ನೀರು ಅತ್ಯಮೂಲ್ಯವೇಕೆ?
– ಅರುಣ್ ಎಲ್
ಭೂಪಟವನ್ನೋ, ಭೂಗೋಲವನ್ನೋ ನೋಡಿದಾಗ ಕಾಣುವ ನೀಲಿ ಬಣ್ಣದ್ದೆಲ್ಲವೂ ನೀರು ಎಂಬುದು ಗೊತ್ತಿರುವ ಸಂಗತಿಯಷ್ಟೆ. ಭೂಗ್ರಹದ ಮುಕ್ಕಾಲು ಭಾಗ ನೀರಿದ್ದೂ, ಕೇವಲ ಕಾಲು ಭಾಗವಷ್ಟೇ ನೆಲವೆಂಬ ವಿಷಯವನ್ನು ಪ್ರಾಥಮಿಕ ಶಾಲೆಯಾಲ್ಲೇ ಕಲಿತಿರುತ್ತೇವೆ. ಅಷ್ಟೊಂದು ನೀರಿದ್ದೂ ನಾವು “ಕೊರತೆ”ಯ ಬಗ್ಗೆ ಮಾತನಾಡುತ್ತಿರುತ್ತೇವೆ. ಏಕೆ?
ವಿಶ್ವಸಂಸ್ಥೆಯ ವರದಿಯ ಪ್ರಕಾರ ಭೂಗ್ರಹದಲ್ಲಿ ಸುಮಾರು ಒಂದುವರೆ ಸಾವಿರ ಮಿಲಿಯನ್ ಕ್ಯುಬಿಕ್ ಕಿಲೋಮೀಟರು ನೀರಿದೆಯಂತೆ.
ಇದನ್ನು ಹೇಗೆ ಕಲ್ಪಿಸಿಕೊಳ್ಳುವುದು? ಒಂದು ಕಿಲೋಮೀಟರು ಉದ್ದದ, ಒಂದು ಕಿಲೋಮೀಟರು ಅಗಲದ, ಒಂದು ಕಿಲೋಮೀಟರು ಆಳದ ಘನವಸ್ತುವನ್ನು ನೀರಿನಿಂದ ತುಂಬಿಸಿದರೆ ಅದು ಒಂದು ಕ್ಯುಬಿಕ್ ಕಿಲೋಮೀಟರ್. ಇದನ್ನು ಸಾವಿರದೈನೂರರಿಂದ ಗುಣಿಸಿದರೆ ನೀರಿನ ಪ್ರಮಾಣವು ಕಲ್ಪನೆಗೆ ಸಿಕ್ಕೀತು.
ಇಷ್ಟೊಂದು ನೀರಿನಲ್ಲಿ ಶೇ. 98ರಷ್ಟು ಸಮುದ್ರವೇ ಆಗಿದೆ. ಅಂದರೆ, ಒಟ್ಟು ನೀರಿನಲ್ಲಿ ಕೇವಲ ಶೇ. ಎರಡರಷ್ಟು ಮಾತ್ರ ಶುದ್ಧ ಜಲ ಇರುವುದೆಂದಾಯಿತಷ್ಟೆ?
ಈ ಶೇ. ಎರಡರಷ್ಟು ಶುದ್ಧಜಲದಲ್ಲಿ ಮುಕ್ಕಾಲು ಭಾಗ ಧ್ರುವಪ್ರದೇಶಗಳಲ್ಲಿ ಮಂಜುಗೆಡ್ದೆಗಳ ರೂಪದಲ್ಲಿದೆ. ಇನ್ನು ಶೇ 22.5ರಷ್ಟು ನೀರು ಅಂತರ್ಜಲದ ರೂಪದಲ್ಲಿ ಅತಲ, ವಿತಲ, ರಸಾತಲ, ಪಾತಾಲವನ್ನು ಸೇರಿಕೊಂಡಿದೆ.
ಹಸಿರುಕಾನನದ ಮಗಳೀಕೆ ಗೌರಾದೇವಿ…..
