ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಹಾವೀರ ಚಕ್ರ’

8
ಆಗಸ್ಟ್

ಸುಮ್ಮ ಸುಮ್ಮನೆ ಬರಲಿಲ್ಲ ಕನ್ನಡಕ್ಕೆ ಮಹಾವೀರ ಚಕ್ರ ; ಇವರು ಮಹಾವೀರತೆಯ ಜೀವಂತ ಸ್ಮಾರಕ

– ಸಂತೋಷ್ ತಮ್ಮಯ್ಯ

9ದೇಶದ ಎರಡನೆಯ ಅತಿದೊಡ್ಡ ಶೌರ್ಯ ಪದಕ ಮಹಾವೀರ ಚಕ್ರ ಪದಕದ ಗೌರವಕ್ಕೆ ಪಾತ್ರರಾದ ಇಬ್ಬರು ಮಹಾಯೋಧರಲ್ಲಿ ಲೆ.ಕರ್ನಲ್ ಪಿ.ಎಸ್. ಗಣಪತಿ ಎರಡನೆಯವರು. ಅವರ ಬಗ್ಗೆ ಪತ್ರಿಕೆಗಳಲ್ಲಿ ಬಂದಿಲ್ಲ, ಟಿ ವಿ ಅವರ ಸಂದರ್ಶನ ನಡೆಸಿಲ್ಲ. ಅವರು ಸಭೆ ಸಮಾರಂಭಗಳಿಗೆ ಹೋಗಿಲ್ಲ. ಅವರ ಬಗ್ಗೆ ನಾಡಿನ ಜನಕ್ಕೆ ಏನೆಂದರೆ ಏನೂ ತಿಳಿದಿಲ್ಲ. ಅವರ ಸಂಪರ್ಕ ಸಂಖ್ಯೆ: 9980009687

ನೋಡಲು ಅದೊಂದು ಲೋಹದ ಬಿಲ್ಲೆ. ಅದರಲ್ಲಿ ನಕ್ಷತ್ರದ ಚಿಹ್ನೆ. ಅದರ ಅಂಚಿನಲ್ಲಿ ಕಂಡೂ ಕಾಣದಂತೆ ಕೆತ್ತಿದ ಪಡೆದವರ ಹೆಸರು, ಪಡೆದ ದಿನಾಂಕ. ಕದನಕ್ಕೆ ತೆರಳಿದ ಪ್ರತೀ ಯೋಧನಿಗೂ ಅದನ್ನು ಪಡೆಯುವ ಅದಮ್ಯ ಹಂಬಲ. ಏಕೆಂದರೆ ಅದು ವೀರತೆಯ ಪ್ರತೀಕ. ಹೆಸರು ಮಹಾವೀರ ಚಕ್ರ. ಯುದ್ಧಕಾಲದಲ್ಲಿ ಮಹಾಪರಾಕ್ರಮಕ್ಕೆ ನೀಡುವ ಎರಡನೆಯ ಅತೀ ದೊಡ್ಡ ಶೌರ್ಯ ಪ್ರಶಸ್ತಿ. ಬ್ರಿಟಿಷ್ ಸೈನ್ಯದಲ್ಲಿ ‘ಡಿಶ್ಟಿಂಗ್ವಿಸ್ಡ್ ಸರ್ವೀಸ್ ಕ್ರಾಸ್’ ಹೇಗೋ ಹಾಗೆ ಭಾರತಕ್ಕೆ ಈ ಮಹಾವೀರ ಚಕ್ರ. ಮಹಾ ಸಮರಪಡೆಯನ್ನು ಹೊಂದಿರುವ ಭಾರತದಲ್ಲಿ ೧೯೪೭ರಿಂದ ಇದುವರೆಗೆ ಮಹಾವೀರ ಚಕ್ರದ ಗೌರವಕ್ಕೆ ಪಾತ್ರರಾದವರು ಕೇವಲ ೨೧೮ ಮಂದಿ ವೀರರು. ಅವರಲ್ಲಿ ೬ ಜನ ಯೋಧರು ಮಹಾವೀರ ಚಕ್ರವನ್ನು ಎರಡೆರಡು ಬಾರಿ ಪಡೆದ ವೀರರಲ್ಲಿ ವೀರರು (MahaVira chakra bar). ಹೀಗಿರುವಾಗ ಭಾರತೀಯ ಸೈನ್ಯಕ್ಕೆ ಮಹಾಮಹಾ ಯೋಧರನ್ನು ನೀಡಿದ ನಮ್ಮ ಕರ್ನಾಟಕದಲ್ಲಿ ಇದನ್ನು ಪಡೆದವರಾರು ಎಂದು ನೋಡಿದರೆ ಕಾಣುವವರು ಕನ್ನಡದ ಇಬ್ಬರು ಮಹಾರ ಚಕ್ರಧರರು. ಅವರಲ್ಲೊಬ್ಬರು ‘ಟೈಗರ್ ಆಫ್ ಸರ್ಗೋದಾ’ ಎಂದು ಖ್ಯಾತರಾದ ಸ್ಕ್ವಾ.ಲೀ.ಅಜ್ಜಾಮಾಡ ಬಿ.ದೇವಯ್ಯ. ಮತ್ತೊಬ್ಬರು ಮೇ.(ನಂತರ ಲೆ.ಕರ್ನಲ್)ಪಿ.ಎಸ್ ಗಣಪತಿ. ಒಬ್ಬರು ಅಮರಯೋಧ. ಮತ್ತೊಬ್ಬರು ಮಹಾವೀರತೆಯ ಜೀವಂತ ಸ್ಮಾರಕ. ಮತ್ತಷ್ಟು ಓದು »