ವಿಷಯದ ವಿವರಗಳಿಗೆ ದಾಟಿರಿ

Posts tagged ‘ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ’

23
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ-9
ಪಂಡಿತ್ ಮದನ ಮೋಹನ ಮಾಳವೀಯ
– ರಾಮಚಂದ್ರ ಹೆಗಡೆ

Pandit-Madan-Mohan-Malaviya-Laywerಭಾರತೀಯ ಸ್ವಾತಂತ್ರ್ಯ ಹೋರಾಟ ಹಾಗೂ ನಂತರದ ಭವ್ಯ ಭಾರತದ ಭವಿಷ್ಯದ ನಿರ್ಮಾಣದಲ್ಲಿ ಪಂಡಿತ ಮದನ ಮೋಹನ ಮಾಳವೀಯರ ಪಾತ್ರ ಬಹುದೊಡ್ಡದು. ಗಾಂಧೀಜಿಯವರು ರಾಷ್ಟ್ರಪಿತನಾದರೆ ಪಂಡಿತ ಮದನ ಮೋಹನ ಮಾಳವೀಯರು “ರಾಷ್ಟ್ರಗುರು” ಎನ್ನಬೇಕು. ಭಾರತೀಯ ಸಂಸ್ಕೃತಿ ಪರಂಪರೆಯ ಉಳಿವಿಗಾಗಿ, ಭಾರತೀಯ ಚಿಂತನೆಯ ಶಿಕ್ಷಣದ ಪ್ರಸಾರಕ್ಕಾಗಿ ದೇಶಾದ್ಯಂತ ಭಿಕ್ಷೆ ಎತ್ತಿ ‘ಬನಾರಸ್ ಹಿಂದೂ ವಿಶ್ವವಿದ್ಯಾಲಯ’ ವನ್ನು ಸ್ಥಾಪಿಸಿದ ಮಹನೀಯ ಮಾಳವೀಯರು. ಸ್ವಾತಂತ್ರ್ಯ ಹೋರಾಟಗಾರ, ಕವಿ-ಸಾಹಿತಿ, ಪತ್ರಿಕೆಗಳನ್ನು ಕಟ್ಟಿಬೆಳೆಸಿದ ಧೀಮಂತ, ವಿದ್ಯಾಧಾತ ಮತ್ತು ಭಾರತೀಯ ಮೌಲ್ಯಗಳ ಹಿತಚಿಂತಕ, ಮೌಡ್ಯ, ಜಾತೀವಾದಗಳನ್ನು ಪೋಷಿಸದ ಮನೋಭಾವನೆ ಹೊಂದಿದ್ದ ಮಾಳವೀಯರು ‘ಪಂಡಿತ’ರೆಂದೇ ಹೆಸರುವಾಸಿ. ಮತ್ತಷ್ಟು ಓದು »

17
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 8
ಮೇಡ೦ ಭಿಕಾಜಿ ಕಾಮಾ:
– ರಾಮಚಂದ್ರ ಹೆಗಡೆ

