ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸಾಹಿತಿ’

25
ನವೆಂ

ನುಡಿಸಿರಿಯನ್ನು ವಿರೋಧಿಸುವ ನೈತಿಕತೆ ಇಂದಿನ ಸಾಹಿತಿಗಳಿಗಿದೆಯೇ?

– ಸಂತೋಷ್  ಕುಮಾರ್ ಪಿ.ಕೆ

ನುಡಿಸಿರಿಕನ್ನಡ ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನವಾದ ಆಳ್ವಾಸ್ ನುಡಿಸಿರಿ 2014 ನ್ನು ಅದ್ಧೂರಿಯಾಗಿ ಮತ್ತು ಅಚ್ಚುಕಟ್ಟಾಗಿ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನಡೆಸಲಾಯಿತು. ಕನ್ನಡ ಭಾಷೆ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಡಾ.ಮೋಹನ್ ಆಳ್ವರ ಶ್ರಮ ಶ್ಲಾಘನೀಯವಾದುದು. ನುಡಿಸಿರಿಯ ವೈಭವವು ಆಗಮಿಸಿದ ಎಲ್ಲಾ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪ್ರೇಮಿಗಳಿಗಳಿಗೆ ಮನತಣಿಸುವಷ್ಟು ವಿಷಯ, ಮನರಂಜನೆಗಳನ್ನು ನೀಡಿರುವುದು ಸುಳ್ಳಲ್ಲ. ಅತ್ಯದ್ಭುತ ಮೆರವಣಿಗೆಯ ಮೂಲಕ ಪ್ರಾರಂಭವಾಗುವ ನುಡಿಸಿರಿಯು ಪ್ರತಿಯೊಂದು ಹಂತದಲ್ಲಿಯೂ ಸಮಯ ಮತ್ತು ಶಿಸ್ತು ಪಾಲನೆಯ ಅಣತಿಯಂತೆ ಜರುಗುತ್ತಾ ಹೋಗುತ್ತದೆ.

ಕನ್ನಡವು ಕರ್ನಾಟಕದ ವ್ಯವಹಾರಿಕ ಮತ್ತು ಮುಖ್ಯವಾಹಿನಿಯ ಭಾಷೆಯಾಗಿದ್ದರೂ ಸಹ ಇತರ ಭಾಷೆಗಳಿರುವುದನ್ನು ಕಡೆಗಣಿಸಲು ಸಾಧ್ಯವಿಲ್ಲ. ಉದಾಹರಣೆಗೆ, ತುಳು, ಕೊಂಕಣಿ, ಬ್ಯಾರಿ, ಬಂಜಾರ, ಕೊಡವ ಇನ್ನೂ ಮುಂತಾದ ಭಾಷೆಗಳು ಅಸ್ತಿತ್ವದಲ್ಲಿವೆ. ಈ ಬಾರಿಯ ನುಡಿಸಿರಿಯಲ್ಲಿ ಇಂತಹ ಪ್ರಾದೇಶಿಕ ಭಾಷೆಗಳಿಗೂ ಸಹ ಮನ್ನಣೆ ನೀಡುವ ಮೂಲಕ ಅವುಗಳಿಗೆ ಸಂಬಂಧಿಸಿದ ಹಲವಾರು ಸಾಂಸ್ಕøತಿಕ ಕಾರ್ಯಕ್ರಮಗಳನ್ನೂ ಸಹ ಆಯೋಜಿಲಾಗಿತ್ತು. ಪ್ರತ್ಯೇಕವಾಗಿ ಒಂದೊಂದು ದಿನವೂ ತುಳು, ಕೊಂಕಣಿ ಹಾಗೂ ಬ್ಯಾರಿ ಭಾಷಾ ಸಮ್ಮೇಳನಗಳೂ ಪ್ರತಿದಿನ ಸಂಜೆ ಜರುಗಿದವು. ಹಾಗೂ ಕೃಷಿ ಸಲಕರಣೆಗಳ ಮೇಳ, ಆಹಾರ ತಿಂಡಿತಿನಿಸುಗಳ ಮೇಳ ಹಾಗೂ ಪುಸ್ತಕ ಮೇಳ ಇವೆಲ್ಲವೂ ನುಡಿಸಿರಿಯ ವಿಶೇಷ ರಂಗುಗಳು.

ಮತ್ತಷ್ಟು ಓದು »

22
ಮೇ

ಸಾಹಿತಿಗಳೆಂದರೆ ಸರ್ವಸ್ವವೇ?

