ನಮ್ಮ ವಿಶ್ವವಿದ್ಯಾಲಯಗಳಲ್ಲಿ ಸಾಮಾಜಿಕ ಸಂಶೋಧನೆಗೆ ಭವಿಷ್ಯವಿದೆಯೆ?
ಪ್ರೊ. ರಾಜಾರಾಮ ಹೆಗಡೆ ಮತ್ತು ಡಾ. ಷಣ್ಮುಖ. ಎ
[ಪ್ರೊ.ರಾಜೇಂದ್ರ ಚೆನ್ನಿಯವರು ಬರೆದಿದ್ದು ಎನ್ನಲಾದ “ಭಾರತದಲ್ಲಿ ಜಾತಿವ್ಯವಸ್ಥೆ ಇದೆಯೆ?” ಎಂಬ ಪುಸ್ತಕದ ವಿಮರ್ಶೆಯು ಅವರ ಆಪ್ತ ವಲಯದಲ್ಲಿ ಸರ್ಕುಲೇಟ್ ಆಗುತ್ತಿದೆ. ಆ ವಿಮರ್ಶೆಯ ಮಿತಿಗಳು ಮತ್ತು ಪೂರ್ವಾಗ್ರಹಗಳನ್ನು ಸ್ಪಷ್ಟಪಡಿಬೇಕೆಂದು ಈ ಲೇಖನವನ್ನು ಬರೆಯಲಾಗಿದೆ]
ಇತ್ತೀಚೆಗೆ ಜಾಲತಾಣದಲ್ಲಿ ಸುತ್ತಾಡುತ್ತಿದ್ದ ಒಂದು ಪುಸ್ತಕ ವಿಮರ್ಶೆಯ ಪ್ರಾರಂಭಿಕ ಸಾಲುಗಳು ನಮ್ಮನ್ನು ಬೆಚ್ಚಿಬೀಳಿಸಿದವು. ಅವು ಹೀಗಿವೆ:
“ಈ ಕೃತಿಯು ನನ್ನಲ್ಲಿ ಹುಟ್ಟಿಸಿದ ವೈಚಾರಿಕ ಕುತೂಹಲವನ್ನು ಹೀಗೆ ವಿವರಿಸಬಹುದು. ಮನುಷ್ಯರು ಓದು, ಬುದ್ಧಿಶಕ್ತಿ, ತರ್ಕ ಹಾಗೂ ಭಾಷೆಯನ್ನು ಮಾನವ ದ್ವೇಷಿಯಾದ ಬೌದ್ಧಿಕ ಕೆಲಸಗಳಿಗೆ ಏಕೆ ಬಳಸುತ್ತಾರೆ? ಪಾಂಡಿತ್ಯವೆಂದು ಕರೆಯಲಾಗುವ ಸಂಗತಿಯು ಒಂದು ವಲಯದಲ್ಲಿ ಅಂತಃಕರಣ, ಪ್ರೀತಿ, ಇತರರ ಬಗ್ಗೆ ಸದ್ಭಾವನೆ ಮುಂತಾದ ಭಾವನೆಗಳಿಂದ ಸಂಪೂರ್ಣ ಪರಕೀಯವಾಗಿ, ಕ್ರೂರವಾದ ಅಭಿಪ್ರಾಯಗಳನ್ನು ಸಮರ್ಥಿಸುವ `ತರ್ಕದ ಟಗರ ಹೋರಟೆ’ ಯಾಕೆ ಆಗುತ್ತದೆ? ಬಹು ಸಂಖ್ಯಾತ ಜನರಿಗೆ ಮನುಷ್ಯರಾಗಿ ಬದುಕುವ ಅವಕಾಶಗಳೇ ಇಲ್ಲವಾಗುತ್ತಿರುವ ಬಡದೇಶದಲ್ಲಿ ಅತಿಶಯವಾದ ಸವಲತ್ತುಗಳನ್ನು ಪಡೆದಿರುವ ವಿಶ್ವವಿದ್ಯಾಲಯಗಳ ಬುದ್ಧಿಜೀವಿ ಹಾಗು ಸಂಶೋಧಕವರ್ಗವು ಈ ಜನರು ಆಳವಾಗಿ ನಂಬಿಕೊಂಡು ಬಂದಿರುವ ಸಮಾನತೆ, ನ್ಯಾಯ ಮುಂತಾದ ಮೌಲ್ಯಗಳನ್ನು ಉಡಾಫೆಯಿಂದ ತಿರಸ್ಕರಿಸುವ ದುಷ್ಟತನದ ಮೂಲವು ಎಲ್ಲಿದೆ? ನಿರ್ದಿಷ್ಟವಾಗಿ ಹೇಳುವುದಾದರೆ ಪಾಂಡಿತ್ಯ ಮತ್ತು ಬುದ್ಧಿಶಕ್ತಿಗಳು Evil ನ ಅತ್ಯಂತ ಆಳವಾದ ಕೆಡುಕಿನ ರೂಪಗಳೇಕೆ ಆಗುತ್ತವೆ?”
ದೇವನೂರು ಮಹಾದೇವರ ಪ್ರತಿಕ್ರಿಯೆ ಮತ್ತು ನನ್ನ ಗೊಂದಲಗಳು
-ಡಾ.ಸಂತೋಷ್ ಕುಮಾರ‍್ ಪಿ.ಕೆ
ಪ್ರಜಾವಾಣಿಯಲ್ಲಿ ದೇವನೂರು ಮಹಾದೇವ ರವರು ಬರೆದ ಲೇಖನಕ್ಕೆ ಪ್ರತಿಕ್ರಿಯೆ.
