ತುಷ್ಟೀಕರಣ ನಿಲ್ಲದ ಹೊರತು ಕಾಶ್ಮೀರ ತಣಿಯದು
– ಯೋಗೀಶ ತೀರ್ಥಪುರ
ಕಾಶ್ಮೀರ ಹಿಂದೂಗಳ ಪಾಲಿಗೆ ನರಕವಾಗಿ ಪರಿವರ್ತಿತವಾಗಿದೆ. ಹಿಂಸೆ, ಶೋಷಣೆಯ ದಳ್ಳುರಿಯಲ್ಲಿ ಇಲ್ಲನ ಹಿಂದೂಗಳ ಸ್ಥಿತಿ ತೀರಾ ದಯನೀಯವಾಗಿದೆ. ಇಷ್ಟೆಲ್ಲ ನಡೆದಿದ್ದರೂ ಕಾಶ್ಮೀರ ಸರ್ಕಾರ ಹಾಗೂ ಕೇಂದ್ರ ಸರ್ಕಾರ ತುಷ್ಟೀಕರಣ ರಾಜಕಾರಣದಲ್ಲೇ ಮುಂದುವರಿದಿರುವುದು ದುರದೃಷ್ಟಕರ.
1947ರ ವಿಭಜನೆಯ ನಂತರದ ಕಾಲದಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ದಿಂದ ಸುಮಾರು 4.5 ಲಕ್ಷ ಹಿಂದುಗಳು ಕಾಶ್ಮೀರಕ್ಕೆ ಸ್ಥಳಾಂತರಗೊಂಡರು. ಈ ಹಿಂದುಗಳಿಗೆ ಕಾಶ್ಮೀರದಲ್ಲಿ ಮತದಾನದ ಹಕ್ಕಿಲ್ಲ ಮತ್ತು ಯಾವುದೇ ಪರಿಸ್ಥಿತಿಯಲ್ಲಿ ಹಿಂದುಗಳಿಗೆ ವಿಧಾನಸಭೆಯಲ್ಲಿ 31% ರಷ್ಟೇ ಪ್ರತಿ ನಿಧಿತ್ವ ಸಿಗುವಂತೆ ಒಟ್ಟು ಸ್ಥಾನಗಳ ಹೊಂದಾಣಿಕೆಯನ್ನು ಮಾಡಲಾಗಿದೆ.
ಕಾಶ್ಮೀರಿ ಹಿಂದುಗಳಲ್ಲಿ ಸಾಕ್ಷರತಾ ಪ್ರಮಾಣವು 88%ರಷ್ಟು ಇದ್ದರೂ ರಾಜ್ಯ ಸರಕಾರದ ಸೇವೆ, ಸಾರ್ವಜನಿಕವಲಯ ಮತ್ತು ಸರಕಾರಿ ಕಂಪೆನಿಗಳಲ್ಲಿ ಹಿಂದು ಕಾರ್ಮಿಕರ ಪ್ರಮಾಣವು 4.8% ರಷ್ಟು ಮಾತ್ರ ಇದೆ. 1980 ರಿಂದ 1990ರ ಅವಧಿಯಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದನೆ ಹೆಚ್ಚಾದ ಮೇಲೆ ಈ ಪ್ರಮಾಣವು 1.7%ಕ್ಕೆ ಇಳಿಯಿತು. ಕಾಶ್ಮೀರದಲ್ಲಿನ ಯಾವ ಆರ್ಥಿಕ ವ್ಯವಹಾರವೂ ಹಿಂದೂಗಳ ಕೈಯಲ್ಲಿ ಇಲ್ಲ. ಕಾಶ್ಮೀರದ 97.4% ಭೂಮಿಯು ಮುಸಲ್ಮಾನರ ಒಡೆತನದಲ್ಲಿದೆ. ಕೇವಲ 2.6% ಭೂಮಿಯು ಮಾತ್ರ ಹಿಂದು ಮತ್ತು ಇತರ ಅಲ್ಪಾಸಂಖ್ಯಾತರ ಒಡೆತನದಲ್ಲಿದೆ. 1985ರಲ್ಲಿ ಕಾಶ್ಮೀರದಲ್ಲಿ ನೋದವಣೆ ಮಾಡಲ್ಪಟ್ಟ ಲಘು ಉದ್ಯೋಗಗಳ ಸಂಖ್ಯೆ 46,293 ಇತ್ತು. ಇದರಲ್ಲಿ 0.01% ರಷ್ಟು ಉದ್ಯೋಗಗಳು ಹಿಂದುಗಳ ಒಡೆತನದಲ್ಲಿದ್ದವು ಮತ್ತು ವಿದ್ಯುತ್ ಆಧಾರಿತ ಉದ್ಯೋಗಗಳ ಪೈಕಿ 98.9%ರಷ್ಟು ಮುಸಲ್ಮಾನರ ಒಡೆತನದ್ದಲಿವೆ. ಕಾಶ್ಮೀರದಲ್ಲಿನ 96%ರಷ್ಟು ಸೇಬು ತೋಟಗಳ ಜಮೀನು ಮುಸಲ್ಮಾನರ ಒಡೆತನದ್ದಲಿದೆ.