download (2)ಭಾರತದ ಸ್ವಾತ೦ತ್ರ್ಯ ಸ೦ಗ್ರಾಮದ ಇತಿಹಾಸದಲ್ಲಿ ಧ್ರುವತಾರೆಯಾಗಿ ಮೆರೆದ ಮಹಿಳೆಯರಲ್ಲಿ ಒಬ್ಬರು ಮು೦ಬೈನ ಮೇಡ೦ ಭಿಕಾಜಿ ಕಾಮಾ. ಮೇಡಂ ಕಾಮಾ ಚಿಕ್ಕಂದಿನಿಂದಲೂ ಆಪಾರ ದೇಶಾಭಿಮಾನಿ. ತೀವ್ರ ಪ್ಲೇಗ್ ರೋಗಕ್ಕೆ ತುತ್ತಾಗಿ ಆಕೆ ಬಂಧುಗಳ ಒತ್ತಾಯದ ಮೇರೆಗೆ ದೇಶ ತ್ಯಜಿಸಿ ಲಂಡನ್ ಗೆ ಹೋಗಬೇಕಾಯಿತು. ಅಲ್ಲಿ ಗುಣಮುಖಳಾದ ಕಾಮಾ ಅಲ್ಲೇ ತನ್ನ ರಾಷ್ಟ್ರ ಜಾಗೃತಿಯ ಕಾರ್ಯಗಳನ್ನು ಆರಂಭಿಸಿದಳು. ಪರದೇಶದಲ್ಲೇ ಇತರ ದೇಶಭಕ್ತರೊಡಗೂಡಿ ಭಾರತದ ಧ್ವಜವನ್ನು ರೂಪಿಸಿದ ಮೇಡಂ ಕಾಮಾ ಜರ್ಮನಿಯ ಸ್ಪಟ್‌ಗಾರ್ಟ್‌‌ನಲ್ಲಿ ನಡೆದ ಅಂತರರಾಷ್ಟ್ರೀಯ ಸಮಾಜವಾದಿ ಸಮ್ಮೇಳನದಲ್ಲಿ ಭಾರತವನ್ನು ಪ್ರತಿನಿಧಿಸಿ ಅಲ್ಲಿ ಭಾರತೀಯರ ಕಷ್ಟ ಕಾರ್ಪಣ್ಯ ಹಾಗೂ ಬ್ರಿಟಿಷರ ದೌರ್ಜನ್ಯಗಳ ಕುರಿತು ದಿಟ್ಟವಾಗಿ ವಾದ ಮಂಡಿಸಿದಳು. ಅಲ್ಲೇ ಭಾರತ ಧ್ವಜವನ್ನು ಹಾರಿಸಿ ನೆರೆದಿದ್ದ ಎಲ್ಲರೂ ಅದಕ್ಕೆ ಗೌರವ ಸಲ್ಲಿಸುವಂತೆ ಮಾಡಿದಳು. ಮತ್ತಷ್ಟು ಓದು »

16
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 7:
ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಷ್ಫಾಕ್ ಉಲ್ಲಾ ಖಾನ್

– ರಾಮಚಂದ್ರ ಹೆಗಡೆ

collage_305_121915014504ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಅಷ್ಫಾಕ್ ಉಲ್ಲಾ ಖಾನ್ ರದ್ದು ಒಂದು ವಿಶೇಷ ಅಧ್ಯಾಯ. ಹಿಂದೂ ಮುಸ್ಲಿಂ ಭ್ರಾತೃತ್ವದ ಒಂದು ಅಪರೂಪದ ಉದಾಹರಣೆ ಈ ಇಬ್ಬರದು. ಇವರಿಬ್ಬರ ಮಧ್ಯೆ ಮತೀಯ ಸಂಘರ್ಷ ತಂದಿಡುವ ಬ್ರಿಟಿಷರ ಹುನ್ನಾರಕ್ಕೆ ದಿಟ್ಟ ಉತ್ತರವಾಗಿ ನೇಣಿಗೇರುವವರೆಗೂ ಒಂದಾಗಿ ರಾಷ್ಟ್ರೀಯ ಚಿಂತನೆಗೆ ತಮ್ಮನ್ನು ಅರ್ಪಿಸಿಕೊಂಡ ಮಹಾನ್ ದೇಶಭಕ್ತರು. ತಮ್ಮ ತಮ್ಮ ಧರ್ಮಗಳಿಗೆ ಬದ್ಧರಾಗಿಯೂ ಈ ದೇಶಕ್ಕೆ ನಿಷ್ಠರಾಗಲು ಸಾಧ್ಯ ಎಂಬುದನ್ನು ಈ ದೇಶಭಕ್ತ ಜೋಡಿ ತೋರಿಸಿಕೊಟ್ಟಿದೆ ಹಾಗೂ ಇಂದಿನ ಪ್ರತ್ಯೇಕತಾವಾದಿಗಳಿಗೆ ಇವರ ಬದುಕು ಒಂದು ಪಾಠ. ಮತ್ತಷ್ಟು ಓದು »

15
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 6:
ಭೂಪೇಂದ್ರನಾಥ ದತ್ತ :
– ರಾಮಚಂದ್ರ ಹೆಗಡೆ