ನನ್ನ ವಿದ್ಯಾರ್ಥಿ ಜೀವನದಿಂದಲೂ ದೇವನೂರು ಮಹಾದೇವ ಎಂಬ ಆದರ್ಶವ್ಯಕ್ತಿಯ ಕುರಿತು ಕೇಳಿದ್ದೆ, ಹಾಗೂ ಕೆಲವೊಮ್ಮೆ ನೋಡುವ ಭಾಗ್ಯವೂ ಒದಗಿತ್ತು. ಕನ್ನಡ ಬಂಡಾಯ ಸಾಹಿತ್ಯ ಮತ್ತು ಸಾಮಾಜಿಕ ಚಳುವಳಿಗಳಲ್ಲಿ ತಮ್ಮ ಜೀವನವನ್ನೇ ಮುಡುಪಾಗಿಟ್ಟು, ಶಾಂತಿ ಮತ್ತು ಅಹಿಂಸಾ ಮಾರ್ಗವಾಗಿ ಹೋರಾಡುತ್ತಿರುವುದು ಅವರ ವ್ಯಕ್ತಿತ್ವದ ಆಕರ್ಷಣೆಯಾಗಿದೆ. ಇದಕ್ಕೆ ಮಾರುಹೋದ ಹಲವಾರು ಯುವಸಮುದಾಯಗಳು ಅವರನ್ನು “ಆಧುನಿಕ ಸಂತ” ಎಂಬಂತೆ ಬಿಂಬಿಸುತ್ತವೆ. ಅಷ್ಟು ಶಾಂತಚಿತ್ತ ಮತ್ತು ಧೀಮಂತ ಹೋರಾಟಗಾರೆಂದೆ ಖ್ಯಾತಿ ಪಡೆದ ದೇವನೂರು ರವರು ಏನೇ ಬರೆದರೂ ಅದನ್ನು ಓದಲು ನನ್ನನ್ನೂ ಸೇರಿ ಅಪಾರ ಅಭಿಮಾನಿಗಳ ಬಳಗವೇ ಇದೆ. ವಚನ ಕುರಿತ ಚರ್ಚೆಗೆ ಅವರ ಪ್ರತಿಕ್ರಿಯೆಯನ್ನು ಓದಿದ ಮೇಲೆ ಅವರ ಮೇಲಿದ್ದ ನನ್ನ ಗೌರವ, ನಂಬಿಕೆಗಳು ಆ ಲೇಖನವನ್ನು ಅವರೇ ಬರೆದಿದ್ದಾ ಎಂಬ ಅನುಮಾನವನ್ನು ಮೂಢಿಸಿದೆ. ಅದೇನೇ ಇದ್ದರೂ ದೇವನೂರು ಮಹಾದೇವ ರವರು ಕೆಲವು ತಪ್ಪುನಂಬಿಕೆಗಳ ಹಿನ್ನೆಲೆಯಲ್ಲಿ ಈ ಲೇಖನವನ್ನು ಬರೆದಿದ್ದಾರೆ, ಅವುಗಳನ್ನು ನನ್ನ ಓದಿನ ಮಿತಿಯಲ್ಲಿ ಚರ್ಚಿಸಲು ಬಯಸುತ್ತೇನೆ.
೧. ಲೇಖನದ ಪ್ರಾರಂಭದಲ್ಲಿ ಒಂದು ಉದಾಹರಣೆಯನ್ನು ನೀಡುವ ಮೂಲಕ ಅಂಕಿ ಸಂಖ್ಯೆಯ ಆಧಾರವಾದ ವಿವರಣೆಯನ್ನು ವಿರೋಧಿಸಿದ್ದಾರೆ: ಅದೆಂದರೆ “ತಾಯಿಯನ್ನು ’ತಾಯಿ” ಎಂದು ಇಷ್ಟು ಸಾರಿ (ಅಂಕಿ ಸಂಖ್ಯೆಗಳ ಲೆಕ್ಕದಲ್ಲಿ) ಕರೆಯದಿದ್ದರೆ ಬಂಜೆ ಎಂದು ಕರೆದು ದಿಗ್ವಿಜಯ ಸಾಧಿಸಿಬಿಡುತ್ತಾರೆ”. ಇಲ್ಲಿ ತೆಗೆದುಕೊಂಡಿರುವ ಉದಾಹರಣೆಯನ್ನು ಮತ್ತೊಂದು ರೀತಿಯಲ್ಲಿ ಇಡಬಹುದು, ಒಲ್ಲೊಬ್ಬರು ಮಹಿಳೆ ಇದ್ದಾರೆ ಹಾಗೂ ಮಗನ ವಯಸ್ಸಿನ ವ್ಯಕ್ತಿಯೊಬ್ಬ ಇದ್ದಾನೆ ಎಂದಿಟ್ಟುಕೊಳ್ಳಿ. ಆಕೆಗೆ ಅಪಾರ ಆಸ್ತಿ ಇದ್ದು ಬೇರೆ ಯಾರೂ ವಾರಸ್ದಾರರು ಇಲ್ಲ ಎಂದಿಟ್ಟುಕೊಳ್ಳುವ, ಅವಳ ಆಸ್ತಿಯನ್ನು ಕಬಳಿಸಲು ಯಾರೋ ಆಕೆಯನ್ನು ಅಮ್ಮ ಅಮ್ಮ ಎಂದು ನೂರು ಸಾವಿರ ಲಕ್ಷ ಬಾರಿ ಕರೆಯುತ್ತಾರೆ ಎಂದಾದರೆ, ಅವರ ನಡುವೆ ಇರುವುದು ತಾಯಿ ಮಕ್ಕಳ ಸಂಬಂಧವೆ? ಅಥವಾ ಬೇರೆ ತರಹದ ಸಂಬಂಧವೆ? ಇಲ್ಲಿ ಆಸ್ತಿಗೋಸ್ಕರ ಆತ ಎಷ್ಟು ಬಾರಿ ತಾಯಿ ಎಂದು ಕರೆದರೂ ಆಕೆ ಆತನಿಗೆ ತಾಯಿಯಾಗಲು ಸಾಧ್ಯವಿಲ್ಲ, ಇದನ್ನು ಪ್ರಮಾಣೀಕರಿಸುವುದು ಹೇಗೆ? ಹೇಗೆಂದರೆ ಅವರ ನಡುವೆ ನಿಜವಾಗಿಯೂ ತಾಯಿ-ಮಗನ ಸಂಬಂಧವಿದೆಯೇ? ಎಂದು ಪರೀಕ್ಷೆ ಮಾಡುವುದು. ಆ ಪರೀಕ್ಷೆಯನ್ನೇ ಮಾಡದೆ ಕೆಲವು ಬಾರಿ ಆತ ಆಕೆಯನ್ನು ತಾಯಿ ಎಂದು ಕರೆದಿದ್ದಾನೆ ಆದ್ದರಿಂದ ಆಕೆ ಆತನ ತಾಯಿಯೇ ಎಂದು ನಿರ್ಣಯಕ್ಕೆ ಬರುವುದು ತೀರಾ ಅವಾಸ್ತವಿಕವಾಗುತ್ತದೆ. ಅಂತೆಯೇ ಜಾತಿ, ಕುಲ ಎಂಬ ಪದಗಳು ವಚನಗಳಲ್ಲಿ ಇದ್ದ ಮಾತ್ರಕ್ಕೆ ಅವುಗಳನ್ನು ಸಮಗ್ರವಾಗಿ ಅಧ್ಯಯನ ಮಾಡದೆ ಜಾತಿ ವಿರೋಧ ಎಂದು ನಿರ್ಣಯಕ್ಕೆ ಬರುವುದು ಅವಸರದ ತೀರ್ಮಾನವಾಗುತ್ತದೆ. ಹಾಗೆ ನೋಡಿದರೆ ಅಂಕಿ ಅಂಶಗಳ ಮೂಲಕ ವಚನಗಳನ್ನು ಅರ್ಥೈಸುವುದು ಮುಖ್ಯವಾದ ಗುರಿ ನಮ್ಮದಲ್ಲ ಹಾಗೂ ಅದರ ಆಧಾರದ ಮೇಲೆಯೇ ವಚನಗಳ ಕುರಿತ ವಾದವೂ ಬೆಳೆದಿಲ್ಲ, ಬದಲಿಗೆ ವಚನಗಳನ್ನು ಸಮಗ್ರವಾಗಿ ನೋಡಿದಾಗ ಹೇಗೆ ಕಾಣುತ್ತದೆ ಎಂಬುದನ್ನು ವಾದಿಸುವ ಸಂದರ್ಭದಲ್ಲಿ ನಗಣ್ಯವಾಗಿ ಅಥವಾ ಅಷ್ಟೇನೂ ಪ್ರಮುಖವಲ್ಲದ ವಿಷಯ ಅದಾಗಿದೆ.
ವಚನಗಳ ಧ್ವನಿಯನ್ನು ಎಲ್ಲಿ ಹುಡುಕಬೇಕು?
– ರಾಜಾರಾಮ ಹೆಗಡೆ
ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರ, ಕುವೆಂಪು ವಿಶ್ವವಿದ್ಯಾನಿಲಯ
{ಡಾ. ಆಶಾದೇವಿಯವರು ಪ್ರಜಾವಾಣಿಯಲ್ಲಿ ಪ್ರಕಟವಾದ ಲೇಖನಕ್ಕೆ ಪ್ರತಿಕ್ರಿಯೆಯಾಗಿ ಬರೆದು ಪ್ರಜಾವಾಣಿಗೆ ಕಳುಹಿಸಿದ್ದ ಅಪ್ರಕಟಿತ ಲೇಖನ}
ಡಾ. ಆಶಾದೇವಿಯವರ ಪ್ರತಿಕ್ರಿಯೆಯಲ್ಲಿ ನನ್ನ ವಿಚಾರಗಳ ಕುರಿತು ವ್ಯಕ್ತವಾದ ಎರಡು ಮುಖ್ಯ ಅಭಿಪ್ರಾಯಗಳ ಕುರಿತು ನನ್ನ ಆಕ್ಷೇಪಣೆಯಿದೆ: 1. ನಾವು ಉಲ್ಲೇಖಿಸುತ್ತಿರುವ ಸಂಶೋಧನಾ ವಿಧಾನವೇ ಒಂದು ಕಣ್ಕಟ್ಟು ಅಥವಾ ಮಾಯೆ. ಅದು ಸ್ವಘೋಷಿತ. ಆ ಮೂಲಕ ನಾವು ಕನ್ನಡಿಗರಿಗೆ ಮೋಸಮಾಡುತ್ತಿದ್ದೇವೆ. 2. ಈ ಸಂಶೋಧನೆಯ ಹಿಂದೆ ಒಂದು ಜಾಗತಿಕ ಹುನ್ನಾರವಿದೆ. ಇಂಥ ಹೇಳಿಕೆಗಳನ್ನು ಇದುವರೆಗೆ ನಾವು ನಿರ್ಲಕ್ಷಿಸಿಕೊಂಡು ಬಂದಿದ್ದೆವು. ಆದರೆ ಇಂಥ ಹೇಳಿಕೆಗಳನ್ನು ಸತ್ಯವೆಂಬಂತೆ ಪುನಃ ಪುನಃ ಮಾಡಲಾಗುತ್ತಿರುವುದರಿಂದ ನಾವು ಇದನ್ನು ಗಂಭೀರವಾಗಿ ಎಣಿಸಲೇಬೇಕಿದೆ.
