾಗಾಯಿತು. ಜನವರಿ ಏಳರಂದು ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಜಂಟಿಯಾಗಿ ಸೈನಿಕರಿಗೆ ಗೌರವ ಸಲ್ಲಿಸುವ “ಯೋಧನಮನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಮತ್ತಷ್ಟು ಓದು »

12
ಜನ

ಕಲಬುರ್ಗಿಯವರ ಸಾವಿನಲ್ಲೂ ಸಾಹಿತಿಗಳು ಲಾಭ ಹುಡುಕಿದರಾ ?

– ಪ್ರವೀಣ್ ಕುಮಾರ್, ಮಾವಿನಕಾಡು

baraguruಇತ್ತೀಚಿಗೆ ಒಂದು ದಿನ ಬೆಳಿಗ್ಗೆ ರೈಲಿನಲ್ಲಿ ಪ್ರಯಾಣ ಹೊರಟಿದ್ದೆ. ಎಂದಿನಂತೆ 2-3 ದಿನಪತ್ರಿಕೆಗಳನ್ನು ಕೊಂಡು ರೈಲು ಹತ್ತಿ ಕುಳಿತೆ. ರೈಲು ಹೊರಟ ನಂತರ ಒಂದು ದಿನಪತ್ರಿಕೆಯನ್ನು ತೆಗೆದು ಓದಲು ಶುರು ಮಾಡಿದೆ. ಪಕ್ಕದಲ್ಲಿ ಕುಳಿತಿದ್ದ ಹಿರಿಯರೊಬ್ಬರು ನಾನು ಓದುತ್ತಿದ್ದ ಪತ್ರಿಕೆಯ ಕಡೆ ಇಣುಕಿ ಇಣುಕಿ ನೋಡತೊಡಗಿದರು. ಸಣ್ಣದೊಂದು ಮುಗುಳ್ನಗೆಯೊಂದಿಗೆ ನನ್ನಲ್ಲಿದ್ದ ಇನ್ನೊಂದು ದಿನಪತ್ರಿಕೆಯನ್ನು ಅವರಿಗೆ ನೀಡಿ ಓದು ಮುಂದುವರಿಸಿದೆ. ಕೆಲವು ನಿಮಿಷಗಳ ನಂತರ ಆ ಹಿರಿಯರು “ಛೆ, ಕಲಬುರ್ಗಿಯವರ ಸಾವಿನಲ್ಲೂ ಸಾಹಿತಿಗಳು ಲಾಭ ಮಾಡ್ಕೋಳೋಕೆ ಹೋದ್ರು” ಅಂತ ಒಂದು ಉದ್ಘಾರ ತೆಗೆದರು. ಮತ್ತಷ್ಟು ಓದು »

28
ಆಕ್ಟೋ

ದಲಿತರ ಹೆಗಲ ಮೇಲೆ ಬಂದೂಕಿಟ್ಟಿರುವ ಕೈಗಳು ಯಾರದ್ದು?

ರಾಕೇಶ್ ಶೆಟ್ಟಿ

udupi‘ಅಧಿಕಾರದಲ್ಲಿರುವ ಕಾಂಗ್ರೆಸ್ಸಿಗಿಂತಲೂ, ಅಧಿಕಾರದಲ್ಲಿರದ ಕಾಂಗ್ರೆಸ್ಸ್ ದೇಶಕ್ಕೆ ಅಪಾಯಕಾರಿ’ ಅಂತ ಗೆಳೆಯನೊಬ್ಬ ಆಗಾಗ್ಗೆ ಹೇಳ್ತಾ ಇರ್ತಾನೆ. 2014ರ ಮೇ 16 ರಂದು ಬಿಜೆಪಿ ಅಧಿಕಾರ ಹಿಡಿದ ದಿನದಿಂದ ಇವತ್ತಿನವರೆಗೂ ಕಾಂಗ್ರೆಸ್ಸ್ ಪಕ್ಷದವರ ಆರ್ಭಟಗಳನ್ನು ನೋಡಿದರೇ, ಗೆಳೆಯನ ಮಾತು ನಿಜವೆನಿಸುತ್ತದೆ. 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಈ ಹಿಂದಿನ ಯಾವುದೇ ಚುನಾವಣೆಗಳಂತಿರಲಿಲ್ಲ. ಕಾಂಗ್ರೆಸ್ ಎಂಬ ಪುರಾತನ ಪಕ್ಷ ಮಕಾಡೆ ಮಲಗಿದರೇ, ಉಳಿದ ಅವಕಾಶವಾದಿ ಪ್ರಾದೇಶಿಕ, ಕೌಟುಂಬಿಕ, ಸೆಕ್ಯುಲರ್, ಕಮ್ಯುನಿಸ್ಟ್ ಪಕ್ಷಗಳು ಹೇಳ ಹೆಸರಿಲ್ಲದಂತಾದವು. ಮತ್ತಷ್ಟು ಓದು »