– ಚಿತ್ರ ಸಂತೋಷ್
ಉತ್ತರ ಖಾಂಡದ ರೇನಿ ಗ್ರಾಮದಲ್ಲಿ ಮರಗಳನ್ನು ಕಡಿಯಲು ಬಂದ ಅಧಿಕಾರಿಗಳ ವಿರುದ್ಧ ಬಂಡೆದ್ದವಳು ಗೌರಾದೇವಿ. ಬುಡಕಟ್ಟು ಜನರಿಗೆ ದಟ್ಟಾರಣ್ಯಗಳೇ ತವರು. ಕಾಡಿಗೂ-ನಮಗೂ ಇರುವುದು ಅಮ್ಮ-ಮಕ್ಕಳ ಸಂಬಂಧ.ಬದುಕಿದರೆ ನಮಗೆ ಆಸರೆ ನೀಡಿದ ಈ ಹಸಿರು ಕಾಡುಗಳಿಗಾಗಿ ಬದುಕಿ …ಎಂದು ಹಳ್ಳಿ ಮನೆಗಳ ಜಗುಲಿಯಲ್ಲಿ ಕುಳಿತು ಜಾಗೃತಿಯ ಕಹಳೆ ವೊಳಗಿಸಿದವಳು ಇವಳೇ ಗೌರಾದೇವಿ. ದೇಶದ್ಯಾಂತ ಪರಿಸರ ಕ್ರಾಂತಿ ಮಾಡಿದ ಚಿಪ್ಕೋ ಚಳವಳಿನ್ನು ಹುಟ್ಟು ಹಾಕಿದ್ದೇ ಇವಳು. ಇಂಥ ಗೌರಾದೇವಿಯನ್ನು ಗೌರವದಿಂದ ನೆನೆಯುವ ಕೆಲಸವನ್ನು ನಾವು ಮಾಡಬೇಕಿದೆ.
“ಸಹೋದರರೇ ಈ ಅರಣ್ಯ ಪ್ರದೇಶ ನಮ್ಮ ಜೀವಮೂಲ. ನಮ್ಮ ಹುಟ್ಟಿನಿಂದ ಸಾವಿನ ತನಕದ ಜೀವನ ಬಂಡಿಗೆ ಸಾಥ್ ನೀಡುವುದು ಇದೇ ಹಸಿರು ಕಾನನ. ಈ ‘ರಮೆಯೇ ನಮ್ಮಮ್ಮ. ನೀವು ನಿಮ್ಮ ಹರಿತವಾದ ಗರಗಸವನ್ನು ನಮ್ಮಮ್ಮನ ಕರುಳಿಗೆ ಇಡುವ ವೊದಲು ನನ್ನ ಎದೆಗೆ ಹಿಡಿ”
ಬಹುಶಃ ಚಿಪ್ಕೋ ಚಳವಳಿ ಹುಟ್ಟುವ ವೊದಲು ಓರ್ವ ಬುಡಕಟ್ಟು ಮಹಿಳೆ ಉತ್ತರ ಖಾಂಡದ ಆ ಬೃಹತ್ ಅರಣ್ಯದಲ್ಲಿ ಈ ರೀತಿ ಮರಗಳನ್ನು ತಬ್ಬಿಕೊಂಡು ಸರ್ಕಾರದ ಅಕಾರಿಗಳ ಎದುರು ಈ ರೀತಿ ಅಳಲು ತೋಡಿಕೊಂಡಿದ್ದು ಬಹಳಷ್ಟು ಜನರಿಗೆ ನೆನಪು ಇರಲಿಕ್ಕಿಲ್ಲ. ಚಿಪ್ಕೋ ಚಳವಳಿ ಕುರಿತು ಮಾತೆತ್ತಿದ್ದರೆ ತಕ್ಷಣಕ್ಕೆ ನೆನಪಿಗೆ ಬರುವುದು ಸುಂದರ್ ಲಾಲ್ ಬಹುಗುಣ ಎಂಬ ಮಹಾನ್ ವ್ಯಕ್ತಿ. ಆದರೆ, ಇವರಿಗಿಂತಲೂ ವೊದಲು ಅಲ್ಲಿ ಮಹಿಳೆಯೊಬ್ಬಳ ದನಿಯಿತ್ತು, ದೇಶದಾದ್ಯಂತ ಬೃಹತ್ ಪರಿಸರ ಕ್ರಾಂತಿಗೆ ಮುನ್ನುಡಿಯಾದ ಆ ಚಳವಳಿಯ ಹಿಂದೆ ಅನಕ್ಷರಸ್ಥೆ ಮಹಿಳೆಯ ಶ್ರಮ ಇತ್ತು, ಕಣ್ಣೀರಿತ್ತು, ಜಾಗೃತಿಯ ಕಹಳೆಯಿತ್ತು.