ಆಶಾದೇವಿಯವರೊಂದೇ ಅಲ್ಲ, ನಾವು ಮಂಡಿಸಿದ ವಿಷಯದ ಕುರಿತು ಆಕ್ಷೇಪಣೆಯೆತ್ತುತ್ತಿರುವ ಬಹುತೇಕರು ಇಂಥ ಆರೋಪಗಳನ್ನು ಯಾವುದೇ ಎಗ್ಗಿಲ್ಲದೇ ತಾವು ಕಂಡುಕೊಂಡ ಸತ್ಯವೆಂಬಂತೆ ಹೇಳುತ್ತಿದ್ದಾರೆ. ಅಂದರೆ ನಾವು ಮೋಸಗಾರರು, ವಿದೇಶೀ ಹಣವನ್ನು ಕಬಳಿಸಲಿಕ್ಕೆ ಇಂಥ ಮಾತುಗಳನ್ನು ಹೇಳುತ್ತಿದ್ದೇವೆ, ಪೂರ್ವಾಗ್ರಹ ಪೀಡಿತರು, ನಮಗೊಂದು ಹುನ್ನಾರವಿದೆ, ನಾವು ದಲಿತರ, ಶೋಷಿತರ ವಿರೋಧಿಗಳು, ವಚನಕಾರರು ಯಾವ ಶಕ್ತಿಗಳ ವಿರುದ್ಧ ಹೋರಾಡಿದ್ದರೊ ನಾವು ಅವೇ ಶಕ್ತಿಗಳು, ಇತ್ಯಾದಿ. ಇವು ಸಣ್ಣಪುಟ್ಟ ಆರೋಪಗಳಲ್ಲ ಎಂಬುದನ್ನು ಪ್ರತ್ಯೇಕ ತಿಳಿಸಬೇಕಿಲ್ಲ. ಇದು ಯಾರ ವಿರುದ್ಧ ಯಾರನ್ನು ಎತ್ತಿಕಟ್ಟುವ ಹುನ್ನಾರ ಎಂಬುದು ನನಗೆ ತಿಳಿಯುತ್ತಿಲ್ಲ. ಇದು ಚಾರಿತ್ರ್ಯಹರಣದ ಪ್ರಯತ್ನ. ನಮ್ಮ ಕುರಿತು ಪ್ರಮಾಣಿತ ಸತ್ಯವೋ ಎಂಬಂತೆ ಈ ಆರೋಪಗಳನ್ನು ಅವರು ಸಾರ್ವಜನಿಕವಾಗಿ ಇಡುತ್ತಿದ್ದಾರೆ. ಮಾಧ್ಯಮವೊಂದರಲ್ಲಿ ಇಂಥ ಗುರುತರ ಆಪಾದನೆಗಳನ್ನು ಮಾಡುವಾಗ ಸಾಕ್ಷ್ಯಾಧಾರಗಳು ಬೇಕಾಗುತ್ತವೆ. ಅದಿಲ್ಲದ ಹೇಳಿಕೆಗಳು ಮಾನನಷ್ಟಕ್ಕೆ ಸಮನಾಗುತ್ತವೆ. ಹಾಗಾಗಿ ಮೊದಲು ಅದಕ್ಕೆ ಇವರೆಲ್ಲ ಸಾಕ್ಷ್ಯಾಧಾರಗಳನ್ನು ಒದಗಿಸಬೇಕು, ಇಲ್ಲದಿದ್ದಲ್ಲಿ ಇದು ಕಪೋಲ ಕಲ್ಪಿತ ಹೇಳಿಕೆ ಎಂಬುದಾಗಿ ಸ್ಪಷ್ಟೀಕರಿಸಬೇಕು ಎಂಬುದು ನನ್ನ ಆಗ್ರಹ.
ವಚನ ಸಾಹಿತ್ಯ ಹಾಗೂ ಜಾತಿ ವ್ಯವಸ್ಥೆ: ರಾಜೇಂದ್ರ ಚೆನ್ನಿಯವರಿಗೊಂದು ಪ್ರತಿಕ್ರಿಯೆ
– ಡಂಕಿನ್ ಝಳಕಿ
ಇದು ರಾಜೇಂದ್ರ ಚೆನ್ನಿಯವರು ಲಡಾಯಿ ಬ್ಲಾಗ್ನಲ್ಲಿ ಬರೆದ ಲೇಖನಕ್ಕೆ ನನ್ನ ಪ್ರತಿಕ್ರಿಯೆ. ಅವರ ಲೇಖನ ಸಾಕಷ್ಟು ಉದ್ದವಿದ್ದರೂ ಅದರಲ್ಲಿ ಉತ್ತರ ಕೊಡಲು ಯೋಗ್ಯವಾದ ವಿಚಾರಗಳಿರುವುದು ಎರಡು ಅಥವಾ ಮೂರು ಮಾತ್ರ. ಉಳಿದದ್ದೆಲ್ಲಾ ವೈಯುಕ್ತಿಕ ನಿಂದನೆಗಳು, ಆಧಾರ ರಹಿತ ಆಪಾದನೆಗಳು, ಮತ್ತು ಬಾಲಿಶ ಹಾಸ್ಯಗಳು. ಅವುಗಳಿಗೆ ಉತ್ತರ ಕೊಡುವುದು ಘನತೆಯ ವಿಚಾರವಲ್ಲ.
