ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಂಕುತಿಮ್ಮನ ಕಗ್ಗ’

29
ಮಾರ್ಚ್

ಮಂಕುತಿಮ್ಮನ ಕಗ್ಗ – ರಸಧಾರೆ (೧೩)

– ರವಿ ತಿರುಮಲೈ

ಪುರುಷಸ್ವತಂತ್ರತೆಯ ಪರಮಸಿದ್ಧಿಯದೇನು ?I
ಧರಣಿಗನುದಿನದ ರಕ್ತಾಭಿಷೇಚನೆಯೇ? II
ಕರವಾಲವನು ಪುಷ್ಪಸರವೆಂದು ಸೆಳೆದಾಡೆ I
ಪರಿಮಳವ ಸೂಸುವುದೆ ? – ಮಂಕುತಿಮಾ II

ಪುರುಷ=ಶಕ್ತಿ , ಪರಮ =ಸರ್ವೋಚ್ಚ, ಸಿದ್ಧಿ= ಪ್ರಯೋಜನ, ಧರಣಿ= ಭೂಮಿ, ಅನುದಿನ=ಪ್ರತಿನಿತ್ಯ ,
ಅಭಿಷೇಚನೆ = ಅಭಿಷೇಕ , ಕರವಾಲ=ಕತ್ತಿ,  ಸೆಳೆದಾಡೆ = ಎಳೆದಾಡಿದರೆ,   ಪರಿಮಳ = ಸುಗಂಧ.

ಪುರುಷ ಸ್ವತಂತ್ರತೆಯು ಪರಮ ಸಿದ್ಧಿಯದೇನು ಧರಣಿಗೆ ಅನುದಿನವೂ ರಕ್ತಾಭಿಷೇಚನೆಯೇ
ಕರವಾಲವನು ಪುಷ್ಪಸರವೆಂದು ಸೆಳೆದಾಡೆ ಪರಿಮಳವ ಸೂಸುವುದೆ-ಮಂಕುತಿಮ್ಮ.

ಆಗ ನಡೆಯುತ್ತಿದ್ದ ಯುದ್ದ, ಯುದ್ದದಿಂದ ಆಗುತ್ತಿದ್ದ ದುಷ್ಪರಿಣಾಮಗಳು, ಇವುಗಳ ಬಗ್ಗೆ ಮನಕರಗಿ ಭಾವುಕರಾದ ಮಾನ್ಯ ಗುಂಡಪ್ಪನವರು ಶಕ್ತಿಯ ಸ್ವಾತಂತ್ರದ ಸರ್ವೋಚ್ಚ ಗುರಿ, ಈ ಭೂಮಿಗೆ ಪ್ರತಿದಿನವೂ ರಕ್ತದ ಅಭಿಷೇಕವೇ, ಒರೆಯಿಂದ ಕತ್ತಿಯನ್ನು ಹೂವಿನ ಮಾಲೆ ಎಂದು ಎಳೆದರೆ ಅದರಿಂದ ಸುಗಂಧ ಬರಬಹುದೇ ಎನ್ನುತ್ತಾರೆ.

ಮತ್ತಷ್ಟು ಓದು »

28
ಮಾರ್ಚ್

ಮಂಕುತಿಮ್ಮನ ಕಗ್ಗ – ರಸಧಾರೆ (೧೨)

– ರವಿ ತಿರುಮಲೈ

ಮಾನವರೋ ದಾನವರೋ ಭೂಮಾತೆಯನು ತಣಿಸೆ
ಶೋಣಿತವನೆರೆಯುವರು ಬಾಷ್ಪಸಲುವುದಿರೆ?
ಏನು ಹಗೆ! ಏನು ಧಗೆ!ಏನು ಹೊಗೆ! ಯೀ ಧರಿಣಿ
ಸೌನಿಕನ ಕಟ್ಟೆಯೇಂ? – ಮಂಕುತಿಮ್ಮ

