ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಡೆಸ್ನಾನ’

18
ಡಿಸೆ

ಪ್ರತ್ಯೇಕ ಪಂಕ್ತಿ ಭೋಜನ ನಿಂತರೆ ಮಡೆ ಸ್ನಾನವೂ ನಿಂತೀತು

– ರಾಕೇಶ್ ಶೆಟ್ಟಿ

Pratyeka Ootaಉಡುಪಿಯ ಕೃಷ್ಣ ತಿರುಗಿ ನಿಂತಷ್ಟು ಸುಲಭವಲ್ಲ ’ಮಡೆ ಸ್ನಾನ’ ನಿಲ್ಲುವುದು…! ಅಂತ ವರ್ಷದ ಹಿಂದೆ ಮಡೆಸ್ನಾನ ಅನ್ನುವ ವಿಕೃತಿಯನ್ನು ವಿರೋಧಿಸಿ ಬರೆದಿದ್ದು ನಿಜವಾಗಿದೆ.ನಿನ್ನೆ ಮತ್ತೆ ಕುಕ್ಕೆಯಲ್ಲಿ ಮಡೆಸ್ನಾನ ಸಾಂಗೋಪಾಂಗವಾಗಿ ನೆರವೇರಿದೆ.ತಾವು ತಿಂದು ಬಿಡುವ ಎಂಜಲ ಮೇಲೆ ಮನುಷ್ಯರು ಹೊರಳಾಡುತ್ತಾರೆ ಅಂತ ಗೊತ್ತಿದ್ದು ಉಣ್ಣುವ ರೋಗಗ್ರಸ್ತ ಅಹಂ ಮನಸ್ಸುಗಳು ಮತ್ತು ಇನ್ನೊಬ್ಬರ ಎಂಜಲೆಲೆಯೇ ಪರಮ ಪವಿತ್ರ ಅನ್ನುವ ಮೂಢರು ಎಂಜಲೆಲೆಯ ಸ್ನಾನದಲ್ಲಿ ಮಿಂದು ಪುನೀತರಾಗಿದ್ದಾರೆ.

ಇನ್ನೊಂದೆಡೆ “ನಾವೆಲ್ಲ ಹಿಂದೂ,ನಾವೆಲ್ಲ ಒಂದು” ಅನ್ನುವವರೆಲ್ಲ ಸದ್ದಿಲ್ಲದೆ ಹಿಂದೆಯೇ ನಿಂತು ಎಂಜಲೆಲೆಯ ಮೇಲೆ ದೇವರ ಹೆಸರಿನ ನಂಬಿಕೆ(ಹೆದರಿಕೆ?)ಯಲ್ಲಿ ಜಾಗೃತರಲ್ಲದವರನ್ನು ಉರುಳಾಡಿಸಿ ಕೃತಾರ್ತರಾಗಿದ್ದಾರೆ.ಅಲ್ಲಿಗೆ “ನಾವೆಲ್ಲ ಹಿಂದೂ – ನಾವಿನ್ನೂ ಹಿಂದು” ಎನ್ನಲಡ್ಡಿಯಿಲ್ಲ ಅಲ್ಲವೇ?

ಮತ್ತಷ್ಟು ಓದು »

15
ಡಿಸೆ

ಮೂಢನಂಬಿಕೆಗಳು ಅಂಧಾನುಕರಣೆಯೇ ?

