ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಡೆ ಸ್ನಾನ’

3
ಡಿಸೆ

ಉಡುಪಿಯ ಕೃಷ್ಣ ತಿರುಗಿ ನಿಂತಷ್ಟು ಸುಲಭವಲ್ಲ ’ಮಡೆ ಸ್ನಾನ’ ನಿಲ್ಲುವುದು…!

– ರಾಕೇಶ್ ಶೆಟ್ಟಿ

 “ಮಡೆಸ್ನಾನ ಅಥವಾ ಎಂಜೆಲೆಲೆ ಮೇಲೆ ಉರುಳು ಸೇವೆ ಮಾಡುವುದನ್ನು ನಿಷೇಧಿಸುವುದರಿಂದ ಯಾವ ರೀತಿ ಲಾಭವೂ ಇಲ್ಲ ನಷ್ಟವೂ ಇಲ್ಲ. ನಾನು ಈ ವಿಷಯದಲ್ಲಿ ತಟಸ್ಥ ನೀತಿ ಅನುಸರಿಸುತ್ತೇನೆ”  ಹೀಗಂತ ಹೇಳಿರೋದು ಪೇಜಾವರಶ್ರೀಗಳು…!

ಒಂದು ಕಡೆ ದಲಿತ ಕಾಲೋನಿಗಳಲ್ಲಿ ಓಡಾಡಿ ಹಿಂದೂ ಧರ್ಮವನ್ನು ಉದ್ಧರಿಸುವ ಮತ್ತು ಮತಾಂತರವನ್ನ ವಿರೋಧಿಸುವ ಮಾತನಾಡುವ ಶ್ರೀಗಳಿಗೆ ಮಡೆಸ್ನಾನದಿಂದ ಯಾವ ಧರ್ಮಕ್ಕೆ,ಹೇಗೆ ನಷ್ಟವಾಗಬಹುದು ಮತ್ತು ಹಿಂದೂ ಅನ್ನುವ ಧರ್ಮದ ಬಗ್ಗೆ ಮಾಧ್ಯಮಗಳ ಮೂಲಕ ಜಗತ್ತಿಗೆ ಯಾವ ಸಂದೇಶ ತಲುಪಬಹುದು ಅನ್ನುವುದರ ಅರಿವಿರಲಿಕ್ಕಿಲ್ಲವಾ? ಇದ್ದರೆ ಈ ರೀತಿ ಮೈಗೆ ಎಣ್ಣೆ ಹಚ್ಚಿಕೊಂಡವರಂತೆ ಹೇಳಿಕೆ ನೀಡುತಿದ್ದರಾ?

’ಮಡೆ ಸ್ನಾನ’ ಅನ್ನುವ So Called ಧಾರ್ಮಿಕ ನಂಬಿಕೆ(!?) ನಡೆದುಕೊಂಡು ಬಂದ ಹಾದಿಗೆ ೪೦೦ ವರ್ಷಗಳ ಇತಿಹಾಸವಿದೆ.ಆದರೆ ತೀರಾ ಇದು ಮಾಧ್ಯಮಗಳಲ್ಲಿ ದೊಡ್ದ ಮಟ್ಟದ ಸುದ್ದಿ ಮಾಡಲಿಕ್ಕಾರಂಭಿಸಿದ್ದು ಬಹುಷಃ ಕಳೆದ ವರ್ಷದಿಂದಲೇ…! ಸದ್ಯ.ಈಗಲಾದರೂ ನಮ್ಮ ದನಿ ಕೇಳಿಬರುತ್ತಿದೆ ಅನ್ನುವ ಸಂತೋಷದ ಜೊತೆ ಜೊತೆಗೆ ಇಂತ ಅನಿಷ್ಟ ಪದ್ಧತಿಗಳಿಗೆ ಬ್ರೇಕ್ ಹಾಕಬೇಕಾದ ಸರ್ಕಾರ ಮತ್ತು ಸರ್ಕಾರದ ಸಚಿವರೇ ’ನೋ ಕಮೆಂಟ್ಸ್’ ಅನ್ನುವುದು ನೋಡಿ ಬೇಸರವೂ ಆಗುತ್ತದೆ.

ಮತ್ತಷ್ಟು ಓದು »