೧.ಮೇಲುಚಲನೆಯ ಕುರಿತು: ಡಾ.ಷಣ್ಮುಖರವರು ಹೇಳುವ ನನ್ನ “ಪ್ರಬಂಧದಲ್ಲಿ ಎಲ್ಲೂ ಈಗ ಇರುವ ವಚನಗಳು ಜಾತಿ(ವ್ಯವಸ್ಥೆ) ವಿರೋಧಿ ಚಳುವಳಿ ಎಂಬ ಕಥೆಯನ್ನು ವೀರಶೈವರು ತಮ್ಮ ಮೇಲುಚಲನೆಗಾಗಿ ಹರಡಿದರು ಎನ್ನುವ ವಾದವಿಲ್ಲ” ಎಂಬುದನ್ನು ಅಲ್ಲಗಳೆಯುತ್ತಾ ಚೆನ್ನಿಯವರು ನಾನು ನನ್ನ ಪ್ರಬಂಧದಲ್ಲಿ ತನ್ನ ಅಸ್ಮಿತೆ ಹಾಗೂ ಸಂಘಟನೆಯನ್ನು ಬಲಪಡಿಸುವ ಪ್ರಯತ್ನದಲ್ಲಿ ಬ್ರಿಟಿಷರು ಕಟ್ಟಿಕೊಟ್ಟ ಚಿತ್ರಣಗಳನ್ನು ತನಗೆ ಅಪ್ಯಾಯಮಾನವಾಗಿ ಕಂಡಿದ್ದರಿಂದ ಆಧುನಿಕ ವೀರಶೈವ ಶಿಕ್ಷಿತ ವರ್ಗವು ಒಪ್ಪಿಕೊಂಡಿತು ಎಂದು ವಾದಿಸುತ್ತೇನೆ ಎಂದು ಹೇಳುತ್ತಾರೆ.
ವಚನಗಳನ್ನು ಆಧ್ಯಾತ್ಮಿಕ ಸಂದರ್ಭದಲ್ಲಿಟ್ಟು ನೋಡಿದಾಗ ಕಾಣಿಸುವುದೇನು?
– ಬಾಲಗಂಗಾಧರ ಎಸ್. ಎನ್.
ಗೆಂಟ್ ವಿಶ್ವವಿದ್ಯಾಲಯ, ಬೆಲ್ಜಿಯಂ
ವಚನಗಳ ಉದ್ದೇಶವು ಜಾತಿವಿನಾಶ ಚಳವಳಿಯಲ್ಲ ಎಂಬ ನನ್ನ ಹಾಗೂ ನನ್ನ ಸಹಸಂಶೋಧಕರ ವಾದವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ನನ್ನ ವಾದಕ್ಕೆ ಪ್ರತಿಕ್ರಿಯಿಸಿದವರೆಲ್ಲರೂ ನನ್ನ ವಾದವು ವಚನಗಳ ಹಿರಿಮೆಯನ್ನು ಅಲ್ಲಗಳೆಯುತ್ತಿದೆ ಎಂಬುದಾಗಿ ಭಾವಿಸಿದ್ದಾರೆ. ಅದನ್ನು ಸ್ಪಷ್ಟೀಕರಿಸಲು ವಚನಗಳನ್ನು ಆಧ್ಯಾತ್ಮಿಕ ಸಂದರ್ಭದಲ್ಲಿಟ್ಟು ನೋಡಬೇಕೆಂಬುದು ನಮ್ಮ ವಾದವೆಂಬುದನ್ನು ಓದುಗರ ಗಮನಕ್ಕೆ ತಂದಿದ್ದೂ ಆಗಿದೆ. ಆ ಹೇಳಿಕೆಯ ಕುರಿತೂ ಅನೇಕ ಪ್ರತಿಕ್ರಿಯೆಗಳು ಬಂದವು. ಈ ಪ್ರತಿಕ್ರಿಯೆಗಳಲ್ಲಿ ಪರೋಕ್ಷವಾಗಿ ಇವರೆಲ್ಲರೂ ಆಧ್ಯಾತ್ಮ ಸಂಪ್ರದಾಯವನ್ನು ಬ್ರಾಹ್ಮಣರಿಗೆ ಸಮೀಕರಿಸುವುದು ಕಂಡುಬರುತ್ತದೆ. ಇಲ್ಲಿ ಬಹುಶಃ ಈ ಅಭಿಪ್ರಾಯಗಳಿಗೆ ಉತ್ತರ ನೀಡುವುದಕ್ಕಿಂತ ನಾನು ಏನು ಹೇಳುತ್ತಿದ್ದೇನೆ ಎಂಬುದನ್ನು ಮತ್ತೂ ಸ್ಪಷ್ಟೀಕರಿಸುವುದು ಸೂಕ್ತ ಎನ್ನಿಸುತ್ತದೆ.