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ

ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

ಕನ್ನಡ ಸಾಹಿತ್ಯಕನ್ನಡ ಕಲಿಕಾ ಮಾಧ್ಯಮದ ವಿರುದ್ಧ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪಿನ ಆಶಯ ಕುರಿತು ಬರುತ್ತಿರುವ ಅಭಿಪ್ರಾಯಗಳಲ್ಲಿ ಸುಪ್ರೀಂ ತೀರ್ಪಿನ ಪರ ಬಹುತೇಕ ದನಿಗಳಿವೆ. ಸುಪ್ರೀಂ ತೀರ್ಪು ಸರಿ. ನಮ್ಮ ಸರ್ಕಾರದ ನೀತಿಗಳು ಸರಿ ಇಲ್ಲ ಎಂಬುದೂ ಸರಿ, ಆದರೂ… ಎಂದು ಅನುಮಾನದ ರಾಗ ಎಳೆಯುವವರು ಕೆಲವರು ಮಾತ್ರ. ಈ ಸರ್ವೇ ಸ್ಯಾಂಪಲ್ ಸಂಖ್ಯೆ ತುಂಬ ಕಡಿಮೆ ಎನಿಸಿದರೂ ಸುಪ್ರೀಂ ತೀರ್ಪು ಜನಸಾಮಾನ್ಯರ ದೃಷ್ಟಿಗೆ ತಕ್ಕಂತೆಯೇ ಇದೆ ಎಂಬುದರಲ್ಲಿ ಅನುಮಾನವಿಲ್ಲ. ಸರ್ವೋಚ್ಚ ನ್ಯಾಯಾಲಯದ ತೀರ್ಪು ಬಂದ ಮೇಲೂ ಇದು ಇನ್ನೂ ತೀವ್ರ ಚರ್ಚೆಯ ವಿಷಯವಾಗಿಯೇ ಇರುವುದು ವಿಷಯದ ಗಂಭೀರತೆಯನ್ನು ತೋರಿಸುತ್ತದೆ. ಆದರೆ ಸರ್ಕಾರ ಬಹುಸಂಖ್ಯಾತರ ಆಶಯವನ್ನು ಗಮನಕ್ಕೆ ತಂದುಕೊಂಡು ಹೆಜ್ಜೆ ಇಡುತ್ತಿದೆಯೇ? ಇಲ್ಲ.

ಘನ ನ್ಯಾಯಾಲಯದ ತೀರ್ಪು ಯಾವುದೇ ನಿರ್ದಿಷ್ಟ ಭಾಷಾ ಮಾಧ್ಯಮ ಹೇರಿಕೆಯ ವಿರುದ್ಧವಿದ್ದರೂ ನಮ್ಮ ಸರ್ಕಾರ ಮಾತ್ರ ಕನ್ನಡದ ರಕ್ಷಣೆ ಹೇಗಾಗಬಲ್ಲುದು ಎಂಬುದಕ್ಕಿಂತ ಕನ್ನಡ ಮಾಧ್ಯಮ ರಕ್ಷಣೆಗೆ ಪಣ ತೊಟ್ಟಂತೆ ಕಾಣುತ್ತದೆ. ತನ್ನ ಆದೇಶವನ್ನು ಅದು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಸದಾ ಸುದ್ದಿ ಬಯಸುವ ಬೆರಳೆಣಿಕೆ ಸಾಹಿತಿಗಳ ಹಾಗೂ ಹೋರಾಟಗಾರರ ಭಾವಾವೇಶದ ಅಭಿಪ್ರಾಯಕ್ಕೆ ಸರ್ಕಾರ ಬಗ್ಗುವಂತೆ ಕಾಣುತ್ತಿದೆ. ತೀರ್ಪನ್ನು ಕುರಿತು ಚರ್ಚಿಸಲು ಸರ್ಕಾರ ಕರೆದ ಸಭೆಯಲ್ಲಿ ಆಹ್ವಾನಿತರಾದವರು ಯಾರು? ಒಂದಿಷ್ಟು ಸಾಹಿತಿಗಳು, ಚಳವಳಿಗಾರರು ಹಾಗೂ ಸರ್ಕಾರಿ ಅಧಿಕಾರಿಗಳು. ಇವರೇ ಈ ವಿಷಯಕ್ಕೆ ಸಂಬಂಧಿಸಿದ ಸಮಸ್ತ ಸಂಗತಿಗಳನ್ನು ಪ್ರತಿನಿಧಿಸುತ್ತಾರಾ? ಇವರನ್ನೇ ಶಿಕ್ಷಣ ತಜ್ಞರು, ಪಾಲಕ-ಪೋಷಕರು, ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ವರ್ಗದವರು ಇತ್ಯಾದಿ ಊಹಿಸಿಕೊಳ್ಳಬೇಕಾ? ಅಷ್ಟಕ್ಕೂ ಈ ಸಭೆಯಲ್ಲಿ ಪಾಲ್ಗೊಂಡವರಲ್ಲಿ ಕನ್ನಡ ಕಲಿತರೆ ಭವಿಷ್ಯವಿದೆ ಎಂಬ ವಾತಾವರಣ ಹುಟ್ಟಿಸಬೇಕಿದೆ ಎಂದ ಗಿರೀಶ್ ಕಾರ್ನಾಡ್ ಹಾಗೂ ಭಾಷೆಯಾಗಿ ಕನ್ನಡ ಕಲಿಸಲು ಅಡ್ಡಿ ಇಲ್ಲ ಹಾಗೂ ಅಂಥ ವಾತಾವರಣ ರೂಪಿಸಬೇಕು ಎಂದ ಸಿ ಎನ್ ರಾಮಚಂದ್ರನ್ ಅವರ ಮಾತುಗಳನ್ನು ಬಿಟ್ಟರೆ ಉಳಿದವರ ಅಭಿಪ್ರಾಯಗಳೆಲ್ಲ ಹೋರಾಟಗಾರರ ಮಾತಿನಂತೆ ತಥಾಕಥಿತವಾಗಿವೆ.