ಭಯೋತ್ಪಾದನೆ, ರಾಜಕೀಯ ನೇತಾರರು ಮತ್ತು ಮಾಧ್ಯಮಗಳು
ತೀರಾ ಇತ್ತೀಚಿನವರೆಗೂ ಭಯೋತ್ಪಾದನಾ ಧಾಳಿಗಳಿಗೆ ಸಂಬಂಧಿಸಿದಂತೆ ಇರಾಕ್ ಮತ್ತು ಪಾಕಿಸ್ತಾನಗಳ ನಂತರ ಭಾರತ ವಿಶ್ವದಲ್ಲಿ ಮೂರನೆಯ ಸ್ಥಾನದಲ್ಲಿತ್ತು. ಈಗಲೂ ಈ ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳೇನೂ ಗಮನಾರ್ಹವಾಗಿ ತಗ್ಗಿಲ್ಲ. ಆಂತರ್ಯುದ್ಧದ ದಳ್ಳುರಿಗೆ ಸಿಲುಕಿರುವ ಸಿರಿಯಾ, ಲಿಬಿಯಾಗಳು ಭಾರತವನ್ನು ಕೆಳಕ್ಕೆ ತಳ್ಳಿವೆ ಅಷ್ಟೆ. ಅಂಕಿಅಂಶಗಳ ಪ್ರಕಾರ ೧೯೮೧ರಲ್ಲಿ ಖಲಿಸ್ತಾನ್ ಚಳುವಳಿ ಆರಂಭವಾದಂದಿನಿಂದ ಈ ದೇಶದಲ್ಲಿ ನಾಲ್ಕುಸಾವಿರ್ವಕ್ಕೂ ಅಧಿಕ ಭಯೊತ್ಪಾದನಾ ಧಾಳಿಗಳಾಗಿವೆ ಮತ್ತು ಈ ಪಿಡುಗಿಗೆ ದಿನಕ್ಕೆ ಸರಾಸರಿ ನಾಲ್ವರು ಭಾರತೀಯರು ಬಲಿಯಾಗುತ್ತಿದ್ದಾರೆ.“ವಿಶ್ವರೂಪ” ದರ್ಶನವಂತೂ ಆಗುತ್ತಿದೆ….!
– ಚಕ್ರವರ್ತಿ ಸೂಲಿಬೆಲೆ
ಸೆಕ್ಯುಲರ್ ಭಾರತ!
ಇನ್ನಾದರೂ ಹಾಗೆ ಕರೆಯೋಕೆ ನಾಚ್ಕೋಬೇಕು. ಇಸ್ಲಾಮ್ ಭಾರತ ಅಂತಾನೋ ಹಿಂದೂ ವಿರೋಧಿ ಭಾರತ ಅಂತಾನೋ ಕರೆದರೆ ಒಂದಷ್ಟು ಅತೃಪ್ತ ಆತ್ಮಗಳು ತೃಪ್ತಿಗೊಂಡಾವು. ಕಳೆದ ಎಂಟ್ಹತ್ತು ದಿನಗಳ ನಾಟಕ ನೋಡಿದರೆ ಹಾಗನ್ನಿಸುವುದು ಸಹಜವೇ.