ಶೋಣಿತವನೆರೆಯುವರು= ಶೋಣಿತವನು+ ಎರೆಯುವರು/ಬಾಷ್ಪಸಲುವುದಿರೆ= ಭಾಷ್ಪ+ಸಲುವುದು+ಇರೆ

ಶೋಣಿತ= ರಕ್ತ, ಭಾಷ್ಪ = ಕಣ್ಣೀರು, ಎರೆಯುವುದು= ಸುರಿಸುವುದು, ಸಲುವುದಿರೆ= ಸುರಿಸಬೇಕಾದರೆ. ಸೌನಿಕ =

ಕಟುಕ, /ಕಟ್ಟೆ= ಜಗುಲಿ.

ಇವರೇನು ಮನುಷ್ಯರೋ ಅಥವಾ ರಾಕ್ಷಸರೋ? ಈ ಭೂಮಾತೆಯನು ತಣಿಸಲು ಅಂದರೆ ದಾಹವಿಂಗಿಸಲು ಕಣ್ಣೀರು ಸುರಿಸುವ ಬದಲು ರಕ್ತವನ್ನು ಸುರಿಸಿಹರಲ್ಲ! ಈ ಪ್ರಪಂಚದಲ್ಲಿನ ಹಗೆ ಮತ್ತು ಹೊಗೆಗಳನ್ನು ನೋಡಿದರೆ ಇಡೀ ಪ್ರಪಂಚವೇ ಕಟುಕನ ಜಗುಲಿಯಂತಿದೆ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು.
ಮತ್ತದೇ ಯುದ್ಧದ ಸನ್ನಿವೇಶವನ್ನು ಈ ಕಗ್ಗದಲ್ಲೂ ಉಲ್ಲೇಖಿಸುತ್ತಾರೆ, ಶ್ರೀ ಗುಂಡಪ್ಪನವರು. ಪಾಪ ಅವರ ಮನ ಎಷ್ಟು ನೊಂದಿತ್ತೋ ಏನೋ? ಇಲ್ಲದಿದ್ದರೆ ಅಂದಿನ ವರ್ತಮಾನ ಸ್ಥಿತಿಗೆ ಇಷ್ಟೊಂದು ಪ್ರತಿಕ್ರಿಯೆ ಬರುತಿತ್ತೆ.
ಮತ್ತಷ್ಟು ಓದು »

27
ಮಾರ್ಚ್

ಮಂಕುತಿಮ್ಮನ ಕಗ್ಗ – ರಸಧಾರೆ (೧೧)

– ರವಿ ತಿರುಮಲೈ

ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ I
ಮೃತ್ಯುಕುಣಿಯುತಲಿಹನು ಕೇಕೆಹಾಕುತಲಿ II
ಸುತ್ತಿಪುದು ತಲೆಯನನುದಿನದ ಲೋಕದ ವಾರ್ತೆ I
ಎತ್ತಲಿದಕೆಲ್ಲ ಕಡೆ? – ಮಂಕುತಿಮ್ಮ II

ಮುತ್ತಿರುವುದು ಇಂದು ಭೂಮಿಯನು ಅದೊಂದು ದುರ್ದೈವ
ಮೃತ್ಯು ಕುಣಿಯುತಲಿಹನು ಕೇಕೆ ಹಾಕುತಲಿ.
ಸುತ್ತಿಪುದು ತಲೆಯನು ಅನು ದಿನವು ಲೋಕದ ವಾರ್ತೆ
ಎತ್ತಲಿದಕೆಲ್ಲ ಮಂಕು ತಿಮ್ಮ

ಸುತ್ತಿಪುದು = ಸುತ್ತಿಸುತ್ತದೆ , ಅನುದಿನವು= ಪ್ರತಿನಿತ್ಯವು, ಎತ್ತಲಿದಕೆಲ್ಲ = ಇದಕ್ಕೆಲ್ಲ ಎಲ್ಲಿ.

ಮತ್ತಷ್ಟು ಓದು »