ವಿಷಯದ ವಿವರಗಳಿಗೆ ದಾಟಿರಿ

Posts tagged ‘ಮಾಹಿತಿ ಹಕ್ಕು’

12
ಮೇ

ರಾಜಕೀಯದ ‘ಬಂಡವಾಳ’

– ಸಂದೀಪ ಫಡ್ಕೆ, ಮುಂಡಾಜೆ

ಪಾರ್ಟಿ ಫಂಡ್ಅಧಿಕಾರದ ಚುಕ್ಕಾಣಿ ಹಿಡಿಯಲು, ರಾಜಕೀಯ ಪಕ್ಷಗಳಿಗೆ ಜನರ ಬೆಂಬಲ ಅವಶ್ಯಕ. ವಿವಿಧ ಆಶೋತ್ತರಗಳನ್ನು ಈಡೇರಿಸುವ ವಾಗ್ದಾನ ಮಾಡುವ ಇವರಿಗೆ, ಕಿಂಚಿತ್ತು ಸಹಾಯ ಮಾಡುವ ಅವಕಾಶ ನಮ್ಮ ಸಂವಿಧಾನ ಕೊಟ್ಟಿದೆ. ಪ್ರಜಾಪ್ರಭುತ್ವದ ದೃಷ್ಟಿಯಿಂದಲೂ, ನಾಗರಿಕರ ಹಕ್ಕು ಕೇವಲ ಮತದಾನಕಷ್ಟೇ ಸೀಮಿತವಾಗಬಾರದು. ಹಾಗಾಗಿ ಅರ್ಹ ವ್ಯಕ್ತಿ ಯಾ ಪಕ್ಷಕ್ಕೆ ದೇಣಿಗೆಯ ರೂಪದಲ್ಲಿ ಹಣದ ನೆರವನ್ನು ನೀಡಬಹುದು. ಆದರೆ, ಇತ್ತೀಚೆಗೆ ಸಂತ್ರಸ್ತರ ಪರಿಹಾರ ನಿಧಿಗೆ ಅಥವಾ ಸಮಾಜ ಸೇವೆಗೆ ಸಂದಾಯವಾಗುವ ಹಣಕ್ಕಿಂತ ಹೆಚ್ಚು ರಾಜಕೀಯ ಪಕ್ಷಗಳ ಪಾಲಾಗುತ್ತಿದೆ. ಸ್ವಾರ್ಥ ರಕ್ಷಣೆಗಾಗಿ, ಬೃಹತ್ ಉದ್ದಿಮೆದಾರರ ಕಪಿಮುಷ್ಠಿಯಲ್ಲಿ ಪಕ್ಷಗಳು ನಲುಗುತ್ತಿವೆ. ಇದರ ಇನ್ನೊಂದು ಮುಖವೆಂಬಂತೆ ಅಭ್ಯರ್ಥಿ ಯಾ ಪಕ್ಷಕ್ಕೆ ಹಣದ ಹೊಳೆ ಹರಿಯುತ್ತಿದೆ.