‘ವಿಶ್ವರೂಪಮ್’ ಬಿಡುಗಡೆಗೆ ಕಿರಿಕ್ ಅಯ್ತು. ಹತ್ಯೆ ಮಾಡುವ ಮುನ್ನ ಭಯೋತ್ಪಾದಕ ಅಲ್ಲಾಹನಿಗೆ ವಂದಿಸಿ ಹೊರಡುವುದನ್ನು ತೋರಿಸಿರುವುದೇ ಗಲಾಟೆಗೆ ಕಾರಣವಂತೆ. ತಮಿಳುನಾಡು ಸರ್ಕಾರ ಸಿನೆಮಾ ತಡೆಹಿಡಿಯಿತು. ಬೇರೆಬೇರೆ ರಾಜ್ಯಗಳಲ್ಲಿ ಬಿಡುಗಡೆಗೆ ಮುನ್ನ ಮುಸಲ್ಮಾನ ಸಂಘಟನೆಗಳು ಪ್ರತಿಭಟನೆ ಮಾಡಿದವು. ದಾವಣಗೆರೆಯಲ್ಲಿ ಕೋಮು ಗಲಭೆಯೇ ನಡೆಯಿತು. ತಮಿಳುನಾಡಿನ ಸಿನೆಮಾ ಮಂದಿರದಲ್ಲಿ ಪೆಟ್ರೋಲ್ ಬಾಂಬ್ ಎಸೆಯಲಾಯ್ತು. ಅಚ್ಚರಿಯೇನು ಗೊತ್ತೆ? ಜನಾರ್ಧನ ಪೂಜಾರಿಯವರು ಬಾಯಿ ತೆರೆಯಲೇ ಇಲ್ಲ. ಬುದ್ಧಿ ಮಾರಿಕೊಂಡು ಬದುಕುವ ಕೆಲವರು ಬೆಂಗಳೂರಿನಲ್ಲಿ ತಣ್ಣಗೆ ಕುಳಿತುಬಿಟ್ಟಿದ್ದಾರೆ.
ಯಾಕೆ ಸ್ವಾಮಿ? ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಬೆಲೆಯೇ ಇಲ್ವೆ? ಈಗ ನಿಮಗೆ ಧರ್ಮದ ಹೆಸರಲ್ಲಿ ಕ್ರೌರ್ಯ ಕಾಣುವುದೆ ಇಲ್ಲವೆ?
ಯಾರು ಅಪಾಯಕಾರಿ!?
– ಸಚಿನ್
ನಮ್ಮ ನಿಮ್ಮ ಮಧ್ಯೆಯಿರುವ ಕೆಲ ಎಡಬಿಡಂಗಿ ಗಳು ನಿನ್ನೆ ದೆಹಲಿ ಹೈಕೋರ್ಟ್ ನಲ್ಲಿ ನಡೆದ ಬಾಂಬ್ ಸ್ಪೋಟದ ಕುರಿತು ಒಂದು ಹೇಳಿಕೆ ಕೊಟ್ಟರು. ” ಬಿಜೆಪಿಗೆ ಅವಮಾನ ಆಗುವ ಸಂಧರ್ಭ ಗಳಲ್ಲಿ ಬಾಂಬ್ ಸ್ಪೋಟ ನಡೆಯುತ್ತಿದೆ ಹಾಗಾಗಿ ರೆಡ್ಡಿಯ ಬಂಧನದ ಸಂಧರ್ಭ ದಲ್ಲಿ ಈ ಸ್ಪೋಟ ನಡೆದಿರುವುದು ಹಲವಾರು ಉಹಾಪೋಹಗಳಿಗೆ ಎಡೆ ಮಾಡಿಕೊಡುತ್ತಿದೆ. ಕರ್ನಲ್ ಪುರೋಹಿತ್ ಮತ್ತು ಸಾಧ್ವಿ ಪ್ರಜ್ಯಾ ಸಿಂಗ್ ನಡೆಸಿದ ಬಾಂಬ್ ಸ್ಪೋಟಗಳೇ ಇದಕ್ಕೆ ಸಾಕ್ಷಿ. ಅಣ್ಣಾ ಹಜಾರೆ ಮತ್ತು ರೆಡ್ಡಿ ಬಂಧನದ ಅಬ್ಬರ ಗಳಿಗಿಂತ ಹೆಚ್ಚಿನರೀತಿಯಲ್ಲಿ ಬಿಜೆಪಿ ದೇಶ ಭಕ್ತರು ಕಿರುಚಾಟಗಳನ್ನು ಶುರುಮಾಡ್ತಾರೆ ನೋಡ್ತಾಯಿರಿ” ಎಂದು ಎರಡು ಲೈನ್ ಬರೆದು ತಮ್ಮ ಮನಸ್ಸಿನಲ್ಲಿರುವ ಅಸಹ್ಯವನ್ನು ಹೊರಹಾಕಿದರು.
ಸ್ನೇಹಿತರೇ ನಾವು ಗಮನಿಸ ಬೇಕಾದ ಮುಖ್ಯವಾದ ಅಂಶವೆಂದರೆ ಈಗ ನಡೆಯುತ್ತಿರುವುದು ಭಯೋತ್ಪಾದಕರು ಮತ್ತು ಭಾರತ ದೇಶದ ಮಧ್ಯೆ ಯುದ್ದ, ಈ ಯುದ್ದ ದಲ್ಲಿ ಭಯೋತ್ಪಾದಕರು ವಿಜಯಿಯಾಗುತಿದ್ದಾರೆ. ಈ ಭಯೋತ್ಪಾದನೆ ಕೃತ್ಯಗಳನ್ನ ಯಾವುದೇ ದೇಶ ಸುಮ್ಮನೆ ಸಹಿಸಿ ಕೊಳ್ಳುವುದಿಲ್ಲ. ಹಾಗು ಕೃತ್ಯ ನಡೆಸಿದವರಿಗೆ ಸರಿಯಾದ ಶಿಕ್ಷೆ ಕೊಡುವ ವ್ಯವಸ್ಥೆ ಬೇರೆ ದೇಶಗಳಲ್ಲಿದೆ. ಒಂದು ಸಣ್ಣ ಪ್ರಮಾದ ದಿಂದ ಬೆಂಗಳೂರಿನ ವೈದ್ಯ ಹನೀಫ್ ಆಸ್ಟ್ರೇಲಿಯಾದಲ್ಲಿ ಹೇಗೆ ನರಳಿದ ಎಂದು ನಮಗೆ ಗೊತ್ತಿಲ್ಲವೆ.
ಪಕ್ಷಗಳನ್ನು ಸಮರ್ಥಿಸಿಕೊಂಡು ಜಗಳವಾಡುವ ಸಮಯ ಇದಲ್ಲ. ಸುಮ್ಮನೆ ವಿತಂಡವಾದ ಮಾಡಿ ಎಲ್ಲದಕ್ಕು ಒಂದೊಂದು ಸಂಭಂದ ಕಲ್ಪಿಸಿ ನಿಮ್ಮ ಹೊಲಸನ್ನು ಕಾರಬೇಡಿ. ನಿಮ್ಮ ಭಂಡತನದ ನಿಲುವುಗಳು ಏನೆಂದು ಅಣ್ಣಾ ಹಜಾರೆ ಹೋರಾಟದ ಸಂಧರ್ಭದಲ್ಲಿ ನಮ್ಮ ಭಾರತದ ಎಲ್ಲ ಸತ್ಪ್ರಜೆಗಳಿಗೆ ಗೊತ್ತಾಗಿವೆ.
ಒಸಾಮಾ – ಒಬಾಮಾ…!