170px-Swami_Vivekananda_July_1895_Thousand_Island_Parkದೇಶವನ್ನು ದಾಸ್ಯದಿಂದ ಮುಕ್ತಿಗೊಳಿಸಲು ಒಂದೇ ಕುಟುಂಬದ ತಾಯಿ ಮಗ ಸೊಸೆ ಸೆರೆವಾಸ ಅನುಭವಿಸಿದ ಕಥೆಯನ್ನು ನಿನ್ನೆಯ ಮೈಲಾರ ಮಹಾದೇವರ ಸ್ಮರಣೆಯಲ್ಲಿ ಓದಿದ್ದೇವೆ. ದೇಶಾದ್ಯಂತ ಹಾಗೆ ಅನೇಕ ಕುಟುಂಬಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ತಮ್ಮನ್ನು ಸಂಪೂರ್ಣ ದಾಸ್ಯ ವಿಮೋಚನೆಯ ಪವಿತ್ರ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಇದು ಅಂತಹದೇ ಮತ್ತೊಂದು ದೇಶಭಕ್ತ ಕುಟುಂಬದ ಸ್ಮರಣೆ. ಇದು ಕಲಕತ್ತೆಯ ವಿಶ್ವನಾಥ ದತ್ತ ಹಾಗೂ ಭುವನೇಶ್ವರಿ ದೇವಿ ದಂಪತಿಗಳ ಇಬ್ಬರು ಪುತ್ರರತ್ನಗಳು ದೇಶದ ದಾಸ್ಯ ವಿಮುಕ್ತಿ ಹಾಗೂ ಭವಿಷ್ಯದ ನಿರ್ಮಾಣ ಕಾರ್ಯದಲ್ಲಿ ತಮ್ಮನ್ನು ಅರ್ಪಿಸಿಕೊಂಡ ಪ್ರೇರಣಾದಾಯಿ ಕಥೆ. ಒಬ್ಬರು ನರೇಂದ್ರನಾಥ ದತ್ತ ಮುಂದೆ ‘ಸ್ವಾಮಿ ವಿವೇಕಾನಂದ’ ರಾಗಿ ಭಾರತದ ಆಧ್ಯಾತ್ಮ ಯೋಗ ವೇದಾಂತಗಳ ಸಾರವನ್ನು ಜಗತ್ತಿಗೇ ಬೋಧಿಸಿ ವಿಶ್ವದ ಮನಗೆದ್ದರೆ ಮತ್ತೊಬ್ಬರು ಭೂಪೇಂದ್ರನಾಥ ದತ್ತ ಶ್ರೇಷ್ಠ ಕ್ರಾಂತಿಕಾರಿಯಾಗಿ ಭಾರತೀಯ ಸ್ವಾತಂತ್ರ್ಯ ಚಳುವಳಿಯ ಕ್ರಾಂತಿಕಾರಿ ಆಂದೋಲನದಲ್ಲಿ ಪ್ರಮುಖ ಪಾತ್ರ ವಹಿಸಿದರು. ಭೂಪೇಂದ್ರರು ಕ್ರಾಂತಿಕಾರಿ ಸಂಘಟನೆಗಳಾದ ಯುಗಾಂತರ ಹಾಗೂ ಅನುಶೀಲನ ಸಮಿತಿಯ ಪ್ರಮುಖ ಸದಸ್ಯರಾಗಿದ್ದರು. ಬ್ರಿಟಿಷರನ್ನು ಹೊಡೆದೋಡಿಸಲು ಹಾಗೂ ಭಾರತವನ್ನು ಸ್ವಾತಂತ್ರ್ಯಗೊಳಿಸಲು ಕ್ರಾಂತಿಯೇ ಸರಿಯಾದ ಮಾರ್ಗ ಎಂಬುದು ಯುಗಾಂತರದ ನಂಬಿಕೆಯಾಗಿತ್ತು. ಮತ್ತಷ್ಟು ಓದು »

14
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ– 5 : ಮೈಲಾರ ಮಹದೇವ
– ರಾಮಚಂದ್ರ ಹೆಗಡೆ