ಸ್ವಾತಂತ್ರ್ಯ ಪೂರ್ವದಲ್ಲೂ, ಉದ್ಯಮರಂಗ ಚುನಾವಣೆಯ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿತ್ತು. ಸದಸ್ಯತ್ವ ಶುಲ್ಕ ಮತ್ತು ವೈಯುಕ್ತಿಕ ದೇಣಿಗೆಯಿಂದ ಚುನಾವಣೆಯ ವೆಚ್ಚ ಭರಿಸಲು ಪಕ್ಷಗಳಿಗೆ ಸಾಧ್ಯವಾಗದೇ ಇದ್ದುದ್ದು ಇದಕ್ಕೆ ಪ್ರಮುಖ ಕಾರಣ. ಕಾಲಕ್ರಮೇಣ ಚುನಾವಣೆಯ ಸಿದ್ಧತೆ ಮತ್ತು ಕಾರ್ಯಗತಗೊಳಿಸುವುದು ದುಬಾರಿಯಾಗುತ್ತಾ ಹೋಯಿತು. 2009ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಗೆ ಸರ್ಕಾರ ಸುಮಾರು 1120 ಕೋಟಿ ರೂಪಾಯಿ ವ್ಯಯಿಸಿದೆ. ಅಲ್ಲದೇ, ವಿವಿಧ ಅಭ್ಯರ್ಥಿ ಮತ್ತು ಪಕ್ಷಗಳು ಒಟ್ಟು ಸುಮಾರು 14 ಸಾವಿರ ಕೋಟಿ ಖರ್ಚು ಮಾಡಿರುವುದು ಅಂದಾಜಿಸಲಾಗಿದೆ. ಹೀಗಾಗಿ, ರಾಜಕೀಯ ಪಕ್ಷಗಳು ಹೆಚ್ಚಿನ ಹಣವನ್ನು ಕಂಪನಿಗಳಿಂದ ಪಡೆಯುತ್ತಿವೆ. ಈ ಸಲುವಾಗಿ, 1960ರಲ್ಲಿ ಕಂಪನಿ ಕಾಯ್ದೆಯನ್ನು ಜಾರಿಗೊಳಿಸಲಾಯಿತು. ಕಂಪನಿಗಳು ನಿಗದಿತ ಮೊತ್ತದಷ್ಟು ಹಣವನ್ನು ಪಕ್ಷಗಳಿಗೆ ನೀಡಬಹುದೆಂದು ಕಾಯ್ದೆ ಉಲ್ಲೇಖಿಸಿತ್ತು. ಆದರೆ ಇದು ಸಣ್ಣ ಮತ್ತು ಮಧ್ಯಮ ಉದ್ಯಮಿಗಳ ಕೆಂಗಣ್ಣಿಗೆ ಗುರಿಯಾಯಿತು. ಸರ್ಕಾರ ಕೇವಲ ತನಗೆ ಸಹಕರಿಸಿದ ಬೃಹತ್ ಉದ್ದಿಮೆದಾರರ ಹಿತ ಕಾಪಾಡುವಲ್ಲಿ ಶಾಮೀಲಾಯಿತು. ಹೀಗೆ ಟೀಕೆಗೊಳಪಟ್ಟ ಕಾಯ್ದೆಗೆ 1969ರಲ್ಲಿ ತಿದ್ದುಪಡಿ ತರಲಾಯಿತು. ಈ ತಿದ್ದುಪಡಿ, ರಾಜಕೀಯ ಪಕ್ಷಗಳಿಗೆ ಹಣ ಪೂರೈಸುವುದು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಿತು. ಆದರೆ, ಈ ‘ದೇಣಿಗೆ’ಯಿಂದ ಪಕ್ಷ ಮತ್ತು ಕಂಪನಿಗಳಿಗೆ ಪ್ರಯೋಜನವಿತ್ತು. ಆದ್ದರಿಂದ, ಅಕ್ರಮವಾಗಿ ಹಣ ರವಾನಿಸುವ ಚಟುವಟಿಕೆಗಳು ಶುರುವಾದವು. 1985ರಲ್ಲಿ ಮತ್ತೊಂದು ತಿದ್ದುಪಡಿ ತರಲಾಯಿತಾದರೂ ಪರಿಣಾಮ ಬೀರಲಿಲ್ಲ.

ಮತ್ತಷ್ಟು ಓದು »

2
ನವೆಂ

ಕಳಪೆ ರಸ್ತೆ ಕಾಮಗಾರಿ ಮತ್ತು ಮಾಹಿತಿ ಹಕ್ಕು ಕಾನೂನು………..