-ರಾವ್ ಎವಿಜಿ

ಮೂಢನಂಬಿಕೆ ಎಂದರೇನು? ಈ ಪ್ರಶ್ನೆ ನನ್ನಲ್ಲಿ ಉದ್ಭವಿಸಲು ಕಾರಣವಾದದ್ದು ಹಾಲಿ ಅಸ್ತಿತ್ವದಲ್ಲಿ ಇರುವ ಕೆಲವು ಮತೀಯ ಆಚರಣೆಗಳ ಪರ-ವಿರೋಧ ವಾದಗಳು. ಇದಕ್ಕೆ ಸಂಬಂಧಿಸಿದಂತೆ ನನ್ನ ಗಮನ ಸೆಳೆದ ಪತ್ರಿಕೆಗಳಲ್ಲಿ ವರದಿ ಆದ ಮತೀಯ ಆಚರಣೆಗಳು ಇವು:

(೧) ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಲು ಹಿಂದಿನಿಂದ ಆಚರಣೆಯಲ್ಲಿ ಇರುವ ‘ಬ್ರಾಹ್ಮಣರು ಉಂಡೆದ್ದ ಎಂಜಲೆಲೆಗಳ ಮೇಲೆ ಉರುಳು ಸೇವೆ ಮಾಡುವ ಮಡೆಸ್ನಾನ ಪದ್ಧತಿ’

(೨) ಗುಲ್ಬರ್ಗ ಜಿಲ್ಲೆಯಲ್ಲಿ ಆಚರಣೆಯಲ್ಲಿ ಇರುವ ‘ಸೂರ್ಯಗ್ರಹಣ ಕಾಲದಲ್ಲಿ ಸುಮಾರು ೬ ತಾಸು ಕಾಲ ಮಕ್ಕಳನ್ನು ಆಂಗವೈಕಲ್ಯದ ನಿವಾರಣೆಗಾಗಿ ಕುತ್ತಿಗೆಯ ತನಕ ಭೂಮಿಯಲ್ಲಿ ಹುಗಿದಿರಇಸುವ ಪದ್ಧತಿ’

(೩) ಮಹಾರಾಷ್ಟ್ರದ ಶೋಲಾಪುರದಲ್ಲಿ ಆಚರಣೆಯಲ್ಲಿ ಇರುವ  ‘ಸುಮಾರು  ೫೦ ಅಡಿ ಎತ್ತರದಿಂದ ಹಸುಗೂಸುಗಳನ್ನು ಕೆಳಗೆ ಬಿಗಯಾಗಿ ಎಳದು ಹಿಡಿದುಕೊಂಡಿರುವ ಬೆಡ್ ಶೀಟಿಗೆ ಎತ್ತಿ ಹಾಕುವ ಪದ್ಧತಿ’

(೪) ತಮಿಳುನಾಡಿನಲ್ಲಿ ಆಚರಣೆಯಲ್ಲಿ ಇರುವ ‘ಗಲ್ಲದ ಮೂಲಕ ಚೂಪಾದ ದಬ್ಬಳದಂಥ ಸಾಧನಗಳನ್ನು, ಬೆನ್ನಿನ ಚರ್ಮಕ್ಕೆ ಕಬ್ಬಿಣದ ಕೊಕ್ಕೆಗಳನ್ನು ಸಿಕ್ಕಿಸಿಕೊಂಡು ಆವೇಶದಿಂದ ಕುಣಿಯುವ ಕಾವಡಿ ಆಟಮ್ ಪದ್ಧತಿ’

(೫) ಭಾರತದ ಗಡಿಗೆ ತಾಗಿಕೊಂಡಿರುವ ನೇಪಾಳದ ಹಳ್ಳಿಯೊಂದರಲ್ಲಿ  ೫ ವರ್ಷಕ್ಕೊಮ್ಮೆ ಜರಗುವ ಹಿಂದೂ ಹಬ್ಬದಲ್ಲಿ ಸುಮಾರು ೨೫೦೦೦೦ ಕ್ಕೂ ಅಧಿಕ ಪ್ರಾಣಿಗಳನ್ನು (ವಿಶೇಷತಃ ಎಮ್ಮೆಗಳನ್ನು) ಬಲಿ ಕೊಡುವ ಪದ್ಧತಿ

(೬) ಒರಿಸ್ಸಾದ ಕೆಲವೆಡೆ ಆಚರಣೆಯಲ್ಲಿ ಇರುವ ‘ಪುಟ್ಟ ಬಾಲಕರನ್ನು ನಾಯಿಯೊಂದಿಗೆ ಮದುವೆ ಮಾಡುವ ಪದ್ಧತಿ’

