ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ
ದಿನ – 20:
ಬಿನೋಯ್ ಬಾದಲ್ ದಿನೇಶ್:
– ರಾಮಚಂದ್ರ ಹೆಗಡೆ
ಭಾರತ ಸ್ವಾತಂತ್ರ್ಯ ಸಮರದ ಪುಟಗಳನ್ನು ತೆರೆಯುತ್ತಾ ಹೋದಂತೆ ಅಲ್ಲಿ ಒಂದಕ್ಕಿಂತ ಒಂದು ರೋಚಕ ಅಧ್ಯಾಯವನ್ನು ಕಾಣುತ್ತ ಹೋಗಬಹುದು. ದೇಶವನ್ನು ದಾಸ್ಯದ ಕಪಿಮುಷ್ಟಿಯಿಂದ ರಕ್ಷಿಸಲು ಈ ದೇಶದ ಬಿಸಿರಕ್ತದ ಯುವಕರು ಜೀವ ನೀಡಲಿಕ್ಕೂ ಹಿಂದೇಟು ಹಾಕದ ಸ್ಪೂರ್ತಿದಾಯಕ ಸಾಹಸಗಾಥೆ ನಮಗಲ್ಲಿ ಸಿಗುತ್ತವೆ. ದೇಶದ ರಕ್ಷಣೆಯ ವಿಚಾರ ಬಂದಾಗ ರಕ್ತವೇನು, ಜೀವವನ್ನೂ ಕೊಟ್ಟೇವು ಎಂದಿದ್ದಷ್ಟೇ ಅಲ್ಲ, ಸ್ವಯಂ ತಮ್ಮನ್ನು ಅರ್ಪಿಸಿಕೊಂಡು ನಗುನಗುತ್ತಾ ನೇಣುಗಂಬವೇರಿದ ರೋಮಾಂಚಕಾರಿ ಸಾಹಸಗಳು ಸ್ವಾತಂತ್ರ್ಯ ಸಮರದ ಇತಿಹಾಸವನ್ನು ರಕ್ತರಂಜಿತವಾಗಿ, ವರ್ಣರಂಜಿತವಾಗಿ ಮಾಡಿವೆ. ಬಂಗಾಳದ ಈ ಮೂವರು ಬಿಸಿರಕ್ತದ ದೇಶಪ್ರೇಮಿ ತರುಣರು ಬಿನೋಯ್ ಬಸು, ಬಾದಲ್ ಗುಪ್ತಾ, ದಿನೇಶ್ ಗುಪ್ತಾ ಹಾಗೆ ಸ್ವಾತಂತ್ರ್ಯದ ಕನಸಿನಲ್ಲಿ ಕ್ರಾಂತಿಯ ಕಹಳೆ ಊದಿ ಸಾವಿನ ಕದ ತಟ್ಟಿದಾಗ ಅವರಿಗಿನ್ನೂ 22, 19, 18 ವರ್ಷಗಳಷ್ಟೇ. ಮತ್ತಷ್ಟು ಓದು 