ಅವಳ ಹೆಸರು ಗೌರಾದೇವಿ.
ಸೌರ ವಿದ್ಯುತ್ ಅವಕಾಶಗಳು
– ಗೋವಿಂದ ಭಟ್
ವಿಚಾರ ಮನಸ್ಸಿಗೆ ಬಂದರೂ ಅವಕಾಶಗಳ ಬಗ್ಗೆ ಕೆದಕುತ್ತಾ ಸಾಗಿದಂತೆ ಸಾದ್ಯತೆಗಳು ಸ್ಪಷ್ಟವಾಗುತ್ತಾ ಬಂತು.ಒಮ್ಮೆ ಹೊಸ ಕೊಳವೆ ಬಾವಿಗೆ ಸೌರ submersible ಪಂಪಿನ ವಿಚಾರಣೆಗೆ ಹೋಗಿದ್ದೆ. ಆಗ ಒಂದು ಮಾಮೂಲಿ surface ಪಂಪಿಗೆ ಸಬ್ಸಿಡಿ ಇದ್ದ ಕಾಲ. ಹಾಗಾಗಿ ಅಂಗಡಿಯವರು ಅಷ್ಟೊಂದು ಫಲಕಗಳು ಕಡಿಮೆ ಬೆಲೆಗೆ ಸಿಗುತ್ತದೆ. ಆಲೋಚನೆ ಮಾಡಿ ಎಂದು ಪುಸಲಾಯಿಸಿದರು. ಅಂದಿಗೆ ಹದಿನೆಂಟು ವರ್ಷ ಹಿಂದೆ ಸೈಕಲಿನಲ್ಲಿ ದೆಹಲಿಗೆ ಸಾಗುವಾಗ ಟಿಲೋನಿಯದಲ್ಲಿ ಸೌರ ವಿದ್ಯುತ್ ಬಳಸಿ ರಾತ್ರಿ ಶಾಲೆ ಕಾರ್ಯಾಚರಿಸುವುದನ್ನು ಕಂಡಿದ್ದೆ. ಆಗಲೇ ಈ ಸೌರ ವಿದ್ಯುತ್ ಉಪಯೋಗ ಬಗೆಗೆ ಮನದಲ್ಲಿ ಬಿತ್ತಿದ ಬೀಜ ಮೊಳಕೆಯೊಡೆಯಿತು. ನನಗೆ ಬೇಕಾದ ಪಂಪ್ ಅಲ್ಲವಾದರೂ ಇದನ್ನು ಬಳಸಬಹುದೆಂಬ ಅಲೋಚನೆಯಿಂದ ಒಪ್ಪಿದೆ.
ಹಾಗೆ 2002ರಲ್ಲಿ ಒಂದಷ್ಟು ಫಲಕಗಳೊಂದಿಗೆ ಒಂದು ಸೌರ ಶಕ್ತಿಯ ಪಂಪು ನಮ್ಮಲ್ಲಿಗೆ ಬಂತು. ಅಂದಿನಿಂದ ಇಂದಿನ ವರೆಗೆ ಸೌರ ವಿದ್ಯುತ್ ಗರಿಷ್ಟ ಉಪಯೋಗದ ಬಗೆಗೆ ಆರು ಇಂಚು ಮೇಲೆ ಸರಿದರೆ ಮೂರು ಇಂಚು ಕೆಳಗೆ ಜಾರುವುದು ಎನ್ನುವ ಕಪ್ಪೆಯಾಟ ನಿರಂತರವಾಗಿ ಸಾಗುತ್ತಲೇ ಇದೆ.
ಕರಾವಳಿಗರನ್ನು ಬಲಿ ತೆಗೆದುಕೊಳ್ಳಲಿರುವ ನೇತ್ರಾವತಿ ನದಿ ತಿರುವು ಯೋಜನೆ…!
-ಶಂಶೀರ್, ಬುಡೋಳಿ
ಯಾರಾದರೂ ಊಹಿಸಿರಬಹುದೇ?