(೭) ಚಾಮರಾಜನಗರ ಜಿಲ್ಲೆಯಲ್ಲಿ ಸುಬ್ರಹ್ಮಣ್ಯ ಷಷ್ಠಿಯಂದು ಆಚರಿಸುವ ‘ಹುತ್ತಕ್ಕೆ ಪೂಜೆ ಸಲ್ಲಿಸಿ ಅದರ ಮೇಲೆ ಒಂದು ಕೋಳಿಮೊಟ್ಟೆ ಇಟ್ಟು (ಸಾಮಾನ್ಯವಾಗಿ ಹೆಂಗಸರು) ಕೋಳಿಯ ಕತ್ತು ಕೊಯ್ದು ಬಿಸಿರಕ್ತ ಸುರಿಯುವ ಪದ್ಧತಿ’

ಇಲ್ಲಿ ನಮೂದಿಸಿರುವ ಪ್ರತೀ ಆಚರಣೆಯನ್ನು ಸಮರ್ಥಿಸಿಕೊಳ್ಳಲು ‘ಅನಾದಿಕಾಲದಿಂದಲೂ ಆಚರಣೆಯಲ್ಲಿದೆ’, ‘ಆಚರಣೆಯಿಂದ ಅನೇಕರಿಗೆ ಒಳ್ಳೆಯದಾಗಿದೆ’, ‘ಅನೇಕರಿಗೆ ರೋಗ ವಾಸಿ ಆಗಿದೆ’ ‘ನಮಗೆ ಮನಶ್ಶಾಂತಿ ದೊರೆತಿದೆ’, ‘ಇತರರಿಗೆ ತೊಂದರೆ ಕೊಡುವುದಿಲ್ಲ’ ಮುಂತಾದ ವಾದಗಳನ್ನು ಮುಂದಿಡುತ್ತಾರೆ. ಇವುಗಳನ್ನು ‘ಆಧ್ಯಾತ್ಮಿಕ ಪ್ರತೀಕಗಳಾಗಿ’ ಏಕೆ ಪರಿಗಣಿಸ ಬೇಕು ಅನ್ನುವುದನ್ನು ವಿವರಿಸುವುದೂ ಉಂಟು. ಇವು ‘ಅಮಾನವೀಯ’, ‘ಅನಾಗರೀಕ’. ‘ವೈದಿಕ ಸಂಪ್ರದಾಯವಾದಿಗಳು ಅರ್ಥಾತ್ ಬ್ರಾಹ್ಮಣ ವರ್ಗದವರು ಹಿಂದುಳಿದವರನ್ನೂ ದಲಿತರನ್ನೂ ಶೋಷಿಸಲೋಸುಗವೇ ಹುಟ್ಟುಹಾಕಿ ಪೋಷಿಸಿಕೊಂಡು ಬಂದಿರುವ ಮೂಢನಂಬಿಕೆಗಳು’ ಎಂದೆಲ್ಲ ವಿರೋಧಿಸುವವರೂ ಇದ್ದಾರೆ. ಇರುವ   ಅಸಂಖ್ಯ ಸ್ವಘೋಷಿತ ಮತ್ತು ಪರಂಪರಾಗತ ಮಠಾಧಿಪತಿಗಳ ಪೈಕಿ ಬಹುತೇಕರು ಈ ಕುರಿತು ‘ದಿವ್ಯಮೌನ’ ತಳೆದಿದ್ದಾರೆ, ಕೆಲವರು ‘ಇವೆಲ್ಲ ನಂಬಿಕೆಯ ಪ್ರಶ್ನೆಗಳು, ಬಲು ಹಿಂದಿನಿಂದ ಪರಂಪರಾಗತ ನಂಬಿಕೆಯನ್ನು ಪ್ರಶ್ನಿಸಿ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಸರಿಯಲ್ಲ’, ಆತ್ಮಸಂತೋಷಕ್ಕಾಗಿ ಅವರಿಗೆ ಸರಿ ಅನ್ನಿಸಿದ್ದನ್ನು ಮಾಡುವ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುವುದು ಸರಿಯೇ?’ ಅನ್ನುವುದರ ಮೂಲಕ ಈ ಆಚರಣೆಗಳನ್ನು ಪರೋಕ್ಷವಾಗಿ ಪೋಷಿಸುತ್ತಿದ್ದಾರೆ. ಮತ್ತಷ್ಟು ಓದು »