31byd11857 ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಮೊದಲಿನಿಂದಲೇ ಆರಂಭಿಸಿ, ಕ್ವಿಟ್ ಇಂಡಿಯಾ ಚಳುವಳಿ, ನಂತರ ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ಕರ್ನಾಟಕದಲ್ಲೂ ದೊಡ್ಡ ಮಟ್ಟದಲ್ಲಿ ವಿವಿಧ ರೀತಿಯ ಹೋರಾಟಗಳು ನಡೆದವು. ಹೋರಾಟದ ಕಿಚ್ಚು, ಕ್ರಾಂತಿಯ ಕಿಡಿ ವಿವಿಧ ರೂಪದಲ್ಲಿ ಪ್ರಕಟಗೊಂಡು ಸಾವಿರಾರು ಮಂದಿ ಭಾರತ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದರು. ಹಾಗೆ ಬ್ರಿಟಿಷರ ಗುಂಡಿಗೆ ಎದೆಕೊಟ್ಟು ವೀರಸ್ವರ್ಗವೇರಿದ ಅಪ್ರತಿಮ ಬಲಿದಾನಿಗಳಲ್ಲಿ ಹಾವೇರಿ ಜಿಲ್ಲೆ ಮೋಟೆಬೆನ್ನೂರಿನ ಮೈಲಾರ ಮಹದೇವ ಅವರ ಪಾತ್ರ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿದೆ. ಸ್ವಾತಂತ್ರ್ಯಾಂದೋಲನದಲ್ಲಿ ಮಹದೇವರ ತಾಯಿ ಬಸಮ್ಮ ಕೂಡಾ ಸೆರೆಮನೆವಾಸ ಅನುಭವಿಸಿದವರು. ಮತ್ತಷ್ಟು ಓದು »

13
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 4:

ಖುದಿರಾಮ್ ಬೋಸ್ (ಡಿಸೆಂಬರ್ 3, 1889 – ಆಗಸ್ಟ್ 11, 1908)
– ರಾಮಚಂದ್ರ ಹೆಗಡೆ

khudiram boseಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಪ್ರಮುಖರು. ಅತೀ ಚಿಕ್ಕ ವಯಸ್ಸಿಗೇ ಕೇವಲ 19 ರ ಹರೆಯದಲ್ಲಿ ನೇಣುಗಂಬವೇರಿದ ಪ್ರಥಮ ಬಲಿದಾನಿ ಖುದಿರಾಮ್ ಬೋಸ್. ‘ಕಿಂಗ್ಸ್ ಫೊರ್ಡ್’ ಎಂಬ ಬ್ರಿಟೀಷ್ ನ್ಯಾಯಧೀಶ ಕಲ್ಕತ್ತಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಘೋರಾತಿಘೋರ ಶಿಕ್ಷೆಗಳನ್ನು ಕೊಡುತ್ತಾ ವಿಕೃತ ಆನಂದವನ್ನು ಅನುಭವಿಸುತ್ತಿದ್ದ. ಭಾರತೀಯರ ಮೇಲೆ ಆತನ ದೌರ್ಜನ್ಯ ಮಿತಿಮೀರಿತ್ತು. ಈತನ ಕ್ರೌರ್ಯಕ್ಕೆ ಕೊನೆಹಾಡಬೇಕೆಂದು ನಿರ್ಧರಿಸಿದ ಖುದಿರಾಮ್ ಕಿಂಗ್ಸ್ ಫೊರ್ಡ್ ನನ್ನ ಕೊಲ್ಲುವ ಯತ್ನ ಮಾಡಿದ. ಆದರೆ ಕಿಂಗ್ಸ್ ಫೊರ್ಡ್ ಬಚಾವಾದ. ಆದರೂ ಆ ಪ್ರಯತ್ನದಲ್ಲಿ ಈ ಪ್ರಖರ ದೇಶಭಕ್ತನಿಗೆ ಗಲ್ಲು ಶಿಕ್ಷೆಯಾಯ್ತು. ಮತ್ತಷ್ಟು ಓದು »

