ಮಂಕು ತಿಮ್ಮನ ಕಗ್ಗ – ರಸಧಾರೆ (೯)
– ರವಿ ತಿರುಮಲೈ
ಏನು ಭೈರವಲೀಲೆಯೀ ವಿಶ್ವಭ್ರಮಣೆ!
ಏನು ಭೂತಗ್ರಾಮನರ್ತನೋನ್ಮಾದ ! I
ಏನಗ್ನಿ ಗೋಳಗಳು ! ಏನಂತರಾಳಗಳು !
ಏನು ವಿಸ್ಮಯ ಸೃಷ್ಟಿ! – ಮಂಕುತಿಮ್ಮ II
ಭೈರವಲೀಲೆಯೀ = ಭೈರವ+ ಲೀಲೆಯು+ಈ , ಭೂತಗ್ರಾಮನರ್ತನೋನ್ಮಾದ = ಭೂತ+ಗ್ರಾಮ+ನರ್ತನ+ಉನ್ಮಾದ, ಏನಗ್ನಿ= ಏನು+ ಅಗ್ನಿ
ಬೈರವ= ಪರಮ ಶಿವ, ರುದ್ರ, ಉನ್ಮಾದ = ಉದ್ವೇಗ, ಗೋಳ = ಉಂಡೆ, ವಿಸ್ಮಯ= ಆಶ್ಚರ್ಯ.
ಮಂಕು ತಿಮ್ಮನ ಕಗ್ಗ – ರಸಧಾರೆ (೮)
– ರವಿ ತಿರುಮಲೈ
ಏನು ಜೀವನದರ್ಥ?
ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ?
ಭ್ರಮಿಪುದೇನಾಗಾಗ ಕರ್ತೃವಿನ ಮನಸು?
ಮಮತೆಯುಳ್ಳವನಾತನಾದೊಡೀ ಜೀವಗಳು
ಶ್ರಮಪಡುವುದೇಕಿಂತು -ಮಂಕುತಿಮ್ಮ ?
ಕ್ರಮವು ಒಂದು ಲಕ್ಷ್ಯವು ಒಂದು ಉಂಟೇನು ಸೃಷ್ಟಿಯಲಿ ಭ್ರಮಿಪುದು ಅದೇನು ಆಗಾಗ ಕರ್ತೃವಿನ ಮನಸು
ಮಮತೆಯುಳ್ಳವನು ಆತನು ಆದೊಡೆ ಜೀವಗಳು ಶ್ರಮಪದುವುದೇಕೆ ಇಂತು – ಮಂಕುತಿಮ್ಮ
ಮಂಕು ತಿಮ್ಮನ ಕಗ್ಗ – ರಸಧಾರೆ (೭)
– ರವಿ ತಿರುಮಲೈ
ಏನು ಜೀವನದರ್ಥ?
ಬದುಕಿಗಾರ್ ನಾಯಕರು, ಏಕನೋ ಅನೇಕರೋ?
ವಿಧಿಯೋ ಪೌರುಷವೋ ಧರುಮವೋ ಅಂಧಬಲವೋ?
ಕುದುರುವುದೆಂತು ಈಯವ್ಯವಸ್ಥೆಯ ಪಾಡು?
ಅದಿಗುದಿಯೆ ಗತಿಯೇನೋ? – ಮಂಕುತಿಮ್ಮ
ಬದುಕಿಗಾರ್= ಬದುಕಿಗೆ=ಯಾರ್, ಧರುಮವೋ= ಧರ್ಮವೋ, ಅಂಧಬಲವೋ= ಅಂಧ ಶ್ರದ್ಧೆಯೋ, ಈಯವ್ಯವಸ್ಥೆಯ = ಈ + ಅವ್ಯವಸ್ಥೆಯ, ಅದಿಗುದಿ = ಸಂದೇಹ ಅಥವಾ ತಳಮಳ.
ಈ ಬದುಕಿಗೆ ಯಾರು ನಾಯಕರು? ಒಬ್ಬನೇ ಒಬ್ಬನೋ ಅಥವಾ ಅನೇಕರಿದ್ದಾರೆಯೋ? ಅಥವಾ ಈ ಬದುಕಿಗೆ ನಾಯಕ, ವಿಧಿಯೋ,ಧರ್ಮವೋ,ಅಥವಾ ಅಂಧ ಶ್ರದ್ಧೆಯೋ? ಹಿಂದಿನ ಕಗ್ಗದಲ್ಲಿ ಉಲ್ಲೇಖಿಸಿರುವ ಅವ್ಯವಸ್ಥೆ ಸರಿಯಾಗುವುದೋ ಇಲ್ಲವೋ? ಅಥವಾ ಇವೆಲ್ಲರದರ ವಿಚಾರದ ತಳಮಳದಲ್ಲಿಯೇ ನಾವು ಯಾವಾಗಲೂ ಇರಬೇಕೆ? ಈ ರೀತಿಯ ಪ್ರಶ್ನೆಗಳನ್ನು ಸನ್ಮಾನ್ಯ ಡಿ ವಿ ಗುಂಡಪ್ಪನವರು ತಮ್ಮನ್ನೇ ತಾವು ಕೇಳಿಕೊಳ್ಳುತ್ತಾ, ಓದುಗರ ಮುಂದೆ ಪ್ರಸ್ತಾಪಿಸುತ್ತಾರೆ.
ಮತ್ತಷ್ಟು ಓದು 




