ವಿಷಯದ ವಿವರಗಳಿಗೆ ದಾಟಿರಿ

Posts tagged ‘ಕಗ್ಗದ ಸಗ್ಗ’

18
ಮಾರ್ಚ್

ಮಂಕು ತಿಮ್ಮನ ಕಗ್ಗ – ರಸಧಾರೆ (೨)

– ರವಿ ತಿರುಮಲೈ

ಜೀವ ಜಡರೂಪ ಪ್ರಪಂಚವನದಾವುದೋ |
ಆವರಿಸಿಕೊಂಡುಮೊಳನೆರೆದುಮಿಹುದಂತೆ ||
ಭಾವಕೊಳಪಡದಂತೆ ಅಳತೆಗಳವಡದಂತೆ |
ಆ ವಿಶೇಷಕೆ ಮಣಿಯೋ – ಮಂಕುತಿಮ್ಮ ||

(ಜೀವ ಜಡ ರೂಪ ಪ್ರಪಂಚವನು ಅದಾವುದೋ ಆವರಿಸಿಕೊಂಡು ಒಳನೆರೆದು ಇಹುದಂತೆ ಭಾವಕ್ಕೆ ಒಳಪಡದಂತೆ ಅಳತೆಗೆ ಅಳವಡದಂತೆ ಆ ವಿಶೇಷಕೆ ಮಣಿಯೋ- ಮಂಕುತಿಮ್ಮ )
(ಒಳನೆರೆದು=ಒಳಗೆ ತುಂಬಿ , ಅಳವಡದಂತೆ = ಸಿಕ್ಕದಂತೆ, ಇಹುದಂತೆ = ಇದೆಯಂತೆ)

ಈ ಪ್ರಪಂಚದಲ್ಲಿ ಇರುವುದು ಎರಡೇ. ಒಂದು ಜಡ ಮತ್ತು ಮತ್ತೊಂದು ಜೀವ. ಜಡವೆಂದರೆ ಚೇತನವಿಲ್ಲದ್ದು. ಜೀವವೆಂದರೆ ಚೇತನ . ಇವೆರಡರ ಸಮ್ಮಿಲನವೇ ಜಗದ್ವ್ಯಾಪಾರ ಇವೆರಡರಲ್ಲೂ ತುಂಬಿಕೊಂಡಿರುವ, ಭಾವದಿಂದ ಊಹಿಸಲಸಾಧ್ಯವಾದ, ಅಳತೆಗೆ  ಸಿಗದ ವ್ಯಾಪಕತ್ವವು ಹೊಂದಿರುವ ಆ ವಿಶೇಷಕೆ (ಪರಮಾತ್ಮನಿಗೆ) ನಮಿಸೋ, ಮಣಿಯೋ, ನಮಸ್ಕರಿಸೋ ಮಂಕುತಿಮ್ಮ ಎಂದು ಹೇಳುತ್ತಾರೆ ಡಿ.ವಿ.ಜಿ.

ಮತ್ತಷ್ಟು ಓದು »

17
ಮಾರ್ಚ್

ಮಂಕು ತಿಮ್ಮನ ಕಗ್ಗ – ರಸಧಾರೆ (೧)

(ಡಿ.ವಿ ಗುಂಡಪ್ಪನವರ ಕಗ್ಗದ ರಸಧಾರೆಯನ್ನ ಶ್ರೀ ರವಿ ತಿರುಮಲೈ ಅವರು ನಿರಂತರವಾಗಿ ಹರಿಸಲಿದ್ದಾರೆ ನಿಲುಮೆಯಲ್ಲಿ)

– ರವಿ ತಿರುಮಲೈ

ಶ್ರೀ ವಿಷ್ಣು ವಿಶ್ವಾದಿಮೂಲ ಮಾಯಾಲೋಲ
ದೇವ ಸರ್ವೇಶ ಪರಬೊಮ್ಮನೆಂದು ಜನಂ //
ಆವುದನು ಕಾಣದೊಡಮಳ್ತಿಯಿಂ ನಂಬಿಹುದೋ
ಆ ವಿಚಿತ್ರಕೆ ನಮಿಸೊ – ಮಂಕು ತಿಮ್ಮ //

ವಿಶ್ವಕ್ಕೆ ಮೂಲವಾದ ಶ್ರೀ ವಿಷ್ಣು, ಮಾಯಾಲೋಲ, ದೇವರು, ಪರಬ್ರಹ್ಮ, ಸರ್ವಕ್ಕೂ ಒಡೆಯನಾದ ಪರಮ ಪುರುಷ ಹೀಗೆ ಹತ್ತು ಹಲವಾರು ಹೆಸರುಗಳಿಂದ ಯಾವುದನ್ನು ಜನರು ಕಾಣದಿದ್ದರೂ ಪ್ರೀತಿ ಮತ್ತು ಭಕ್ತಿಯಿಂದ ನಂಬಿರುವರೋ  ಆ ವಿಚಿತ್ರಕ್ಕೆ ನಮಿಸು ಎಂದು ಹೇಳುತ್ತಾರೆ ಶ್ರೀ ಗುಂಡಪ್ಪನವರು.

ನಾವಿರುವ ಭೂಮಿಯಂತಹ 9 .80 ಲಕ್ಷ ಭೂಮಿಗಳನ್ನು ನಮ್ಮ ಸೌರವ್ಯೂಹದ ಸೂರ್ಯನೊಳಕ್ಕೆ ಹಾಕಿಬಿಡಬಹುದು ಎಂದು ವಿಜ್ಞಾನಿಗಳು ಹೇಳುತ್ತಾರೆ. ನಮ್ಮ ಸೌರಮಂಡಲವೂ  ಸೇರಿದಂತೆ  ಲಕ್ಷಾಂತರ ಸೌರಮಂಡಲಗಳಿರುವ  ನಮ್ಮ ಕ್ಷೀರಪಥ, ನಮ್ಮ ಕ್ಷೀರಪಥವೂ ಸೇರಿದಂತೆ ಲಕ್ಷಾಂತರ ಕ್ಷೀರಪಥಗಳಿರುವ ಆಕಾಶಗಂಗೆ, ನಮ್ಮ ಆಕಾಶಗಂಗೆಯೂ ಸೇರಿದಂತೆ ಲಕ್ಷಾಂತರ ಆಕಾಶಗಂಗೆಗಳಿರುವ ಈ ವಿಶ್ವ. ಇಡೀ ವಿಶ್ವವನ್ನು ಒಂದು ಸೂತ್ರದಲ್ಲಿ ನಡೆಸುತ್ತಿರುವ ಒಂದು ಶಕ್ತಿ. ಅದನ್ನೇ ಬೇರೆ ಬೇರೆಯವರು ಬೇರೆ ಹೆಸರುಗಳಿಂದ ಕರೆಯುತ್ತಾರೆಂದು ಈ ಕಗ್ಗದ ಆಂತರ್ಯ ಮತ್ತು ವಿಶ್ವದ ಒಂದು ಅನುವಷ್ಟೂ ಅಲ್ಲದ ನಾವು ಕಾಣದಿದ್ದರೂ ಆ ಶಕ್ತಿಯ ಅಧೀನದಲ್ಲಿರುವುದರಿಂದ, ಅದಕ್ಕೆ ಭಕ್ತಿಯಿಂದ ಪ್ರೀತಿಯಿಂದ ನಮಿಸಬೇಕು ಎಂದು ಒಂದು ಆದೇಶ.

ಮತ್ತಷ್ಟು ಓದು »