12
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

ದಿನ – 3
ಸದ್ಗುರು ರಾಮಸಿಂಗ್ ಕೂಕಾ
– ರಾಮಚಂದ್ರ ಹೆಗಡೆ

download (1)ದೇಶದ ಸ್ವಾತಂತ್ರ್ಯ ಇತಿಹಾಸದಲ್ಲಿ ಪಂಜಾಬಿ ಸಿಖ್ಖರ ಪಾತ್ರ ಬಹಳ ದೊಡ್ಡದು. ಅಪ್ರತಿಮ ದೇಶಭಕ್ತರ ಸಂಪ್ರದಾಯವದು. ಇಂದಿಗೂ ಭಾರತೀಯ ಸೈನ್ಯದಲ್ಲಿ ಸಿಖ್ ರೆಜಿಮೆಂಟ್ ಎಂದರೆ ಪರಮ ಪರಾಕ್ರಮಿಗಳ ದಂಡು. ಅಂತಹ ಪಂಜಾಬಿ ಸಿಖ್ಖರ ‘ನಾಮಧಾರಿ ಸಂಪ್ರದಾಯ’ ಅಥವಾ ‘ಕೂಕಾ ಪಂಥ’ ದ ಸ್ಥಾಪಕ ಸದ್ಗುರು ರಾಮಸಿಂಗ್ ಕೂಕಾ. ಮೂಲತಃ ಬಡಗಿ ವೃತ್ತಿಯ ಕುಟುಂಬದ ರಾಮಸಿಂಗ್ ತಾನೂ ತನ್ನ ತಂದೆಯ ಬಡಗಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ನೆರವಾಗುತ್ತಿದ್ದ. ಆದರೆ ಮಿತಿಮೀರಿದ ಬ್ರಿಟಿಷರ ದೌರ್ಜನ್ಯ ಹಾಗೂ ಅಲ್ಲಿಯ ಜನರ ನಿರಭಿಮಾನ ಅವನನ್ನು ರೊಚ್ಚಿಗೆಬ್ಬಿಸಿತು. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡ ಮಿಷನರಿಗಳು ಮತಾಂತರದಲ್ಲಿ ನಿರತರಾಗಿದ್ದವು. ಇದನ್ನೆಲ್ಲಾ ಕಂಡ ರಾಮಸಿಂಗ್ ಜನರನ್ನು ಆಧ್ಯಾತ್ಮಿಕವಾಗಿ ಮೇಲ್ಮಟ್ಟಕ್ಕೆ ಒಯ್ಯುವ, ಅವರೊಳಗೆ ದೇಶಾಭಿಮಾನ ಬೆಳೆಸುವ, ಧಾರ್ಮಿಕ, ಸಾಮಾಜಿಕ, ರಾಜಕೀಯ ಜನಜಾಗೃತಿ ನಿರ್ಧಾರದಿಂದ ಕೂಕಾ ಪಂಥವನ್ನು ಆರಂಭಿಸಿದ. ರಾಮಸಿಂಗ್ ಸದ್ಗುರು ರಾಮಸಿಂಗ್ ಆದ. ರಾಮಸಿಂಗ್ ನ ಕೂಕಾ ಪಂಥದ ಪ್ರಸಿದ್ಧಿ ಎಲ್ಲೆಡೆಗೆ ಹರಡಿ ಸಾವಿರಾರು ಜನ ಈ ಪಂಥಕ್ಕೆ ಸೇರ್ಪಡೆಯಾದರು. ಪಂಜಾಬ ಪ್ರಾಂತದ ೨೧ ಜಿಲ್ಲೆಗಳಲ್ಲೂ ಕೂಕಾಗಳ ಚಟುವಟಿಕೆಗಳ ಜಾಲ ಹಬ್ಬಿತು. ಮತ್ತಷ್ಟು ಓದು »