ತಣ್ಣನೆಯ ಹಾದಿಯಲ್ಲಿ ಹರಿಯುತ್ತಿದ್ದ ನೇತ್ರಾವತಿ ನದಿಗೋಸ್ಕರ ಒಂದೊಮ್ಮೆ ಹೋರಾಟ ನಡೆಸುವ ಬಗ್ಗೆ ನಮ್ಮ ಹಿರಿಯರು ಕನಸು ಕೂಡಾ ಕಂಡಿರಬಹುದೇ? ಇಲ್ಲ. ಸಾಧ್ಯವೇ ಇಲ್ಲ. ಯಾಕೆಂದರೆ ನದಿಯ ಮೂಲ ಶೋಧಿಸಬೇಡ ಎನ್ನುವ ಮಾತನ್ನು ಅವರು ನಂಬಿದ್ದರು. ಹಾಗಾಗಿ ಅವರು ಈ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಂಡಿರಲಿಲ್ಲ.ಪಶ್ಚಿಮ ಘಟ್ಟದ ಉಳಿವಿಗಾಗಿ ನಡೆಸುತ್ತಿರುವ ಹೋರಾಟದ ನಂತರ ಕರಾವಳಿಗರು ನಡೆಸುತ್ತಿರುವ ನೇತ್ರಾವತಿ ನದಿ ಉಳಿಸುವ ಹೋರಾಟ ಇವತ್ತಿಗೂ ನಡೆಯುತ್ತಲೇ ಇದೆ.ಮೊನ್ನೆಯ ವಿಶ್ವ ತುಳು ಸಮ್ಮೇಳನದಲ್ಲೂ ಸಹ ಈ ಬಗ್ಗೆ ಚರ್ಚೆ ಉಂಟಾಗಿತ್ತು. ಇತ್ತೀಚಿಗೆ ಪರಮಶಿವಯ್ಯನವರು ಈ ಬಗ್ಗೆ ಚಕಾರವೆತ್ತಿದ್ದು ತನ್ನ ವರದಿ ಅಸಮರ್ಪಕವಾಗಿದ್ಜದರೆ ತಾನು ಯಾವ ಶಿಕ್ಷಾರ್ಹ ಕ್ರಮಕ್ಕೂ ಬದ್ಧ ಎಂದು ಹೇಳಿಕೆ ಕೊಟ್ಟಿದ್ದಾರೆ. ಆದರೆ ಸರಕಾರ ಮಾತ್ರ ತೆಪ್ಪಗಾಗಿದೆ. ವಿಜ್ಞಾನ-ತಂತ್ರಜ್ಞಾನ,ಭ್ರಷ್ಟ ರಾಜಕಾರಣ,ಬಂಡವಾಳಶಾಹಿತ್ವದ ವಿರುದ್ಧದ ಹೋರಾಟದ ತರಹೇ ಈ ನೇತ್ರಾವತಿ ನದಿ ಉಳಿಸುವ ಹೋರಾಟ. ಈ ಹೋರಾಟಕ್ಕೆ ಪ್ರಗತಿಪರ ಸಂಘಟನೆಗಳು ಮಾತ್ರ ಬೆಂಬಲ ಕೊಡುತ್ತಿರುವುದರಿಂದ ಬಲಪಂಥೀಯ ಎನ್ನಿಸುವ ಸಂಘಟನೆಗಳ ವಿರುದ್ಧದ ಆಟದಿಂದ ಇವತ್ತು ಈ ಹೋರಾಟ ಮುಂದುವರಿಯುತ್ತಲೇ ಇದೆ. ಹಾಗಾಗಿ ಪಕ್ಷಾತೀತವಾದ ಸ್ವತಂತ್ರ ಸಂಘಟನೆಗಳು, ಸೇವಾ ಸಂಸ್ಥೆಗಳು ಮಾತ್ರ ಈ ಹೋರಾಟದಲ್ಲಿ ಭಾಗಿಯಾಗಿರುವುದನ್ನು ನಾವು ನೋಡ್ತಾ ಇದ್ದೇವೆ. ಉದಾಹರಣೆಗೆ ಭಾರತೀಯ ಕಿಸಾನ್ ಸಂಘ,ನಾಗರಿಕ ಸೇವಾ ಟ್ರಸ್ಟ್ ಮುಂತಾದ ಸಂಘಟನೆಗಳನ್ನ ಗುರುತಿಸಬಹುದು. ೨೦೦೯ಸಾಗಿದ್ದರೂ ಈ ವರ್ಷದಲ್ಲಿ ನೇತ್ರಾವತಿ ನದಿಯ ಹರಿವನ್ನು ನಿಲ್ಲಿಸಿ ಬೆಂಗಳೂರಿನಲ್ಲಿ ನದಿ ತಿರುಗಿಸುವ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ.