– ಡಾ.ಅಜಕ್ಕಳ ಗಿರೀಶ್ ಭಟ್
ಅಂತೂ ಅಮೆರಿಕ ಒಸಾಮಾನನ್ನು ಕೊಂದಿದೆ ಅನ್ನುವುದನ್ನು ಅದು ಅಧಿಕೃತವಾಗಿ ಘೋಷಿಸಿದೆ. ಹೀಗೆ ಕೊಲ್ಲುವುದು ಅಮೆರಿಕಕ್ಕೆ ಏನೂ ಕಷ್ಟದ ಸಂಗತಿಯಲ್ಲ. ಅದು ಅದನ್ನು ದಕ್ಕಿಸಿಕೊಳ್ಳಬಲ್ಲುದು. ಆದರೆ ಹಲವು ಪ್ರಶ್ನೆಗಳು ಎಲ್ಲರ ಮನಸ್ಸಲ್ಲೂ ಏಳುವುದು ಸಹಜ. ಕೆಲದಿನಗಳಾದ ನಂತರ ಆ ಪ್ರಶ್ನೆಗಳನ್ನು ಎಲ್ಲರೂ ಮರೆಯುತ್ತಾರೆ ಅನ್ನೋದು ಕೂಡ ನಮಗೆಲ್ಲ ಗೊತ್ತು.ನಾವು ಕೂಡ ಮರೀತೇವೆ.ಹಾಗೆ ಮರೆಯುವುದು ನಮ್ಮ ಮಾನಸಿಕ ಆರೋಗ್ಯಕ್ಕೆ ಅತ್ಯಂತ ಮುಖ್ಯ.ಆದರೂ ಈಗ ಮನಸಲ್ಲಿ ಬಂದ ಆಲೋಚನೆಗಳಲ್ಲಿ ಕೆಲವನ್ನು ಮರುನೆನೆದುಕೊಳ್ಳುತ್ತೇನೆ.ಇವು ನನ್ನ ಮನಸಲ್ಲಿ ಮಾತ್ರ ಬಂದ ಪ್ರಶ್ನೆಗಳಲ್ಲವಾದ್ದರಿಂದ ಈ ಪ್ರಶ್ನೆಗಳ ಬಗ್ಗೆ ನಾನು ಯಾವುದೇ ಕಾಪಿರೈಟ್ ಕ್ಲೈಮ್ ಮಾಡುವುದಿಲ್ಲ!!!
ನೋಡಿ,ಇದು ಅನ್ಯಾಯವಲ್ಲವೇ? ವ್ಯಕ್ತಿಯನ್ನು ವಿಚಾರಣೆಯಿಲ್ಲದೆ ಕೊಲ್ಲುವುದು ನ್ಯಾಯವೇ?
ಆಧುನಿಕ ನ್ಯಾಯಶಾಸ್ತ್ರದಲ್ಲಿ ಎಲ್ಲಾದರೂ ವಿಚಾರಣೆಯಿಲ್ಲದೆ ಹೀಗೆ ಶಿಕ್ಷೆ ನೀಡುವುದನ್ನು ಸಮರ್ಥಿಸಲಾಗಿದೆಯೇ? ಲಾಡೆನ್ ಗೆ ಫೇರ್ ಟ್ರಯಲ್ ನೀಡಲಾಗಿಲ್ಲ. ಅವನನ್ನು ಯಾವ ಕೋರ್ಟಿನಲ್ಲಿ ವಿಚಾರಣೆ ಮಾಡಲಾಗಿದೆ? ತಾನು ಕೊಲೆ ಮಾಡಿದ್ದೇನೆ ಅಂತ ಒಬ್ಬ ವ್ಯಕ್ತಿ ಹೇಳಿದ ಕೂಡಲೇ ಯಾವ ಕೋರ್ಟು ಕೂಡ ವಿಚಾರಣೆಯಿಲ್ಲದೆ ಆ ವ್ಯಕ್ತಿಯನ್ನು ಗಲ್ಲಿಗೆ ಹಾಕುವುದಿಲ್ಲ. ಹಾಗಿರುವಾಗ ,ಅಮೆರಿಕವಿರಬಹುದು ಅಥವಾ ಅದರಪ್ಪನಿರಬಹುದು, ಕಾನೂನನ್ನು ಕೈಗೆ ತೆಗೆದುಕೊಳ್ಳುವುದೆಂದರೇನು? ಓಯ್!! ಅಮ್ನೆಸ್ಟಿ ಇಂಟರ್ ನ್ಯಾಷನಲ್ ಅನ್ನುವ ಸಂಸ್ಥೆಯವರೇ!!!ಎಲ್ಲಿದ್ದೀರಿ? ಒಸಾಮಾನ ಮಾನವ ಹಕ್ಕಿಗೆ ಬೆಲೆ ಇಲ್ಲವೇ???