ಭಾರತೀಯ ಆಧ್ಯಾತ್ಮ ಪರಂಪರೆಯು ಇಂದಿನವರೆಗೂ ಐತಿಹಾಸಿಕ ಏಳು ಬೀಳುಗಳನ್ನೆಲ್ಲ ದಾಟಿಕೊಂಡು ಅವ್ಯಾಹತವಾಗಿ ಮುಂದುವರಿದುಕೊಂಡು ಬಂದಿದೆ. ಆದರೆ ಅದರ ಕುರಿತು ಅಧಿಕೃತವಾಗಿ ತಿಳಿದುಕೊಳ್ಳುವ ಗುರಿಯನ್ನು ಸಮಾಜ ವಿಜ್ಞಾನವು ಇನ್ನೂ ತಲುಪಿಲ್ಲ. ಏಕೆಂದರೆ, ಅದರ ಒಂದು ವಿಶೇಷತೆಯೆಂದರೆ ಅದನ್ನು ಗುರು, ಶಿಷ್ಯವೃತ್ತಿ, ಸತತ ಸಾಧನೆ ಇತ್ಯಾದಿಗಳಿಂದಲೇ ಕಲಿಯಬೇಕಾಗುತ್ತದೆ. ಅದರ ಕುರಿತು ನಮ್ಮ ಆಧುನಿಕ ಪರಿಭಾಷೆಗಳಲ್ಲಿ ಮಾತನಾಡಲು ಹಾಗೂ ಅರ್ಥಮಾಡಿಕೊಳ್ಳಲು ನಾವಿನ್ನೂ ಸರಿಯಾದ ಭಾಷೆಯನ್ನು ಬೆಳೆಸಿಕೊಂಡಿಲ್ಲವೆಂಬುದು ವಚನದ ಕುರಿತ ಈ ಚರ್ಚೆಯಂದ ಧೃಡಪಡುತ್ತದೆ. ಏಕೆ ಈ ಸಂಪ್ರದಾಯವನ್ನು ಪ್ರವೇಶಿಸಲು ನಮಗೆ ಸಾಧ್ಯವಾಗುತ್ತಿಲ್ಲವೆಂದರೆ ಈಗ ಇರುವ ವಿವರಣೆಗಳೆಲ್ಲವೂ ಕ್ರೈಸ್ತ ಥಿಯಾಲಜಿಯನ್ನಾಧರಿಸಿ ಹುಟ್ಟಿದಂಥವು. ಅಂದರೆ, ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನು ಪ್ರಪ್ರಥಮವಾಗಿ ಸಮಾಜ ವಿಜ್ಞಾನದ ಪರಿಭಾಷೆಯಲ್ಲಿ ಇಟ್ಟ ಐರೋಪ್ಯರು ತಮಗೆ ಗೊತ್ತಿದ್ದ ಒಂದೇ ಒಂದು ಪರಿಭಾಷೆಗಳ ಲೋಕದಿಂದ ಇದನ್ನು ವರ್ಣಿಸಿದರು, ಅದೇ ಕ್ರೈಸ್ತರ ಥಿಯಾಲಜಿಯ ಲೋಕ. ಅಂದರೆ, ಇಂದು ಆಧ್ಯಾತ್ಮದ ಜ್ಞಾನದ ಹಿನ್ನೆಲೆಯನ್ನು ಹೊಂದಿದವರು ಏನನ್ನು ಹೇಳುತ್ತಿದ್ದಾರೆ ಎಂಬುದನ್ನು ಇಂದಿನ ಸಮಾಜ ವಿಜ್ಞಾನಿಗಳು ಸಂಶೋಧನಾ ಭಾಷೆಯಲ್ಲಿ ವರ್ಣಿಸಬೇಕಾದರೆ ಥಿಯಾಲಜಿಗೂ ಹೊರತಾದ ವೈಜ್ಞಾನಿಕ ಭಾಷೆಯೊಂದರ ಅಗತ್ಯವಿದೆ.
ಮತ್ತಷ್ಟು ಓದು 
ಮಾಧ್ಯಮಗಳೇಕೆ ಹೀಗೆ ?
ನಟನೆಗೆ ಚೌಕಟ್ಟು ಇದೆಯೇ……..?
ಪ್ರೇಮ, ಯುದ್ಧ ಮತ್ತು ಚುನಾವಣೆಯಲ್ಲಿ ಎಲ್ಲವೂ ನ್ಯಾಯವೇ
-ಚಾಮರಾಜ ಸವಡಿ
ಕೆಲವೊಬ್ಬರು ಏನು ಮಾಡಿದರೂ ವಿವಾದವಾಗುತ್ತದೆ. ಅವರು ಸೃಜನಶೀಲ ಕ್ಷೇತ್ರದಲ್ಲಿದ್ದರಂತೂ ವಿವಾದ ಇನ್ನಷ್ಟು ತೀವ್ರ. ಕನ್ನಡದ ಮಟ್ಟಿಗೆ ಆ ಕೀರ್ತಿ ಎಸ್.ಎಲ್. ಭೈರಪ್ಪ ಅವರದಾದರೆ, ಭಾರತೀಯ ಇಂಗ್ಲಿಷ್ ಬರಹಗಾರರ ಪೈಕಿ ಆ ಪಟ್ಟ ಸಲ್ಮಾನ್ ರಶ್ದಿಗೆ.ಶ್ರಾದ್ಧ … ಆಚರಣೆ
-ಪ್ರಕಾಶ್ ನರಸಿಂಹಯ್ಯ
ಹುಟ್ಟು ಅಂದಮೇಲೆ ಸಾವು ನಿಶ್ಚಿತ. ಹುಟ್ಟಿನೊಂದಿಗೆ ಪ್ರಾರಂಭವಾಗುವ ಜೀವನ ಯಾತ್ರೆ ಮರಣದೊಂದಿಗೆ ಮುಗಿಯುತ್ತವೆ. ಅಂತ್ಯಸಂಸ್ಕಾರ ನಡೆಯುತ್ತವೆ . ನಂತರದಲ್ಲಿ ಮೃತ ವ್ಯಕ್ತಿಗೆ ಹಲವಾರು ಸಂಸ್ಕಾರಗಳು ನಡೆಯುತ್ತವೆ. ಸತ್ತ ದಿನದಿಂದ ಹದಿನಾಲ್ಕು ದಿನಗಳವರೆಗೆ ಹಲವಾರು ರೀತಿಯ ಕರ್ಮಗಳನ್ನು ಅವರವರ ಪದ್ದತಿಗನುಸಾರವಾಗಿ ಮತ್ತು ಸಂಪ್ರದಾಯದಂತೆ ಮಾಡುತ್ತಾರೆ. ಮೃತ ವ್ಯಕ್ತಿಯ ಮಕ್ಕಳು ಸಾಮಾನ್ಯವಾಗಿ ಈ ಕರ್ಮವನ್ನು ಮಾಡುತ್ತಾರೆ.ನಂತರದಲ್ಲಿ ಪ್ರತಿ ವರ್ಷ ಮೃತರ ನೆನಪಿನಲ್ಲಿ ಶ್ರಾದ್ಧ ಕರ್ಮಅಥವಾ ತಿಥಿ ಎಂಬ ಹೆಸರಿನಲ್ಲಿ ಆಚರಣೆ ಮಾಡುವುದು ರೂಡಿಯಲ್ಲಿದೆ.