11
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

– ರಾಮಚಂದ್ರ ಹೆಗಡೆ

ಈ ದಿನದ ಸ್ಮರಣೆ: ಕಾರ್ನಾಡ್ ಸದಾಶಿವ ರಾವ್

14MNRAO_G53ASPDES__2509976eಬೆಂಗಳೂರಿನ ಪ್ರತಿಷ್ಠಿತ ಬಡಾವಣೆ ‘ಸದಾಶಿವ ನಗರ’ ಎಂಬುದು ಎಲ್ಲರಿಗೂ ತಿಳಿದದ್ದೇ. ಆದರೆ ಅದ್ಯಾರು ಸದಾಶಿವ ಎಂಬುದು ಬಹುತೇಕರಿಗೆ ತಿಳಿಯದು. ಆ ಸದಾಶಿವರೇ ಅಪ್ರತಿಮ ದೇಶಭಕ್ತ ದಕ್ಷಿಣ ಕನ್ನಡದ ಗಾಂಧಿ ಎಂದೇ ಸುಪ್ರಸಿದ್ಧರಾದ ಶ್ರೀ ಕಾರ್ನಾಡ್ ಸದಾಶಿವರಾವ್. ಇವರು ಮಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡು ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡವರು. ಸದಾಶಿವರಾಯರ ಮನೆ ಸ್ವಾತಂತ್ರ್ಯ ಸಂಗ್ರಾಮದ ತವರು ಮನೆಯಾಗಿತ್ತು. ಮಹಾತ್ಮಾ ಗಾಂಧಿ, ಚಿತ್ತರಂಜನ ದಾಸ, ರಾಜಗೋಪಾಲಾಚಾರಿ ಹಾಗೂ ಸರೋಜಿನಿ ನಾಯ್ಡುರವರಿಗೆ ವಸತಿಗೃಹವಾಗಿತ್ತು. ದೇಶದಲ್ಲಿ ಉಪ್ಪಿನ ಸತ್ಯಾಗ್ರಹ ಪ್ರಾರಂಭವಾದಾಗ ಕಾರ್ನಾಡು ಸದಾಶಿವರಾಯರು ಅಂಕೋಲೆಗೆ ಹೋಗಿ ಅಲ್ಲಿನ ಜನತೆಗೆ ಮಾರ್ಗದರ್ಶನ ನೀಡಿ ಅಲ್ಲಿ ನಾಲ್ಕು ದಿನಗಳಿದ್ದರು. ಮತ್ತಷ್ಟು ಓದು »

10
ಆಗಸ್ಟ್

ಸ್ವಾತಂತ್ರ್ಯೋತ್ಸವ ವಿಶೇಷ ಸರಣಿ – ದಿನಕ್ಕೊಬ್ಬ ದೇಶಭಕ್ತರ ಸ್ಮರಣೆ

(ಮರೆತು ಮರೆಯಾಗಿರುವ ಸ್ವಾತಂತ್ರ್ಯ ವೀರರನ್ನು ನೆನೆಸಿಕೊಮ್ಡು ಗೌರವ ಸಲ್ಲಿಸುವ ಹಾಗೂ ಅವರ ಕುರಿತ ಮಾಹಿತಿಗಳನ್ನು ಜನರಿಗೆ ತಲುಪಿಸುವ ಸದುದ್ದೇಶದಿಂದ ರಾಮಚಂದ್ರ ಹೆಗಡೆಯವರು “ಸುಮ್ಮನೇ ಬರಲಿಲ್ಲ ಸಾತಂತ್ರ್ಯ” ಎಂಬ ಈ ಬರಹ ಸರಣಿಯನ್ನು ಪ್ರಾರಂಭಿಸಿದ್ದಾರೆ. ಕೆಲವು ಲೇಖನಗಳಿಗೆ ಮಾಹಿತಿಗಳನ್ನು ವಿವಿಧ ವೆಬ್ಸೈಟುಗಳ ಮೂಲಕ ಪಡೆದಿದ್ದರೆ, ಉಳಿದಂತೆ ತಾವು ಓದಿಕೊಂಡಿರುವುದನ್ನು ದಾಖಲಿಸಿದ್ದಾರೆ. ಈ ಸರಣಿ ನಿಲುಮೆಯ ಓದುಗರಿಗಾಗಿ – ಸಂಪಾದಕರು, ನಿಲುಮೆ)

