ಕಾಲು ಶತಮಾನ ಜನಮಾನಸವನ್ನು ಆಳಿದ ಕತೆಯೊಂದರ ಕತೆ!
– ಸುಜಿತ್ ಕುಮಾರ್
ಭಾರತೀಯರ ಸಿನಿಮಾ ಕ್ರೆಝೇ ಅಂತಹದ್ದು. ಜನಜೀವನದ ವಿವಿಧ ಸ್ತರಗಳಲ್ಲಿ ಸಿಕ್ಕಾಪಟ್ಟೆ ಹಾಸುಹೊಕ್ಕಿರುವ ಈ ಸಿನಿಮಾ ಎಂಬ ಮಾಯೆ ಒಂಥರ ಊಟಕ್ಕೆ ಬೇಕಾದ ಉಪ್ಪಿನಕ್ಕಾಯಿಯಂತೆ. ಉಪ್ಪಿನಕ್ಕಾಯಿ ಇಲ್ಲದೆಯೇ ಊಟ ಮಾಡಬಹುದಾದರೂ ನಮ್ಮಲ್ಲಿ ಕೆಲವೆಡೆ ಅದೇ ಊಟವಾಗಿಬಿಡುತ್ತದೆ! ಜೀವನದ ಅಷ್ಟೂ ಸಂಕಷ್ಟಗಳಿಗೆ ಆಧ್ಯಾತ್ಮದ ಮೊರೆ ಹೋಗುವ ಗುಂಪು ಒಂದೆಡೆಯಾದರೆ ಅದಕ್ಕಿಂತಲೂ ನೂರು ಪಟ್ಟು ದೊಡ್ಡ ಗುಂಪು ತಮ್ಮ ತಮ್ಮ ಕಷ್ಟ ದುಃಖಗಳಿಗೆ ಆ ಸಿನಿಮಾಗಳ ಹಿಂದೆ ಬೀಳುವುದನ್ನು ಇಲ್ಲಿ ಅಲ್ಲಗೆಳೆಯಲಾಗುವುದಿಲ್ಲ. ಅದ್ಯಾವುದೋ ಕ್ರಿಸ್ತ ಪೂರ್ವ ಜಮಾನದಲ್ಲಿ ಕೈಕೊಟ್ಟ ಹುಡುಗಿಯ ನೆನಪಲ್ಲಿ ಮೀಯಲು ಅಥವಾ ಗುಡುಗು ಸಿಡಿಲುಗಳ ಆರ್ಭಟದ ನಡುವೆಯೂ ಕಿಲೋಮೀಟರ್ಗಟ್ಟಲೆ ದೂರ ನಿಂತು ಪ್ರೀತಿ ನಿವೇದನೆ ಮಾಡುವ ಮ್ಯಾಜಿಕನ್ನು ಕಂಡು ಬೆರಗಾಗಲು ಅಥವ ಪಠ್ಯ ಪುಸ್ತಕಗಳ ಬದನೇಕಾಯಿ ಎನುತ ಮೂರು ನಿಮಿಷದಲ್ಲಿ ಕೋಟ್ಯಾದಿಪತಿಯಾಗುವ ‘ಇಸ್ಟೈಲ’ನ್ನು ನೋಡಿ inspire ಆಗಲು ಅಥವಾ ಆಫೀಸಿನಲ್ಲಿ ತನ್ನ ಬಾಸಿನ ಮೇಲಿನ ಸಿಟ್ಟನ್ನು ಇಲ್ಲಿ ಹೀರೊ ವಿಲನ್ಸ್ ಗಳಿಗೆ ತದುಕುವ ಪೆಟ್ಟುಗಳಲ್ಲಿ ದಮನಮಾಡಿಕೊಳ್ಳಲು ಅಥವಾ ವಯಸ್ಸಿನ ಹುಡುಗ ಹುಡುಗಿಯರಿಗೆ ಆ ಹೊರಗಿನ ಕೆಟ್ಟ ಜಗತ್ತಿನಲ್ಲಿ ಕಪ್ಪುಕೋಣೆಯ ನಾಲ್ಕಡಿ ಜಾಗ ಸ್ವರ್ಗಲೋಕವಾಗಲು.. ಒಂದೇ ಎರಡೇ ಇಂತಹ ಹಲವಾರು ಕಾರಣಗಳಿಂದ ಸಿನಿಮಾ ಹಾಗು ಥಿಯೇಟರ್ ಗಳು ನಮ್ಮವರಿಗೆ ವಿಪರೀತ ಹತ್ತಿರವಾಗಿವೆ. ಇನ್ನು ನಟ ನಟಿಯರ ವಿಚಾರಕ್ಕೆ ಬಂದರಂತೂ ಕತೆಬರೆದು, ಸೆಟ್ ಹಾಕಿ, ಸಂಗೀತ ಕರೆದು, ಹಾಡಿ, ಹಣ ಸುರಿದು, ಬೆಳಕಿಡಿದು ದುಡಿಯುವ ನೂರಾರು ಜನರನ್ನೂ ಮರೆತು ಕ್ಯಾಮರಾದ ಮುಂದೆ ಕಾಣುವ ಆ ಒಂದು ಚಹರೆಗೆ ಕಠೋರ ತಪಸ್ಸಿಗೆ ದೊರಕುವ ಭಗವಂತನ ದರ್ಶನದಂತೆ ಆಡುವ ಜನರ ಗುಂಪು ಒಂದೆಡೆಯಾದರೆ ಕೆಲವೆಡೆ ಅಂತಹ ಚಹರೆಗಳು ಅಂತಹ ದೇವರೆಂಬ ಪವರ್ಫುಲ್ ಶಕ್ತಿಗೇ ಒಂದು ಗೇಣು ಕೀಳು! ಇಂತಹ ಹತ್ತಾರು ನೂರಾರು ಕಾರಣಗಳಿಂದಲೇ ಇಂದು ಭಾರತೀಯ ಸಿನಿಮಾ ಇಂಡಸ್ಟ್ರಿ ಇಡೀ ವಿಶ್ವದಲ್ಲಿಯೇ ಅತಿ ಶ್ರೀಮಂತ ಇಂಡಸ್ಟ್ರಿ ಎನಿಸಿಕೊಂಡಿದೆ. ಇದು ವಿಪರ್ಯಾಸವೋ, ಹಾಸ್ಯವೋ ಅಥವಾ ಆಯಾಸವವೋ ಹೇಳುವುದು ಕಷ್ಟ. ಆದರೆ ಒಂದು ಮಾತ್ರ ಸತ್ಯ. ಒಂದು ಕಾಲು ಬಿಲಿಯನ್ ಜನರ ನಮ್ಮ ದೇಶದಲ್ಲಿ ಒಬ್ಬೊಬ್ಬರಿಗೆ ಇರುವ ಹತ್ತಾರು ಕನಸುಗಳು ನನಸಾಗದ ನೋವುಗಳಿಗೆ, ಹತಾಶೆಗಳಿಗೆ ತೆರೆಯ ಮೇಲೆ ಕಾಣುವ ಆ ಕಾಲ್ಪನಿಕ ಚಿತ್ರ ಒಂದು ಬಗೆಯ ಸಾಂತ್ವಾನವನ್ನು ನೀಡಬಲ್ಲದು. ಅದಕ್ಕೆ ಆ ಶಕ್ತಿ ಇದೆ! ಕೆಲಚಿತ್ರಗಳನಂತೂ ನಮ್ಮವರು ಅದ್ಯಾವ ಪರಿ ಹಚ್ಚಿಕೊಳ್ಳುತ್ತಾರೆ ಎಂದರೆ ದಶಕಗಳವರೆಗೂ ಅದನ್ನು ಥಿಯೇಟರ್ ಗಳಿಂದ ತೆಗೆಯಲು ಬಿಡುವುದಿಲ್ಲ. ಯಸ್ ದಶಕ I mean ಡೇಕೇಡ್ಸ್! ಮತ್ತಷ್ಟು ಓದು 
#MeToo, ಒಂದೆರಡು ಪ್ರಶ್ನೆಗಳು from Me Too…!
