ಕುರಿಯ ವಿಠಲ ಶಾಸ್ತ್ರಿ ಆತ್ಮಕಥನ: ತಲೆಗೆ ಬಿದ್ದ ತಾಳ
“ನನ್ನಿಂದಾದಷ್ಟು ಸಮಯ… ಈ ಜೀವನ ನನ್ನನ್ನು ಕುಣಿಸಿದಷ್ಟು ದಿನವೂ ಕುಣಿಯುತ್ತೇನೆ…. ಕುಣಿಯುತ್ತಲಿರುತ್ತೇನೆ…” ಎಂದು ತೀರ್ಮಾನಿಸಿ ಯಕ್ಷಗಾನ ಕಲೆಗಾಗಿ ಅವಿರತವಾಗಿ ದುಡಿದು 18.11.1972 ರಂದು ಬಣ್ಣ ಕಳಚಿ ಯಕ್ಷಗಾನ ರಂಗವನ್ನು ತಬ್ಬಲಿಯನ್ನಾಗಿ ಮಾಡಿ ಯಕ್ಷಮಾತೆಯ ಪಾದವನ್ನು ಸೇರಿದ ಕುರಿಯ ವಿಠಲ ಶಾಸ್ತ್ರಿಯವರು ಜನಿಸಿದ್ದು ಕಳೆದ ಶತಮಾನದ ದಿನಾಂಕ 8.9.1912 ರಂದು .ಯಕ್ಷಗಾನ ರಂಗದಲ್ಲಿ ಎಲ್ಲೂ ಸಲ್ಲುವ ಯಾವ ವೇಷಕ್ಕೂ ಸೈ ಎನಿಸಿಕೊಳ್ಳುತ್ತಿದ್ದ ಒಬ್ಬ ಪ್ರಬುದ್ಧ ಹಾಗೂ ಮೇರು ಕಲಾವಿದರಾಗಿದ್ದ ದಿವಂಗತ ಕುರಿಯ ವಿಠಲ ಶಾಸ್ತ್ರಿಯವರು ತಮ್ಮ ವಯಸ್ಸಿನ ನೂರನೇ ಸಂವತ್ಸರಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ಖ್ಯಾತ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪದ್ಯಾಣ ಎಂದೊಡನೆ ತಕ್ಷಣ ನೆನಪಿಗೆ ಬರುವುದು ಯಕ್ಷಗಾನ .ಕನ್ನಡ ನಾಡಿನ ರಾಜಧಾನಿ ಬೆಂಗಳೂರು ನಗರದಲ್ಲಿ ಮೊದಲ ಬಾರಿಗೆ ಯಕ್ಷಗಾನದ ಕೇಳಿ ಬಡಿದವರು ಎಂದು 1955ನೇ ಇಸವಿಯಲ್ಲಿ ಗುರುತಿಸಿಕೊಂಡವರು ಕಳೆದ ಶತಮಾನದ ಮಂಗಳೂರಿನ ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ಪದ್ಯಾಣ ಗೋಪಾಲಕೃಷ್ಣ ( ಪ.ಗೋ. 1928 -1997 ).)ರವರರು ನಿರೂಪಣೆ ಗೈದಿರುವ ಕುರಿಯ ವಿಠಲ ಶಾಸ್ತ್ರಿಯವರ ಆತ್ಮ ಕಥನ “ಬಣ್ಣದ ಬದುಕು” ಇಂದು ಯಕ್ಷಗಾನ ಅಭಿಮಾನಿಗಳಿಗಾಗಿ ನಿಲುಮೆಯಲ್ಲಿ…
—————-