– ರಾಮಚಂದ್ರ ಹೆಗಡೆ

ಆಗಸ್ಟ್ ತಿಂಗಳೆಂದರೆ ಭಾರತೀಯರಿಗೆ ವಿಶೇಷವಾದ ತಿಂಗಳು. ಪರಕೀಯರ ಆಳ್ವಿಕೆಯಿಂದ, ದಾಸ್ಯದ ಸಂಕೋಲೆಯಿಂದ ದೇಶ ಬಿಡುಗಡೆಗೊಂಡ ತಿಂಗಳಿದು. ಆದರೆ ಆ ಸ್ವಾತಂತ್ರ್ಯ ಅಷ್ಟು ಸುಲಭಕ್ಕೆ ದಕ್ಕಿದ್ದಲ್ಲ. ಅದರ ಹಿಂದೆ ಲಕ್ಷಾಂತರ ಜನರ ತ್ಯಾಗ ಬಲಿದಾನಗಳಿವೆ. ಸ್ವಾತಂತ್ರ್ಯ ಬಂದ ಅರವತ್ತೇ ವರ್ಷದಲ್ಲಿ ನಾವು ಅವರೆಲ್ಲರನ್ನೂ ಮರೆತೇಬಿಟ್ಟಿದ್ದೇವೆ. ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರನ್ನು ಕನಿಷ್ಠ ಈ ತಿಂಗಳಾದರೂ ನೆನೆಯಬೇಕಾದ್ದು ನಮ್ಮೆಲ್ಲರ ಕರ್ತವ್ಯ ಅಲ್ವಾ?. ದಿನಕ್ಕೊಬ್ಬ ದೇಶಭಕ್ತನನ್ನು ನೆನಪಿಸಿಕೊಳ್ಳುವ ಪ್ರಯತ್ನವಿದು. ಭಾರತೀಯ ಸ್ವಾತಂತ್ರ್ಯ ಹಬ್ಬದ ಈ ತಿಂಗಳಲ್ಲಿ ದೇಶಕ್ಕಾಗಿ ಅಮರರಾದ ವೀರರನ್ನು ಸ್ಮರಿಸುವ ಸರಣಿ ಇದು. ಇದು ಮರೆತವರನ್ನು ನೆನೆಯುವ ಪ್ರಯತ್ನ. ದೇಶಭಕ್ತರ ಕುರಿತ ಮಾಹಿತಿಗಳನ್ನು ಜೋಡಿಸುವ ಕೆಲಸವಷ್ಟೇ ನಮ್ಮದು. ಇದನ್ನು ಹೆಚ್ಚು ಜನರಿಗೆ ತಲುಪಿಸಿ. ಈ ರಾಷ್ಟ್ರಜಾಗೃತಿಯ ಆಂದೋಲನದಲ್ಲಿ ಕೈಜೋಡಿಸಿ.