– ಸುಜಿತ್ ಕುಮಾರ್
ಸ್ಥಳ ವರ್ಲಿ, ಮುಂಬೈ. ಅದು ಕಡುಕಪ್ಪು ಕೋಟುಗಳು ಹಾಗು ಎಲ್ಲೆಂದರಲ್ಲಿ ಸೀಳಿಕೊಂಡು ಗಾಳಿಗೆ ಹಾರಾಡುತ್ತಿರುವ ಡ್ರೆಸ್ಸುಗಳೇ ತುಂಬಿ ತುಳುಕುತ್ತಿರುವ ಸ್ಟೇಡಿಯಂ. ಸೇರಿರುವರೆಲ್ಲ ಸಿನಿಮಾರಂಗದಲ್ಲಿ ಒಂದಿಲ್ಲೊಂದು ಬಗೆಯಲ್ಲಿ ಗುರುತಿಸಿಕೊಂಡಿರುವ ದೊಡ್ಡ ದೊಡ್ಡ ಹಸ್ತಿಗಳು. ಘಾಡ ಮೌನದ ಸೀರಿಯಸ್ನೆಸ್ ಅನ್ನು ಒಳಗೊಂಡ ಆ ಮುಖಗಳನ್ನು ಗಮನಿಸಿದಾಗ ಮುಂದಿದ್ದ ಸ್ಟೇಜಿನ ಮೇಲೆ ಇಂದು ತೀರಾ ಸಾಮನ್ಯವೆನಿಸಿಕೊಂಡಿರುವಂತೆ ಕೇಂದ್ರ ಸರ್ಕಾರಗಳ ನಡೆಯ ವಿರುದ್ಧವೋ, ದೇವಸ್ಥಾನಗಳಿಗೆ ಮಹಿಳೆಯ ಪ್ರವೇಶ ಬೇಕೆಂಬುದರ ಬಗ್ಗೆಯೂ ಅಥವಾ ಜೀವ ಪಣವಿಟ್ಟು ಕಾದಾಡುವ ಸೈನಿಕರ ನಡೆಗಳ ಬಗ್ಗೆಯೂ ಜನತೆಗೆ ಅರ್ಥವಾಗದ ದುಬಾರಿ ಭಾಷೆಯಲ್ಲಿ ಅವರವರೇ ಚರ್ಚಿಸಿ, ಮಧ್ಯದಲ್ಲಿ ಒಂದೆರೆಡು ಮದ್ಯಗಳನ್ನು ಏರಿಸಿ, ಕೊನೆಗೆ ತೂರಾಡುತ್ತಾ ಮನೆಗೆ ತೆರಳುವ ಹೈ ಪ್ರೊಫೈಲ್ ಪ್ರಗತಿಪರರ ಕಾರ್ಯಕ್ರಮವೇನೋ ಎಂದೆನಿಸುತ್ತಿತ್ತು. ಮತ್ತಷ್ಟು ಓದು 
“ಪಟ್ಟಭದ್ರಹಿತಾಸಕ್ತಿಗಳ ಕೈಗಳಲ್ಲಿ ಸಿಕ್ಕಿ ಒದ್ದಾಡುತ್ತಿದೆ ಕನ್ನಡ ಚಿತ್ರರಂಗ”
– ಸುರೇಶ್ ಮುಗಬಾಳ್
ಗೆಳೆಯನೊಬ್ಬ ತಮಿಳು ನಟ ವಿಜಯ್ ನಟಿಸಿರುವ ‘ಕತ್ತಿ’ ಸಿನೆಮಾವನ್ನು ವೀಕ್ಷಿಸುವಂತೆ ಹೇಳಿದ, ಆ ಸಿನೆಮಾದಲ್ಲೇನಿದೆ ಅಂತಹ ವಿಶೇಷತೆ? ಎಂದು ಕೇಳಿದಾಗ, ‘ಸಾಮಾಜಿಕ ಕಳಕಳಿಯುಳ್ಳ ಅತ್ಯುತ್ತಮ ನಿನೆಮಾ, ಸಾಧ್ಯವಾದರೆ ವೀಕ್ಷಿಸು’ ಎಂದ, ಸರಿ ನಾನೂ Hotstar ನಲ್ಲಿ ಚಿತ್ರಕ್ಕಾಗಿ ತಡಕಾಡಿದೆ, ಸಿನೆಮಾವೇನೋ ವೀಕ್ಷಿಸಲು ಸಿಕ್ಕಿತು, ಆದರೆ ಚಿತ್ರವನ್ನು ಮಲೆಯಾಳಂ ಭಾಷೆಯಲ್ಲಿ ಡಬ್ಬ್ ಮಾಡಲಾಗಿತ್ತು. ಭಾಷೆ ಬಾರದವನಿಗೆ ತಮಿಳು ಭಾಷೆಯಾದರೇನು? ಮಲೆಯಾಳಂ ಭಾಷೆಯಾದರೇನು? ಅದು