12
ಡಿಸೆ

ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ,ಜಾತಿಗಾಗಿಯಲ್ಲ

– ರಾಕೇಶ್ ಶೆಟ್ಟಿ

ಇದನ್ನ ಈ ದೇಶದ ಕರ್ಮ ಅಂತಲೇ ಅನ್ನಬೇಕೇನೋ,  ಅಂದುಕೊಂಡಂತೆ ‘ಮಡೆ ಸ್ನಾನ’ದ ‘ಮಡೆ'(ಮಡೆ=ಎಂಜಲು) ಉರುಳದವರ ಮೇಲೆಯೂ ಬೀಳುತ್ತಿದೆ.ಇಷ್ಟು ದಿನ ಉರುಳಾಡಿದ್ದು ಮನುಷ್ಯರಾದರೆ ಈಗ ಸಮಸ್ತ ಜಾತಿಗಳು ಬಿದ್ದು ಉರುಳಾಡುತ್ತಿವೆ.ಮಡೆ ಸ್ನಾನವನ್ನು ವಿರೋಧಿಸಿ ನಾನು ಈ ಹಿಂದೆ ಬರೆದ ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಲ್ಲಿ ‘ಅದು ಬ್ರಾಹ್ಮಣರ ಎಂಜಲೆಲೆ’ ಅನ್ನುವ ಕಾರಣಕ್ಕೆ ವಿರೋಧಿಸುತಿದ್ದಿರ ಅನ್ನುವಂತಹ ಪ್ರತಿಕ್ರಿಯೆಗಳು ಬ್ಲಾಗಿನಲ್ಲಿ/ಮಿಂಚೆಗಳ ಮೂಲಕ ಬಂದಿವೆ. ನನ್ನ ಲೇಖನದಲ್ಲೂ ಒಂದು ಮಾತನ್ನು ಸ್ಪಷ್ಟವಾಗಿ ಹೇಳಿದ್ದೆ, ಅದ್ಯಾವ ಜಾತಿಯವರು ತಿಂದು ಮತ್ತಿನ್ಯಾವಾ  ಜಾತಿಯವ ಅದರ ಮೇಲೆ ಉರುಳಾಡುವುದು ಅಷ್ಟೇ ಅಸಹ್ಯಕರ’  ಅಂತ.

ಅಂದರೆ,ಅದು ಕುಕ್ಕೆಯ ಮಡೆ ಸ್ನಾನವಿರಲಿ ಅಥವಾ ತುರುವೇಕೆರೆಯ ಮಡೆಸ್ನಾನವಿರಲಿ ಎರಡೂ ಅಸಹ್ಯಕರವೇ, ಎರಡೂ ಖಂಡನೀಯವೇ.ಮಡೆ ಸ್ನಾನದ ಪರ-ವಿರೋಧ ಮಾತನಾಡುವವರು ನೆನಪಿಡಬೇಕಾದದ್ದು ‘ಈ ಮಡೆಸ್ನಾನ ನಿಲ್ಲಬೇಕಾಗಿರುವುದು ಮಾನವೀಯತೆಗಾಗಿ ಹೊರತು ಜಾತಿಗಾಗಿಯಲ್ಲ’ ಅನ್ನುವುದು.

ಮತ್ತಷ್ಟು ಓದು »