ಮತ್ತಷ್ಟು ಓದು »

2
ಜುಲೈ

ಕನ್ನಡ/ಇಂಗ್ಲೀಷ್ ಮಾಧ್ಯಮದ ಜೊತೆಗೆ ಏಕರೂಪ ಶಿಕ್ಷಣದ ಬಗ್ಗೆಯೂ ಚರ್ಚೆ ಆಗಬೇಕಲ್ಲವೇ?

– ರಾಕೇಶ್ ಶೆಟ್ಟಿ

ಕಡೆಗೂ ‘ಸರ್ಕಾರ ಏಕರೂಪ ಶಿಕ್ಷಣ ನೀತಿ ಜಾರಿಗೆ ತರುವ ನಿಟ್ಟಿನಲ್ಲಿ ಚಿಂತಿಸಬೇಕು’ ಅನ್ನುವ ಮಾತುಗಳನ್ನು ಕಸಪಾ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ.ಕಳೆದ ಹಲವು ದಿನಗಳಿಂದ ಇಂಗ್ಲೀಷ್ ಮಾಧ್ಯಮದ ಸುತ್ತ ನಡೆಯುತ್ತಲಿರುವ ಚರ್ಚೆಯಲ್ಲಿ ನಾನು ನಿರೀಕ್ಷಿಸುತಿದ್ದ ಮಾತು “ಏಕರೂಪ ಶಿಕ್ಷಣ”ದ ಬಗ್ಗೆ.ಪೇಟೆಯ/ಉಳ್ಳವರ ಮಕ್ಕಳಿಗೊಂದು ಶಿಕ್ಷಣ,ಹಳ್ಳಿಯ/ಬಡವರ ಮಕ್ಕಳಿಗೊಂದು ಶಿಕ್ಷಣ ಕೊಟ್ಟು ಕಡೆಗೆ ಸಮಾನತೆ,ಸಾಮಾಜಿಕ ನ್ಯಾಯ,ಭಾಷೆ,ನಾಡು-ನುಡಿಯ ಅಳಿವು ಉಳಿವು ಅಂತ ಮಾತನಾಡುವುದೆಷ್ಟು ಸರಿ?