5
ಮೇ

ಸಹಿಷ್ಣುತೆ-ಅಸಹಿಷ್ಣುತೆಗಳ ಸುತ್ತಾ…..

politics

 ಸಂಗೀತಾ ದೀಪಕ್

ಕಳೆದ ವರ್ಷವೆಲ್ಲಾ ಸುದ್ದಿ ಮಾಡಿದ, ದೇಶ ವಿದೇಶಗಳಲ್ಲಿ ತೀರ್ವ ಸಂಚಲನವನ್ನು ಉಂಟು  ಮಾಡಿದ ಪದ ಅಸಹಿಷ್ಣುತೆ. ಇದಕ್ಕೆ  ಅದೆಷ್ಟೋ  ಪ್ರಶಸ್ತಿ, ಪುರಸ್ಕಾರಗಳ ಮರ್ಯಾದೆ ಬಲಿಯಾದವು, ಅದೆಷ್ಟೋ ತಾರಾಮಣಿಯರ, ವಿದ್ವಜ್ಜನರ ಪರ-ವಿರೋಧ ಹೇಳಿಕೆಗಳು ವಿವಾದಕ್ಕೀಡಾದವು. ಒಂದು  ರಾಜ್ಯದ ರಾಜಕೀಯ ಭವಿಷ್ಯವನ್ನು ತಕ್ಕ ಮಟ್ಟಿಗೆ  ಬದಲಾಯಿಸಿದ ಪದ ಅದು. ಅಸಹಿಷ್ಣುತೆ ಬಗ್ಗೆ  ಬರೆಯುತ್ತಿರುವ ಲೇಖನವೆಂದರೆ, ಯಾವುದೋ ರಾಜಕೀಯ ಪಕ್ಷದ ಪರ ಅಥವ ವಿರುದ್ಧವಾಗಿಯೇ ಈ ಲೇಖನವೆಂದು ಎಲ್ಲಾ ಭಾವಿಸುವುದು ಸಹಜ, ಆದರೆ ಅಸಹಿಷ್ಣುತೆ ಮತ್ತು ಮಾನವನ ನಡುವಿನ ಸಂಬಂಧವನ್ನು ತಿಳಿಸುವುದಷ್ಟೇ ಈ ಲೇಖನದ ಉದ್ದೇಶ. ಇಲ್ಲಿ ಅಸಹಿಷ್ಣುತೆ, ಅದೂ ಭಾರತೀಯರಲ್ಲಿ ಎಂಬ ವಿಷಯವಂತೂ ರಾಜ್ಯ, ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗಿ ದಿನಗಟ್ಟಲೇ ಪತ್ರಿಕೆಗಳಿಗೆ ಹಾಗೂ ದೃಶ್ಯ ಮಾಧ್ಯಮಗಳಿಗೆ ಆಹಾರವನ್ನು ಒದಗಿಸಿದ್ದವು. ಈ ವಿಷಯದಲ್ಲಿ ಸಾಮಾಜಿಕ ತಾಣಗಳು ಕೂಡ ಹಿಂದೆ ಬಿದ್ದಿರಲಿಲ್ಲ, ತಾವೇನೂ ಕಡಿಮೆಯಿಲ್ಲವನ್ನುವಂತೆ ಜನರೂ ಮನಸೋ ಇಚ್ಛೆ ತಮ್ಮ ಅಭಿಪ್ರಾಯಗಳನ್ನು ಹರಿಯಬಿಟ್ಟಿದ್ದರು. ಮತ್ತಷ್ಟು ಓದು »