ಒತ್ತಟ್ಟಿಗಿರಲಿ, ಭಾಷೆಯ ಗಂಧವೇ ಗೊತ್ತಿರದ ಅರೇಬಿಕ್ ಭಾಷೆಯ ಅಲ್ ಲೈಲ್, ಕೋರಿಯನ್ ಭಾಷೆಯ Miracle in cell No. 7 ಸಿನೆಮಾಗಳನ್ನೂ ವೀಕ್ಷಿಸಿದ್ದೇನೆ, ಈ ಚಿತ್ರಗಳಲ್ಲಿ ನನಗೆ ಅರ್ಥವಾಗುತ್ತಿದ್ದದ್ದು ಕೇವಲ ಮುಖಭಾವ, ಆಂಗಿಕ ಚಲನೆ, ಚಿತ್ರದ ನಿರೂಪಣೆಗಳು ಮಾತ್ರ. ಇವುಗಳ ಸಹಾಯದಿಂದಲೇ ಚಿತ್ರಕಥೆಯನ್ನು ಅರ್ಥಮಾಡಿಕೊಳ್ಳು ಪ್ರಯತ್ನಿಸುತ್ತಿದ್ದೆ. ಒಂದು ವೇಳೆ English ಅಡಿಬರಹಗಳಿಲ್ಲದಿದ್ದರೆ ಸಿನೆಮಾ ಅರ್ಥವೇ ಆಗುತ್ತಿರಲಿಲ್ಲ. Miracle in cell No. 7 ಚಿತ್ರವನ್ನು ಇತ್ತೀಚೆಗೆ ರಮೇಶ್ ಅರವಿಂದ್ ಮುಖ್ಯಭೂಮಿಕೆಯಲ್ಲಿ ಕನ್ನಡಕ್ಕೆ ‘ಪುಷ್ಫಕ ವಿಮಾನ’ ಎಂಬ ಹೆಸರಿನಲ್ಲಿ ರಿಮೇಕ್ ಕೂಡ ಮಾಡಲಾಯಿತು. ನಾಯಕನ ನಟನೆ ಅದ್ಭುತವಾಗಿದ್ದರೂ ಚಿತ್ರವು ನಿರೀಕ್ಷೆಯನ್ನು ಹುಸಿಗೊಳಿಸಿತು. ಕೊರಿಯನ್ ಭಾಷೆಯಲ್ಲಿ ನಿರ್ಮಾಣವಾದ ಚಿತ್ರ ನನ್ನ ಅಂತರಂಗವನ್ನು ಕಲುಕಿದಷ್ಟೂ ಕನ್ನಡದಲ್ಲಿ ರಿಮೇಕ್ ಮಾಡಿದ ಚಿತ್ರ ಅಂತರಂಗಕ್ಕಿಳಿಯಲಿಲ್ಲ. ಪ್ರಾಯಶಃ ಕೊರಿಯನ್ ಭಾಷೆಯ ಚಿತ್ರವನ್ನೇ ಕನ್ನಡದಲ್ಲಿ ಡಬ್ಬಿಂಗ್ ಮಾಡಿದ್ದರೆ ಚಿತ್ರ ಇನ್ನಷ್ಟು ಅರ್ಥಗಳನ್ನು ಮೂಡಿಸುತ್ತಿತ್ತೇನೋ. ಮತ್ತಷ್ಟು ಓದು 
ಪುಷ್ಪಕ ವಿಮಾನ..
– ಶಾರದ ಡೈಮಂಡ್
ಅಪ್ಪ ಮಗಳ ನಡುವಿನ ಮುಗ್ಧ ಪ್ರಪಂಚದ ಸುತ್ತ ಹೆಣೆದಿರುವ ಕಥೆ ಈ ಪುಷ್ಪಕ ವಿಮಾನ. ಅವರದ್ದೇ ಭಾವ ಪ್ರಪಂಚದಲ್ಲಿ ಖುಷಿಯಾಗಿ ಮಧುರ ಕ್ಷಣಗಳನ್ನು ಸಂಭ್ರಮಿಸುತ್ತಿದ್ದ ಮನಸ್ಸುಗಳು ಅನ್ಯಾಯವಾಗಿ ಯಾರದೋ ಕ್ರೂರ ಮನಸ್ಸಿನ ಹಠ ಮತ್ತು ಸೇಡಿಗಾಗಿ ಒಡೆದು ದೂರವಾಗೋದೇ ಚಿತ್ರದ ಕಥೆ. ಇದು ರಮೇಶ್ ಅರವಿಂದ್ ರವರ ನೂರನೇ ಚಿತ್ರ . ಅವರ ಜೀವನದ ಮೈಲಿಗಲ್ಲು. ರಮೇಶ್ ಅವರ ಮುಗ್ದಾವತಾರದ ಆ ಅದ್ಭುತ ಅಭಿನಯವನ್ನು