ಸಂಸ್ಕೃತಿ ಸಂಕಥನ – 19 – ವಿಚಾರಕ್ಕೂ ಆಚಾರಕ್ಕೂ ಏನು ಸಂಬಂಧ ?
-ರಮಾನಂದ ಐನಕೈ
ನಮ್ಮೂರಿನಲ್ಲಿ ಒಬ್ಬರು ವಿಚಾರವಂತರಿದ್ದಾರೆ. ನಿಜವಾಗಲೂ ಅವರು ಚಿಂತಕರೆ, ನಾವೆಲ್ಲ ತಮಾಷೆಗಾಗಿ ಅವರನ್ನು ಸೆಕ್ಯುಲರ್ ಚಿಂತಕರು ಎಂದು ಕರೆಯುತ್ತೇವೆ. ಯಾವತ್ತೂ ವೇದಿಕೆಯ ಮೇಲೆ ಅವರು ನಾಸ್ತಿಕತೆಯ ಕುರಿತಾಗಿ ಮಾತನಾಡುತ್ತಾರೆ. ದೇವರುಗಳನ್ನು ಟೀಕಿಸುತ್ತಾರೆ. ಗ್ರಾಮೀಣ ಜನರ ಆಚಾರಗಳು ಮೌಢ್ಯವೆಂದು ಗುರುತಿಸುತ್ತಾರೆ. ಹೊರಗೆ ಬಂದಾಗ ಹೆಂಡ, ಸಿಗರೇಟುಗಳೆಲ್ಲ ಅವರ ಆಪ್ತ ಸಂಗಾತಿಗಳು. ಆದರೆ ಆ ವ್ಯಕ್ತಿ ಅವರ ಊರಿನಲ್ಲಿ ಒಬ್ಬ ಪೂಜಾರಿ. ಮನೆಯಲ್ಲಿ ಕರ್ಮಠ ಆಸ್ತಿಕರು. ಜಪ-ತಪ, ಮಡಿ-ಮೈಲಿಗೆ ಮುಂತಾದವುಗೆಳೆಲ್ಲವೂ ಅವರ ನಿತ್ಯಕರ್ಮಗಳು. ಜ್ಯೋತಿಷ್ಯ, ಶಕುನ ಮುಂತಾದವುಗಳೆಲ್ಲದರಲ್ಲೂ ಪ್ರವೀಣರು. ಶನಿವಾರ ಅವರ ಮನೆ ಮುಂದೆ ಜನರ ಸರದಿ ಇರುತ್ತದೆ. ಈ ವ್ಯಕ್ತಿಯನ್ನು ನಾವು ಯಾವ ರೀತಿ ಅರ್ಥೈಸೋಣ? ಸಾರ್ವಜನಿಕವಾಗಿ ಅವರು ವ್ಯಕ್ತಪಡಿಸುವ ವಿಚಾರಗಳು ನಿಜವೇ ಇರುತ್ತದೆ. ವೈಯಕ್ತಿಕವಾಗಿ ಅವರು ವ್ಯಕ್ತಪಡಿಸುವ ವಿಚಾರಗಳು ನಿಜವೇ ಇರುತ್ತದೆ. ವೈಯಕ್ತಿಕವಾದ ಅವರ ಆಚರಣೆಯೂ ಶುದ್ಧವಾಗಿರುತ್ತದೆ. ಇವೆರಡರಲ್ಲಿ ಯಾವುದು ತಪ್ಪು ಅನ್ನಲು ಸಾಧ್ಯ? ಇದೇ ಭಾರತದ ಆಧುನಿಕ ವಿಚಾರವಾದಿಗಳ ಸಮಸ್ಯೆ.
ವಿಜ್ಞಾನಿಯೊಬ್ಬರು ದೇವರ ಫೋಟೋ ಪೂಜಿಸುವುದು, ದೇವಸ್ಥಾನಕ್ಕೆ ಹೋಗುವುದು ಹಾಸ್ಯಾಸ್ಪದ ಅನಿಸುತ್ತದೆ. ಲಕ್ಷ್ಮೀ ಪೂಜೆಯ ದಿನ ಕಂಪ್ಯೂಟರಿಗೆ ಬಿಳಿಪಟ್ಟೆ ಎಳೆದು ಪೂಜಿಸಿದರೆ ನಗು ಬರುತ್ತದೆ. ಸೂರ್ಯ, ಚಂದ್ರ ಭೂಮಿಯ ಪರ್ಯಟನದಿಂದಾಗಿ ಗ್ರಹಣವಾಗುತ್ತದೆ ಎಂಬ ವೈಜ್ಞಾನಿಕ ಸತ್ಯ ನಮಗೆ ಗೊತ್ತಿದೆ. ಆದರೂ ಉಪವಾಸ ಇರುತ್ತೇವೆ. ದೇವರನ್ನು ಮುಳುಗಿಸಿಬಿಡುತ್ತೇವೆ. ಮನೆಯ ಬಿಟ್ಟು ರಸ್ತೆಗೇ ಬರುವುದಿಲ್ಲ. ಗ್ರಹಣದ ನಂತರ ಸ್ನಾನ ಮಾಡುತ್ತೇವೆ. ಯಾಕೆ? ತಿಳಿದಿರುವುದೊಂದು ಮಾಡುವುದೊಂದು, ಹೇಳುವುದೊಂದು ಮಾಡುವುದೊಂದು. ಇದನ್ನೇ ಸೋಗಲಾಡಿತನ ಎಂದು ಟೀಕಿಸುತ್ತೇವೆ.
