ವಿಷಯದ ವಿವರಗಳಿಗೆ ದಾಟಿರಿ

Posts tagged ‘ರೈಲು’

22
ಜೂನ್

ರಸಪ್ರಶ್ನೆಯಲ್ಲಿ ರೈಲು ಹಳಿಗಳಿಲ್ಲದ ಜಿಲ್ಲೆ ಯಾವುದು ಎಂದು ಕೇಳುತಿದ್ದಾಗಲೇ ಧೂರ್ತರಲ್ಲಿ ತಂತ್ರಗಾರಿಕೆಯೊಂದು ಹುಟ್ಟುತ್ತಿತ್ತು..

– ಶಿಲ್ಪಾ ನೂರೆರ

ಅಭಿವೃದ್ಧಿಗೆ ಮಾನದಂಡಗಳೇನು? ಅಷ್ಟಕ್ಕೂ ಅಭಿವೃದ್ಧಿ ಎಂದರೇನು? ಇರುವುದನ್ನೆಲ್ಲಾ ಗುಡಿಸಿ ಎಸೆದು ಮತ್ತೊಂದನ್ನು ಕಟ್ಟುವುದು ಅಭಿವೃದ್ಧಿಯೇ? ಸಹಜವಾದುದನ್ನು ನಾಶಮಾಡಿ ಕೃತಕವಾದದ್ದನ್ನು ಸೃಷ್ಟಿಸುವುದು ಅಭಿವೃದ್ಧಿ ಎನಿಸಿಕೊಳ್ಳುತ್ತದೆಯೇ? ಹಾಗಾದರೆ ಸಹಜವಾದುದನ್ನು, ಈ ಮೊದಲೇ ನೆಲೆಯಾದವುಗಳಿಗೆ ನಾನಾ ಕಿರೀಟಗಳನ್ನು ಕೊಟ್ಟು ಹೊಗಳಿ ಹೊನ್ನಶೂಲಕ್ಕೇಕೆ ಏರಿಸುವಿರಿ?- ಇಂಥ ಅನೇಕ ಪ್ರಶ್ನೆಗಳು ಹುಟ್ಟುವುದು ವ್ಯಾಖ್ಯಾನಕಾರರಿಗೆ, ವಿಶ್ಲೇಷಕರಿಗೆ, ಸಮಾಜಶಾಸ್ತ್ರಜ್ಞರಿಗೆ ಮತ್ತು ಅಭಿವೃದ್ಧಿ ನಿರೀಕ್ಷಿಸುವವರಿಗೆ ಹೊರತು ಅಭಿವೃದ್ಧಿಯನ್ನು ಕೈಗೊಳ್ಳುವವರಿಗಲ್ಲ! ಅಭಿವೃದ್ಧಿಗೆ ಸುಸ್ಥಿರ, ಸಮಗ್ರ ಇತ್ಯಾದಿ ವಿಶೇಷಣಗಳನ್ನು ಕೊಟ್ಟುಕೊಂಡವರೂ ಕೂಡ ಅವರೇ. ಹಾಗಾಗಿ ಅಭಿವೃದ್ಧಿ ಎಂಬುದು ತನ್ನ ಗುರಿಯನ್ನು ಇನ್ನೂ ಮುಟ್ಟದೆ ಅಡ್ಡಾದಿಡ್ಡಿ ಓಡುತ್ತಲೇ ಇದೆ. ಇಂದಿಗೂ ಅಭಿವೃದ್ಧಿ ರಾಜಕೀಯದ ಪ್ರಮುಖ ದಾಳವಾಗಿ ಬಳಕೆಯಾಗುತ್ತಲೇ ಇದೆ. ಹೊರನೋಟಕ್ಕೆ ಆಕರ್ಷಕವಾಗಿ, ಜನರ ಆಶಾಕಿರಣವಾಗಿ ನರ್ತನ ಮಾಡುತ್ತ ಬರುವ ಅಭಿವೃದ್ಧಿ ಯೋಜನೆಗಳು ಇನ್ನೂ ಏಕೆ ತನ್ನ ಉದ್ದೇಶವನ್ನು ಪೂರ್ಣಗೊಳಿಸಿಲ್ಲ ಎನ್ನುವುದರ ಹಿಂದೆ ಇಂಥಾ ವ್ಯಾಖ್ಯಾನಗಳ ಕ್ಲೀಷೆಗಳಿವೆ. ಮತ್ತಷ್ಟು ಓದು »

30
ಮೇ

ಪ್ಯಾಸೆಂಜರ್ ರೈಲು ….

