ಯುಗಾದಿಯ ತಗಾದೆ
– ನಾಗೇಶ್ ಮೈಸೂರು
ಗುಬ್ಬಣ್ಣ ‘ಗುರ್ರ್’ ಎಂದು ಏದುಸಿರಲ್ಲೆ ಭುಸುಗುಟ್ಟುತ್ತ, ಧುಮುಗುಟ್ಟುತ್ತಲೆ ಮನೆಯೊಳಗೆ ಕಾಲಿಟ್ಟಾಗ ಇಂದೇಕೊ ಅಪರೂಪಕ್ಕೆ ಗುಬ್ಬಣ್ಣನಿಗು ಕೋಪ ಬಂದಿರುವಂತಿದೆಯಲ್ಲ ಅನಿಸಿ ಕುತೂಹಲವಾಯ್ತು. ಸಹನೆಯಲ್ಲಿ ಸಾಧು ಸಂತರ ಅಪರಾವತಾರವಾದ ಗುಬ್ಬಣ್ಣ ಕೂಗಾಡಿದರು ಪೂಜೆಗೆ ದೇವರ ಮೇಲೆಸೆದ ಹೂವಂತಿರುವುದನ್ನು ಮಾತ್ರ ಕಂಡಿದ್ದ ನನಗೆ, ಅವನ ಈ ಅವತಾರ ಸ್ವಲ್ಪ ಹೊಸದು. ಅದರಲ್ಲು ಮನೆಯಲ್ಲಿ ನರಸಿಂಹಿಣಿಯವತಾರದ ‘ಫುಲ್ ಟೈಮ್ ಕಾಂಟ್ರಾಕ್ಟ್’ ಅನ್ನು ಅವನ ಶ್ರೀಮತಿಯೆ ಶ್ರದ್ಧಾಪೂರ್ವಕವಾಗಿ (ಬಲಾತ್ಕಾರವಾಗಿಯೆ), ವಹಿಸಿಕೊಂಡ ಮೇಲೆ ಗುಬ್ಬಣ್ಣ ಇನ್ನೂ ತೀರಾ ಸಾಧುವಾಗಿಬಿಟ್ಟಿದ್ದ. ಅದೇ ಹಿನ್ನಲೆಯಲ್ಲೆ,
‘ ಗುಬ್ಬಣ್ಣ… ಯಾಕೊ ಮುಖವೆಲ್ಲ ಕೆಂಪಗೆ ಚೆಂಡು ಮಲ್ಲಿಗೆಯಾಗಿಬಿಟ್ಟಿದೆ ? ಜ್ವರ ಗಿರ ಬಂದುಬಿಟ್ಟಿದಿಯಾ ಹೇಗೆ ? ಹುಷಾರಾಗಿದ್ದೀಯಾ ತಾನೆ ?’ ಎಂದೆ ಒಂದೆ ಉಸಿರಲ್ಲಿ.