೧೦ನೆ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲೇ ಓದಿದ ನನಗೆ ಮಾತೃ ಭಾಷೆಯಲ್ಲಿ ಕಲಿಯುವುದೆಷ್ಟು ಸುಲಭ,ಆನಂದದ ವಿಷಯ ಅನ್ನುವುದರ ಅರಿವಿದೆ ಹಾಗೆಯೇ ೧೦ರ ನಂತರ ಇಂಗ್ಲೀಷ್ ಮಾದ್ಯಮಕ್ಕೆ (ಪಿಯುಸಿಯಲ್ಲಿ ಆಯ್ದುಕೊಂಡಿದ್ದು ವಿಜ್ಞಾನ ವಿಷಯ) ಕಾಲಿಟ್ಟಾಗ ಅನುಭವಿಸಿದ ಕಷ್ಟ,ಕೀಳರಿಮೆಯ ಅನುಭವಗಳು ಇವೆ.ಹಾಗಾಗಿ ಈ ಚರ್ಚೆಯಲ್ಲಿ ಮತ್ತು ಈಗಿನ ನಮ್ಮ ಶೈಕ್ಷಣಿಕ ಪರಿಸ್ಥಿತಿಯಲ್ಲಿ ನಾನು ಇಂಗ್ಲೀಷ್ ಮೀಡಿಯಂ ಬೇಕು ಅನ್ನುವುದರ ಪರವೇ ನಿಲ್ಲುತ್ತೇನೆ.

ಒಂದು ವೇಳೆ ಸಾಹಿತಿಗಳು ಒತ್ತಾಯಿಸುತ್ತಿರುವಂತೆ ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯಲ್ಲೇ ಆಗಬೇಕು ಅನ್ನುವುದಾದರೆ ಅದು ಈ ರಾಜ್ಯದಲ್ಲಿರುವ ಸರ್ಕಾರಿ/ಅನುದಾನಿತ/ಕೇಂದ್ರೀಯ/ಖಾಸಗಿ ಶಾಲೆಗಳಿಗೂ ಏಕರೂಪವಾಗಿ ಅನ್ವಯವಾಗಲಿ. ಅದನ್ನು ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ಮಾತ್ರ ಕನ್ನಡ ಕಡ್ಡಾಯವಾಗಲಿ ಆ ಮೂಲಕ ಬಡವರ ಮಕ್ಕಳು ಮಾತ್ರ ಕನ್ನಡದಲ್ಲಿ ಕಲಿತು ಮುಂದೆ ಇಂಗ್ಲೀಷ್ ಲೋಕಕ್ಕೆ ಕಾಲಿಟ್ಟು ಅರ್ಧಕರ್ಧ ಜನ ಕೀಳರಿಮೆ,ಹೆದರಿಕೆಯಿಂದಾಗಿ ಹಿಂದೆ ಬೀಳಲಿ ಅನ್ನುವುದು ಇಬ್ಬಗೆಯ ನೀತಿಯಾಗುತ್ತದೆ.

ಏಕರೂಪ ಶಿಕ್ಷಣ ಅನ್ನುವಾಗ ಇನ್ನೊಂದು ಅಂಶವನ್ನ ನಾವು ಗಮನಕ್ಕೆ ತೆಗೆದುಕೊಳ್ಳಬೇಕು.ಮಕ್ಕಳನ್ನು ಶಾಲೆಗೇ ಸೇರಿಸುವಾಗ ಅದು ಇಂಗ್ಲೀಷ್ ಮೀಡಿಯಂ ಶಾಲೆಯೇ ಅಂತ ಮಾತ್ರ ಈಗಿನ ಪೋಷಕರು ನೋಡುತ್ತಿಲ್ಲ,ಅದರ ಜೊತೆಗೆ ಅವರು ಅಲ್ಲಿರುವುದು ಸೆಂಟ್ರಲ್ ಸಿಲ್ಲಬಸ್ಸೋ,ಐ.ಸಿ.ಎಸ್.ಈ ಸಿಲ್ಲಬಸ್ಸೋ (ಅಥವಾ ಇನ್ಯಾವುದೋ) ಅನ್ನುವುದನ್ನು ನೋಡುತಿದ್ದಾರೆ.ನಮ್ಮ ಮಕ್ಕಳು ಇಂತ ಸಿಲಬಸ್ಸ್ ಇರೋ ಶಾಲೆಯಲ್ಲಿ ಓದುತಿದ್ದಾರೆ ಅಂತ ಹೇಳಿಕೊಳ್ಳುವುದು ಈಗಿನ ಪೋಷಕರಿಗೆ ಗರ್ವದ ವಿಷಯವಾಗಿದೆ. ಅಸಲಿಗೆ ಈ ರೀತಿ ಬೇರೆ,ಬೇರೆ ಸಿಲ್ಲಬಸ್ಸಿನ ಅಗತ್ಯ ಶಾಲಾ ಮಟ್ಟದಲ್ಲಿ ಏನು ಅನ್ನುವುದು ಸಹ ಚರ್ಚೆಯಾಗಬೇಕಲ್ಲವೇ?

ಮತ್ತಷ್ಟು ಓದು »