– ಫಣೀಶ್ ದುದ್ದ

india_power_outage_07ಅದೆಷ್ಟೋ ಬಾರಿ ನಾವು ರೈಲ್ವೆ ಸ್ಟೇಷನ್ನಲ್ಲೋ, ಬಸ್ ಸ್ಟಾಂಡಿನಲ್ಲೋ, ” ಸಾರ್, ನನ್ನ ಪರ್ಸ್ ಕಳೆದು ಹೋಗಿದೆ.. ನಾನು ಆ ಊರಿಗೆ ಹೋಗಬೇಕು.. ಈ ಊರಿಗೆ ಹೋಗಬೇಕು.. ನನ್ನ ಹತ್ತಿರ ಹತ್ತೇ ರೂಪಾಯಿ ಇರುವುದು.. ನಮ್ಮೂರಿಗೆ ಇಪ್ಪತ್ತು ರೂಪಾಯಿ ಚಾರ್ಜು… ಹತ್ತು ರೂಪಾಯಿ ಇದ್ರೆ ಕೊಡ್ತೀರಾ.?” ಎಂದು ಕೇಳುವವರು ದಿನ ಬೆಳಗಾದರೆ ಸಿಗುತ್ತಾರೆ. ಕೆಲವರು,” ಹತ್ತು ರೂಪಾಯಿ ತಾನೆ, “ಟೀ”ಗೋ, ಸಿಗರೇಟಿಗೋ ಕಳೆಯುವ ಬದಲು ಇವರಿಗೆ ಕೊಟ್ಟರೆ ಉಪಯೋಗವಗುತ್ತದಲ್ಲ ಎಂದು ಹತ್ತೋ, ಇಪ್ಪತ್ತೋ ಕೈಗಿಟ್ಟು ಹೋಗುವವರಿದ್ದಾರೆ. ಇನ್ನು ಕೆಲವರು, “ನಿಮ್ಮಂತವರನ್ನು ಬೇಕಾದಷ್ಟು ಜನರನ್ನು ನೋಡಿದ್ದೀನಿ, ಮೈ ಬಗ್ಗಿಸಿ ದುಡಿಯುವುದು ಬಿಟ್ಟು ಬರಿ ಸುಳ್ಳು ಹೇಳ್ತೀರಾ… ಸುಮ್ನೆ ಹೋಗಿ” ಎಂದು ಬಾಯಿಗೆ ಬಂದಂತೆ ಬೈದು ಹೋಗಿ ಬಿಡುತ್ತಾರೆ. ಆದರೆ ನಾವ್ಯಾರು ಅದರ ಹಿಂದಿರುವ ಸತ್ಯಾಸತ್ಯತೆಗಳನ್ನು ತಿಳಿಯುವ ಗೋಜಿಗೇ ಹೋಗಿರುವುದಿಲ್ಲ… ಮನಬಂದಂತೆ ಬೈದು ಹೋದ ಮೇಲೂ ಕೆಲವರು ಮನದಲ್ಲೇ ಬೇಸರ ಮಾಡಿಕೊಳ್ಳುವುದೂ ಉಂಟು,” ಅಯ್ಯೋ, ನಿಜವಾಗಿ ಅವನಿಗೆ ಹಣ ಬೇಕಾಗಿತ್ತೋ ಏನೋ..ಛೇ..ಹತ್ತು ರೂಪಾಯಿ ಕೊಟ್ಟಿದ್ದರೆ ನನ್ನ ಗಂಟೇನೂ ಹೋಗುತ್ತಿರಲಿಲ್ಲ”ಎಂದು. ಮತ್ತಷ್ಟು ಓದು »