– ಸುಬ್ರಮಣ್ಯ ಮಾಚಿಕೊಪ್ಪ

ಭ್ರಷ್ಟಾಚಾರದ ವಿರುದ್ದ ಹೋರಾಡಲು ಒಂದು ಹರಿತ ಆಯುಧಕ್ಕಾಗಿ ಉಪವಾಸ ಸತ್ಯಾಗ್ರಹಗಳೆಲ್ಲಾ ನಡೆದುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಇನ್ನು ಸಿದ್ದವಾಗಿ ಬರಲಿರುವ ಲೋಕಪಾಲ್ ಮಸೂದೆ ಎಷ್ಟು ಹರಿತವೋ ಎಂಬುದನ್ನು ಕಾಲವೇ ಹೇಳಬೇಕು. ಭ್ರಷ್ಟಾಚಾರದ ವಿರುದ್ದ ಹೋರಾಡಲು ಈಗಾಗಲೇ ಒಂದು (ಸಾಕಷ್ಟು ಹರಿತವಾದ) ಆಯುದವಿದೆಯೆಂದು ಎಷ್ಟು ಜನಕ್ಕೆ ಗೊತ್ತು?? ಆ ಆಯುದವನ್ನು ಉಪಯೋಗಿಸಿ“ಅಲ್ಲಿ ಎನು ನಡಿಯುತ್ತಿದೆ?” ಎಂದು ತಿಳಿದುಕೊಂಡು ಭ್ರಷ್ಟಾಚಾರದ ಆಳವನ್ನು ಕಾಣಬಹುದು ಎಂಬುದು ಎಷ್ಟು ಜನರಿಗೆ ಗೊತ್ತಿದೆ?? ಆ ಆಯುದದ ಹೆಸರು ನಿಮಗೆಲ್ಲಾ ಎಲ್ಲೋ ಕೇಳಿ ಗೊತ್ತಿರಬಹುದು. ನಿಮ್ಮಲ್ಲಿ ಕೆಲವರಾದರೂ ಅದನ್ನು ಉಪಯೋಗಿಸಿಯೂ ಉಪಯೋಗಿಸಿರಬಹುದು. (ಕಾಮೆಂಟ್ ನಲ್ಲಿ ನಿಮ್ಮ ಅನುಭವ ಹೇಳಬಹುದು).ಅದೇ ಮಾಹಿತಿ ಹಕ್ಕು ಎಂಬ ಕಾನೂನು!!! ಈ ಲೇಖನ ಓದಿದ ಮೇಲೆ ಒಂದಿಬ್ಬರು ಇದನ್ನು ಉಪಯೋಗಿಸಿ“ಅಲ್ಲಿ ಎನು ನಡಿಯುತ್ತಿದೆ” ಎಂದು ತಿಳಿದುಕೊಂಡು ಸಂಬಂದಪಟ್ಟವರಿಗೆ ದೂರು ಕೊಟ್ಟರೆ ಕಾಮಗಾರಿಗಳು ಸ್ವಲ್ಪವಾದರೂ ಸರಿಯಾಗುತ್ತದೆ ಎಂಬುದೇ ನನ್ನ ಆಶಯ ಹಾಗೂ ನನ್ನ ಅನುಭವ. (ಹಾಗೆಲ್ಲಾ ಕಾಟಾಚಾರಕ್ಕೆ ಏನೇನೋ ಮಾಡದಂತೆ ಸ್ವಲ್ಪವಾದರೂ ಸರಿಯಾಗಿ ಕೆಲಸಮಾಡುವಂತೆ ಚುರುಕು ಮುಟ್ಟಿಸುತ್ತದೆ).ನಮ್ಮೂರ ರಸ್ತೆಯೊಂದರ ಕಳಪೆ ಡಾಮರ್ ಕಾಮಗಾರಿ ನಡೆದಾಗ – ಈ ಮಾಹಿತಿ ಹಕ್ಕು ಕಾನೂನು ಉಪಯೋಗಿಸಿ – ಕಾಮಗಾರಿಯ ಎಸ್ಟಿಮೆಶನ್ ತರಿಸಿ – ದೂರು ಕೊಡುತ್ತೇವೆಂದಾಗ – ಜಿಲ್ಲಾಪಂಚಾಯತ್ ಇಂಜೀನಿಯರ್ ಮತ್ತು ರಸ್ತೆ ಕಂಟ್ರಾಕ್ಟರ್ ನಮ್ಮ ಮನೆಯವರೆಗೂ ಪಾದಬೆಳೆಸಿ – ತಪ್ಪಾಗಿದ್ದನ್ನು ಒಪ್ಪಿಕೊಂಡು – ರಸ್ತೆಗೆ ಹೊಸದಾಗಿ ಜಲ್ಲಿ ಟಾರಿನ ಒಂದು ಪದರ ಹಾಕಿದ ವಿಷಯವೇ ಈ ಬ್ಲಾಗಿನ ಬರಹ. ಮತ್ತಷ್ಟು ಓದು »