ಈ ದಿನದ ಸ್ಮರಣೆ: *ರಾಣಿ ಗಾಯಡಿನ್ ಲೂ*
======================
Gaidinlui_20150125ರಾಣಿ ಗಾಯಡಿನ್ ಲೂ: ಹೆಸರು ಕೇಳಿದರೆ ಇದು ಯಾರೋ ಬ್ರಿಟಿಷ್ ವ್ಯಕ್ತಿ ಅನ್ನಿಸಬಹುದು. ಆದರೆ ಈ ರಾಣಿ ಗಾಯಡಿನ್ ಲೂ ಈಶಾನ್ಯ ರಾಜ್ಯ ನಾಗಲ್ಯಾಂಡ್ ನ ಆಧ್ಯಾತ್ಮಿಕ ಹಾಗೂ ರಾಜಕೀಯ ಹೋರಾಟದ ನಾಯಕಿಯಾಗಿದ್ದ, ಬ್ರಿಟಿಷ್ ಆಡಳಿತದ ವಿರುದ್ಧ ಈಶಾನ್ಯ ರಾಜ್ಯದಲ್ಲಿ ದಂಗೆ ಎಬ್ಬಿಸಿದ ದಿಟ್ಟ ಮಹಿಳೆ. ತನ್ನ 12ನೇ ವಯಸ್ಸಿಗೇ ಹೋರಾಟಕ್ಕೆ ಧುಮುಕಿ 16ನೇ ವಯಸ್ಸಿಗೆ ಜೀವಾವಧಿ ಶಿಕ್ಷೆಗೆ ಗುರಿಯಾದ ಈಕೆಯ ಕೇವಲ 4 ವರ್ಷಗಳ ಹೋರಾಟದ ತಾಕತ್ತು ಎಂಥದ್ದು ಎಂದು ತಿಳಿದರೆ ಅಚ್ಚರಿ ಎನಿಸುತ್ತದೆ. ಬ್ರಿಟಿಷರ ವಿರುದ್ಧ ಹೋರಾಟ ಅಷ್ಟೇ ಅಲ್ಲದೇ ನಾಗಾ ಜನರಲ್ಲಿ ತಮ್ಮ ಸ್ವಧರ್ಮದ ಬಗ್ಗೆ ಕೀಳರಿಮೆ ಹೊಡೆದೋಡಿಸಿ ಅಭಿಮಾನ ಮೂಡುವಂತೆ ಮಾಡಿದರು. ಪ್ರತಿಯೊಂದು ವನವಾಸಿ ಸಮುದಾಯದ ಬಳಿ ತೆರಳಿ ಬ್ರಿಟಿಷರ ಕುತಂತ್ರದ ಕುರಿತು ಮುಗ್ಧ ಜನರಿಗೆ ತಿಳಿ ಹೇಳಿದರು. ಗಾಯಡಿನ್ ಲೂರಿಂದ ಆಕರ್ಷಿತರಾದ ವನವಾಸಿ ಮಹಿಳೆಯರು ಒಂದು ಸೇನಾ ಪಡೆಯನ್ನೇ ಕಟ್ಟಿದರು. ಇದರಿಂದ ಉತ್ಸಾಹಿತಳಾದ ಗಾಯಡಿನ್ ಲೂ ಅವರಿಗೆ ಸಾಂಪ್ರದಾಯಿಕ ಮದ್ದುಗುಂಡುಗಳ ತಯಾರಿಕೆ, ಬಂದೂಕು ತರಬೇತಿಯನ್ನು ಕೊಟ್ಟಳು. ಮುಂದೆ ಬ್ರಿಟಿಷರ ವಿರುದ್ಧ ಗೆರಿಲ್ಲಾ ಯುದ್ಧವನ್ನು ಮಾಡಿದಳು. ಇವಳ ರಣನೀತಿಯಿಂದ ಬ್ರಿಟಿಷರು ತತ್ತರಿಸಿಹೋಗಿದ್ದರು. ಬ್ರಿಟಿಷರಿಗೆ ಸಿಂಹಸ್ವಪ್ನ ವಾಗಿದ್ದ ಈಕೆ ಬ್ರಿಟಿಷರ ತಂತ್ರಗಳನ್ನೆಲ್ಲಾ ಕ್ಷೀಣಿಸುವಂತೆ ಮಾಡಿದಳು. ಧರ್ಮ ರಕ್ಷಣೆ ಮತ್ತು ಬ್ರಿಟಿಷರನ್ನು ಭಾರತ ಬಿಟ್ಟು ಓಡಿಸಿ ಎನ್ನುವ ವಿಷಯವಿಟ್ಟುಕೊಂಡು ಹೋರಾಟ ಮಾಡಿದಳು. ಇವಳಿಗೆ ಹೇಗಾದರು ಮಾಡಿ ಕಡಿವಾಣ ಹಾಕಬೇಕು ಎಂದು ನಿರ್ಧರಿಸಿದ ಬ್ರಿಟಿಷ ಸರಕಾರ ಆ ರಾಜ್ಯಗಳಿಗೆ ತನ್ನ ಸೈನ್ಯವನ್ನೇ ಕಳುಹಿಸಿಕೊಟ್ಟಿತು. ಅಷ್ಟೇ ಅಲ್ಲದೇ ಆ ಕಾಲದಲ್ಲಿಯೇ ಅವಳ ಸುಳಿವು ನೀಡಿದವರಿಗೆ 400ರೂ. ಬಹುಮಾನದ ಜೊತೆಗೆ ಸರಕಾರದ ಸುಂಕವನ್ನು ಮನ್ನಾ ಮಾಡುವದಾಗಿ ಆಮಿಷ ತೋರಿಸಿತು. ಬ್ರಿಟಿಷರು ಎಂದಿನಂತೆ ತಮ್ಮ ಕುತಂತ್ರ ಬುದ್ಧಿಯ ಮೂಲಕ ಗಾಯಿಡಿನ್ ಲೂ ಆಪ್ತರಿಗೆ ಆಮಿಷವೊಡ್ಡಿ ಅವಳ ಸುಳಿವು ಪತ್ತೆಹಚ್ಚಿತು. ಇಬ್ಬರ ಮಧ್ಯೆ ದೊಡ್ಡ ಯುದ್ಧವೇ ನಡೆದುಹೋಯಿತು. ಕೊನೆಗೆ 1932ರ ಅಕ್ಟೋಬರ್ 12 ರಂದು ಗಾಯಿಡಿನ್ ಲೂ ಮೇಲೆ ವಿವಿಧ ಸುಳ್ಳು ಆರೋಪವನ್ನು ಹೊರಿಸಿ, ಸಂಬಂಧವೇ ಇಲ್ಲದ ಕೊಲೆ ಅರೋಪವನ್ನು ತಲೆಗೆ ಕಟ್ಟಿ ಬಂಧಿಸಲಾಯಿತು. ಮತ್ತಷ್ಟು ಓದು »