ಭಗವಾನ್ ರಮಣ ಮಹರ್ಷಿಗಳ ಸಂದೇಶ – 2
–ಪ್ರಕಾಶ್ ನರಸಿಂಹಯ್ಯ
ತನ್ನ ತಾನು ಅರಿಯಲು ಬ್ರಹ್ಮಜ್ಞಾನ ಪ್ರಾಪ್ತಿಯಾಗಬೇಕೆ?. ಈ ಬ್ರಹ್ಮಜ್ಞಾನ ಪಡೆಯಲು ಸಾಮಾನ್ಯರಿಗೆ ಸಾಧ್ಯವೇ? ಈ ಪ್ರಶ್ನೆಯನ್ನು ಭಗವಾನ್ ರಮಣ ಮಹರ್ಷಿಗಳಲ್ಲಿ ಒಬ್ಬ ವಿದೇಶಿ ಭಕ್ತ ನಿವೇದಿಸಿಕೊಂಡ.
ಆಗ ಮಹಷಿಗಳು ಕೊಟ್ಟ ಸ್ಪಷ್ಟ ಉತ್ತರ ಏನೆಂದರೆ “ಬ್ರಹ್ಮಜ್ಞಾನವೆಂಬುದು ಸಂಪಾದಿಸುವ ವಿದ್ಯೆಯಲ್ಲ; ಬ್ರಹ್ಮಜ್ಞಾನ ಪಡೆಯುವುದರಿಂದ ಸಂತೋಷ ವಾಗಿರಬಹುದೆಂದು ಆಶಿಸಿದರೆ ಇದೊಂದು ತಪ್ಪು ಗ್ರಹಿಕೆ. ನಿಮ್ಮೊಳಗಿರಬಹುದಾದ ಈ ತಪ್ಪುಗ್ರಹಿಕೆ ಹೇಗಿದೆಯೆಂದರೆ ಹತ್ತು ಜನ ಧಡ್ಡರು ನದಿದಾಟಿದಂತಿದೆ.” ಎಂದು ಒಂದು ಕಥೆಯನ್ನು ಹೇಳಲು ಪ್ರಾರಂಭಿಸಿದರು. ” ಹತ್ತು ಜನ ಧಡ್ಡರು ನದಿ ದಾಟಲು ಸಿದ್ದರಾದರು. ಎಲ್ಲರೂ ಈಜಿ ದಡವನ್ನು ಸೇರಿದರು. ದಡ ಸೇರಿದ ನಂತರ ಎಲ್ಲರೂ ಬಂದು ತಲುಪಿರವರೆ, ಎಂಬುದನ್ನು ಖಾತ್ರಿ ಮಾಡಿಕೊಳ್ಳಬೇಕೆಂದು ತಂಡದ ನಾಯಕನು ಎಲ್ಲರ ತಲೆಯನ್ನು ಎಣಿಸಿದ. ಒಂಬತ್ತು ಜನ ಮಾತ್ರ ಲೆಕ್ಕಕ್ಕೆ ಸಿಕ್ಕಿದರು. ಪುನಃ ಎಣಿಸಿದ, ಆಗಲು ಅಷ್ಟೇ! ಮತ್ತೊಬ್ಬನನ್ನು ಕರೆದು ಎಲ್ಲರನ್ನು ಸಾಲಾಗಿ ನಿಲ್ಲಿಸಿ ಎಣಿಸಲು ಹೇಳಿದ. ಆಗಲೂ ಒಂಬತ್ತು ಜನರೇ! ನಾಯಕನಿಗೆ ಗಾಭರಿ ಆಯ್ತು. ಏನೂ ತೋಚದೆ ಎಲ್ಲರು ಅಳಲು ಪ್ರಾರಂಭಿಸಿದರು. ಇವರ ಅಳುವನ್ನು ಕೇಳಿ ದಾರಿಯಲ್ಲಿ ಬರುತ್ತಿದ್ದ ದಾರಿಹೋಕ ಏನೆಂದು ವಿಚಾರಿಸಿದ. ನಾಯಕ ಎಲ್ಲವನ್ನು ವಿಸ್ತಾರವಾಗಿ ವಿವರಿಸಿದ. ದಾರಿಹೋಕ ಸುಮ್ಮನೆ ಎಣಿಸಿನೋಡುವಾಗ ಸರಿಯಾಗಿ ಹತ್ತು ಜನರಿದ್ದರು. ಆಗ ಎಲ್ಲರನ್ನು ಸಾಲಾಗಿ ನಿಲ್ಲಿಸಿ ಎಲ್ಲರ ಬೆನ್ನು ಮೇಲೆ ಒಂದೊಂದು ಪೆಟ್ಟು ಕೊಡುತ್ತ ಎಣಿಸಿದ. ಎಲ್ಲರು ಸೇರಿ ಹತ್ತು ಜನರಾದರೆಂದು ತಿಳಿದಮೇಲೆ ಸಂತೋಷಗೊಂಡ ದಡ್ಡರು ದಾರಿಹೋಕನನ್ನು ಕೊಂಡಾಡಿದರು. ಹತ್ತೂ ಜನರು ತಮ್ಮ ಪ್ರಯಾಣವನ್ನು ಮುದುವರೆಸಿದರು.” ಕಥೆಯನ್ನು ಮುಗಿಸಿ ಒಂದು ಕ್ಷಣ ಸುಮ್ಮನಾದರು.