ಪದಗಳಲ್ಲಿ ವಿವರಿಸೋದು ಕಷ್ಟ ಸಾಧ್ಯ. ರಮೇಶ್ ಅರವಿಂದರ ಅಭಿಮಾನಿ ಅಂತ ಹೇಳಿಕೊಳ್ಳುವುದೇ ನನಗೆ ಖುಷಿ ವಿಚಾರ. ಅದರಲ್ಲೂ ಈ ಚಿತ್ರದಲ್ಲಿ ಅವರ ಅಭಿನಯವನ್ನು ನೋಡಿದ ಮೇಲೆ ನಿಜವಾಗಲೂ ಅವರ ಅಭಿಮಾನಿ ಅಂತ ಹೇಳಿಕೊಳ್ಳುವುದಕ್ಕೆ ಹೆಮ್ಮೆ ಅನಿಸ್ತಾ ಇದೆ. ಮತ್ತಷ್ಟು ಓದು 
ಜೀವನ ಪ್ರೀತಿಯ ಪ್ರತಿಬಿಂಬ – ಗೋಲ್ಡ್ ಅಂಡ್ ಕಾಪರ್
– ಡಾ ಅಶೋಕ್ ಕೆ ಆರ್
ಸಿನಿಮಾ ಅಂದ್ರೆ ಹೀರೋ ಹೀರೋಯಿನ್ ವಿಲನ್ ಇರಲೇಬೇಕೆಂಬ ಮನೋಭಾವವೇ ಹೆಚ್ಚು. ವಿಲನ್ ಇದ್ದ ಮೇಲೆ ಫೈಟು, ಹೀರೋ ಹೀರೋಯಿನ್ ಇದ್ದ ಮೇಲೆ ಒಂದಷ್ಟು ಸಾಂಗ್ಸು ಕಂಪಲ್ಸರಿ! ಪರದೇಶದ ಚಿತ್ರಗಳನ್ನು ವೀಕ್ಷಿಸಿದಾಗ ಹಾಡುಗಳಿರದೇ ಇದ್ದರೂ ಉಳಿದ ಅಂಶಗಳು ಹೆಚ್ಚು ಕಡಿಮೆ ಇದ್ದೇ ಇರುತ್ತವೆ. ಇವೆಲ್ಲ ಸಿದ್ಧಸೂತ್ರಗಳನ್ನು ತಿರಸ್ಕರಿಸಿ ಹೊಸತೊಂದು ನಿರೂಪಣೆಯ ಚಿತ್ರಗಳು ಅವಾಗಿವಾಗ ನಿರ್ಮಾಣವಾಗುತ್ತವೆ. ಅಂಥದೊಂದು ಇರಾನಿ ಚಿತ್ರ “ಗೋಲ್ಡ್ ಅಂಡ್ ಕಾಪರ್”. ಇಲ್ಲೂ ಹೀರೋ ಇದ್ದಾನೆ ಹೀರೋಯಿನ್ ಇದ್ದಾಳೆ ವಿಲನ್ ಕೂಡ ಇದೆ! ಇದೆ ಯಾಕೆಂದರೆ ವಿಲನ್ ಒಂದು ಖಾಯಿಲೆಯ ರೂಪದಲ್ಲಿ ಹೀರೋನ ಮನಸ್ಸಿನ ರೂಪದಲ್ಲಿ ಇದೆಯೇ ಹೊರತು ವಿಲನ್ ಒಬ್ಬ ವ್ಯಕ್ತಿಯ ರೂಪದಲ್ಲಿಲ್ಲ. ಹೋಮಾಯುನ ಅಸಾದಿಯನ್ (Homayoun Asadian) ನಿರ್ದೇಶನದ ಪರ್ಷಿಯನ್ ಭಾಷೆಯ ಈ ಚಿತ್ರ ಅಪರೂಪದ ಖಾಯಿಲೆಯೊಂದು ಹೇಗೆ ಒಂದು ಇಡೀ ಕುಟುಂಬದ ಜೀವನ ರೀತಿಯನ್ನು ಅಸ್ತವ್ಯಸ್ತಗೊಳಿಸುತ್ತದೆ ಎಂದು ತಿಳಿಸುವುದರ ಜೊತೆಜೊತೆಗೆ ಆ ಮಾರಣಾಂತಿಕ ಖಾಯಿಲೆ ಮನುಷ್ಯನ ಮನದ ಒಳಪದರದಲ್ಲಿ ಕಳೆದುಹೋಗಿದ್ದ ಸೂಕ್ಷ್ಮತೆಯನ್ನು ಹೊರತೆಗೆಯುವುದರಲ್ಲಿಯೂ ಸಹಕರಿಸುತ್ತದೆ!ಮಾಧ್ಯಮಗಳೇಕೆ ಹೀಗೆ ?
ನಟನೆಗೆ ಚೌಕಟ್ಟು ಇದೆಯೇ……..?