4
ಡಿಸೆ

ಹೆಚ್ಚುತ್ತಿರುವುದು ಅಸಹಿಷ್ಣುತೆಯೋ?ಗೊಡ್ಡು ವಿಚಾರವಾದಿಗಳ ಹತಾಶೆಯೋ?

– ಶ್ರೀವತ್ಸ ಭಟ್

ಅಸಹಿಷ್ಣುತೆ2014ರ ಲೋಕಸಭಾ ಚುನಾವಣೆಗೂ ಮುಂಚಿನ ಭಾರತವನ್ನು,ಅಂದರೆ ಸ್ವಾತಂತ್ರ್ಯೋತ್ತರದ ಆರು ದಶಕಗಳ ವೈಚಾರಿಕ ಭಾರತವನ್ನು ಓಮ್ಮೆ ಅವಲೋಕಿಸಿ ನೋಡಿ.ನಿಜವಾದ ವಿಚಾರವಾದಿಗೆ ಸ್ಥಾನವಿತ್ತೆ?ಹತ್ತೊಂಬತ್ತನೇ ಶತಮಾನದ ಉತ್ತರಾರ್ಧ,ಇಪ್ಪತ್ತನೇ ಶತಮಾನದ ಪೂರ್ವಾರ್ಧದಲ್ಲಿ ರಾಮಕೃಷ್ಣ ಪರಮಹಂಸರು, ಸ್ವಾಮಿ ವಿವೇಕಾನಂದರು,ರಾಜಾರಾಮ ಮೋಹನರಾಯರು,ವಿದ್ಯಾಸಾಗರರಂತಹ ಅಪ್ರತಿಮ ಮೇಧಾವಿಗಳನ್ನೂ,ಮಹಾನ್ ವಿಚಾರವಾದಿಗಳನ್ನು ಕಂಡಿದ್ದ ಭಾರತರಾಷ್ಟ್ರ ಕೇವಲ ಕೆಲವು ದಶಕಗಳಲ್ಲಿ ಎಂತಹ ಜಾಢ್ಯತೆಯ ಕೂಪಕ್ಕೆ ಜಾರಿಹೋಗಿದೆಯಲ್ಲವೇ?  1947ರಲ್ಲಿ ಅನ್ಯರ ದಾಸ್ಯದಿಂದ ಮುಕ್ತರಾದೆವು ನಿಜ.ಆದರೆ ಸ್ವಾತಂತ್ರ್ಯ ಪೂರ್ವದಲ್ಲಿದ್ದ, ಆ ಮಹೋನ್ನತ ವಿಚಾರವಾದವು, ನಮ್ಮಯಾವ ವಿಚಾರಗಳಿಂದ ಪರಂಗಿಗಳು ನಮಗೆ ಹೆದರಿದ್ದರೋ, ಅದೇ ವಿಚಾರಶಕ್ತಿಯು ಅತಿ ಕಡಿಮೆ ಕಾಲದಲ್ಲಿ ಕ್ಷುದ್ರಗತಿಗೆ ಜಾರಿದ್ದು ನಮ್ಮ ದುರ್ದೈವವಲ್ಲವೇ?

2014 ಹೂಸ ಯುಗದ ಆರಂಭ, ವೋಟ್ ಬ್ಯಾಂಕ್ ರಾಜಕಾರಣದಿಂದ ಅಭಿವೃದ್ದಿ ರಾಜಕೀಯದೆಡೆಗೆ ಹೆಜ್ಜೆಯಿಡಲಾರಂಭಿಸಿದ ದಿನಗಳು. ತುಕ್ಕುಹಿಡಿದ ಆಲೋಚನೆಗಳಿಂದ, ನವನವೀನವಾದ, ಅಷ್ಟೇ  ಶ್ರೇಷ್ಠವಾದ,ಸಮೃದ್ದ ಭಾರತದ ನಿರ್ಮಾಣಕ್ಕೆ ಪೂರಕವಾದ,ವಿದ್ಯುತ್ ಪ್ರವಾಹದಂತಹ ಶಕ್ತಿಯುತ ಆಲೋಚನಾ ಕ್ರಮಕ್ಕೆ ಹೊರಳಿದ ಸಂಧಿಕಾಲ. ಈ ಬದಲಾವಣೆಯೆಂಬ ಉತ್ಕರ್ಷದ ಚಾಟಿಯ ಏಟು ಮೂದಲು ಬಿದ್ದಿದ್ದು ಗೊಡ್ಡು ವಿಚಾರವಾದದ ಮೇಲೆ. ಪರಿಣಾಮ! ಅಂಗಡಿಯಲ್ಲಿ ದುಡ್ಡುಕೊಟ್ಟು ಹೊಸ ಬಟ್ಟೆ ಖರೀದಿಸಿ ತೊಟ್ಟುಕೊಂಡು ಖುಷಿಪಡುವ ಹಾಗೆ,ಅಧಿಕಾರಿಗಳಿಗೆ ಲಂಚನೀಡೀಯೋ…ಇಲ್ಲವೇ ರಾಜಕೀಯದ ಪ್ರಭಾವ ಬಳಸಿಯೋ ಪ್ರಶಸ್ತಿ ಗಿಟ್ಟಿಸಿಕೊಂಡಿದ್ದವರಿಗೂ,ಬುದ್ಧಿಜೀವಿಗಳ ಸೋಗು ಹಾಕಿಕೊಂಡು ಮೆರೆಯುತ್ತಿದ್ದ ಅರ್ಧಂಬದ್ದ ಓದಿಕೊಂಡಿದ್ದವರಿಗೂ,ಬುಡಕ್ಕೆ ಬೆಂಕಿಯಿಟ್ಟಂತಾಯಿತು.ಏನೂ ಮಾಡಲಾಗದೆ ಹತಾಶರಾದರು…ಎಷ್ಟಾದರೂ ಸತ್ಯ ಕಹಿಯಲ್ಲವೇ?

ಮತ್ತಷ್ಟು ಓದು »

2
ಡಿಸೆ

ಅಸಹಿಷ್ಣುತೆ – ಮನೆ ಮನೆ ಕಥೆ!

– ನಾಗೇಶ ಮೈಸೂರು

ಅಸಹಿಷ್ಣುತೆ ಕಾರ್ಟೂನ್ಯಾಕೋ ಗುಬ್ಬಣ್ಣ ಪತ್ತೆಯಿಲ್ಲದೆ ಮಾಯಾವಾಗಿಹೋಗಿದ್ದ ಒಂದು ತಿಂಗಳಿಂದ. ಆಗೀಗ ಮಧ್ಯೆ ಬರಿ ಒಂದೆರಡು ಮೆಸೇಜ್ ಮಾತ್ರ ಕಳಿಸಿ ‘ವೆರಿ ಬಿಜಿ’ ಅಂತೊಂದು ಚೋಟು ಸುದ್ಧಿ ಹಾಕಿ ಇನ್ನು ಕುತೂಹಲ ಜಾಸ್ತಿ ಮಾಡಿಬಿಟ್ಟಿದ್ದ. ‘ಪ್ರಾಜೆಕ್ಟುಗಳೆಲ್ಲ ಕ್ಯಾನ್ಸಲ್ಲಾಗಿ ಇದ್ದಕ್ಕಿದ್ದಂತೆ ಫುಲ್ ಫ್ರೀ ಟೈಮ್ ಸಿಕ್ಕಿಬಿಟ್ಟಿದೆ; ಸ್ವಲ್ಪ ಬ್ರೇಕು ಸಿಕ್ಕಿದಾಗಲೆ ಅಲ್ಲಿ ಇಲ್ಲಿ ಓಡಾಡಿಕೊಂಡು ಬಿಡಬೇಕು ಸಾರ್.. ಈಗಲಾದರು ನೋಡೊ ಜಾಗವೆಲ್ಲ ನೋಡಿಬಿಡಬೇಕು ಅನ್ಕೊಂಡಿದೀನಿ’ ಅಂತಿದ್ದ. ‘ಹೇಳಿದ ಹಾಗೆ ಎಲ್ಲಾದರು ಟೂರು ಹೊಡಿತಿದಾನ ?’ ಅನ್ಕೊಂಡೆ, ಕ್ರಿಸ್ಮಸ್ಸಿನ ರಜೆ ಹತ್ತಿರವಾಗುವಾಗಲಾದರೂ ಸಿಕ್ತಾನ ನೋಡೋಣ ಅನ್ಕೊಂಡು ‘ವಾಟ್ಸಪ್ ಗುಬ್ಬಣ್ಣ ? ಮೆರ್ರಿ ಕ್ರಿಸ್ಮಸ್’ ಎಂದು ಮತ್ತೊಂದು ತುಂಡು ಸುದ್ದಿ ಕಳಿಸಿದೆ.

ಈ ಮೆಸೇಜಿಗೆ ಗುಬ್ಬಣ್ಣ ಖಂಡಿತವಾಗಿ ರೆಸ್ಪಾಂಡ್ ಮಾಡ್ತನೆ ಅಂತ ಭರವಸೆಯಿತ್ತು. ಯಾವ ಹಬ್ಬಹರಿದಿನಕ್ಕು ನಾನು ‘ವಿಷ್’ ಮೆಸೇಜ್ ಕಳಿಸಿದವನಲ್ಲ.. ಗುಬ್ಬಣ್ಣ ಹಬ್ಬ ಹರಿದಿನಕ್ಕೆ ವಿಷಸ್ ಕಳಿಸಿದಾಗಲೂ ಬರಿ ‘ಥ್ಯಾಂಕ್ಸ್’ ಅನ್ನೊ ರಿಪ್ಲೈ ಬರೆದರೆ ಅದೇ ಹೆಚ್ಚು. ಅಂತಹವನಿಗೆ ಅವನು ಆಚರಣೆ ಮಾಡದ ಹಬ್ಬಗಳಿಗೆಲ್ಲ ಬೇಕಂತಲೆ ವಿಷಸ್ ಕಳಿಸಿ ಸ್ವಲ್ಪ ರೇಗುವಂತೆ ಮಾಡುತ್ತಿದ್ದೆ.. ಅವಕ್ಕೆಲ್ಲ ಕಳಿಸಿದ್ದಕ್ಕಲ್ಲ ಅವನಿಗೆ ಕೋಪ ; ‘ನಮ್ಮ ಹಬ್ಬಗಳಿಗೆ ಕಳಿಸದೆ, ಕಳಿಸಿದ್ದಕ್ಕು ರೆಸ್ಪಾಂಡ್ ಮಾಡದೆ ಸಂಬಂಧಿಸದೆ ಇರೋದಕ್ಕೆ ಮಾತ್ರ ಉದ್ದುದ್ದ ಮೆಸೇಜ್ ಕಳಿಸಿ ವಿಷ್ ಮಾಡುವೆನಲ್ಲಾ?’ ಅಂತ. ಹಾಗೆ ಕಳಿಸಿದಾಗೆಲ್ಲ ಉರಿದೆದ್ದು ಬೀಳುವುದು, ರೇಗುವುದು ಮಾಮೂಲಾದ ಕಾರಣ, ಬೇಕೆಂತಲೆ ಆ ಮೆಸೇಜ್ ಕಳಿಸಿದ್ದು!

ಮತ್ತಷ್ಟು ಓದು »